Tag: minister Bandeppa Kashempur

  • ನಾಲಾಯಕ್ ಸರ್ಕಾರ ಎಂದ ಖೂಬಾ – ಸಚಿವರ, ಸಂಸದರ ನಡುವೆ ತೀವ್ರ ವಾಗ್ವಾದ

    ನಾಲಾಯಕ್ ಸರ್ಕಾರ ಎಂದ ಖೂಬಾ – ಸಚಿವರ, ಸಂಸದರ ನಡುವೆ ತೀವ್ರ ವಾಗ್ವಾದ

    ಬೀದರ್: ನಗರದಲ್ಲಿ ನಡೆದ ಕೆಡಿಪಿ ಸಭೆಯ ವೇದಿಕೆ ಮೇಲೆ ಸಂಸದ ಸಂಸದ ಭಗವಂತ ಖೂಬಾ ಅವರು ನೀರು ಕೊಡಿಸಲಾಗ ನಾಲಾಯಕ್ ಸರ್ಕಾರ ಎಂದು ಹೇಳಿಕೆ ನೀಡಿದ್ದು, ಈ ವೇಳೆ ಸಚಿವ ಬಂಡೆಪ್ಪ ಕಾಶೆಂಪೂರ್ ಹಾಗೂ ಸಂಸದರ ಮಧ್ಯೆ ತೀವ್ರ ವಾಗ್ದಾಳಿಗೆ ಕಾರಣವಾಯಿತು.

    ಇಂದು ಬೀದರ್ ನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಸಭೆಯಲ್ಲಿ ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಸಂಸದ ಭಗವಂತ ಖೂಬಾ ಅವರು ಸಭೆ ನಡೆಸಿ ಮಾತನಾಡಿದರು. ಈ ವೇಳೆ ಅಧಿಕಾರಿಗಳು ನಗರದ ಹಲವೆಡೆ ನೀರಿನ ಸಮಸ್ಯೆ ಇದೆ ಎಂದು ಹೇಳಿದರು. ಈ ಮಾತಿಗೆ ಪ್ರತಿಕ್ರಿಯೆ ನೀಡಿದ ಸಂಸದರು ಹಾಗಾದರೆ ಸರ್ಕಾರದ ನಾಲಾಯಕ್ ಇದೆಯಾ ಎಂದು ಹೇಳಿದರು…. ಈ ಹೇಳಿಕೆಯಿಂದ ಕೆರಳಿದ ಸಚಿವ ಬಂಡೆಪ್ಪ ಖಾಶೆಂಪೂರ್ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ ಎಂದು ಸಂಸದರ ವಿರುದ್ಧ ಗರಂ ಆದರು. ಆ ಬಳಿಕ ತಾನು ಅಧಿಕಾರಿಗೆ ಈ ರೀತಿ ಹೇಳಿದ್ದಾಗಿ ಸಂಸದರು ಸಮಜಾಯಿಸಿ ನೀಡಿದರು.

    ಸಭೆ ಬಳಿಕ ಮಾಧ್ಯಮಗಳಿಗೆ ಗ್ರಾಮ ವಾಸ್ತವ್ಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಈಗಾಗಲೆ ಸಿಎಂ ಜೊತೆ ಮಾತನಾಡಿದ್ದು ಜಿಲ್ಲೆಯ ಗಡಿ ಭಾಗದ ಎರಡು ಗ್ರಾಮಗಳಲ್ಲಿ ವಾಸ್ತವ್ಯ ಮಾಡುವ ಪ್ಲಾನ್ ಇದೆ ಎಂದರು. ಈ ಹಿಂದೆ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ನಡೆಸಿದ್ದ ವೇಳೆ ಸಿಎಂ ಕುಮಾರಸ್ವಾಮಿ ಅವರು ಬೀದರ್ ನಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದರು. ಅಂದು ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಿಕಣಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು.

  • ಸಿಎಂ ಪರ ರೈತರಲ್ಲಿ ಕ್ಷಮೆ ಕೇಳಿದ ಸಚಿವ ಬಂಡೆಪ್ಪ ಕಾಶೆಂಪುರ್

    ಸಿಎಂ ಪರ ರೈತರಲ್ಲಿ ಕ್ಷಮೆ ಕೇಳಿದ ಸಚಿವ ಬಂಡೆಪ್ಪ ಕಾಶೆಂಪುರ್

    ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ನಿರತ ರೈತರಲ್ಲಿ ಕ್ಷಮೆ ಕೇಳಿದ್ದಾರೆ.

    ಕ್ಷಮೆ ಕೇಳಿ ಮಾತನಾಡಿದ ಅವರು, ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಶೀಘ್ರದಲ್ಲೇ ಸಭೆ ಕರೆಯಲಾಗುತ್ತದೆ. ಕೊಡಗು ಸಂತ್ರಸ್ತ ರೈತರು, ಬರಗಾಲ ಪೀಡಿದ ಪ್ರದೇಶದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ಈ ಸಂಬಂಧ ರೈತ ಮುಖಂಡರ ಜೊತೆಗೆ ಪ್ರತ್ಯೇಕ ಸಭೆ ನಡೆಸುವಂತೆ ಕುಮಾರಸ್ವಾಮಿ ಅವರಿಗೆ ಕೇಳಿಕೊಂಡಿದ್ದೇನೆ ಎಂದು ಹೇಳಿದರು.

    ನಮ್ಮ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಬದ್ಧವಾಗಿದೆ. ರಾಷ್ಟ್ರೀಯ ಬ್ಯಾಂಕ್‍ಗಳ ಸಾಲ ಮನ್ನಾ ಮಾಡುತ್ತೇವೆ ಅಂತ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇವತ್ತು ಸರ್ಕಾರ ಒಳ್ಳೆಯ ರೀತಿ ನಡೆಯುತ್ತಿದೆ. ಹಂತ ಹಂತವಾಗಿ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಸಚಿವರು ತಿಳಿಸಿದರು.

    ಬೆಳಗಾವಿಯಲ್ಲಿ ಪ್ರತಿಭಟನಾ ನಿರತ ಮಹಿಳೆಗೆ ತಾಯಿ ಅಂತಾ ಕರೆದಿದ್ದಾರೆ. ಯಾವುದೇ ರೀತಿಯ ನಿಂದನೆ ಮಾಡಿಲ್ಲ. ಉದ್ದೇಶ ಪೂರ್ವಕವಾಗಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ ಸಚಿವರು, ರೈತರ 36 ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಪಡೆದರು. ಇತ್ತ ರೈತರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಬಂದು ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬ್ರೀಮ್ಸ್ ಅವ್ಯವಸ್ಥೆ ನೋಡಿ ನಿರ್ದೇಶಕರನ್ನ ತರಾಟೆ ತಗೆದುಕೊಂಡ ಬಂಡೆಪ್ಪ ಖಾಶೆಂಪೂರ್

    ಬ್ರೀಮ್ಸ್ ಅವ್ಯವಸ್ಥೆ ನೋಡಿ ನಿರ್ದೇಶಕರನ್ನ ತರಾಟೆ ತಗೆದುಕೊಂಡ ಬಂಡೆಪ್ಪ ಖಾಶೆಂಪೂರ್

    ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್ ಇಂದು ಬ್ರೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಅಲ್ಲಿನ ಅವ್ಯವಸ್ಥೆ ಕಂಡು ಬ್ರೀಮ್ಸ್ ನಿರ್ದೇಶಕ ಡಾ. ಚನ್ನಣ್ಣನವರ ಅವರನ್ನು ತರಾಟೆಗೆ ತಗೆದುಕೊಂಡಿದ್ದಾರೆ.

    ಆಸ್ಪತ್ರೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಹಾಗೂ ಅವ್ಯವಸ್ಥಿತೆಯಿಂದ ರೋಗಿಗಳು ಪರದಾಡುವಂತಾಗಿದೆ ಎಂದು ಸ್ಥಳೀಯರು ಸಚಿವರಿಗೆ ದೂರು ನೀಡಿದ್ದರು. ಹೀಗಾಗಿ ಇಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವಪ್ಪ ನೇತೃತ್ವದಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಬೆಡ್‍ಗಳ ಮೇಲೆ ದೂಳು ಇರುವುದು, ಸ್ವಚ್ಛತೆ ಇಲ್ಲದಿರುವುದು, ಬೆಳಕಿನ ಅಭಾವ ಕಂಡು ಅಧಿಕಾರಿಗಳ ವಿರುದ್ಧ ಗರಂ ಆದರು.

    ನಿಮ್ಮ ಮನೆಯ ಕೆಲಸಗಾರರು ಸರಿಯಾಗಿ ಕೆಲಸ ಮಾಡದಿದ್ದರೆ ನೀವು ಸುಮ್ಮನೆ ಇರುತ್ತಿರಾ? ಆಸ್ಪತ್ರೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ನಿಮಗೇನು ತೊಂದರೆ? ನಿಮ್ಮ ನಿಷ್ಕಾಳಜಿ ರೋಗಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ನಿಮ್ಮ ಸಮಸ್ಯೆ ಏನು ಅಂತಾ ಹೇಳಿ ಎಂದು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

    ಸ್ವಚ್ಛತೆ ಕಾಪಾಡಲು ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ನಿಮಗೆ ಏನು ಸವಲತ್ತು ಬೇಕು ಹೇಳಿ, ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ನಿಮಗೆ ಅನುಕೂಲ ಮಾಡಿಕೊಡುತ್ತೇನೆ. ಸಹಾಯ ಮಾಡಲಾಗುತ್ತದೆ ಅಂತಾ ನಾನೇ ಪತ್ರದಲ್ಲಿ ಬರೆದುಕೊಡಬೇಕೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv