Tag: Minister position

  • ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರಲ್ಲಿ ನಾನು ಮೊದಲಿಗ: ತಿಪ್ಪಾರೆಡ್ಡಿ

    ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರಲ್ಲಿ ನಾನು ಮೊದಲಿಗ: ತಿಪ್ಪಾರೆಡ್ಡಿ

    ಚಿತ್ರದುರ್ಗ: ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರಲ್ಲಿ ನಾನು ಮೊದಲಿಗ ಎಂದು ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಅಸಮಾಧಾನ ಹೊರಹಾಕಿದ್ದಾರೆ.

    ಸಿಎಂ ಬೊಮ್ಮಾಯಿ ದೆಹಲಿಗೆ ತೆರಳುವ ಬೆನ್ನಲ್ಲೆ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಉತ್ಸಾಹಗರಿಗೆದರಿದೆ. ಅದರಲ್ಲೂ ಸಚಿವ ಸಂಪುಟ ಪುನರ್ ರಚನೆ/ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಜಿ.ಹೆಚ್ ತಿಪ್ಪಾರೆಡ್ಡಿ ಅವರು, ಚುನಾವಣಾ ದೃಷ್ಟಿಯಿಂದ ಸಂಪುಟ ಪುನರ್ ರಚನೆಯಾಗುವ ನಿರೀಕ್ಷೆಯಿದೆ. ರಾಜ್ಯಕ್ಕೆ ಗೃಹಸಚಿವ ಅಮಿತ್ ಶಾ ಬಂದು ಹೋದ ಮೇಲೆ ಇವೆಲ್ಲಾ ಚರ್ಚೆಗಳಾಗಿರುವ ಮಾಹಿತಿಯಿದೆ. ಹಾಗೆಯೇ ಹೊಸಪೇಟೆಯಲ್ಲಿ ನಡೆಯುವ ಕಾರ್ಯಕಾರಣಿ ಸಭೆ ಬಳಿಕ ಚರ್ಚೆಯಾಗಲಿದೆ ಎಂದಿದ್ದಾರೆ.

    ಏಪ್ರಿಲ್ 16-17 ರಂದು ಹೊಸಪೇಟೆಯಲ್ಲಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ನಿಮಗೆ ಸಚಿವ ಸ್ಥಾನ ಗ್ಯಾರಂಟಿ ಅಂತ ನಮ್ಮ ಶಾಸಕ ಮಿತ್ರರು ಹೇಳುತ್ತಿದ್ದಾರೆ. ಆದರೆ ನಮಗೆ ಸಚಿವ ಸ್ಥಾನ ನೀಡುವುದು ಸಿಎಂ ಹಾಗೂ ಕೇಂದ್ರದ ನಾಯಕರಿಗೆ ಬಿಟ್ಟ ವಿಚಾರವಾಗಿದೆ. ಬಹಳ ಜನ ನೀವು ಸಚಿವರಾಗುತ್ತೀರಾ ಅಂತ ಅಪೇಕ್ಷೆ ಇಟ್ಟುಕೊಂಡಿದ್ದಾರೆ. ಇದನ್ನೂ ಓದಿ: ಬಿರ್ಭೂಮ್ ಹಿಂಸಾಚಾರ – ಮೃತರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ಕೊಟ್ಟ ಮಮತಾ ಬ್ಯಾನರ್ಜಿ

    ಚುನಾವಣಾ ದೃಷ್ಟಿಯಿಂದ ನಮ್ಮ ಜಿಲ್ಲೆಗೆ ಸಚಿವ ಸ್ಥಾನ ಬೇಕಾಗಿದೆ. ಆದರೂ ಅದರ ಬಗ್ಗೆ ನಾನು ಈವಾಗ ಕಾಮೆಂಟ್ ಮಾಡುವುದು ಸರಿಯಲ್ಲ. ಜೊತೆಗೆ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮತದಾರರಿಗೆ ಪಕ್ಷದ ಸಂದೇಶ ಹೋಗಬೇಕು. ಆ ದೃಷ್ಟಿಯಿಂದ ಪಕ್ಷದ ಹಿರಿಯರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ

  • ಸಾರಾ ಮಹೇಶ್ ಕೊಚ್ಚೆ ಗುಂಡಿ, ಕಲ್ಲೆಸೆದು ಹೊಲಸು ಮಾಡಿಕೊಳ್ಳಲ್ಲ- ಎಚ್.ವಿಶ್ವನಾಥ್

    ಸಾರಾ ಮಹೇಶ್ ಕೊಚ್ಚೆ ಗುಂಡಿ, ಕಲ್ಲೆಸೆದು ಹೊಲಸು ಮಾಡಿಕೊಳ್ಳಲ್ಲ- ಎಚ್.ವಿಶ್ವನಾಥ್

    ಬೆಂಗಳೂರು: ಮಾಜಿ ಸಚಿವ ಸಾ.ರಾ.ಮಹೇಶ್ ಕೊಚ್ಚೆ ಗುಂಡಿ, ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

    ಹೈ ಕೋರ್ಟ್ ತೀರ್ಪಿನ ಕುರಿತು ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಎಚ್.ವಿಶ್ವನಾಥ್ ವಿರುದ್ಧ ಕಿಡಿಕಾರಿ, ನ್ಯಾಯದೇವತೆ ಶಿಕ್ಷೆ ನೀಡಿದ್ದಾಳೆ ಎಂದು ಹೇಳಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಾರಾ ಮಹೇಶ್ ಕೊಚ್ಚೆ ಗುಂಡಿ, ಅವರ ಬಗ್ಗೆ ನಾನು ಮಾತಾಡಲ್ಲ. ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ. ಪದೇ ಪದೇ ಕಲ್ಲೆಸೆದು ಶುಭ್ರ ಬಟ್ಟೆ ಕೊಳೆ ಮಾಡಿಕೊಳ್ಳುವುದಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಆಣೆ ಪ್ರಮಾಣವಾದ 1 ವರ್ಷಕ್ಕೆ ನ್ಯಾಯದೇವತೆಯಿಂದ ವಿಶ್ವನಾಥ್‌ಗೆ ಶಿಕ್ಷೆ – ಸಾರಾ ಮಹೇಶ್‌

    ಸಾರಾ ಮಹೇಶನ ಕೊಚ್ಚೆ ಗುಂಡಿಗೆ ಕಲ್ಲು ಎಸೆದು ಪದೇ ಪದೇ ಕೊಳೆ ಮಾಡಿಕೊಳ್ಳಲು ನಾನು ಇಷ್ಟಪಡುವುದಿಲ್ಲ. ಇದರಿಂದ ನನ್ನ ಶುಭ್ರ ವಸ್ತ್ರವನ್ನು ಕೊಳೆ ಮಾಡಿಕೊಳ್ಳಲು ನಾನು ತಯಾರಿಲ್ಲ. ಯಾರ ಬಗ್ಗೆ ಏನು ಮಾತನಾಡಬೇಕು ಎಂಬ ಅರಿವಿಲ್ಲದೆ, ಬಾಯಿಗೆ ಬಂದಂತೆ ಮಾತನಾಡುವವರಿಗೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

    ಇದೇ ವೇಳೆ ಹೈ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ತೀರ್ಪಿನ ಪ್ರತಿ ಕೈ ಸೇರಿದ ಮೇಲೆ ವಕೀಲರೊಂದಿಗೆ ಚರ್ಚಿ ಮುಂದಿನ ಕ್ರಮ ಕೂಗೊಳ್ಳುತ್ತೇವೆ. ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವ ಕುರಿತು ಸಹ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

  • ಶ್ರೀರಾಮುಲು ಟೀಮ್‍ಗೆ ಸಚಿವ ಸ್ಥಾನ ನೀಡ್ಬೇಡಿ – ಸಿಎಂಗೆ ಟಪಾಲ್ ಗಣೇಶ್ ಮನವಿ

    ಶ್ರೀರಾಮುಲು ಟೀಮ್‍ಗೆ ಸಚಿವ ಸ್ಥಾನ ನೀಡ್ಬೇಡಿ – ಸಿಎಂಗೆ ಟಪಾಲ್ ಗಣೇಶ್ ಮನವಿ

    ಬಳ್ಳಾರಿ: ಜಿಲ್ಲೆಯ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ತಂಡಕ್ಕೆ ಸಚಿವ ಸ್ಥಾನ ನೀಡಬಾರದೆಂದು ಬಳ್ಳಾರಿಯಲ್ಲಿ ಗಣಿ ಉದ್ಯಮಿ ಟಪಾಲ್ ಗಣೇಶ್ ಸಿಎಂ ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದಾರೆ.

    ಇಂದು ಬಿಜೆಪಿ ಬಹುಮತ ಸಾಬೀತು ಮಾಡಿದ್ದು ಸಿಎಂ ಆಗಿ ಬಿ.ಎಸ್ ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಮುಂದೆ ಸಚಿವ ಸ್ಥಾನ ಹಂಚಿಕೆಯಲ್ಲಿ ಬಳ್ಳಾರಿಯ ರೆಡ್ಡಿ ಟೀಮ್ ಹಾಗೂ ಶ್ರೀರಾಮುಲುಗೆ ಸಚಿವ ಸ್ಥಾನ ನೀಡಬಾರದೆಂದು ಮನವಿ ಮಾಡಿಕೊಂಡಿದ್ದಾರೆ.

    ಅಕ್ರಮ ಗಣಿಗಾರಿಕೆ, ಗಡಿನಾಶ ಮತ್ತು ರಿಪಬ್ಲಿಕ್ ಆಫ್ ಬಳ್ಳಾರಿ ಅಪಕೀರ್ತಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ತಂಡಕ್ಕೆ ಇದೆ. 2008 ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಳ್ಳಾರಿ ಸೇರಿದಂತೆ ರಾಜ್ಯದಲ್ಲಿ ರೆಡ್ಡಿ, ಶ್ರೀರಾಮುಲು ಏನೇನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಅಕ್ರಮ ಗಣಿಗಾರಿಕೆಯಲ್ಲಿ ಶ್ರೀ ರಾಮುಲು ಹೆಸರಿಲ್ಲ ಆದರೆ ಜನಾರ್ದನ ರೆಡ್ಡಿ ಮತ್ತು ಶ್ರೀ ರಾಮುಲು ಒಂದೇ ಜೀವ ಇದ್ದಂತೆ. ಶ್ರೀರಾಮುಲುಗೆ ಸಚಿವ ಸ್ಥಾನ ಕೊಟ್ಟರೆ ರೆಡ್ಡಿ ಸಚಿವನಾದಂತೆ. ಅದ್ದರಿಂದ ಶ್ರೀರಾಮುಲು ಅಷ್ಟೇ ಅಲ್ಲದೇ ಆ ತಂಡದಲ್ಲಿ ಇರುವ ಸೋಮಶೇಖರ ರೆಡ್ಡಿ ಹಾಗೂ ಕರುಣಾಕರ ರೆಡ್ಡಿಗೂ ಕೂಡ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

    ಇವರಿಗೆ ಮಂತ್ರಿ ಸ್ಥಾನ ನೀಡುವ ಬದಲು ಪಕ್ಷಕ್ಕಾಗಿ ದುಡಿದ ಪ್ರಾಮಾಣಿಕರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೆ ಉಳಿವಿದೆ ಎಂದು ಬಳ್ಳಾರಿಯ ಗಣಿ ಉದ್ಯಮಿ ಟಪಾಲ್ ಗಣೇಶ್ ಸಿಎಂ ಯಡಿಯೂರಪ್ಪನವರಿಗೆ ವಿಡಿಯೋ ರೆಕಾರ್ಡ್ ಮಾಡಿ ಮನವಿ ಮಾಡಿದ್ದಾರೆ.