Tag: Milind Deora

  • ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

    ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

    ಬೆಂಗಳೂರು/ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರ ಪುತ್ರ ಮಿಲಿಂದ್ ಖರ್ಗೆ (Milind Kharge) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ (ತೀವ್ರ ನಿಗಾ ಘಟಕ) ಚಿಕಿತ್ಸೆ ಮುಂದುವರಿಸಲಾಗಿದೆ.

    ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ವಿದೇಶದಲ್ಲಿದ್ದ ಮಿಲಿಂದ್‌ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಿಲಿಂದ್ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಇದನ್ನೂ ಓದಿ: ಈಗಲೂ ಅದೇ ಖದರ್‌ – 15 ಫೋರ್‌, 8 ಸಿಕ್ಸ್‌, ಆಸೀಸ್‌ ವಿರುದ್ಧ ತೂಫಾನ್‌ ಶತಕ ಸಿಡಿಸಿದ ಎಬಿಡಿ

    ಅನಾರೋಗ್ಯದಿಂದ ಬಳಲುತ್ತಿದ್ದ ಮಿಲಿಂದ್‌ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ (ಜು.27) ಸಂಜೆ ಬಳಿಕ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟೇಕಾಫ್‌ ವೇಳೆ ಕೈಕೊಟ್ಟ ಲ್ಯಾಂಡಿಂಗ್‌ ಗೇರ್‌ – ಬೋಯಿಂಗ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

    ಮಿಲಿಂದ್‌ ಕ್ಯಾನರ್‌ನಿಂದ ಬಳಲುತ್ತಿದ್ದು, ಸಕ್ರಾ ಆಸ್ಪತ್ರೆಯಲ್ಲಿ ಐಸಿಯು ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕಷ್ಟ ಪಟ್ಟಿದ್ದು ನಾನು, ಕೃಷ್ಣ ಸಿಎಂ ಆದ್ರು – ಮುಖ್ಯಮಂತ್ರಿ ಸ್ಥಾನ ಸಿಗದಿದ್ದಕ್ಕೆ ಖರ್ಗೆ ಬಹಿರಂಗ ಬೇಸರ

  • ಕಾಂಗ್ರೆಸ್‌ ತೊರೆದು ಶಿವಸೇನೆ ಸೇರ್ಪಡೆಗೊಂಡ ಮಿಲಿಂದ್‌ ದಿಯೋರಾ

    ಕಾಂಗ್ರೆಸ್‌ ತೊರೆದು ಶಿವಸೇನೆ ಸೇರ್ಪಡೆಗೊಂಡ ಮಿಲಿಂದ್‌ ದಿಯೋರಾ

    ಮುಂಬೈ: ಇಂದು ಬೆಳಗ್ಗೆಯಷ್ಟೇ ಕಾಂಗ್ರೆಸ್‌ (Congress) ತೊರೆದಿದ್ದ ಮಿಲಿಂದ್‌ ದಿಯೋರಾ (Milind Deora) ಅವರು ಇದೀಗ ಶಿವಸೇನೆಗೆ ಸೇರ್ಪಡೆಗೊಂಡಿದ್ದಾರೆ.

    ಇಂದು ಮಧ್ಯಾಹ್ನ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರ ಸಮ್ಮುಖದಲ್ಲಿ ಶಿವಸೇನೆಯ (Shiva Sena) ಕೈ ಹಿಡಿದಿದ್ದಾರೆ. ಶಿಂಧೆ ಅವರು ಹೂಗುಚ್ಚ ನೀಡಿ ಬಳಿಕ ಪಕ್ಷದ ಬಾವುಟ ಕೊಟ್ಟು ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಮೊದಲು ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಲಿ- ʼಕೈʼ ಯಾತ್ರೆಗೆ ಅಮಿತ್‌ ಮಾಳವಿಯಾ ವ್ಯಂಗ್ಯ

    ಬೆಳಗ್ಗೆಯಷ್ಟೇ ತಮ್ಮ ಸಾಮಾಜಿಕ ಜಾಲತಾಣದ ಖಾತೆ ಎಕ್ಸ್‌ನಲ್ಲಿ ಮಿಲಿಂದ್‌ ದಿಯೋರಾ ಅವರು ಪಕ್ಷ ತೊರೆಯುವುದಾಗಿ ಘೊಷಣೆ ಮಾಡಿದ್ದರು. ಇದಾದ ಬಳಿಕ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆಗೆ ಮಿಲಿಂದ್‌ ಅವರು ಸೇರುತ್ತಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ಆದರೆ ಮಧ್ಯಾಹ್ನದ ವೇಳೆಗೆ ಈ ಊಹಾಪೋಹಗಳು ಸರಿಯಾಗಿವೆ. ಶಿವಸೇನೆ ಸೇರುವುದಕ್ಕೂ ಮುನ್ನ ಮಿಲಿಂದ್‌ ಅವರು ತಮ್ಮ ಕುಟುಂಬದ ಜೊತೆಗೆ ದೇವರ ದರ್ಶನ ಪಡೆದಿದ್ದಾರೆ.

    ಮಿಲಿಂದ್‌ ಅವರು ಸದ್ಯ ಶಿವಸೈನಿಕರಾಗಿದ್ದಾರೆ. ಇಂದು ಬೆಳಗ್ಗೆಯೇ ಕಾಂಗ್ರೆಸ್ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ದಿಯೋರಾ ಅವರು ಶನಿವಾರದವರೆಗೂ ಕಾಂಗ್ರೆಸ್ ತೊರೆಯುವ ಸುದ್ದಿ ಕೇವಲ ವದಂತಿ ಎಂದು ಹೇಳಲಾಗಿತ್ತು. ಆದರೆ ಇಂದು ಕೈ ತೊರೆಯುವ ಬಗ್ಗೆ ಘೊಷಣೆ ಮಾಡಿದ್ದರು.

    ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯವಾಗಿದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ. ನಾನು ಎಲ್ಲಾ ನಾಯಕರು, ಸಹೋದ್ಯೋಗಿಗಳು ಹಾಗೂ ಕೃತಜ್ಞನಾಗಿದ್ದೇನೆ ಎಂದು ಮಿಲಿಂದ್‌ ಅವರು ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು. ಇದೀಗ ಶಿವಸೇನೆ ಸೇರುವ ಮೂಲಕ ಎಲ್ಲಾ ವದಂತಿಗಳಿಗೆ ತೆರ ಎಳೆದಿದ್ದಾರೆ.

  • ಮಿಲಿಂದ್ ದಿಯೋರಾ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ: ಏಕನಾಥ್‌ ಶಿಂಧೆ

    ಮಿಲಿಂದ್ ದಿಯೋರಾ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ: ಏಕನಾಥ್‌ ಶಿಂಧೆ

    ಮುಂಬೈ: ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿರುವ ಮಿಲಿಂದ್ ದಿಯೋರಾ ಅವರು ಶಿವಸೇನೆ (Shivasene) ಸೇರ್ಪಡೆಯಾಗಲಿದ್ದಾರೆ ಎಂಬ ಗುಮಾನಿ ಎದ್ದಿದೆ. ಈ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು ಪಕ್ಷಕ್ಕೆ ಬಂದ್ರೆ ಸ್ವಾಗತಿಸುವುದಾಗಿ ಹೇಳಿದ್ದಾರೆ.

    ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ದಿಯೋರಾ ಅವರು ಕಾಂಗ್ರೆಸ್‌ (Congress) ತೊರೆದ ವಿಚಾರ ನನ್ನ ಗಮನಕ್ಕೆ ಬಂದಿದೆ. ಒಂದು ವೇಳೆ ಅವರು ಶಿವಸೇನೆಗೆ ಸೇರ್ಪಡೆಗೊಳ್ಳಲು ನಿರ್ಧರಿಸಿದರೆ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದಿದ್ದಾರೆ.

    ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ದಕ್ಷಿಣ ಮುಂಬೈನ ಮಾಜಿ ಸಂಸದ ಮಿಲಿಂದ್ ದಿಯೋರಾ (Milind Deora) ಇಂದು ಬೆಳಗ್ಗೆ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕಾಂಗ್ರೆಸ್ ಮತ್ತು ಶಿವಸೇನೆ ಬಣದ ನಡುವಿನ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯ ವಿಚಾರದಿಂದ ಅಸಮಾಧಾನಗೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಮೊದಲು ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಲಿ- ʼಕೈʼ ಯಾತ್ರೆಗೆ ಅಮಿತ್‌ ಮಾಳವಿಯಾ ವ್ಯಂಗ್ಯ

    ದಿಯೋರಾ ಅವರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ಸಾಧ್ಯತೆ ಇದೆ ಎಂದು ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ವರದಿಗಳ ಪ್ರಕಾರ, ಮಿಲಿಂದ್‌ ದಿಯೋರಾ ಅವರು ತಮ್ಮ ಬೆಂಬಲಿಗರ ಮಾತುಗಳನ್ನು ಕೇಳುತ್ತಿದ್ದಾರೆ. ಆದರೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂಬುದಾಗಿ ತಿಳಿದುಬಂದಿದೆ. ಮಹಾರಾಷ್ಟ್ರದಲ್ಲಿ ಶಿಂಧೆ ಅವರ ಸೇನೆ ಮತ್ತು ಬಿಜೆಪಿ ಆಡಳಿತಾರೂಢ ಮೈತ್ರಿಕೂಟವಾಗಿದೆ.

  • 55 ವರ್ಷಗಳ ಬಾಂಧವ್ಯ ಅಂತ್ಯಗೊಳಿಸಿದ್ದೇನೆ – ಕಾಂಗ್ರೆಸ್‌ಗೆ ಮಿಲಿಂದ್‌ ದಿಯೋರಾ ಗುಡ್‌ಬೈ

    55 ವರ್ಷಗಳ ಬಾಂಧವ್ಯ ಅಂತ್ಯಗೊಳಿಸಿದ್ದೇನೆ – ಕಾಂಗ್ರೆಸ್‌ಗೆ ಮಿಲಿಂದ್‌ ದಿಯೋರಾ ಗುಡ್‌ಬೈ

    ಮುಂಬೈ: ಕಾಂಗ್ರೆಸ್‌ ನಾಯಕ ಮಿಲಿಂದ್‌ ದಿಯೋರಾ (Milind Deora) ಅವರು, ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಶೀಘ್ರದಲ್ಲೇ ಸಿಎಂ ಏಕನಾಥ್‌ ಶಿಂದೆ (Eknath Shinde) ಬಣದ ಶಿವಸೇನೆ ಸೇರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

    ದಿಯೋರಾ ಈ ಮಾಹಿತಿಯನ್ನು ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನನ್ನ ರಾಜಕೀಯ ಪ್ರಯಾಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯಗೊಂಡಿದೆ. ಕಾಂಗ್ರೆಸ್‌ನ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಜೊತೆಗಿನ ನನ್ನ ಕುಟುಂಬದ 55 ವರ್ಷಗಳ ಬಾಂಧವ್ಯವನ್ನು ಕೊನೆಗೊಳಿಸಿದ್ದೇನೆ. ನಮ್ಮನ್ನು ಬೆಂಬಲಿಸಿದ ಎಲ್ಲ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಆಹ್ವಾನ ಬಂದಿದ್ದು, ಜ.22 ರ ಬಳಿಕ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ: ಅಖಿಲೇಶ್‌ ಯಾದವ್‌

    ದಿಯೋರಾ ಅವರು ಏಕನಾಥ್‌ ಶಿಂದೆ ನೇತೃತ್ವದ ಶಿವಸೇನೆಗೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಮಮಂದಿರ ನಿರ್ಮಾಣವನ್ನು 74% ಮುಸ್ಲಿಮರು ಸಂಭ್ರಮಿಸ್ತಾರೆ: ಮುಸ್ಲಿಂ ರಾಷ್ಟ್ರೀಯ ಮಂಚ್

    2004 ಮತ್ತು 2009ರಲ್ಲಿ ದಿಯೋರಾ ಮುಂಬೈ ದಕ್ಷಿಣ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್‌ನ ಹಿರಿಯ ನಾಯಕ, 7 ಬಾರಿಯ ಸಂಸದರಾಗಿದ್ದ ಮುರಳಿ ದಿಯೋರಾ ಅವರ ಮಗ. ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಪಕ್ಷದ ಜೊತೆಗೆ ಮುನಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಪಕ್ಷಕ್ಕೆ ಬರುವಂತೆ ಏಕನಾಥ ಶಿಂದೆ ನೇತೃತ್ವದ ಶಿವಸೇನೆ ಬಹಿರಂಗ ಆಹ್ವಾನ ನೀಡಿತ್ತು. ಇದನ್ನೂ ಓದಿ: ಲೋಕಸಭೆ ಗೆಲ್ಲಲು ಕಾಂಗ್ರೆಸ್‍ಗೆ ಮಹಿಳಾ ಅಭ್ಯರ್ಥಿಗಳೇ ಆಸರೆ- 3 ಕ್ಷೇತ್ರದಲ್ಲಿ ಆಯ್ಕೆ ಫೈನಲ್ 

  • ನಿರ್ದೇಶಕ ಕರಣ್ ಮನೆಯಲ್ಲಿ ನಶೆಯಲ್ಲಿ ತೇಲಾಡಿದ ಬಾಲಿವುಡ್ ಕಲಾವಿದರು: ಶಾಸಕ ಆರೋಪ

    ನಿರ್ದೇಶಕ ಕರಣ್ ಮನೆಯಲ್ಲಿ ನಶೆಯಲ್ಲಿ ತೇಲಾಡಿದ ಬಾಲಿವುಡ್ ಕಲಾವಿದರು: ಶಾಸಕ ಆರೋಪ

    ನವದೆಹಲಿ: ಖ್ಯಾತ ನಿರ್ದೇಶಕ ಕರಣ್ ಜೋಹರ್ ಅವರ ಮನೆಯಲ್ಲಿ ಬಾಲಿವುಡ್ ಕಲಾವಿದರು ಡ್ರಗ್ಸ್ ನಶೆಯಲ್ಲಿ ತೇಲಾಡಿದ್ದಾರೆ ಎಂದು ಶಿರೋಮಣಿ ಅಕಾಲಿ ದಳದ ಶಾಸಕ ಮಜಿಂದರ್ ಸಿರ್ಸಾ ಗಂಭೀರವಾಗಿ ಆರೋಪಿಸಿದ್ದಾರೆ.

    ಇತ್ತೀಚೆಗೆ ಕರಣ್ ಜೋಹರ್ ಬಾಲಿವುಡ್ ಕಲಾವಿದರಾದ ದೀಪಿಕಾ ಪಡುಕೋಣೆ, ರಣ್‍ಬೀರ್ ಕಪೂರ್, ವಿಕ್ಕಿ ಕೌಶಾಲ್, ಅರ್ಜುನ್ ಕಪೂರ್, ಮಲೈಕಾ ಅರೋರಾ, ಶಾಹಿದ್ ಕಪೂರ್, ವರುಣ್ ಧವನ್, ನಿರ್ದೇಶಕ ಅಯಾನ್ ಮುಖರ್ಜಿ ಸೇರಿದಂತೆ ಹಲವು ಸೆಲೆಬ್ರಿಟಿಗಳಿಗೆ ಪಾರ್ಟಿ ನೀಡಿದ್ದಾರೆ. ಈ ಪಾರ್ಟಿಯ ವಿಡಿಯೋವನ್ನು ಕರಣ್ ಜೋಹರ್ ಅವರು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದೀಗ ವಿವಾದಕ್ಕೆ ಗುರಿಯಾಗಿದೆ.

    ಶಾಸಕ ಮಜಿಂದರ್ ಸಿರ್ಸಾ ತಮ್ಮ ಟ್ವಿಟ್ಟರಿನಲ್ಲಿ ಪಾರ್ಟಿಯ ವಿಡಿಯೋ ಹಾಕಿ ಅದಕ್ಕೆ, ಕಾಲ್ಪನಿಕ vs ವಾಸ್ತವ. ಬಾಲಿವುಡ್ ತಾರೆಯರು ಹೆಮ್ಮೆಯಿಂದ ಹೇಗೆ ಡ್ರಗ್ಸ್ ನಶೆಯಲ್ಲಿದ್ದಾರೆ ಎಂಬುದನ್ನು ನೋಡಿ. ನಾನು ಈ ಕಲಾವಿದರ ಮೂಲಕ ಡ್ರಗ್ ಅಬ್ಯೂಸ್ ವಿರುದ್ಧ ಧ್ವನಿ ಎತ್ತುತ್ತೇನೆ. ನಿಮಗೂ ಅಸಹ್ಯ ಎನಿಸಿದರೆ ರೀ-ಟ್ವೀಟ್ ಮಾಡಿ ಎಂದು ಬರೆದುಕೊಂಡಿದಲ್ಲದೆ, ಶಾಹಿದ್ ಕಪೂರ್, ದೀಪಿಕಾ ಪಡುಕೋಣೆ, ಅರ್ಜುನ್ ಕಪೂರ್, ವರುಣ್ ಧವನ್, ಕರಣ್ ಜೋಹರ್ ಹಾಗೂ ವಿಕ್ಕಿ ಕೌಶಾಲ್ ಅವರಿಗೆ ಟ್ಯಾಗ್ ಕೂಡ ಮಾಡಿದ್ದಾರೆ.

    ಮಂಜಿದರ್ ಅವರ ಟ್ವೀಟ್‍ಗೆ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ರೀ-ಟ್ವೀಟ್ ಮಾಡುವ ಮೂಲಕ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. “ನನ್ನ ಪತ್ನಿ ಕೂಡ ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಅಲ್ಲದೆ ಅವರು ಈ ವಿಡಿಯೋದಲ್ಲೂ ಇದ್ದಾರೆ. ಯಾವುದೇ ಕಲಾವಿದರೂ ಡ್ರಗ್ ನಶೆಯಲ್ಲಿ ಇರಲಿಲ್ಲ. ನಿಮಗೆ ಯಾರ ಬಗ್ಗೆ ಗೊತ್ತಿಲ್ಲವೋ ಅವರ ಬಗ್ಗೆ ಸುಳ್ಳು ಸುದ್ದಿಯನ್ನು ಹರಡಿಸುವುದನ್ನು ನಿಲ್ಲಿಸಿ. ನೀವು ಕ್ಷಮೆ ಕೇಳುವ ಧೈರ್ಯ ಮಾಡುತ್ತೀರಾ ಎಂದು ನಿರೀಕ್ಷಿಸುತ್ತೇನೆ” ಎಂದು ಶಾಸಕ ಮಿಲಿಂದ್ ರೀ-ಟ್ವೀಟ್ ತಿರುಗೇಟು ನೀಡಿದ್ದಾರೆ.

  • ಕಾಂಗ್ರೆಸ್‍ನಲ್ಲಿ ನಿಲ್ಲದ ರಾಜೀನಾಮೆ ಪರ್ವ- ರಾಹುಲ್ ಆಪ್ತ ಮಿಲಿಂದ್, ಸಿಂಧಿಯಾ ರಾಜೀನಾಮೆ

    ಕಾಂಗ್ರೆಸ್‍ನಲ್ಲಿ ನಿಲ್ಲದ ರಾಜೀನಾಮೆ ಪರ್ವ- ರಾಹುಲ್ ಆಪ್ತ ಮಿಲಿಂದ್, ಸಿಂಧಿಯಾ ರಾಜೀನಾಮೆ

    ನವದೆಹಲಿ: ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಿಲಿಂದ್ ದಿಯೋರಾ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿರಾಧಿತ್ಯ ಸಿಂಧಿಯಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಒಂದೇ ದಿನದಲ್ಲಿ ಇಬ್ಬರು ಪ್ರಮುಖ ಯುವ ನಾಯಕರು ಜವಾಬ್ದಾರಿಯಿಂದ ಹಿಂದೆ ಸರಿಯುವ ಮೂಲಕ ಹಿರಿಯ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.

    ಜನರ ತೀರ್ಪನ್ನು ಸ್ವೀಕರಿಸಿದ್ದೇನೆ ಹಾಗೂ ಸೋಲಿನ ಹೊಣೆಯನ್ನು ನಾನು ಕೂಡ ಹೊತ್ತಿರುವೆ. ಈ ಮೂಲಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನದ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಲ್ಲಿಸಿದ್ದೇನೆ. ಈ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಹಾಗೂ ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಜ್ಯೋತಿರಾಧಿತ್ಯ ಸಿಂಧಿಯಾ ಟ್ವೀಟ್ ಮಾಡಿದ್ದಾರೆ.

    https://twitter.com/JM_Scindia/status/1147821537128407040

    ಮಿಲಿಂದ್ ದಿಯೋರಾ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಪರಮಾಪ್ತ ಬಳಗದಲ್ಲಿ ಇರುವವರು. ಗುನಾ ಲೋಕಸಭಾ ಕ್ಷೇತ್ರದಿಂದ 2002ರಲ್ಲಿ ಆಯ್ಕೆಯಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಅವರು ನಿರಂತರವಾಗಿ ನಾಲ್ಕು ಬಾರಿ ಭರ್ಜರಿ ಗೆಲುವು ಸಾಧಿಸಿದ್ದರು. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಕೃಷ್ಣಪಾಲ್ ಸಿಂಗ್ ಯಾದವ್ ವಿರುದ್ಧ ಸೋಲು ಕಂಡಿದ್ದಾರೆ.

    ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ನೀಡಬೇಕು ಎನ್ನುವ ಚರ್ಚೆ ನಡೆಯುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಜ್ಯೋತಿರಾಧಿತ್ಯ ಸಿಂಧಿಯಾ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

    ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಹಾಗೂ ರಾಜಸ್ಥಾನದ ಸಹ-ಉಸ್ತುವಾರಿ ತರುಣ್ ಕುಮಾರ್ ಅವರು ಜೂನ್ 29ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

    ಪಕ್ಷವು ನನಗೆ 2017ರಲ್ಲಿಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಮುನ್ನಡೆ ಸಾಧಿಸಿ, ಸರ್ಕಾರ ರಚನೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ವೇಳೆಯೂ ಉತ್ತಮ ರೀತಿಯಲ್ಲಿ ಪ್ರಚಾರ ಹಾಗೂ ಪಕ್ಷ ಸಂಘಟನೆ ಮಾಡಿದ್ದೇವು. ಆದರೆ ಫಲಿತಾಂಶ ನಮ್ಮ ನಿರೀಕ್ಷೆಯನ್ನು ಹುಸಿಗೊಳಿಸಿದೆ. ಪಕ್ಷದ ಸೋಲನ್ನು ಸಂಪೂರ್ಣವಾಗಿ ನೀವು ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವಿರಿ. ಈ ಸೋಲಿಗೆ ನಾವು ಕೂಡ ಜವಾಬ್ದಾರರಾಗಿದ್ದೇವೆ. ಹೀಗಾಗಿ ನಿಮಗೆ ರಾಜೀನಾಮೆ ಪತ್ರ ನೀಡುತ್ತಿರುವೆ ಎಂದು ತರುಣ್ ಕುಮಾರ್, ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದರು.

    ರಾಹುಲ್ ಗಾಂಧಿ ಅವರೇ ಪಕ್ಷವನ್ನು ಮುನ್ನಡೆಸಬೇಕು ಎಂದು ಅನೇಕ ಯುವಕರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‍ನ ಹಿರಿಯ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.

    ಕಾಂಗ್ರೆಸ್‍ನ ಮಧ್ಯಪ್ರದೇಶ ಘಟಕದ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಮತ್ತು ಗೋವಾ ಕಾಂಗ್ರೆಸ್ ಘಟಕ ಅಧ್ಯಕ್ಷ ಗಿರೀಶ್ ಚೊಡನ್‍ಕರ್ ಅವರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಎಐಸಿಸಿ ಪ್ರಧಾನ ಕಚೇರಿಗೆ ಭೇಟಿ ನೀಡಿದ 300ಕ್ಕೂ ಹೆಚ್ಚು ಯುವ ನಾಯಕರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.