Tag: Micro Finance

  • ಮೈಕ್ರೋ ಫೈನಾನ್ಸ್‌ ಕಿರುಕುಳ ಆರೋಪ – ಗೃಹಿಣಿ ಆತ್ಮಹತ್ಯೆ

    ಮೈಕ್ರೋ ಫೈನಾನ್ಸ್‌ ಕಿರುಕುಳ ಆರೋಪ – ಗೃಹಿಣಿ ಆತ್ಮಹತ್ಯೆ

    ಚಿತ್ರದುರ್ಗ: ತಾಲೂಕಿನ ಕವಾಡಿಗರಹಟ್ಟಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋಫೈನಾನ್ಸ್‌ (Micro Finance) ಕಿರುಕುಳ ಆರೋಪ ಕೇಳಿಬಂದಿದೆ.

    ಗೃಹಿಣಿ ನೇತ್ರಾ (30) ಆತ್ಮತ್ಯೆ ಮಾಡಿಕೊಂಡ ಮಹಿಳೆ. ನೇತ್ರಾ ಮೈಕ್ರೋ ಫೈನಾನ್ಸ್‌ನಲ್ಲಿ 50 ಸಾವಿರ ರೂ. ಸಾಲ ಪಡೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: Nelamangala | 16 ವರ್ಷದ ಬಾಲಕಿ ನೇಣಿಗೆ ಶರಣು

    ಸಾಂದರ್ಭಿಕ ಚಿತ್ರ

    ಹೀಗಾಗಿ ಮೃತಳ ಸಂಬಂಧಿಕರಿಂದ ಮೈಕ್ರೋ ಫೈನಾನ್ಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ (Chitradurga Rural Police Station) ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.  ಇದನ್ನೂ ಓದಿ: ಹೈದ್ರಾಬಾದ್‌ನಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ನಿಗೂಢ ಸಾವು

  • ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ತಾಯಿ, ಅಂಗವಿಕಲೆ ಮಗಳು ಆತ್ಮಹತ್ಯೆ

    ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ತಾಯಿ, ಅಂಗವಿಕಲೆ ಮಗಳು ಆತ್ಮಹತ್ಯೆ

    ದಾವಣಗೆರೆ: ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್ (Micro Finance) ಹಾಗೂ ಸ್ವಸಹಾಯ ಸಂಘಗಳ ಕಿರುಕುಳಕ್ಕೆ ಬೇಸತ್ತು ತಾಯಿ ಹಾಗೂ ಅಂಗವಿಕಲೆ ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ (Harihara) ನಗರದ ಬಳಿ ಇರುವ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ.

    ಗಂಗನರಸಿ ಗ್ರಾಮದ ಸುವರ್ಣಮ್ಮ (56), ಅಂಗವಿಕಲ ಮಗಳು ಗೌರಮ್ಮ (26) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಕೂಲಿ ಮಾಡಿ ಜೀವನ ನಡೆಸುತ್ತಿದ್ದ ಸುವರ್ಣಮ್ಮ, ಕೆಲ ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಮೂವರು ಪುತ್ರಿಯರಲ್ಲಿ ಇಬ್ಬರ ವಿವಾಹವಾಗಿದ್ದು, ಅಂಗವಿಕಲೆಯಾದ ಗೌರಮ್ಮ ತಾಯಿಯೊಂದಿಗೆ ನೆಲೆಸಿದ್ದರು. ಕೂಲಿ ಮಾಡಿಕೊಂಡು ಸಂಸಾರ ಸಾಗಿಸುತ್ತಿದ್ದ ಸುವರ್ಣಮ್ಮ, ಸಾಲದ ಹೊರೆಗೆ ಬಳಲಿದ್ದರು ಎನ್ನಲಾಗುತ್ತಿದ್ದು, ಮೈಕ್ರೊ ಫೈನಾನ್ಸ್ ಮತ್ತು ಸ್ವಸಹಾಯ ಸಂಘಗಳಲ್ಲಿ 3 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. 2 ಸಾಲಕ್ಕೆ ವಾರಕ್ಕೊಮ್ಮೆ ಹಾಗೂ 1 ಸಾಲಕ್ಕೆ ತಿಂಗಳ ಕಂತುಗಳಲ್ಲಿ ಮರುಪಾವತಿ ಮಾಡಬೇಕಿತ್ತು. ಸಾಲದ ಕಂತು ಸರಿಯಾಗಿ ಪಾವತಿಸಲು ಕಷ್ಟಪಡುತ್ತಿದ್ದರು. ಇದನ್ನೂ ಓದಿ: ಕಲಬುರಗಿ | ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಕಾಲ್ತುಳಿತ – ಮಹಿಳೆ ಸಾವು

    ಸಾಲಗಾರರ ಕಾಟ ತಾಳಲಾರದೆ ಇಂದು ತುಂಗಾಭದ್ರಾ ನದಿಗೆ ನಿರ್ಮಿಸಿದ ರೈಲ್ವೆ ಸೇತುವೆಯ ಮೇಲೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

  • ಮನೆಯ ಬಾಗಿಲಲ್ಲೇ ಕುಳಿತ ಮೈಕ್ರೋಫೈನಾನ್ಸ್ ಸಿಬ್ಬಂದಿ – ಬೇಸತ್ತು ಮಹಿಳೆ ಆತ್ಮಹತ್ಯೆ

    ಮನೆಯ ಬಾಗಿಲಲ್ಲೇ ಕುಳಿತ ಮೈಕ್ರೋಫೈನಾನ್ಸ್ ಸಿಬ್ಬಂದಿ – ಬೇಸತ್ತು ಮಹಿಳೆ ಆತ್ಮಹತ್ಯೆ

    ಹಾಸನ: ಮನೆಯ ಬಾಗಿಲಿಗೆ ಬಂದ ಮೈಕ್ರೋಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಹಾಸನದ (Hassan) ಆಲೂರು (Alur) ತಾಲೂಕಿನ, ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ.

    ಕೆಂಚಮ್ಮ(50) ನೇಣಿಗೆ ಶರಣಾದ ಮಹಿಳೆ. ಬಿಎಸ್‌ಎಸ್, ಇಐಎಫ್ ಹೆಸರಿನ ಫೈನಾನ್ಸ್ ಕಂಪನಿಯಿಂದ ಕೆಂಚಮ್ಮ 2 ಲಕ್ಷ ರೂ. ಸಾಲ ಪಡೆದಿದ್ದರು. ಪ್ರತಿ ತಿಂಗಳು ಸರಿಯಾಗಿ ಕಂತಿನ ಹಣ ಕಟ್ಟುತ್ತಿದ್ದರು. ಈ ತಿಂಗಳು ಹಣ ಇಲ್ಲದ ಕಾರಣ ಕಟ್ಟಿರಲಿಲ್ಲ. ಇದನ್ನೂ ಓದಿ: ಕಲರ್‌ಫುಲ್ ಹೋಳಿ ಸಾಂಗ್‌ನಲ್ಲಿ ಸಲ್ಮಾನ್ ಖಾನ್ ಜೊತೆ ರಶ್ಮಿಕಾ ಡ್ಯಾನ್ಸ್

    ಇಂದೇ ಹಣ ಕಟ್ಟಬೇಕೆಂದು ಬಿಎಸ್‌ಎಸ್ ಮೈಕ್ರೋಫೈನಾನ್ಸ್ ಸಿಬ್ಬಂದಿ ಮನೆಯ ಬಳಿಯೇ ಬಂದು ಕುಳಿತಿದ್ದರು. ಇದರಿಂದ ಮನನೊಂದು ಮನೆಯಲ್ಲಿಯೇ ಕೆಂಚಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಚಮ್ಮ ಸಾವಿನ ಸುದ್ದಿ ತಿಳಿದು ಮೈಕ್ರೋಫೈನಾನ್ಸ್ ಸಿಬ್ಬಂದಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ: ತಂದೆ-ತಾಯಿ ಹಾಗೂ ಹಿರಿಯರ ಆರೈಕೆ ಮಾಡದಿದ್ರೆ ಅವ್ರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

    ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

  • ಮೈಕ್ರೋ ಫೈನಾನ್ಸ್‌ನಿಂದ ಮುಂದುವರಿದ ಕಿರುಕುಳ – ಗ್ರಾಮವನ್ನೇ ತೊರೆದ 7-8 ಕುಟುಂಬಗಳು

    ಮೈಕ್ರೋ ಫೈನಾನ್ಸ್‌ನಿಂದ ಮುಂದುವರಿದ ಕಿರುಕುಳ – ಗ್ರಾಮವನ್ನೇ ತೊರೆದ 7-8 ಕುಟುಂಬಗಳು

    ದಾವಣಗೆರೆ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಸಿಬ್ಬಂದಿ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಗೊಳಿಸಿದೆ. ಅಲ್ಲದೇ ಅಧಿಕ ಬಡ್ಡಿ ಪಡೆಯುವುದನ್ನ ತಡೆಯುವ ವಿಧೇಯಕ್ಕೆ ತಿದ್ದುಪಡಿ ತರಲು ತಯಾರಿ ನಡೆಸಿದೆ. ಹೀಗಿದ್ದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ಮುಂದುವರಿದಿದೆ.

    ಕಿರುಕುಳದಿಂದ ಬೇಸತ್ತ ಏಳೆಂಟು ಕುಟುಂಬಗಳು ಊರು ಬಿಟ್ಟಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ತಾಲೂಕಿನ ಶಿವಗಂಗನಾಳ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಹಿಂದೂ ನೌಕರರು ಉಪವಾಸ ಆಚರಣೆಗೆ ಮನವಿ ಮಾಡಿದ್ರೆ ಸರ್ಕಾರಿ ಕಚೇರಿಗಳೇ ಖಾಲಿ ಖಾಲಿ – ಮುತಾಲಿಕ್

    ಗ್ರಾಮದ ಹಲವು ಕುಟುಂಬಗಳಿಗೆ ಸಾಲದ ಕಂತು ಪಾವತಿಸುವಂತೆ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಪದೇ ಪದೇ ಕಿರುಕುಳ ನೀಡುತ್ತಾ ಬಂದಿದ್ದಾರೆ. ನಿಮಗೆ ಸಿಬಿಲ್ ಸ್ಕೋರ್ ಬರದಿದ್ದರೆ ಎಲ್ಲೂ ನಯಾ ಪೈಸೆ ಸಾಲ ಹುಟ್ಟಲ್ಲ ಅಂತ ಹೆದರಿಸಿದ್ದಾರೆ. ಕೆಲವರನ್ನ ಪೊಲೀಸ್‌ ಠಾಣೆಗೆ ಕರೆಸಿ ಬೆದರಿಸುವಂತೆ ಮಾಡಿದ್ದಾರೆ. ಯಾರ ಕೈ-ಕಾಲು ಹಿಡಿದಾದರೂ ಸಾಲ ತಂದುಕೊಡು ಅಂತ ಮಾನಸಿಕ ಹಿಂಸೆ ನೀಡಿದ್ದಾರೆ.

    ಇದರಿಂದ ಬೇಸತ್ತ ಶಿವಗಂಗನಾಳ ಗ್ರಾಮದ ಕುಟುಂಬಗಳು ಮನೆಗೆ ಬೀಗ ಹಾಕಿಕೊಂಡು ಊರು ಬಿಟ್ಟಿವೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೈಕ್ರೋ ಫೈನಾನ್ಸ್‌ನಿಂದ ಸಾಲ ಪಡೆದ ಕುಟುಂಬಳದ್ದೂ ಇದೇ ಪರಿಸ್ಥಿತಿ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಹಬ್ಬದ ಸಂಭ್ರಮದಲ್ಲಿ ಮಾರಕಾಸ್ತ್ರ ಹಿಡಿದು ಮಧ್ಯರಾತ್ರಿ ವ್ಹೀಲಿಂಗ್ ಮಾಡಿದ್ದ ಪುಂಡರು ಅರೆಸ್ಟ್

  • 10 ವರ್ಷ ಜೈಲು, 5 ಲಕ್ಷ ದಂಡ – ಲೇವಾದೇವಿದಾರರ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಅನುಮೋದನೆ

    10 ವರ್ಷ ಜೈಲು, 5 ಲಕ್ಷ ದಂಡ – ಲೇವಾದೇವಿದಾರರ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಅನುಮೋದನೆ

    ಬೆಂಗಳೂರು: ಲೇವಾದೇವಿದಾರರ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡನೆಗೆ ತೀರ್ಮಾನಿಸಲಾಗಿದೆ.

    ರಾಜ್ಯದಲ್ಲಿ ಇನ್ಮುಂದೆ ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರು, ಪಾನ್ ಬ್ರೋಕರ್ಸ್, ಯಾವುದೇ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ತಿದ್ದುಪಡಿ ತರುವ ಕರ್ನಾಟಕ ಅಧಿಕ ಬಡ್ಡಿ ನಿಷೇಧ (ತಿದ್ದುಪಡಿ) ವಿಧೇಯಕ – 2025ಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.

    ಮಾರ್ಚ್ 3 ರಿಂದ‌ ಆರಂಭವಾಗುವ ಅದಿವೇಶನದಲ್ಲಿ‌ ಈ ಬಾರಿ ತಿದ್ದುಪಡಿ ವಿಧೇಯಕ‌ ಮಂಡನೆಗೆ ತೀರ್ಮಾನಿಸಲಾಗಿದೆ. ಮಿತಿ ಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರು, ಪಾನ್ ಬ್ರೋಕರ್ಸ್ ಸೇರಿ ಇತರ ಸಹಕಾರ ಸಂಘಗಳ ಮೇಲೆ ನಿಯಂತ್ರಣ ಹೇರಲು ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಕಾಯ್ದೆ 2004 ಕಾಯ್ದೆ ಜಾರಿಯಲ್ಲಿದೆ. ಇದರಡಿ ಮಿತಿ ಮೀರಿ ಬಡ್ಡಿ ವಿಧಿಸುವವರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ಸಹಕಾರ ಇಲಾಖೆ ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಕಾಯ್ದೆ 2004 ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿತ್ತು.

    ಈಗಿರುವ ಗರಿಷ್ಠ 3 ವರ್ಷ ಶಿಕ್ಷೆ ಪ್ರಮಾಣವನ್ನು ತಿದ್ದುಪಡಿ ತಂದು ಗರಿಷ್ಠ 10 ವರ್ಷ ವರೆಗೆ ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಅಧಿಕ ಬಡ್ಡಿ ವಿಧಿಸುವ ಲೇವಾದೇವಿದಾರರಿಗೆ ಇರುವ ದಂಡ ಪ್ರಮಾಣವನ್ನು 30,000ದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗುವುದು.

  • ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ

    ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ

    ವಿಜಯಪುರ: ಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್ (Micro Finance) ಹಾವಳಿ ಹೆಚ್ಚಾಗಿದ್ದು, ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆ ಮೇಲೆ ವಿಜಯಪುರ ಪೊಲೀಸರ ದಾಳಿ ನಡೆಸಿ, ಬಿಸಿ ಮುಟ್ಟಿಸಿದ್ದಾರೆ.ಇದನ್ನೂ ಓದಿ: ಅತ್ತೆಯ ಕೊಲೆಗೆ ವೈದ್ಯರ ಬಳಿ ಮಾತ್ರೆ ಕೇಳಿದ್ದ ಸೊಸೆ ಕೊನೆಗೂ ಪತ್ತೆ

    ವಿಜಯಪುರದಲ್ಲಿ ಕಳೆದ ಕೆಲವು ವಾರಗಳಿಂದ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಜೊತೆಗೆ ಬಡ್ಡಿ, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ಕೂಡ ಹೆಚ್ಚಾಗಿದೆ. ಹೀಗಾಗಿ ಎಸ್ಪಿ ಲಕ್ಷ್ಮಣ ನಿಂಬರಗಿ ಆದೇಶದ ಮೇರೆಗೆ ಬೆಳ್ಳಂಬೆಳಿಗ್ಗೆ ಮನೆಗಳ ಮೇಲೆ ದಾಳಿ ನಡೆಸಿ, ಶಾಕ್ ನೀಡಿದ್ದಾರೆ.

    ಜಿಲ್ಲೆಯ ಹಲವೆಡೆ ಪೋಲಿಸರು ದಾಳಿ ನಡೆಸಿದ್ದು, ದಾಳಿ ಮಾಡಿ ಅಕ್ರಮ ಹಣ, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ಮೈಕ್ರೋಫೈನಾನ್ಸ್ ಹಾಗೂ ಅಕ್ರಮ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬಡ ಜನರು ಬೇಸತ್ತು ಹೋಗಿದ್ದು, ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಾಳಿ ನಡೆಸಿದ್ದಾರೆ.ಇದನ್ನೂ ಓದಿ:Champions Trophy 2025 | ಇಂದು ಭಾರತ-ಬಾಂಗ್ಲಾ ಮುಖಾಮುಖಿ – ಹಿಟ್‌ಮ್ಯಾನ್‌ ಪಡೆಗೆ ಗೆಲುವಿನ ತವಕ

     

  • ಮೈಕ್ರೋ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ – ಸಿಎಂ, ಸಚಿವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ

    ಮೈಕ್ರೋ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ – ಸಿಎಂ, ಸಚಿವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ

    ರಾಯಚೂರು: ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದರಿಂದ ಜಿಲ್ಲೆಯಲ್ಲಿರುವ ಸಾಲ ಬಾಧಿತರು ಸಿಎಂ ಹಾಗೂ ಸಚಿವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ನೆರವೇರಿಸಿದ್ದಾರೆ.

    ಕಾಂಗ್ರೆಸ್ ಸರ್ಕಾರ ತಂದ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವ ಹಿನ್ನೆಲೆ ರಾಯಚೂರಿನ (Raichuru) ಡಿಸಿ ಕಚೇರಿ ಎದುರು ಮೈಕ್ರೋ ಫೈನಾನ್ಸ್ ಸಾಲ ಬಾಧಿತರು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.ಇದನ್ನೂ ಓದಿ: ಮನಸಿನೊಡತಿ ಜೊತೆಗಿನ ಪ್ರತಿ ಕ್ಷಣವೂ ಪ್ರೇಮಿಗಳ ದಿನವೇ!

    ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸಣ್ಣನೀರಾವರಿ ಸಚಿವ ಎನ್.ಎಸ್ ಬೋಸರಾಜು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಭಾವಚಿತ್ರದ ಬ್ಯಾನರ್‌ಗೆ ಹಾಲಿನ ಅಭಿಷೇಕ ಮಾಡಿ, ಕಿರುಕುಳಕ್ಕೊಳಗಾದ ಕುಟುಂಬಗಳು ಹಾಗೂ ನೊಂದ ಮಹಿಳೆಯರು ಅಭಿನಂದನೆ ಸಲ್ಲಿಸಿದರು.

    ಇದೇ ವೇಳೆ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಆತ್ಮಹತ್ಯೆಗೆ ಶರಣಾದ ಕುಟುಂಬಸ್ಥರ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಇದನ್ನೂ ಓದಿ: 389 ರೂ. ಕೊಟ್ರೆ ಪ್ರೇಮಿಗಳ ದಿನಕ್ಕೆ ಬಾಡಿಗೆ ಬಾಯ್ ಫ್ರೆಂಡ್ – ಏನಿದು ಆಫರ್?

  • ನಾಳೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ರಾಜ್ಯಪಾಲರಿಗೆ ಮರು ರವಾನೆ

    ನಾಳೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ರಾಜ್ಯಪಾಲರಿಗೆ ಮರು ರವಾನೆ

    – ರಾಜ್ಯಪಾಲರ ಆಕ್ಷೇಪಗಳಿಗೆ ಸೂಕ್ತ ಸ್ಪಷ್ಟೀಕರಣ ಕಳಿಸಲು ಸರ್ಕಾರದ ಸಿದ್ಧತೆ

    ಬೆಂಗಳೂರು: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ವ್ಯಕ್ತಪಡಿಸಿರುವ ಎಲ್ಲ ಆಕ್ಷೇಪಣೆಗಳಿಗೂ ಕಾನೂನು ಇಲಾಖೆ ಸೂಕ್ತ ಸ್ಪಷ್ಟೀಕರಣಗಳನ್ನು ಸಿದ್ಧಪಡಿಸಿದೆ. ನಾಳೆ ಸ್ಪಷ್ಟೀಕರಣ ಸಹಿತ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ರಾಜ್ಯಪಾಲರಿಗೆ ಕಳಿಸಲಾಗ್ತಿದೆ. ಸದ್ಯ ಕಾನೂನು ಇಲಾಖೆ ಸಿದ್ಧಪಡಿಸಿರುವ ಸ್ಪಷ್ಟೀಕರಣಗಳನ್ನು ಸಿಎಂ ಅವಗಾಹನೆಗೆ ಕಳಿಸಲಾಗಿದೆ. ಕರಡನ್ನು ಸಿಎಂ ಕಚೇರಿಯಿಂದ ಅಂತಿಮಗೊಳಿಸಿ ರಾಜ್ಯಪಾಲರಿಗೆ ನಾಳೆ ಕಳಿಸಲಾಗುತ್ತದೆ.

    ಸರ್ಕಾರವು ಸುಗ್ರೀವಾಜ್ಞೆಯನ್ನು ಸಮರ್ಥಿಸಿಕೊಂಡು ಸ್ಪಷ್ಟೀಕರಣ ಕೊಡಲು ಮುಂದಾಗಿದೆ. ಇದು ವ್ಯಕ್ತಿ ಮೂಲಭೂತ ಹಕ್ಕನ್ನು ನಿರ್ಬಂಧಿಸುವುದಿಲ್ಲ. ಸಾಲದಾತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿಲ್ಲ. ಸಾಲ ವಸೂಲಾತಿಯನ್ನು ನಿರ್ಬಂಧಿಸುವುದಿಲ್ಲ ಎಂದು ಸ್ಪಷ್ಟನೆ ಕೊಡಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಇತ್ತೀಚೆಗಷ್ಟೇ ವಾಪಸ್ ಕಳುಹಿಸಿದ್ರು. ಸುಗ್ರೀವಾಜ್ಞೆಯು ಸಹಜ ಹಾಗೂ ಸಾಲ ನೀಡುವವರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

    ಸರ್ಕಾರದ ಸ್ಪಷ್ಟೀಕರಣಗಳೇನು?
    * ಸುಗ್ರೀವಾಜ್ಞೆ ಇದು ವ್ಯಕ್ತಿ ಮೂಲಭೂತ ಹಕ್ಕನ್ನು ನಿರ್ಬಂಧಿಸುವುದಿಲ್ಲ.
    * ಸಾಲದಾತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿಲ್ಲ ಹಾಗೂ ಸಾಲ ವಸೂಲಾತಿಯನ್ನು ನಿರ್ಬಂಧಿಸುವುದಿಲ್ಲ.
    * ಸಾಲವನ್ನು ಖಾಸಗಿಯಾಗಿ, ಲೈಸೆನ್ಸ್ ಇಲ್ಲದೇ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡಿದರೆ ಅದು ಕಾನೂನು ವಿರೋಧಿ ಕ್ರಮ. ಅಂತಹ ಸಾಲವು ವಸೂಲಿಗೆ ಅರ್ಹವೂ ಅಲ್ಲ, ಯೋಗ್ಯವೂ ಅಲ್ಲ.
    * ಕಾನೂನಿನ ಪ್ರಕಾರ ವಿಧಿಸಿದ ಬಡ್ಡಿ ಮೇರೆಗೆ ನೀಡಿದ ಸಾಲ ಮಾತ್ರ ವಸೂಲಿಗೆ ಅರ್ಹ.
    * ಅಕ್ರಮ ಸಾಲ ಮತ್ತು ಬಡ್ಡಿ ವಸೂಲಾತಿ ಅರ್ಜಿಗಳನ್ನು ಕಾನೂನಾತ್ಮಕವಾಗಿ ನ್ಯಾಯಾಲಯಗಳು ಕೂಡಾ ವಿಚಾರಣೆಗೆ ಒಳಪಡಿಸಲು ಸಾಧ್ಯವೇ ಇಲ್ಲ.
    * ಕಾನೂನಾತ್ಮಕವಾಗಿ ನೋಂದಾಯಿತ ಸಂಸ್ಥೆ ಅಥವಾ ವ್ಯಕ್ತಿಗಳು ನಿಯಮಾನುಸಾರ ನೈಜ ಸಾಲ ನೀಡಿದವರು ವಸೂಲಿ ಮಾಡಬಾರದೆಂದು ಅಥವಾ ಅಂತಹ ಸಾಲಗಳು ವಸೂಲಿಗೆ ಅರ್ಹವಲ್ಲ
    ಎಂದು ಸುಗ್ರೀವಾಜ್ಞೆಯಲ್ಲಿ ಸರ್ಕಾರ ಎಲ್ಲಿಯೂ ಹೇಳಿಲ್ಲ.
    * ಕೇವಲ ಸಾಲ ವಸೂಲಾತಿಗೆ ಕಾನೂನು ಬಾಹಿರ ಕ್ರಮಗಳನ್ನು ಕೈಗೊಳ್ಳುವುದು, ಹಿಂಸೆ ಮಾಡುವುದು ಮತ್ತು ಒತ್ತಡ ತಂತ್ರ ಹೇರುವುದು ಹಾಗೂ ಕಿರುಕುಳಕ್ಕೆ ಕಾರಣವಾಗುವುದನ್ನು ತಡೆಯಲು/ನಿಷೇಧಿಸಲು ಸುಗ್ರೀವಾಜ್ಞೆ ಪ್ರಸ್ತಾಪಿಸುತ್ತದೆ.
    * ಸಾಲ ನೀಡಿದವರು ಅನುಸರಿಸುವ ಕಾನೂನುಬಾಹಿರ ಕ್ರಮಗಳನ್ನು, ಆ ಕ್ರಮಗಳ ಸ್ವರೂಪದ ಕಾರಣಕ್ಕೆ ಶಿಕ್ಷಿಸಲು ಕಾನೂನುಗಳಿವೆ. ಆದರೆ ಸಾಲದ ಕಾರಣಕ್ಕೆ ಇಂತಹ ಕೃತ್ಯ ಎಸಗಿದಾಗ ಶಿಕ್ಷೆಗೆ ಒಳಪಡಿಸಲು ನಿರ್ದಿಷ್ಟ ಕಾನೂನು ಇಲ್ಲ. ಸಾಲಗಾರರ ಹಿತ ಕಾಪಾಡಲು ಪ್ರತ್ಯೇಕ ಕಾನೂನಿನ ಅವಶ್ಯಕತೆ ಇದೆ.
    * ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದಂತೆ ರಿಸರ್ವ್‌ ಬ್ಯಾಂಕ್‌ನ ಮಾರ್ಗಸೂಚಿಗಳು ನೋಂದಾಯಿತ ಮತ್ತು ಪರವಾನಗಿ ಹೊಂದಿದ ಕಂಪನಿಗಳಿಗಷ್ಟೇ ಅನ್ವಯವಾಗುತ್ತದೆ. ನೋಂದಣಿ ಮತ್ತು ಪರವಾನಗಿ ಇಲ್ಲದ ಕಂಪನಿಗಳಿಗೆ ಇದು ಅನ್ವಯವಾಗುವುದಿಲ್ಲ. ಅವುಗಳ ಕಾನೂನುಬಾಹಿರ ನಡೆಗಳಿಂದ ಜನರನ್ನು ರಕ್ಷಿಸಲು ಸುಗ್ರೀವಾಜ್ಞೆ ಅಗತ್ಯ.

  • ಸಾಲಗಾರರ ಕಿರುಕುಳಕ್ಕೆ ಎದೆಗುಂದಿ ತಪ್ಪು ನಿರ್ಧಾರಕ್ಕೆ ಮುಂದಾಗಬೇಡಿ: ಉ.ಕನ್ನಡ ಎಸ್‌ಪಿ ಸಲಹೆ

    ಸಾಲಗಾರರ ಕಿರುಕುಳಕ್ಕೆ ಎದೆಗುಂದಿ ತಪ್ಪು ನಿರ್ಧಾರಕ್ಕೆ ಮುಂದಾಗಬೇಡಿ: ಉ.ಕನ್ನಡ ಎಸ್‌ಪಿ ಸಲಹೆ

    ಕಾರವಾರ: ಸಾಲಗಾರರಿಂದ ಯಾವುದೇ ಕಿರುಕುಳ ಬಂದರೂ ಸಮೀಪದ ಪೊಲೀಸ್ ಠಾಣೆಗೆ ತಿಳಿಸಿ. ಉತ್ತರ ಕನ್ನಡ ಜಿಲ್ಲಾಡಳಿತ ನಿಮ್ಮ ಜೊತೆ ಇದೆ ಎಂದು ಉತ್ತರ ಕನ್ನಡ ಎಸ್‌ಪಿ ನಾರಾಯಣ .ಎಂ ಸಲಹೆ ನೀಡಿದರು.

    ಮೀಟರ್ ಬಡ್ಡಿ ದಂಧೆಕೋರರಿಂದ ಚೆಕ್‌ಬೌನ್ಸ್ ಕಿರುಕುಳ ವಿಚಾರವಾಗಿ ಮಾತನಾಡಿ, ಚೆಕ್‌ಬೌನ್ಸ್ ಕೇಸ್ ವಿಚಾರದಲ್ಲಿ ಹಳಿಯಾಳದಲ್ಲಿ ಒಂದು ಕೇಸ್ ದಾಖಲಾಗಿದೆ. ಮಹಿಳೆಯೊಬ್ಬರಿಂದ ಹಳಿಯಾಳ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಬ್ದುಲ್, ಶಾಂತಾ, ಭಾಷಾ, ರಾಜು ಮತ್ತು ಸುಭಾನಿ ಐವರ ಮೇಲೆ ದೂರು ಕೊಟ್ಟಿದ್ದಾರೆ. ಈ ಐವರು ಹತ್ತು ಸಾವಿರ ರೂಪಾಯಿಯಂತೆ 50,000 ರೂಪಾಯಿ ಸಾಲ ಕೊಟ್ಟಿದ್ದರು. ಐದು ಜನ ಪ್ರತ್ಯೇಕವಾಗಿ ಐದು ಖಾಲಿ ಚೆಕ್‌ಗಳನ್ನ ಮಹಿಳೆಯಿಂದ ಪಡೆದಿದ್ದಾರೆ. ಆಕೆ ಬಡ್ಡಿ ಸಮೇತ ಸಾಲ ಮರುಪಾವತಿ ಮಾಡಿದ್ದರೂ ಚೆಕ್ ಮರಳಿ ನೀಡಿರಲಿಲ್ಲ. ಈ ಐವರು ಸೇರಿ ಮಹಿಳೆಯನ್ನು ಲೈಂಗಿಕತೆಗೆ ಬಳಸಲು ಮುಂದಾಗಿರುವ ಬಗ್ಗೆ ದೂರು ಬಂದಿದೆ. ದೂರು ಬಂದ ಕೂಡಲೇ ಅಬ್ದುಲ್ ಎಂಬ ಎ1 ಆರೋಪಿಯನ್ನ ಕೂಡಲೇ ಬಂಧಿಸಲಾಗಿದೆ ಎಂದು ತಿಳಿಸಿದರು.

    ಸಾಲಗಾರರಿಂದ ಯಾವುದೇ ಕಿರುಕುಳ ಬಂದರೂ ಸಮೀಪದ ಪೊಲೀಸ್ ಠಾಣೆಗೆ ತಿಳಿಸಿ. ಉತ್ತರ ಕನ್ನಡ ಜಿಲ್ಲಾಡಳಿತ ನಿಮ್ಮ ಜೊತೆ ಇದೆ. ಯಾವುದೇ ಕಿರುಕುಳಕ್ಕೂ ಎದೆಗುಂದಿ ತಪ್ಪು ನಿರ್ಧಾರಕ್ಕೆ ಮುಂದಾಗಬೇಡಿ. ಕಿರುಕುಳ ತಪ್ಪಿಸಲೆಂದೇ ಜಿಲ್ಲೆಯ ಪ್ರತಿ ಠಾಣೆಯಲ್ಲಿ ಹೆಲ್ಪ್ ಡೆಸ್ಕ್ ಆರಂಭ ಮಾಡಲಾಗಿದೆ ಎಂದರು.

    ಮೈಕ್ರೋ ಫೈನಾನ್ಸ್ ಹಾಗೂ ಮೀಟರ್ ಬಡ್ಡಿ ಕಿರುಕುಳ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿ, ಆರ್‌ಬಿಐ ನಿಯಮ ಉಲ್ಲಂಘಿಸಿ ಬಡ್ಡಿ ವಸೂಲಿ ಮಾಡಿದಕ್ಕೆ 4 ಪ್ರಕರಣ ದಾಖಲಾಗಿದೆ. ಬಡ್ಡಿ ವಸೂಲಿಗೆ ಕ್ರಿಮಿನಲ್‌ಗಳನ್ನ ಬಳಿಸಿ ಕಿರುಕುಳ ಕೊಡುತ್ತಿರುವ ಬಗ್ಗೆ ದೂರು ಬಂದಿತ್ತು. ಮೀಟರ್ ಬಡ್ಡಿ ವಸೂಲಿಗೆ ಕಿರುಕುಳ ವಿಚಾರವಾಗಿ 9 ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ದಾಖಲು ಆದ ಬಳಿಕ ಇದುವರೆಗೂ ಒಟ್ಟು 39 ಜನರನ್ನ ಬಂಧಿಸಲಾಗಿದೆ ಎಂದು ಹೇಳಿದರು.

    ಕಾರವಾರ ತಾಲೂಕಿನ ಚಿತ್ತಾಕುಲ ಗ್ರಾಮದ ಸುಲಕ್ಷಮಿ ಎಂಬ ಮಹಿಳೆ, ಕಂಪನಿಯೊಂದರಿಂದ ಸಾಲ ಪಡೆದಿದ್ದು, 2018ರಲ್ಲಿ 4.5 ಲಕ್ಷ ಸಾಲ ಪಡೆದಿದ್ದ ಈಕೆ ಇದುವರೆಗೂ ಬಡ್ಡಿ ತುಂಬ್ತಾನೆ ಇದಾಳೆ ಆದ್ರೆ ಪೂರ್ತಿ ಆಗಿಲ್ಲ. ಬಡ್ಡಿ ಕಂತು ತುಂಬಿಲ್ಲ ಅಂತಾ 5 ಜನ ರಾತ್ರಿ ಮನೆಗೆ ನುಗ್ಗಿ ಅನುಚಿತ ವರ್ತನೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಂಪನಿ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿಸಿದರು.

  • ಮೈಕ್ರೋ ಫೈನಾನ್ಸ್ ಕಿರುಕುಳ – 99 ರೂ. ಬಾಕಿ ಇರೋದಕ್ಕೆ 58,000 ಕಟ್ಟುವಂತೆ ನೋಟೀಸ್

    ಮೈಕ್ರೋ ಫೈನಾನ್ಸ್ ಕಿರುಕುಳ – 99 ರೂ. ಬಾಕಿ ಇರೋದಕ್ಕೆ 58,000 ಕಟ್ಟುವಂತೆ ನೋಟೀಸ್

    ದಾವಣಗೆರೆ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Microfinance) ಕಿರುಕುಳ ತಡೆಗಟ್ಟಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯಪಾಲರ ಅಂಕಿತಕ್ಕೆ ಸುಗ್ರೀವಾಜ್ಞೆ ಕಳುಹಿಸಿದೆ. ಈ ನಡುವೆಯೂ ಸಾರ್ವಜನಿಕರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮುಂದುವರಿದೆ. ಅದನ್ನೋದಕ್ಕೆ ದಾವಣಗೆರೆಯ (Davangere) ಈ ಪ್ರಕರಣ ಸಾಕ್ಷಿಯಾಗಿದೆ.

    ಹೌದು. ಕೇವಲ 99 ರೂ. ಬಾಕಿ ಇರೋದಕ್ಕೆ 58,000 ರೂ. ಕಟ್ಟುವಂತೆ ಬ್ಯಾಂಕೊಂದು ದಾವಣಗೆರೆ ನಗರದ ಚಂದ್ರಶೇಖರ್‌ಗೆ ನೋಟೀಸ್ ಕೊಟ್ಟು, ಹಣ ಪಾವತಿಸುವಂತೆ ಕಿರುಕುಳ ನೀಡುತ್ತಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂಸಾಚಾರದ ಕಿಡಿ ಹೊತ್ತಿಸಿದ ಭಾಷಣ – ಉದ್ರಿಕ್ತರಿಂದ ಶೇಖ್ ಹಸೀನಾ ತಂದೆ ನಿವಾಸ ಧ್ವಂಸ

    ಚಂದ್ರಶೇಖರ್ ಆನ್‌ಲೈನ್ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ 10 ಲಕ್ಷ ರೂ. ಸಾಲ ಮಾಡಿದ್ದರು. ಪ್ರತಿ ತಿಂಗಳು ಕಂತಿನಂತೆ ಎಲ್ಲಾ ಸಾಲವನ್ನು ಕಟ್ಟಿದ್ದರು. ಉಳಿದ 99 ರೂ. ಕಟ್ಟಿಸಿಕೊಂಡು ಕ್ಲೀಯರೆನ್ಸ್ ಕೊಡಿ ಎಂದು ಕೇಳಿದಾಗ 58,000 ರೂ. ಕಟ್ಟುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಗೌತಮ್‌ ಅದಾನಿ ಪುತ್ರನ ವಿವಾಹ ಪ್ರತಿಜ್ಞೆ – ಪ್ರತಿ ವರ್ಷ 500 ಅಂಗವಿಕಲ ಹೆಣ್ಣುಮಕ್ಕಳ ವಿವಾಹಕ್ಕೆ 10 ಲಕ್ಷ ನೆರವು ಘೋಷಣೆ

    ನಿಮಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ಬೇಕು ಅಂದ್ರೆ 58,000 ಕಟ್ಟಬೇಕು ಎಂದು ಚಂದ್ರಶೇಖರ್‌ಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹೇಳಿದ್ದಾರೆ. ದಾಖಲೆ ಪ್ರಕಾರ ಕೇವಲ 99 ರೂಪಾಯಿ ಕಟ್ಟಿದರೆ ಸಾಲ ಮುಕ್ತವಾಗುತ್ತದೆ. ಆದರೆ ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿ 58,000 ಕಟ್ಟಲೇಬೇಕು ಎಂದು ಚಂದ್ರಶೇಖರ್‌ಗೆ ಕಿರುಕುಳ ನೀಡುತ್ತಿದ್ದಾರೆ. ಚಂದ್ರಶೇಖರ್ ಕಿರುಕುಳ ತಾಳಲಾರದೆ ಈ ಬಗ್ಗೆ ಆರ್‌ಬಿಐಗೆ ಪತ್ರ ಬರೆಯಲು ಮುಂದಾಗಿದ್ದಾರೆ.

    ಆನ್‌ಲೈನ್‌ನಲ್ಲಿ ಸಾಲ ಪಡೆದರು ಸಹ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನಿಲ್ಲುತ್ತಿಲ್ಲ. ಎಲ್ಲಾ ಹಣವನ್ನು ಬಡ್ಡಿ ಸಮೇತ ಕಟ್ಟಿದರೂ ಕೂಡ ಇನ್ನೂ ಹಣ ಕಟ್ಟಿ ನಂತರ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕೊಡುತ್ತೇವೆ ಎಂದು ಸತಾಯಿಸುತ್ತಿದ್ದಾರೆ ಎಂದು ಅಲವತ್ತುಕೊಂಡಿದ್ದಾರೆ. ಜೊತೆಗೆ ದೂರು ನೀಡುವುದಾಗಿಗೂ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬಾವಿಯಲ್ಲಿ ಪತ್ತೆಯಾದ ಬುಲೆಟ್ ಬೈಕ್ ಸುತ್ತ ಅನುಮಾನದ ಹುತ್ತ!