Tag: Minister Gopalaiah

  • ಬಿಟ್ ಕಾಯಿನ್ ವಿಚಾರದಲ್ಲಿ ಬಿಜೆಪಿಗರ ಪಾತ್ರ ಬಹಿರಂಗಪಡಿಸಿ – ಕಾಂಗ್ರೆಸ್‍ಗೆ ಗೋಪಾಲಯ್ಯ ಸವಾಲು

    ಬಿಟ್ ಕಾಯಿನ್ ವಿಚಾರದಲ್ಲಿ ಬಿಜೆಪಿಗರ ಪಾತ್ರ ಬಹಿರಂಗಪಡಿಸಿ – ಕಾಂಗ್ರೆಸ್‍ಗೆ ಗೋಪಾಲಯ್ಯ ಸವಾಲು

    ಹಾಸನ: ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿಯ ಯಾವ ಶಾಸಕರು ಮತ್ತು ಸಚಿವರು ಭಾಗಿಯಾಗಿದ್ದಾರೆ ಎನ್ನುವುದನ್ನು ಕಾಂಗ್ರೆಸ್ ನಾಯಕರು ಬಹಿರಂಗಪಡಿಸಬೇಕೆಂದು ಹಾಸನ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಸವಾಲು ಹಾಕಿದ್ದಾರೆ.

    ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿತ್ತು. ಇದು ಕಾಂಗ್ರೆಸ್‍ನವರ ಪಾಪದ ಕೂಸು. ಇಚ್ಛಾಶಕ್ತಿ ಇದ್ದಿದ್ದರೆ ಅವರೇ ಹಗರಣದ ಸೂತ್ರದಾರಿಗಳನ್ನು ಬಲಿ ಹಾಕಬಹುದಿತ್ತು ಎಂದರು. ಇದನ್ನೂ ಓದಿ: ಥ್ರೋಬಾಲ್ ಆಡಿ ಗಮನಸೆಳೆದ ನಟಿ ರೋಜಾ

    Gopalaiah

    ಈ ಹಗರಣವನ್ನು ಯಾವ ತನಿಖೆಗೆ ವಹಿಸಬೇಕೆನ್ನುವುದನ್ನು ರಾಜ್ಯ ಸರ್ಕಾರ ಶೀಘ್ರವೇ ನಿರ್ಧಾರ ಮಾಡಲಿದೆ. ಈಗಾಗಲೇ ಬಿಟ್ ಕಾಯಿನ್ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಇಡಿ ಮತ್ತು ಆದಾಯ ತೆರಿಗೆ ಇಲಾಖೆಯ ಗಮನಕ್ಕೂ ತಂದಿದ್ದಾರೆ. ಶೀಘ್ರದಲ್ಲಿ ಯಾವ ತನಿಖಾ ಸಂಸ್ಥೆಗೆ ಇದರ ತನಿಖಾ ಜವಾಬ್ದಾರಿ ವಹಿಸಬೇಕೆನ್ನುವುದನ್ನು ನಿರ್ಧರಿಸಲಿದೆ ಎಂದು ಹೇಳಿದರು.

    bommai

    ಪರಿಷತ್ ಚುನಾವಣಾ ಮತ್ತು ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸದಾನಂದ ಗೌಡ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಸೇರಿದಂತೆ ಪ್ರಮುಖರನ್ನು ಒಳಗೊಂಡ ನಾಲ್ಕು ತಂಡಗಳನ್ನು ಮಾಡಲಾಗಿದ್ದು, ರಾಜ್ಯಾದ್ಯಂತ ಪ್ರವಾಸ ನಡೆಸಲಾಗುವುದು ಎಂದು ನುಡಿದರು. ಇದನ್ನೂ ಓದಿ: ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ನಿರ್ಬಂಧ: ಗುಜರಾತ್‌ ಸಿಎಂ ಸಮರ್ಥನೆ

    nalin kumar kateel

    ಜಗದೀಶ್ ಶೆಟ್ಟರ್ ನೇತೃತ್ವದ ನಮ್ಮ ತಂಡ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದರು.

    ಇದೇ ವೇಳೆ ಹಾಸನ ಜಿಲ್ಲೆಯಲ್ಲಿ ತೀವ್ರವಾದ ಮಳೆಯಿಂದ ಆಗಿರುವ ಕಾಫಿ ಮತ್ತು ಇತರೆ ಬೆಳೆಗಳ ನಷ್ಟದ ಕುರಿತ ಮುಖ್ಯಮಂತ್ರಿಗಳು, ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು. ಕಾಡಾನೆ ಹಾವಳಿತಡೆಗೂ ಆದ್ಯ ಗಮನ ಹರಿಸಲಾಗುವುದು ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

    ಪರಿಷತ್ ಚುನಾವಣೆಯನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ನಾಲ್ಕೈದು ಅಭ್ಯರ್ಥಿಗಳ ಹೆಸರು ಹೋಗಿದೆ. ರಾಜ್ಯ ಕೋರ್ ಕಮಿಟಿ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಿದೆ. ಹಾಸನ ಜಿಲ್ಲೆಯಲ್ಲಿ ಪಕ್ಷ ಬಲಿಷ್ಠವಾಗಿದ್ದು, ಚುನಾವಣೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದರು.

  • ನೀವು ಹೇಳಿದಂತೆಯೇ ಎಲ್ಲವನ್ನೂ ಮಾಡಿದ್ದೀನಿ, ನೀವು ಏನು ಮಾಡಿದ್ರಿ ಹೇಳಿ?: ಸಚಿವ ಗೋಪಾಲಯ್ಯ

    ನೀವು ಹೇಳಿದಂತೆಯೇ ಎಲ್ಲವನ್ನೂ ಮಾಡಿದ್ದೀನಿ, ನೀವು ಏನು ಮಾಡಿದ್ರಿ ಹೇಳಿ?: ಸಚಿವ ಗೋಪಾಲಯ್ಯ

    ಹಾಸನ: ನೀವು ಹೇಳಿದಂತೆಯೇ ಎಲ್ಲವನ್ನೂ ಮಾಡಿದ್ದೀನಿ, ನೀವು ಏನು ಮಾಡಿದ್ರಿ ಹೇಳಿ ಎಂದು ಸಚಿವ ಕೆ.ಗೋಪಾಲಯ್ಯ ಚನ್ನರಾಯಪಟ್ಟಣದಲ್ಲಿ ಕಾರ್ಯಕರ್ತರ ಮೇಲೆ ಅಸಮಾಧಾನ ಹೊರಹಾಕಿದರು.

    ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ವಾಗತಕ್ಕಾಗಿ ಕಾದು ಕುಳಿದಿದ್ದಾಗ ಸಚಿವರ ಸುತ್ತುವರಿದ ಕಾರ್ಯಕರ್ತರು, ನಮ್ಮ ಕೆಲಸ ಆಗುತ್ತಿಲ್ಲ. ಹೀಗಾದ್ರೆ ನಮ್ಮ ಪಕ್ಷಕ್ಕೆ ಜನ ಹೇಗೆ ವೋಟ್ ಹಾಕ್ತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾರ್ಯಕರ್ತರ ಮಾತಿಗೆ ಸಿಟ್ಟಿಗೆದ್ದ ಸಚಿವ ಗೋಪಾಲಯ್ಯ, ನೀವು ಹೇಳಿದಂತೆಯೇ ಎಲ್ಲವನ್ನೂ ಮಾಡಿದ್ದೀನಿ ನೀವು ಏನು ಮಾಡಿದ್ರಿ ಹೇಳಿ ಎಂದು ಕಾರ್ಯಕರ್ತರ ವಿರುದ್ಧ ಸಿಟ್ಟಾಗಿದ್ದಾರೆ.

    ಈ ವೇಳೆ ಕಾರ್ಯಕರ್ತರು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಆಗಬೇಕು. ನಮ್ಮ ಕಾರ್ಯಕರ್ತರ ಕೆಲಸ ಆಗಬೇಕು ಎಂದು ಸಚಿವರಿಗೆ ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಸಚಿವರು ನಾಳೆ ಮತ್ತೆ ಬರ್ತೀನಿ. ಅದೇನು ಮಾಡಬೇಕು ಹೇಳಿ ಎಂದು ಎಲ್ಲರನ್ನು ಸಮಾಧಾನಪಡಿಸಿದರು. ಇದನ್ನೂ ಓದಿ: 75 ಸಾವಿರದ ಚೆರ್ರಿ ರೆಡ್ ಘರಾರಾ ಡ್ರೆಸ್‍ನಲ್ಲಿ ಮಿಂಚಿದ ಚಂದ್ರಮುಖಿ

  • ಮಧ್ಯಾಹ್ನ ಹಾಸನ ಲಾಕ್‍ಡೌನ್ ಅಂದ್ರು, ಸಂಜೆಗೆ ಆದೇಶ ವಾಪಸ್ ಪಡೆದ್ರು

    ಮಧ್ಯಾಹ್ನ ಹಾಸನ ಲಾಕ್‍ಡೌನ್ ಅಂದ್ರು, ಸಂಜೆಗೆ ಆದೇಶ ವಾಪಸ್ ಪಡೆದ್ರು

    ಹಾಸನ: ಜಿಲ್ಲೆಯಲ್ಲಿ ಲಾಕ್‍ಡೌನ್ ಆದೇಶ ವಾಪಸ್ ಪಡೆದಿರುವುದಾಗಿ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.

    ಈ ಬಗ್ಗೆ ಮಾತನಾಡಿದ ಅವರು ಲಾಕ್‍ಡೌನ್‍ನನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದೇವೆ. ಕೇಂದ್ರ ಮತ್ತು ರಾಜ್ಯದಿಂದ ನಿರ್ದೇಶನ ಬರುವವರೆಗೂ ಹಿಂದಿನ ರೀತಿ ಮುಂದುವರಿಯಲಿದೆ. ಮಧ್ಯಾಹ್ನ ತೆಗೆದುಕೊಂಡ ನಿರ್ಧಾರ ವಾಪಸ್ ತೆಗೆದುಕೊಂಡಿದ್ದು, ಇದುವರೆಗು ಯಾವ ರೀತಿಯ ಜನತಾ ಕಫ್ರ್ಯೂ ಇತ್ತೋ ಅದು ಎಂದಿನಂತೆ ಹಾಸನದಲ್ಲಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

    ಏನದು ಆದೇಶ?: ಸೋಮವಾರ, ಬುಧವಾರ ಹಾಗೂ ಶುಕ್ರವಾರ ಮಾತ್ರ ಬೆ.6 ರಿಂದ 10 ರವರೆಗೆ ಅಗತ್ಯ ವಸ್ತುಗಳು ಖರೀದಿಗೆ ಅವಕಾಶ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಬಾರ್ ಗಳಿಗೂ ಅದೇ ದಿನಗಳು ಮಾತ್ರ ನಿಗದಿತ ಸಮಯ ತೆರೆಯಬೇಕು. ಆನಂತರ ಸಂಪೂರ್ಣ ಲಾಕ್‍ಡೌನ್ ಮಾಡಲು ಸೂಚಿಸಲಾಗಿತ್ತು. ಉಳಿದ ನಾಲ್ಕು ದಿನಗಳು ಹಾಲಿನ ಡೈರಿ, ಆಸ್ಪತ್ರೆಗಳು, ನರ್ಸಿಂಗ್ ಹೋಂ, ಮೆಡಿಕಲ್ ಶಾಪ್ ಗಳನ್ನು ಬಿಟ್ಟು ಉಳಿದೆಲ್ಲವೂ ಸಂಪೂರ್ಣ ಬಂದ್ ಮಾಡುವಂತೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಆದೇಶ ನೀಡಿದ್ದರು.

  • ಕೆಲ ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಗಲಭೆ ಮಾಡ್ತಿವೆ: ಸಚಿವ ಗೋಪಾಲಯ್ಯ

    ಕೆಲ ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಗಲಭೆ ಮಾಡ್ತಿವೆ: ಸಚಿವ ಗೋಪಾಲಯ್ಯ

    ಹಾಸನ: ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

    ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗಡದುಕೊಂಡು ಶಾಂತಿಯುತವಾಗಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿಲ್ಲ. ಗೃಹಸಚಿವರಿಗೆ ದಕ್ಷತೆಯಿದ್ದು ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ನಾನು ಬೆಳಗ್ಗೆಯೇ ಬೆಂಗಳೂರಿನಿಂದ ಬಂದಿದ್ದೇನೆ. ಮಾಧ್ಯಮದಲ್ಲಿ ನೋಡಿ ನನಗೆ ವಿಷಯ ತಿಳಿಯಿತು. ಘಟನೆ ಹಿಂದೆ ಎಸ್‍ಡಿಪಿಐ ಸದಸ್ಯನ ಕೈವಾಡ ಇರುವ ಬಗ್ಗೆ ಗೃಹ ಸಚಿವರು ಮಾಹಿತಿ ನೀಡುತ್ತಾರೆ. ಆದರೆ ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು. ಇದನ್ನೂ ಓದಿ: ದುಷ್ಕರ್ಮಿಗಳ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆ – ಭಯದಿಂದ ಬಾತ್‍ರೂಮಿನಲ್ಲಿ 3 ಗಂಟೆ ಬಚ್ಚಿಟ್ಟುಕೊಂಡಿದ್ದ ಕುಟುಂಬ

    ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಸಮುದಾಯದ ಮೇಲೆ ಗಲಾಟೆ ಆಗಿಲ್ಲ. ಕೆಲವು ದುಷ್ಟ ಶಕ್ತಿಗಳು ಸರ್ಕಾಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ. ಪರಿಸ್ಥಿತಿಯನ್ನು ಸಮರ್ಥವಾಗಿ ಗೃಹ ಸಚಿವರು ನಿಭಾಯಿಸುತ್ತಾರೆ. ಸರ್ಕಾರ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ದುಷ್ಟ ಶಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ. ಇದನ್ನೂ ಓದಿ:  ಬೆಂಕಿ ಹಚ್ಚೋದು ನಮ್ಮ ಸಂಸ್ಕೃತಿಯಲ್ಲ, ನೆಲದ ಕಾನೂನೇ ಅಂತಿಮ: ಖಾದರ್

  • ಮುಂಬೈಯಿಂದ ಬಂದವರನ್ನು ಹೆಚ್ಚು ದಿನ ಕ್ವಾರಂಟೈನ್ ಮಾಡಲು ಸಿಎಂ ಗಮನಕ್ಕೆ ತರುತ್ತೇವೆ: ಸಚಿವ ಗೋಪಾಲಯ್ಯ

    ಮುಂಬೈಯಿಂದ ಬಂದವರನ್ನು ಹೆಚ್ಚು ದಿನ ಕ್ವಾರಂಟೈನ್ ಮಾಡಲು ಸಿಎಂ ಗಮನಕ್ಕೆ ತರುತ್ತೇವೆ: ಸಚಿವ ಗೋಪಾಲಯ್ಯ

    ಹಾಸನ: ಬಾಂಬೆಯಿಂದ ಬಂದವರನ್ನು ಹೆಚ್ಚು ದಿನ ಕ್ವಾರಂಟೈನ್ ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.

    ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಹೊರರಾಜ್ಯದಿಂದ ಬಂದವರ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಮುಂಬೈಯಿಂದ ಬಂದವರನ್ನು ಕ್ವಾರಂಟೈನ್‍ನಲ್ಲಿ ಇಟ್ಟು ನೆಗೆಟಿವ್ ವರದಿ ಬಂದ ನಂತರವೇ ಮನೆಗೆ ಕಳುಹಿಸಲಾಗುವುದು. ಹೊರರಾಜ್ಯದಿಂದ ಬಂದವರನ್ನು ಈಗ ಏಳು ದಿನ ಕ್ವಾರಂಟೈನ್ ಮಾಡಲಾಗುತ್ತಿದೆ. ಹೆಚ್ಚುದಿನ ಕ್ವಾರಂಟೈನ್ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

    ಇದೇ ವೇಳೆ ಹಾಸನ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ದುಡಿಯುವ ಭರವಸೆ ನೀಡಿದರು. ನಾನು ಈ ಊರಿನ ಅಳಿಯ, ನನ್ನ ಕ್ಷೇತ್ರಕ್ಕೆ ಕೊಡುವ ಪ್ರಾಮುಖ್ಯತೆಯನ್ನು ಹಾಸನ ಜಿಲ್ಲೆಗೂ ಕೊಡುತ್ತೇನೆ. ನಾನು ಹಾಸನಕ್ಕೆ ಬಂದಾಗ ಒಂದೆರೆಡು ದಿನ ಇಲ್ಲೇ ಇದ್ದು, ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದು ತಿಳಿಸಿದರು. ಬಿಜೆಪಿಯ ರಾಜ್ಯಸಭೆ ಟಿಕೆಟ್ ಹಂಚಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ, ಹೈ ಕಮಾಂಡ್ ತೆಗೆದುಕೊಂಡ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ ಎಂದರು.

  • ಪಡಿತರ ಅಂಗಡಿಗೆ ಸಚಿವ ಗೋಪಾಲಯ್ಯ ದಿಢೀರ್ ಭೇಟಿ- ಗುಣಮಟ್ಟ ಪರಿಶೀಲನೆ

    ಪಡಿತರ ಅಂಗಡಿಗೆ ಸಚಿವ ಗೋಪಾಲಯ್ಯ ದಿಢೀರ್ ಭೇಟಿ- ಗುಣಮಟ್ಟ ಪರಿಶೀಲನೆ

    ಬೆಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಗೋಪಾಲಯ್ಯ ಇಂದು ಬೆಂಗಳೂರು ಹೊರವಲಯ ನೆಲಮಂಗಲ ಬಸ್ ನಿಲ್ದಾಣದ ಹಿಂಭಾಗದ ಪಡಿತರ ಅಂಗಡಿಗೆ ದಿಢೀರ್ ಭೇಟಿ ನೀಡಿದ್ದಾರೆ.

    ಪಡಿತರ ಅಂಗಡಿಗೆ ಭೇಟಿ ನೀಡಿದ ಸಚಿವ ಗೋಪಾಲಯ್ಯ ಅವರು ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸಿದ್ದಾರೆ. ಪ್ರತಿಯೊಬ್ಬರಿಗೂ ಸಮವಾಗಿ ಪಡಿತರ ನೀಡಬೇಕು. ಆಹಾರ ಮತ್ತು ನಾಗರಿಕ ಪೂರೈಕೆಯಲ್ಲಿ ವ್ಯತ್ಯಾಸವಾದರೆ ಸರಿ ಇರುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

    ಅಲ್ಲದೇ ಸಚಿವರ ಮುಂದೆ ತೂಕದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದರು. ನಂತರ ಸ್ವತಃ ತಾವೇ ಬೇಳೆಯ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಇನ್ನೂ ಅಧಿಕಾರಿಗಳ ವಿರುದ್ಧ ಗರಂ ಆದ ಸಚಿವ ಗೋಪಾಲಯ್ಯ, ಆಧಾರ್ ಕಾರ್ಡ್ ಅನುಗುಣವಾಗಿ ಆಹಾರ ಪೂರೈಕೆ ಮಾಡಿ ಮತ್ತು ಯೂನಿಟ್ ಆಧಾರದಲ್ಲಿ ನೀಡಿ ಎಂದು ಖಡಕ್ ಎಚ್ಚರಿಕೆ ನೀಡಿದರು.

  • ಮಹಾಲಕ್ಷ್ಮಿಲೇಔಟ್‍ನಿಂದ ರಾಜ್ಯಾದ್ಯಂತ ಕೆಲಸ ಮಾಡ್ತೀನಿ- ಸಚಿವ ಗೋಪಾಲಯ್ಯ

    ಮಹಾಲಕ್ಷ್ಮಿಲೇಔಟ್‍ನಿಂದ ರಾಜ್ಯಾದ್ಯಂತ ಕೆಲಸ ಮಾಡ್ತೀನಿ- ಸಚಿವ ಗೋಪಾಲಯ್ಯ

    – ಹಾಸನ ಜಿಲ್ಲೆಯ ಅಭಿವೃದ್ಧಿ ನನ್ನ ಗುರಿ

    ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‍ನಿಂದ ಇದೀಗ ರಾಜ್ಯಾದ್ಯಂತ ಕೆಲಸ ಮಾಡುತ್ತೀನಿ. ಅಲ್ಲದೇ ಕೋವಿಡ್-19 ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೂ ಪಡಿತರ ಸಿಗುವಂತೆ ಮಾಡುವುದೇ ನಮ್ಮ ಉದ್ದೇಶ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದರು.

    ಸಚಿವ ಗೋಪಾಲಯ್ಯ ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯಲ್ಲಿ ನಾಗರಿಕರಿಗೆ ಸುಮಾರು 3 ಸಾವಿರ ಆಹಾರ ಕಿಟ್ ವಿತರಣೆ ಮಾಡಿದರು. ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಎಸ್.ಮುನಿರಾಜು ನೇತೃತ್ವದಲ್ಲಿ ಬಿಜೆಪಿ ಮುಖಂಡ ನರಸಿಂಹಮೂರ್ತಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಕಿಟ್ ವಿತರಣೆ ಮಾಡಿದರು.

    ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಗೋಪಾಲಯ್ಯ, ರಾಜ್ಯ ಸರ್ಕಾರ ಹಾಸನಕ್ಕೆ ಉಸ್ತವಾರಿಯಾಗಿ ನೇಮಕ ಮಾಡಿ ನನ್ನನ್ನು ಹಾಸನಕ್ಕೆ ಕಳುಹಿಸಿದ್ದು ಕೆಲಸ ಮಾಡಲಿಕ್ಕೆ. ಹಾಸನ ಕ್ಷೇತ್ರದಲ್ಲಿ ರೈತಾಪಿ ಕುಟುಂಬ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಕೆಲಸ ಮಾಡುತ್ತೀನಿ. ಪ್ರಾಮಾಣಿಕವಾಗಿ ನಾನು ಮಹಾಲಕ್ಷ್ಮಿ ಲೇಔಟ್‍ನಿಂದ ಇದೀಗ ರಾಜ್ಯಾದ್ಯಂತ ಕೆಲಸ ಮಾಡುತ್ತೀನಿ ಎಂದರು.

    ನನಗೆ ಗೊತ್ತಿರೋದು ಕೆಲಸ ಮಾಡೋದು ಅದನ್ನೆ ಅಲ್ಲಿಯೂ ಮಾಡುತ್ತೀನಿ. ಹಾಸನದಲ್ಲಿ ಎಲ್ಲ ಶಾಸಕರು, ಸಂಸದರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೀನಿ. ಆ ಶಕ್ತಿಯನ್ನ ಹಾಸನಾಂಬೆ ನನಗೆ ಕೊಡುತ್ತಾಳೆ. ಜಿಲ್ಲೆಯ ಅಭಿವೃದ್ಧಿ ಮಾಡಲು ನನ್ನನ್ನು ಕಳುಹಿಸಿದ್ದಾರೆ. ಹೀಗಾಗಿ ಅಭಿವೃದ್ಧಿಯೇ ನನ್ನ ಗುರಿ ಎಂದು ಹೇಳಿದರು.

    ಈ ವೇಳೆ ಮಾಜಿ ಶಾಸಕ ಎಸ್. ಮುನಿರಾಜು, ಬಿಜೆಪಿ ಮುಖಂಡ ನರಸಿಂಹಮೂರ್ತಿ, ಗೋಪಾಲಕೃಷ್ಣ, ನಾರಾಯಣ ಸ್ವಾಮಿ, ನರಸಿಂಹಮೂರ್ತಿ, ವಿಜಯ್ ಕುಮಾರ್, ಕೃಷ್ಣ ಮೂರ್ತಿ ಮತ್ತಿತರು ಉಪಸ್ಥಿತರಿದ್ದರು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ನ್ಯಾಯಬೆಲೆ ಅಂಗಡಿಗೆ ಸಚಿವ ಗೋಪಾಲಯ್ಯ ದಿಢೀರ್ ಭೇಟಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ನ್ಯಾಯಬೆಲೆ ಅಂಗಡಿಗೆ ಸಚಿವ ಗೋಪಾಲಯ್ಯ ದಿಢೀರ್ ಭೇಟಿ

    ನೆಲಮಂಗಲ: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಇಂದು ಬೆಂಗಳೂರು ಹೊರವಲಯ ನೆಲಮಂಗಲ ನಗರಕ್ಕೆ ದಿಢೀರ್ ಭೇಟಿ ನೀಡಿದರು.

    ನಾಲ್ಕು ದಿನದ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪಡಿತರ ಅಂಗಡಿಯ ದಿನಸಿಯಲ್ಲಿ ದೂಳು ಮತ್ತು ಹುಳ ಇದ್ದ ಪ್ರಕರಣದ ಹಿನ್ನಲೆ ಸುದ್ದಿ ಪ್ರಸಾರವಾಗಿತ್ತು. ಈ ಸಂಬಂಧ ಇಂದು ಸಚಿವರು ಭೇಟಿ ನೀಡಿದರು. ನೆಲಮಂಗಲ ನಗರದ ನ್ಯಾಯ ಬೆಲೆ ಅಂಗಡಿಗೆ ತೆರಳಿ ಪರಿಶೀಲನೆ ನಡೆಸಿ ಅಕ್ಕಿ ಗೋಧಿಯನ್ನು ವೀಕ್ಷಿಸಿದರು. ತೂಕ ಹಾಗೂ ಗುಣಮಟ್ಟ ಪರಿಶೀಲನೆ ನಡೆಸಿದ ಸಚಿವ ಗೋಪಾಲಯ್ಯ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಗೋಪಾಲಯ್ಯ, ಇದು ದಿಢೀರ್ ಭೇಟಿಯಲ್ಲ. ರಾಜ್ಯದ ಹಲವು ಕಡೆ ಪಡಿತರ ವಿತರಣಾ ಮಳಿಗೆಗಳಿಗೆ ತೆರಳುತ್ತೇನೆ. ಒಂದು ಕುಟುಂಬಕ್ಕೆ 10 ಕೆಜಿ ಅಕ್ಕಿ ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಸಹ ಮೂರು ತಿಂಗಳ ಪಡಿತರ ಜೊತೆಗೆ ತೊಗರಿ ಬೇಳೆ ಸಹ ನೀಡಲಿದೆ. ಇದೀಗ ಬಿಪಿಎಲ್ ಕಾರ್ಡ್ ಕೇಳಿರುವ ಕುಟಂಬಗಳಿಗೂ ಕಾರ್ಡ್ ವಿತರಿಸಲಿದ್ದೇವೆ ಎಂದರು.

    ಬಯೋಮೆಟ್ರಿಕ್ ಇಲ್ಲದ ಕುಟುಂಬಗಳಿಗೂ ಆಹಾರ ವಿತರಿಸಲು ಚಿಂತನೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳುತ್ತೇನೆ ಎಂದು ತಿಳಿಸಿದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಆಯುಕ್ತರು, ಹಿರಿಯ ಅಧಿಕಾರಿಗಳು ಸೇರಿದಂತೆ ನೆಲಮಂಗಲ ಶಾಸಕ ಡಾ.ಶ್ರೀನಿವಾಸ ಮೂರ್ತಿ, ತಹಶೀಲ್ದಾರ್ ಶ್ರೀನಿವಾಸಯ್ಯ ಮತ್ತು ಪೊಲೀಸ್ ಅಧಿಕಾರಿಗಳು ಜೊತೆಯಲ್ಲಿ ಇದ್ದರು.