Tag: Minister Ramesh Jarkiholi

  • ಮೇಕೆದಾಟು ಯೋಜನೆಗೆ ಅಧಿಸೂಚನೆ ಹೊರಡಿಸಿ- ಶೇಖಾವತ್‍ ಬಳಿ  ಜಾರಕಿಹೊಳಿ ಮನವಿ

    ಮೇಕೆದಾಟು ಯೋಜನೆಗೆ ಅಧಿಸೂಚನೆ ಹೊರಡಿಸಿ- ಶೇಖಾವತ್‍ ಬಳಿ ಜಾರಕಿಹೊಳಿ ಮನವಿ

    ನವದೆಹಲಿ: ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು.

    ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ಭೇಟಿ ಮಾಡಿದ ಅವರು, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಜೊತೆಗೆ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆಯೂ ಮನವಿ ಮಾಡಿದರು.

    ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ ಯೋಜನೆಗೆ ಅನುಮತಿ ಕೋರಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಶೇಖಾವತ್ ಅವರಿಗೆ ಒತ್ತಾಯಿಸಿದರು. ಇದನ್ನೂ ಓದಿ: ಮೇಕೆದಾಟಿಗೂ ತಮಿಳುನಾಡು ಕ್ಯಾತೆ ಯಾಕೆ? ಯೋಜನೆಯಿಂದ ರಾಜ್ಯಕ್ಕಾಗುವ ಲಾಭ ಏನು?

    ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾವೇರಿ ನೀರಾವರಿ ನಿಗಮದ ಎಂಡಿ ಜೈಪ್ರಕಾಶ್ ಉಪಸ್ಥಿತರಿದ್ದರು.

  • ಬೆಳಗಾವಿಯಲ್ಲಿ ಪ್ರತಿಮೆ ಪಾಲಿಟಿಕ್ಸ್- ರಾಯಣ್ಣ ಪ್ರತಿಮೆ ಸ್ಥಳದಲ್ಲೇ ಶಿವಾಜಿ ಪ್ರತಿಮೆ ಸ್ಥಾಪಿಸಲು ಯತ್ನ

    ಬೆಳಗಾವಿಯಲ್ಲಿ ಪ್ರತಿಮೆ ಪಾಲಿಟಿಕ್ಸ್- ರಾಯಣ್ಣ ಪ್ರತಿಮೆ ಸ್ಥಳದಲ್ಲೇ ಶಿವಾಜಿ ಪ್ರತಿಮೆ ಸ್ಥಾಪಿಸಲು ಯತ್ನ

    – ರಾತ್ರೋ ರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ
    – ಎಂಇಎಸ್ ಕಾರ್ಯಕರ್ತರ ಬಂಧನ

    ಬೆಳಗಾವಿ: ರಾಯಣ್ಣ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆದಿದೆ. ಬೆಳಗಾವಿಯ ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಲಾಗಿದೆ.

    ಕನ್ನಡಪರ ಹೋರಾಟಗಾರರು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಗೆ ತೆರಳಿ ಪ್ರತಿಮೆ ಸ್ಥಾಪನೆ ಮಾಡಿ, ರಾಯಣ್ಣನಿಗೆ ಜೈಕಾರ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

    ನಿನ್ನೆ ರಾಯಣ್ಣ ಅಭಿಮಾನಿಗಳು ಬೆಳಗಾವಿ ಚಲೋ ಹಮ್ಮಿಕೊಂಡಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಿರಲಿಲ್ಲ. ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ರಾಜ್ಯ ಕುರುಬರ ಸಂಘ ಮತ್ತು ಕನ್ನಡ ಸಂಘಟನೆಯ ನೂರಾರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದರು. ನಾಳೆ ಸಚಿವ ಈಶ್ವರಪ್ಪ ಜೊತೆ ಮಾತುಕತೆ ನಡೆಸಿ ವಿವಾದ ಇತ್ಯರ್ಥ ಮಾಡುತ್ತೇನೆ ಎಂದಿದ್ದರು.

    ಇತ್ತ ರಾತ್ರೋರಾತ್ರಿ ಪೀರನವಾಡಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ಮರಾಠಿ ಭಾಷಿಕರು, ಮೂರ್ತಿ ಪ್ರತಿಷ್ಠಾಪನೆ ಬೆನ್ನಲ್ಲೇ ಬೆಳ್ಳಂಬೆಳಗ್ಗೆ ಶಿವಾಜಿ ಮೂರ್ತಿ ಸ್ಥಾಪನೆಗೆ ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಶಿವಾಜಿ ಮೂರ್ತಿಯನ್ನು ವಶಕ್ಕೆ ಪಡೆದುಕೊಂಡರು. ಅಲ್ಲದೇ ಶಿವಾಜಿ ಮೂರ್ತಿ ಪ್ರತಿಮೆ ಸ್ಥಾಪನೆ ಮಾಡಲು ಬಂದ ಎಂಇಎಸ್ ಕಾರ್ಯಕರ್ತರನ್ನು ಬಂಧಿಸಿದರು. ಈ ವೇಳೆ ಪೊಲೀಸರ ಹಾಗೂ ಮರಾಠಿ ಭಾಷಿಕರ ನಡುವೆ ವಾಗ್ವಾದ ನಡೆಯಿತು. ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿರುವುದರಿಂದ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಭೇಟಿ ನೀಡುವ ಸಾಧ್ಯತೆ ಇದೆ.

  • ಲಕ್ಷ್ಮಿ ಹೆಬ್ಬಾಳ್ಕರ್ ಹಂಚಿದ್ದ ಕುಕ್ಕರ್ ಕೊಟ್ಟಿದ್ದು ನಾನೇ: ಸಚಿವ ರಮೇಶ್ ಜಾರಕಿಹೊಳಿ

    ಲಕ್ಷ್ಮಿ ಹೆಬ್ಬಾಳ್ಕರ್ ಹಂಚಿದ್ದ ಕುಕ್ಕರ್ ಕೊಟ್ಟಿದ್ದು ನಾನೇ: ಸಚಿವ ರಮೇಶ್ ಜಾರಕಿಹೊಳಿ

    – ‘ನಾನು ಹೆದರಿಕೊಳ್ಳುವ ಮಗಳಲ್ಲ’- ಹೆಬ್ಬಾಳ್ಕರ್ ತಿರುಗೇಟು

    ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಚಿವ ರಮೇಶ್ ಜಾರಕಿಹೊಳಿ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹಂಚಿದ್ದ ಕುಕ್ಕರ್ ಕೊಟ್ಟಿದ್ದು ನಾನೇ, ಕುಕ್ಕರ್ ಹಂಚಿದ್ದು ನನ್ನ ದುಡ್ಡಲ್ಲಿ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

    ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರ ಬೆಳಗಾವಿ ಗ್ರಾಮೀಣದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿದ ಸಚಿವರು, ತಮ್ಮ ಭಾಷಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಿಗೆ ಹಣದ ಗ..ಡ್ ಬಹಳ ಇದೆ. ನಾವು ಹಣದ ಗ..ಡ್‍ನ್ನು ನಾವು ತೋರಿಸಲು ಸಿದ್ಧರಿದ್ದೇವೆ. ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟ ಕುಕ್ಕರ್ ಸ್ಟಾರ್ಟ್ ಇದೆಯೋ ಬಂದ್ ಇದೆಯೋ? ಎಂದು ವ್ಯಂಗ್ಯವಾಡಿದರು.

    ದುಡ್ಡಿನ ಆಮಿಷಕ್ಕೆ ಬಲಿಯಾಗಬೇಡಿ ನಾನು ನಿಮ್ಮ ಜೊತೆಗಿರುತ್ತೇನೆ. 2023ರ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಬೇಕು. ಮುಂಬರುವ ಡಿಸಿಸಿ ಬ್ಯಾಂಕ್, ಜಿ.ಪಂ., ಗ್ರಾ.ಪಂ. ಎಲೆಕ್ಷನ್‍ಗೆ ಗಟ್ಟಿಯಾಗಿ ನಿಲ್ಲಬೇಕು. ಈಗಾಗಲೇ ಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾರ್ಯಕರ್ತರು ತಮ್ಮ ಅಭ್ಯರ್ಥಿಗಳ ಪರ ದುಡ್ಡು ಹಂಚುತ್ತಿದ್ದಾರೆಂಬ ಮಾಹಿತಿ ಇದೆ. ಅವರು ಎಷ್ಟು ಕೊಡ್ತಾರೋ ಅದಕ್ಕೆ ಡಬಲ್ ದುಡ್ಡು ಕೊಡಲು ಸಿದ್ಧರಿದ್ದೇವೆ. ಸಾಲ ಮಾಡಿ ಆದರೂ ದುಡ್ಡು ಕೊಡ್ತೀವಿ. ಉತ್ತರ ಕರ್ನಾಟಕದಲ್ಲಿ ಬಿಜೆಪಿಯನ್ನು ಬಲಪಡಿಸುತ್ತೇವೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೊಂದು ದೊಡ್ಡ ಸಭೆ ಮಾಡೋಣ ಬಹಳ ಮಾತನಾಡೋದಿದೆ ಎಂದರು.

    ಇತ್ತ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರದ ಸಚಿವ ಸ್ಥಾನದಲ್ಲಿದ್ದುಕೊಂಡು ಈ ರೀತಿ ಮಾತನಾಡುವುದು ಸರಿಯಲ್ಲ. ಕುಕ್ಕರ್ ವಿಚಾರ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಮಾತನಾಡಿದರೇ ನ್ಯಾಯಾಂಗ ನಿಂದನೆ ಆಗುತ್ತೆ. ಆದರೆ ಕ್ಷೇತ್ರದಲ್ಲಿ ಹರ್ಷ ಶುಗರ್ ಕಾರ್ಖಾನೆ ಇದೆ ಎಂಬ ಕಾರಣಕ್ಕೆ ಕಾರ್ಯಕ್ರಮ ಮಾಡಿ ಕುಕ್ಕರ್ ನೀಡಿದ್ದೆವು. ಸಚಿವರ ಬಳಿ ಈ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಕ್ಯಾಬಿನೆಟ್ ಸಚಿವರು ಸೋಕ್ಕಿನಿಂದ ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ಕಾನೂನಿನ ಹೋರಾಟ ನಡೆಸಲು ವಕೀಲರ ಬಳಿ ಮಾತುಕತೆ ನಡೆಸುತ್ತಿದ್ದೇನೆ ಎಂದರು.

    ಚುನಾವಣೆ ಸಂಬಂಧ ಹಣ ಹಂಚಿಕೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ. ಶುಗರ್ ಫ್ಯಾಕ್ಟರಿಗೆ ಕಬ್ಬು ನೀಡಿದ್ದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು. ಅವರಿಗೆ ಸಚಿವರು ಮೊದಲು ಹಣ ಬಿಡುಗಡೆ ಮಾಡಲಿ. ನಾನು ನಿಮ್ಮ ಭಾಷಣಕ್ಕೆ ಹೆದರಿಕೊಳ್ಳುವ ಮಗಳಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಉತ್ತಮ ಕೆಲಸ ಮಾಡಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಿಗೆ ಸಲಹೆ ನೀಡಿದರು.

  • ಮೇ 3ರ ಬಳಿಕವೂ ಲಾಕ್‍ಡೌನ್ ಮುಂದುವರಿಸಿದರೆ ಒಳ್ಳೆಯದು: ಸಚಿವ ರಮೇಶ್ ಜಾರಕಿಹೊಳಿ

    ಮೇ 3ರ ಬಳಿಕವೂ ಲಾಕ್‍ಡೌನ್ ಮುಂದುವರಿಸಿದರೆ ಒಳ್ಳೆಯದು: ಸಚಿವ ರಮೇಶ್ ಜಾರಕಿಹೊಳಿ

    ಚಿತ್ರದುರ್ಗ: ಕೊರೊನಾ ಸೋಂಕು ಹರಡದಂತೆ ಭಾರತ ಲಾಕ್‍ಡೌನ್ ಆಗಿ ಒಂದು ತಿಂಗಳು ಕಳೆದಿದೆ. ಇನ್ನೇನು ಲಾಕ್‍ಡೌನ್ ತೆರವು ದಿನಾಂಕ ಸಮೀಪಿಸಿದ್ದು, ಕೆಲ ವಲಯಗಳಲ್ಲಿ ರಾಜ್ಯ ಸರ್ಕಾರ ನಿಯಮಗಳನ್ನು ಸಡಿಲ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ನಮ್ಮ ಆರೋಗ್ಯಕ್ಕಾಗಿ ಜನರು ಮನೆಯಲ್ಲಿ ಇರುವುದು ಸೂಕ್ತ. ಅಲ್ಲದೇ ಭಾರತದಲ್ಲಿ ಲಾಕ್‍ಡೌನ್ ಮೇ 3ಕ್ಕೆ ಅಂತ್ಯಗೊಳಿಸದೆ ಮುಂದುವರಿಸಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಂಸದರು ನೀಡುತ್ತಿರುವ ಉಚಿತ ಅನ್ನದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಸಚಿವರು, ಪ್ರಧಾನ ಮಂತ್ರಿಗಳು ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದೇಶವನ್ನು ಲಾಕ್‍ಡೌನ್ ಮಾಡಿದ್ದಾರೆ. ಇದನ್ನು ಸರಿಯಾದ ರೀತಿಯಲ್ಲಿ ಎಲ್ಲರೂ ಪಾಲಿಸಬೇಕಿದೆ. ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಸಹ ಕಾಳಜಿ ವಹಿಸಬೇಕು. ವೈರಸ್ ನಿಯಂತ್ರಣಕ್ಕೆ ಸಹಕಾರ ನೀಡಬೇಕಿದೆ ಎಂದು ಮನವಿ ಮಾಡಿದರು.

    ದೇಶವನ್ನು ರೋಗದಿಂದ ನಿಯಂತ್ರಣ ಮಾಡುವ ಸಲುವಾಗಿ ಮೇ.3ರವರೆಗೆ ಮಾತ್ರ ಲಾಕ್‍ಡೌನ್ ಮಾಡಲಾಗಿದೆ. ಇದು ಇಲ್ಲಿಗೆ ನಿಲ್ಲದೆ ರೋಗ ನಿಯಂತ್ರಣಕ್ಕೆ ಬರುವವರೆಗೂ ಲಾಕ್‍ಡೌನ್ ಮುಂದುವರಿಸಬೇಕು ಎಂಬುವುದು ನನ್ನ ವೈಯುಕ್ತಿಕ ಅಭಿಪ್ರಾಯವಾಗಿದೆ. ಲಾಕ್‍ಡೌನ್ ಸಮಯದಲ್ಲಿ ಇಲ್ಲಿನ ಸಂಸದರಾದ ಎ.ನಾರಾಯಣಸ್ವಾಮಿಯವರು ತಮ್ಮ ವೈಯುಕ್ತಿಕವಾಗಿ ಜನತೆ ಹಸಿವಿನಿಂದ ಇರಬಾರದೆಂದು ಉಚಿತವಾಗಿ ಪ್ರತಿ ದಿನ ಆಹಾರವನ್ನು ನೀಡುತ್ತಿದ್ದಾರೆ. ಇದಕ್ಕೆ ಕೆಲ ಸಂಘ ಸಂಸ್ಥೆಯವರು ಸಹಕಾರ ನೀಡಬೇಕಿದೆ ಎಂದರು.

    ಸರ್ಕಾರ ಒಳ್ಳೆಯ ಉದ್ದೇಶದಿಂದ ಕಠಿಣ ಕ್ರಮವನ್ನು ತೆಗೆದುಕೊಂಡಿದೆ. ಸರ್ಕಾರದಿಂದ ಮಾತ್ರವೇ ರೋಗವನ್ನು ನಿಯಂತ್ರಣದಲ್ಲಿಡಲು ಸಾಧ್ಯವಿಲ್ಲ. ಎಲ್ಲರೂ ಒಟ್ಟಾಗಿ ಸೇರಿದಾಗ ಮಾತ್ರ ಇದು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಮುಂದಿನ ದಿನದಲ್ಲಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರು ಬದ್ಧರಾಗಿರಬೇಕಿದೆ. ಎಲ್ಲರೂ ಸಾಮಾಜಿಕ ಅಂತರವನ್ನು ಕಾಪಾಡಬೇಕು. ಬೆಳಗಾವಿ ಜಿಲ್ಲೆಯ ಎರಡು ಗ್ರಾಮಗಳಲ್ಲಿ ಕೊರೊನಾ ಹೆಚ್ಚಿನ ಪ್ರಮಾಣದಲ್ಲಿ ಇದೆ. ಹೀಗಾಗಿ ತಬ್ಲಿಕ್ ಜಮಾತ್‍ನಲ್ಲಿ ಭಾಗಿಯಾಗಿದ್ದವರು ವೈಯುಕ್ತಿಕವಾಗಿ ತಪಾಸಣೆಗೆ ಒಳಗಾಗಬೇಕಿದೆ. ಸಮಾಜದ ಮುಖಂಡರು ಕೂಡ ಈ ಕುರಿತು ಗಮನ ನೀಡಬೇಕು ಎಂದರು.

    ಕೊರೊನಾ ತಡೆಯುವ ವಿಚಾರದಲ್ಲಿ ಪೊಲೀಸರಿಗೆ ಎಲ್ಲಾ ರೀತಿಯ ಅಧಿಕಾರವನ್ನು ನೀಡಲಾಗಿದೆ. ಇದಕ್ಕೆ ಜನತೆ ಸಹಕಾರ ನೀಡಬೇಕಿದೆ. ಸರ್ಕಾರ ಮತ್ತು ಪೋಲಿಸರು ಹೇಳುವುದಕ್ಕಿಂತ ಜನತೆ ತಿಳಿದು ಮಾಡುವುದರಿಂದ ಇದರ ನಿಯಂತ್ರಣ ಸಾಧ್ಯವಿದೆ. ವೈರಸ್ ನಿಯಂತ್ರಣ ಮಾಡುವಲ್ಲಿ ಪೊಲೀಸ್ ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಉತ್ತಮವಾದ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

    ಲಾಕ್‍ಡೌನ್ ಮುಗಿದ ನಂತರ ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನು ತ್ವರಿತಗೊಳಿಸಲಾಗುವುದು. ನೀರಾವರಿ ವಿಷಯದಲ್ಲಿ ಚಿತ್ರದುರ್ಗ ಜಿಲ್ಲೆಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು. ಇದಕ್ಕೂ ಮುನ್ನ ಸಚಿವರು ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿವಿಸಾಗರದಲ್ಲಿ ಚಳ್ಳಕೆರೆಗೆ ನೀರನ್ನು ಹರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇವರಿಗೆ ಸಂಸದ ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಮುಖಂಡರಾದ ಜಿ.ಎಂ.ಸುರೇಶ್, ನಂದಿನಾಗರಾಜ್ ಸೇರಿದಂತೆ ಇತರರು ಸಾಥ್ ನೀಡಿದ್ದರು.

  • ಕಾಂಗ್ರೆಸ್‍ನಲ್ಲಿ ಮತ್ತೆ ಕಾಣಿಸಿಕೊಂಡ ಭಿನ್ನಮತ

    ಕಾಂಗ್ರೆಸ್‍ನಲ್ಲಿ ಮತ್ತೆ ಕಾಣಿಸಿಕೊಂಡ ಭಿನ್ನಮತ

    -ವಿದೇಶದಿಂದ ಟ್ರಬಲ್ ಶೂಟರ್ ಆಗಿ ಬಂದ್ರಾ ಸಿದ್ದರಾಮಯ್ಯ?

    ಬೆಳಗಾವಿ: ಕಾಂಗ್ರೆಸ್‍ನಲ್ಲಿ ಭಿನ್ನಮತ ತೀವ್ರಗೊಂಡಿದ್ದರಿಂದ ವಿದೇಶಿ ಪ್ರವಾಸದಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ದಿಢೀರ್ ಕರೆಸಿಕೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಶಾಸಕರು ಬಂಡಾಯ ಎದ್ದಿದ್ದಾರೆ ಅಂತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುಪ್ತಚರ ಇಲಾಖೆ ಮೂಲಕ ಮಾಹಿತಿ ಪಡೆದಿದ್ದರು. ಈ ಕುರಿತು ಕಾಂಗ್ರೆಸ್ ಹೈಕಮಾಂಡ್‍ಗೆ ಮಾಹಿತಿ ರವಾನೆ ಮಾಡಿದ್ದಾರೆ. ಇದರಿಂದಾಗಿ ಎಚ್ಚೆತ್ತುಕೊಂಡ ಹೈಕಮಾಂಡ್ ವಿದೇಶದಲ್ಲಿದ್ದ ಸಿದ್ದರಾಮಯ್ಯ ಅವರನ್ನು ರಾಜ್ಯಕ್ಕೆ ಮರಳಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡದೆಯಂತೆ. ಹೀಗಾಗಿ ನಿನ್ನೆ ರಾತ್ರಿಯೇ ಮಾಜಿ ಸಿಎಂ ಮಲೇಷಿಯಾದಿಂದ ಬೆಂಗಳೂರಿಗೆ ಮರಳಿದ್ದಾರೆ ಎನ್ನುವ ವಿಚಾರವನ್ನು ಮೂಲಗಳು ತಿಳಿಸಿವೆ.

    ಬಂಡಾಯ ನಾಯಕರು ಯಾರು?:
    ಪೌರಾಡಳಿತ ಸಚಿವ ರಮೇಶ್ ಜಾರಕಿಹೋಳಿ, ಶಾಸಕ ನಾಗೇಂದ್ರ ಸೇರಿದಂತೆ ಒಟ್ಟು 16 ರಿಂದ 18 ಜನ ಶಾಸಕರು ಸ್ವಪಕ್ಷ ಕಾಂಗ್ರೆಸ್ ವಿರುದ್ಧವೇ ಬಂಡಾಯ ಎದ್ದಿದ್ದಾರಂತೆ. ಅಷ್ಟೇ ಅಲ್ಲದೆ ನಾಳೆ ಸಂಜೆ ಪ್ರವಾಸದ ನೆಪದಲ್ಲಿ ರೆಸಾರ್ಟ್‍ಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಅಲ್ಲಿಂದ ಗೋವಾಗೆ ತೆರಳಿ ವಿಶೇಷ ವಿಮಾನದ ಮೂಲಕ ಅಹ್ಮದಾಬಾದ್‍ಗೆ ಹೋಗಲಿದ್ದಾರಂತೆ.

    ಅಹ್ಮದಾಬಾದ್‍ನಲ್ಲಿ ಇದ್ದು ಸೋಮವಾರ ನೇರವಾಗಿ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಬಂದಿಳಿಯಲು ಶಾಸಕರು ಪ್ಲಾನ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸ್ಪೀಕರ್ ರಮೇಶ್ ಕುಮಾರ್ ಅವನ್ನು ಭೇಟಿ ಮಾಡಿ ಸೋಮವಾರವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಇದೇ ಬೆಳಗಾವಿ ಅಧಿವೇಶನದಲ್ಲಿಯೇ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ ಎನ್ನಲಾಗಿದೆ.

    ಬಂಡಾಯ ಎದ್ದಿರುವ ಶಾಸಕರನ್ನು ಭೇಟಿಯಾಗಲು ಹಾಗೂ ಅವರೊಂದಿಗೆ ಮಾತುಕತೆ ನಡೆಸಲು ಮಾಜಿ ಸಿಎಂ ನಾಳೆ ಬೆಳಗಾವಿಗೆ ಆಗಮಿಸಲಿದ್ದಾರೆ. ಆದರೆ ಸಿದ್ದರಾಮಯ್ಯ ಮಾತಿಗೆ ಭಿನ್ನಮತ ಶಾಸಕರು ಮಣಿಯುತ್ತಾರಾ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಲ್ಲಿವರೆಗೂ ಹಾಕ್ತಿರಾ ಹಾಕಿ – ಕಬ್ಬಿನ ಬಾಕಿ ಕುರಿತ ಪ್ರಶ್ನೆಗೆ ರಮೇಶ್ ಜಾರಕಿಹೊಳಿ ಗರಂ

    ಎಲ್ಲಿವರೆಗೂ ಹಾಕ್ತಿರಾ ಹಾಕಿ – ಕಬ್ಬಿನ ಬಾಕಿ ಕುರಿತ ಪ್ರಶ್ನೆಗೆ ರಮೇಶ್ ಜಾರಕಿಹೊಳಿ ಗರಂ

    ಬೆಂಗಳೂರು: ಕಬ್ಬು ಬೆಳೆಗಾರರ ಬಾಕಿ ಪಾವತಿ ಕುರಿತು ಪ್ರಶ್ನಿಸಿದ್ದಕ್ಕೆ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಗರಂ ಆಗಿಯೇ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.

    ಸತ್ಯ ಹೇಳಿ ನಿಮ್ಮ ಕಾರ್ಖಾನೆ ಬಾಕಿ ಕ್ಲಿಯರ್ ಯಾವಾಗ ಎಂದು ಪಬ್ಲಿಕ್ ಟಿವಿ ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ಮಾಡುತ್ತಾರೆ. ನೀವು ಅವರನ್ನೇ ಕೇಳಿ. ನಾನು ಯಾವುದೇ ರೀತಿಯ ಹೇಳಿಕೆ ಕೊಡಲ್ಲ ಎಂದು ಖಾರವಾಗಿ ಗುಡುಗಿದ್ದಾರೆ.

    ಸಾಲದ ಬಾಕಿ ಕೇಳಿದಕ್ಕೆ ಸಚಿವರು ಕೋಪಿಸಿಕೊಂಡಿದ್ದಾರೆ. ಬೆಳೆಗಾರರ ಪ್ರತಿಭಟನೆಗೂ ಜಗ್ಗದೆ, ಸಂಪುಟ ಸಭೆಯಿಂದ ಹೊರ ನಡೆದಿದ್ದರು. ಈ ಕುರಿತು ಪಬ್ಲಿಕ್ ಟಿವಿ ಪ್ರಶ್ನಿಸಿದ್ದಕ್ಕೆ ಹಾರಿಕೆ ಉತ್ತರ ನೀಡಿ ಸಚಿವರು ತಪ್ಪಿಸಿಕೊಂಡಿದ್ದಾರೆ.

    ಸಚಿವರ ಪ್ರತಿಕ್ರಿಯೆ ಹೇಗಿತ್ತು?:
    ಸಚಿವರು – ಹೇಳಿ ಏನ್ ಹೇಳಬೇಕು
    ಯಾವ್ ರಿಯಾಕ್ಷನ್ ಕೊಡಲ್ಲ ಮಾ, ಟಿವಿಯವ್ರೇ ಎಲ್ಲ ನೀವ್ ಹಾಕಿದೆ ಕರೆ ನವ್ವ ಎಲ್ಲಿವರೆಗೂ ಹಾಕ್ತಿರಾ ಹಾಕಿ.
    ಪ್ರತಿನಿಧಿ – ಯಾವುದು ಊಹೆ ಮಾಡಬಾರದೆಂದು ನಿಮ್ಮ ಬಳಿ ಬಂದಿದ್ದೇವೆ
    ಸಚಿವ – ಗೊತ್ತಾಯ್ತು ಬಿಡಮ್ಮ, ಗೊತ್ತಾಯ್ತು ಎಷ್ಟಾದ್ರೂ ಪಬ್ಲಿಕ್ ಟಿವಿಯಲ್ಲಿ ಇದ್ದೀರಿ. ಸಿಎಂ ಬಳಿ ಹೋಗಿ ಕೇಳಿ
    ಪ್ರತಿನಿಧಿ – ಸಿಎಂನ್ನು ಇದೇ ಪ್ರಶ್ನೆಕೇಳ್ತಿವಿ
    ಸಚಿವ – ಗೊತ್ತಾಯ್ತು ಬಿಡಮ್ಮ, ಪಬ್ಲಿಕ್ ಟಿವಿ ಅಂತ ಗೊತ್ತಾಯ್ತು
    ಪ್ರತಿನಿಧಿ – ನಿಮ್ಮಸಕ್ಕರೆ ಫ್ಯಾಕ್ಟರಿ ಬಾಕಿ ಯಾವಾಗ ಕ್ಲಿಯರ್
    ಸಚಿವ – ನಮ್ ಕಡೆಯಿಂದ ಮುಖ್ಯಮಂತ್ರಿಗಳನ್ನೇ ಕೇಳ್ರಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸಚಿವ ರಮೇಶ್ ಜಾರಕಿಹೊಳಿ ಸಾಹೇಬ್ರು ದೊಡ್ಡವರು- ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ಸಚಿವ ರಮೇಶ್ ಜಾರಕಿಹೊಳಿ ಸಾಹೇಬ್ರು ದೊಡ್ಡವರು- ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ಬಾಗಲಕೋಟೆ: ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸಾಹೇಬ್ರು ದೊಡ್ಡವರು. ನನ್ನ ಕಾಲ ಕಸ, ಶೋ ಪೀಸ್, ಸ್ಲಂನಿಂದ ಬಂದವಳು ಅಂದರು. ಪದೇ ಪದೇ ನನ್ನ ಹೆಸರು ಬಳಸುತ್ತಿರುವ ಹಿಂದಿನ ಮರ್ಮ ಗೊತ್ತಿಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ಕೊಟ್ಟಿದ್ದಾರೆ.

    ನಗರದ ಹೊರವಲಯದ ರೆಸಾರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದರೆ ಶ್ರಮ ಹಾಗೂ ಧರ್ಮ ನನ್ನನ್ನು ಕಾಪಾಡುತ್ತದೆ. ಸಚಿವ ರಮೇಶ್ ಜಾರಕಿಹೊಳಿ ಅವರು ನನ್ನ ರಾಜಕೀಯ ಬೆಳವಣಿಗೆಗೆ ಸಹಾಯ ಮಾಡಿದ್ದಾರೆ. ಆದರೆ ನನ್ನ ಬೆಳವಣಿಗೆಗೆ ಬ್ರೇಕ್ ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಅದನ್ನು ದೇವರು ನಿರ್ಧಾರ ಮಾಡುತ್ತಾನೆ. ನನ್ನ ಧರ್ಮ ನನ್ನ ಶ್ರಮ ಕಾಪಾಡುತ್ತದೆ ಎನ್ನುವ ಮೂಲಕ ಜಾರಕಿಹೊಳಿ ಸಹೋದರರಿಗೆ ಟಾಂಗ್ ಕೊಟ್ಟಿದ್ದಾರೆ.

    ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನಾನೊಬ್ಬಳೆ ಬೆಂಬಲಿಗಳಲ್ಲ. ರಾಜ್ಯದಲ್ಲಿ ಅನೇಕರು ಬೆಂಬಲಿಗರಿದ್ದು, ಅವರಲ್ಲಿ ನಾನೂ ಒಬ್ಬಳು. ಸಚಿವರಿಗೆ ಅವರದ್ದೇ ಆದ ದೊಡ್ಡ ಪಡೆ ಇದೆ ಎನ್ನುವ ಮೂಲಕ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿ, ರಮೇಶ್ ಜಾರಕಿಹೊಳಿ ಅವರಿಗೆ ಮತ್ತೊಮ್ಮೆ ತಿರುಗೇಟು ಕೊಟ್ಟಿದ್ದಾರೆ.

    ಮೀಟೂ ಒಳ್ಳೆ ಅಭಿಯಾನವಾಗಿದ್ದು, ದೇಶ ಎಜ್ಯುಕೇಟ್ ಆಗುತ್ತಿದೆ ಎಂದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಶೋಭಕ್ಕ ಉದ್ವೇಗದಲ್ಲಿ ಮಾತಾಡಿದ್ದಾರೆ. ಜನ ನಮ್ಮನ್ನು ನೋಡುತ್ತಿರುತ್ತಾರೆ. ಅಕ್ಕ ಮಾತಾಡುವಾಗ ಉದ್ವೇಗಕ್ಕೆ ಒಳಗಾಗಬಾರದು. ಮಾತು ಆಡಿದರೆ ಹೋಯ್ತು. ಮುತ್ತು ಒಡೆದರೆ ಹೋಯ್ತು ಅಂತ ತಿಳಿದು ಮಾತನಾಡಬೇಕು ಎಂದು ಟಾಂಗ್ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಾರಕಿಹೊಳಿ ಸಹೋದರರು-ಶಾಸಕಿ ಹೆಬ್ಬಾಳ್ಕರ್ ಜಟಾಪಟಿಗೆ ಸಜ್ಜಾಯ್ತು ಮತ್ತೊಂದು ಚುನಾವಣೆ

    ಜಾರಕಿಹೊಳಿ ಸಹೋದರರು-ಶಾಸಕಿ ಹೆಬ್ಬಾಳ್ಕರ್ ಜಟಾಪಟಿಗೆ ಸಜ್ಜಾಯ್ತು ಮತ್ತೊಂದು ಚುನಾವಣೆ

    -ಶಾಸಕಿ ಬಣದಿಂದ ಮರಾಠಿ ಭಾಷಿಕ ಅಭ್ಯರ್ಥಿಗಳಿಗೆ ಮಣೆ

    ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಕೈ ನಾಯಕರ ಜಟಾಪಟಿಗೆ ಮತ್ತೊಂದು ಚುನಾವಣೆ ಸಾಕ್ಷಿಯಾಗಲಿದೆ. ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಇದೇ 15ರಂದು ಘೋಷಣೆಯಾಗಿದೆ.

    ಈ ಚುನಾವಣೆ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸಹೋದರರಿಗೆ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಪಿಎಲ್‍ಡಿ ಬ್ಯಾಂಕ್ ಹಾಗೂ ಸ್ಥಳೀಯ ಚುನಾವಣೆಯ ಹೊಗೆ ಎರಡೂ ಬಣಗಳಲ್ಲಿ ಆಡುತ್ತಿದ್ದು, ಇದೇ ವೇಳೆ ಎಪಿಎಂಸಿ ಚುನಾವಣೆ ಘೋಷಣೆಯಾಗಿದೆ.  ಇದನ್ನು ಓದಿ: ಸತೀಶ್ ಜಾರಕಿಹೊಳಿ ಬೆಂಬಲಿಗನಿಗೆ ಚಾಕು ಇರಿದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗ

    ಪಿಎಲ್‍ಡಿ ಬ್ಯಾಂಕ್ ಚುನಾವಣೆ ಬಳಿಕವೂ ಸ್ಥಳೀಯ ಚುನಾವಣೆಯಲ್ಲಿ ಕೈ ನಾಯಕರು ಪರೋಕ್ಷವಾಗಿ ಕಿಡಿಕಾರಿದ್ದರು. ಬೆಳಗಾವಿ ಕಾಂಗ್ರೆಸ್ ನಾಯಕರ ವಾಗ್ದಾಳಿ ಹೈಕಮಾಂಡ್ ಮಟ್ಟದಲ್ಲಿ ಭಾರೀ ಚರ್ಚೆಯಾಗಿತ್ತು. ಈಗ ಎಪಿಎಂಸಿ ಚುನಾವಣೆ ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ. ಹೀಗಾಗಿ ಕೈ ನಾಯಕರು ಮತ್ತೆ ತಮ್ಮ ಹಳೇ ವರಸೆಯನ್ನು ಮುಂದುವರಿಸುತ್ತಾರೆ ಎನ್ನಲಾಗುತ್ತಿದೆ. ಇದನ್ನು ಓದಿ: ಎಲ್ಲವನ್ನು ಆ ದೇವ್ರು ನೋಡಿಕೊಳ್ತಾನೆ – ಗೆದ್ದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಚುಟುಕು ಮಾತು

    ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಣದಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮರಾಠಿ ಭಾಷಿಕ ಯುವರಾಜ ಕದಂ, ಸುಧೀರ್ ಗಡ್ಡೆ ಅಭ್ಯರ್ಥಿಗಳಾಗಿದ್ದಾರೆ. ಇತ್ತ ಜಾರಕಿಹೊಳಿ ಸಹೋದರರ ಬಣದಿಂದ ಯಾವುದೇ ಅಭ್ಯರ್ಥಿಗಳ ಹೆಸರು ಫೈನಲ್ ಆಗಿಲ್ಲ. ಇಬ್ಬರು ನಾಯಕರೂ ಸಂಧಾನ ಮಾಡಿಕೊಳ್ಳುತ್ತಾರೋ ಅಥವಾ ಮತ್ತೊಮ್ಮೆ ವಾಗ್ದಾಳಿಗೆ ಮುಂದಾಗುತ್ತಾರೋ ಎನ್ನುವುದು ಜಿಲ್ಲೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ಇದನ್ನು ಓದಿ: ನಾನು ಸ್ಲಂನಲ್ಲಿ ಹುಟ್ಟಿರ್ಬೋದು, ಸಂಸ್ಕೃತಿ ಎಲ್ಲೆ ಮೀರಿ ಹೋಗಿಲ್ಲ- ರಮೇಶ್‍ಗೆ ಹೆಬ್ಬಾಳ್ಕರ್ ಟಾಂಗ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv