Tag: Minister of Health

  • ಆರೋಗ್ಯ ಸಚಿವೆಯನ್ನು ‘ಕೋವಿಡ್ ರಾಣಿ’ ಎಂದಿದ್ದಕ್ಕೆ ಕ್ಷಮೆ ಕೇಳಲ್ಲ: ಕೇರಳ ಕೈ ನಾಯಕ

    ಆರೋಗ್ಯ ಸಚಿವೆಯನ್ನು ‘ಕೋವಿಡ್ ರಾಣಿ’ ಎಂದಿದ್ದಕ್ಕೆ ಕ್ಷಮೆ ಕೇಳಲ್ಲ: ಕೇರಳ ಕೈ ನಾಯಕ

    ತಿರುವನಂತಪುರಂ: ಕೇರಳದ ಆರೋಗ್ಯ ಸಚಿವೆಯನ್ನು ‘ಕೋವಿಡ್ ರಾಣಿ’ ಎಂದಿದ್ದಕ್ಕೆ ಕ್ಷಮೆ ಕೇಳಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಎಂ. ರಾಮಚಂದ್ರನ್ ಅವರು ಹೇಳಿದ್ದಾರೆ.

    ಶುಕ್ರವಾರ ಮಾತನಾಡಿದ್ದ ರಾಮಚಂದ್ರನ್, ಕೇರಳದ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಅವರು ಕೋವಿಡ್ ರಾಣಿ ಎಂಬ ಬಿರುದು ಪಡೆಯಲು ಮುಂದಾಗಿದ್ದಾರೆ ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದ್ದರು. ಇದಾದ ನಂತರ ಕೈ ನಾಯಕನ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿ ಬಹಿರಂಗವಾಗಿ ಕ್ಷಮೆ ಕೇಳುವಂತೆ ಆಗ್ರಹಿಸಲಾಗಿತ್ತು.

    ಈಗ ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂ ರಾಮಚಂದ್ರನ್, ನಾನು ಏನು ಹೇಳಿದ್ದೇನೆ ಅದು ಸರಿ. ನಾನು ಯಾರನ್ನೂ ಅವಮಾನ ಮಾಡಿಲ್ಲ. ನಾನು ಹೇಳಿದ್ದರ ಪರವಾಗಿ ನಾನು ನಿಲ್ಲುತ್ತೇನೆ. ನಾನು ಯಾರನ್ನೂ ಕ್ಷಮೆ ಕೇಳಲು ಹೋಗುವುದಿಲ್ಲ. ಕೆಲ ವಿದೇಶಿ ಮಾಧ್ಯಮಗಳು ಅವರನ್ನು ‘ರಾಕ್‍ಸ್ಟಾರ್’ ಮತ್ತು ಕೊರೊನಾವನ್ನು ಕೊಂದವರು ಎಂದು ಬಣ್ಣಿಸುತ್ತಾರೆ. ಹಾಗೆಯೇ ನಾನು ಕೂಡ ರಾಣಿಗೆ ಹೊಲಿಸಿದ್ದೇನೆ ಅದರಲ್ಲೇನು ತಪ್ಪಿದೆ ಎಂದು ಪ್ರಶ್ನೆ ಮಾಡಿದ್ದಾರೆ.

    ನಾನು ಒಂದು ಹೆಣ್ಣಿನ ವಿರುದ್ಧ ಹೇಳಿಕೆಯನ್ನು ನೀಡುವ ವ್ಯಕ್ತಿಯಲ್ಲ. ನಾನು ಯಾವಾಗಲೂ ಮಹಿಳೆಯರ ಕಲ್ಯಾಣ ಮತ್ತು ಗೌರವಕ್ಕಾಗಿ ಮುಂದೆ ನಿಲ್ಲುವಂತಹ ವ್ಯಕ್ತಿ. ಹೀಗಾಗಿ ನಾನು ಕ್ಷಮೆ ಕೇಳಲ್ಲ ಎಂದು ರಾಮಚಂದ್ರನ್ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ. ಕೈ ನಾಯಕ ಈ ಹೇಳಿಕೆ ಸರಿಯಿಲ್ಲ. ಒಂದು ಪಕ್ಷದ ನಾಯಕನಾಗಿ ಒಂದು ಮಹಿಳೆಯ ಬಗ್ಗೆ ಈ ರೀತಿಯ ಕೀಳು ಮಟ್ಟದ ಹೇಳಿಕೆ ನೀಡಬಾರದು. ಅವರು ಕ್ಷಮೆ ಕೇಳಲೇ ಬೇಕು ಎಂದು ಕೇರಳದ ಕೆಲ ನಾಯಕರು ಆಗ್ರಹಿಸಿದ್ದರು.

    ಎಂ.ರಾಮಚಂದ್ರನ್ ಹೇಳಿದ್ದೇನು?
    ಆರೋಗ್ಯ ಸಚಿವೆ ಶೈಲಜಾ ಕೋವಿಡ್ ರಾಣಿ ಎಂಬ ಬಿರುದು ಪಡೆಯಲು ಮುಂದಾಗಿದ್ದಾರೆ. ಈ ಹಿಂದೆ ರಾಮಚಂದ್ರನ್, ನಿಫಾ ವೈರಸ್ ವೇಳೆಯೂ ಇದೇ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಆರೋಗ್ಯ ಸಚಿವೆ ಶೈಲಜಾ ಟೀಚರ್, ಕೋಝಿಕೋಡ್ ನಲ್ಲಿ `ಅತಿಥಿ ಕಲಾವಿಧೆ’ ಆಗಿದ್ದರು. ನಿಫಾ ರಾಜಕುಮಾರಿ ಆಗಲು ಸಚಿವರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

  • ಕೋವಿಡ್ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ: ಸಚಿವ ಶ್ರೀರಾಮುಲು

    ಕೋವಿಡ್ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ: ಸಚಿವ ಶ್ರೀರಾಮುಲು

    ಹಾಸನ: ಕೋವಿಡ್ ಇರಬೇಕು ಇಲ್ಲ ನಾವಿರಬೇಕು. ಏಕೆಂದರೆ ಕೋವಿಡ್ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

    ಜನರ ಜೊತೆಗೆ ಸರ್ಕಾರ ಕೆಲಸ ಮಾಡುತ್ತಿದೆ. ಇಷ್ಟು ದಿನ ನಾವು ತಾಳ್ಮೆಯಿಂದ ಇದ್ದೇವೆ. ಮುಂದೆಯೂ ಯಾರು ತಾಳ್ಮೆ ಕಳೆದುಕೊಳ್ಳಬೇಡಿ. ಕೋವಿಡ್ ನಮ್ಮನ್ನು ಅಷ್ಟು ಬೇಗ ಬಿಟ್ಟು ಹೋಗಲ್ಲ. ನಾವು ಕೂಡ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಶ್ರೀರಾಮುಲು ಹೇಳಿದರು.

    ಕೊರಾನಾ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ 5 ವರ್ಷ ಜೈಲು ಗ್ಯಾರಂಟಿ. ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಈಗಾಗಲೇ ಕೆಲವೊಂದು ಚಟುವಟಿಕೆ ಆರಂಭವಾಗಿದೆ. ಮೇ 3ರ ಬಳಿಕವೂ ಲಾಕ್‍ಡೌನ್‍ನಲ್ಲಿ ಸಾಕಷ್ಟು ಸಡಿಲಿಕೆ ಆಗಲಿದೆ. ಆದ್ದರಿಂದ ನಾವು ಆ ಬಳಿಕವೂ ಎಚ್ಚರಿಕೆಯಿಂದ ಇರಬೇಕು. ಕೊರೊನಾಗೆ ರಾಜ್ಯದಲ್ಲಿ 576 ಮಂದಿಗೆ ಕೊರೊನಾ ಸೋಂಕಿತರಿದ್ದು, ಸಾಕಷ್ಟು ಮಂದಿ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೆಲ ತಜ್ಞರು ನನ್ನನ್ನು ಭೇಟಿ ಮಾಡಿ ಕೆಲ ಸಲಹೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಮತ್ತೆ ಪ್ಲಾಸ್ಮಾ ತೆರಪಿ ಚಿಕಿತ್ಸೆ ಮುಂದುವರಿಸುತ್ತೇವೆ. ಇದರಿಂದ ನಮಗೆ ಒಳ್ಳೆಯದಾಗುತ್ತಿದೆ ಎಂದರು.

    ರಾಜ್ಯದಲ್ಲಿ ಪೊಲೀಸರು, ವೈದ್ಯರು, ನರ್ಸ್, ಮಾಧ್ಯಮ ಮಿತ್ರರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇವರ ಮೇಲೆ ಹಲ್ಲೆ ಮಾಡಿದವರಿಗೆ 5 ವರ್ಷ ಜೈಲು ಶಿಕ್ಷೆ ಆಗಲಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಕ್ಲಿನಿಕಲ್ ಟ್ರಯಲ್ ಆರಂಭ ಮಾಡಿದ್ದೇವೆ. ಆರಂಭ ಯಶಸ್ಸು ನಮಗೆ ಲಭಿಸಿದ್ದು, ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ಇದನ್ನು ಆರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.

  • ಇಂಗ್ಲೆಂಡಿನಲ್ಲಿ ಕೊರೊನಾ ಅರಿವು ಮೂಡಿಸುತ್ತಿದ್ದ ಆರೋಗ್ಯ ಸಚಿವೆಗೆ ಬಂತು ಸೋಂಕು

    ಇಂಗ್ಲೆಂಡಿನಲ್ಲಿ ಕೊರೊನಾ ಅರಿವು ಮೂಡಿಸುತ್ತಿದ್ದ ಆರೋಗ್ಯ ಸಚಿವೆಗೆ ಬಂತು ಸೋಂಕು

    ಲಂಡನ್: ದೇಶದ ಜನತೆಗೆ ಕೊರೊನಾ ಬಗ್ಗೆ ಅರಿವು ಮೂಡಿಸುತ್ತಿದ್ದ ಇಂಗ್ಲೆಂಡ್ ಆರೋಗ್ಯ ಸಚಿವೆಗೂ ಕೊರೊನಾ ವೈರಸ್ ಬಂದಿರುವುದು ಹೆಲ್ತ್ ಚೆಕಪ್ ವೇಳೆ ದೃಢಪಟ್ಟಿದೆ.

    ಇಂಗ್ಲೆಂಡ್‍ನ ಆರೋಗ್ಯ ಸಚಿವೆ ನಾಡಿನ್ ಡೋರಿಸ್‍ಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. ವಿಷಯ ತಿಳಿದು ಬಂದ ಕೂಡಲೇ ಸ್ವತಃ ನಾಡಿನ್ ಡೋರಿಸ್ ಅವರೇ ಮನೆಯಿಂದ ಹೊರಗೆ ಬರೆದೇ ಗೃಹ ಬಂಧನದಲ್ಲಿದ್ದಾರೆ.

    ನಾಡಿನ್ ಡೋರಿಸ್ ಅವರಿಗೆ ಕಳೆದ ಗುರುವಾರ ರೋಗದ ಲಕ್ಷಣಗಳು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಆದರೆ ರೋಗದ ಲಕ್ಷಣ ಕಾಣಿಸಿಕೊಂಡ ದಿನವೇ ನಾಡಿನ್ ಅವರು ಇಂಗ್ಲೆಂಡ್ ಪ್ರಧಾನ ಮಂತ್ರಿಯವರು ಆಯೋಜನೆ ಮಾಡಿದ್ದ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದ್ದರಿಂದ ಅವರ ಬಳಿ ಸಂಪರ್ಕದಲ್ಲಿ ಇದ್ದ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

    ಈ ಬಗ್ಗೆ ಟ್ವೀಟ್ ಮಾಡಿರುವ ನಾಡಿನ್ ಡೋರಿಸ್ ಅವರು, ನನಗೆ ಕೊರೊನಾ ಇರುವುದು ತಿಳಿದ ನಂತರ ಗುಣಮುಖರಾಗಿ ಎಂದು ಶುಭಕೊರಿದ ಎಲ್ಲರಿಗು ಧನ್ಯವಾದಗಳು. ಮುಂದೆ ಎಲ್ಲ ಸರಿ ಹೋಗುತ್ತದೆ. ಆದರೆ ನನ್ನ ಜೊತೆಯಲ್ಲೇ ಇದ್ದ ನನ್ನ 84 ವರ್ಷದ ಅಮ್ಮನಿಗೆ ಕೂಡ ಇಂದು ಕೆಮ್ಮು ಕಾಣಿಸಿಕೊಂಡಿದೆ. ಆಕೆಯನ್ನು ನಾಳೆ ವೈದ್ಯರು ಪರೀಕ್ಷಿಸಲಿದ್ದಾರೆ. ಎಲ್ಲರೂ ಸುರಕ್ಷಿತವಾಗಿರಿ ಮತ್ತು ಎಲ್ಲರೂ ಸದಾ ಕೈಗಳನ್ನು ತೊಳಿದುಕೊಳ್ಳುತ್ತಿರಿ ಎಂದು ಬರೆದುಕೊಂಡಿದ್ದಾರೆ.

    ಡಿಸೆಂಬರ್ ತಿಂಗಳಲ್ಲಿ ಚೀನಾದಲ್ಲಿ ಕಾಣಿಸಿಕೊಂಡ ಈ ವೈರಸ್ ಈಗ ವಿಶ್ವದೆಲ್ಲೆಡೆ ಕಾಣಿಸಿಕೊಂಡಿದೆ. ಚೀನಾದಲ್ಲಿ 80,778 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಭಾರತದಲ್ಲಿ ಸುಮಾರು 61 ಮಂದಿಗೆ ಕೊರೊನಾ ತಗುಲಿದ್ದು, ಕರ್ನಾಟಕದಲ್ಲಿ 4 ಮಂದಿ ಕೊರೊನಾ ತುತ್ತಾಗಿರುವುದು ದೃಢಪಟ್ಟಿದೆ. ಇತ್ತ ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿ ಒಟ್ಟು 14 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿದೆ.

    ಇತ್ತ ಇರಾನ್‍ನಲ್ಲಿ ಕೂಡ ಕೊರೊನಾ ಮರಣಮೃದಂಗ ಬಾರಿಸುತ್ತಿದೆ. 291 ಮಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದು, 8,042 ಮಂದಿಗೆ ಸೋಂಕು ತಗುಲಿದೆ. ಈ ಮಧ್ಯೆ ಇರಾನ್‍ನಲ್ಲಿ ಇದ್ದ 58 ಭಾರತೀಯರನ್ನು ಭಾರತೀಯ ವಾಯುಪಡೆ ತಾಯ್ನಾಡಿಗೆ ವಾಪಸ್ ಕರೆತಂದಿದೆ. ಮಹಾಮಾರಿ ಕೊರೊನಾಗೆ ಭಾರತೀಯರೊಬ್ಬರು ಸಾವನ್ನಪ್ಪಿದ್ದಾರೆ. ಭಾರತೀಯ ಮೂಲದ ಬ್ರಿಟನ್‍ನಲ್ಲಿದ್ದ ಮನೋಹರ್ ಕೃಷ್ಣ ಪ್ರಭು(80) ಮೃತರಾಗಿದ್ದಾರೆ. ಇವರು ವ್ಯಾಟ್‍ಫೋರ್ಡ್ ಜನರಲ್ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ.

  • ಸಚಿವರ ಆಸ್ಪತ್ರೆ ಭೇಟಿ, ಸ್ವಚ್ಛತೆ ಕಾಪಾಡುವಂತೆ ಸೂಚನೆ ನೀಡಿದ ಆರೋಗ್ಯ ಸಚಿವರು

    ಸಚಿವರ ಆಸ್ಪತ್ರೆ ಭೇಟಿ, ಸ್ವಚ್ಛತೆ ಕಾಪಾಡುವಂತೆ ಸೂಚನೆ ನೀಡಿದ ಆರೋಗ್ಯ ಸಚಿವರು

    ಕಲಬುರಗಿ: ಜಿಲ್ಲಾಸ್ಪತ್ರೆ ಹಾಗೂ ಜಯದೇವ ಹೃದ್ರೋಗ ಆಸ್ಪತ್ರಗೆ ಆರೋಗ್ಯ ಸಚಿವ ಶಿವಾನಂದ್ ಪಾಟೀಲ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಈ ವೇಳೆ ಆಸ್ಪತ್ರೆಯಲ್ಲಿನ ಮೂಲಭೂತ ಸೌಲಭ್ಯಗಳು ಹಾಗೂ ಪ್ರತಿ ವಾರ್ಡ್ ನಲ್ಲಿಯೂ ಸ್ವಚ್ಛತೆ ಜೊತೆಗೆ ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ತರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಸ್ಪತ್ರೆಯ ಸರ್ಜನ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಶಿವಾನಂದ್ ಪಾಟೀಲ್ ಸೂಚನೆ ನೀಡಿದರು.

    ಇದೇ ವೇಳೆ ಮಾತನಾಡಿದ ಅವರು, ಕಲಬುರಗಿ ಜಿಲ್ಲಾಸ್ಪತ್ರೆ ಅಲ್ಲದೇ ರಾಜ್ಯ ಸೇರಿದಂತೆ ದೇಶಾದ್ಯಂತ ರೇಬಿಸ್ ಔಷಧ ಕೊರತೆಯಿದೆ. ರೇಬಿಸ್ ಔಷಧ ಕೊರತೆ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ವಿವರಣೆ ಕೇಳಿದೆ. ಅಲ್ಲದೇ ಅಗತ್ಯಕ್ಕೆ ತಕ್ಕಂತೆ ರೇಬಿಸ್ ಔಷಧ ಪೂರೈಕೆ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಹೇಳಿದ್ದಾರೆ.