Tag: Metro’s Jor Bagh

  • ಮೆಟ್ರೋ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

    ಮೆಟ್ರೋ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

    ನವದೆಹಲಿ: ಮೆಟ್ರೋ ರೈಲಿನಡಿಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಜೋರ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

    ದೆಹಲಿಯ ‌ಜೋರ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ಪ್ಲಾಟ್ ಫಾರ್ಮ್‍ನಲ್ಲಿ ನಿಂತುಕೊಂಡಿದ್ದರು. ಮೆಟ್ರೋ ಚಲಿಸಲು ಆರಂಭಿಸುತ್ತಿದ್ದಂತೆ ಮಹಿಳೆ ಟ್ರ್ಯಾಕ್‍ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಟ್ರೋ ರೈಲು ಹುಡಾ ಸಿಟಿ ಸೆಂಟರ್ ಕಡೆ ತೆರಳುತ್ತಿತ್ತು. ಘಟನೆಯ ಬಳಿಕ ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಮಿಗ್ 29 ಬದಲಿಸಲು ಮಲೇಷ್ಯಾದ ಮೊದಲ ಆಯ್ಕೆ ಭಾರತದ ತೇಜಸ್

    ಮಹಿಳೆಯ ಬ್ಯಾಗ್‍ನಲ್ಲಿ ಡೆತ್‍ನೋಟ್ ಪತ್ತೆಯಾಗಿದೆ. ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ತೊಡಗಿದ್ದು, ಬಳಿಕ ಆಸ್ಪತ್ರೆಯಿಂದ ಮಹಿಳೆಯ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲು ನಿರ್ಧರಿಸಿದ್ದಾರೆ.

    ಘಟನೆಯ ಬಳಿಕ ಮೆಟ್ರೋ ಸೇವೆಯಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಈ ಬಗ್ಗೆ ಮೆಟ್ರೋ ಅಧಿಕಾರಿಗಳು ಜನಸಾಮಾನ್ಯರಿಗೆ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ಅಕ್ರಮ -ADGP ಅಮೃತ್‌ ಪೌಲ್ ಅರೆಸ್ಟ್‌

    Live Tv
    [brid partner=56869869 player=32851 video=960834 autoplay=true]