Tag: mid day meal

  • ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

    ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

    ಬೆಂಗಳೂರು: ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

    2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ.

    ಮುಖ್ಯ ಅಡುಗೆಯವರಿಗೆ ಮಾಸಿಕ ಗೌರವಧನವನ್ನು 3,700 ರಿಂದ 4,700 ರೂ.ಗೆ ಹೆಚ್ಚಿಸಲಾಗಿದೆ. ಅಂತೆಯೇ ಅಡುಗೆ ಸಹಾಯಕರಿಗೆ 3,600 ರೂ.ನಿಂದ 4,600 ರೂ.ಗೆ ಹೆಚ್ಚಳ ಮಾಡಲಾಗಿದೆ.

    ರಾಜ್ಯದ ಎಲ್ಲಾ 31 ಜಿಲ್ಲಾ ಪಂಚಾಯಿತಿಗಳ ಸಿಇಒಗಳು ಹಾಗೂ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರದ ಆದೇಶದಲ್ಲಿ ಸೂಚಿಸಲಾದ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಲಾಗಿದೆ.

    ಗೌರವ ಸಂಭಾವನೆಯನ್ನು ನೇರ ನಗದು ವರ್ಗಾವಣೆ ವೇದಿಕೆ ಮೂಲಕವೇ ಪಾವತಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ.

  • ಬಿಸಿಯೂಟ ತಯಾರಿಸಲು ಅಡುಗೆ ಎಣ್ಣೆ-ಬೇಳೆ ಕೊಟ್ಟಿಲ್ಲ: ಸರ್ಕಾರದ ವಿರುದ್ಧವೇ ಕಾಂಗ್ರೆಸ್ ಸದಸ್ಯ ಟೀಕೆ

    ಬಿಸಿಯೂಟ ತಯಾರಿಸಲು ಅಡುಗೆ ಎಣ್ಣೆ-ಬೇಳೆ ಕೊಟ್ಟಿಲ್ಲ: ಸರ್ಕಾರದ ವಿರುದ್ಧವೇ ಕಾಂಗ್ರೆಸ್ ಸದಸ್ಯ ಟೀಕೆ

    ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ (Mid Day Meal) ತಯಾರು ಮಾಡಲು ಅಡುಗೆ ಎಣ್ಣೆ ಮತ್ತು ಬೇಳೆಯನ್ನ ಸರ್ಕಾರ 3 ತಿಂಗಳಿಂದ ಕೊಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರೇ ಅರೋಪ ಮಾಡಿದ ಘಟನೆ ನಡೆಯಿತು. ಅಲ್ಲದೇ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಕೊಡುತ್ತಿರುವ ಮೊಟ್ಟೆ ಖರೀದಿಗೆ ನಿಗದಿ ಮಾಡಿರುವ ಹಣವನ್ನ ಜಾಸ್ತಿ ಮಾಡುವಂತೆ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ಒತ್ತಾಯ ಮಾಡಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪ್ರಶ್ನೆ ಕೇಳಿದ ಅವರು, ಮಧ್ಯಾಹ್ನದ ಬಿಸಿಯೂಟ ಯೋಜನೆ ಅಡಿ ಅಡುಗೆ ಮಾಡಲು ಸರ್ಕಾರ ಎಣ್ಣೆ ಮತ್ತು ಬೇಳೆಕಾಳು ಅಡ್ವಾನ್ಸ್ ಆಗಿ ಕೊಡುತ್ತಿಲ್ಲ. 2-3 ತಿಂಗಳಿಗೊಮ್ಮೆ ಎಣ್ಣೆ ಕೊಡುತ್ತಾರೆ. ಡಿಸೆಂಬರ್‌ನಿಂದ ಈವರೆಗೂ ಎಣ್ಣೆ ಕೊಟ್ಟೇ ಇಲ್ಲ. ಈ ಬಗ್ಗೆ ಸರ್ಕಾರ ಕ್ರಮವಹಿಸಬೇಕು. ಸರ್ಕಾರ ಶಾಲೆಗಳಲ್ಲಿ ಮೊಟ್ಟೆ ಯೋಜನೆ ಕೊಡುತ್ತಿದೆ. ಒಂದು ಮೊಟ್ಟೆಗೆ 5 ರೂಪಾಯಿ ಸರ್ಕಾರ ಕೊಡುತ್ತಿದೆ. ಮೊಟ್ಟೆಗೆ ಕೊಡುತ್ತಿರುವ ಹಣ ಸಾಕಾಗುತ್ತಿಲ್ಲ. ಮೊಟ್ಟೆಗೆ ಕೊಡುತ್ತಿರುವ ಹಣ ಜಾಸ್ತಿ ಮಾಡಬೇಕು. ಅಡುಗೆ ಮಾಡುವ ಸಿಬ್ಬಂದಿಗೆ ಸಂಬಳ ಜಾಸ್ತಿ ಮಾಡಬೇಕು ಮತ್ತು ಪ್ರಥಮ-ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಚಾಮರಾಜನಗರದಲ್ಲಿ ಬಾಲ್ಯವಿವಾಹ, ಅಪ್ರಾಪ್ತ ಬಾಲಕಿ ನಿಶ್ಚಿತಾರ್ಥಕ್ಕೆ ತಡೆ

    ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರಿಸಿ, ಕೇಂದ್ರ ಸರ್ಕಾರದ ನಿಯಮದಂತೆ ಅಡುಗೆ ಮಾಡುವ ಸಿಬ್ಬಂದಿಗಳಿಗೆ ಸಂಬಳ ಕೊಡುತ್ತಿದ್ದೇವೆ. ಕೇಂದ್ರ ಜಾಸ್ತಿ ಮಾಡಿದರೆ ನಾವು ಜಾಸ್ತಿ ಮಾಡುತ್ತೇವೆ. ಅಡುಗೆ ಸಿಬ್ಬಂದಿಗೆ ಮೊನ್ನೆ ಮಂಡನೆಯಾದ ಬಜೆಟ್‌ನಲ್ಲಿ 1 ಸಾವಿರ ಸಂಬಳ ಜಾಸ್ತಿ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಸಂಬಳ ಜಾಸ್ತಿ ಕೊಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರಿ ವೈದ್ಯಕೀಯ ಕಾಲೇಜು ವೈದ್ಯರ ಹಾಜರಾತಿಗೆ ಬಯೋ ಮೆಟ್ರಿಕ್ ವ್ಯವಸ್ಥೆ: ಶರಣು ಪ್ರಕಾಶ್ ಪಾಟೀಲ್

    ಮೊಟ್ಟೆಗೆ ಹಣ ಜಾಸ್ತಿ ಕೊಡುವ ಬಗ್ಗೆ ಅರ್ಥಿಕ ಇಲಾಖೆ ಜೊತೆ ಚರ್ಚೆ ಮಾಡುತ್ತೇನೆ. 4.5 ರೂಪಾಯಿಗೆ ಮೊಟ್ಟೆ ಸಿಗುವ ಉದಾಹರಣೆ ಇದೆ. ಆದರೂ ಜಾಸ್ತಿ ಹಣ ಕೊಡುವ ಬಗ್ಗೆ ಹಣಕಾಸು ಇಲಾಖೆ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ನ್ಯಾಷನಲ್ ಮಾರ್ಕೆಟ್ ನಲ್ಲಿ 4.70 ಪೈಸೆ ಇದೆ. ಆದರು ಮೊಟ್ಟೆ ಹಣ ಜಾಸ್ತಿ ಮಾಡೋ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದರು. ಇದನ್ನೂ ಓದಿ: ಈಗಲೂ ರಶ್ಮಿಕಾ ಕರ್ನಾಟಕದ ಪರ ಇದ್ದೀನಿ ಅಂದ್ರೆ ನಾನು ತುಟಿ ಬಿಚ್ಚಲ್ಲ: ಶಾಸಕ ರವಿ ಗಣಿಗ ಕಿಡಿ

    ಅಡುಗೆ ಎಣ್ಣೆ ಮತ್ತು ಬೇಳೆ ಸರಬರಾಜು ತಡ ಆಗಿದ್ದರೆ ಅದರ ಬಗ್ಗೆ ಕ್ರಮ ತೆಗೆದುಕೊಳ್ಳುತೇವೆ. ಶಾಲಾ ಮಕ್ಕಳಿಗೆ ಈಗ ಮೊಟ್ಟೆ, ಬಾಳೆಹಣ್ಣು ಕೊಡುತ್ತಿದ್ದೇವೆ. ಚಿಕ್ಕಿ ಕೋಡೋದನ್ನ ಈಗ ನಿಲ್ಲಿಸಲಾಗಿದೆ. ಪಿಯುಸಿ ಮಕ್ಕಳಿಗೆ ಬಿಸಿಯೂಟ ಕೊಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಈ ಬಗ್ಗೆ ಸಿಎಂ ಅವರನ್ನು ಮನವಿ ಮಾಡೋಣ ಎಂದು ಹೇಳಿದರು. ಇದನ್ನೂ ಓದಿ: ವಿಧಾನಮಂಡಲದ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಮುನಿಯಪ್ಪ

  • ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ರಾಯಚೂರಿನಲ್ಲಿ ಉದ್ಘಾಟಿಸಿದ್ದ ಕೃಷ್ಣ

    ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ರಾಯಚೂರಿನಲ್ಲಿ ಉದ್ಘಾಟಿಸಿದ್ದ ಕೃಷ್ಣ

    ರಾಯಚೂರು: ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಎಸ್‌ಎಂ ಕೃಷ್ಣ (SM Krishna) ಅವರು ರಾಯಚೂರಿನಲ್ಲಿ (Raichuru) ಮೊದಲ ಬಾರಿಗೆ ಉದ್ಘಾಟಿಸಿದರು.

    ಮಾಜಿ ಸಿಎಂ ಎಸ್.ಎಂ ಕೃಷ್ಣ (SM Krishna) ರಾಜ್ಯದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದರು. ಈ ಮೂಲಕ ಮೊದಲ ಬಾರಿಗೆ ರಾಯಚೂರು ಜಿಲ್ಲೆಯ ದೇವದುರ್ಗ (Devadruga) ತಾಲ್ಲೂಕಿನ ಅರಕೇರಾದಲ್ಲಿ (Arakera) ಬಿಸಿಯೂಟ ಯೋಜನೆಗೆ ಚಾಲನೆ ನೀಡಿದರು.ಇದನ್ನೂ ಓದಿ: ಒಬ್ಬ ದೂರದೃಷ್ಟಿ ನಾಯಕನನ್ನು ಕಳೆದುಕೊಂಡಿದೆ ಭಾರತ – ಪ್ರಹ್ಲಾದ್ ಜೋಶಿ ಸಂತಾಪ

    2001ರಲ್ಲಿ ಆಗಿನ ಸಿಎಂ ಆಗಿದ್ದ ಎಸ್‌ಎಂ ಕೃಷ್ಣ ಅವರು ಮೊದಲ ಹಂತದಲ್ಲಿ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ಏಳು ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಆರಂಭಿಸಿದರು. ಸರ್ಕಾರಿ ಶಾಲೆಗಳ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲು ಯೋಜನೆ ಹಾಕಿಕೊಂಡಿದ್ದರು. ಬಳಿಕ 2001ರ ನ.09 ರಂದು ಅರಕೇರಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆ ಮಾಡಿದರು.

    ಸಿಎಂ ಎಸ್.ಎಂ ಕೃಷ್ಣ ಅವರಿಗೆ ಅಂದಿನ ಶಿಕ್ಷಣ ಸಚಿವ ಹೆಚ್.ವಿಶ್ವನಾಥ್, ರಾಯಚೂರು ಸಂಸದ ವೆಂಕಟೇಶ ನಾಯಕ ಅವರು ಸಾಥ್ ನೀಡಿದ್ದರು.ಇದನ್ನೂ ಓದಿ: ಡಿಗ್ನಿಫೈಡ್ ರಾಜಕಾರಣಿ, ಬೆಂಗಳೂರು ನಂ.1 ಆಗಲು ಎಸ್‌ಎಂಕೆ ಕಾರಣ: ಸುಮಲತಾ

  • ಸಮರ್ಪಕ ಬಿಸಿ ಊಟ, ಪೌಷ್ಟಿಕ ಆಹಾರ ನೀಡದ್ದಕ್ಕೆ ಮಕ್ಕಳೇ ಶಾಲೆಗೆ ಬೀಗ ಹಾಕಿ ಆಕ್ರೋಶ

    ಸಮರ್ಪಕ ಬಿಸಿ ಊಟ, ಪೌಷ್ಟಿಕ ಆಹಾರ ನೀಡದ್ದಕ್ಕೆ ಮಕ್ಕಳೇ ಶಾಲೆಗೆ ಬೀಗ ಹಾಕಿ ಆಕ್ರೋಶ

    ಗದಗ: ಸಮರ್ಪಕ ಬಿಸಿ ಊಟ, ಪೌಷ್ಟಿಕ ಆಹಾರ ನೀಡದ್ದಕ್ಕೆ ಮಕ್ಕಳು ಶಾಲೆಗೆ (School) ಬೀಗ ಜಡಿದು ಪ್ರತಿಭಟನೆ ಮಾಡಿದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ (Lakkalakatti) ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವತಃ ಮಕ್ಕಳೇ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ಶಿಕ್ಷಕಿ ಎಎಸ್ ರಾಠೋಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳೆದ 15 ದಿನಗಳಿಂದ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆ ಹಣ್ಣು, ಪೌಷ್ಟಿಕ ಆಹಾರ ನೀಡುತ್ತಿಲ್ಲ. ಇನ್ನು ಮಧ್ಯಾಹ್ನ ಬಿಸಿ ಊಟ ಎಲ್ಲಾ ಮಕ್ಕಳಿಗೂ ಸಮರ್ಪಕವಾಗಿ ಕೊಡುತ್ತಿಲ್ಲ ಎಂಬ ಆರೋಪ ಮಕ್ಕಳದ್ದಾಗಿದೆ.

    ಇಲ್ಲಿ 1 ರಿಂದ 7ನೇ ತರಗತಿಯವರೆಗೆ 441 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಮಧ್ಯಾಹ್ನ 2:30 ರಿಂದ 3 ಗಂಟೆಗೆ ತಡವಾಗಿ ಬಿಸಿ ಊಟ ನೀಡುತ್ತಾರೆ. ಜೊತೆಗೆ ಕೇವಲ 1-2 ಕೆಜಿ ತರಕಾರಿಯಲ್ಲಿ 441 ಮಕ್ಕಳಿಗೆ ಬಿಸಿ ಊಟ ಹಂಚಿಕೆ ಮಾಡುತ್ತಾರೆ. ಧಾನ್ಯಗಳಿಲ್ಲದ ಮಸಾಲೆ ಮಿಶ್ರಿತ ತಿಳಿ ಸಾರು, ಹುಳು ಹತ್ತಿದ, ಬಲಿತ, ಕೊಳೆತ ತರಕಾರಿ ತಂದು ಊಟ ತಯಾರಿಸುತ್ತಾರೆ. ಇದರಿಂದ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಆರೋಪ ಮಕ್ಕಳದ್ದಾಗಿದೆ.

    ಆದರೆ ಲೆಕ್ಕ ಪುಸ್ತಕದಲ್ಲಿ ಎಲ್ಲವನ್ನೂ ದಾಖಲು ಮಾಡಿರುತ್ತಾರೆ ಎಂಬ ಆರೋಪ ಪಾಲಕರದ್ದಾಗಿದೆ. ಮುಖ್ಯ ಶಿಕ್ಷಕಿ ಎಎಸ್ ರಾಠೋಡ್ ಬೇಡವೇ ಬೇಡ, ಮಕ್ಕಳ ಹಿತ ಕಾಪಾಡದ ಶಿಕ್ಷಕಿ ನಮ್ಮೂರ ಶಾಲೆಗೆ ಬೇರೆ ಕಡೆಗೆ ಎಂದು ಮಕ್ಕಳು, ಪಾಲಕರು ಘೋಷಣೆ ಕೂಗಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಶಿಕ್ಷಣಾಧಿಕಾರಿಗಳು ಬರುವಂತೆ ಮಕ್ಕಳು ಆಗ್ರಹಿಸಿದ್ದಾರೆ. ಶಿಕ್ಷಕಿ ವರ್ಗಾವಣೆ ಆಗುವವರೆಗೆ ಶಾಲೆಗೆ ಬರುವುದಿಲ್ಲ ಎಂದು ಮಕ್ಕಳು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಪಂಪ್‌ಸೆಟ್‌ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಭರವಸೆ – ಉಪವಾಸ ಸತ್ಯಾಗ್ರಹ ಕೈಬಿಟ್ಟ ಬಿಜೆಪಿ ಸಂಸದ

    ನಂತರ ಸ್ಥಳಕ್ಕೆ ಗಜೇಂದ್ರಗಡ ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌ಎನ್ ಹುರಳಿ ಭೇಟಿ ನೀಡಿ, ಮಕ್ಕಳು ಹಾಗೂ ಪಾಲಕರ ಮನವೊಲಿಸಲು ಮುಂದಾಗಿದ್ದಾರೆ. ಇಂದು ಮುಖ್ಯ ಶಿಕ್ಷಕಿ ರಜೆ ಇದ್ದು, ಆದಷ್ಟು ಬೇಗ ಪರಿಶೀಲನೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಹೆಬ್ಬಾಳ್ಕರ್‌ಗೆ ಠಕ್ಕರ್‌ ನೀಡಲು ಸತೀಶ್‌ ಜಾರಕಿಹೊಳಿ ಪ್ಲ್ಯಾನ್‌

  • ಹಾವೇರಿಯಲ್ಲಿ ಮಕ್ಕಳ ಬಿಸಿಯೂಟಕ್ಕೆ ರೇಷನ್ ವ್ಯತ್ಯಯ – ಸ್ವಂತ ಹಣ ಬಳಸಿ ಶಿಕ್ಷಕರಿಂದ ರೇಷನ್ ಖರೀದಿ

    ಹಾವೇರಿಯಲ್ಲಿ ಮಕ್ಕಳ ಬಿಸಿಯೂಟಕ್ಕೆ ರೇಷನ್ ವ್ಯತ್ಯಯ – ಸ್ವಂತ ಹಣ ಬಳಸಿ ಶಿಕ್ಷಕರಿಂದ ರೇಷನ್ ಖರೀದಿ

    ಹಾವೇರಿ: ರಾಜ್ಯದಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶಕ್ಕೆ ಮಕ್ಕಳಿಗೆ ಬಿಸಿಯೂಟ ಯೋಜನೆ ಜಾರಿಗೆ ತರಲಾಗಿದೆ. ಆದರೆ ಹಾವೇರಿ (Haveri) ಜಿಲ್ಲೆಯ ಕೆಲವು ಶಾಲೆಗಳಿಗೆ ಬಿಸಿಯೂಟದ ಯೋಜನೆ ರೇಷನ್ ವ್ಯತ್ಯಯ ಆಗಿದೆ. ಕೆಲವು ಶಾಲೆಯಲ್ಲಿ ಶಾಲೆಯಲ್ಲಿ ಶಿಕ್ಷಕರೇ ಸ್ವಂತ ಹಣದಿಂದ ಖರೀದಿಸಿ ಬಿಸಿಯೂಟ ಮಾಡಿಸುತ್ತಾರೆ. ಪ್ರತಿದಿನ ಬಿಸಿಯೂಟ (Mid Day Meal) ಮಾಡಲು ಶಿಕ್ಷಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ.

    ರಾಜ್ಯದ ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಬಿಸಿಯೂಟ ನೀಡಬೇಕೆಂಬುವುದು ಸರ್ಕಾರದ ಆಶಯ. ಆದರೆ ಹಾವೇರಿ ಜಿಲ್ಲೆಯ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಜಿಲ್ಲೆಯ ಅನೇಕ ಶಾಲೆಗಳಿಗೆ ಈ ತಿಂಗಳ ರೇಷನ್ ಪೂರೈಕೆ ಆಗಿಲ್ಲ. ಪ್ರಮುಖವಾಗಿ ಅಕ್ಕಿ ಹಾಗೂ ಗೋಧಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಗೆ ತಲುಪಿದೆ. ಆದರೆ ಅದನ್ನು ಶಾಲೆಗಳಿಗೆ ಪೂರೈಕೆ ಮಾಡದೆ ಇರುವುದರಿಂದ ಪಾಠ ಮಾಡುವುದನ್ನ ಬಿಟ್ಟು ಪ್ರತಿದಿನ ಸಮೀಪದ ಅಂಗಡಿಯಿಂದ ಪಡಿತರ ತಂದು ಬಿಸಿಯೂಟ ಮಾಡುವ ಪರಿಸ್ಥಿತಿ ಶಿಕ್ಷಕರದ್ದಾಗಿದೆ. ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ: ಹೆಚ್.ಕೆ ಪಾಟೀಲ್ ಸ್ಪಷ್ಟನೆ

    ಇನ್ನು ಕೆಲವು ಶಾಲೆಯ ಹಳೆಯ ಸ್ಟಾಕ್ ಬಳಸಿ ಬಿಸಿಯೂಟ ತಯಾರಿಸಲಾಗುತ್ತಿದೆ. ಬೇಳೆ ಹಾಗೂ ಅಡುಗೆ ಎಣ್ಣೆ ಸಹ ಬಂದಿಲ್ಲ. ಇನ್ನು ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಓ ಬಳಿ ಕೇಳಿದರೆ ತಾಲೂಕು ಮಟ್ಟದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

    ರಾಜ್ಯ ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳು ಮಾಡಬೇಕು. ಅದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಕ್ಕಳ ಊಟಕ್ಕೆ ಸಮಸ್ಯೆ ಆಗಿದೆ. ಇನ್ನಾದರು ಅಧಿಕಾರಿಗಳು ಎಚ್ಚೆತ್ತು ಮಕ್ಕಳ ಊಟಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಮಾಜಿ ಸಚಿವ ಪುಟ್ಟರಾಜುಗೆ ಕಾಂಗ್ರೆಸ್ ಗಾಳ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾಲಾ ಮಕ್ಕಳ ಮೊಟ್ಟೆಗೆ ಕತ್ತರಿ ಹಾಕಿದ ಸರ್ಕಾರ

    ಶಾಲಾ ಮಕ್ಕಳ ಮೊಟ್ಟೆಗೆ ಕತ್ತರಿ ಹಾಕಿದ ಸರ್ಕಾರ

    ಬೆಂಗಳೂರು: ಮಧ್ಯಾಹ್ನದ ಬಿಸಿಯೂಟದೊಂದಿಗೆ (Mid Day Meal) ಶಾಲಾ (Karnataka Government school) ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಗೆ ಸರ್ಕಾರ ಕತ್ತರಿ ಹಾಕಿದೆ. ಇಲ್ಲಿಯ ವರೆಗೂ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿತ್ತು. ಆದರೆ ಇನ್ನು ಮುಂದೆ ವಾರಕ್ಕೆ 1 ಮೊಟ್ಟೆ (Egg) ಮಾತ್ರ ನೀಡಲು ಶಿಕ್ಷಣ ಇಲಾಖೆ ಆದೇಶಿಸಿದೆ.

    ಬಿಜೆಪಿ ಸರ್ಕಾರದ ಅವಧಿಯಲ್ಲಿ ವಾರಕ್ಕೆ 2 ದಿನ ಮೊಟ್ಟೆ ಕೊಡಲು ನಿರ್ಧರಿಸಲಾಗಿತ್ತು. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣು, ಚಿಕ್ಕಿ ನೀಡಲಾಗುತ್ತಿತ್ತು. ಆದರೆ ಈಗ ಒಂದು ದಿನದ ಮೊಟ್ಟೆಗೆ ಸರ್ಕಾರ ಕತ್ತರಿ ಹಾಕಿದೆ. ಈಗಾಗಲೇ ಶಾಲೆಗಳು ಪ್ರಾರಂಭಗೊಂಡು 25 ದಿನ ಆಗಿದ್ದು ಶಾಲೆಗಳಿಗೆ ಇನ್ನೂ ಮೊಟ್ಟೆ ನೀಡಿಲ್ಲ. ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿಗೆ ಅನಾರೋಗ್ಯ ಆಸ್ಪತ್ರೆಗೆ ದಾಖಲು

    ಶಿಕ್ಷಣ ಇಲಾಖೆ (Department of School Education and Literacy) ಆದೇಶ ಪ್ರಕಟವಾದ ಬೆನ್ನಲ್ಲೇ ವಾರದಲ್ಲಿ ಎರಡು ದಿನ ಮೊಟ್ಟೆ ಕೊಡುವುದಕ್ಕೂ ಸರ್ಕಾರಕ್ಕೆ ಕಷ್ಟವಾಗಿದೆಯೇ? ಮಕ್ಕಳ ಪೌಷ್ಠಿಕಾಂಶದ ಮೊಟ್ಟೆ ಮೇಲೂ ಸರ್ಕಾರದ ಕಣ್ಣು ಬಿದ್ದಿದ್ಯಾ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.

    ಯಾವ ಕಾರಣಕ್ಕೆ 1 ಮೊಟ್ಟೆಯನ್ನು ಕಡಿತ ಮಾಡಲಾಗಿದೆ ಎಂಬುದಕ್ಕೆ ಸರ್ಕಾರದಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಇದನ್ನೂ ಓದಿ: ಆಧುನಿಕ ಆರೋಗ್ಯ ಸಮಸ್ಯೆಗಳಿಗೆ ಯೋಗ ಮದ್ದು: ದಿನೇಶ್ ಗುಂಡೂರಾವ್

  • ದಲಿತ ಬಾಲಕಿಯರು ಬಡಿಸಿದ ಊಟವನ್ನು ಬಿಸಾಡಿ ಎಂದ ಅಡುಗೆಯವ – ಬಂಧನ

    ದಲಿತ ಬಾಲಕಿಯರು ಬಡಿಸಿದ ಊಟವನ್ನು ಬಿಸಾಡಿ ಎಂದ ಅಡುಗೆಯವ – ಬಂಧನ

    ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ದಲಿತ ಬಾಲಕಿಯರಿಗೆ ತಾರತಮ್ಯ ಮಾಡಿದ ಆರೋಪದ ಮೇಲೆ ಅಡುಗೆಯವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

    ಶುಕ್ರವಾರ ಬರೋಡಿ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಾಲ್ ರಾಮ್ ಗುರ್ಜರ್ ಎಂಬಾತ ತಯಾರಿಸಿದ ಮಧ್ಯಾಹ್ನದ ಊಟವನ್ನು ದಲಿತ ಬಾಲಕಿಯರು ಬಡಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲಾಲ್ ರಾಮ್, ದಲಿತ ಬಾಲಕಿಯರು ಬಡಿಸಿದ ಊಟವನ್ನು ಎಸೆಯುವಂತೆ ಇತರ ವಿದ್ಯಾರ್ಥಿಗಳಿಗೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ವಿದ್ಯಾರ್ಥಿಗಳು ಅಡುಗೆಯವನ ಸೂಚನೆಯನ್ನು ಅನುಸರಿಸಿ ಊಟವನ್ನು ಎಸೆದಿದ್ದಾರೆ. ಈ ಘಟನೆಯ ಬಗ್ಗೆ ಬಾಲಕಿಯರು ತಮ್ಮ ಕುಟುಂಬದ ಸದಸ್ಯರಿಗೆ ತಿಳಿಸಿದ್ದು, ಬಳಿಕ ಅವರು ತಮ್ಮ ಕೆಲವು ಸಂಬಂಧಿಕರೊಂದಿಗೆ ಶಾಲೆಗೆ ಆಗಮಿಸಿ, ಅಡುಗೆಯವನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ – ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ

    ಅಡುಗೆಯವನ ವಿರುದ್ಧ ಗೋಗುಂದ ಪೊಲೀಸ್ ಠಾಣೆಯಲ್ಲಿ ಎಸ್‌ಸಿ ಮತ್ತು ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವಿಷಯ ನಿಜವೆಂದು ಕಂಡುಬಂದಿದ್ದರಿಂದ ತ್ವರಿತ ಕ್ರಮ ತೆಗೆದುಕೊಳ್ಳಲಾಗಿದೆ. ದಲಿತ ಬಾಲಕಿಯರು ಊಟವನ್ನು ಬಡಿಸಿದ್ದಕ್ಕೆ ಇತರ ವಿದ್ಯಾರ್ಥಿನಿಯರಿಗೆ ಅದನ್ನು ಎಸೆಯಲು ಹೇಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅಡುಗೆಯವನು ಯಾವಾಗಲೂ ತಾನೇ ಆಯ್ಕೆ ಮಾಡಿ, ಮೇಲ್ವರ್ಗದ ವಿದ್ಯಾರ್ಥಿಗಳಿಂದ ಊಟವನ್ನು ಬಡಿಸುತ್ತಿದ್ದರು. ಆದರೆ ನಿನ್ನೆ ವಿದ್ಯಾರ್ಥಿಗಳು ಸರಿಯಾಗಿ ಬಡಿಸುತ್ತಿಲ್ಲ ಎಂಬ ಕಾರಣಕ್ಕೆ ದಲಿತ ಬಾಲಕಿಯರಿಗೆ ಊಟ ಬಡಿಸುವಂತೆ ಶಿಕ್ಷಕರೊಬ್ಬರು ಸೂಚನೆ ನೀಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ – ಮುರುಘಾ ಶ್ರೀಗೆ ಸೋಮವಾರದವರೆಗಿಲ್ಲ ಜಾಮೀನು

    Live Tv
    [brid partner=56869869 player=32851 video=960834 autoplay=true]

  • ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶಾಲೆಯಲ್ಲಿ ಸೇವಿಸಿದ ಮಧ್ಯಾಹ್ನದ ಬಿಸಿಯೂಟದಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಫುಡ್ ಪಾಯಿಸನ್‍ನಿಂದಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ಬಿಸಿಯೂಟ ಸೇವಿಸಿದ ಸುಮಾರು ಅರ್ಧಗಂಟೆ ಬಳಿಕ ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ಬಳಲಿದ್ದಾರೆ. ಇದನ್ನೂ ಓದಿ: ನಾನು ಕ್ರಿಶ್ಚಿಯನ್; ಧ್ವಜಾರೋಹಣ ಮಾಡಲ್ಲ: ಮುಖ್ಯ ಶಿಕ್ಷಕಿ

    ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಕವಿತಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕವಿತಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಚೇತರಿಕೆ ಕಾಣುತ್ತಿದ್ದಾರೆ. ಇದನ್ನೂ ಓದಿ: 17ರ ಹುಡುಗಿಯನ್ನು ಕಿಡ್ನ್ಯಾಪ್ ಮಾಡಿ ಚಾಲಕ ಸೇರಿ ನಾಲ್ವರಿಂದ ಅತ್ಯಾಚಾರ

    Live Tv
    [brid partner=56869869 player=32851 video=960834 autoplay=true]

  • ಮಿಡ್-ಡೇ ಮೀಲ್ ಯೋಜನೆಯಿಂದ 11 ಕೋಟಿ ರೂ. ವಸೂಲಿ – ಪ್ರಾಂಶುಪಾಲರ ವಿರುದ್ಧ ಆರೋಪ

    ಮಿಡ್-ಡೇ ಮೀಲ್ ಯೋಜನೆಯಿಂದ 11 ಕೋಟಿ ರೂ. ವಸೂಲಿ – ಪ್ರಾಂಶುಪಾಲರ ವಿರುದ್ಧ ಆರೋಪ

    ಲಕ್ನೋ: ಮಿಡ್-ಡೇ ಮೀಲ್(ಎಂಡಿಎಂ) ಯೋಜನೆಯ 11.46 ಕೋಟಿ ಹಣವನ್ನು ಸ್ವಾಧೀನಪಡಿಸಿಕೊಂಡ ಆರೋಪದ ಮೇಲೆ ಫಿರೋಜಾಬಾದ್‍ನ ಮೂಲ ಶಿಕ್ಷಣ ಇಲಾಖೆಯ ಶಾಲೆ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಶರ್ಮಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಪ್ರಾಂಶುಪಾಲರು ನಕಲಿ ದಾಖಲೆಗಳನ್ನು ಬಳಸಿ ಸರ್ಕಾರೇತರ ಸಂಸ್ಥೆ(ಎನ್‍ಜಿಒ) ನೋಂದಾಯಿಸಿದ್ದಾರೆ. ಅವರ ಇಲಾಖೆ, ಬ್ಯಾಂಕ್‍ಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಾಯದಿಂದ 11.46 ಕೋಟಿ ರೂ. ಮಿಡ್-ಡೇ ಮೀಲ್ ಬಳಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಲುಷಿತ ಕುಡಿಯುವ ನೀರು ಸೇವಿಸಿ 40 ಮಂದಿ ಅಸ್ವಸ್ಥ – ವೃದ್ಧ ಸಾವು 

    ಫಿರೋಜಾಬಾದ್ ಜಿಲ್ಲೆಯ ಮೂಲ ಶಿಕ್ಷಣ ಇಲಾಖೆಯ ಪ್ರಾಂಶುಪಾಲ ಚಂದ್ರಕಾಂತ್ ಶರ್ಮಾ ವಿರುದ್ಧ ಭ್ರಷ್ಟಾಚಾರದ ಪ್ರಕರಣ ದಾಖಲಾಗಿದೆ. ಅವರು ಫಿರೋಜಾಬಾದ್ ಜಿಲ್ಲೆಯ ಶಿಕೋಹಾಬಾದ್ ನಿವಾಸಿಯಾಗಿದ್ದಾರೆ. ಅವರು ಫಿರೋಜಾಬಾದ್ ಜಿಲ್ಲೆಯ ತುಂಡ್ಲಾ ಜಾಜುಪುರದ ಪ್ರಾಥಮಿಕ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.

    ಜುಲೈ 27 ರಂದು ಆಗ್ರಾದ ವಿಜಿಲೆನ್ಸ್ ಪೊಲೀಸ್ ಠಾಣೆಯಲ್ಲಿ ಮೂಲ ಶಿಕ್ಷಣ ಇಲಾಖೆ ಮತ್ತು ಬ್ಯಾಂಕ್‍ಗಳ ಇತರ ಕೆಲವು ಉದ್ಯೋಗಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಫಿರೋಜಾಬಾದ್‍ನ ಶಿಕೋಹಾಬಾದ್‍ನಲ್ಲಿ ನೋಂದಣಿಯಾಗಿರುವ ಎನ್‍ಜಿಒ ‘ಸರಸ್ವತ್ ಅವಾಸಿಯ ಶಿಕ್ಷಾ ಸೇವಾ ಸಮಿತಿ’ ಮೂಲಕ ಚಂದ್ರಕಾಂತ್ ಶರ್ಮಾ ಹಣವನ್ನು ವಂಚಿಸಿದ್ದಾರೆ. ಇದು 2007ರಲ್ಲಿ ಆಗ್ರಾದಲ್ಲಿರುವ ಫಮ್ರ್ಸ್, ಸೊಸೈಟಿಗಳು ಮತ್ತು ಚಿಟ್ಸ್‍ನ ಉಪ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಾಯಿಸಲ್ಪಟ್ಟಿದೆ. ಅವರು ಎನ್‍ಜಿಒ ನೋಂದಾಯಿಸಲು ನಕಲಿ ಪಡಿತರ ಚೀಟಿ ಮತ್ತು ಐಡಿ ಕಾರ್ಡ್‍ಗಳನ್ನು ಬಳಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿಂಧೆ ನಿಷ್ಠಾವಂತ ಅಧಿಕಾರಿ ಕಾರಿನ ಮೇಲೆ ಶಿವಸೈನಿಕರ ದಾಳಿ 

    ಎಫ್‍ಐಆರ್ ಏನಿದೆ?
    ಶಿಕ್ಷಕ ತನ್ನ ತಂದೆಯನ್ನು ಎನ್‍ಜಿಒ ಅಧ್ಯಕ್ಷರನ್ನಾಗಿ, ಅವರ ತಾಯಿಯನ್ನು ಮ್ಯಾನೇಜರ್ ಮತ್ತು ಕಾರ್ಯದರ್ಶಿಯನ್ನಾಗಿ ಮತ್ತು ಅವರ ಪತ್ನಿಯನ್ನು ಖಜಾಂಚಿಯನ್ನಾಗಿ ಮಾಡಿದ್ದಾರೆ. ಅವರು ಎನ್‍ಜಿಒದಲ್ಲಿ ಇತರ ಕುಟುಂಬ ಸದಸ್ಯರು ಮತ್ತು ಸಂಬಂಧಿಕರಿಗೆ ಸ್ಥಾನಗಳನ್ನು ಗೊತ್ತುಪಡಿಸಿದರು. ಅಲ್ಲದೇ ಅವರು ತಮ್ಮ ತಾಯಿ ಸೇರಿದಂತೆ ಎನ್‍ಜಿಒದ ಕೆಲವು ಸದಸ್ಯರ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ ಎಂಬುದು ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಧ್ಯಾಹ್ನದ ಊಟ ಇಲ್ಲ, ಶಿಕ್ಷಕರಿಗೆ ಮಸಾಜ್ ಬೇಕಂತೆ – ವಿದ್ಯಾರ್ಥಿಗಳಿಂದಲೇ ಶಾಲೆಯ ಆಸ್ತಿ ಧ್ವಂಸ

    ಮಧ್ಯಾಹ್ನದ ಊಟ ಇಲ್ಲ, ಶಿಕ್ಷಕರಿಗೆ ಮಸಾಜ್ ಬೇಕಂತೆ – ವಿದ್ಯಾರ್ಥಿಗಳಿಂದಲೇ ಶಾಲೆಯ ಆಸ್ತಿ ಧ್ವಂಸ

    ಪಾಟ್ನಾ: ಶಾಲೆಯಲ್ಲಿ ಮಧ್ಯಾಹ್ನದ ಊಟದ ಯೋಜನೆ ಅನುಷ್ಠಾನದಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಗಲಾಟೆ ಮಾಡಿ ಶಾಲೆಯ ಆಸ್ತಿಯನ್ನು ಧ್ವಂಸಗೊಳಿಸಿರುವ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ.

    ವರದಿಗಳ ಪ್ರಕಾರ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಮಧ್ಯಾಹ್ನದ ಊಟ ನೀಡುತ್ತಿಲ್ಲ, ತಮ್ಮ ಶಿಕ್ಷಕರು ಪಾಠ ಕಲಿಸುವ ಬದಲು ಮಸಾಜ್ ಮಾಡುವಂತೆ ಒತ್ತಾಯಿಸುತ್ತಾರೆ ಎಂದು ಆರೋಪಿಸಿದ್ದಾರೆ.

    ಘಟನೆ ಕತಿಹಾರ್ ಬರ್ಸೋಯ್ ಬ್ಲಾಕ್‌ನ ಅಬಾದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬರಿಯೌಲ್ ಮಿಡಲ್ ಸ್ಕೂಲ್‌ನಲ್ಲಿ ವರದಿಯಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಆಸ್ತಿಯನ್ನು ಧ್ವಂಸಗೊಳಿಸುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಪೊಲೀಸ್ ವಾಹನದಲ್ಲಿ ಕುರಿ ದರ್ಬಾರ್ – ಮುಗ್ದ ಪ್ರಾಣಿಯ ಜಾಲಿ ರೈಡ್ ನೋಡಿ ನೆಟ್ಟಿಗರು ಫಿದಾ

    ಶಾಲೆಯ ಆವರಣದಲ್ಲಿ ಗಲಾಟೆ ನಡೆಸಲು ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಪ್ರಚೋದಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಜಿಲ್ಲಾಡಳಿತ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ತನಿಖೆಗೆ ಆದೇಶಿಸಿದೆ.

    ಘಟನೆ ಬಳಿಕ ಜಿಲ್ಲಾ ಪರಿಷತ್ ಸದಸ್ಯ ಮೊಹಮ್ಮದ್ ಗುಲ್ಜಾರ್ ಆಲಂ ಮಾಹಿತಿ ಪಡೆದು ವಿದ್ಯಾರ್ಥಿಗಳೊಂದಿಗೆ ವಿಚಾರಣೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಶಾಲೆಯಲ್ಲಿ ಊಟವನ್ನು ಸರಿಯಾಗಿ ನೀಡುತ್ತಿಲ್ಲ, ಶಿಕ್ಷಕರು ಪಾಠ ಹೇಳಿಕೊಡುವ ಬದಲು ಮಸಾಜ್ ನೀಡುವಂತೆ ಒತ್ತಾಯಿಸುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾರು ಹೊಳೆಗೆ ಉರುಳಿದ ಪ್ರಕರಣ- ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಕಾರು ಪತ್ತೆ

    ಇದು ನಾಚಿಕೆಗೇಡಿನ ಸಂಗತಿ:
    ಘಟನೆ ಬಳಿಕ ಶಿಕ್ಷಣಾಧಿಕಾರಿ ಮಮ್ತಾಜ್ ಅಹಮದ್ ಶಾಲೆಯ ಮುಖ್ಯೋಪಾಧ್ಯಾಯ ಗೋಪೈನ್ ಚಂದ್ರ ಅವರೊಂದಿಗೆ ಮಾತನಾಡಿ, ಇದು ನಾಚಿಕೆಗೇಡಿನ ಸಂಗತಿ ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]