Tag: Minister araga jnanendra

  • ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ ಮೊಕದ್ದಮೆ ದಾಖಲು: ಆರಗ ಜ್ಞಾನೇಂದ್ರ ಸಮರ್ಥನೆ

    ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ ಮೊಕದ್ದಮೆ ದಾಖಲು: ಆರಗ ಜ್ಞಾನೇಂದ್ರ ಸಮರ್ಥನೆ

    ಬೆಂಗಳೂರು: ಕೊರೊನಾ ಸೋಂಕಿನ ನಡುವೆಯೂ ಪಾದಯಾತ್ರೆ ಕೈಗೊಳ್ಳುವುದರ ಮೂಲಕ ಕಾಂಗ್ರೆಸ್ ನಾಯಕರು ಜನರ ಬದುಕಿನ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೊನಾ ನಿಯಂತ್ರಣ ಕಾಯಿದೆಯನ್ನು ಉಲ್ಲಂಘಸಿದವರ ವಿರುದ್ಧ, ರಾಮನಗರ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ. ಕಾಂಗ್ರೆಸ್ ನಾಯಕರ ಉದ್ದೇಶ ನೀರಿನ ಮೇಲೆ ರಾಜಕೀಯ ಮಾಡುವುದು. ಆದರೆ ನಮ್ಮ ಕಾಳಜಿ ಸಾರ್ವಜನಿಕರ ಆರೋಗ್ಯ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮ ಅಗತ್ಯ: ಬಸವರಾಜ ಬೊಮ್ಮಾಯಿ

    ಕೊರೊನಾ ಸೋಂಕು ಉಲ್ಬಣಗೊಂಡು ಜನತೆ ಸಂಕಷ್ಟಕ್ಕೆ ಒಳಗಾದರೆ, ಕಾಂಗ್ರೆಸ್ ನಾಯಕರು ಹೊಣೆ ಹೊರಬೇಕಾದೀತು ಎಂದು ಎಚ್ಚರಿಸಿದ ಸಚಿವರು, ಕಾಂಗ್ರೆಸ್ ನಡೆಗೆ ನಾಡಿನ ಜನತೆಯೂ ಅಸಮಾಧಾನಗೊಂಡಿದ್ದಾರೆ. ಕಾಂಗ್ರೆಸ್ ನಾಯಕರ ನಡವಳಿಕೆ ಅತ್ಯಂತ ಹೊಣೆಗೇಡಿತನ ಕಿಡಿಕಾರಿದ್ದಾರೆ.

    ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಜಿಲ್ಲಾಡಳಿತ ನಿಭಾಯಿಸುತ್ತಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವರು ನ್ಯಾಯಾಲಯದಲ್ಲಿ ಉತ್ತರಿಸಲಿ ಎಂದಿದ್ದಾರೆ. ಇದನ್ನೂ ಓದಿ: ತಲೆ ಕೆಡಿಸಿಕೊಳ್ಳಬೇಡಾ, ನಾಳೆ ನಾನು ಜಾಯಿನ್ ಆಗ್ತೀನಿ: ಡಿಕೆಶಿ ಜೊತೆ ಸಿದ್ದು ಫೋನ್ ಟಾಕ್

    ಮೇಕೆದಾಟು ಯೋಜನೆ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ವಹಿಸಿದ್ದರು. ಈಗ ಮುಂದಿನ ಚುನಾವಣೆ ದೃಷ್ಟಿಯಿಂದ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ನಮ್ಮ ಸರ್ಕಾರ ಬದ್ಧ. ಈ ವಿಚಾರದಲ್ಲಿ ಯಾವುದೇ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

    ಕೊರೊನಾ ನಿಬಂಧನೆಗಳನ್ನು ಪಾಲಿಸುವುದಿಲ್ಲ. ಬೇಕಾದರೆ ಜೈಲಿಗೆ ಹಾಕಿ ಎಂದು ಸವಾಲು ಎಸೆದಿದ್ದಾರೆ. ಇದು ಕಾಂಗ್ರೆಸ್‌ನವರ ಉದ್ಧಟತನವನ್ನು ತೋರಿಸುತ್ತದೆ. ಕಾಂಗ್ರೆಸ್ ನಾಯಕರ ಬಗ್ಗೆ ಜನಸಾಮಾನ್ಯರು ಜಿಗುಪ್ಸೆಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಿಕೆಶಿ, ಸಿದ್ದು ಸೇರಿ 30 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

  • ನುಡಿದಂತೆ ನಡೆದ ಜಗ್ಗೇಶ್- 1 ಲಕ್ಷ ರೂ. ಚೆಕ್ ಹಸ್ತಾಂತರ

    ನುಡಿದಂತೆ ನಡೆದ ಜಗ್ಗೇಶ್- 1 ಲಕ್ಷ ರೂ. ಚೆಕ್ ಹಸ್ತಾಂತರ

    ಬೆಂಗಳೂರು: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತಕ್ಷಣವೇ ಪೊಲೀಸರಿಗೆ ಮೆಚ್ಚುಗೆ ವ್ಯಕ್ತಪಡಿಸಿ ನಟ ಜಗ್ಗೇಶ್ ಬಹುಮಾನ ಘೋಷಿಸಿದ್ದರು. ಇದರ ಬೆನ್ನಲ್ಲೇ ಇದೀಗ ಪತ್ನಿ ಸಮೇತರಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಚೆಕ್ ನೀಡಿದ್ದಾರೆ.

    ಪತ್ನಿ ಸಮೇತರಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿದ ನಟ ಜಗ್ಗೇಶ್, ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ವೈಯಕ್ತಿಕವಾಗಿ 1 ಲಕ್ಷ ರೂ.ಗಳ ಚೆಕ್ ನೀಡಿದ್ದಾರೆ.

    ಪರಿಹಾರ ಘೋಷಿಸಿ ಟ್ವೀಟ್ ಮಾಡಿದ್ದ ಜಗ್ಗೇಶ್, ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಕಾಮ ಪಿಪಾಸುಗಳನ್ನು ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ವೈಯಕ್ತಿಕ ಅಭಿನಂದನೆಗಳು. ಐ ಆ್ಯಮ್ ಪ್ರೌಡ್ ಆಫ್ ಮೈ ಸ್ಟೇಟ್ ಪೊಲೀಸ್, ಪ್ರಕರಣ ಬೇಧಿಸಿದ ನಲ್ಮೆಯ ಪೋಲಿಸರಿಗೆ ನನ್ನ ಕಡೆಯಿಂದ 1 ಲಕ್ಷ ರೂ. ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೇ ಮುಂದುವರಿಯಲಿ, ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲಿಸ್ ಎಂದು ಬರೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಅತ್ಯಾಚಾರ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರಿಗೆ ಬಹುಮಾನ ಘೋಷಿಸಿದ ಜಗ್ಗೇಶ್

    ಪ್ರಕರಣದ ಬಗ್ಗೆ ಈ ಹಿಂದೆ ಸಹ ಆಕ್ರೋಶ ವ್ಯಕ್ತಪಡಿಸಿದ್ದ ಜಗ್ಗೇಶ್, ಎಂಥ ಕ್ರೂರಿಗಳು, ತಾಯಿ ಹೆಣ್ಣಲ್ಲವೆ? ಅಕ್ಕ, ತಂಗಿ ಹೆಣ್ಣಲ್ಲವೆ? ಮಡದಿ ಹೆಣ್ಣಲ್ಲವೆ? ಹೆಣ್ಣು ಗೌರವಿಸದವರು ರಕ್ಕಸರು, ಈ ಕೃತ್ಯ ಎಸಗಿದ ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು. ಈ ಕ್ರೂರ ಕೃತ್ಯಕ್ಕೆ ಖಂಡನೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದರು.

    ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ತನಿಖೆ ನಡೆಸಿ ಆರೋಪಿಗಳ ಹಡೆಮುರಿ ಕಟ್ಟಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

    ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಸ್ಥಳದಲ್ಲಿ ಸಿಕ್ಕ ಬಿಯರ್ ಬಾಟ್ಲಿ, ತಳವಾಡಿಯ ಬಸ್ ಟಿಕೆಟ್ ಮತ್ತು ಯುವಕನ ಹೇಳಿಕೆ ಆಧರಿಸಿ ತನಿಖೆ ನಡೆಸಿದ್ದರು. ಘಟನೆ ನಡೆಯುವ ಮೂರು ದಿನಗಳ ಮುಂಚೆ ಮತ್ತು ಒಂದು ದಿನದ ಹಿಂದೆ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಘಟನಾ ಸ್ಥಳಕ್ಕೆ ಬಂದಿರುವುದನ್ನು ಕಾಮಕರು ಫಾಲೋ ಮಾಡಿದ್ದರು. ಘಟನೆ ನಡೆದ ದಿನದಿಂದ ಕಾಮುಕರು ಎಸ್ಕೇಪ್ ಆಗಿದ್ದರು, ಪೊಲೀಸರು ತನಿಖೆ ಮುಂದುವರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.