ಮಡಿಕೇರಿ: ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಅವರ ಸುದ್ದಿಗೋಷ್ಠಿಯನ್ನು ಮಾಧ್ಯಮಗಳು ಬಹಿಷ್ಕರಿಸಿದ ಪ್ರಸಂಗ ಇಂದು ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ಕೋಟೆ ಸಭಾಂಗಣದಲ್ಲಿ ಇಂದು ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ಸಂತ್ರಸ್ತರ ಸಭೆ ಆಯೋಜನೆಗೊಂಡಿತ್ತು. ಈ ಸಭೆಯಲ್ಲಿ ಸಚಿವರು ನಡೆದುಕೊಂಡ ರೀತಿಯಿಂದಾಗಿ ಎಲ್ಲ ಮಾಧ್ಯಮಗಳು ಸುದ್ದಿಗೋಷ್ಠಿಯನ್ನು ಬಹಿಷ್ಕರಿಸಿವೆ.
ಆಗಿದ್ದೇನು?
ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ಸಂತ್ರಸ್ತರ ಸಭೆ ನಡೆದಿತ್ತು. ವಾರ್ತಾ ಇಲಾಖೆಯಿಂದ ಆಹ್ವಾನ ಬಂದ ಹಿನ್ನೆಲೆಯಲ್ಲಿ ಪತ್ರಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಸಭೆ ಆರಂಭಕ್ಕೂ ಮುನ್ನ ಕುಳಿತ್ತಿದ್ದ ಮಾಧ್ಯಮದ ವ್ಯಕ್ತಿಗಳನ್ನು ಉದ್ದೇಶಿಸಿ, ಈಗ ಹೊರಗೆ ಹೋಗಿ. ನಾನು ಕರೆದಾಗ ಬನ್ನಿ ಎನ್ನುವ ಮೂಲಕ ಸಚಿವರು ದರ್ಪ ಮೆರೆದರು.
ಇದನ್ನು ಮಾಧ್ಯಮದವರು ಖಂಡಿಸುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಸಚಿವರು, ಸಭೆಗೆ ತನ್ನದೆಯಾದ ರೀತಿ ನೀತಿಗಳಿವೆ. ನಿಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ಹೊರಗೆ ಹೋಗಿ. ರಾತ್ರಿಯಾದರೂ ಸಭೆ ನಡೆಸಿ ಪ್ರತಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸುತ್ತೇನೆ ಎಂದು ಹೇಳಿದ್ದರು.
ಸಂತ್ರಸ್ತರ ಜೊತೆ ಸಭೆ ನಡೆಸಿದ ಬಳಿಕ ಸಾರಾ ಮಹೇಶ್ ಮಾಧ್ಯಮದವರನ್ನು ಸುದ್ದಿಗೋಷ್ಠಿಗೆ ಬರುವಂತೆ ತಿಳಿಸಿದರು. ಈ ವೇಳೆ ಮಾಧ್ಯಮದವರು ಸಭೆಯಿಂದ ನಮ್ಮನ್ನು ಹೊರಹಾಕಿದ್ದಕ್ಕೆ ಬರುವುದಿಲ್ಲ ಎಂದು ಹೇಳಿ ಸುದ್ದಿಗೋಷ್ಠಿಯನ್ನು ಬಹಿಷ್ಕರಿಸಿದ್ದಾರೆ.
ಸಚಿವ ಸಾ.ರಾ ಮಹೇಶ್ ನೇತೃತ್ವದಲ್ಲಿ ನಡೆದ ಸಭೆಗೆ ಭಾರೀ ಭದ್ರತೆ ನೀಡಲಾಗಿತ್ತು. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಕೊಡಗು ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಎಸ್‍ಪಿ ಡಿ.ಸುಮನ್ ಅವರು ಸಭೆಯಲ್ಲಿ ಭಾಗವಹಿಸಿದ್ದರು. ಕೇವಲ ಸಂತ್ರಸ್ತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿತ್ತು.
ಚಾಮರಾಜನಗರ: ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳಸಿದ್ದು ವರಿಷ್ಠರಾದ ಹೆಚ್.ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ. ಇದೀಗ ಅವರು ಜೆಡಿಎಸ್ ಪಕ್ಷನ್ನು ಉಳಿಸಿಲು ನಿಖಿಲ್‍ಗೆ ಟಿಕೆಟ್ ನೀಡುತ್ತಿದ್ದಾರೆ. ಇದನ್ನು ಕುಟುಂಬ ರಾಜಕೀಯ ಎಂದು ಹೇಳುವ ಅವಶ್ಯಕತೆ ಇಲ್ಲ ಎಂದು ಸಚಿವ ಸಾ.ರಾ.ಮಹೇಶ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು ಎಂದು ಆಸೆ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಅವರನ್ನು ಮೈತ್ರಿ ಪಕ್ಷದಿಂದ ಕಣಕ್ಕೆ ಇಳಿಸಲಾಗುತ್ತಿದೆ. ನಿಖಿಲ್ ಜೆಡಿಎಸ್ ಪಕ್ಷವನ್ನು ಉಳಿಸುವ ದೃಷ್ಟಿಯಿಂದ ಅವರಿಗೆ ಟಿಕೆಟ್ ನೀಡಲಾಗುತ್ತಿದೆ. ಇದಕ್ಕೆ ಹಾಲಿ ಸಂಸದ ಶಿವರಾಮೇಗೌಡರ ಒಪ್ಪಿಗೆಯೂ ಸಹ ಇದೆ ಎಂದರು.
ಸಾಮಾಜಿಕ ಜಾಲ ತಾಣದಲ್ಲಿ ನಡೆಯುತ್ತಿರುವ ಅಭಿಯಾನ ಕೆಲವರ ಪಿತೂರಿಯಿಂದ ನಡೆಯುತ್ತಿದ್ದು, ಇದರ ಹಿಂದೆ ಯಾರಿದ್ದಾರೆ ಎನ್ನುವುದು ನಮಗೆ ತಿಳಿದಿದೆ ಎಂದರು. ಅಲ್ಲದೇ ಹೆಚ್.ಡಿ ದೇವೇಗೌಡರನ್ನು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಕರೆತರಲು ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ ಎಂದರು.
ಮಂಡ್ಯ: ಕ್ಷೇತ್ರದಲ್ಲಿ ಚುನವಣಾ ಬಹಿಷ್ಕಾರ ಮಾಡಿರುವ ಗ್ರಾಮಗಳು ಕಾಂಗ್ರೆಸ್‍ಗೆ ಮತದಾನ ಮಾಡುವ ಗ್ರಾಮಗಳಾಗಿದ್ದು, ಅವರು ಕೇಳಿದ ಸಾಕಷ್ಟು ಮೂಲಭೂತ ಸೌಲಭ್ಯಗಳನ್ನು ನೀಡಿದ್ದೇನೆ. ಇನ್ನು ಹೆಚ್ಚಿನ ಸೌಲಭ್ಯ ಬೇಕಾದರೆ ಕಾಂಗ್ರೆಸ್ ನಾಯಕರು ಹೋಗಿ ಚರ್ಚೆ ಮಾಡುತ್ತಾರೆ ಎಂದು ಸಚಿವ ಸಾರಾ ಮಹೇಶ್ ಹೇಳಿದ್ದಾರೆ.
ಜಿಲ್ಲೆಯ ಅರಂಬಳ್ಳಿ ಗ್ರಾಮಸ್ಥರು ರಸ್ತೆ ಕೇಳಿದ್ದರು. ಅವರ ಮನವಿ ಮೇರೆಗೆ ಕ್ರಮಕೈಗೊಂಡಿದ್ದೇನೆ. ಆದರೆ ಚುನಾವಣಾ ನೀತಿ ಸಂಹಿತೆಯಿಂದ ಸದ್ಯ ಪ್ರಕ್ರಿಯೆ ತಡವಾಗಿದೆ. ಅದ್ದರಿಂದ ಗ್ರಾಮಸ್ಥರ ಮನವೊಲಿಕೆ ಮಾಡುತ್ತೇನೆ. ಆದರೆ ಬಾಚಹಳ್ಳಿ, ದೊಡ್ಡ ಕೊಪ್ಪಲು ಗ್ರಾಮದಲ್ಲಿ ರಾಜಕೀಯ ಪ್ರೇರಿತವಾಗಿ ಬಹಿಷ್ಕಾರ ಮಾಡಿದ್ದಾರೆ. ಎರಡು ಗ್ರಾಮಗಳಿಗೆ ಈಗಾಗಲೇ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲೂ 2 ಗ್ರಾಮಗಳಲ್ಲಿ ಶೇ.99ರಷ್ಟು ಜನ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಅವರಿಗೆ ಹೆಚ್ಚಿನ ಸೌಲಭ್ಯಗಳು ಬೇಕಾದಲ್ಲಿ ಅವರ ಮುಖಂಡರು ಹೋಗಿ ಚರ್ಚೆ ಮಾಡುತ್ತಾರೆ ಎಂದರು.
ರಾಜಕೀಯ ಪಕ್ಷಗಳ, ಜನರ ಅಭಿಪ್ರಾಯಕ್ಕೆ ವಿರುದ್ಧವಾಗಿ ಚುನಾವಣೆ ಘೋಷಣೆ ಮಾಡಲಾಗಿದ್ದು, ಅದ್ದರಿಂದ ಮತದಾನ ಪ್ರಕ್ರಿಯೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ಮಾಡಲಾಗುತ್ತದೆ. ಈ ಬಾರಿಯೂ ಶೇ.50 ರಷ್ಟು ಮತದಾನ ಆಗುವ ಸಾಧ್ಯತೆ ಇದೆ ಎಂದರು.
ಬೆಂಗಳೂರು: ಕೊಡಗು ಪ್ರವಾಹ ಪೀಡಿತ ಪ್ರದೇಶ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಉಂಟಾದ ಗೊಂದಲದ ಬಗ್ಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದು ಕೊಡಗು ಉಸ್ತುವಾರಿ ಸಚಿವ ಸಾರಾ ಮಹೇಶ್ ಅವರಿಗೆ ದೇಶದ ರಾಜಕೀಯ ವ್ಯವಸ್ಥೆ ಬಗ್ಗೆ ಪರಿಜ್ಞಾನ ಇಲ್ಲ ಎಂದು ಕಿಡಿಕಾರಿದ್ದಾರೆ.
ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಇಲಾಖೆ ಸ್ಪಷ್ಟನೆ ನೀಡಿ ಪತ್ರಿಕಾ ಬಿಡುಗಡೆ ಮಾಡಿದ್ದು, ಈ ಹೇಳಿಕೆಯನ್ನು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ. ಅದರ ಪೂರ್ಣ ರೂಪ ಇಂತಿದೆ.
ರಕ್ಷಣಾ ಸಚಿವರ ಕೊಡಗು ಭೇಟಿ ವೇಳೆ ಜಿಲ್ಲಾಡಳಿತದೊಂದಿಗೆ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತವಾರಿ ಮಂತ್ರಿಗಳಾದ ಶ್ರೀ ಸಾ.ರಾ.ಮಹೇಶ್ ಅವರ ಮೇಲೆ ರಕ್ಷಣಾ ಸಚಿವರು ಕೋಪಗೊಂಡಿದ್ದರು ಎಂದು ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದೆ.
ಜಿಲ್ಲಾ ಉಸ್ತುವಾರಿ ಮಂತ್ರಿಗಳು ರಕ್ಷಣಾ ಮಂತ್ರಿಗಳ ಬಗ್ಗೆ ವೈಯಕ್ತಿಕ ಟೀಕೆ ಮಾಡಿರುವ ಬಗ್ಗೆಯೂ ವರದಿಯಾಗಿದೆ. ಅವರ ಈ ಟೀಕೆಯು ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ ಘನತೆಗೆ ಚ್ಯುತಿಯುಂಟು ಮಾಡುವಂತಹದಾಗಿದೆ ಹಾಗೂ ಭಾರತ ರಾಜಕೀಯ ವ್ಯವಸ್ಥೆಯ ಬಗ್ಗೆ ಯಾವುದೇ ಗೌರವ ಮತ್ತು ತಿಳುವಳಿಕೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಇಲ್ಲ ಎನ್ನುವುದನ್ನು ತೋರಿಸಿದೆ.
— रक्षा मंत्री कार्यालय/ RMO India (@DefenceMinIndia) August 25, 2018
ಈ ಕುರಿತ ಸ್ಪಷ್ಟನೆ ನೀಡಲು ಅಂದಿನ ಪ್ರವಾಸ ಕಾರ್ಯಕ್ರಮದ ಪೂರ್ಣ ಮಾಹಿತಿಯ ವಿವರಗಳನ್ನು ಇಲ್ಲಿ ನೀಡಲಾಗಿದೆ: ರಕ್ಷಣಾ ಮಂತ್ರಿಗಳ ಪ್ರವಾಸ ಕಾರ್ಯಕ್ರಮದ ಕುರಿತು ಜಿಲ್ಲಾಡಳಿತವೇ 2 ದಿನಗಳ ಮುಂಚೆಯೇ ವೇಳಾಪಟ್ಟಿ ಅಂತಿಮಗೊಳಿಸಿತ್ತು. ಬಳಿಕ ಜಿಲ್ಲಾಡಳಿತ ಮನವಿ ಮೇರೆಗೆ ಸ್ಥಳೀಯ ಗಣ್ಯರೊಂದಿಗೆ ಸಂವಾದ ಕಾರ್ಯಕ್ರಮವನ್ನು ಪಟ್ಟಿಗೆ ಸೇರಿಸಲಾಯಿತು.
ಹಾನಿಗೀಗಾಡ ಪ್ರದೇಶಗಳ ಭೇಟಿಯ ನಂತರ ನೆರೆಯಿಂದ ತೀವ್ರ ತೊಂದರೆಗೊಳಗಾದ ನಿವೃತ್ತ ಸೈನಿಕರೊಂದಿಗೆ ರಕ್ಷಣಾ ಮಂತ್ರಿಗಳು ಸಂವಾದ ನಡೆಸುವಾಗ ಅದಕ್ಕೆ ಉಸ್ತವಾರಿ ಸಚಿವರು ಆಕ್ಷೇಪ ವ್ಯಕ್ತಪಡಿಸಿದರು. ಅಧಿಕಾರಿಗಳೊಂದಿಗೆ ಸಭೆಯನ್ನು ಮೊದಲು ನಡೆಸಬೇಕು ಎನ್ನುವುದು ಅವರ ವಾದವಾಗಿತ್ತು. ಆದರೆ ನಿವೃತ್ತ ಸೈನಿಕರ ಯೋಗಕ್ಷೇಮವೂ ರಕ್ಷಣಾ ಇಲಾಖೆಯ ಆದ್ಯತೆಗಳಲ್ಲಿ ಒಂದಾದ ಕಾರಣ ರಕ್ಷಣಾ ಮಂತ್ರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದರು. ಅದರೂ ಉಸ್ತುವಾರಿ ಸಚಿವರು ತಕ್ಷಣ ಆ ಸಭೆ ನಿಲ್ಲಿಸಿ, ಅಧಿಕಾರಿಗಳ ಸಭೆಗೆ ಹೋಗಬೇಕೆಂದು ಒತ್ತಾಯಿಸಿದರು.
After visiting the flood-affected areas of Kodagu district in Karnataka, Smt @nsitharaman announces Rs 1 Crore aid from her MPLADS funds and Rs 7 Crores from the CSR funds of Defence PSUs for flood/landslide relief work pic.twitter.com/652DxWGp7M
— रक्षा मंत्री कार्यालय/ RMO India (@DefenceMinIndia) August 24, 2018
ಆಗ ಪರಿಸ್ಥಿತಿಯನ್ನು ಅರಿತ ರಕ್ಷಣಾ ಸಚಿವರು ಮತ್ತಷ್ಟು ಗೊಂದಲ ಉಂಟಾಗುವುದನ್ನು ತಪ್ಪಿಸಲು ಆ ಸಭೆಯನ್ನು ಸ್ಥಗಿತಗೊಳಿಸಿ ಅಧಿಕಾರಿಗಳ ಸಭೆಗೆ ತೆರಳಿದರು. ಅಲ್ಲಿ ಆಗಲೇ ಪತ್ರಿಕಾಗೋಷ್ಟಿಗೆ ವ್ಯವಸ್ಥೆ ಮಾಡಲಾಗಿತ್ತು. ಅದೇ ಸ್ಥಳಕ್ಕೆ ಅಧಿಕಾರಿಗಳನ್ನು ತರಾತುರಿಯಲ್ಲಿ ಕರೆದು ಮಾಧ್ಯಮ ಪ್ರತಿನಿಧಿಗಳ ಉಪಸ್ಥಿತಿಯಲ್ಲೇ ಅಧಿಕಾರಿಗಳ ಸಭೆ ಆರಂಭಿಸಲಾಯಿತು. ಎಲ್ಲಾ ಮಾಧ್ಯಮ ಪ್ರತಿನಿಧಿಗಳ ಎದುರಿನಲ್ಲೇ ಪರಿಶೀಲನಾ ಸಭೆ ನಡೆಸುವ ನಿದರ್ಶನ ಇಲ್ಲವಾದರೂ, ಪರಿಸ್ಥಿಯನ್ನು ತಿಳಿಯಾಗಿಸಲು ಸಭೆಯನ್ನು ನಡೆಸಲಾಯಿತು.
ರಕ್ಷಣಾ ಸಚಿವರು ನಂತರ ತಮಗಾಗಿ ಕಾದಿದ್ದ ಮಾಜಿ ಸೈನಿಕರೊಂದಿಗೆ ಸಂವಾದ ನಡೆಸಿ ಅವರ ಅಹವಾಲು ಆಲಿಸಿದರು. ಜಿಲ್ಲಾಡಳಿತವೇ ಅಂತಿಮಗೊಳಿಸಿದ ಕಾರ್ಯಕ್ರಮದ ಪ್ರಕಾರವೇ ರಕ್ಷಣಾ ಸಚಿವರು ಸಭೆ ನಡೆಸಿದರೂ, ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಪ್ರತಿಕ್ರಿಯೆ ಮತ್ತು ಟೀಕೆ ದುರದೃಷ್ಟಕರ. ಇನ್ನು ರಕ್ಷಣಾ ಸಚಿವರ ಬಗ್ಗೆ ಮಾಡಿರುವ ವೈಯಕ್ತಿಕ ಕೀಳು ಅಭಿರುಚಿಯಿಂದ ಕೂಡಿದ್ದಾಗಿದೆ. ಅವರ ಈ ನಡವಳಿಕೆ ಪ್ರತಿಕ್ರಿಯೆಗೂ ಯೋಗ್ಯವಲ್ಲ.
ರಕ್ಷಣಾ ಸಚಿವರು ಪತ್ರಿಕಾಗೋಷ್ಟಿಯಲ್ಲಿ ಪರಿವಾರ ಎಂದು ಉಲ್ಲೇಖಿಸಿದ್ದನ್ನು ತಪ್ಪಾಗಿ ವ್ಯಾಖ್ಯಾನಿಸಿರುವುದು ಗಮನಕ್ಕೆ ಬಂದಿದೆ. ರಕ್ಷಣಾ ಇಲಾಖೆಯ 4 ವಿಭಾಗಗಳಲ್ಲಿ ನಿವೃತ್ತ ಸೈನಿಕರ ಕಲ್ಯಾಣವೂ ಒಂದು. ರಕ್ಷಣಾ ಇಲಾಖೆಯ ಪರಿವಾರದಲ್ಲಿ ನಿವೃತ್ತ ಸೈನಿಕರು ಸೇರಿರುತ್ತಾರೆ ಎಂಬುವುದು ಇಲ್ಲಿ ಗಮನಿಸಬೇಕಾದ ಅಂಶ. ಈ ಅರ್ಥದಲ್ಲಿ ಪರಿವಾರ ಎನ್ನುವ ಪದ ಬಳಕೆ ಮಾಡಲಾಗಿದೆ. ಉಳಿದಂತೆ ಬೇರೆಲ್ಲಾ ಅಭಿಪ್ರಾಯಗಳೂ ಅಪಾರ್ಥದಿಂದ ಕೂಡಿದ್ದು ಹಾಗೂ ಖಂಡನೀಯ.
Smt @nsitharaman visited flood relief camp at Maithri Hall in Madikeri & had an interaction with children, youth and their families. pic.twitter.com/p8EhbSfYwk
— रक्षा मंत्री कार्यालय/ RMO India (@DefenceMinIndia) August 24, 2018
ಮಡಿಕೇರಿ: ಕೊಡಗು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಭೆ ಬಳಿಕ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಸಚಿವ ಸಾರಾ ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಭೆಯ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಾರಾ ಮಹೇಶ್ ಅವರು, ಕೇರಳದಲ್ಲಿ ಪ್ರವಾಹ ಆಗಿರುವಂತೆ ರಾಜ್ಯದ 4 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ನಷ್ಟ ಉಂಟಾಗಿದ್ದು, ಕೇಂದ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಆದರೆ ಕೇರಳಕ್ಕೆ ಅನುದಾನ ನೀಡಿದ ಕೇಂದ್ರ ಸರ್ಕಾರ ಇಂದು ವರದಿ ಬಂದ ಬಳಿಕ ಎಲ್ಲಾ ಸಚಿವರೊಂದಿಗೆ ಮಾತನಾಡಿ ಅನುದಾನ ಬಿಡುಗಡೆ ಮಾಡುವ ಆಶ್ವಾಸನೆ ನೀಡಿದ್ದಾರೆ. ಇದು ನಿಮಗೂ ತಿಳಿದಿದೆ, ಎಲ್ಲಾ ಸಚಿವರ ಕೆಲಸ ನನೊಬ್ಬಳೇ ಮಾಡಲು ಸಾಧ್ಯವಿಲ್ಲ. ಆದರೆ ಎಲ್ಲಾ ಇಲಾಖೆಗೆ ಹಾಗೂ ಪ್ರಧಾನಿಗೆ ಮಾಹಿತಿ ನೀಡುತ್ತೇನೆ ಎಂದು ಕೇಂದ್ರ ರಕ್ಷಣಾ ಸಚಿವರು ಹೇಳಿದ್ದಾಗಿ ಸಾರಾ ಮಹೇಶ್ ತಿಳಿಸಿದರು.
ಇದೇ ವೇಳೆ ನಿರ್ಮಲಾ ಸೀತಾರಾಮನ್ ಅವರ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಾರಾಮಹೇಶ್ ಅವರು, ರಕ್ಷಣಾ ಸಚಿವರು ಇಂದು ತುಂಬಾ ಸ್ಪೀಡ್ ಆಗಿದ್ದರು. ಇದು ಅವರ ಪಕ್ಷದ ಸಮಸ್ಯೆ ಇರಬಹುದು. ಆದರೆ ಇಂದು ಅವರು ತಾಳ್ಮೆ ವಹಿಸುವ ಅಗತ್ಯವಿತ್ತು. ರಾಜಕಾರಣದಲ್ಲಿ ಜನರಿಂದ ನೇರವಾಗಿ ಆಯ್ಕೆ ಆಗಿದ್ದರೆ ತಾಳ್ಮೆ ನಿರ್ವಹಣೆ ಕುರಿತು ತಿಳಿಯುತ್ತಿತ್ತು. ರಾಜ್ಯಸಭೆಯಿಂದ ಆಯ್ಕೆ ಆದ ಕಾರಣ ಕಷ್ಟಗೊತ್ತಿಲ್ಲ. ಆದರೆ ರಾಜ್ಯ ಸರ್ಕಾರದಿಂದ ನೀಡಬೇಕಾದ ಎಲ್ಲಾ ಗೌರವ ನೀಡಿದ್ದೆವೆ ಎಂದರು. ಇದನ್ನು ಓದಿ: ಸಚಿವ ಸಾರಾ ಮಹೇಶ್ ವಿರುದ್ಧ ನಿರ್ಮಲಾ ಸೀತಾರಾಮನ್ ಗರಂ
ಸ್ಪಷ್ಟನೆ: ಜಿಲ್ಲಾಡಳಿತ, ಅಧಿಕಾರಿಗಳು ಹಾಗೂ ಸಚಿವರ ನಡುವೆ ಹೊಂದಾಣಿಕೆ ಸಮಸ್ಯೆ ಇದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿ, ರಕ್ಷಣಾ ಸಚಿವರು ಮೊದಲು ಕುವೆಂಪು ಬಡಾವಣೆ, ಸಾಯಿ ಬಡಾವಣೆ ಭೇಟಿ ನೀಡಿ ಬಳಿಕ ಮೈತ್ರಿ ಹಾಲ್‍ಗೆ ಆಗಮಿಸಬೇಕಿತ್ತು. ಆದರೆ ಅವರು ನಿಗದಿಯಾಗಿದ್ದ ಕಾರ್ಯಕ್ರಮ ಹೊರತು ಪಡಿಸಿ ಸೇವಾ ಭವನಕ್ಕೆ ತೆರಳಿದ್ದರು. ಅದು ಅವರ ನಿರ್ಧಾರ. ಆದರೆ ಈ ವೇಳೆ ಕಾರ್ಯಕ್ರಮದ ಪಟ್ಟಿ ಇರಲಿಲ್ಲ. ಅದ್ದರಿಂದ ಅವರು ಗರಂ ಆಗಿದ್ದಾರೆ. ಈ ಮಧ್ಯೆ ಸಂಸದ ಪ್ರತಾಪ್ ಸಿಂಹ, ನಾನು ಮಾತನಾಡುವ ವೇಳೆ ತಮಗೇ ಮುಜುಗರ ತರದಂತೆ ಹೇಳಿದ್ದರೆ ಅಷ್ಟೇ. ಆದರೆ ಅಧಿಕಾರಿಗಳ ನಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ. ಎಲ್ಲರೂ ಪ್ರವಾಹ ನಿರ್ವಹಣೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
I am a member of Parliament from Karnataka. I want to offer Rs 1 crore of my MPLAD (Members of Parliament Local Area Development) for Kodagu district: Defence Minister Nirmala Sitharaman on flood situation in Karnataka's Kodagu pic.twitter.com/w5XDpTGvl9
#Karnataka: Defence Minister Nirmala Sitharaman visits flood and landslide affected areas in Kodagu. Sreevidya P.I, Deputy Commissioner of Kodagu district also present. pic.twitter.com/x3Vz2WfDTh
ಮಡಿಕೇರಿ: ಪ್ರವಾಹ ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಳಿಕ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದು, ಆದರೆ ತಮ್ಮ ಭೇಟಿ ವೇಳೆ ಶಿಷ್ಟಾಚಾರ ಉಲ್ಲಂಘನೆಯಾಗಿರುವ ಕುರಿತು ಗರಂ ಆಗಿದ್ದಾರೆ.
ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಜಿಲ್ಲಾಧಿಕಾರಿಗಳೊಂದಿಗಿನ ಸಭೆಯಲ್ಲಿ ಕೇಂದ್ರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್ ಸೇರಿದಂತೆ ಇತರೇ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಆದರೆ ಇದಕ್ಕೂ ಮುನ್ನ ಸಭೆಯಲ್ಲಿ ಯಾರು ಮೊದಲು ಮಾಹಿತಿ ನೀಡಬೇಕು ಎಂಬ ಗೊಂದಲ ಏರ್ಪಟ್ಟಿತ್ತು. ಈ ವೇಳೆ ಗರಂ ಆದ ನಿರ್ಮಲಾ ಸೀತಾರಾಮನ್ ಅವರು ನಾನು ನಿಮ್ಮ ಮಾತು ಕೇಳಬೇಕಾ ಎಂದು ಪ್ರಶ್ನಿಸಿ, ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ವಿವರ ನೀಡುವಂತೆ ಸೂಚಿಸಿದರು. ಬಳಿಕ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನಡುವೆ ಯಾವುದೇ ಗೊಂದಲವಿದ್ದರೆ ಮೊದಲು ಬಗೆಹರಿಸಿಕೊಳ್ಳಿ ಎಂದು ಸೂಚನೆ ನೀಡಿದರು.
ಇದಕ್ಕೂ ಮೊದಲು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕುಶಲನಗರಕ್ಕೆ ಭೇಟಿ ನೀಡಬೇಕಿತ್ತು. ಆದರೆ ಉಸ್ತುವಾರಿ ಸಚಿವರು ಮಕ್ಕಂದೂರಿಗೆ ಕರೆದುಕೊಂಡು ಹೋಗಿದ್ದರು. ಇಲ್ಲಿಯೂ ಶಿಷ್ಟಾಚಾರ ಉಲ್ಲಂಘನೆಯಾಗಿತ್ತು. ಪ್ರವಾಹದಲ್ಲಿ ಸಿಲುಕಿರುವ ಜನರ ಪರಿಹಾರ ಕ್ರಮಕ್ಕೆ ತೊಡಗಿರುವ ಅಧಿಕಾರಿಗಳು ಹಾಗು ಸಚಿವರ ನಡುವೆ ಗೊಂದಲ ಉಂಟಾಗಿದೆ. ಬೆಳಗ್ಗೆ ಇಂದ ನೀವು ಹೇಳಿದ ಭಾಗಗಳಲ್ಲಿ ಬಂದು ಪರಿಶೀಲನೆ ನಡೆಸುತ್ತಿದ್ದೆನೆ. ಆದರ ಪರಿಹಾರ ಕಾರ್ಯ ನಡೆಸುವ ಮುನ್ನ ಎಲ್ಲಾ ಗೊಂದಲ ನಿವಾರಣೆ ಮಾಡಿಕೊಳ್ಳಲು ಅಧಿಕಾರಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಹಿಂದೆ ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ, ಸಭೆ ನಡೆಸಿದ ವೇಳೆ ಅಧಿಕಾರಿಗಳು ಹಾಗೂ ಸಚಿವರ ನಡುವೆ ಸಮನ್ವಯ ಕೊರತೆ ಇರುವ ಕುರಿತು ಸಿಎಂ ಕುಮಾರಸ್ವಾಮಿಯವರ ಗಮನಕ್ಕೆ ಬಂದಿತ್ತು. ಈ ವೇಳೆ ಮಾತನಾಡಿದ್ದ ಸಿಎಂ, ಇಂತಹ ಸಂದರ್ಭದಲ್ಲಿ ಕಳ್ಳಾಟ ಆಡುವ ಅಧಿಕಾರಿಗಳ ಅಮಾನತು ಮಾಡಿ, ಸೂಕ್ತ ವ್ಯವಸ್ಥೆ ಮಾಡಲು ಬಿಬಿಎಂಪಿ ಅಧಿಕಾರಿಗಳನ್ನು ಮಡಿಕೇರಿಗೆ ಕರೆಸಿಕೊಳ್ಳಲಾಗುತ್ತದೆ. ಆದರೆ ರಕ್ಷಣಾ ಕಾರ್ಯನಿರತರ ಮೇಲೆ ಕೆಲವರು ರಾಜಕೀಯ ಪ್ರದರ್ಶಿಸುತ್ತಿದ್ದಾರೆ. ಇದು ಒಳ್ಳೆಯದಲ್ಲ, ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಯ ಮೇಲೆ ಒತ್ತಡ ತರುವ ಕೆಲಸ ಮಾಡಬೇಡಿ ಎಚ್ಚರಿಕೆ ನೀಡಿದ್ದರು. ಅಲ್ಲದೇ ಕೊಡಗು ಜಿಲ್ಲೆಗೆ ಅಪರ ಜಿಲ್ಲಾಧಿಕಾರಿಗಳನ್ನು ಕೂಡ ನೇಮಕ ಮಾಡಿ ಆದೇಶ ಹೊರಡಿಸಿದ್ದರು.
ಬೆಂಗಳೂರು/ಮೈಸೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಕಡಿಮೆ ದರದಲ್ಲಿ ಮೈಸೂರು ಸಿಲ್ಕ್ ಸೀರೆ ನೀಡುವುದಾಗಿ ಸಚಿವ ಸಾರಾ ಮಹೇಶ್ ಘೋಷಣೆ ಮಾಡಿದ್ದರು. ಆದರೆ ಈ ಬಾರಿ ಪ್ರವಾಹ ಪರಿಸ್ಥಿತಿ ಎದುರಾದ ಕಾರಣ ರಿಯಾಯಿತಿ ದರದಲ್ಲಿ ಸೀರೆ ಮಾರಾಟ ಇಲ್ಲ ಎಂದು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ(ಕೆಎಸ್‍ಐಸಿ) ಬೋರ್ಡ್ ಹಾಕಿದೆ.
ಹಬ್ಬದ ಪ್ರಯುಕ್ತ ರಿಯಾಯಿತಿ ದರದಲ್ಲಿ ಸೀರೆ ಕೊಳ್ಳಲು ಬಂದ ಮಹಿಳೆಯರು ಬೋರ್ಡ್ ನಿರಾಸೆಯಿಂದ ಹಿಂದಿರುಗುತ್ತಿದ್ದಾರೆ. ಇತ್ತ ಮೈಸೂರಿನಲ್ಲಿ ಸಿಲ್ಕ್ ಸೀರೆಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡದಿರಲು ಆಗ್ರಹಿಸಿ ಸಿಲ್ಕ್ ಸೀರೆ ತಯಾರಿಕಾ ಕಂಪೆನಿಯ ನೌಕರರು ಪತ್ರಿಭಟನೆ ನಡೆಸಿದ್ದಾರೆ.
ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಕಂಪೆನಿಗೆ ಹೆಚ್ಚಿನ ನಷ್ಟ ಉಂಟಾಗುತ್ತದೆ. ಸದ್ಯ ಸರ್ಕಾರ ನೀಡಲು ಉದ್ದೇಶಿಸಿರುವ ಒಂದು ಸೀರೆಯ ದರ 10,500 ರೂ. ಇದ್ದು, ರಿಯಾಯಿತಿ ದರದಲ್ಲಿ 4,500 ರೂ. ಮಾರಾಟ ಮಾಡಲು ಉದ್ದೇಶಿಸಲಾಗಿದೆ. ಈ ಕ್ರಮ ಕಂಪೆನಿಗೆ ಹೆಚ್ಚಿನ ನಷ್ಟ ಉಂಟು ಮಾಡುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಇದೇ ವೇಳೆ ಸರ್ಕಾರ ಒಂದೊಮ್ಮೆ ಸಿಲ್ಕ್ ಸೀರೆ ಮಾರಾಟ ಮಾಡಲು ತೀರ್ಮಾನಿಸಿದ್ದರೆ, ಮೊದಲು ರಿಯಾಯಿತಿ ದರದ ಮೊತ್ತವನ್ನು ಕಂಪೆನಿಗೆ ನೀಡಿ ಬಳಿಕ ಮಾರಾಟ ಮಾಡಿ. 10,500 ರೂ. ಬೆಲೆಯ ಸೀರೆಯನ್ನು ಮಾರಾಟ ಮಾಡಲು ನಾವು ಬಿಡುವುದಿಲ್ಲ. ಪ್ರತಿ ವರ್ಷ ಹಬ್ಬಗಳು ಬರುತ್ತದೆ. ಸರ್ಕಾರದ ಯೋಜನೆಯಿಂದ 5 ಸಾವಿರ ಸೀರೆ ನೀಡಲು ಉದ್ದೇಶಿಸಿದೆ. ಇದರಿಂದ ಸುಮಾರು 4 ಕೋಟಿ ರೂ. ನಷ್ಟವಾಗುತ್ತದೆ. ಇದು ಸರ್ಕಾರಿ ಸಂಸ್ಥೆಯಾಗಿರುವುದಿರಿಂದ ಈಗಾಗಲೇ 10% ರಿಯಾಯಿತಿ ನೀಡುತ್ತಿದೆ. ಅದ್ದರಿಂದ ಈ ಕ್ರಮವನ್ನು ಮರುಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.