Tag: Metro fare hike

  • ದರ ಏರಿಕೆ ಎಫೆಕ್ಟ್ – ವೀಕೆಂಡ್‌ನಲ್ಲಿಯೂ ನಮ್ಮ ಮೆಟ್ರೋ ಖಾಲಿ ಖಾಲಿ

    ದರ ಏರಿಕೆ ಎಫೆಕ್ಟ್ – ವೀಕೆಂಡ್‌ನಲ್ಲಿಯೂ ನಮ್ಮ ಮೆಟ್ರೋ ಖಾಲಿ ಖಾಲಿ

    ಬೆಂಗಳೂರು: ನಮ್ಮ ಮೆಟ್ರೋ (Namma Metro) ದರ ಏರಿಕೆ ಪರಿಣಾಮ ವೀಕೆಂಡ್‌ನಲ್ಲಿಯೂ ಜನರು ಮೆಟ್ರೋದಲ್ಲಿ ಪ್ರಯಾಣಿಸಲು ಹಿಂದೇಟು ಹಾಕುತ್ತಿದ್ದಾರೆ.

    ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದರಿಂದ ಜನರು ಇದೀಗ ಸ್ವಂತ ವಾಹನ ಹಾಗೂ ಬಿಎಂಟಿಸಿಯಲ್ಲಿ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ವೀಕೆಂಡ್‌ನಲ್ಲಿಯೂ ಮೆಟ್ರೋದಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಹೊಡೆಯುತ್ತಿವೆ.ಇದನ್ನೂ ಓದಿ: ಎಲಾನ್‌ ಮಸ್ಕ್‌ ಅವರ 13ನೇ ಮಗುವಿಗೆ ಜನ್ಮ ನೀಡಿದ್ದೇನೆ: ಆಶ್ಲೇ ಹೇಳಿಕೆಗೆ ಮೌನ ಮುರಿದ ಮಸ್ಕ್‌

    ಈ ಮೊದಲು ವೀಕೆಂಡ್‌ನಲ್ಲಿ ಓರಿಯನ್ ಮಾಲ್, ಇಸ್ಕಾನ್ ಟೆಂಪಲ್‌ಗೆ ಬರುವ ಜನರು ಹೆಚ್ಚಾಗಿ ಮೆಟ್ರೋದಲ್ಲಿ ಬರುತ್ತಿದ್ದರು. ಆದರೆ ಇವತ್ತು ಮೆಟ್ರೋದಲ್ಲಿ ಪ್ರಯಾಣಿಕರಿಲ್ಲ. ಹೀಗಾಗಿ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದ ಬಳಿ ಪ್ರಯಾಣಿಕರೇ ಇಲ್ಲದಂತಾಗಿದ್ದು, ಮೆಟ್ರೋದಲ್ಲಿ ಪ್ರಯಾಣ ಮಾಡಲು ಜನರ ಹಿಂಜರಿಯುತ್ತಿದ್ದಾರೆ.

    ಕಳೆದ ಭಾನುವಾರ ನಮ್ಮ ಮೆಟ್ರೋ ಟಿಕೆಟ್ ದರ 46% ಅಂದರೆ ಮೆಟ್ರೋ ಪ್ರಯಾಣ ದರ ಗರಿಷ್ಠ 90 ರೂ., (30. ಕಿ.ಮೀ) ಕನಿಷ್ಠ 10 ರೂ.ಗೆ (0-2 ಕಿ.ಮೀ) ಏರಿಕೆಯಾಗಿತ್ತು.ಇದನ್ನೂ ಓದಿ: ಅಯೋಧ್ಯೆಗೆ ತೆರಳಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ – 10 ಮೊಬೈಲ್, 20,000 ರೂ. ದೋಚಿದ ಖದೀಮರು

     

  • ಬಿಜೆಪಿ ಸಂಸದರಿಗೆ ಧಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿಸಲಿ: ಕೇಂದ್ರದ ವಿರುದ್ಧ ಪ್ರಿಯಾಂಕ್ ಕಿಡಿ

    ಬಿಜೆಪಿ ಸಂಸದರಿಗೆ ಧಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿಸಲಿ: ಕೇಂದ್ರದ ವಿರುದ್ಧ ಪ್ರಿಯಾಂಕ್ ಕಿಡಿ

    -ಕೈ, ಬಿಜೆಪಿ ನಡುವೆ ರಾಜಕೀಯ ಜಟಾಪಟಿ!

    ಬೆಂಗಳೂರು: ನಮ್ಮ ಮೆಟ್ರೋ (Namma Metro) ಟಿಕೆಟ್ ದರ ಹೆಚ್ಚಳ ವಿಚಾರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ದರ ಹೆಚ್ಚಳ ಕೇಂದ್ರದ ನಿರ್ಧಾರ ಎಂದು ಕಾಂಗ್ರೆಸ್‍ನವರು (Congress) ವಾದಿಸಿದರೆ, ಇಲ್ಲ ಇದು ರಾಜ್ಯದ ನಿರ್ಧಾರ ಎಂದು ಬಿಜೆಪಿಯವರು (BJP) ವಾದಿಸುತ್ತಿದ್ದಾರೆ. ಈ ಮೂಲಕ ಪರಸ್ಪರ ರಾಜಕೀಯ ಕೆಸರೆರಚಾಟ ನಡೆಯುತ್ತಿದೆ.

    ಕಳೆದ ವಾರ ನಮ್ಮ ಮೆಟ್ರೋ ಪ್ರಯಾಣ ದರವನ್ನು (Metro Fare Hike) ಕೇಂದ್ರ ತಡೆ ಹಿಡಿದಿದೆ ಎಂದು ಹೇಳಿಕೊಂಡಿದ್ದ ಬಿಜೆಪಿಗರು, ಇಂದು ಟಿಕೆಟ್ ದರ ವಾಪಸ್ ಪಡೆಯಿರಿ ಎಂದು ಬಿಎಂಆರ್‌ಸಿಎಲ್‌ಗೆ  ಮನವಿ ಪತ್ರ ಸಲ್ಲಿಸಿದ್ದಾರೆ. ಸಂಸದ ಪಿಸಿ ಮೋಹನ್ ಟ್ವೀಟ್ ಮಾಡಿ, ದರ ಏರಿಕೆಗೆ ರಾಜ್ಯವೇ ಕಾರಣ ಎಂದು ಆರೋಪಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯಲ್ಲ. ಅದು ಕೇಂದ್ರ ಸರ್ಕಾರದ ಹೊಣೆ ಎಂದು ಪ್ರತಿಪಾದಿಸಿದ್ದಾರೆ. ತಾತ್ಕಾಲಿಕವಾಗಿ ದರ ಏರಿಕೆ ನಿಲ್ಲಿಸಿದರೆ ಅದು ಕೇಂದ್ರದ್ದು. ದರ ಏರಿಕೆ ಆದರೆ ಅದು ರಾಜ್ಯ ಸರ್ಕಾರದ್ದಾ? ಬಿಜೆಪಿ ಸಂಸದರಿಗೆ ಧಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿಸಲಿ ಎಂದು ಅವರು ಕಿಡಿಕಾರಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸರುವ ಶಾಸಕ ಸಿ.ಕೆ ರಾಮಮೂರ್ತಿ, ಪ್ರಿಯಾಂಕ್ ಖರ್ಗೆ ಎಲುಬಿಲ್ಲದ ನಾಲಿಗೆ ಥರ ಮಾತನಾಡಬಾರದು. ದರ ಹೆಚ್ಚಳಕ್ಕೆ ಕಮಿಟಿ ಮಾಡಿದ್ದಾರೆ. ಎಲ್ಲಾ ನಗರಗಳ ದರ ನೋಡಿ. ಅವರು ಈ ರೀತಿ ಹೇಳಬಾರದು ಎಂದಿದ್ದಾರೆ.

    ಇನ್ನೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮೆಟ್ರೋ ಟಿಕೆಟ್ ದರ ಏರಿಕೆಯಿಂದ ಪ್ರಯಾಣಿಕರು ಇಳಿಮುಖವಾಗಬಹುದು. ಅವಾಗ ನಮ್ಮ ಬಸ್‍ಗೆ ಜನ ಹೋಗ್ತಾರೆ. ಅಥವಾ ಅವರ ವಾಹನಗಳಲ್ಲಿ ಓಡಾಡ್ತಾರೆ ಎಂದಿದ್ದಾರೆ.

  • ಮೆಟ್ರೋ ಟಿಕೆಟ್ ದರ ಏರಿಕೆ | ಸರ್ಕಾರದಿಂದ ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನ: ರವಿಕುಮಾರ್ ವ್ಯಂಗ್ಯ

    ಮೆಟ್ರೋ ಟಿಕೆಟ್ ದರ ಏರಿಕೆ | ಸರ್ಕಾರದಿಂದ ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನ: ರವಿಕುಮಾರ್ ವ್ಯಂಗ್ಯ

    -ಬಡವರ ಮೇಲೆ ಬರೆ ಹಾಕುವುದು ಸರಿಯಲ್ಲ
    ಬೆಂಗಳೂರು: ರಾಜ್ಯ ಸರ್ಕಾರವು ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನವನ್ನೇ ಕೈಗೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ (N.Ravikumar) ಟೀಕಿಸಿದ್ದಾರೆ.

    ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಹಿಂದೆ ಬಸ್ ಪ್ರಯಾಣದರ ಹೆಚ್ಚಿಸಿದ್ದರು. ಈಗ ಮೆಟ್ರೋ (Namma Metro) ಟಿಕೆಟ್ ದರ ಹೆಚ್ಚಿಸಿದ್ದಾರೆ. ಈ ರೀತಿ ಹೆಚ್ಚಳದಿಂದ ಮೆಟ್ರೋ, ಬಸ್ ಪ್ರಯಾಣ ಕೈಬಿಟ್ಟು ಸ್ವಂತ ವಾಹನದಲ್ಲಿ ಓಡಾಡಲು ಇನ್ನೂ ಹೆಚ್ಚು ಖರ್ಚಾಗಲಿದೆ ಎಂದು ಎಂದಿದ್ದಾರೆ.

    ಜನರು ಅತಿ ಹೆಚ್ಚು ಅಸಹಾಯಕ ಪರಿಸ್ಥಿತಿಗೆ ಹೋಗುತ್ತಿದ್ದಾರೆ. ಈಗ ಮೆಟ್ರೋ ಟಿಕೆಟ್ ದರ ಎಷ್ಟು ಹೆಚ್ಚಿಸಿದ್ದಾರೆ ಎಂದರೆ, ಬೆಂಗಳೂರಿನಲ್ಲಿ (Bengaluru) 25‌ – 30 ಕಿಮೀ ಒಂದು ಕಡೆಯಿಂದ ಇನ್ನೊಂದು ಕಡೆಗೆ ಪ್ರಯಾಣ ಮಾಡಿದರೆ ಹಿಂದೆ 60 ರೂ. ಇತ್ತು. ಈಗ ಅದು 90 ರೂ. ಆಗಿದೆ. 100 ರೂ. ಇದ್ದರೆ ಈಗ 146 ರೂ. ಅಂದರೆ 46% ಏರಿಕೆ ಆಗಿದೆ ಎಂದು ಕಿಡಿಕಾರಿದ್ದಾರೆ.

    ಟ್ರಾಫಿಕ್ ಕಡಿಮೆ ಮಾಡಲು ಬೆಂಗಳೂರಿನಲ್ಲಿ ಮೆಟ್ರೋ ಬಂದಿದೆ. ಟ್ರಾಫಿಕ್ ಕಡಿಮೆ ಮಾಡಲು ಮೆಟ್ರೋ ಬಂದರೆ, ಇವರು ಮೆಟ್ರೋ, ಬಸ್ ಪ್ರಯಾಣ ದರ ಏರಿಸುತ್ತಿದ್ದಾರೆ. ಡೀಸೆಲ್, ಪೆಟ್ರೋಲ್ ದರವನ್ನು ಬೇರೆ ರಾಜ್ಯಕ್ಕೆ ಹೋಲಿಸಿದರೆ ಸಿದ್ದರಾಮಯ್ಯರ ಸರ್ಕಾರ ಮೂರು ಸಲ ಹೆಚ್ಚಿಸಿದೆ. ಇದರಿಂದ ಆಟೋ ದರ ಹೆಚ್ಚಾಗಿದೆ. ಆಟೋ, ಬಸ್, ಮೆಟ್ರೋದಲ್ಲಿ ಬಡವರು ಓಡಾಡುತ್ತಾರೆ. ಬಡವರ ಮೇಲೆ ಒಂದಾದ ಬಳಿಕ ಒಂದರಂತೆ ಬರೆ ಹಾಕುವುದು ಸರಿಯಲ್ಲ ಎಂದಿದ್ದಾರೆ.