Tag: Meteorological Department

  • ಬೆಂಗಳೂರಲ್ಲಿ ಭಾರೀ ಮಳೆಗೆ ಹಲವೆಡೆ ಜಲಾವೃತ – ಗುಂಡಿಬಿದ್ದ ರಸ್ತೆಗಳಲ್ಲಿ ನಿಂತ ನೀರು, ಕೆಟ್ಟು ನಿಂತ ವಾಹನಗಳು

    ಬೆಂಗಳೂರಲ್ಲಿ ಭಾರೀ ಮಳೆಗೆ ಹಲವೆಡೆ ಜಲಾವೃತ – ಗುಂಡಿಬಿದ್ದ ರಸ್ತೆಗಳಲ್ಲಿ ನಿಂತ ನೀರು, ಕೆಟ್ಟು ನಿಂತ ವಾಹನಗಳು

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮಳೆ ಬಂತು ಅಂದ್ರೆ ವಾಹನ ಸವಾರರು ಈಜುವ ಕಲೆ ಕಲಿಯುವ ಅನಿವಾರ್ಯತೆ ಎದುರಾಗಿದೆ. ಒಂದು ದಿನದ ಹಿಂದಷ್ಟೇ 30 ನಿಮಿಷ ಸುರಿದಿದ್ದ ಮಳೆಯಿಂದಾಗಿ ಹಲವು ರಸ್ತೆಗಳು ರಸ್ತೆಗಳು ಜಲಾವೃತಗೊಂಡಿದ್ದವು. ಇಂದು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಬಳಿಕೆ ಹಲವು ರಸ್ತೆಗಳು ಜಲಾವೃತಗೊಂಡಿವೆ.

    ಗುಂಡಿ ಬಿದ್ದ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ಕಟ್ಟಿಕೊಂಡಿದ್ದು, ಅಲ್ಲಲ್ಲಿ ವಾಹನಗಳು ಕೆಟ್ಟುನಿಲ್ಲುವಂತಾಗಿದೆ. ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ಚಾಮರಾಜಪೇಟೆ, ಕಾರ್ಪರೇಶನ್, ಲಾಲ್‌ಬಾಗ್ ಸೇರಿದಂತೆ ಬೆಂಗಳೂರಿನ ಪ್ರಮುಖ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇತ್ತ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹೊರವಲಯಗಳಲ್ಲೂ ಮಳೆಯಾಗುತ್ತಿದೆ.

    ಗುಂಡಿಬಿದ್ದ ರಸ್ತೆಗಳಲ್ಲಿ ಕಟ್ಟಿಕೊಂಡ ನೀರು
    ಬೆಂಗಳೂರಿನ ಹೃದಯ ಭಾಗದಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಗುಂಡಿ ಬಿದ್ದ ರಸ್ತೆಗಳಲ್ಲಿ ಯಾವುದು ಗುಂಡಿ, ಯಾವುದು ರಸ್ತೆ ಅನ್ನೋದೇ ತಿಳಿಯದಾಗಿದೆ. ಫುಟ್ಬಾತ್‌ಗಳ ಮೇಲೂ ನೀರು ತಂಬಿಕೊಂಡಿದೆ. ಹಲವೆಡೆ ಗುಡುಗು ಸಹಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

    ಬೆಂಗಳೂರಲ್ಲಿ ಎಲ್ಲೆಲ್ಲಿ ಮಳೆ?
    ನಗರದ ಎಲೆಕ್ಟ್ರಾನಿಕ್‌ ಸಿಟಿ, ಮಾನ್ಯತಾ ಟೆಕ್ ಪಾರ್ಕ್ ಸುತ್ತಮುತ್ತ, ಸರ್ಜಾಪುರ, ಮಹದೇವಪುರ, ಪೀಣ್ಯ, ದಾಸರಹಳ್ಳಿ, ಕೋರಮಂಗಲ, ಮಲ್ಲೇಶ್ವರ, ಮೆಜೆಸ್ಟಿಕ್, ಎಲೆಕ್ಟ್ರಾನಿಕ್ ಸಿಟಿ, ವಿಪ್ರೋ ಗೇಟ್, ಸರ್ಜಾಪುರ, ಯಶವಂತಪುರ, ಕಾರ್ಪೋರೇಷನ್, ಬಿಟಿಎಂ ಲೇಔಟ್, ವರ್ತೂರು ಬಳಗೆರೆ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ವಾಹನ ಸವಾರರು ಪರದಾಡಿದ್ದಾರೆ. ಸರ್ಜಾಪುರದಲ್ಲಿ ರಸ್ತೆಯಲ್ಲೇ ನೀರು ನಿಂತು ವಾಹನ ಸವಾರರು ಹಿಡೀ ಶಾಪ ಹಾಕಿದ್ದಾರೆ.

    ಬೆಂಗಳೂರಲ್ಲಿ ಮುಂದಿನ 3 ಗಂಟೆ ಆರೇಂಜ್ ಅಲರ್ಟ್
    ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಮುಂದಿನ 3 ಗಂಟೆ ಆರೇಂಜ್ ಅಲರ್ಟ್ ನೀಡಲಾಗಿದೆ. ರಾಜ್ಯ ಹವಾಮಾನ ಇಲಾಖೆಯಿಂದ ಮಳೆಯ‌ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದಿದೆ. ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

  • ಹಾಸನದಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ-  ವಾಹನ ಸವಾರರ ಪರದಾಟ

    ಹಾಸನದಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ- ವಾಹನ ಸವಾರರ ಪರದಾಟ

    ಹಾಸನ: ಜಿಲ್ಲೆಯ ಬಹುತೇಕ ಕಡೆ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಹಾಸನ (Hasan) ನಗರ ಸೇರಿದಂತೆ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡಬೇಕಾಯಿತು.

    ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿತ್ತು. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಇರುವ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿತ್ತು. ಇದನ್ನೂ ಓದಿ: Exit Poll Result | ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟಕ್ಕೆ ಅಧಿಕಾರ – ಬಿಜೆಪಿಗೆ ಹಿಂದಿಗಿಂತ ಹೆಚ್ಚು ಸ್ಥಾನ

    ಹಾಸನ, ಚನ್ನರಾಯಪಟ್ಟಣ (Channarayapatna) ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ರೈತರು, ಕಾಫಿ ಬೆಳೆಗಾರರು ತ್ರಿಶಂಕು ಸ್ಥಿತಿಗೆ ಸಿಲುಕಿ ತೊಂದರೆ ಅನುಭವಿಸುವಂತಾಗಿದೆ. ಇದನ್ನೂ ಓದಿ: Exit Poll Results: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ಅಧಿಕಾರಕ್ಕೆ

  • ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮಳೆಗೆ 15 ಸಾವು, 23 ಸಾವಿರ ಮಂದಿ ಸ್ಥಳಾಂತರ

    ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮಳೆಗೆ 15 ಸಾವು, 23 ಸಾವಿರ ಮಂದಿ ಸ್ಥಳಾಂತರ

    ಗಾಂಧೀನಗರ್: ಗುಜರಾತ್‌ನಲ್ಲಿ (Gujarat) ಭಾರೀ ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳಿಗೆ ಕೇಂದ್ರ ಹವಾಮಾನ ಇಲಾಖೆ (Meteorological Department)  ರೆಡ್ ಅಲರ್ಟ್ ಘೋಷಿಸಿದೆ.

    ಹವಾಮಾನ ಇಲಾಖೆ ಪ್ರವಾಹ ಪರಿಸ್ಥಿತಿ ನಡುವೆ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಮತ್ತು 22 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಿದೆ. ಕಚ್ಛ್, ದ್ವಾರಕಾ, ಜಾಮ್‌ನಗರ, ಮೊರ್ಬಿ, ಸುರೇಂದ್ರನಗರ, ಜುನಾಗಢ್, ರಾಜ್‌ಕೋಟ್, ಬೊಟಾಡ್, ಗಿರ್ಸೋಮನಾಥ್, ಅಮ್ರೇಲಿ ಮತ್ತು ಭಾವನಗರ ಸೇರಿದಂತೆ ಸೌರಾಷ್ಟ್ರ ಪ್ರದೇಶಗಳಿಗೆ ರೆಡ್ ಅಲರ್ಟ್, ಮಧ್ಯ ಗುಜರಾತ್ ಮತ್ತು ದಕ್ಷಿಣ ಗುಜರಾತ್‌ಗೆ ಹಳದಿ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: Anjanadri Betta | ಧಾರ್ಮಿಕ ಭಾವನೆಗಳಿಗೆ ಧಕ್ಕೆ – SDPI ದೂರಿನ ಬೆನ್ನಲ್ಲೇ ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್ ಕಂಬ ತೆರವಿಗೆ ಆದೇಶ

    ಭಾರೀ ಮಳೆಯಿಂದಾಗಿ ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. 23,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಈಗಾಗಲೇ 14 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತುಕಡಿಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ 22 ತುಕಡಿಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಎರಡು ಪ್ರತ್ಯೇಕ ಅಪಘಾತ- ಐದು ಮಂದಿಯ ದಾರುಣ ಸಾವು

  • ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ 3,622 ಏರಿಕೆ

    ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ 3,622 ಏರಿಕೆ

    ಜೈಪುರ್: ರಾಜಸ್ಥಾನದಲ್ಲಿ (Rajasthan) ಹೀಟ್ ಸ್ಟ್ರೋಕ್‍ನಿಂದ (Heatstroke) ಬಳಲುತ್ತಿರುವವರ ಸಂಖ್ಯೆ ಸೋಮವಾರ 2,809 ರಿಂದ 3,622ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ತೀವ್ರವಾದ ಶಾಖದ ಅಲೆಯ (Heatwave) ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿಯಾಗಿದೆ.

    ಸೋಮವಾರ (ಮೇ 27) ರಾಜ್ಯದ ಫಲೋಡಿಯಲ್ಲಿ 49.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಸಾಮಾನ್ಯಕ್ಕಿಂತ 6.3 ಡಿಗ್ರಿ ಹೆಚ್ಚಳವಾಗಿದೆ. ಜೈಪುರದಲ್ಲಿ (Jaipur) ಗರಿಷ್ಠ ತಾಪಮಾನ 46.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಭಾನುವಾರಕ್ಕಿಂತ 0.8 ಡಿಗ್ರಿ ಹೆಚ್ಚಾಗಿದೆ. ಕೋಟಾದಲ್ಲಿ ಗರಿಷ್ಠ ತಾಪಮಾನ 48.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯಕ್ಕಿಂತ 5 ಡಿಗ್ರಿ ಹೆಚ್ಚಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಸ್ತೆ ದಾಟುವಾಗ ಕಾರು ಡಿಕ್ಕಿ – ಅಮೆರಿಕದಲ್ಲಿ ತೆಲಂಗಾಣ ಮೂಲದ ಯುವತಿ ಸಾವು

    ರಾಜ್ಯದ ಬಹುತೇಕ ಎಲ್ಲಾ ನಗರಗಳು 45 ಡಿಗ್ರಿ ಸೆಲ್ಸಿಯಸ್‍ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸಿವೆ. ಅಜ್ಮೀರ್‍ನಲ್ಲಿ ಗರಿಷ್ಠ ತಾಪಮಾನ 46.3 ಡಿಗ್ರಿ ಸೆಲ್ಸಿಯಸ್, ಭಿಲ್ವಾರ್ (47.4), ಭರತ್‍ಪುರ (48.2), ಅಲ್ವಾರ್ (46.2), ಪಿಲಾನಿ (48.5), ಚಿತ್ತೋರ್‍ಗಢ (47), ಬಾರ್ಮರ್ (49.3), ಜೈಸಲ್ಮೇರ್ (48.7), ಜೋಧ್‍ಪುರ (47.4), ಬಿಕಾನೇರ್ (48.2), ಚುರು (48), ಶ್ರೀ ಗಂಗಾನಗರ (48.3), ಮತ್ತು ಧೋಲ್‍ಪುರದಲ್ಲಿ 48.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಅಲ್ಲದೇ ಇಂದು ಸಹ (ಮೇ 28 ರಂದು) ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಸ್ತುತ ನಡೆಯುತ್ತಿರುವ ತೀವ್ರತರವಾದ ಬಿಸಿಗಾಳಿ ಪರಿಸ್ಥಿತಿಯು ಮುಂದಿನ 2-3 ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಮೇ 29ರಿಂದ ತಾಪಮಾನ ಕಡಿಮೆಯಾಗಲು ಆರಂಭವಾಗಲಿದ್ದು, ಜೂನ್ ಮೊದಲ ವಾರದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯ ಸ್ಥಿತಿಯಲ್ಲಿರಲಿದೆ ಎಂದು ಜೈಪುರ್‌ನ ಹವಾಮಾನ ಇಲಾಖೆಯ (Meteorological Department) ನಿರ್ದೇಶಕ ಆರ್.ಎಸ್. ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – 7 ಅಧಿಕಾರಿಗಳು ಅಮಾನತು

  • ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ – ಯಾವ ಜಿಲ್ಲೆಗಳಲ್ಲಿ ಮಳೆಯಾಗಬಹುದು?

    ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ – ಯಾವ ಜಿಲ್ಲೆಗಳಲ್ಲಿ ಮಳೆಯಾಗಬಹುದು?

    ಬೆಂಗಳೂರು: ರಾಜ್ಯದಲ್ಲಿ (Karnataka) ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗುವ (Rain) ಸಾಧ್ಯತೆಯಿದೆ.

    ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

    ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆಯಿದೆ. ಇದನ್ನೂ ಓದಿ: ಸಿಎಂ ಹುದ್ದೆಗೆ ಕೇಜ್ರಿವಾಲ್‌ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

     

  • ಮುಂದಿನ 3 ತಿಂಗಳು ರಣರಣ ಬಿಸಿಲು – ಬಿಸಿಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

    ಮುಂದಿನ 3 ತಿಂಗಳು ರಣರಣ ಬಿಸಿಲು – ಬಿಸಿಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

    ಬೆಂಗಳೂರು: ಫೆಬ್ರವರಿ ತಿಂಗಳಲ್ಲೇ ಬಿಸಿಲಿನ ಝಳಕ್ಕೆ ಜನ ತಂಪುಪಾನೀಯದ ಮೊರೆ ಹೋಗುತ್ತಿದ್ದಾರೆ. ಚಳಿಗಾಲದಲ್ಲೇ ಹೀಗೆ ಬಿಸಿಲಿದೆ, ಇನ್ನೂ ಬೇಸಿಗೆಯಲ್ಲಿ ಹೇಗೋ ಎಂಬ ಜನರ ಮಾತಿನಂತೆ ಹವಾಮಾನ ಇಲಾಖೆ (Meteorological Department) ಕೂಡ ಈ ಕುರಿತು ಎಚ್ಚರಿಕೆ ನೀಡಿದೆ.

    ಕಳೆದ ವರ್ಷದ ಮಳೆಯ ಅಭಾವದ ಎಫೆಕ್ಟ್ ಇನ್ನೂ ಅನುಭವಿಸುತ್ತಿದ್ದೇವೆ. ನೀರಿಲ್ಲದೇ ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿ ಬರದ ಪರಿಸ್ಥಿತಿ ಎದುರಾಗಿದೆ. ಇನ್ನೂ ಫೆಬ್ರವರಿ ತಿಂಗಳಲ್ಲೇ 34.2 ದಾಖಲೆ ಪ್ರಮಾಣದ ಉಷ್ಣಾಂಶ ರಾಜ್ಯದಲ್ಲಿ ದಾಖಲಾಗಿತ್ತು. ಈಗ ಮಾರ್ಚ್ 1ರಿಂದ ಬೇಸಿಗೆ (Summer) ಶುರುವಾಗಿದ್ದು, ಮೇ ಅಂತ್ಯದವರೆಗೆ ಬಿಸಿಲು ಜನರಿಗೆ ಕಾಟ ಕೊಡಲಿದೆ. ಇದನ್ನೂ ಓದಿ: 2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ – ಮಂಡ್ಯ ಬಿಜೆಪಿ ಕಾರ್ಯಕರ್ತ ವಶಕ್ಕೆ

    ಪೂರ್ವ ಭಾಗದ ಸಮುದ್ರದ ನೀರಿನ ಉಷ್ಣಾಂಶ 1.5 ಗಿಂತ ಹೆಚ್ಚಾಗುವ ಸಾಧ್ಯತೆ ಇದ್ದು, ಇದನ್ನು ಏಲಿನೋ ಎಂದು ಕರೆಯುತ್ತಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಮೂರು ತಿಂಗಳು ವಾಡಿಕೆಗಿಂತ 70% ಹೆಚ್ಚು ಉಷ್ಣತೆ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಡೀ ರಾಜ್ಯದಲ್ಲೇ ವಾಡಿಕೆಗಿಂತ ಹೆಚ್ಚಿನ ತಾಪಮಾನ ಮುಂದಿನ ಮೂರು ತಿಂಗಳಲ್ಲಿ ಕಾಣಬಹುದಾಗಿದೆ. ಅದೇ ರೀತಿ ಮಾರ್ಚ್‌ನಿಂದ ಮೇ ವೇಳೆಯಲ್ಲಿ ವಾಡಿಕೆಗಿಂತ 70% ರಷ್ಟು ಮಳೆಯಾಗುವ ಸಾಧ್ಯತೆ ಕೂಡ ಇದೆ. ಇದನ್ನೂ ಓದಿ: ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ

    ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ಈ ಬೇಸಿಗೆಯಲ್ಲಿ ವಾಡಿಕೆಗಿಂತ 2 ರಿಂದ 3 ಡಿಗ್ರಿಯವರೆಗೆ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗರಿಷ್ಠ ತಾಪಮಾನ ಸರಾಸರಿ 37 ಡಿಗ್ರಿ ಇದ್ದರೇ ಉತ್ತರ ಒಳನಾಡಿನಲ್ಲಿ 39 ಡಿಗ್ರಿ ಇರಲಿದೆ. ಜೊತೆಗೆ ಉತ್ತರ ಒಳನಾಡಿನಲ್ಲಿ ಬಿಸಿಗಾಳಿಯ ಆತಂಕ ಕೂಡ ಎದುರಾಗಲಿದೆ. 4.5ಕ್ಕಿಂತ ಹೆಚ್ಚು ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಬಿಸಿಗಾಳಿಯ ವಾತಾವರಣ ಇರಲಿದೆ. ಇದನ್ನೂ ಓದಿ: ಸರ್‌, ನಾನು ನೂರಾರು ಕೋಟಿಗೆ ಬಾಳ್ತೀನಿ: ಪಾಕ್‌ ಪರ ಘೋಷಣೆ ಕೂಗಿದ್ದ ನಾಶಿಪುಡಿ ಯಾರು?

    ಬೇಸಿಗೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕಾಗಿದ್ದು, ಆದಷ್ಟು ನೀರು ಕುಡಿಯುವುದರ ಜೊತೆಗೆ ಬೆಳಗ್ಗೆ 11 ರಿಂದ ಸಂಜೆ 3 ಗಂಟೆಯ ವೇಳೆಯಲ್ಲಿ ಹೊರಗೆ ಹೆಚ್ಚು ಸುತ್ತಾಡದೇ ಇದ್ದರೆ ಒಳ್ಳೆಯದು. ಛತ್ರಿಯನ್ನು ಬಳಸಿಕೊಂಡು ಸೂರ್ಯನ ಕಾಂತಿಯಿಂದ ದೂರ ಇರುವಂತೆ ಸೂಚಿಸಿದ್ದು, ಆದಷ್ಟು ಜೀರ್ಣವಾಗುವ ಲಘು ಆಹಾರವನ್ನು ಸೇವಿಸಬೇಕು. ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳು ಮೂರು ದಿನ ಪೊಲೀಸ್ ಕಸ್ಟಡಿಗೆ

    ಒಟ್ಟಾರೆ ಫೆಬ್ರವರಿಯಲ್ಲೇ ದಾಖಲೆ ಬರೆದಿರುವ ಸುಡು ಬಿಸಿಲು ಮೇ ಅಂತ್ಯದೊಳಗೆ ವಾಡಿಕೆಗಿಂತ ಹೆಚ್ಚಾಗೇ ಇರಲಿದ್ದು, ಸನ್ ಸ್ಟ್ರೋಕ್ ಕೊಡುವ ಸೂಚನೆ ಇದೆ. ಈ ಮೂರು ತಿಂಗಳಲ್ಲಿ ಆಗಾಗ ಗುಡುಗು ಸಹಿತ ಭಾರೀ ಮಳೆ ಕೂಡ ಆಗುವ ಸಾಧ್ಯತೆ ಸಹ ಇದ್ದು, ಜನ ಆರೋಗ್ಯದ ಕಡೆ ಗಮನವಹಿಸುವುದು ಉತ್ತಮ. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮೋದಿ ನರ ಕಟ್- ತಲ್ವಾರ್ ಹಿಡಿದು ಅವಾಜ್ ಹಾಕಿದವನಿಗಾಗಿ ಶೋಧ

  • ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರೀ ಮಳೆ

    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರೀ ಮಳೆ

    ಬೆಂಗಳೂರು: ನಗರದ ಬಿಬಿಎಂಪಿ (BBMP) ವ್ಯಾಪ್ತಿಯ 8 ವಲಯಗಳಲ್ಲೂ 10 ಮಿಮೀ ಮಳೆಯಾಗಿದೆ. ರಾತ್ರಿಯಿಂದ ಕೊಂಚ ಮಳೆ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Weather Forecast) ನೀಡಿದೆ.

    ನಗರದ 12 ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಸಂಪಗಿರಾಮನಗರ, ಬಾಣಸವಾಡಿ, ಹಗಡೂರು, ರಾಜ್‍ಮಹಲ್ ಗುಟ್ಟಹಳ್ಳಿ, ಕೆಂಗೇರಿ ಚಾಮರಾಜ ಪೇಟೆಯಲ್ಲಿ 20 ಮಿಮೀ ಮಳೆಯಾಗಿದೆ. ಕಾಟನ್‍ಪೇಟೆ, ಕಮ್ಮನಹಳ್ಳಿ, ವನ್ನಾರ್ ಪೇಟೆ, ಕೊಟ್ಟಿಗೆಪಾಳ್ಯ, ಕುಶಾಲ್ ನಗರದ ಸುತ್ತಮುತ್ತ 10 ಮಿಮೀ ಮಳೆಯಾಗಿದೆ. ಇದನ್ನೂ ಓದಿ: ಮಹಿಳೆಯ ತಲೆ ತುಳಿದು ಕೊಂದ ಕಾಡಾನೆ

    ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತವಾರಣ ಇರಲಿದ್ದು, ಸಂಜೆ ವೇಳೆಗೆ ಮಿಂಚು ಮತ್ತು ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ ಸುಮಾರು 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ರಾಜ್ಯದ ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇದೆ. ಈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು – ಐವರು ಜಲಸಮಾಧಿ

  • ಇಂದು, ನಾಳೆ ಅಬ್ಬರಿಸಲಿದೆ ಹಿಂಗಾರು ಮಳೆ – ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಇಂದು, ನಾಳೆ ಅಬ್ಬರಿಸಲಿದೆ ಹಿಂಗಾರು ಮಳೆ – ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣ ಅಬ್ಬರಿಸಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಸೋಮವಾರದಿಂದ ಎಡೆಬಿಡದಂತೆ ಮಳೆ (Rain) ಸುರಿಯುತ್ತಿದೆ. ಇಂದು ಮತ್ತು ನಾಳೆ ಕೂಡ ಹಿಂಗಾರು ಮಳೆ ಅಬ್ಬರಿಸಲಿದ್ದು, ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

    ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಮಂಗಳವಾರ ಹಾಗೂ ಬುಧವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯಿಂದ (Indian Meteorological Department) ಮಳೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಮತ್ತು ನಾಳೆ ಭಾರೀ ಗಾಳಿ ಸಹಿತ ಧಾರಾಕಾರ ಮಳೆ ಸಾಧ್ಯತೆ ಇದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅವಾಂತರ; ರಸ್ತೆಗಳು ಜಲಾವೃತ – ಧರೆಗುರುಳಿದ ಮರಗಳು

    ಗುಡುಗಿನ ಜೊತೆಗೆ ಮೇಲ್ಮೈ ಗಾಳಿ ಬಲವಾಗಿ ಬೀಸುವ ಸಾಧ್ಯತೆ ಇದ್ದು, ಮರದ ಕೆಳಗೆ, ತಾತ್ಕಾಲಿಕ ಶೆಲ್ಟರ್ ಕೆಳಗೆ ನಿಲ್ಲದಿರಿ ಎಂದು ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ ಜೊತೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ನಂತರ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಕೆಇಎ ಪರೀಕ್ಷೆ ಅಕ್ರಮ ಪ್ರಕರಣ – ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕಾಂಪೌಂಡ್ ಹಾರಿ ಎಸ್ಕೇಪ್

    ಸೋಮವಾರ ರಾಜಧಾನಿಯಲ್ಲಿ ಭಾರಿ ಮಳೆಯಾಗಿದೆ. ಹಿಂಗಾರು ಅಬ್ಬರಕ್ಕೆ ನಗರದ ಹಲವು ಪ್ರದೇಶಗಳು ಜಲಾವೃತವಾಗಿದೆ. ಸತತ ಮೂರ್ನಾಲ್ಕು ಗಂಟೆಗಳ ಕಾಲ ಎಡಬಿಡದೆ ಮಳೆ ಸುರಿದಿದೆ. ಭಾರಿ ಮಳೆಗೆ ಬೆಂಗಳೂರು ತತ್ತರಿಸಿದೆ. ಯಲಹಂಕದಲ್ಲಿ ಅತಿಹೆಚ್ಚು ಮಳೆಯಾಗಿದ್ದು, 14.7 ಸೆಂ.ಮೀ ಮಳೆ ದಾಖಲಾಗಿದೆ. ಇದನ್ನೂ ಓದಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಡಿ.ಬಿ.ಚಂದ್ರೇಗೌಡ ನಿಧನ

    ಎಲ್ಲೆಲ್ಲಿ ಎಷ್ಟು ಮಳೆ ?
    ಯಲಹಂಕ – 14.7 ಸೆಂ.ಮೀ
    ಹಂಪಿನಗರ – 9.4 ಸೆಂ.ಮೀ
    ನಾಗಪುರ (ವೆಸ್ಟ್ ಜೋನ್) – 8.95 ಸೆಂ.ಮೀ
    ಜಕ್ಕೂರು – 8.65 ಸೆಂ.ಮೀ
    ನಂದಿನಿ ಲೇಔಟ್ – 8.55 ಸೆಂ.ಮೀ
    ವಿಶ್ವನಾಥ್ ನಾಗೇನಹಳ್ಳಿ (ಈಸ್ಡ್ ಜೋನ್) – 7.5 ಸೆಂ.ಮೀ
    ರಾಜ್ ಮಹಲ್ ಗುಟ್ಟಳ್ಳಿ – 7.6 ಸೆಂ.ಮೀ
    ಗಾಳಿ ಆಂಜನೇಯ ಟೆಂಪಲ್ – 7.5 ಸೆಂ.ಮೀ
    ಕೊಟ್ಟಿಗೆಪಾಳ್ಯ – 7 ಸೆಂ.ಮೀ
    ಕಮ್ಮನಹಳ್ಳಿ (ಈಸ್ಟ್ ಜೋನ್)- 6.95 ಸೆಂ.ಮೀ
    ಮಾರುತಿ ಮಂದಿರ ವಾರ್ಡ್ – 6.8 ಸೆಂ.ಮೀ
    ಪೀಣ್ಯ ಇಂಡಸ್ಟ್ರಿಯಲ್ ಏರಿಯಾ -6.75 ಸೆಂ.ಮೀ
    ಅಗ್ರಹಾರ ದಾಸರಹಳ್ಳಿ – 6.7 ಸೆಂ.ಮೀ

  • ರಾಜ್ಯದೆಲ್ಲೆಡೆ 1 ವಾರ ಮಳೆಯ ಮುನ್ಸೂಚನೆ – ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ರಾಜ್ಯದೆಲ್ಲೆಡೆ 1 ವಾರ ಮಳೆಯ ಮುನ್ಸೂಚನೆ – ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ರಾಜ್ಯದ (Karnataka) ಹಲವೆಡೆ 1 ವಾರದ ವರೆಗೆ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

    ಕರಾವಳಿ (Coastal) ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಮಳೆಯ ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ರಾಜ್ಯಕ್ಕೆ 3ನೇ ವಂದೇ ಭಾರತ್ ರೈಲು – ಇಂದು ಪ್ರಾಯೋಗಿಕ ಸಂಚಾರ

    ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ನೈರುತ್ಯ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ- ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ 4 ದಿನಗಳ ಕಾಲ ಮಳೆ

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ 4 ದಿನಗಳ ಕಾಲ ಮಳೆ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay Of Bengal) ತೀವ್ರ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 4 ದಿನಗಳ ಕಾಲ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

    ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಸೆ.11ಕ್ಕೆ ಬೆಂಗಳೂರು ಬಂದ್ – ಏನಿದೆ? ಏನಿರಲ್ಲ?

    ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

    ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಹಾಗೂ ಚಾಮರಾಜನಗರದಲ್ಲೂ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ತಮಿಳುನಾಡಿಗೆ ನೀರು ನಿಲ್ಲಿಸದಿದ್ದರೆ ಕಾವೇರಿ ರಕ್ಷಣಾ ಯಾತ್ರೆ: ಬೊಮ್ಮಾಯಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]