Tag: Minister of Education

  • ಶಾಲೆಗಳನ್ನು ಪ್ರಾರಂಭಿಸುವಂತೆ ಮೊದಲು ಹೇಳಿದವನೇ ನಾನು: ಬಸವರಾಜ ಹೊರಟ್ಟಿ

    ಶಾಲೆಗಳನ್ನು ಪ್ರಾರಂಭಿಸುವಂತೆ ಮೊದಲು ಹೇಳಿದವನೇ ನಾನು: ಬಸವರಾಜ ಹೊರಟ್ಟಿ

    ಹಾವೇರಿ: ಶಾಲೆಗಳನ್ನು ಪ್ರಾರಂಭ ಮಾಡುವಂತೆ ಮೊದಲು ಹೇಳಿದವನೇ ನಾನು. ಕೊರೊನಾದಿಂದ ಶಾಲೆಗಳು ಬಂದ್ ಆದಾಗ ಶಾಲೆ ಮತ್ತು ಮಕ್ಕಳ ಸಂಬಂಧ ಕಡಿತವಾಯ್ತು. ಎಲ್ಲರೂ ಪಾಸ್ ಆಗಲು ಶುರುವಾಯಿತು. ಮಕ್ಕಳ ಮತ್ತು ಶಾಲೆಯ ಸಂಬಂಧ ತಪ್ಪಬಾರದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

    ಹಾವೇರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮೊದಲು ವಿದ್ಯಾಗಮ ಯೋಜನೆಯೂ ಬೇಡವೆಂದು ಹೇಳಿದ್ದೆ ಹಾಗೂ ಹತ್ತತ್ತು ಮಕ್ಕಳನ್ನು ಕೂರಿಸಿ ಪಾಠ ಮಾಡುವಂತೆ ತಿಳಿಸಿದ್ದೇನೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಹೊಸ ಶಿಕ್ಷಣ ಮಂತ್ರಿಗಳು ಬಂದು ಮೊದಲು ನನ್ನನ್ನೇ ಭೇಟಿ ಮಾಡಿದರು. ಆವಾಗಲೂ ಶಾಲೆ ಆರಂಭ ಮಾಡುವಂತೆ ಹೇಳಿದ್ದೇನೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಲೆಗಳ ಆರಂಭದ ಬಗ್ಗೆ ಸಮಿತಿ ರಚನೆ ಮಾಡುವಂತೆ ತಿಳಿಸಿದ್ದೇನೆ. ಮಕ್ಕಳಿಗೆ ಏನಾದರೂ ಆದರೆ ಸಮಿತಿ ಜವಾಬ್ದಾರಿ. ಮಕ್ಕಳ ಬಗ್ಗೆ ಅವರ ಪಾಲಕರು ಜವಾಬ್ದಾರಿ ತೆಗೆದುಕೊಳ್ಳಬೇಕು. ಶಾಲೆಗಳನ್ನು ಆರಂಭಿಸಬೇಕು ಎಂದಿದ್ದಾರೆ. ಇದನ್ನೂ ಓದಿ:ಹೋಟೆಲಿನ ವಾಶ್ ರೂಮಿನಲ್ಲಿ ಅವಿತಿದ್ದ ನಟಿ ಸೋನಿಯಾ ವಶಕ್ಕೆ

    ಸರ್ಕಾರಗಳು ಬದಲಾದಂತೆ ಶಿಕ್ಷಣ ನೀತಿ ಬದಲಾಗಬಾರದು. ಈಗಿನ ಹೊಸ ಶಿಕ್ಷಣ ನೀತಿ ಸರಿಯಿಲ್ಲ. ಹಿಂದಿನ ಶಿಕ್ಷಣ ನೀತಿಯೇ ಸರಿ ಇತ್ತು. ವರದಿಯನ್ನ ವಿಸ್ತೃತವಾಗಿ ಅಧ್ಯಯನ ಮಾಡಿ ಕೆಲವೊಂದು ಬದಲಾವಣೆಗಳನ್ನು ಮಾಡಬೇಕು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪರಿಪೂರ್ಣತೆಯಿಂದ ಕೂಡಿಲ್ಲ. ನಾನು ನೂರು ದೇಶಗಳನ್ನು ತಿರುಗಿದ್ದೇನೆ. ಅಲ್ಲಿ ಸರ್ಕಾರ ಬದಲಾದಂತೆ ಶಿಕ್ಷಣ ನೀತಿಗಳು ಬದಲಾಗುವುದಿಲ್ಲ. ಸರ್ಕಾರ ಬದಲಾದಂತೆ ನೀತಿ ಬದಲಾದರೆ ಶಿಕ್ಷಣ ವ್ಯವಸ್ಥೆ ಸರಿಯಾಗುವುದಿಲ್ಲ. ನಮ್ಮ ದೇಶದಲ್ಲಿ ಮೂರು ಹಂತದ ಶಿಕ್ಷಣವೇ ಉತ್ತಮ. ಹಿಂದಿನ ಶಿಕ್ಷಣ ಪದ್ದತಿಯೇ ಉತ್ತಮವಾಗಿದೆ ಎಂದು ನುಡಿದಿದ್ದಾರೆ.

    ಮಾಜಿ ಸಿಎಂ ಕುಮಾರಸ್ವಾಮಿ 2023ರ ಚುನಾವಣೆ ನನ್ನ ಕೊನೆಯ ಹೋರಾಟದ ಹೇಳಿಕೆ ಕುರಿತಂತೆ, ನಾನು ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಸಭಾಪತಿ ಆದವರು ರಾಜಕೀಯ ಮಾತನಾಡಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ:ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದ ಸರ್ಕಾರ – ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ?

  • ಜನವರಿ 1 ರಿಂದಲೇ ಶಾಲೆ ಆರಂಭ: ಸುರೇಶ್ ಕುಮಾರ್ ಸ್ಪಷ್ಟನೆ

    ಜನವರಿ 1 ರಿಂದಲೇ ಶಾಲೆ ಆರಂಭ: ಸುರೇಶ್ ಕುಮಾರ್ ಸ್ಪಷ್ಟನೆ

    ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ಬಗ್ಗೆ ತಜ್ಞರ ಜೊತೆಗೆ ಮಾತಾನಾಡಿದ್ದೇನೆ. ಈಗಾಗಲೇ ನಿರ್ಧಾರ ಮಾಡಿರುವಂತೆ ಜನವರಿ 1 ರಿಂದ ಶಾಲೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಸಚಿವರು, ಹೊಸ ವೈರಸ್ ಬಗ್ಗೆ ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ. ಹೆಚ್ಚು ಆತಂಕಪಡುವ ಅವಶ್ಯಕತೆ ಇಲ್ಲ. ಪ್ರತಿದಿನ ತಜ್ಞರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದೇವೆ. ತಜ್ಞರ ವರದಿ ಅನುಸಾರವಾಗಿ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.

    ಜಿಲ್ಲಾ ಸಿಇಒ ಗಳು, ಡಿಡಿಪಿಐ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಚಿವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಶಾಲಾ-ಕಾಲೇಜು ಪ್ರಾರಂಭಕ್ಕೆ ಸಿದ್ಧತೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುತ್ತಿದೆ. ಶಾಲೆಯನ್ನು ಪ್ರಾಂಭಿಸುವ ಮೊದಲು ಯಾವೆಲ್ಲಾ ಮುಂಜಾಗ್ರತಾ ಕ್ರಮಗಳ ಅನುಷ್ಠಾನ, ಕೊರೊನಾ ಮಾರ್ಗಸೂಚಿ ಪಾಲನೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

  • 500ಕ್ಕೂ ಕೊರೊನಾ ವಾರಿಯರ್ ಸಾವು, ಸರ್ಕಾರದಿಂದ ಒಂದೇ ಕುಟುಂಬಕ್ಕೆ ಪರಿಹಾರ: ಹೆಚ್‍ಡಿಕೆ ಕಿಡಿ

    500ಕ್ಕೂ ಕೊರೊನಾ ವಾರಿಯರ್ ಸಾವು, ಸರ್ಕಾರದಿಂದ ಒಂದೇ ಕುಟುಂಬಕ್ಕೆ ಪರಿಹಾರ: ಹೆಚ್‍ಡಿಕೆ ಕಿಡಿ

    – ಹೃದಯ ಹೀನ ಉತ್ತರ ಕೊಡುವ ಶಿಕ್ಷಣ ಸಚಿವರು

    ಬೆಂಗಳೂರು: ರಾಜ್ಯದಲ್ಲಿ 500ಕ್ಕೂ ಹೆಚ್ಚು ಕೊರೊನಾ ವಾರಿಯರ್ ಗಳು ಪ್ರಾಣ ಕಳೆದುಕೊಂಡಿದ್ದು, ರಾಜ್ಯ ಸರ್ಕಾರ ಮಾತ್ರ ಒಂದೇ ಕುಟುಂಬಕ್ಕೆ ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಮ್ಮನ ಉಳಸಿಕೊಡಿ ಎಂದು ಮನವಿ ಮಾಡಿಕೊಂಡ ಪುತ್ರಿಗೆ ಶಿಕ್ಷಣ ಸಚಿವರು ಹೃದಯಹೀನ ಉತ್ತರ ನೀಡಿದ್ದಾರೆ. ಇಂತಹ ಸರ್ಕಾರದಿಂದ ಜನರು ಏನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ.

    ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜೀವ ಪಣಕ್ಕಿಟ್ಟು ಕೆಲಸ ಮಾಡಿದ 500ಕ್ಕೂ ಹೆಚ್ಚು ಕೊರೊನ ವಾರಿಯರ್ ಗಳು ಜೀವ ಕಳೆದುಕೊಂಡಿದ್ದು, ಆ ಪೈಕಿ ಕೇವಲ ಒಂದೇ ಒಂದು ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಿದೆ ಎಂಬ ವಿಚಾರ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹುದು. ಕೇವಲ ಬಾಯಿ ಚಪಲ ತೀರಿಸಿಕೊಳ್ಳಲು ಕೊರೊನ ವಾರಿಯರ್‍ಗಳನ್ನು ಭೇಷ್ ಎನ್ನುವ ಸರ್ಕಾರ, ಅವರ ಜೀವದ ಜತೆ ಆಟವಾಡುತ್ತಿದೆ. ಜನರ ಆರೋಗ್ಯ ಕಾಪಾಡುವ ಸಲುವಾಗಿ ತಮ್ಮ ಸರ್ವಸ್ವವನ್ನೇ ಬಲಿಕೊಟ್ಟ ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು?

    ತನ್ನ ಹೆತ್ತ ತಾಯಿಯನ್ನು ಉಳಿಸಿಕೊಡಿ ಎಂದು ವಿದ್ಯಾಗಮ ಯೋಜನೆಯಡಿ ಕೆಲಸ ಮಾಡಿದ ಶಿಕ್ಷಕಿಯ ಪುತ್ರಿ ಸರ್ಕಾರಕ್ಕೆ ಪತ್ರ ಬರೆದರೆ, ಶಿಕ್ಷಕಿಯ ಚಿಕಿತ್ಸಾ ವೆಚ್ಚದ ಬಿಲ್ ಕೊಡುತ್ತೇನೆ ಎಂಬ ಹೃದಯಹೀನ ಉತ್ತರ ಕೊಡುವ ಶಿಕ್ಷಣ ಮಂತ್ರಿಯಿಂದ ಹಾಗೂ ಇಂತಹ ಮನಸ್ಥಿತಿಯ ಸರ್ಕಾರದಿಂದ ಕೊರೊನ ವಾರಿಯರ್ ಗಳ ಕುಟುಂಬಗಳು ಇನ್ನೇನು ನಿರೀಕ್ಷಿಸಲು ಸಾಧ್ಯ. 60 ವೈದ್ಯರು, 20 ನರ್ಸ್‍ಗಳು, 82 ಪೊಲೀಸರು, 10 ಪೌರ ಕಾರ್ಮಿಕರು, 96 ಚಾಲಕ-ನಿರ್ವಾಹಕರು, 235 ಶಿಕ್ಷಕರು- ಉಪನ್ಯಾಸಕರು, 10 ಆಶಾ ಕಾರ್ಯಕರ್ತೆಯರು ಹೀಗೆ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಕೊರೊನಾ ಸೋಂಕಿಗೆ ತುತ್ತಾಗಿದ್ದ ಮೂಡಬಿದಿರೆ ಶಿಕ್ಷಕಿ ನಿಧನ– ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದ ವಿದ್ಯಾರ್ಥಿನಿ

    ಇನ್ನು ಪತ್ರಕರ್ತರು, ಬ್ಯಾಂಕ್ ಸೇರಿದಂತೆ ವಿವಿಧ ಸೇವಾ ವಲಯದ ನೌಕರರು ಕೂಡ ಜೀವ ತೆತ್ತಿದ್ದಾರೆ. ಇವರ ಕುಟುಂಬಗಳಿಗೆ ಸರ್ಕಾರ ಉತ್ತರದಾಯಿತ್ವ ಪ್ರದರ್ಶಿಸಬೇಕಲ್ಲವೇ? ತಮಟೆ ಬಾರಿಸಿ, ದೀಪ ಹಚ್ಚಿ, ಜನಪ್ರಿಯತೆ ಗಳಿಸಿ, ಪೋಷಾಕು ಕೊಟ್ಟರೆ ಕೊರೊನ ವಾರಿಯರ್ ಗಳು ಹಾಗೂ ಅವರ ಕುಟುಂಬಗಳು ಹೇಗೆ ಸಮಾಧಾನ ಪಟ್ಟುಕೊಳ್ಳಬೇಕು? ಕನಿಷ್ಠ ಪಕ್ಷ ಕೊರೊನ ವಾರಿಯರ್ ಗಳ ಸುರಕ್ಷತೆಗೆ ಸರ್ಕಾರ ಕ್ರಮಕೈಗೊಳ್ಳಬೇಕು, ಅದನ್ನೂ ಮೀರಿ ಜೀವ ಕಳೆದುಕೊಳ್ಳುವ ಕುಟುಂಬಗಳಿಗೆ ಪರಿಹಾರ ಕೊಡದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಟ್ವೀಟ್ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

  • ತುಮಕೂರು ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಸುರೇಶ್ ಕುಮಾರ್

    ತುಮಕೂರು ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಸುರೇಶ್ ಕುಮಾರ್

    ತುಮಕೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಇಂದು ಸರ್ಕಾರಿ ಶಾಲೆಯಲ್ಲೇ ಒಂದು ದಿನ ವಾಸ್ತವ್ಯ ಹೂಡಿ ಸ್ಥಿತಿಗತಿಗಳ ಬಗ್ಗೆ ಅರಿಯಲು ಮುಂದಾಗಿದ್ದಾರೆ.

    ತುಮಕೂರು ಜಿಲ್ಲೆಯ ಗಡಿ ಪ್ರದೇಶವಾದ ಪಾವಗಡ ತಾಲೂಕಿನ ಎನ್.ಅಚ್ಚಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ವಾಸ್ತವ್ಯ ಹೂಡಲಿದ್ದಾರೆ. ಸಂಜೆ 6 ಗಂಟೆಗೆ ಗ್ರಾಮದ ಶಾಲೆಗೆ ಆಗಮಿಸಲಿರುವ ಸಚಿವರು, ರಾತ್ರಿ ಇದೇ ಶಾಲೆಯಲ್ಲಿ ತಂಗಲಿದ್ದಾರೆ.

    ಈ ನಡುವೆ ಆರಂಭದಲ್ಲಿ ಗಡಿನಾಡ ಶಾಲೆಗಳ ಪ್ರಚಲಿತ ಸಮಸ್ಯೆಗಳು, ತಾಲೂಕು ಮತ್ತು ಜಿಲ್ಲೆಯ ಶೈಕ್ಷಣಿಕ ವಿಚಾರಗಳ ಕುರಿತ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.30 ಗಂಟೆಗೆ ಸದರಿ ಶಾಲೆಯಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಿ ರಾತ್ರಿ 10 ಗಂಟೆಗೆ ವಿದ್ಯಾರ್ಥಿಗಳು ನಡೆಸಿಕೊಡುವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡಲಿದ್ದಾರೆ.

    ಬಳಿಕ ನಾಳೆ ಬೆಳಗ್ಗೆ 8 ಗಂಟೆಗೆ ಪಾವಗಡ ತಾಲೂಕು ಮತ್ತು ಜಿಲ್ಲೆಯ ಅಧಿಕಾರಿಗಳೊಂದಿಗೆ ಗಡಿನಾಡು ಶಾಲೆಗಳ ಶೈಕ್ಷಣಿಕ ಪ್ರಗತಿ ಬಗ್ಗೆ ಚರ್ಚಿಸಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ವೆಂಕಟಮ್ಮನಹಳ್ಳಿ, ಕ್ಯಾತಗಾನಚರ್ಲು, ವಳ್ಳೂರು ಹಾಗೂ ತಿರುಮಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿ ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನದ ಬಳಿಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ವಾಸ್ತವ್ಯ ಹೂಡಲಿರುವ ಶಾಲೆಯಲ್ಲಿ ಸರ್ವ ತಯಾರಿ ನಡೆದಿದೆ.