Tag: miami cancer institute

  • ವೈದ್ಯರು ನಮ್ಮ ಪಾಲಿನ ದೇವರು, ನಿಮ್ಮ ಪ್ರೀತಿ ವಿಶ್ವಾಸಕ್ಕೆ ಚಿರಋಣಿ: ಗೀತಾ ಶಿವರಾಜ್‌ಕುಮಾರ್

    ವೈದ್ಯರು ನಮ್ಮ ಪಾಲಿನ ದೇವರು, ನಿಮ್ಮ ಪ್ರೀತಿ ವಿಶ್ವಾಸಕ್ಕೆ ಚಿರಋಣಿ: ಗೀತಾ ಶಿವರಾಜ್‌ಕುಮಾರ್

    ವಾಷಿಂಗ್ಟನ್: ಅಭಿಮಾನಿಗಳು ನಮಗೆ ದೇವರ ರೀತಿ. ಅದೇ ರೀತಿ ಇದೀಗ ಡಾಕ್ಟರ್ ಕೂಡ ನಮ್ಮ ಪಾಲಿಗೆ ದೇವರಾಗಿದ್ದಾರೆ ಎಂದು ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shiva Rajkumar) ಹೇಳಿದ್ದಾರೆ.

    ಶಿವರಾಜ್‌ಕುಮಾರ್ ಸರ್ಜರಿ ಯಶಸ್ವಿಯಾದ ಬಳಿಕ ವೀಡಿಯೋ ಮೂಲಕ ಮಾತನಾಡಿದ ಅವರು, ಶಿವಣ್ಣ ಆಪರೇಷನ್ ಯಶಸ್ವಿಯಾಗಿದೆ. ಈಗ ಶಿವಣ್ಣ ಅವರನ್ನು ಐಸಿಯುಗೆ ಶಿಫ್ಟ್ ಮಾಡಿದ್ದಾರೆ. ಶಿವರಾಜ್‌ಕುಮಾರ್‌ಗಾಗಿ ನೀವೆಲ್ಲರೂ ಪೂಜೆಗಳನ್ನು ಮಾಡಿ ಅವರಿಗೆ ಒಳ್ಳೆಯದಾಗಲಿ ಎಂದು ಬಯಸಿದ್ದೀರಿ, ಆಶೀರ್ವಾದ ಕೂಡ ಮಾಡಿದ್ದೀರಿ. ಇವತ್ತು ಶಿವಣ್ಣ ಅವರ ಆಪರೇಷನ್ ಯಶಸ್ವಿಯಾಗಲು ಡಾ. ಮನೋಹರನ್ ಅವರೇ ಕಾರಣ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಶಿವಣ್ಣ ಸರ್ಜರಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ, ಆರೋಗ್ಯ ಸ್ಥಿರ: ಡಾ.ಮುರುಗೇಶ್ ಮನೋಹರನ್

    ಸದ್ಯದಲ್ಲೇ ಶಿವರಾಜ್‌ಕುಮಾರ್ ಅವರು ನಿಮ್ಮ ಜೊತೆ ಮಾಡನಾಡಲಿದ್ದಾರೆ. ಆಪರೇಷನ್‌ನಿಂದಾಗಿ ಸುಸ್ತಾಗಿರುವುದರಿಂದ ಇನ್ನು 3-4 ದಿನಗಳಲ್ಲಿ ನಿಮ್ಮ ಜೊತೆ ಮಾತನಾಡಲಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಯಾವಾಗಲು ಚಿರಋಣಿ. ಇದನ್ನು ನಾನು ಜನ್ಮದಲ್ಲಿ ಮರೆಯಲ್ಲ ಎಂದು ಗೀತಕ್ಕ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ನ ಶಿವಣ್ಣನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

  • ಶಿವಣ್ಣ ಸರ್ಜರಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ, ಆರೋಗ್ಯ ಸ್ಥಿರ: ಡಾ.ಮುರುಗೇಶ್ ಮನೋಹರನ್

    ಶಿವಣ್ಣ ಸರ್ಜರಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ, ಆರೋಗ್ಯ ಸ್ಥಿರ: ಡಾ.ಮುರುಗೇಶ್ ಮನೋಹರನ್

    – ವೀಡಿಯೋ ಮೂಲಕ ಹೆಲ್ತ್ ಅಪ್ಡೇಟ್ ನೀಡಿದ ಡಾಕ್ಟರ್

    ವಾಷಿಂಗ್ಟನ್: ಡಾ. ಶಿವರಾಜ್‌ಕುಮಾರ್ (Shiva Rajkumar) ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸದ್ಯ ಶಿವಣ್ಣ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಿಯಾಮಿ ಕ್ಯಾನ್ಸರ್‌ ಇನ್ಸ್ಟಿಟ್ಯೂಟ್‌ ವೈದ್ಯ ಡಾ.ಮುರುಗೇಶ್ ಮನೋಹರನ್ (Murugesh Manoharan) ತಿಳಿಸಿದ್ದಾರೆ.

    ಶಸ್ತ್ರಚಿಕಿತ್ಸೆ ಬಳಿಕ ವೀಡಿಯೋ ಮೂಲಕ ಮಾತನಾಡಿದ ಅವರು, ದೇವರ ದಯೆಯಿಂದ ಹಾಗೂ ಹಲವರ ಆಶೀರ್ವಾದ ಹಾಗೂ ಪ್ರಾರ್ಥನೆಯಿಂದ ಸರ್ಜರಿ ಯಶಸ್ವಿಯಾಗಿದೆ. ಪ್ರಮುಖ ಹಂತ ಪೂರ್ಣಗೊಂಡಿದೆ. ಶಿವಣ್ಣ ಚೆನ್ನಾಗಿ ಸ್ಪಂದಿಸಿದ್ದಾರೆ. ಸರ್ಜರಿ ನಂತರವೂ ಆರಾಮಾಗಿದ್ದಾರೆ. ಅವರು ಶೀಘ್ರವೇ ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ. ನಿಮ್ಮ ಬೆಂಬಲಕ್ಕೆ ಧನ್ಯವಾದ ಎಂದು ಹೇಳಿದ್ದಾರೆ. ಇದನ್ನೂ ಓದಿ: Hand Luggage On Flights | ಇನ್ಮುಂದೆ 7 ಕೆಜಿ ಮೀರದ ಕೇವಲ 1 ಬ್ಯಾಗ್‌ಗೆ ಮಾತ್ರ ಅನುಮತಿ

    ಡಾ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ. ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ನ ಶಿವಣ್ಣನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

  • ಸ್ಯಾಂಡಲ್‌ವುಡ್‌ನ ಶಿವಣ್ಣನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

    ಸ್ಯಾಂಡಲ್‌ವುಡ್‌ನ ಶಿವಣ್ಣನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

    – 6 ಗಂಟೆಗಳ ಕಾಲ ನಡೆದ ಆಪರೇಷನ್

    ವಾಷಿಂಗ್ಟನ್: ಸ್ಯಾಂಡಲ್‌ವುಡ್‌ನ (Sandalwood) ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ (Shiva Rajkumar) ಫ್ಲೋರಿಡಾದ ಮಿಯಾಮಿ ಕ್ಯಾನ್ಸರ್ ಇನ್ಸಿಟ್ಯೂಟ್‌ನಲ್ಲಿ (Miami Cancer Institute) ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸುಮಾರು 6 ಗಂಟೆಗಳ ಕಾಲ ತಜ್ಞ ವೈದ್ಯರು ಶಿವಣ್ಣನಿಗೆ ಆಪರೇಷನ್ ಮಾಡಿದ್ದಾರೆ.

    ಭಾರತೀಯ ಮೂಲದ ತಜ್ಞ ವೈದ್ಯ ಡಾ. ಮುರುಗೇಶ್ ನೇತೃತ್ವದಲ್ಲಿ ಮಿಯಾಮಿ ಆಸ್ಪತ್ರೆಯಲ್ಲಿ ಶಿವಣ್ಣನಿಗೆ ಆಪರೇಷನ್ ಮಾಡಲಾಗಿದೆ. ಭಾರತೀಯ ಕಾಲಮಾನ ಮಂಗಳವಾರ ರಾತ್ರಿ 11:30ರ ಸುಮಾರಿಗೆ ಶಸ್ತ್ರಚಿಕಿತ್ಸೆ ಮುಗಿದಿದೆ. ಅಮೆರಿಕದ ಕಾಲಮಾನ ಬೆಳಗ್ಗೆ 8 ಗಂಟೆಗೆ ಅಂದರೆ ಭಾರತೀಯ ಕಾಲಮಾನದ ಪ್ರಕಾರ 6 ಗಂಟೆಗೆ ಆಪರೇಷನ್ ಥಿಯೇಟರ್‌ಗೆ ಶಿವಣ್ಣರನ್ನು ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಸುಮಾರು 6 ಗಂಟೆಗಳ ಕಾಲ ಸರ್ಜರಿ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಶಿವಣ್ಣನೊಂದಿಗೆ ಪತ್ನಿ ಗೀತಾ, ಪುತ್ರಿ ನಿವೇದಿತಾ, ಬಾಮೈದ ಮಧು ಬಂಗಾರಪ್ಪ ಜೊತೆಗಿದ್ದಾರೆ. ಇದನ್ನೂ ಓದಿ: ಪೂಂಚ್‌ನಲ್ಲಿ 300 ಅಡಿ ಆಳದ ಕಂದಕಕ್ಕೆ ಬಿತ್ತು ಸೇನಾ ವಾಹನ – ಚಿಕ್ಕೋಡಿ ಯೋಧ ಹುತಾತ್ಮ

    ಇನ್ನು ಕ್ಯಾನ್ಸರ್ ಚಿಕಿತ್ಸೆಗೊಳಾಗಿರುವ ಶಿವಣ್ಣನಿಗೆ ಆಸ್ಪತ್ರೆಯಲ್ಲೇ ಇನ್ನೊಂದು ವಾರ ಚಿಕಿತ್ಸೆ ಮುಂದುವರೆಯಲಿದೆ. ನುರಿತ ವೈದ್ಯರ ನಿಗಾದಲ್ಲಿ ಶಿವಣ್ಣ ಇರಲಿದ್ದಾರೆ. ಬಳಿಕ ಮನೆಗೆ ಶಿಫ್ಟ್ ಆಗಲಿದ್ದಾರೆ. ಇನ್ನೊಂದು ತಿಂಗಳು ಅಮೆರಿಕದಲ್ಲೇ ಇರುವ ಶಿವರಾಜ್‌ಕುಮಾರ್ ಜನವರಿ 26ರಂದು ಭಾರತಕ್ಕೆ ಮರಳಲಿದ್ದಾರೆ. ಇದನ್ನೂ ಓದಿ: ಫೋನ್ ಮಾಡಿ ಶಿವಣ್ಣ ಆರೋಗ್ಯ ವಿಚಾರಿಸಿದ ಸಿಎಂ