Tag: militants

  • ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

    ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

    ಇಂಫಾಲ: ಮಣಿಪುರದ (Manipur) ಚಾಂದೆಲ್‌ ಜಿಲ್ಲೆಯಲ್ಲಿ ಬುಧವಾರ ಅಸ್ಸಾಂ ರೈಫಲ್ಸ್ (Assam Rifles) ಘಟಕದೊಂದಿಗಿನ ಗುಂಡಿನ ಚಕಮಕಿಯಲ್ಲಿ 10 ಉಗ್ರರು ಸಾವನ್ನಪ್ಪಿದ್ದಾರೆ.

    ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

    ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂದೆಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಹೊಂದಿದ್ದ ವ್ಯಕ್ತಿಗಳ ಚಲನವಲನಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಸ್ಪಿಯರ್ ಕಾರ್ಪ್ಸ್ ಅಡಿಯಲ್ಲಿ ಅಸ್ಸಾಂ ರೈಫಲ್ಸ್ ಘಟಕವು ಮೇ 14 ರಂದು ಕಾರ್ಯಾಚರಣೆ ನಡೆಸಿತು ಎಂದು ಸೇನೆಯ ಪೂರ್ವ ಕಮಾಂಡ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

    ಕಾರ್ಯಾಚರಣೆಯ ಸಮಯದಲ್ಲಿ ಉಗ್ರರು, ಪಡೆಗಳ ಮೇಲೆ ಗುಂಡು ಹಾರಿಸಿದರು. ಅದಕ್ಕೆ ಸೇನಾಪಡೆ ತ್ವರಿತವಾಗಿ ಪ್ರತಿಕ್ರಿಯಿಸಿದೆ. ಗುಂಡಿನ ಚಕಮಕಿಯಲ್ಲಿ 10 ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

  • ಉಗ್ರರು ದಾಳಿ ಮಾಡಿಲ್ಲ ಎಂದ ನ್ಯೂಯಾರ್ಕ್‌ ಟೈಮ್ಸ್‌ – ವರದಿಯನ್ನು ಸರಿ ಮಾಡಿದ ಅಮೆರಿಕ ಸರ್ಕಾರ

    ಉಗ್ರರು ದಾಳಿ ಮಾಡಿಲ್ಲ ಎಂದ ನ್ಯೂಯಾರ್ಕ್‌ ಟೈಮ್ಸ್‌ – ವರದಿಯನ್ನು ಸರಿ ಮಾಡಿದ ಅಮೆರಿಕ ಸರ್ಕಾರ

    ವಾಷಿಂಗ್ಟನ್‌: ಕಾಶ್ಮೀರದ ಪಹಲ್ಗಾಮ್‌ ದಾಳಿಯನ್ನು (Pahalgam Terror Attack) ಉಗ್ರರ ದಾಳಿ ಎಂದು ಬರೆಯದ ಅಮೆರಿಕ ನ್ಯೂಯಾರ್ಕ್‌ ಟೈಮ್ಸ್‌ (The New York Times) ವರದಿಯನ್ನು ಅಮೆರಿಕ ಸರ್ಕಾರ (US Government) ಟೀಕಿಸಿದೆ.

    ನ್ಯೂಯಾರ್ಕ್‌ ಟೈಮ್ಸ್‌ ತನ್ನ ವರದಿಯಲ್ಲಿ ʼMilitantsʼ ಎಂದು ಹೆಡ್‌ಲೈನ್‌ ಹಾಕಿ ವರದಿ ಮಾಡಿತ್ತು. ಆದರೆ ಅಮೆರಿಕದ House Foreign Affairs Committee Majority ಸಾಮಾಜಿಕ ಜಾಲತಾಣದಲ್ಲಿ Militants ಇರುವ ಜಾಗದಲ್ಲಿ ʼTerroristʼ ಎಂದು ಹಾಕಿ ಪೋಸ್ಟ್‌ ಮಾಡಿದೆ. ಇದನ್ನೂ ಓದಿ: Pahalgam Terror Attack – ಅಗತ್ಯ ಬಿದ್ರೆ ಭಾರತದೊಂದಿಗೆ ನಿಲ್ಲುತ್ತೇವೆ: ಇಸ್ರೇಲ್

    ತನ್ನ ಪೋಸ್ಟ್‌ನಲ್ಲಿ ನಾನು ನ್ಯೂಯಾರ್ಕ್‌ ಟೈಮ್ಸ್‌ ವರದಿಯನ್ನು ಸರಿ ಮಾಡಿದ್ದೇವೆ. ಭಾರತವಾಗಲಿ ಅಥವಾ ಇಸ್ರೇಲ್‌ನಲ್ಲಿ ನಡೆಯಲಿ ಇದು ಭಯೋತ್ಪಾದಕ ದಾಳಿ ಎಂದು ಬರೆದುಕೊಂಡಿದೆ.

    ಮೊದಲಿನಿಂದಲೂ ಜಮ್ಮು ಕಾಶ್ಮೀರದಲ್ಲಿ ಉಗ್ರರು ದಾಳಿ ಮಾಡಿದಾಗ ಪಾಶ್ಚಿಮಾತ್ಯ, ಅಮೆರಿಕ, ಮಧ್ಯಪ್ರಾಚ್ಯದಲ್ಲಿರುವ ಮಾಧ್ಯಮಗಳು ಅವರನ್ನು ಉಗ್ರರು ಎಂದು ಕರೆಯುವುದಿಲ್ಲ. ಪ್ರತ್ಯೇಕವಾದಿಗಳು, ಬಂಡುಕೋರರು, ಸ್ವತಂತ್ರ ಹೋರಾಟಗಾರರು ಎಂಬ ಬಣ್ಣ ಬಣ್ಣದ ಪದಗಳನ್ನು ಬಳಸಿ ಅವರ ಮೇಲೆ ವಿಶ್ವದ ಜನರು ಅನುಕಂಪ ಬರುವಂತಹ ವರದಿಗಳನ್ನು ಪ್ರಕಟಿಸುತ್ತಿದ್ದವು, ಈಗಲೂ ಪ್ರಕಟಿಸುತ್ತಲೇ ಇದೆ. ಇದನ್ನೂ ಓದಿ: ಗಡಿಯಲ್ಲಿ ಭಾರತ ಪಾಕ್‌ ಮಧ್ಯೆ ಗುಂಡಿನ ಚಕಮಕಿ

     

    ಕನ್ನಡದಲ್ಲಿ Militants ಪದಕ್ಕೆ ಅರ್ಥ ಹುಡುಕಿದರೆ ʼಉಗ್ರರುʼ ಎಂದೇ ಗೂಗಲ್‌ ತೋರಿಸುತ್ತದೆ. ಆದರೆ ಇಂಗ್ಲಿಷ್‌ನಲ್ಲಿ Militants ಅಂದರೆ ಉಗ್ರರು ಎಂಬ ಅರ್ಥ ಬರುವುದಿಲ್ಲ. ಸಶಸ್ತ್ರ ಪ್ರತಿರೋಧ, ದಂಗೆಗಳು ಅಥವಾ ಗೆರಿಲ್ಲಾ ಯುದ್ಧದಲ್ಲಿ ತೊಡಗಿರುವ ವ್ಯಕ್ತಿಗಳು ಅಥವಾ ಗುಂಪುಗಳನ್ನು ವಿವರಿಸಲು ಸಾಮಾನ್ಯವಾಗಿ ಈ ಪದವನ್ನು ಬಳಸಲಾಗುತ್ತದೆ. ಸರ್ಕಾರದ ವಿರುದ್ಧ ವಿಮೋಚನಾ ಹೋರಾಟ ಮಾಡುತ್ತಿರುವ ವಿಮೋಚನಾ ಹೋರಾಟಗಾರರು, ಪ್ರತ್ಯೇಕವಾದಿಗಳು ಎಂಬ ಅರ್ಥ ಕೊಡುತ್ತದೆ.

  • ಮಣಿಪುರದಲ್ಲಿ ನಿಲ್ಲದ ಸಂಘರ್ಷ – ತಂದೆ, ಮಗ ಸೇರಿ ಮೂವರು ಬಲಿ

    ಮಣಿಪುರದಲ್ಲಿ ನಿಲ್ಲದ ಸಂಘರ್ಷ – ತಂದೆ, ಮಗ ಸೇರಿ ಮೂವರು ಬಲಿ

    ಇಂಪಾಲ: ಮಣಿಪುರದ (Manipur) ಬಿಷ್ಣುಪುರ (Bishnupur) ಜಿಲ್ಲೆಯಲ್ಲಿ ಇಂದು (ಶನಿವಾರ) ಮುಂಜಾನೆ ನಡೆದ ಹಿಂಸಾಚಾರದಲ್ಲಿ (Violence) ತಂದೆ-ಮಗ ಸೇರಿದಂತೆ ಮೂವರು ಗ್ರಾಮಸ್ಥರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

    ಶಂಕಿತ ದಂಗೆಕೋರರು ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿದ್ದು, ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ಫ್ರಿಡ್ಜ್‌ಗಾಗಿ 7 ತಿಂಗಳ ಗರ್ಭಿಣಿಯ ಜೀವವೇ ಹೋಯ್ತು!

    ಈ ಗುಂಡಿನ ದಾಳಿಯಲ್ಲಿ ತಮ್ಮ ಮನೆಗಳನ್ನು ಕಾಯುತ್ತಿದ್ದ ತಂದೆ – ಮಗ ಮತ್ತು ಇನ್ನೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರು ಯಾವುದೇ ಶಸ್ತ್ರಾಸ್ತ್ರಗಳನ್ನು ಹೊಂದಿರಲಿಲ್ಲ. ಬಫರ್ ಝೋನ್ ದಾಟಿ ಮೈತೇಯ್ ಪ್ರದೇಶಕ್ಕೆ ನುಗ್ಗಿದ ದಂಗೆಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಮೃತರು ಮೈತೇಯ್ (Meitei) ಸಮುದಾಯದವರಾಗಿದ್ದು, ದಂಗೆಕೋರರು ಕುಕಿ (Kuki) ಸಮುದಾಯದ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಕ್ವಾಕ್ಟ ಪ್ರದೇಶದಲ್ಲಿ ಕುಕಿ ಸಮುದಾಯ ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಇದನ್ನೂ ಓದಿ: ಹಿಜಬ್‌ ಹಾಕದೇ ಶಾಲೆಗೆ ಬಂದ ಬಾಲಕಿಯರನ್ನು ತಡೆದ 10 ನೇ ತರಗತಿ ಮುಸ್ಲಿಂ ವಿದ್ಯಾರ್ಥಿ – ಗುಂಪಿನಿಂದ ಹಲ್ಲೆ

    ಗುಂಡಿನ ದಾಳಿಯಲ್ಲಿ ಮಣಿಪುರದ ಕಮಾಂಡೋ ತಲೆಗೆ ತೀವ್ರ ಗಾಯವಾಗಿದ್ದು, ಬಿಷ್ಣುಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಗಾಯಾಳು ಕಮಾಂಡೋವನ್ನು ಬಿಷ್ಣುಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಘಟನೆ ನಡೆದ ಪ್ರದೇಶದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದ 5 ವಸತಿ ಗೃಹ ಜಪ್ತಿ

    ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದ 5 ವಸತಿ ಗೃಹ ಜಪ್ತಿ

    ಶ್ರೀನಗರ: ಇಲ್ಲಿಯವರೆಗೆ ಉಗ್ರರಿಗೆ ಬಿಸಿ ಮುಟ್ಟಿಸುತ್ತಿದ್ದ ಪೊಲೀಸರು ಈಗ ಜನರಿಗೂ ಬಿಸಿ ಮುಟ್ಟಿಸಲು ಆರಂಭಿಸಿದ್ದಾರೆ. ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದ ಶ್ರೀನಗರ 5 ವಸತಿ ಗೃಹವನ್ನು ಪೊಲೀಸರು ಪತ್ತೆ ಮಾಡಿ ಜಪ್ತಿ ಮಾಡಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಶ್ರೀನಗರ ಪೊಲೀಸರು ಭಯೋತ್ಪಾದಕರಿಗೆ ಆಶ್ರಯ ನೀಡಲು ಬಳಸಲಾಗಿದ್ದ ಐದು ವಸತಿ ಗೃಹಗಳ ಮೇಲೆ ದಾಳಿ ಮಾಡಿದ್ದಾರೆ. ನಂತರ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(ಯುಎಪಿಎ) ಅಡಿ ಆ ಐದು ವಸತಿ ಗೃಹಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

    5 Houses Attached In Srinagar For 'Harbouring' Terrorists: Police

    2022 ಜೂನ್ 21ರಂದು, ಯುಎಪಿಎ ಸೆಕ್ಷನ್ 2(ಜಿ) ಮತ್ತು ಸೆಕ್ಷನ್ 25 ರ ಪ್ರಕಾರ ಭಯೋತ್ಪಾದಕರಿಗೆ ಆಶ್ರಯ ಕೊಡುತ್ತಿದ್ದ ಐದು ವಸತಿ ಮನೆಗಳನ್ನು ಜಪ್ತಿ ಮಾಡಲಾಗಿದೆ. ಈ ಮನೆಗಳನ್ನು ಭಯೋತ್ಪಾದನೆಯ ಉದ್ದೇಶಕ್ಕಾಗಿ ಬಳಸಲಾಗಿದೆ ಎಂದು ಸಾಬೀತಾಗಿದೆ. ಈ ಮನೆಗಳಲ್ಲಿ ಉಗ್ರರಿಗೆ ಆಶ್ರಯವನ್ನು ಸ್ವಯಂಪ್ರೇರಣೆಯಿಂದ ಮತ್ತು ಉದ್ದೇಶಪೂರ್ವಕವಾಗಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:  ನನ್ನ ಮಗನನ್ನು ಉಳಿಸು ದೇವರೇ – ಶಿಲುಬೆ ಮುಂದೆ ಕಂದನನ್ನು ಮಲಗಿಸಿದ ದಂಪತಿ 

    ಪರಿಂಪೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆಗಳು ಸೇರಿ ನೌಹಟ್ಟಾ, ಪಂಥಾ ಚೌಕ್ ಮತ್ತು ಜಕುರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಮನೆಯನ್ನು ಜಪ್ತಿ ಮಾಡಲಾಗಿದೆ. ಅಂತಹ ಇನ್ನೂ ಕೆಲವು ಮನೆಗಳನ್ನು ಗುರುತಿಸಲಾಗಿದೆ ಎಂದಿದ್ದಾರೆ.

    ಭಯೋತ್ಪಾದಕರಿಗೆ ಆಶ್ರಯ ನೀಡದಂತೆ ನಾಗರಿಕರಿಗೆ ಮತ್ತೊಮ್ಮೆ ನಾವು ವಿನಂತಿ ಮಾಡಿಕೊಳ್ಳುತ್ತೇವೆ. ಒಂದು ವೇಳೆ ನಾಗರಿಕರು ನಮ್ಮ ಮಾತನ್ನು ಕೇಳಲು ವಿಫಲವಾದರೆ ನಾವು ಅವರ ಮನೆಗಳನ್ನು ಜಪ್ತಿ ಮಾಡಬೇಕಾಗುತ್ತೆ ಎಂದು ಎಚ್ಚರಿಸಿದ್ದಾರೆ.

    ಯಾವುದೇ ಮನೆಗೆ ಭಯೋತ್ಪಾದಕರು ಬಲವಂತವಾಗಿ ಪ್ರವೇಶಿಸಿದರೆ ತಕ್ಷಣವೇ ಅದನ್ನು ಪೊಲೀಸರ ಗಮನಕ್ಕೆ ತರಬೇಕು ಎಂದು ಸೂಚಿಸಿದ್ದಾರೆ.

    Live Tv

  • ಉಗ್ರಗಾಮಿ ಕಮಾಂಡರ್ ಸೇರಿದಂತೆ ಐವರು ಉಗ್ರರು ಗುಂಡಿಗೆ ಬಲಿ

    ಉಗ್ರಗಾಮಿ ಕಮಾಂಡರ್ ಸೇರಿದಂತೆ ಐವರು ಉಗ್ರರು ಗುಂಡಿಗೆ ಬಲಿ

    ಶ್ರೀನಗರ: ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್(ಟಿಆರ್‌ಎಫ್) ಕಮಾಂಡರ್ ಸೇರಿದಂತೆ ಐವರು ಉಗ್ರರು ಗುಂಡಿಗೆ ಬಲಿಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಪೊಂಬೆ ಮತ್ತು ಗೋಪಾಲ್‌ಪೋರಾ ಗ್ರಾಮಗಳಲ್ಲಿ ಬುಧವಾರ ನಡೆದಿದೆ.

    ಗೋಪಾಲ್‌ಪೋರಾ ಗ್ರಾಮಗಳಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಟಿಆರ್‌ಎಫ್ ಕಮಾಂಡರ್ ಸೇರಿದಂತೆ ಐವರು ಉಗ್ರರು ಹತರಾಗಿದ್ದಾರೆ. ಪೊಂಬೆಯಲ್ಲಿ ಮೂವರು ಉಗ್ರರು ಸಾವನ್ನಪ್ಪಿದರೆ, ಗೋಪಾಲ್‌ಪೋರಾದಲ್ಲಿ ಇಬ್ಬರು ಹತರಾಗಿದ್ದಾರೆ. ಇದನ್ನೂ ಓದಿ:  ಚೀನಾ ಗಡಿ ಕ್ಯಾತೆ ನಡುವೆ ಭಾರತೀಯ ಸೇನೆಯಿಂದ ಆಪರೇಷನ್ ಹರ್ಕ್ಯುಲಸ್

    ಗೋಪಾಲ್‌ಪೋರಾ ಪ್ರದೇಶದಲ್ಲಿ ಉಗ್ರಗಾಮಿಗಳು ಇರುವ ಖಚಿತ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ನಂತರ, ಅವರು ಪ್ರತಿದಾಳಿ ನಡೆಸಿದರು. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.

    ಟಿಆರ್‌ಎಫ್ ಉಗ್ರಗಾಮಿ ಕಮಾಂಡರ್ ಅಫಾಕ್ ಸಿಕಂದರ್ ಲೋನ್ ಮತ್ತು ಮತ್ತೊಬ್ಬ ಟಿಆರ್‌ಎಫ್ ಸದಸ್ಯ ಇರ್ಫಾನ್ ಮುಸ್ತಾಕ್ ಲೋನ್‌ನನ್ನು ಗೋಪಾಲ್‌ಪೋರಾದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ಮಾಡಿವೆ. ಈ ಕುರಿತು ಪೊಲೀಸ್ ಮಹಾನಿರೀಕ್ಷಕ(ಕಾಶ್ಮೀರ) ವಿಜಯ್ ಕುಮಾರ್ ಟ್ವೀಟ್‌ನಲ್ಲಿ, ನಿಷೇಧಿತ ಭಯೋತ್ಪಾದಕ ಸಂಘಟನೆಯ ಟಿಆರ್‌ಎಫ್‌ನ ಭಯೋತ್ಪಾದಕ ಕಮಾಂಡರ್ ಅಫಾಕ್ ಸಿಕಂದರ್ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  4ಜಿ ಡೌನ್‍ಲೋಡ್ ವೇಗದಲ್ಲಿ ಜಿಯೋ ಫಸ್ಟ್

    ಇದಲ್ಲದೆ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಇಬ್ಬರು ಸಕ್ರಿಯ ಭಯೋತ್ಪಾದಕ ಸಹಚರರನ್ನು ಹಾಗೂ ಪುಲ್ವಾಮಾ ನಿವಾಸಿ ಅಮೀರ್ ಬಶೀರ್ ದಾರ್, ಶೋಪಿಯಾನ್ ನಿವಾಸಿ ಮುಖ್ತಾರ್ ಅಹ್ಮದ್ ಭಟ್ ಅವರನ್ನು ಪಡೆಗಳು ಬಂಧಿಸಿವೆ. ಅವರ ಬಳಿಯಿದ್ದ ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ.

  • ಹಬ್ಬದ ಸಂದರ್ಭದಲ್ಲಿ ಸರಣಿ ಸ್ಫೋಟಕ್ಕೆ ಸಂಚು- 6 ಉಗ್ರರ ಬಂಧನ

    ಹಬ್ಬದ ಸಂದರ್ಭದಲ್ಲಿ ಸರಣಿ ಸ್ಫೋಟಕ್ಕೆ ಸಂಚು- 6 ಉಗ್ರರ ಬಂಧನ

    – ಬಂಧಿತರಲ್ಲಿ ಇಬ್ಬರು ಪಾಕಿಸ್ತಾನದವರು

    ನವದೆಹಲಿ: ವಿವಿಧ ರಾಜ್ಯಗಳಲ್ಲಿ ಒಟ್ಟು 6 ಜನ ಉಗ್ರರನ್ನು ಬಂಧಿಸಲಾಗಿದ್ದು, ಇದರಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಐಎಸ್‍ಐನಿಂದ ತರಬೇತಿ ಪಡೆದ ಉಗ್ರರಾಗಿದ್ದಾರೆ. ಹಬ್ಬಗಳ ಸಂದರ್ಭದಲ್ಲಿ ವಿವಿಧ ರಾಜ್ಯಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಉಗ್ರರು ಗಣೇಶ ಚತುರ್ಥಿ, ನವರಾತ್ರಿ ಹಾಗೂ ರಾಮಲೀಲಾ ಹಬ್ಬಗಳ ಸಂದರ್ಭದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಬಂಧಿರನ್ನು ಜಾನ್ ಮೊಹಮ್ಮದ್ ಶೇಖ್ ಅಲಿಯಾಸ್ ಸಮೀರ್(47), ಒಸಾಮಾ(22), ಮೂಲ್‍ಚಂದ್(47), ಝೀಶನ್ ಖಮರ್(28), ಮೊಹಮ್ಮದ್ ಅಬುಬಕರ್(23) ಹಾಗೂ ಮೊಹಮ್ಮದ್ ಅಮಿರ್ ಜಾವೇದ್(31) ಎಂದು ಗುರುತಿಸಲಾಗಿದೆ. ಅಲ್ಲದೆ ಆರೋಪಿಗಳಿಂದ ಎರಡು ಹ್ಯಾಂಡ್ ಗ್ರೆನೇಡ್‍ಗಳು, ಎರಡು ಸುಧಾರಿತ ಸ್ಫೋಟಕ ಸಾಧನಗಳು(ಐಇಡಿ), 1 ಕೆ.ಜಿ.ಆರ್‍ಡಿಎಕ್ಸ್ ಹಾಗೂ ಇಟಲಿ ನಿರ್ಮಿತ ಪಿಸ್ತೂಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ? – ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ

    ಒಸಾಮಾ ಹಾಗೂ ಖಮರ್ ಪಾಕಿಸ್ತಾನದವರಾಗಿದ್ದು, ಐಎಸ್‍ಐ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲದೆ ಐಎಸ್‍ಐನಿಂದಲೇ ತರಬೇತಿ ಪಡೆದಿದ್ದಾರೆ. ಎಕೆ-47 ಸೇರಿದಂತೆ ಸ್ಫೋಟಕ ಹಾಗೂ ಬಂದೂಕುಗಳ ಬಳಕೆ ಕುರಿತು ತರಬೇತಿ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

    ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಪಾಕಿಸ್ತಾನದಿಂದ ತರಬೇತಿ ಪಡೆದವರು ಸೇರಿ ಒಟ್ಟು 6 ಜನರನ್ನು ಬಂಧಿಸಿದ್ದೇವೆ. ಒಸಾಮಾ ಹಾಗೂ ಖಮರ್ ಇದೇ ವರ್ಷ ಪಾಕಿಸ್ತಾನಕ್ಕೆ ಹೋಗಿ ತರಬೇತಿ ಪಡೆದುಕೊಂಡು ಬಂದಿದ್ದಾರೆ ಎಂದು ಪೊಲೀಸ್ ವಿಶೇಷ ಆಯುಕ್ತ ನೀರಜ್ ಕುಮಾರ್ ಠಾಕೂರ್ ಮಾಹಿತಿ ನೀಡಿದ್ದಾರೆ.

    ಶೇಖ್‍ನನ್ನು ರಾಜಸ್ಥಾನದ ಕೋಟಾ ಬಳಿ ಬಂಧಿಸಲಾಗಿದೆ, ಒಸಾಮಾನನ್ನು ದೆಹಲಿಯ ಓಖ್ಲಾ, ಬಕರ್‍ನನ್ನು ಸರಾಯಿ ಕಾಳೆ ಖಾನ್‍ನಿಂದ, ಖಮರ್‍ನನ್ನು ಅಲಹಬಾದ್, ಜಾವೇದ್‍ನನ್ನು ಲಕ್ನೋದಿಂದ ಹಾಗೂ ಮೂಲ್‍ಚಂದ್‍ನನ್ನು ರಾಯಬರೇಲಿಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ವಿಶೇಷ ವಿಭಾಗದ ಡಿಸಿಪಿ ಪ್ರಮೋದ್ ಸಿಂಗ್ ಕುಶ್ವಾ ಈ ಕುರಿತು ವಿವರಿಸಿ, ಪಾಕಿಸ್ತಾನದ ಐಎಸ್‍ಐ ಪ್ರಯೋಜಿತ ಮತ್ತು ತರಬೇತಿ ಪಡೆದ ಭಯೋತ್ಪಾದಕ ಘಟಕಗಳೊಂದಿಗೆ ಸಂಪರ್ಕ ಹೊಂದಿರುವುದು ಪತ್ತೆಯಾಗಿದೆ. ಅಲ್ಲದೆ ಅಂಡರ್‍ವಲ್ರ್ಡ್ ನೀಮತ ಇವರನ್ನು ನಿಯಂತ್ರಿಸಲಾಗುತ್ತಿತ್ತು. ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸರಣಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ.

  • ಮೂವರು ಉಗ್ರರನ್ನು ಸದೆಬಡಿದ ಸೈನಿಕರು

    ಮೂವರು ಉಗ್ರರನ್ನು ಸದೆಬಡಿದ ಸೈನಿಕರು

    ಶ್ರೀನಗರ: ಉಗ್ರರು ಹಾಗೂ ಸೈನಿಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಷ್-ಇ-ಮೊಹಮ್ಮದ್ ಸಂಘಟನೆಯ ಉಗ್ರರನ್ನು ಭಾರತೀಯ ಸೇನೆ ಯೋಧರು ಹೊಡೆದುರುಳಿಸಿದ್ದಾರೆ.

    ಜಮ್ಮು ಕಾಶ್ಮೀರದ ಅವಂತಿಪೂರದ ನಾಗಬೀರನ್ ಟ್ರಾಲ್ ಅರಣ್ಯ ಪ್ರದೇಶದ ಮೇಲ್ಭಾಗ ಶನಿವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ಸೇನೆ ಹಾಗೂ ಪೊಲೀಸರ ಜಂಟಿ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹೈಪ್ರೊಫೈಲ್ ಸೆಕ್ಸ್ ದಂಧೆ ಬಯಲು – ವಾಟ್ಸಪ್ ನಲ್ಲಿಯೇ ರೇಟ್ ಫೈನಲ್

    ಜೈಷ್-ಇ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಸದೆಬಡಿಯಲಾಗಿದ್ದು, ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

    ಶುಕ್ರವಾರ ನಡೆದ ಗುಂಡಿನ ಚಕಮಕಿ ವೇಳೆ ಸಹ ಇಬ್ಬರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೆಡೆಮುರಿ ಕಟ್ಟಿದ್ದರು. ಅವಂತಿಪುರದ ಪಂಪೂರ್ ನಲ್ಲಿ ನಡೆದ ಘಟನೆಯಲ್ಲಿ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳು ಸೇರಿದಂತೆ ದಾಳಿ ಮಾಡುವ ವಸ್ತುಗೋಳನ್ನು ವಶಪಡಿಸಿಕೊಂಡಿದ್ದರು.

  • ಪೊಲೀಸ್, ಯೋಧರ ಮೇಲೆ ಉಗ್ರರ ದಾಳಿ – ಇಬ್ಬರಿಗೆ ಗಾಯ

    ಪೊಲೀಸ್, ಯೋಧರ ಮೇಲೆ ಉಗ್ರರ ದಾಳಿ – ಇಬ್ಬರಿಗೆ ಗಾಯ

    ಶ್ರೀನಗರ: ಇಂದು ಶ್ರೀನಗರದಲ್ಲಿ ಪೊಲೀಸ್ ಮತ್ತು ಯೋಧರ ಮೇಲೆ ಉಗ್ರರು ದಾಳಿ ಮಾಡಿದ್ದು, ಓರ್ವ ಪೊಲೀಸ್ ಮತ್ತು ಒಬ್ಬ ನಾಗರಿಕನಿಗೆ ಗಾಯವಾಗಿದೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಶ್ರೀನರಗದ ಹವಾಲ್ ಪ್ರದೇಶದ ಸಜ್ಗರಿಪೊರಾದಲ್ಲಿ ಈ ಘಟನೆ ನಡೆದಿದೆ. ಉಗ್ರರ ದಾಳಿಯ ವೇಳೆ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೊತೆಗೆ ಭಯೋತ್ಪಾದಕರನ್ನು ಬಂಧಿಸಲು ಈ ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದರು.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಶ್ಮೀರ ಪೊಲೀಸರು, ಸಜ್ಗರಿಪೊರಾದ ಹವಾಲ್‍ನಲ್ಲಿ ಉಗ್ರರು ನಿರ್ದಾಕ್ಷಿಣ್ಯವಾಗಿ ಪೊಲೀಸರು ಮತ್ತು ಯೋಧರ ಮೇಲೆ ಗುಂಡು ಹಾರಿಸಿದರು. ಈ ವೇಳೆ ಪೊಲೀಸ್ ಸಿಬ್ಬಂದಿ ಫಾರೂಕ್ ಅಹ್ಮದ್ ಚೋಪನ್ ಮತ್ತು ಸ್ಥಳೀಯ ನಾಗರಿಕ ಮುನೀರ್ ಅಹ್ಮದ್ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಪೊಲೀಸ್ ಮತ್ತು ಸೈನಿಕರು ಪ್ರದೇಶವನ್ನು ಸುತ್ತವರಿದಿದ್ದಾರೆ ಎಂದು ತಿಳಿಸಿದೆ.

  • ರಾಷ್ಟ್ರ ರಾಜಧಾನಿಯಲ್ಲಿ ಮತ್ತಿಬ್ಬರು ಜೈಷ್ ಉಗ್ರರ ಬಂಧನ

    ರಾಷ್ಟ್ರ ರಾಜಧಾನಿಯಲ್ಲಿ ಮತ್ತಿಬ್ಬರು ಜೈಷ್ ಉಗ್ರರ ಬಂಧನ

    ನವದೆಹಲಿ: ಇಬ್ಬರು ಶಂಕಿತ ಜೈಷ್-ಎ-ಮೊಹಮ್ಮದ್ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ರಾತ್ರಿ ನಡೆಯಬೇಕಿದ್ದ ಬೃಹತ್ ದಾಳಿಯನ್ನು ವಿಫಲಗೊಳಿಸಿದ್ದಾರೆ. ದೆಹಲಿ ವಿಶೇಷ ಪೊಲೀಸ್ ಪಡೆ ಇಬ್ಬರು ಉಗ್ರರನ್ನು ಬಂಧಿಸಿದೆ.

    ದೆಹಲಿಯ ಸಾರೈ ಕೇಲ್ ಖಾನ್ ಬಳಿ ಸಿಕ್ಕಿಬಿದ್ದಿರುವ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

    ಈ ಕುರಿತು ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಸಾರೈ ಕೇಲ್ ಖಾನ್‍ನ ಮಿಲೇನಿಯಂ ಪಾರ್ಕ್ ಬಳಿ ಸೋಮವಾರ ರಾತ್ರಿ 10.15ರ ಸುಮಾರಿಗೆ ಬಂಧಿಸಲಾಗಿದೆ. ಇಬ್ಬರು ಉಗ್ರರು ಜಮ್ಮು ಕಾಶ್ಮೀರದ ಮೂಲದವರಾಗಿದ್ದು, ಬಂಧಿತರಿಂದ 2 ಸೆಮಿ-ಆಟೋಮೆಟಿಕ್ ಪಿಸ್ತೂಲು ಹಾಗೂ 10 ಜೀವಂತ ಕಾರ್ಟ್‍ರಿಡ್ಜ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಇಬ್ಬರು ಶಂಕಿತ ಜೈಷ್-ಎ-ಮೊಹಮ್ಮದ್ ಉಗ್ರರು ಜಮ್ಮು ಖಾಶ್ಮೀರದ ನಿವಾಸಿಗಳಾಗಿದ್ದು, ಬರಾಮುಲ್ಲಾದ ಪಾಲ ಮೊಹಲ್ಲಾ ನಿವಾಸಿ ಸನಾವುಲ್ಲಾ ಮಿರ್ ಪುತ್ರ 22 ವರ್ಷದ ಅಬ್ದುಲ್ ಲತಿಫ್, ಕುಪ್ವಾರಾದ ಹಾತ್‍ಮುಲ್ಲಾ ಗ್ರಾಮದ ಬಷೀರ್ ಅಹ್ಮದ್ ಪುತ್ರ ಅಶ್ರಫ್ ಖತನಾ(20) ಎಂದು ಗುರುತಿಸಲಾಗಿದೆ. ಇಬ್ಬರು ಉಗ್ರರು ಈ ಹಿಂದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ತೆರಳಲು ಯತ್ನಿಸಿದ್ದರು. ಇದನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು. ಹೀಗಾಗಿ ದೆಹಲಿಯಲ್ಲಿ ದಾಳಿ ನಡೆಸಿದ ಬಳಿಕ ನೇಪಾಳ ಮಾರ್ಗವಾಗಿ ಪಿಒಕೆಗೆ ತೆರಳಲು ಸಂಚು ರೂಪಿಸಿದ್ದರು.

    ಈ ನಡುವೆ ಆಗಸ್ಟ್‍ನಲ್ಲಿ ದೆಹಲಿ ಪೊಲೀಸರು ಇಸ್ಲಾಮಿಕ್ ಸ್ಟೇಟ್ ಉಗ್ರರನ್ನು ಬಂಧಿಸುವ ಮೂಲಕ ಇಂತಹದ್ದೇ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದ್ದರು. ಈ ವೇಳೆ ಧೌಲಾ ಕುವಾನ್ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದರು. ಬಂಧನದ ಬಳಿಕ 15 ಕೆ.ಜಿ. ಐಇಡಿಯನ್ನು ವಶಪಡಿಸಿಕೊಂಡಿದ್ದರು.

  • ಎಲ್‍ಓಸಿ ಬಳಿ 2 ಬಾರಿ ಗುಂಡಿನ ಚಕಮಕಿ – ಮೂವರು ಯೋಧರು ಹುತಾತ್ಮ, 3 ಉಗ್ರರು ಉಡೀಸ್

    ಎಲ್‍ಓಸಿ ಬಳಿ 2 ಬಾರಿ ಗುಂಡಿನ ಚಕಮಕಿ – ಮೂವರು ಯೋಧರು ಹುತಾತ್ಮ, 3 ಉಗ್ರರು ಉಡೀಸ್

    ಶ್ರೀನಗರ: ಗಡಿ ನಿಯಂತ್ರಣ ರೇಖೆಯ ಬಳಿ ಭಯೋತ್ಪಾದಕರು ಮತ್ತು ಭಾರತೀಯ ಯೋಧರ ನಡುವೆ ಎರಡು ಬಾರಿ ಗುಂಡಿನ ಚಕಮಕಿ ನಡೆದಿದ್ದು, ಈ ಘಟನೆಗಳಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಜೊತೆಗೆ ಯೋಧರ ಗುಂಡಿಗೆ ಮೂವರು ಉಗ್ರರು ಬಲಿಯಾಗಿದ್ದಾರೆ.

    ಕುಪ್ವಾರಾ ಜಿಲ್ಲೆಯ ಎಲ್‍ಓಸಿ ಬಳಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಆರ್ಮಿ ಆಫೀಸರ್ ಮತ್ತು ಒಬ್ಬರು ಬಿಎಸ್‍ಎಫ್ ಪೇದೆ ಸೇರಿದಂತೆ ಮೂವರು ಭಾರತೀಯ ಯೋಧರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ದಾಳಿಯಲ್ಲಿ ಮೂವರು ಉಗ್ರರನ್ನು ಯೋಧರು ಗುಂಡಿಕ್ಕಿ ಕೊಂದಿದ್ದಾರೆ.

    ಉತ್ತರ ಕಾಶ್ಮೀರದ ಮಚಿಲ್ ಸೆಕ್ಟರ್ ಬಳಿ ರಾತ್ರಿ ಒಂದು ಗಂಟೆಗೆ ಎಲ್‍ಓಸಿ ಬಳಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರು ಸ್ಥಳಕ್ಕೆ ಹೋದಾಗ ಗುಂಡಿನ ದಾಳಿ ಆರಂಭವಾಗಿದೆ. ಎರಡು ಗಂಟೆಗಳ ಕಾಲ ಗುಂಡಿನ ದಾಳಿ ನಡೆದಿದ್ದು, ಬಿಎಸ್‍ಎಫ್ ಪೇದೆ ಸುದೀಪ್ ಸರ್ಕಾರ್ ಹುತಾತ್ಮರಾಗಿದ್ದಾರೆ. ಜೊತೆಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.

    ಈ ವೇಳೆ ಸ್ಥಳಕ್ಕೆ ಹೆಚ್ಚುವರಿ ಯೋಧರು ಬಂದಿದ್ದು, ಕಾರ್ಯಚರಣೆ ಮಾಡಿದ್ದಾರೆ. ಆದರೆ ಬೆಳಗ್ಗೆ 10 ಗಂಟೆಗೆ ಮತ್ತೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಓರ್ವ ಆರ್ಮಿ ಆಫೀಸರ್ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಏಪ್ರಿಲ್‍ನಿಂದ ಇತ್ತೀಚೆಗೆ ನಡೆದ ಎನ್‍ಕೌಂಟರಿನಲ್ಲಿ ಇದು ಬಹುದೊಡ್ಡ ಕಾರ್ಯಚರಣೆ ಎಂದು ಆರ್ಮಿ ಅಧಿಕಾರಿಗಳು ತಿಳಿಸಿದ್ದಾರೆ.