Tag: Milk Producers Cooperative Society

  • ಸಕ್ಕರೆ ನಾಡಿನ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ- ಖರೀದಿ ದರ ಏರಿಕೆ

    ಸಕ್ಕರೆ ನಾಡಿನ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ- ಖರೀದಿ ದರ ಏರಿಕೆ

    ಮಂಡ್ಯ: ಹಾಲಿನ ಖರೀದಿ ದರವನ್ನು 3.50 ರೂಪಾಯಿ ಹೆಚ್ಚಳ ಮಾಡುವ ಮೂಲಕ ಹಾಲು ಉತ್ಪಾದಕರಿಗೆ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಹೊಸ ವರ್ಷದ ಕೊಡುಗೆ ನೀಡಿದೆ.

    ಒಕ್ಕೂಟದ 394ನೇ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದ್ದು, ಹಾಲು ಉತ್ಪಾದಕರಿಗೆ ಪ್ರಸ್ತುತ ಪ್ರತೀ ಲೀಟರ್‍ಗೆ 25 ರೂಪಾಯಿ ದೊರಕುತ್ತಿದೆ. ಆದರೆ ಈ ದರ ಜ. 1ರಿಂದ 28.50 ರೂಪಾಯಿಗೆ ಹೆಚ್ಚಳವಾಗಲಿದೆ. ಅಲ್ಲದೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಪ್ರತಿ ಲೀಟರ್ ಹಾಲಿಗೆ 29.40 ರೂ. ದೊರೆಯಲಿದೆ.

    ಈ ಹೆಚ್ಚುವರಿ ದರವು ಮಾರ್ಚ್ ತಿಂಗಳ ಅಂತ್ಯದವರೆಗೂ ಉತ್ಪಾದಕರಿಗೆ ನೀಡಲಾಗುವುದು. ಜೊತೆಗೆ ಒಕ್ಕೂಟದ ಪ್ರಗತಿಯ ದೃಷ್ಟಿಯಿಂದ ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಪೂರೈಕೆ ಮಾಡುವಂತೆ ಒಕ್ಕೂಟ ಮನವಿ ಮಾಡಿದೆ.

  • ಹಾಲು ಉತ್ಪಾದಕ ಸಹಕಾರ ಸಂಘದ ಕಾರ್ಯದರ್ಶಿಯಿಂದ ರೌಡಿಸಂ!

    ಹಾಲು ಉತ್ಪಾದಕ ಸಹಕಾರ ಸಂಘದ ಕಾರ್ಯದರ್ಶಿಯಿಂದ ರೌಡಿಸಂ!

    ಬೆಂಗಳೂರು: ರೆಸಾರ್ಟಿನಲ್ಲಿ ಕಾಂಗ್ರೆಸ್ ಶಾಸಕರ ಮಾರಾಮಾರಿ ಪ್ರಕರಣ ಮರೆಮಾಸುವ ಮುನ್ನವೇ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯೊಬ್ಬ ರೌಡಿಸಂ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

    ದೊಡ್ಡಬಳ್ಳಾಪುರ ತಾಲೂಕಿನ ಗಜ್ಜಗದಹಳ್ಳಿಯಲ್ಲಿ 3 ತಿಂಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಲು ಉತ್ಪಾದಕ ಸಹಕಾರ ಸಂಘದ ಕಾರ್ಯದರ್ಶಿ ಈರೇಗೌಡ, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ಆಗಿದ್ದೇನು?:
    ಗಜ್ಜಗದಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 9 ಸಾವಿರ ಅವ್ಯವಹಾರ ನಡೆದಿದೆ ಎಂದು ಸದಸ್ಯರು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಆರೋಪಿಸಿದ್ದರು. ಈ ವಿಚಾರವಾಗಿ ಮಾತಿನ ಚಕಮಕಿ ನಡೆದಿದ್ದರಿಂದ ಕೋಪಗೊಂಡ ಕಾರ್ಯದರ್ಶಿ ಈರೇಗೌಡ ತನ್ನ ಮನೆಗೆ ತೆರಳಿದ್ದಾನೆ. ಸ್ವಲ್ಪ ಸಮಯದ ಬಳಿಕ ಲಾಂಗ್ ಹಿಡಿದುಕೊಂಡು ಸಂಘದ ಕಚೇರಿಗೆ ವಾಪಾಸ್ ಬಂದ ಈರೇಗೌಡ, ತನ್ನ ವಿರುದ್ಧ ದೂರಿದ ಸದಸ್ಯರು ಹಾಗೂ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಮಧ್ಯ ಪ್ರವೇಶಿಸಿದ ಕೆಲವರು ಹಲ್ಲೆಯನ್ನು ತಡೆದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv