Tag: Minister Narendra Modi

  • ಕನಿಷ್ಠ ಬೆಂಬಲ ಬೆಲೆ ಘೋಷಣೆ ಗಿಮಿಕ್, ಈ ವಿಚಾರದಲ್ಲಿ ಮೋದಿ ನಿಸ್ಸೀಮ: ಪರಮೇಶ್ವರ್

    ಕನಿಷ್ಠ ಬೆಂಬಲ ಬೆಲೆ ಘೋಷಣೆ ಗಿಮಿಕ್, ಈ ವಿಚಾರದಲ್ಲಿ ಮೋದಿ ನಿಸ್ಸೀಮ: ಪರಮೇಶ್ವರ್

    ಬೆಂಗಳೂರು: ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ನಡೆ ಲೋಕಸಭಾ ಚುನಾವಣೆ ಗಿಮಿಕ್, ಪ್ರಧಾನಿ ನರೇಂದ್ರ ಮೋದಿ ಅವರು ಇಂತಹದಕ್ಕೆ ನಿಸ್ಸೀಮರು ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ವ್ಯಂಗ್ಯವಾಡಿದ್ದಾರೆ.

    ನಾಲ್ಕು ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಬಹುದಿತ್ತು. ಆದರೆ ಹಾಗೇ ಮಾಡಲಿಲ್ಲ. ಈಗ ಕೇಂದ್ರದ ಬಿಜೆಪಿ ಸರ್ಕಾರದ ಅಧಿಕಾರ ಅವಧಿ ಪೂರ್ಣಗೊಳ್ಳಲು ಒಂದು ವರ್ಷ ಮಾತ್ರ ಬಾಕಿ ಇದೆ. ನಾಲ್ಕು ವರ್ಷ ಏರಿಕೆ ಮಾಡದೇ ಈಗ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆ. ಲೋಕಸಭಾ ಚುನಾವಣೆ ಉದ್ದೇಶದಿಂದಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರೈತರಿಗೆ ಮೋದಿಯಿಂದ ಬಂಪರ್ ಗಿಫ್ಟ್: ಯಾವ ಬೆಳೆಗೆ ಎಷ್ಟು ಕನಿಷ್ಠ ಬೆಂಬಲ ಬೆಲೆ? ಇಲ್ಲಿದೆ ಪೂರ್ಣ ಮಾಹಿತಿ

    ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಲು ನನಗೆ ಅವಕಾಶ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ಯೂತ್ ಅಧ್ಯಕ್ಷರಾಗಿದ್ದರು. ಅಲ್ಲದೇ ನಾಲ್ಕು ಬಾರಿ ಶಾಸಕರಾಗಿ, ಒಂದು ಬಾರಿ ಸಚಿವರಾಗಿದ್ದವರು. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸಾರಥ್ಯ ಅವರಿಗೆ ದೊರೆತಿದೆ ಎಂದು ಹೇಳಿದರು.