Tag: MINISTER S.T.SOMSHEKAR

  • ಚಾಮುಂಡಿಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶೀಘ್ರವೇ ಶಾಶ್ವತ ಕಾಮಗಾರಿ: ಎಸ್.ಟಿ.ಸೋಮಶೇಖರ್

    ಚಾಮುಂಡಿಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶೀಘ್ರವೇ ಶಾಶ್ವತ ಕಾಮಗಾರಿ: ಎಸ್.ಟಿ.ಸೋಮಶೇಖರ್

    ಮೈಸೂರು: ಚಾಮುಂಡಿಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶೀಘ್ರವೇ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

    chamundi betta

    ಚಾಮುಂಡಿಬೆಟ್ಟದ ನಂದಿ ಮಾರ್ಗದಲ್ಲಿ ಕಳೆದ ವಾರ ಭೂಕುಸಿತವಾಗಿದ್ದ ಸ್ಥಳಕ್ಕೆ ಸಚಿವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೂಕುಸಿತದ ಕುರಿತು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಜೊತೆ ಮಾತನಾಡಲಾಗಿದೆ. ದೀಪಾವಳಿ ನಂತರ ಅವರು ಸಹ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ವಸ್ತುಸ್ಥಿತಿ ತಿಳಿದುಕೊಳ್ಳಲು ಇಂದು ನಾನು ಭೇಟಿ ನೀಡಿದ್ದೇನೆ. ಹೆಚ್ಚು ಹಾನಿಯಾಗಿದ್ದು ಈ ಕೂಡಲೇ ಪರಿಹಾರ ಕಾರ್ಯಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

    ಇದಕ್ಕೂ ಮೊದಲು ಮಳೆ ಹಾನಿ ಕುರಿತಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲು ಜಿಪಂ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಸಚಿವರು, ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಮಳೆ ಹಾನಿ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಜಿಲ್ಲೆಯ ಎಲ್ಲಾ ಶಾಸಕರು ಕೂಡ ಒಟ್ಟಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಳೆ ಹಾನಿ ಕುರಿತು ಅವರ ಗಮನಕ್ಕೆ ತರೋಣ ಎಂದರು. ಇದನ್ನೂ ಓದಿ: ಇನ್‍ಸ್ಟಾದಿಂದ ಮದುವೆ ಫೋಟೋ ಡಿಲೀಟ್ ಮಾಡಿದ ಸಮಂತಾ

    chamundi hill

    147.96 ಎಕರೆ ಬೆಳೆ ಹಾನಿ, 214.97 ಎಕರೆ ತೋಟಗಾರಿಕೆ ಬೆಳೆ ಹಾನಿಯಾಗಿದ್ದರೆ ಅಂದಾಜು 700 ಕಿ.ಮೀ.ನಷ್ಟು ರಸ್ತೆ ಹಾಳಾಗಿದೆ. 67 ಪ್ರಾಥಮಿಕ ಶಾಲೆಗಳು, 33 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದರು. ಇದನ್ನೂ ಓದಿ: ಮುಂದಿನ ವರ್ಷ ಜಿಲ್ಲಾ, ರಾಜ್ಯೋತ್ಸವ ಪ್ರಶಸ್ತಿಗೆ ಏಕರೂಪ ನಿಯಮ: ಸುನಿಲ್ ಕುಮಾರ್

    ಈ ಸಂದರ್ಭದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಮೂಡಾ ಅಧ್ಯಕ್ಷ ರಾಜೀವ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಡಿಸಿಪಿ ಗೀತಾ ಪ್ರಸನ್ನ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

  • ಈ ಬಾರಿ ಮೈಸೂರು ದಸರಾಗೆ ಖರ್ಚಾಗಿದ್ದು 5.42 ಕೋಟಿ ರೂ.: ಎಸ್‌.ಟಿ.ಸೋಮಶೇಖರ್

    ಈ ಬಾರಿ ಮೈಸೂರು ದಸರಾಗೆ ಖರ್ಚಾಗಿದ್ದು 5.42 ಕೋಟಿ ರೂ.: ಎಸ್‌.ಟಿ.ಸೋಮಶೇಖರ್

    ಮೈಸೂರು: ಈ ಬಾರಿಯ ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು, 57 ಲಕ್ಷ ರೂ.ಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಖರ್ಚುವೆಚ್ಚಗಳ ಮಾಹಿತಿ ಬಿಡುಗಡೆ ಮಾಡಿದರು.

    ನಾಡಹಬ್ಭ ಮೈಸೂರು ದಸರಾ ಮಹೋತ್ಸವದ ಇತಿಹಾಸದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಖರ್ಚು ವೆಚ್ಚ ಸಂಪೂರ್ಣ ಮಾಹಿತಿಯನ್ನು ಅರಮನೆ ಮಂಡಳಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದರು.‍‌‌ ಇದನ್ನೂ ಓದಿ: ದೇವರು ಎಂದು ನಾವು ತಿಳಿದುಕೊಂಡಿದ್ದೆವು, ನಮ್ಮ ನೋವನ್ನು ಯಾರ ಬಳಿ ಹೇಳೋದು: ಸೆಕ್ಯೂರಿಟಿ ಕಣ್ಣೀರು

    ಮೈಸೂರು ದಸರಾಗೆ 4,22,07,679 ರೂ., ಖರ್ಚಾಗಿದೆ. ಶ್ರೀರಂಗಪಟ್ಟಣ, ಚಾಮರಾಜನಗರ ದಸರಾ ಆಚರಣೆಗೆ ತಲಾ 50 ಲಕ್ಷ ರೂ., ಅರಕಲಗೂಡು ದಸರಾಗೆ 20 ಲಕ್ಷ ರೂ. ಬಿಡುಗಡೆ ಮಾಡಿದ್ದು ಒಟ್ಟು 5,42,07,679 ರೂ. ಹಣ ಖರ್ಚಾಗಿದೆ ಎಂದು ವಿವರಿಸಿದರು.

    ಮೈಸೂರು ದಸರಾ ಆಮಂತ್ರಣ ಪತ್ರಿಕೆ ಮುದ್ರಣ ಇತ್ಯಾದಿಗಳಿಗೆ 5,91,960 ರೂ. ಖರ್ಚಾಗಿದ್ದರೆ, ಗಣ್ಯರು ಮತ್ತು ಕಲಾವಿದರ ಸಾರಿಗೆ ವ್ಯವಸ್ಥೆಗೆ 29,16,416 ರೂ. ಖರ್ಚಾಗಿದೆ. ಜಂಬೂಸವಾರಿ ಮೆರವಣಿಗೆಗೆ 37,50,772 ರೂ., ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕಲಾವಿದರ ಸಂಭಾವನೆಗೆ 1,03,64,272 ರೂ. ಖರ್ಚಾಗಿದೆ. ಸ್ತಬ್ಧ ಚಿತ್ರ ನಿರ್ಮಾಣಕ್ಕೆ 18,85,102 ರೂ., ಆನೆಗಳ‌ ನಿರ್ವಹಣೆಗೆ 50 ಲಕ್ಷ ರೂ., ದಸರಾ ಕಾರ್ಯಕ್ರಮಗಳ ವೇದಿಕೆ ಮತ್ತು ವಿದ್ಯುತ್ ಕಾಮಗಾರಿಗಳ ವ್ಯವಸ್ಥೆಗಾಗಿ 93,80,000 ರೂ., ವೆಬ್ ಕ್ಯಾಸ್ಟಿಂಗ್ ಗೆ 11,09,200 ರೂ. ವೆಚ್ಚವಾಗಿದೆ. ಅರಮನೆಗೆ ಗೌರವ ಸಂಭಾವನೆಯಾಗಿ 40 ಲಕ್ಷ ರೂ., ದೂರದರ್ಶನದಲ್ಲಿ ಜಂಬೂಸವಾರಿ ನೇರಪ್ರಸಾರ ಮಾಡಿದ್ದಕ್ಕೆ 6,22,513 ರೂ., ದಸರಾ ಆನೆಗಳು ಹಾಗೂ ಕಾವಾಡಿಗರ ವಿಮೆಗೆ 24 ಸಾವಿರ ರೂ. ಭರಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕೊಟ್ರೆ ಮಾಡೋಣ: ವಿ ಸೋಮಣ್ಣ

    ದಸರಾ ಸಂಬಂಧ ಉಪ ಸಮಿತಿ ಸಭೆಗೆ ಲೇಖನ ಸಾಮಾಗ್ರಿಗೆ 3245 ರೂ., ಉನ್ನತ ಮಟ್ಟದ ಸಮಿತಿ ಸಭೆ ಶಿಷ್ಟಾಚಾರಕ್ಕೆ ಹೋಟೆಲ್ ಮತ್ತು ಇತರೆ ವೆಚ್ಚಗಳಿಗೆ 47250 ರೂ., ದಸರಾ ಸಂಬಂಧ ನಡೆದ ವಿವಿಧ ಸಭೆಗಳಿಗೆ ಕಾಫಿ, ಟೀ, ಸ್ಮ್ಯಾಕ್ಸ್ ಗೆ 40,878 ರೂ., ಬಿಎಸ್‌ಎನ್‌ಎಲ್‌ಗೆ 78,668 ರೂ., ಉನ್ನತ ಮಟ್ಟದ ಸಭೆಗೆ ಮತ್ತು ವಿಶೇಷಾಧಿಕಾರಿಗಳ ಕಚೇರಿಗೆ ಲೇಖನ ಸಾಮಾಗ್ರಿ ಖರೀದಿಗೆ 90,919 ರೂ., ಜಂಬೂ ಸವಾರಿ ನೇರ ವೀಕ್ಷಣೆ ವಿವರಣೆ ಬಿತ್ತರಿಸಲು ಆಕಾಶವಾಣಿಗೆ 67 ಸಾವಿರ ರೂ. ಪಾವತಿಸಲಾಗಿದೆ. ದಸರಾ ಕಾರ್ಯಕ್ರಮಗಳ ಫೋಟೋ, ವೀಡಿಯೋಗ್ರಾಫಿಗೆ 95 ಸಾವಿರ ರೂ., ಸ್ವಚ್ಛತೆ ನಿರ್ವಹಣೆಗೆ 10, 76,072 ರೂ., ವಾರ್ತಾ ಇಲಾಖೆಗೆ 64,412 ರೂ., ದಸರಾ ರಂಗೋತ್ಸವ ಕಾರ್ಯಕ್ರಮಕ್ಕೆ ಅಂದಾಜು 10 ಲಕ್ಷ ರೂ. ವೆಚ್ಚವಾಗಿದೆ ಎಂದು ಸಚಿವರು ಮಾಹಿತಿ ಬಿಡುಗಡೆ ಮಾಡಿದರು.