Tag: Minister JC Madhuswamy

  • ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು

    ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು

    ಬೆಂಗಳೂರು: ಅಧಿವೇಶನ ಬೆನ್ನಲ್ಲೇ ಸೋಂಕಿತ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಾನೂನು ಸಚಿವ ಮಾಧುಸ್ವಾಮಿ, ಕಾಂಗ್ರೆಸ್‍ನ ಹಿರಿಯ ಮುಖಂಡ ಹೆಚ್‍ಕೆ ಪಾಟೀಲ್‍ಗೆ ಸೋಂಕು ದೃಢವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.


    ಅಧಿವೇಶನದ ಬೆನ್ನಲ್ಲೇ ನಿನ್ನೆ ದಿನೇಶ್ ಗುಂಡೂರಾವ್‍ಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಸಚಿವ ಮಾಧುಸ್ವಾಮಿ ಅವರಿಗೆ ಸೋಂಕು ದೃಢವಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಿಎಸ್‍ವೈ ಸೇರಿದಂತೆ ಹಲವು ನಾಯಕರು ಪ್ರಾರ್ಥನೆ ಮಾಡುವುದಾಗಿ ತಿಳಿಸಿದ್ದಾರೆ.

    ಕೆಲ ದಿನಗಳ ಹಿಂದೆ ಸಚಿವರ ಕಾರಿನ ಚಾಲಕ ಮತ್ತು ಮನೆಯ ಕೆಲಸಗಾರನಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮಾಧುಸ್ವಾಮಿ ಅವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು ಎಂಬ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ಪಾಸಿಟಿವ್ ಬಂದಿದೆ, ದೂರ ಉಳಿಯಲು ಹೇಳಿ: ಮಾಧುಸ್ವಾಮಿ

  • ಹುಳಿಯಾರು ಕನಕ ವೃತ್ತ ತೆರವು ವಿವಾದ- ಮಾಧುಸ್ವಾಮಿ ಸ್ಪಷ್ಟನೆ

    ಹುಳಿಯಾರು ಕನಕ ವೃತ್ತ ತೆರವು ವಿವಾದ- ಮಾಧುಸ್ವಾಮಿ ಸ್ಪಷ್ಟನೆ

    ಮಂಡ್ಯ: ಚಿಕ್ಕನಾಯಕನಹಳ್ಳಿಯಲ್ಲಿನ ವೃತ್ತಕ್ಕೆ ಹೆಸರಿಡುವ ಕುರಿತ ವಿವಾದ ತಾರಕಕ್ಕೇರಿದ್ದು, ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರಿಡಲ್ಲ, ಬದಲಿಗೆ ಕನಕ ವೃತ್ತ ಎಂದು ಹೆಸರಿಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

    ಕೆ.ಆರ್.ಪೇಟೆಯಲ್ಲಿ ಹುಳಿಯಾರು ಕನಕ ವೃತ್ತ ತೆರವುಗೊಳಿಸಿದ ವಿವಾದದ ಕುರಿತು ಪ್ರತಿಕ್ರಿಯಿಸಿದ್ದು, ನಾನು ಬೆಳಗಾವಿಯಲ್ಲಿದ್ದಾಗ ಕನಕ ವೃತ್ತ, ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತ ಎಂಬ ಹೆಸರಿನ ನಾಮಫಲಕಗಳನ್ನು ಹಾಕಲು ಎರಡು ಗುಂಪುಗಳು ಮುಂದಾಗಿದ್ದವು. ಈ ವೇಳೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಶಾಂತಿಸಭೆ ನಡೆಸಿ ಸಮಸ್ಯೆ ಇತ್ಯರ್ಥ ಮಾಡೋಣ ಎಂದು ಮುಂದಾಗಿದ್ದೆ. ಸ್ವಾಮೀಜಿಯವರಿಗಾಗಿ ಎರಡು ಗಂಟೆಗಳ ಕಾಲ ಕಾದು ಕುಳಿತಿದ್ದೆ. ಬಳಿಕ ನಡೆದ ಸಭೆಯಲ್ಲಿ ಕನಕ ವೃತ್ತ ಹೆಸರಿಡಲು ಎದುರಾಗಿರುವ ಕಾನೂನು ತೊಡಕುಗಳನ್ನ ಗಮನಕ್ಕೆ ತಂದಿದ್ದೆ. ನಂತರ ಕನಕ ವೃತ್ತ ಎಂದೆ ಹೆಸರಿಡೋಣ ಎಂದು ಸ್ವಾಮೀಜಿಗೆ ತಿಳಿಸಿದೆ.

    ಹುಳಿಯಾರು ಈ ಹಿಂದೆ ಗ್ರಾಮ ಪಂಚಾಯಿತಿಯಾಗಿತ್ತು. ಈಗ ಹುಳಿಯಾರು ಪಟ್ಟಣ ಪಂಚಾಯಿತಿಯಾಗಿ ಮೇಲ್ದೆರ್ಜೆಗೇರಿದೆ. ಪಟ್ಟಣ ಪಂಚಾಯಿತಿ ಸಭೆಯಲ್ಲಿ ಅನುಮೋದನೆ ಪಡೆದು ಕನಕ ವೃತ್ತ ಎಂದು ಹೆಸರಿಡೋಣ ಅಂತ ಹೇಳಿದೆ. ಈ ವೇಳೆ ಕಾಗಿನೆಲೆ ಶ್ರೀಗಳು ಈಗಲೇ ಆಗಬೇಕೆಂದು ಪಟ್ಟು ಹಿಡಿದರು. ಆ ವೇಳೆ ನಾನು ಶ್ರೀಗಳ ಮೇಲೆ ರೇಗಿದ್ದು ನಿಜ. ಇದಾದ ಬಳಿಕ ಯಾರ್ಯಾರೋ ದಿನ ನಿತ್ಯ ಕರೆ ಮಾಡಿ ನೀವು ಕುರುಬರ ವಿರೋಧಿ ಎಂದು ಕೇಳುತ್ತಿದ್ದರು. ನಾನು ಕುರುಬ ಸಮುದಾಯದ ಬೆಂಬಲದಿಂದಲೇ ಚಿಕ್ಕನಾಯಕನಹಳ್ಳಿಯಲ್ಲಿ ಗೆದ್ದು ಬಂದಿದ್ದೇನೆ. ನನ್ನ ಜೊತೆ ಆ ಸಮುದಾಯದ ಮುಖಂಡರು ಇದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಅವರಿಗೆ ಹೆಚ್ಚು ಆದ್ಯತೆ ನೀಡಿದ್ದೇನೆ ಎಂದು ತಿಳಿಸಿದರು.

    ನಾನು ಅಧಿಕಾರದಲ್ಲಿ ಇರುವವರೆಗೂ ಆ ವೃತ್ತಕ್ಕೆ ಸಿದ್ದಗಂಗಾ ಶ್ರೀಗಳ ಹೆಸರಿಡಲು ಬಿಡಲ್ಲ. ಶ್ರೀಗಳ ಹೆಸರಿಟ್ಟು ನಾನು ಜಾತಿವಾದಿ ಆಗಲು ತಯಾರಿಲ್ಲ. ದಾಸ ಶ್ರೇಷ್ಠ ಕನಕ ವೃತ್ತ ಎಂದೇ ನಾಮಕರಣ ಮಾಡುತ್ತೇನೆ ಎಂದು ಹೇಳಿದ್ದೇನೆ. ಹೀಗಿರುವಾಗ ಇವತ್ತು ಒಬ್ಬ ಕರೆ ಮಾಡಿ ನೀವು ಒಂದು ಸಮಾಜಕ್ಕೆ ಮಾತ್ರ ಮಂತ್ರೀನ ಎಂದು ಕೇಳಿದ, ಹೂ ಅಂದೆ. ಸಿಟ್ಟಾಗಿ ಬೈದು ಫೋನ್ ಕಟ್ ಮಾಡಿದೆ. ಆ ಆಡಿಯೋವನ್ನು ವಾಟ್ಸಪ್ ಮೂಲಕ ವೈರಲ್ ಮಾಡಿ ವಿವಾದ ಸೃಷ್ಠಿಸುತ್ತಿದ್ದಾರೆ. ಉಪ ಚುನಾವಣೆ ಗುರಿಯಾಗಿಟ್ಟುಕೊಂಡೇ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದರು.

  • ಅಧ್ಯಕ್ಷರೇ ಮಿಸ್ಡ್ ಕಾಲ್ ಮಾಡಿ ಪಕ್ಷಕ್ಕೆ ಸೇರಿ ಎಂದಿದ್ದಾರೆ, ಯಾರು ಬೇಕಾದ್ರೂ ಸೇರಬಹುದು – ಮಾಧುಸ್ವಾಮಿ

    ಅಧ್ಯಕ್ಷರೇ ಮಿಸ್ಡ್ ಕಾಲ್ ಮಾಡಿ ಪಕ್ಷಕ್ಕೆ ಸೇರಿ ಎಂದಿದ್ದಾರೆ, ಯಾರು ಬೇಕಾದ್ರೂ ಸೇರಬಹುದು – ಮಾಧುಸ್ವಾಮಿ

    – ಅನಿಲ್ ಲಾಡ್ ಸಹ ಪಕ್ಷ ಸೇರಬಹುದು

    ಹಾಸನ: ಯಾರು ಬೇಕಾದರೂ ನಮ್ಮ ಪಕ್ಷಕ್ಕೆ ಸೇರಬಹುದು, ನಮ್ಮ ಅಧ್ಯಕ್ಷರೇ ಮಿಸ್ಡ್ ಕಾಲ್ ಮಾಡಿ ಪಕ್ಷಕ್ಕೆ ಸೇರಿ ಎಂದು ಹೇಳಿದ್ದಾರೆ. ರಾಜಕೀಯ ಪಕ್ಷ ನಮಗೇನು ಮಡಿವಂತಿಕೆ ಇಲ್ಲ. ಹೀಗಾಗಿ ಅನಿಲ್ ಲಾಡ್ ಸಹ ಪಕ್ಷಕ್ಕೆ ಸೇರಬಹುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿಲ್ ಲಾಡ್ ಬಿಜೆಪಿ ಸೇರ್ಪಡೆಯಿಂದ ಬಳ್ಳಾರಿಯಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ. ಅಲ್ಲದೆ, ಮಿಸ್ಡ್ ಕಾಲ್ ನೀಡುವ ಮೂಲಕ ಯಾರೂ ಬೇಕಾದರೂ ಬಿಜೆಪಿ ಸದಸ್ಯತ್ವ ಪಡೆಯಬಹುದು ಎಂದು ಈಗಾಗಲೇ ಅಧ್ಯಕ್ಷರೇ ತಿಳಿಸಿದ್ದಾರೆ. ನಮ್ಮ ನಾಯಕರು ದೊಡ್ಡ ಘೋಷಣೆ ಮಾಡಿಬಿಟ್ಟಿದ್ದಾರೆ. ಅನಿಲ್ ಲಾಡ್ ಸೇರಿದಂತೆ ಯಾರು ಬೇಕಾದರೂ ಬರಬಹುದು ಎಂದು ಆಹ್ವಾನಿಸಿದರು.

    ರಾಜಕೀಯ ಪಕ್ಷ ನಮಗೇನು ಮಡಿವಂತಿಕೆ ಇಲ್ಲ. ಬಿಜೆಪಿ ಕೇಡರ್ ಬೇಸ್ ಪಕ್ಷ, ಸಂಘಟನೆಯಿಂದ ಬೆಳೆದು ಬಂದಿರುವ ಪಕ್ಷ. ನಾವೇ ಇದ್ದರೂ ಪಕ್ಷ ಚೆನ್ನಾಗಿರುತ್ತೆ, ಯಾರು ಬಂದರೂ ಪಕ್ಷ ಚೆನ್ನಾಗಿರುತ್ತದೆ. ಬರುವುದರಿಂದ, ಹೋಗುವುದರಿಂದ ಸಂಘಟನೆಯಲ್ಲಿ ವ್ಯತ್ಯಾಸ ಆಗುತ್ತದೆ ಎಂದು ನಾನು ಭಾವಿಸಿಲ್ಲ ಎಂದು ವಿವರಿಸಿದರು.

    ಆಯೋಗ ಘೋಷಣೆ ಮಾಡಿದಾಗ ಉಪಚುನಾವಣೆ ನಡೆಯುತ್ತವೆ. ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎನ್ನುವ ಭರವಸೆ ಇದೆ. ಹಾಸನ ನೂತನ ಕೋರ್ಟ್ ಕಟ್ಟಡದ ಉಳಿದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಉದ್ಘಾಟನೆ ಮಾಡುತ್ತೇವೆ. ಕೋರ್ಟ್ ಉದ್ಘಾಟನೆ ರಾಜಕೀಯ ಕಾರಣಕ್ಕೆ ನಿಂತಿಲ್ಲ. ಬಿಜೆಪಿ ವರ್ಸಸ್ ಜೆಡಿಎಸ್ ರಾಜಕೀಯ ಏನಿಲ್ಲ ಎಂದು ಸ್ಪಷ್ಟಪಡಿಸಿದರು.

    ಫೋನ್ ಟ್ಯಾಪಿಂಗ್ ಕುರಿತು ಪ್ರತಿಕ್ರಿಯಿಸಿದ ಅವರು, ತನಿಖೆ ನಡೆಯುತ್ತಿರುವಾಗ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಅಲೋಕ್ ಕುಮಾರ್ ವಿಚಾರಣೆ ಇನ್ನೂ ಮುಗಿದಿಲ್ಲ. ಈ ಮಧ್ಯೆ ನಾವು ಕಾಲ್ಪನಿಕವಾಗಿ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಹೇಳಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

  • ಬ್ಯಾಂಕಿನಿಂದ ರೈತರಿಗೆ ನೋಟಿಸ್ ನೀಡೋದು ತಪ್ಪಲ್ಲ- ಸಚಿವ ಮಾಧುಸ್ವಾಮಿ

    ಬ್ಯಾಂಕಿನಿಂದ ರೈತರಿಗೆ ನೋಟಿಸ್ ನೀಡೋದು ತಪ್ಪಲ್ಲ- ಸಚಿವ ಮಾಧುಸ್ವಾಮಿ

    – ನಮ್ಮ ಸರ್ಕಾರ ಇನ್ನು ಸಾಲ ಮನ್ನಾ ನಿರ್ಧಾರ ತೆಗೊಂಡಿಲ್ಲ

    ತುಮಕೂರು: ಬ್ಯಾಂಕ್‍ನಿಂದ ರೈತರಿಗೆ ನೋಟಿಸ್ ನೀಡುವುದು ತಪ್ಪಲ್ಲ. “ಕಮರ್ಷಿಯಲ್ ಬ್ಯಾಂಕ್‍ಗೆ ರೈತರ ಸಾಲ ವಸೂಲಿ ಮಾಡಬೇಡಿ ಎಂದು ಹೇಳುವುದು ಕಷ್ಟ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಾಲ ಮನ್ನಾ ಮಾಡಿದರೂ ರೈತರಿಗೆ ನೋಟಿಸ್ ನೀಡುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ರೈತರಿಗೆ ಸಾಲದ ಕುರಿತು ನೋಟಿಸ್ ನೀಡಬೇಡಿ ಎಂದು ನಮ್ಮ ಸಹಕಾರಿ ಬ್ಯಾಂಕ್‍ಗಳಿಗೆ ನಿರ್ದೇಶನ ಕೊಡಬಹುದು. ಆದರೆ ಕಮರ್ಷಿಯಲ್ ಬ್ಯಾಂಕ್‍ಗಳಿಗೆ ರೈತರ ಸಾಲ ವಸೂಲಿ ಮಾಡಬೇಡಿ ಎಂದು ಹೇಳುವುದು ಕಷ್ಟ. ಅಲ್ಲದೆ ಸಾಲ ಮನ್ನಾ ನಿರ್ಧಾರವನ್ನು ನಮ್ಮ ಸರ್ಕಾರ ಇನ್ನು ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಸಾಲ ವಸೂಲಾತಿಗೆ ಬ್ಯಾಂಕ್‍ಗಳು ಪ್ರತಿ ಸಾರಿ ಅದಾಲತ್ ಮಾಡುತ್ತವೆ. ಸಾಲ ಕಟ್ಟದೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಿರಬಹುದು. ಸರ್ಕಾರ ಸಾಲಮನ್ನಾ ಯೋಜನೆಯ ಹಣವನ್ನು ಬ್ಯಾಂಕಿಗೆ ತುಂಬದೆ ಬ್ಯಾಂಕಿನವರಿಗೆ ನೋಟಿಸ್ ಕೊಡಬೇಡಿ ಎಂದು ಹೇಳಲು ಆಗುವುದಿಲ್ಲ. ಬ್ಯಾಂಕಿನವರು ಸಾಲದ ನೋಟಿಸ್ ಕೊಡುವುದರಲ್ಲಿ ತಪ್ಪಿಲ್ಲ. ಆದರೆ ರೈತರ ಆಸ್ತಿಗಳನ್ನು ಜಪ್ತಿ ಮಾಡಿ ಕಿರುಕುಳ ನೀಡದಂತೆ ಎಚ್ಚರಿಕೆ ನೀಡಿದ್ದೇವೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.