Tag: Meteorological Department

  • ಮುಂಗಾರು ಮತ್ತೆ ಚುರುಕು – ರಾಜ್ಯದಲ್ಲಿ ಮುಂದಿನ 4-5 ದಿನಗಳ ಕಾಲ ಮಳೆ ಸಾಧ್ಯತೆ

    ಮುಂಗಾರು ಮತ್ತೆ ಚುರುಕು – ರಾಜ್ಯದಲ್ಲಿ ಮುಂದಿನ 4-5 ದಿನಗಳ ಕಾಲ ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯದಲ್ಲಿ (Karnataka) ಕೈಕೊಟ್ಟಿದ್ದ ಮುಂಗಾರು ಇಂದಿನಿಂದ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  (Meteorological Department) ಮುನ್ಸೂಚನೆ ನೀಡಿದೆ. ಮುಂದಿನ 4 – 5 ದಿನಗಳ ಕಾಲ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ (Bengaluru) ಹಗುರವಾಗಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಅಲ್ಲದೇ ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜ್ಯದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ಮುಂಬೈನಿಂದ ಮೆಜೆಸ್ಟಿಕ್‍ಗೆ ಆಗಮಿಸಿದ್ದ ರೈಲಿನಲ್ಲಿ ಬೆಂಕಿ – 2 ಬೋಗಿಗಳು ಸಂಪೂರ್ಣ ಭಸ್ಮ

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಮಲೆನಾಡಿನ ಭಾಗವಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಉಳಿದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಕುಂಠಿತಗೊಂಡಿದ್ದ ಮುಂಗಾರು ಚುರುಕುಗೊಳ್ಳುವ ಭರವಸೆ ಮೂಡಿದೆ. ಇದನ್ನೂ ಓದಿ: ಮಹೀಂದ್ರಾ ಎಕ್ಸ್‌ಯುವಿ ಸ್ಪೋರ್ಟ್ಸ್‌ನಲ್ಲಿ ತಾಂತ್ರಿಕ ಸಮಸ್ಯೆ- ಬಗೆಹರಿಸುವ ಭರವಸೆ ನೀಡಿದ ಸಂಸ್ಥೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರಾಖಂಡದಲ್ಲಿ ಎರಡು ದಿನ ರೆಡ್ ಅಲರ್ಟ್ – ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ

    ಉತ್ತರಾಖಂಡದಲ್ಲಿ ಎರಡು ದಿನ ರೆಡ್ ಅಲರ್ಟ್ – ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ

    ಡೆಹ್ರಾಡೂನ್: ಆಗಸ್ಟ್ 14 ಮತ್ತು 15ರಂದು ಹವಾಮಾನ ಇಲಾಖೆಯು (Meteorological Department) ಉತ್ತರಾಖಂಡದಲ್ಲಿ (Uttarakhand) ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆ ಚಾರ್ ಧಾಮ್ ಯಾತ್ರೆಯನ್ನು (Char Dham Yatra) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

    ಉತ್ತರಾಖಂಡದಲ್ಲಿ ಎಡೆಬಿಡದೆ ಮಳೆ (Rain) ಸುರಿಯುತ್ತಿರುವ ಪರಿಣಾಮ ಹಲವು ಕಡೆ ಭೂಕುಸಿತ ಉಂಟಾಗಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಇದರಿಂದಾಗಿ ಬದರಿನಾಥ, ಕೇದಾರನಾಥ, ಗಂಗೋತ್ರಿಯಂತಹ ಪವಿತ್ರ ಕ್ಷೇತ್ರಗಳಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿಗಳಿಗೆ ಅಡಚಣೆ ಉಂಟಾಗಿದೆ. ರುದ್ರಪ್ರಯಾಗ, ದೇವಪ್ರಯಾಗ ಮತ್ತು ಶ್ರೀನಗರದಲ್ಲಿ ಗಂಗಾ, ಮಂದಾಕಿನಿ ಮತ್ತು ಅಲಕಾನಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಬಂದ್ ಆಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಾಲಯ ಕುಸಿತ – 9 ಸಾವು, ಹಲವರು ಸಿಲುಕಿರುವ ಶಂಕೆ

    ಡೆಹ್ರಾಡೂನ್ ಮತ್ತು ನೈನಿತಾಲ್ ಸೇರಿದಂತೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಸತತವಾಗಿ ಸುರಿಯುತ್ತಿರುವ ಮುಂಗಾರು ಮಳೆಯಿಂದ ಗುಡ್ಡಗಾಡು ರಾಜ್ಯಗಳು ತೀವ್ರವಾಗಿ ನಲುಗಿದ್ದು, 60 ಮಂದಿ ಸಾವನ್ನಪ್ಪಿದ್ದು, 17 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿದೆ. ಇದನ್ನೂ ಓದಿ: 10,000 ಪೊಲೀಸರು.. ಆ್ಯಂಟಿ ಡ್ರೋನ್‌ ಸಿಸ್ಟಮ್‌, ಅತ್ಯಾಧುನಿಕ ಕ್ಯಾಮೆರಾ – ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ

    ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯು ಪಾಶ್ಚಿಮಾತ್ಯ ಪ್ರಕ್ಷ್ಯುಬ್ಧತೆಯ ಪರಿಣಾಮವಾಗಿದೆ. ಮಾನ್ಸೂನ್ ಟ್ರಫ್‌ನ (Mansoon Trough) ಸ್ಥಳವು ಹಿಮಾಲಯದ ತಪ್ಪಲಿನಲ್ಲಿರುವುದರಿಂದ ನೈಋತ್ಯ ಅರೇಬಿಯನ್ ಸಮುದ್ರದ ಮಾನ್ಸೂನ್ ಮಾರುತಗಳು ಹಿಮಾಲಯದ ತಪ್ಪಲನ್ನು ಹೊಡೆಯುತ್ತಿವೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟಕ್ಕೆ 7 ಬಲಿ – ಕೊಚ್ಚಿ ಹೋದ ಮನೆಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದಲ್ಲಿ ಮುಂದಿನ 9 ದಿನಗಳ ಕಾಲ ಮಳೆ

    ರಾಜ್ಯದಲ್ಲಿ ಮುಂದಿನ 9 ದಿನಗಳ ಕಾಲ ಮಳೆ

    ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡ ಹಿನ್ನೆಲೆ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ (Rain) ಎಂದು ಭಾರತೀಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ. ಉಳಿದ ದಿನಗಳು ಸಾಧಾರಣ ಮಳೆ ಆಗಲಿದೆ. ರಾಜ್ಯದಲ್ಲಿ ಮಳೆ ಕೊರತೆ ಇಲ್ಲ. ಜೂನ್ 21ರಂದು 70% ಮಳೆ ಕೊರತೆ ಇತ್ತು. ಆದರೆ ಈಗ ಮಳೆ ಹೆಚ್ಚಾಗಿದ್ದು, ಕೊರತೆ ಇಲ್ಲ. ಇಲ್ಲಿಯವರೆಗೆ 40.5% ಮಳೆ ಆಗಬೇಕಿತ್ತು. ಆದರೆ 40.8% ಮಳೆ ಆಗಿದ್ದು, 0.55 ಜಾಸ್ತಿಯೇ ಮಳೆ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಹೇಳಿದ್ದಾರೆ. ಇದನ್ನೂ ಓದಿ: KRS ಡ್ಯಾಂ ಬರೋಬ್ಬರಿ 100 ಅಡಿ ಭರ್ತಿ – 48 ಗಂಟೆಯಲ್ಲಿ 5 ಟಿಎಂಸಿ ನೀರು ಒಳಹರಿವು

    ಎಲ್ಲೆಲ್ಲಿ ಏನಾಗಿದೆ?
    ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಿವಿಧೆಡೆ ನಾಲ್ವರು ಬಲಿ ಆಗಿದ್ದಾರೆ. ಬಸವಕಲ್ಯಾಣದ ಧನ್ನೂರಿನಲ್ಲಿ ಯುವಕನೊಬ್ಬ ಹಳ್ಳದ ಪಾಲಾಗಿದ್ದಾನೆ. ವಿಜಯಪುರದ ಕನ್ನೂರಿನಲ್ಲಿ ಮನೆ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಹರಿಹರದ ಕುಂಬಳೂರಿನಲ್ಲಿ ಗೋಡೆ ಕುಸಿದು ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ಇದನ್ನೂ ಓದಿ: ಕರಾವಳಿ ಭಾಗದಲ್ಲಿಂದು ರೆಡ್ ಅಲರ್ಟ್ – ಬೆಂಗ್ಳೂರಲ್ಲಿ ದಿನವಿಡೀ ತುಂತುರು ಮಳೆ

    ಹಾವೇರಿಯಲ್ಲೂ ಇಂತಹದೇ ಘಟನೆ ಸಂಭವಿಸಿದ್ದು, 3 ವರ್ಷದ ಭಾಗ್ಯ ಚಲಮರದ್ ಎಂಬ ಬಾಲಕಿ ಸಾವನ್ನಪ್ಪಿದ್ದಾಳೆ. ಬೆಳಗಾವಿ, ಗೋವಾ ನಡುವಿನ ಎನ್‌ಹೆಚ್ 4ಎ ಹೈವೇ ಉದ್ಘಾಟನೆ ಮುನ್ನವೇ ಕುಸಿದುಬಿದ್ದಿದೆ. ರಕ್ಕಸಕೊಪ್ಪ ಜಲಾಶಯ ಭರ್ತಿಯಾಗಿದ್ದು, ನರಸಿಂಹವಾಡಿಯ ದತ್ತ ಮಂದಿರ ಜಲಾವೃತವಾಗಿದೆ. ಅಲ್ಲದೇ ಬಳ್ಳಾರಿ, ವಿಜಯನಗರ, ಬಾಗಲಕೋಟೆ ಸೇರಿದಂತೆ ಹಲವೆಡೆ ವರುಣಾರ್ಭಟ ಜೋರಾಗಿದೆ.

    ಚಿಕ್ಕಮಗಳೂರಿನಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರಿದೆ. ಶೃಂಗೇರಿ-ಹೊರನಾಡು ರಸ್ತೆಯಲ್ಲಿ ಭೂಕುಸಿತವಾಗಿದ್ದು, ಮುಳ್ಳಯ್ಯನಗಿರಿ ಮಾರ್ಗದಲ್ಲಿ ಗುಡ್ಡ ಕುಸಿದಿದೆ. ಶಿರಾಡಿ ಸೇರಿ ಹಾಸನದ ಹಲವೆಡೆ ಬರೆ ಕುಸಿತ ಮುಂದುವರೆದಿದೆ. ಕೊಡಗಿನಲ್ಲಿ ಮಳೆ ಮುಂದುವರೆದಿದ್ದು, ಕುಶಾಲನಗರದ ಬಡಾವಣೆಯೊಂದು ಜಲಾವೃತಗೊಂಡಿದೆ. ಅಲ್ಲದೇ ಹಲವು ಗ್ರಾಮಗಳು ಜಲದಿಗ್ಬಂಧನದಲ್ಲಿವೆ. ಇದನ್ನೂ ಓದಿ: ಭಾರೀ ಮಳೆಗೆ ಮನೆಗಳ ಗೋಡೆ ಕುಸಿತ – ಪ್ರತ್ಯೇಕ ಘಟನೆಯಲ್ಲಿ 2 ಕಂದಮ್ಮಗಳ ದಾರುಣ ಸಾವು

    ಕಾವೇರಿ ಕೊಳ್ಳದ ಜಲಾಶಯಗಳು ಮೈದುಂಬಿ ಹರಿಯುತ್ತಿದ್ದು, ಕೆಆರ್‌ಎಸ್ ಡ್ಯಾಂ ಭರ್ತಿಯಾಗುತ್ತದೋ ಇಲ್ಲವೋ ಎಂಬ ಆತಂಕದ ನಡುವೆ ಜಲಾಶಯಕ್ಕೆ 100 ಅಡಿ ನೀರು ಬಂದಿದೆ. 2 ದಿನದಲ್ಲಿ 5 ಟಿಎಂಸಿ ನೀರು ಹರಿದಿದೆ. ವಯನಾಡಲ್ಲಿ ಮಳೆಯ ಕಾರಣ ಕಬಿನಿ ಜಲಾಶಯದ ಒಳಹರಿವು ಹೆಚ್ಚಿದೆ. ಶಿವಮೊಗ್ಗದ ಅಂಜನಾಪುರ ಡ್ಯಾಂ ತುಂಬಿದ್ದು, ಜೋಗದ ಸಿರಿ ಡಬಲ್ ಆಗಿದೆ.

    ದಕ್ಷಿಣ ಕನ್ನಡದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿದೆ. ಉತ್ತರ ಕನ್ನಡದ ನದಿಗಳಲ್ಲಿ ನೀರಿನ ಮಟ್ಟ ಸ್ವಲ್ಪ ಕಡಿಮೆ ಆಗಿದ್ದು, ಕಲಬುರಗಿಯ ಕಾಗಿಣಾ ನದಿ ತುಂಬಿ ಹರಿದಿದೆ. ಚಿಂಚೋಳಿಯ ಮುಲ್ಲಾಮಾರಿ ಡ್ಯಾಂನಿಂದ ನೀರು ರಿಲೀಸ್ ಆಗಿದೆ. ಧಾರವಾಡದ ಅಂಬ್ಲಿಕೊಪ್ಪ ಹಳ್ಳದ ಸೇತುವೆ ಮುಳುಗಡೆ ಆಗಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ಬಾಗಲಕೋಟೆ, ಹಾವೇರಿ ಸೇರಿ ಹಲವು ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆ ಆಗಿದೆ. ಭಾರೀ ಮಳೆಯ ಪರಿಣಾಮ ಹಲವು ತಾಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಧಾರಾಕಾರ ಮಳೆ – ಸೋರುತ್ತಿದ್ದ ಬಸ್‌ನಲ್ಲೂ ಕೊಡೆ ಹಿಡಿದು ಕುಳಿತ ಪ್ರಯಾಣಿಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕು – ಮುಂದಿನ 5 ದಿನ ಅಬ್ಬರದ ಮಳೆ

    ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕು – ಮುಂದಿನ 5 ದಿನ ಅಬ್ಬರದ ಮಳೆ

    ಬೆಂಗಳೂರು: ಇಂದಿನಿಂದ (ಭಾನುವಾರ) ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಒಳನಾಡಿನಲ್ಲಿ ಜೋರು ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮಾಹಿತಿ ನೀಡಿದೆ.

    ಉತ್ತರ ಒಳನಾಡಿನ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ವರುಣ ಅಬ್ಬರಿಸುತ್ತಿದ್ದು, ಮುಂದಿನ ಮೂರ್ನಾಲ್ಕು ದಿನವೂ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, 3,4 ಮತ್ತು 5ನೇ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ- ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆ

    ದಕ್ಷಿಣ ಒಳನಾಡಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ನಾಳೆ (ಸೋಮವಾರ) ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಬೆಂಗಳೂರು-ತುಮಕೂರು ಫ್ಲೈಓವರ್ ಭಾರೀ ವಾಹನಗಳಿಗೆ ಮುಕ್ತನಾ..?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಲಬುರಗಿಯಲ್ಲಿ ಮುಂದಿನ ಒಂದು ವಾರ ಮಳೆ – ನದಿತೀರದಲ್ಲಿ ಹೈಅಲರ್ಟ್ ಘೋಷಣೆ

    ಕಲಬುರಗಿಯಲ್ಲಿ ಮುಂದಿನ ಒಂದು ವಾರ ಮಳೆ – ನದಿತೀರದಲ್ಲಿ ಹೈಅಲರ್ಟ್ ಘೋಷಣೆ

    ಕಲಬುರಗಿ: ರಾಜ್ಯಾದ್ಯಾಂತ ವರುಣನ ಆಗಮನವಾಗಿದ್ದು, ಕಾದು ಕಬ್ಬಿಣದಂತಾಗಿದ್ದ ಜಿಲ್ಲೆಗಳು ತಂಪೇರಿವೆ. ಅದೇ ರೀತಿ ಕಲಬುರಗಿಯಲ್ಲಿ (Kalaburagi) ಕಳೆದ ಐದು ದಿನಗಳಿಂದ ನಿರಂತರ ಮಳೆ (Rain) ಸುರಿಯುತ್ತಿದ್ದು, ಮಳೆಯಿಂದ ಜನರು ತತ್ತರಿಸಿ ಹೋಗಿದ್ದಾರೆ.

    ಕಲಬುರಗಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಪರಿಣಾಮ ಕಲಬುರಗಿ ಜಿಲ್ಲಾಡಳಿತ ನದಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ನದಿ, ಹಳ್ಳ, ಕೊಳ್ಳ, ಕೆರೆ ದಂಡೆಗೆ ತೆರಳದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ- ರಸ್ತೆಗಳು ಜಲಮಯ, ಸಂಚಾರ ಅಯೋಮಯ

    ಪ್ರವಾಹ ಉಂಟಾಗುವ ಸಾಧ್ಯತೆಯಿಂದ ಗ್ರಾಮಗಳಲ್ಲಿ ಡಂಗೂರ ಸಾರಿಸಲು ಡಿಸಿ ಆದೇಶ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಸರ್ವಸನ್ನದ್ಧರಾಗಲು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ. ಅಲ್ಲದೇ ತಗ್ಗು ಪ್ರದೇಶದ ಮತ್ತು ನದಿ ಪಾತ್ರದ ಜನರನ್ನು ಸ್ಥಳಾಂತರಿಸಿ ಕಾಳಜಿ ಕೇಂದ್ರ ತೆರೆಯುವಂತೆ ಸೂಚನೆ ನೀಡಲಾಗಿದೆ ಜಿಲ್ಲೆಯಲ್ಲಿ ಈಗಾಗಲೇ ಕಾಗಿಣ ನದಿ, ಭೀಮಾ ನದಿ, ಮುಲ್ಲಮಾರಿ ನದಿ ತುಂಬಿ ಹರಿಯುತ್ತಿದ್ದು, ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದನ್ನೂ ಓದಿ: ಭಜರಂಗದಳದ ಮೂವರಿಗೆ ಗಡಿಪಾರು ನೋಟಿಸ್- ಸಿಡಿದೆದ್ದ ಹಿಂದೂ ಸಂಘಟನೆಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ 28 ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊರತೆ – ಈವರೆಗೆ 26% ಮಾತ್ರ ಬಿತ್ತನೆ

    ರಾಜ್ಯದ 28 ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊರತೆ – ಈವರೆಗೆ 26% ಮಾತ್ರ ಬಿತ್ತನೆ

    ಬೆಂಗಳೂರು: ರಾಜ್ಯಕ್ಕೆ ಮಳೆ (Rain) ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು (Farmers) ಕಂಗಾಲಾಗಿದ್ದಾರೆ.

    ಕಳೆದ ಜೂನ್ ತಿಂಗಳಲ್ಲಿ ಬರೋಬ್ಬರಿ 56% ಮಳೆ ಕೊರತೆಯಾಗಿತ್ತು. ಜುಲೈ ತಿಂಗಳ ಮೊದಲ 11 ದಿನಗಳವರೆಗೆ 34% ಮಳೆ ಕೊರತೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 18%, ಉತ್ತರ ಒಳನಾಡಿನಲ್ಲಿ 55% ಮಳೆ ಕಡಿಮೆಯಾಗಿದೆ. ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಮಳೆಗೆ ಬರ ಬಂದಿದೆ. ಬಾಗಲಕೋಟೆ (Bagalkot) ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 77% ಮಳೆ ಕೊರತೆಯಾಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ 74% ಮಳೆ ಕಡಿಮೆ ಬಿದ್ದಿದೆ. ಇದರಲ್ಲಿ ಮೂರು ಜಿಲ್ಲೆಯಲ್ಲಿ ಮಳೆ ಕೊರತೆ ಕಾಡಿದೆ.

    ಇನ್ನೂ ಕೊಡಗು (Kodagu) ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 80% ಮಳೆ ಕೊರತೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ವಾಡಿಕೆಯ ಅರ್ಧದಷ್ಟೂ ಬಿತ್ತನೆ ಮಾಡಿಲ್ಲ. ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ. ಇದನ್ನೂ ಓದಿ: ಅಭಿವೃದ್ಧಿ ಕೆಲಸಕ್ಕಿಂತ ಗ್ಯಾರಂಟಿ ಈಡೇರಿಕೆಯೇ ನಮ್ಮ ಮೊದಲ ಆದ್ಯತೆಯಾಗಿತ್ತು: ಪರಮೇಶ್ವರ್

    ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಅಧಿವೇಶನದಲ್ಲಿ ಕೆಲಸಕ್ಕೆ ಬಾರದ ವಿಷಯಗಳೇ ಚರ್ಚೆಯಾಗ್ತಿದೆ – ಬಿಎಸ್‌ವೈ ಪುತ್ರ ಅಸಮಾಧಾನ

    ಕಡಿಮೆ ಬಿತ್ತನೆ ಮಾಡಿರುವ ರಾಜ್ಯದ ಟಾಪ್ 5 ಜಿಲ್ಲೆಗಳು
    ಬೆಂಗಳೂರು ಗ್ರಾಮಾಂತರ- 2%
    ರಾಮನಗರ – 2%
    ಕೋಲಾರ – 4%
    ಬಳ್ಳಾರಿ – 5%
    ಕೊಡಗು – 7%
    ತುಮಕೂರು – 9%

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್

    ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್

    ಬೆಂಗಳೂರು: ಕರ್ನಾಟಕದ (Karnataka) ಅರ್ಧ ಭಾಗದಲ್ಲಿ ಮುಂಗಾರು (Mansoon) ಮಳೆ ಸಕ್ರಿಯಗೊಂಡಿದೆ. ಕರ್ನಾಟಕದ ಕರಾವಳಿ (Karavali) ಭಾಗದಲ್ಲಿ ಮಳೆ ಇನ್ನಷ್ಟು ತೀವ್ರಗೊಂಡಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (Meteorological Department) ಮಾಹಿತಿ ನೀಡಿದೆ.

    ಅರಬ್ಬಿ ಸಮುದ್ರದಲ್ಲಿನ (Arabian Sea) ಹವಾಮಾನ ಬದಲಾವಣೆಗಳಿಂದಾಗಿ ಕರಾವಳಿ ಭಾಗದಲ್ಲಿ ಮುಂಗಾರು ಸುರಿಸುವ ಮೋಡಗಳು ಸಕ್ರಿಯಗೊಂಡಿವೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಈ ಮೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಆರೆಂಜ್ ಅಲರ್ಟ್ (Orange Alert) ನೀಡಲಾಗಿದೆ. ಕರಾವಳಿ ತೀರದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 50 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ವಿದ್ಯುತ್ ಬಿಲ್ ಹಿಂಬಾಕಿ ಇದ್ದರೂ ಸಿಗಲಿದೆ ಗೃಹಜ್ಯೋತಿ ಪ್ರಯೋಜನ

    ದಕ್ಷಿಣ ಒಳನಾಡಿನ ಭಾಗದ ಜಿಲ್ಲೆಗಳಲ್ಲೂ ಸಹ ಧಾರಾಕಾರ ಮಳೆ ಮುನ್ಸೂಚನೆ ನೀಡಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ತುಮಕೂರು ಜಿಲ್ಲೆಗಳ ಹಲವೆಡೆ ಭಾರೀ ಮಳೆ ಸಂಭವವಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಸಾಧಾರಣವಾಗಿ ಮಳೆ ಬರುವ ಮುನ್ಸೂಚನೆ ಇದೆ. ಮೂರು ದಿನಗಳ ನಂತರ ಅಂದರೆ ಜುಲೈ 5 ಮತ್ತು 6ರಂದು ಬೆಳಗಾವಿ, ಧಾರವಾಢ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಮೋದಿ ಸರ್ಕಾರದ ಆಡಳಿತ ಯಂತ್ರ ಬಳಸಿಕೊಳ್ತಿದ್ದಾರೆ: ರಾಷ್ಟ್ರಪತಿಗೆ ದಿನೇಶ್ ಗುಂಡೂರಾವ್ ಪತ್ರ

    ಬೆಂಗಳೂರಿಗೆ (Bengaluru) ಯಾವುದೇ ಅಲರ್ಟ್ ನೀಡಿಲ್ಲ. ಆದರೆ ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಇಂದು ಬಾಂಬ್ ಹಾಕಿದವರ ದೇಶಕ್ಕೆ ನುಗ್ಗಿ ಹೊಡೆಯೋ ಸಾಮರ್ಥ್ಯ ನಮ್ಮಲ್ಲಿದೆ: ಜೋಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರ ಕನ್ನಡದಲ್ಲಿ ಅಬ್ಬರದ ಮಳೆ – ಶಾಲಾ ಕೊಠಡಿಗೆ ನುಗ್ಗಿದ ನೀರು

    ಉತ್ತರ ಕನ್ನಡದಲ್ಲಿ ಅಬ್ಬರದ ಮಳೆ – ಶಾಲಾ ಕೊಠಡಿಗೆ ನುಗ್ಗಿದ ನೀರು

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ (Karavali) ಭಾಗದಲ್ಲಿ ವರುಣನ ಅಬ್ಬರಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ, ಭಟ್ಕಳದಲ್ಲಿ ಅಬ್ಬರದ ಮಳೆ ಸುರಿದಿದ್ದು, ಹಲವು ಕಷ್ಟನಷ್ಟಗಳು ಸಂಭವಿಸಿದೆ.

    ಧಾರಾಕಾರ ಮಳೆ ಸುರಿದ ಪರಿಣಾಮ ಹೊನ್ನಾವರ (Honnavara) ತಾಲೂಕಿನ ಕಾಸರಕೋಡ ಗ್ರಾಮದ ಕಳಸಿನಮೊಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದ್ದು, ಕೊಠಡಿಯಲ್ಲಿ ಕೂರಲಾಗದೇ ವಿದ್ಯಾರ್ಥಿಗಳು ಪರದಾಡುವಂತಾಯಿತು. ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಕೇಸ್‌ – ದಕ್ಷಿಣ ಕನ್ನಡ, ಕೊಡಗಿನಲ್ಲಿ PFI ಕಾರ್ಯಕರ್ತರ ಮನೆ ಮೇಲೆ NIA ದಾಳಿ

    ಹೊನ್ನಾವರದ ಮುಗ್ವಾ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಣ್ಣಿಮನೆಯ ರಸ್ತೆಯಲ್ಲಿ ಆಟೋ ರಿಕ್ಷಾದ ಮೇಲೆ ಮರ ಬಿದ್ದು ಅದೃಷ್ಟವಶಾತ್ ಆಟೋ ಚಾಲಕ ಹಳಗೇರಿಯ ಶ್ರೀನಾಥ್ ಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಕರಾವಳಿ ಭಾಗದಲ್ಲಿ ಇನ್ನೂ ಐದು ದಿನ ಹೆಚ್ಚಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ (Meteorological Department) ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಪಕ್ಷದ ಘನತೆಗೆ ಧಕ್ಕೆ ತರದಿರಿ- ನಳಿನ್ ಕುಮಾರ್ ಕಟೀಲ್ ಸೂಚನೆ

    ಶಿರಸಿ, ಸಿದ್ದಾಪುರ, ಮುಂಡಗೋಡು, ಹಳಿಯಾಳ, ಯಲ್ಲಾಪುರ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಕರಾವಳಿ ಭಾಗದ ಕುಮಟಾ, ಭಟ್ಕಳ, ಕಾರವಾರ, ಹೊನ್ನಾವರ ಭಾಗದಲ್ಲಿ ಮಳೆಯ (Rain) ಆರ್ಭಟ ಹೆಚ್ಚಾಗಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರ ಭೂ ಕುಸಿತಕ್ಕೆ ಕಾರಣವಾಗಿದೆ. ಇಂದು ಕುಮಟಾದ ತಂಡ್ರಗುಳಿ ಭಾಗದ ಹೆದ್ದಾರಿ ಅಂಚಿನಲ್ಲಿ ಗುಡ್ಡ ಕುಸಿದ ಪರಿಣಾಮ ಕಲ್ಲುಬಂಡೆ ಮನೆಗೆ ಅಪ್ಪಳಿಸಿ ಗೋಡೆ ಬಿರುಕು ಬಿಟ್ಟಿದೆ. ಕಾರವಾರ ಭಾಗದ ನೌಕಾ ನೆಲೆಯ ಹೆದ್ದಾರಿ ಭಾಗದಲ್ಲಿ ಸಹ ಗುಡ್ಡ ಕುಸಿದು ದ್ವಿಮುಖ ಸಂಚಾರವನ್ನು ಬಂದ್ ಮಾಡಲಾಗಿದೆ. ದಶಕದಿಂದ ಚತುಷ್ಪತ ಹೆದ್ದಾರಿ ಕಾಮಗಾರಿ ಕುಂಟುತ್ತಾ ಸಾಗಿದ್ದು, ಈ ಭಾಗದ ಜನವಸತಿ ಪ್ರದೇಶಕ್ಕೆ ಹೆಚ್ಚಿನ ಮಳೆಯಾದರೆ ನೀರು ತುಂಬುವ ಆತಂಕ ಮನೆಮಾಡಿದೆ. ಇದನ್ನೂ ಓದಿ: Expressway- ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿಎಲ್ ರದ್ದು: ಅಲೋಕ್ ಕುಮಾರ್

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಬೆಂಗಳೂರಿನಲ್ಲಿ ಭಾರೀ ಮಳೆ – ರಸ್ತೆಯಲ್ಲಿ ವಾಹನ ಸವಾರರ ಪರದಾಟ

    ಬೆಂಗಳೂರಿನಲ್ಲಿ ಭಾರೀ ಮಳೆ – ರಸ್ತೆಯಲ್ಲಿ ವಾಹನ ಸವಾರರ ಪರದಾಟ

    ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಇಂದು ಬೆಳ್ಳಂಬೆಳಗ್ಗೆಯೇ ಮಳೆರಾಯನ ಆಗಮನವಾಗಿದ್ದು, ನಗರದ ಹಲವೆಡೆ ಭಾರೀ ಮಳೆಯಾಗಿದೆ. ಭಾರೀ ಮಳೆಯ (Rain) ಪರಿಣಾಮ ವಾಹನ ಸವಾರರು ಸಂಚರಿಸಲು ರಸ್ತೆ ಕಾಣಿಸದೆ ಪರದಾಡಿದ್ದಾರೆ.

    ಚೆನ್ನೈನಲ್ಲಿ (Chennai) ಮೇಲ್ಮೈ ಸುಳಿಗಾಳಿಯ ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ಮುಂದಿನ 3 ಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (Meteorological Department) ನೀಡಿದೆ. ಅದೇ ರೀತಿ ಬೆಂಗಳೂರಿನಲ್ಲಿ ಮಳೆ ಪ್ರಾರಂಭವಾಗಿದ್ದು, ಹಲವೆಡೆ ಭಾರೀ ಪ್ರಮಾಣದ ಮಳೆಯಾಗಿದೆ. ವಿಧಾನಸೌಧದ ಸುತ್ತಮುತ್ತ ಭಾರೀ ಮಳೆಯಾಗಿದ್ದು, ನಗರದ ಮೌರ್ಯ ಸರ್ಕಲ್, ಕೆಆರ್ ಸರ್ಕಲ್, ಶಿವಾನಂದ ಸರ್ಕಲ್, ರೇಸ್ ಕೋರ್ಸ್, ಮೆಜೆಸ್ಟಿಕ್, ಫ್ರೀಡಂ ಪಾರ್ಕ್, ಕಾರ್ಪೊರೇಷನ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ- ಬೆಳ್ಳಂಬೆಳಗ್ಗೆ ಕೊಡೆ ಹಿಡಿದ ಜನ

    ಸದಾಶಿವನಗರದಲ್ಲಿ ಗುಡುಗು ಸಹಿತ ಜೋರು ಮಳೆಯಾಗಿದೆ. ಕಾಂಗ್ರೆಸ್ (Congress) ಪ್ರತಿಭಟನೆ ಹಿನ್ನೆಲೆ ಬೆಳಗ್ಗೆ 8 ಗಂಟೆಗೆ ಮನೆಯಿಂದ ಹೊರಡಬೇಕಿದ್ದ ಡಿಕೆ ಶಿವಕುಮಾರ್ ಮಳೆಯಿಂದಾಗಿ ಮನೆಯಲ್ಲಿಯೇ ಉಳಿದಿದ್ದಾರೆ. 11 ಗಂಟೆಗೆ ಕಾಂಗ್ರೆಸ್ ಪ್ರತಿಭಟನೆ ನಿಗದಿಯಾಗಿದ್ದು, ಇಲ್ಲಿಯವರೆಗೂ ಡಿಕೆಶಿ ಮನೆಯ ಮುಂದೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸುಳಿದಿಲ್ಲ. ಇದನ್ನೂ ಓದಿ: ಇನ್ಮೇಲೆ ಇಂದಿರಾ ಕ್ಯಾಂಟೀನ್‍ನಲ್ಲಿ ಸಿಗುತ್ತೆ ಮಂಗಳೂರು ಬನ್ಸ್- ದರದಲ್ಲೂ ಬದಲಾವಣೆ

    ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂನಲ್ಲಿ ಧಾರಾಕಾರ ಮಳೆಯಾಗಿದ್ದು, ರಸ್ತೆಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯ ಹಿನ್ನೆಲೆ ರಸ್ತೆ ಕಾಣಿಸದೆ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ. ಜೂನ್ 21ರಂದು ಬೆಳಗ್ಗೆಯವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಮುಂದಿನ 5 ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಸಿಎಂ ಅವ್ರೇ ಒಮ್ಮೆ ಆತ್ಮವಿಮರ್ಶೆ ಮಾಡಿಕೊಳ್ಳಿ- 2018ರ ಪಬ್ಲಿಕ್ ಟಿವಿ ವರದಿ ತೆಗೆದು ಸರ್ಕಾರಕ್ಕೆ ತಿವಿದ ಯತ್ನಾಳ್

    ಬೆಂಗಳೂರಿನಲ್ಲಿ ಎಲ್ಲಿ ಎಷ್ಟು ಮಿ.ಮೀ ಮಳೆಯಾಗಿದೆ?

    ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ ಮತ್ತು ರಾಮನಗರ ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ ನೀಡಿದ್ದು, ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿಲೋಮೀಟರ್ ಇರುವ ಸಾಧ್ಯತೆಯಿದೆ. ಬಿಪರ್‌ಜಾಯ್ ಚಂಡಮಾರುತದಿಂದ (Biparjoy Cyclone) ಪ್ರಭಾವಗೊಂಡಿದ್ದ ಮುಂಗಾರು ಮತ್ತೆ ಚುರುಕಾಗಿದೆ. ಸೈಕ್ಲೋನ್ ಪರಿಣಾಮ ದೊಡ್ಡ ಅಲೆಗಳು ಸಮುದ್ರ ತೀರಕ್ಕೆ ಬಂದು ಅಪ್ಪಳಿಸುತ್ತಿವೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ರಣ ಬಿಸಿಲಿಗೆ ನಲುಗಿದ ಸರ್ಕಾರ – ಇಂದು ಹೈವೋಲ್ಟೇಜ್‌ ಸಭೆ

  • ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಚುರುಕು – ಮುಂದಿನ 48 ಗಂಟೆಗಳ ಕಾಲ ಕರಾವಳಿ, ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

    ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಚುರುಕು – ಮುಂದಿನ 48 ಗಂಟೆಗಳ ಕಾಲ ಕರಾವಳಿ, ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

    ಬೆಂಗಳೂರು: ಬಿಪರ್‌ಜಾಯ್ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ (Karnataka) ದುರ್ಬಲಗೊಂಡಿದ್ದ ಮುಂಗಾರು ಸೋಮವಾರದಿಂದ ಚುರುಕುಗೊಳ್ಳುವ ಸಾಧ್ಯತೆ ಇದೆ. ಭಾನುವಾರ ಬೆಳಗ್ಗೆಯಿಂದಲೇ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದೆ. ಕರಾವಳಿ ಸೇರಿ ರಾಜ್ಯದ ವಿವಿಧೆಡೆ ವರ್ಷಧಾರೆಯಾಗಿದ್ದು, ಇದರಿಂದಾಗಿ ಮುಂಗಾರು ಚುರುಕುಗೊಳ್ಳುವ ಲಕ್ಷಣ ಗೋಚರಿಸಿದೆ.

    ಮುಂದಿನ 48 ಗಂಟೆಗಳ ಕಾಲ ಕರಾವಳಿಯ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಬಾವಿಗಿಳಿದು ಬೆಕ್ಕನ್ನು ರಕ್ಷಣೆ ಮಾಡಿದ ಪೇಜಾವರ ಶ್ರೀ

    ಮುಂದಿನ 2 ದಿನ ಒಳನಾಡಿನ ಒಂದೆರಡು ಕಡೆ, ಕರಾವಳಿಯಯಲ್ಲಿ ಗುಡುಗು ಮಿಂಚಿನ ಸಹಿತ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ ಎಂದು ಹೇಳಿದೆ.

    ಗರಿಷ್ಠ ಉಷ್ಣಾಂಶವು ರಾಜ್ಯದ ಒಂದೆರಡು ಕಡೆಗಳಲ್ಲಿ 4-5 ಹಾಗೂ ಕೆಲವು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಸಿಯಸ್ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ.

    ಮೀನುಗಾರರಿಗೆ ಎಚ್ಚರಿಕೆ:

    ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ನಿಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿದೆ ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.

    ನಿನ್ನೆ ಸುರಿದ ಮಳೆಯ ವಿವರ:

    ಶನಿವಾರ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣದ ಸುತ್ತ ಮುತ್ತ ಅತಿ ಹೆಚ್ಚು 12 ಸೆಂ.ಮೀ. ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 10 ಸೆಂ.ಮೀ ಮುಲ್ಕಿ, ಉಪ್ಪಿನಂಗಡಿಯಲ್ಲಿ 6 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 6 ಸೆಂ.ಮೀ, ಹೊನ್ನಾವರ , ಕುಮಟ, ಕಾರವಾರ, ಕದ್ರಾ ದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.

    ಇನ್ನೂ ಮಾಣಿ, ಕ್ಯಾಸಲ್ ರಾಕ್, ಶಿರಾಳಿ, ಗೋಕರ್ಣ, ಕೋಟ, ಸುಳ್ಯ, ಸಿಂಧನರಿನಲ್ಲಿ 3 ಸೆಂ.ಮೀ ; ಗೇರುಸೊಪ್ಪ, ಬೆಳ್ತಂಗಡಿ, ಕೊಲ್ಲೂರು, ಭಾಗಮಂಡಲದಲ್ಲಿ 2 ಮತ್ತು ಉಡುಪಿ, ಕುಂದಾಪುರ, ಕಾರ್ಕಳ, ಸಿದ್ದಾಪುರ, ಅಂಕೋಲಾ, ಧರ್ಮಸ್ಥಳ, ಪುತ್ತೂರಿನಲ್ಲಿ 1 ಸೆಂ.ಮೀ ಮಳೆಯಾಗಿದೆ.

    ಸಿಲಿಕಾನ್ ಸಿಟಿಯಲ್ಲಿ ಮಳೆ:

    ಬೆಂಗಳೂರು (Bengaluru) ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಇಲ್ಲವೇ ರಾತ್ರಿಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸಲಿದ್ದು, ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

    ಮಳೆ ಕುಂಠಿತ:
    ಆರಂಭದಲ್ಲಿ ಮಾನ್ಸೂನ್ ದುರ್ಬಲಗೊಂಡ ಪರಿಣಾಮ ಪ್ರಸಕ್ತ ತಿಂಗಳಲ್ಲಿ ಮಳೆ ಕೊರತೆಯಾಗಿದೆ. ಜೂ. 1ರಿಂದ ಜೂ 18ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 109 ಮಿಮೀ ಮಳೆ ಆಗಬೇಕಿತ್ತು. ಆದರೆ, 32 ಮಿಮೀ ಮಳೆಯಾಗಿದ್ದು, ಶೇ.71 ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದಿದೆ. ಇದನ್ನೂ ಓದಿ: ಬಿಜೆಪಿಯ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ನೆರವಿಗಾಗಿಯೇ ಕಾಂಗ್ರೆಸ್ ಗ್ಯಾರಂಟಿಗಳನ್ನ ತಂದಿದೆ: ದಿನೇಶ್ ಗುಂಡೂರಾವ್