Tag: Minister HD Revanna

  • ಉಪಚುನಾವಣೆ ಫಲಿತಾಂಶದ ಬಳಿಕವಾದ್ರೂ ಬಿಜೆಪಿ ಎಚ್ಚೆತ್ತುಕೊಳ್ಳಲಿ – ರೇವಣ್ಣ ಟಾಂಗ್

    ಉಪಚುನಾವಣೆ ಫಲಿತಾಂಶದ ಬಳಿಕವಾದ್ರೂ ಬಿಜೆಪಿ ಎಚ್ಚೆತ್ತುಕೊಳ್ಳಲಿ – ರೇವಣ್ಣ ಟಾಂಗ್

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಆಡಳಿತ ವಹಿಸಿಕೊಂಡ ಬಳಿಕ ಮಾಡಿದ ರೈತ ಸಾಲಮನ್ನಾ ಫಲವಾಗಿ ಜನ ಉಪಚುನಾವಣೆಯಲ್ಲಿ ಆಶೀರ್ವಾದ ಮಾಡಿದ್ದು, ಇದನ್ನ ನೋಡಿಯಾದರೂ ಕೇಂದ್ರದಲ್ಲಿ ಅಧಿಕಾರಲ್ಲಿರುವ ಬಿಜೆಪಿ ಎಚ್ಚೆತ್ತುಕೊಂಡು ಜನರ ಪರವಾಗಿ ಕೆಲಸ ಮಾಡಬೇಕಿದೆ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಹೇಳಿದ್ದಾರೆ.

    ಮೈತ್ರಿ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ದೇವಾಲಯ ಪೂಜೆ ಮುಗಿಸಿ ರೇವಣ್ಣ ಅವರು ದೇವೇಗೌಡರ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದ ಜನತೆಗೆ ಧನ್ಯವಾದ. ಎಲ್ಲಾ ಕ್ಷೇತ್ರದಲ್ಲೂ ಜನರು ಆಶೀರ್ವಾದ ಮಾಡಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಹಣ ಬಲ ಕೆಲಸ ಮಾಡಿದಂತೆ ಕಂಡಿದೆ. ಬಳ್ಳಾರಿ ಫಲಿತಾಂಶ ಉತ್ತಮ ಎನ್ನಿಸಿದೆ ಎಂದರು.

    ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಸಿಎಂ ಕುಮಾರಸ್ವಾಮಿ ಅವರು ಮಾಡಿದ ಒಳ್ಳೆ ಆಡಳಿತವೇ ಕಾರಣ. 2019 ಚುನಾವಣೆ ಉದ್ದೇಶಕ್ಕಾದರೂ ರೈತರ ಸಂಪೂರ್ಣ ಸಾಲಮನ್ನಾ ಮಾಡಲು ಕೇಂದ್ರ ಸರ್ಕಾರಕ್ಕೆ ನೆರವು ನೀಡುವಂತೆ ಮನವೊಲಿಕೆ ಮಾಡಬೇಕು ಎಂದು ಸಲಹೆ ನೀಡಿದರು.

    ಬೆಂಗಳೂರಿನ ಪದ್ಮನಾಭನಗರ ದೇವೇಗೌಡ ನಿವಾಸಕ್ಕೆ ಭೇಟಿ ನೀಡಿದ ಸಚಿವ ರೇವಣ್ಣ ಅವರು ಚುನಾವಣೆ ಫಲಿತಾಂಶದ ಕುರಿತು ಮಹತ್ವದ ಚರ್ಚೆ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೇವಣ್ಣ ವಿರುದ್ಧವೇ ಭೂ ಕಬಳಿಕೆ ಆರೋಪ: ಎ ಮಂಜು ದಾಖಲೆ ರಿಲೀಸ್

    ರೇವಣ್ಣ ವಿರುದ್ಧವೇ ಭೂ ಕಬಳಿಕೆ ಆರೋಪ: ಎ ಮಂಜು ದಾಖಲೆ ರಿಲೀಸ್

    ಹಾಸನ: ಕಾಂಗ್ರೆಸ್ – ಜೆಡಿಎಸ್ ನಾಯಕರು ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಹೇಳಿಕೆ ನೀಡುತ್ತಿದ್ದರೆ, ಇತ್ತ ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ ಎಂದೇ ಗುರುತಿಸಿಕೊಂಡಿರುವ ರೇವಣ್ಣ ವಿರುದ್ಧ ಮಾಜಿ ಸಚಿವ, ಕೈ ನಾಯಕ ಎ ಮಂಜು ಭೂ ಕಬಳಿಕೆಯ ಗಂಭೀರ ಆರೋಪ ಮಾಡಿದ್ದಾರೆ.

    ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಅವರು ತಮ್ಮ ಪ್ರಭಾವ ಬಳಸಿ ತಮ್ಮ ಮಗನ ಹೆಸರಿಗೆ ಭೂಮಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಎ ಮಂಜು ದಾಖಲೆ ಬಿಡುಗಡೆ ಮಾಡಿದ್ದಾರೆ.

    ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಎ ಮಂಜು ಅವರು, ಜಿಲ್ಲೆಯ ದುದ್ದ ಹೋಬಳಿ ಸೋಮನಹಳ್ಳಿ ಕಾವಲ್ ಪ್ರದೇಶದಲ್ಲಿ ನಿಯಮ ಮೀರಿ ಭೂಮಿಯನ್ನು ಎಚ್ ರೇವಣ್ಣ ಅವರು ತಮ್ಮ ಪುತ್ರ ಪ್ರಜ್ವಲ್ ರೇವಣ್ಣ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ನೇರ ಆರೋಪ ಮಾಡಿದ್ದಾರೆ.

    ಸರ್ಕಾರಿ ದಾಖಲೆಗಳನ್ನು ನಿಯಮಗಳ ವಿರುದ್ಧವಾಗಿ ತಿದ್ದಿ ಸುಮಾರು 54.29 ಎಕರೆ ಭೂಮಿಯನ್ನು ದುರುಪಯೋಗ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿಯಾಗಿದ್ದ ವೇಳೆ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಭೂಮಿ ಕಬಳಿಸಲಾಗಿದೆ. ಈ ಕುರಿತ ಎಲ್ಲಾ ದಾಖಲೆಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ತನಿಖೆ ನಡೆಸಬೇಕು. ಸರ್ಕಾರಿ ಭೂಮಿಯನ್ನು ತಮ್ಮ ಹೆಸರಿಗೆ ಹಾಗೂ ಬೇಕಾದವರಿಗೆ ಮಾಡಿದ ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

    ಪ್ರಭಾವಿ ರಾಜಕಾರಣಿಗಳೇ ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಅನುಕೂಲಕ್ಕೆ ಮಾಡಿಕೊಳ್ಳುವುದಾದರೆ ಸಾಮಾನ್ಯ ಜನರ ಸ್ಥಿತಿ ಏನು? ಸರ್ಕಾರಿ ಭೂಮಿ ಮತ್ತೆ ಸರ್ಕಾರದ ಸುಪರ್ದಿಗೆ ಬರಬೇಕು. ಭೂಮಿ ಯಾರಿಗೆ ಮಂಜೂರು ಆಗದಿದ್ದರೂ ಕೂಡ ಅದು ಹೇಗೆ ಬೇರೆಯವರಿಗೆ ಪರಭಾರೆ ಆಗಿದೆ ಎಂಬುವುದರ ಬಗ್ಗೆ ತನಿಖೆ ನಡೆಸಬೇಕು ಎಂದರು.

    ಏನಿದು ಆರೋಪ?
    ಹಾಸನ ಜಿಲ್ಲೆಯ ದುದ್ದ ಹೋಬಳಿ ಬಳಿ ಇದ್ದ ಸರ್ಕಾರದ ಭೂಮಿಯನ್ನು ಸಣ್ಣೇಗೌಡ ಎಂಬವರು ಗಿರಿಯಪ್ಪ ಎಂಬವರಿಗೆ ಮಾರಾಟ ಮಾಡಿದ್ದಾರೆ. ಆದರೆ ಅದು ಸರ್ಕಾರಿ ಭೂಮಿಯಾಗಿದ್ದು ಸಣ್ಣೇಗೌಡ ಹೆಸರಿಗೆ ಸರ್ಕಾರ ಭೂಮಿ ಮಂಜೂರು ಆಗದೇ ಇದ್ದರೂ ಆತ ಹೇಗೆ ಮಾರಾಟ ಮಾಡಿದ್ದಾನೆ ಎಂದು ಪ್ರಶ್ನಿಸಿದರು. ಬಳಿಕ ವಿವಿಧ ಹೆಸರಿಗಳಲ್ಲಿ ನೋಂದಣಿ ಮಾಡಿಸಿದ ಭೂಮಿಯನ್ನು ಅಧಿಕಾರ ಬಳಸಿ ತಮ್ಮ ಹೆಸರಿಗೆ ಮಾಡಿಸಿಕೊಳ್ಳಾಗಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳ ಮೇಲೆ ಪ್ರಭಾವ ಬೀರುವ ಮೂಲಕ ಗಿರಿಯಪ್ಪನಿಂದ ಪ್ರಜ್ವಲ್ ರೇವಣ್ಣ ಹೆಸರಿಗೆ ಭೂಮಿ ಹಕ್ಕು ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಅಧಿಕಾರಿಗಳ ಲೋಪವೂ ಇದೆ ಎಂದು ಎ ಮಂಜು ಆರೋಪಿಸಿದರು.

    ಇದೇ ವೇಳೆ ಹಾಸನ ತಾಲೂಕಿನ ಕಸಬಾ ಹೋಬಳಿಯ ರಾಂಪುರ, ದೊಡ್ಡಕುಂಡಗೋಳ, ನಿಡುಡಿ ಗ್ರಾಮಗಳಲ್ಲಿ ಸದ್ಯ ಸುಮ್ಮನೆ ಸರ್ವೆ ಕಾರ್ಯ ನಡೆಸಲಾಗುತ್ತಿದೆ. ಸರ್ವೆ ಮಾಡಲು ಯಾವುದೇ ಆದೇಶ ನೀಡಿಲ್ಲ. ಸುಮ್ಮನೆ ಸರ್ವೆ ಮಾಡಿಸುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಇರುವುದರಿಂದ ಈ ರೀತಿ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಅಲ್ಲದೇ ಈ ಭೂ ಅವ್ಯವಹಾರದ ಕುರಿತು ಅಂತ್ಯ ಕಾಣುವವರೆಗೂ ನಿರಂತರವಾಗಿ ಹೋರಾಡುತ್ತೇನೆ ಎಂದು ತಿಳಿಸಿದ ಎ ಮಂಜು ಅವರು, ನಾನು ಸದ್ಯ ಕಾಂಗ್ರೆಸ್ ಪಕ್ಷದಲ್ಲಿದ್ದು, ಅಲ್ಲಿಯೇ ಇರುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷದ ವಿರುದ್ಧ ನಾನು ಹೋಗುವುದಿಲ್ಲ. ಈ ರೀತಿಯ ಅನ್ಯಾಯವಾದಗ ಹೇಳುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಲ್ಕೈದು ತಿಂಗಳು ಶಿರಾಡಿಯಲ್ಲಿ ವಾಹನ ಸಂಚರಿಸಲ್ಲ

    ನಾಲ್ಕೈದು ತಿಂಗಳು ಶಿರಾಡಿಯಲ್ಲಿ ವಾಹನ ಸಂಚರಿಸಲ್ಲ

    ಹಾಸನ: ಶಿರಾಡಿಘಾಟ್ ರಸ್ತೆ ಕಾಮಗಾರಿ ಸಂಪೂರ್ಣ ಮುಗಿಯುವವರೆಗೆ ಯಾವುದೇ ಸಂಚಾರಕ್ಕೆ ಅವಕಾಶ ನೀಡಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ.

    ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಶಿರಾಡಿಘಾಟ್ ರಸ್ತೆ ರಸ್ತೆ ಕಾಮಗಾರಿ ಸಂಪೂರ್ಣ ಮುಗಿಯುವವರೆಗೆ ಯಾವುದೇ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಕಾಮಗಾರಿ ಮುಗಿಯಲು ನಾಲ್ಕೈದು ತಿಂಗಳ ಕಾಲ ಸಮಯವಕಾಶ ಬೇಕಿದೆ. ಶಿರಾಡಿಘಾಟ್ ಸಂಚಾರ ರಸ್ತೆ ಕಾಮಗಾರಿ ಪ್ರಗತಿಯ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಿ ರಸ್ತೆ ಸರಿಪಡಿಸಿದ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ಪ್ರವಾಹದಲ್ಲಿ ಸಿಲುಕಿರುವ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ನೀಡಿದ ಸಚಿವರು, ಸಕಲೇಶಪುರ ತಾಲ್ಲೂಕಿನ ಹತ್ತಾರು ಗ್ರಾಮಗಳ ಜನರ್ನು ಬೇರೆಡೆಗೆ ಸ್ಥಳಾಂತರಿಸಲು ಸೂಚನೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಅತ್ತಿಹಳ್ಳಿ, ಹೊಂಗಡಹಳ್ಳ ಮಾಗೇರಿ, ಪಟ್ಲ, ಹೆತ್ತೂರು ಗ್ರಾಮಸ್ಥರಿಗೆ ಗಂಜಿಕೇಂದ್ರ ತೆರೆಯಲು ಆದೇಶಿಸಲಾಗಿದೆ ಎಂದರು.

    ಜಿಲ್ಲೆಯ ಇತರೇ ಭಾಗಗಳಲ್ಲಿ ಅಪಾಯವಿದೆಯೋ ಅಲ್ಲಿರುವ ಜನರನ್ನು ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಕೊಡಗಿನಲ್ಲಿರುವ ರಸ್ತೆಗಳು ಕೊಚ್ಚಿ ಹೋಗಿರುವುದರಿಂದ ಅಂದಾಜು 138 ಕೋಟಿ ರೂ. ನಷ್ಟ ಉಂಟಾಗಿದೆ. ಅಲ್ಲದೇ ಒಟ್ಟು ಲೋಕೋಪಯೋಗಿ ಇಲಾಖೆಯಲ್ಲಿ 150 ಕೋಟಿ ರೂ. ನಷ್ಟದ ಅಂದಾಜು ಮಾಡಲಾಗಿದೆ ಎಂದರು.

    ಪ್ರವಾಹದಲ್ಲಿ ಸಿಲುಕಿರುವ ಜನರನನ್ನು ರಕ್ಷಿಸಲು ಎರಡು ಹೆಲಿಕಾಪ್ಟರ್ ಬಳಕೆ ಮಾಡಲಾಗಿದೆ. ಸಂತ್ರಸ್ತರಿಗೆ ಬೇಕಾದ ಎಲ್ಲಾ ನೆರವನ್ನು ಸರ್ಕಾರದಿಂದ ನೀಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಅಲ್ಲದೇ ಹಾಸನ ಜಿಲ್ಲೆಯಲ್ಲಿ ಪ್ರವಾಹ ನಷ್ಟದ ಬಗ್ಗೆ ಸಂಪೂರ್ಣ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಮಾಹಿತಿ ನೀಡಿದರು.

    ಜುಲೈ 15 ರಂದು ಸಚಿವ ಹೆಚ್.ಡಿ.ರೇವಣ್ಣ ಶಿರಾಡಿ ಘಾಟ್ ಉದ್ಘಾಟಿಸಿದ್ದರು. ಆರಂಭದಲ್ಲಿ ಲಘು ವಾಹನಗಳಿಗೆ, ಬಳಿಕ ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡಗಳು ಜರಿದು ಬೀಳುತ್ತಿದ್ದ ಕಾರಣ ಇಲ್ಲೂ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿತ್ತು.

    ಮಡಿಕೇರಿ- ಮಂಗಳೂರು ಸಂಪರ್ಕ ಕಲ್ಪಿಸುವ ಸಂಪಾಜೆ ಘಾಟಿಯ ಮದೇನಾಡು, ಜೋಡುಪಾಲದಲ್ಲಿ ಗುಡ್ಡ ಕುಸಿದು ಅಲ್ಲಲ್ಲಿ ಪ್ರವಾಹ ರೂಪದಲ್ಲಿ ನೀರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿದು ಹೋಗುತ್ತಿದೆ. ಹೀಗಾಗಿ ಈ ರಸ್ತೆಯ ರಿಪೇರಿಯಾಗಲು ಹಲವು ತಿಂಗಳು ಬೇಕಾಗಬಹುದು ಎಂದು ಈ ಸ್ಥಳಕ್ಕೆ ತೆರಳಿದವರು ಹೇಳುತ್ತಿದ್ದಾರೆ. ಹೀಗಾಗಿ ಇನ್ನು ಮುಂದೆ ಚಾರ್ಮಾಡಿ ಮಾರ್ಗದ ಮೂಲಕವಷ್ಟೇ ಮಂಗಳೂರನ್ನು ಸಂಪರ್ಕಿಸಬೇಕಾಗುತ್ತದೆ. ಎರಡು ಹೆದ್ದಾರಿಗಳು ಬಂದ್ ಆಗಿರುವ ಕಾರಣ ಈ ರಸ್ತೆಯಲ್ಲೂ ಭಾರೀ ಟ್ರಾಫಿಕ್ ಜಾಮ್ ಆಗುತ್ತಿದೆ.

  • ಬಂಡೀಪುರದಲ್ಲಿ ರಸ್ತೆ ನಿರ್ಮಾಣ ಮಾಡಿ ಅನ್ನೋದಕ್ಕೆ ನಾನ್ಯಾರು: ಸಚಿವ ರೇವಣ್ಣ ಪ್ರಶ್ನೆ

    ಬಂಡೀಪುರದಲ್ಲಿ ರಸ್ತೆ ನಿರ್ಮಾಣ ಮಾಡಿ ಅನ್ನೋದಕ್ಕೆ ನಾನ್ಯಾರು: ಸಚಿವ ರೇವಣ್ಣ ಪ್ರಶ್ನೆ

    ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನ ಸಂಚಾರಗೆ ಹೇರಿದ ನಿಷೇಧವನ್ನು ತೆರವುಗೊಳಿಸುವ ಬಗ್ಗೆ ಮುಖ್ಯ ಕಾರ್ಯದರ್ಶಿಯನ್ನೇ ಕೇಳಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಗರಂ ಆಗಿ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಬಂಡೀಪುರ ಅರಣ್ಯ ಪ್ರದೇಶದ ಕುರಿತಾಗಿ ಸರ್ಕಾರದ ನಿರ್ಧಾರ ಏನು ಎಂದು ಪ್ರಶ್ನಿಸಿದಕ್ಕೆ ಸಿಡಿಮಿಡಿಗೊಂಡ ಅವರು, ಸುಪ್ರೀಂ ಕೋರ್ಟ್ ನಿಂದ ಆದೇಶ ಹೊರ ಬರದೇ ನಾನು ವೈಯಕ್ತಿಕವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಮ್ಮ ಹಿಂದಿನ ಹೇಳಿಯನ್ನು ಮುಚ್ಚಿಹಾಕಲು ಪ್ರಯತ್ನಿಸಿದರು.

    ಸುಪ್ರೀಂ ಕೋರ್ಟ್, ಅರಣ್ಯ ಹಾಗೂ ಪರಿಸರ ಇಲಾಖೆ ಸೇರಿ ಒಪ್ಪಿಗೆ ನೀಡದೇ ನಾನು ಒಪ್ಪಿಕೊಂಡರೆ ಸಮಸ್ಯೆ ಇತ್ಯರ್ಥ ಆಗುವುದಿಲ್ಲ. ನಾನು ಹೀಗೆ ತೀರ್ಪು ನೀಡಿ ಅಂತಾ ಸುಪ್ರೀಂ ಕೋರ್ಟ್ ಗೆ ಹೇಳಲು ಬರುವುದಿಲ್ಲ. ರಸ್ತೆ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಕೊಟ್ಟರೆ ಬೇಡ ಅಂತಾ ಹೇಳುವುದಕ್ಕೆ ನಾನು ಯಾರು? ಆದರೆ ಪತ್ರದ ಬಗ್ಗೆ ನನಗೆ ಕೇಳಬೇಡಿ, ಮುಖ್ಯ ಕಾರ್ಯದರ್ಶಿಗಳನ್ನು ವಿಚಾರಿಸಿ ಎಂದು ಹೇಳಿದರು.

    ಸುದ್ದಿಗೋಷ್ಠಿ ಮುಕ್ತಾಯದವರೆಗೂ ಮಾಧ್ಯಮಗಳ ಪ್ರಶ್ನೆಗಳಿಗೆ, ನಾನ್ಯಾರು ಅದನ್ನು ಹೇಳುವುದಕ್ಕೆ? ನಾನು ಹೇಗೆ ಹೇಳೋದು ಎಂದು ಪ್ರಶ್ನಾರ್ಥಕ ಉತ್ತರಗಳನ್ನು ನೀಡುತ್ತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

     

     

  • ಇನ್ನೆರಡು ದಿನಗಳಲ್ಲಿ ರಾಜ್ಯದ ಜನರಿಗೆ ಸಹಿ ಸುದ್ದಿ – ಸಚಿವ ರೇವಣ್ಣ

    ಇನ್ನೆರಡು ದಿನಗಳಲ್ಲಿ ರಾಜ್ಯದ ಜನರಿಗೆ ಸಹಿ ಸುದ್ದಿ – ಸಚಿವ ರೇವಣ್ಣ

    ಚಿಕ್ಕಮಗಳೂರು: ಸರ್ಕಾರ ಸುಭದ್ರವಾಗಿದೆ, ಆರಾಮಾಗಿದೆ ಮಾಧ್ಯಮದವರು ಧೃತಿಗೇಡುವುದು ಬೇಡ. ಇನ್ನು ಎರಡು ದಿನಗಳಲ್ಲಿ ರಾಜ್ಯದ ಜನರಿಗೆ ಸಹಿ ಸುದ್ದಿ ಸಿಗಲಿದೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

    ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಕ್ಕಮಗಳೂರಿಗೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇನ್ನೈದು ದಿನಗಳಲ್ಲಿ ರಾಜ್ಯದ ಜನರಿಗೆ ಸಿಹಿ ಸುದ್ದಿ ಸಿಗಲಿದೆ. ರೈತರ ಸಾಲ ಸಂಪೂರ್ಣ ಮನ್ನಾ ಆಗುತ್ತಾ ಅಥವಾ ಭಾಗಶಃ ಮನ್ನಾ ಆಗುತ್ತಾ ಎಂಬ ಗೊಂದಲ ಬೇಡ. ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡೇ ಮಾಡುತ್ತಾರೆ ಎಂಬ ಭರವಸೆ ನೂರಕ್ಕೆ ನೂರು ಇದೆ ಎಂದರು.

    ಈ ಬಾರಿಯ ಹೊಸ ಬಜೆಟ್ ನಲ್ಲಿ ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಜೊತೆಗೆ, ನಮ್ಮ ಕೆಲ ಅಂಶಗಳನ್ನು ಸೆರಿಸಲಾಗುತ್ತೆ ಎಂದರು. ಅಲ್ಲದೇ ಮಲೆನಾಡಿನ ಚಾರ್ಮಾಡಿ, ಆಗುಂಬೆ, ಶಿರಾಡಿಘಾಟ್ ಸೇರಿದಂತೆ ನಾಲ್ಕು ಘಾಟಿಗಳನ್ನು ಪರಿಶೀಲನೆ ನಡೆಸಿದ್ದೇನೆ. ಚಾರ್ಮಾಡಿ ದುರಸ್ಥಿಗಾಗಿ 250 ಕೋಟಿ ರೂ. ಪ್ರಸ್ತಾವನೆ ಕಳಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.