Tag: minister seat

  • ಸ್ಮಶಾನದಲ್ಲಿ ಜಾಗರಣೆ ಮಾಡಿದ್ದಕ್ಕೆ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ತಪ್ಪಿದೆ: ನಾಗಾ ಸಾಧು

    ಸ್ಮಶಾನದಲ್ಲಿ ಜಾಗರಣೆ ಮಾಡಿದ್ದಕ್ಕೆ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ತಪ್ಪಿದೆ: ನಾಗಾ ಸಾಧು

    ಬೆಳಗಾವಿ: ಶಾಸಕ ಸತೀಶ್ ಜಾರಕಿಹೊಳಿ ಸ್ಮಶಾನದಲ್ಲಿ ಜಾಗರಣೆ ಮಾಡಿದ್ದರಿಂದಲೇ ಸಚಿವ ಸ್ಥಾನ ಕೈ ತಪ್ಪಿದೆ ಎಂದು ಹರಿದ್ವಾರದ ನಾಗಾ ಸಾಧುಗಳು ಹೇಳಿದ್ದಾರೆ.

    ಉತ್ತರ ಭಾರತದ ಪ್ರವಾಸದಲ್ಲಿರುವ ನಾಗಾ ಸಾಧುಗಳು ಬೆಳಗಾವಿಯ ಭಕ್ತರೊಬ್ಬರ ಮನೆಗೆ ಆಗಮಿಸಿ, ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸ್ಮಶಾನದಲ್ಲಿ ಸಿದ್ಧಿ ಮಾಡುವಾಗ ವ್ಯತಿರಿಕ್ತ ಪರಿಣಾಮಗಳು ಆಗುತ್ತದೆ. ಸದ್ಯ ಆ ಪರಿಣಾಮ ಸತೀಶ್ ಜಾರಕಿಹೊಳಿ ಅವರಿಗೆ ಉಂಟಾಗಿದ್ದು, ಅದನ್ನು ಎದುರಿಸುತ್ತಿದ್ದಾರೆ ಎಂದು ನುಡಿದರು.

    ರಾಜ್ಯದಲ್ಲಿ ಸಮಿಶ್ರ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃದ ಸರ್ಕಾರ 5 ವರ್ಷದ ಆಳ್ವಿಕೆ ಮಾಡಲಿದೆ ಎಂದು ನಾಥ ಪಂತಿಯ ಸಾಧುಗಳು ಭವಿಷ್ಯ ನುಡಿದರು.

    ಕಳೆದ ವರ್ಷ ಡಿಸೆಂಬರ್ 6ರಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಮೂಢನಂಬಿಕೆ ವಿರೋಧಿ ಪರಿವರ್ತನಾ ಜಾಥಾ ಆಯೋಜಿಸಿದ್ದರು. ಅಲ್ಲದೇ ಅಂದು ಬೆಳಗಾವಿಯ ಸ್ಮಶಾನದಲ್ಲಿ ಜಾಗರಣೆ ಹಮ್ಮಿಕೊಂಡಿದ್ದರು.

  • ಲೋಕಸಭಾ ಚುನಾವಣೆಗೆ `ಕೈ’ಯಿಂದ ಭಾರೀ ಸಿದ್ಧತೆ- ಮಾಜಿ ಸಚಿವ ಎಂ.ಬಿ ಪಾಟೀಲ್‍ಗೆ ಡಬಲ್ ಧಮಾಕಾ!

    ಲೋಕಸಭಾ ಚುನಾವಣೆಗೆ `ಕೈ’ಯಿಂದ ಭಾರೀ ಸಿದ್ಧತೆ- ಮಾಜಿ ಸಚಿವ ಎಂ.ಬಿ ಪಾಟೀಲ್‍ಗೆ ಡಬಲ್ ಧಮಾಕಾ!

    ಬೆಂಗಳೂರು: ಲೋಕಸಭಾ ಚುನಾವಣೆ ಉದ್ದೇಶದಿಂದ ಪ್ರಾದೇಶಿಕ ಅಸಮತೋಲನ ಸರಿಪಡಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಉತ್ತರ ಕರ್ನಾಟಕ ನಾಯಕರಿಗೆ ಕೆಪಿಸಿಸಿ ಪಟ್ಟ ಕಟ್ಟಲು ಸಿದ್ಧತೆ ನಡೆಸಿದೆ.

    ಸದ್ಯ ಸಂಪುಟದಲ್ಲಿ ಹೆಚ್ಚಾಗಿ ದಕ್ಷಿಣ ಕರ್ನಾಟಕದ ಸಚಿವರೇ ಇದ್ದಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದ ಶಾಸಕರಿಗೆ ನೀಡುವ ಸುಳಿವನ್ನು ಹೈಕಮಾಂಡ್ ಬಿಟ್ಟುಕೊಟ್ಟಿದೆ. ಅಲ್ಲದೇ ಲೋಕಸಭೆ ಚುನಾವಣೆಗೆ ಭಾರೀ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಈ ಯೋಜನೆಗೆ ಮುಂದಾಗಿದೆ ಎನ್ನಲಾಗುತ್ತಿದೆ.

    ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ?
    ಉತ್ತರ ಕರ್ನಾಟಕಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿದೆ ಎಂಬುದಾಗಿ ತಿಳಿದು ಬಂದಿದ್ದು, ಅಧ್ಯಕ್ಷ ಸ್ಥಾನದ ಪಟ್ಟಿಯಲ್ಲಿ ಶಾಸಕ ಎಂ.ಬಿ.ಪಾಟೀಲ್, ಎಸ್.ಆರ್.ಪಾಟೀಲ್, ಅಪ್ಪಾಜ್ಜಿ ನಾಡಗೌಡ ಹೆಸರು ಕೇಳಿ ಬರುತ್ತಿದೆ. ರಾಮನಗರ ಉಪಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಭರ್ತಿ ಮಾಡಲು ಚಿಂತನೆ ನಡೆಸಲಾಗಿದ್ದು, ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರಂತೆ. ಆದರೆ ಇತ್ತ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಶಾಸಕ ದಿನೇಶ್ ಗುಂಡೂರಾವ್, ಮುನಿಯಪ್ಪ ಹಾಗೂ ಬಿ.ಕೆ ಹರಿಪ್ರಸಾದ್ ಅವರಿಗೆ ನಿರಾಶೆ ಕಾಡುತ್ತಿದೆ.

    ಕೆಲವು ಕಾಂಗ್ರೆಸ್ ಶಾಸಕರು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಿಂದ ಸಚಿವ ಸ್ಥಾನ ವಂಚಿತರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಇದನ್ನು ಶಮನ ಮಾಡಲು ಹೈಕಮಾಂಡ್ ಉಳಿದಿರುವ 6 ಸಚಿವ ಸ್ಥಾನದಲ್ಲಿ 2 ಸ್ಥಾನವನ್ನು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಗಾರರಿಗೆ ನೀಡಲು ಮುಂದಾಗಿದ್ದು, ಈ ಬೆನ್ನಲ್ಲೆ ಶಾಸಕ ಎಂ.ಬಿ.ಪಾಟೀಲ್ ಅವರಿಗೆ ಮಂತ್ರಿಗಿರಿ ಇಲ್ಲವೇ, ಕೆಪಿಸಿಸಿ ಅಧ್ಯಕ್ಷ ಪಟ್ಟ ದೊರೆಯಲಿದೆ ಎಂದು ಪಕ್ಷ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

  • ಎಂ.ಬಿ.ಪಾಟೀಲ್ ಬುಡಬುಡಕಿ ಆಟ ಕಾಂಗ್ರೆಸ್ಸಿನಲ್ಲಿ ನಡೆಯಲ್ಲ: ಶಾಮನೂರು

    ಎಂ.ಬಿ.ಪಾಟೀಲ್ ಬುಡಬುಡಕಿ ಆಟ ಕಾಂಗ್ರೆಸ್ಸಿನಲ್ಲಿ ನಡೆಯಲ್ಲ: ಶಾಮನೂರು

    ದಾವಣಗೆರೆ: ಮಂತ್ರಿಗಿರಿಗೆ ಕಾಂಗ್ರೆಸ್‍ನಲ್ಲಿ ಬಂಡಾಯವೆದ್ದು, ಭಾರೀ ಸದ್ದು ಮಾಡುತ್ತಿರುವ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‍ಗೆ ಶಾಮನೂರು ಶಿವಶಂಕರಪ್ಪ ಭರ್ಜರಿ ಟಾಂಗ್ ನೀಡಿದ್ದಾರೆ.

    ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು, ಸಚಿವ ಸ್ಥಾನಕ್ಕೆ ಪಕ್ಷದಲ್ಲಿ ಒತ್ತಡ ಹೇರುತ್ತಿರುವ ಶಾಸಕ ಎಂ.ಬಿ.ಪಾಟೀಲ್ ಬುಡಬುಡಕಿ ಆಟ ಕಾಂಗ್ರೆಸ್ ನಲ್ಲಿ ನಡೆಯುವುದಿಲ್ಲ. ಅಲ್ಲದೇ ಪಕ್ಷದಲ್ಲಿ ಒತ್ತಡ ತಂತ್ರ ಕೆಲಸ ಮಾಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ನಾನು ಸಚಿವ ಸ್ಥಾನದ ಹಿಂದೆ ಬಿದ್ದಿಲ್ಲ. ಸಚಿವ ಸ್ಥಾನಕ್ಕಿಂತ ಹೆಚ್ಚಾಗಿ ದಾವಣಗೆರೆ ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಮಾಡುತ್ತೇನೆ. ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಯಾವುದೇ ಷರತ್ತುಗಳು ಬೇಡ. ಹೋರಾಟಕ್ಕೆ ಹೊಂದಾಣಿಕೆ ಅಗತ್ಯವಾಗಿದೆ ಎಂದು ಹೇಳಿದರು.

  • ಪಕ್ಷದ ಆಂತರಿಕ ವಿಷಯ ಬೀದಿ ರಂಪಾಟವಾಗೋದು ಬೇಡ: ಸಿ.ಎಸ್.ಪುಟ್ಟರಾಜು

    ಪಕ್ಷದ ಆಂತರಿಕ ವಿಷಯ ಬೀದಿ ರಂಪಾಟವಾಗೋದು ಬೇಡ: ಸಿ.ಎಸ್.ಪುಟ್ಟರಾಜು

    ಮಂಡ್ಯ: ಖಾತೆ ಹಂಚಿಕೆಯಲ್ಲಿ ತಾರತಮ್ಯ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಗೊಂಡ ಬೆಂಬಲಿಗರಿಗೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಪತ್ರಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ.

    ನನಗೆ ಯಾವುದೇ ಅಸಮಾಧಾನವಿಲ್ಲ. ಪಕ್ಷದ ಆಂತರಿಕ ವಿಷಯ ಬೀದಿ ರಂಪಾಟವಾಗಬಾರದು, ಆದ್ದರಿಂದ ಪ್ರತಿಭಟನೆಯನ್ನು ಕೈಬಿಡಿ ಎಂದು ಪುಟ್ಟರಾಜು ಅವರು ಫೋನ್ ಮೂಲಕ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.

    ನಡೆದಿದ್ದು ಏನು?
    ಜಿಲ್ಲೆಯಲ್ಲಿ ಪಕ್ಷಕ್ಕೆ ಏನು ಮಾಡದ ಡಿ.ಸಿ.ತಮ್ಮಣ್ಣಗೆ ಸಾರಿಗೆ ನೀಡಲಾಗಿದೆ. ಆದರೆ ಜಿಲ್ಲೆಯ ಜನತೆ ಹಾಗೂ ಪಕ್ಷಕ್ಕಾಗಿ ಶ್ರಮಿಸಿರುವ ಸಿ.ಎಸ್.ಪುಟ್ಟರಾಜು ಅವರಿಗೆ ಸಣ್ಣ ನೀರಾವರಿ ಖಾತೆ ನೀಡಿ ತಾರತಮ್ಯ ತೊರಿದ್ದಾರೆ ಅಂತಾ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದರು. ಅಲ್ಲದೇ ಸಣ್ಣ ನೀರಾವರಿ ಖಾತೆ ಸಿಕ್ಕಿದ ಹಿನ್ನೆಲೆಯಲ್ಲಿ ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿಯನ್ನು ಪಡೆಯಿರಿ ಎಂದು ಪುಟ್ಟರಾಜು ಅವರಿಗೆ ಬೆಂಬಲಿಗರು ಒತ್ತಾಯಿಸಿದ್ದರು.

    ಇತ್ತ ಸಿ.ಎಸ್.ಪುಟ್ಟರಾಜು ಅವರು ಪಕ್ಷದ ಮುಖಂಡರ ಜೊತೆಗೆ ಮಾತುಕತೆಗೆ ಮುಂದಾಗದೇ ಸರ್ಕಾರಿ ಕಾರನ್ನು ವಾಪಸ್ ನೀಡಿ ಖಾಸಗಿ ಕಾರಿನಲ್ಲಿ ಚಾಲಕ, ಪತ್ನಿಯ ಜೊತೆ ಸ್ವಕ್ಷೇತ್ರದಿಂದ ಬೇರೆ ಕಡೆಗೆ ಪ್ರಯಾಣ ಬೆಳೆಸಿದ್ದರು. ಅಷ್ಟೇ ಅಲ್ಲದೇ ತಮ್ಮ ಮೊಬೈಲ್ ಫೋನನ್ನು ಸ್ವಿಚ್ ಆಫ್ ಮಾಡಿದ್ದರು.

  • ಕೈ ಬಂಡಾಯ ಶಾಸಕರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ

    ಕೈ ಬಂಡಾಯ ಶಾಸಕರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ

    ಬೆಂಗಳೂರು: ಕಾಂಗ್ರೆಸ್‍ನಲ್ಲಿ ಬಂಡಾಯದ ಬಿಸಿ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಶಮನ ಮಾಡಲು ಹೈಕಮಾಂಡ್ ಮುಂದಾಗಿದ್ದು ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದೆ.

    ಈಗ 15 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಏಳು ಮಂದಿಗೆ ಸಚಿವರಾಗಲು ಅವಕಾಶವಿದೆ. ಇದೇ ರೀತಿಯಾಗಿ ಅಸಮಾಧಾನವನ್ನು ಹೊರಹಾಕಿದರೆ ಖಾಲಿ ಇರುವ ಏಳು ಸಚಿವ ಸ್ಥಾನದಿಂದ ಹಾಗೂ ನಿಗಮ ಮಂಡಳಿ ಸ್ಥಾನ ಹಂಚಿಕೆಯಲ್ಲಿ ಅವಕಾಶ ವಂಚಿತರಾಗುತ್ತಾರೆ. ಇದನ್ನು ಬಂಡಾಯ ಶಾಸಕರಿಗೆ ಗಮನಕ್ಕೆ ತರುವಂತೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸೂಚಿಸಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿ ತಿಳಿಸಿವೆ.

    ಸಚಿವ ಸ್ಥಾನದಿಂದ ವಂಚಿತರಾಗಿರುವ ಅನೇಕ ಹಿರಿಯ ಶಾಸಕರು ಹೋಟೆಲ್ ನಲ್ಲಿ ಪ್ರತ್ಯೇಕ ಸಭೆ ನಡೆಸಿದ್ದರು. ಅಲ್ಲದೇ ಸಚಿವ ಸ್ಥಾನ ವಂಚಿತ ಆಕಾಂಕ್ಷಿಗಳು ಸಭೆಯಲ್ಲಿ ಭಾಗವಹಿಸಬಹುದೆಂದು ಆಹ್ವಾನ ನೀಡಿದ್ದರು. ಈ ಬೆಳವಣಿಗೆಯಿಂದ ರಾಜ್ಯ ಸರ್ಕಾರಕ್ಕೆ ಕುತ್ತು ಬರಬಹುದು ಎನ್ನುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಈ ಶಾಸಕರಿಗೆ ಎಚ್ಚರಿಕೆ ನೀಡಿದೆ.

    ಹೈಕಂಮಾಡ್ ವಿವಿಧ ಮೂಲಗಳಿಂದ ಪಕ್ಷ ವಿರೋಧಿ ಚಟುವಟಿಕೆ ನಡೆಸುವುದು, ಪ್ರತ್ಯೇಕ ಸಭೆ ನಡೆಸುವುದು, ಹಾಗೂ ಹೈ ಕಮಾಂಡ್ ವಿರುದ್ಧ ಮಾತನಾಡುವ ಶಾಸಕರ ಮಾಹಿತಿ ಕಲೆ ಹಾಕುತ್ತಿದ್ದು, ಮುಂದಿನ ದಿನಗಳಲ್ಲಿ ಅಂತಾ ಶಾಸಕರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

    ಲಿಂಗಪ್ಪಗೆ ಶೋಕಾಸ್ ನೋಟಿಸ್:
    ರಾಮನಗರದಲ್ಲಿ ಮಂಗಳವಾರ ಮಾತನಾಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರು, ರಾಮನಗರ ಕ್ಷೇತ್ರವನ್ನು ಪರಮೇಶ್ವರ್ ಮಾರಾಟಕ್ಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೇ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು.

    ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ಲಿಂಗಣ್ಣ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಬುಧವಾರ ಶೋಕಾಸ್ ನೋಟಿಸ್ ನೀಡಿದ್ದಾರೆ. ಕಾಂಗ್ರೆಸ್ ಹಾಗೂ ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾಧ್ಯಮಗಳ ಮುಂದೆ ಲಘುವಾಗಿ ಮಾತನಾಡಿ ಪಕ್ಷ ವಿರೋಧಿ ಹೇಳಿಕೆ ನೀಡಿದ್ದೀರಿ. ರಾಮನಗರ ಉಪ ಚುನಾವಣೆಯ ಕುರಿತು ಪಕ್ಷ ಸಭೆಯಲ್ಲಿ ಚರ್ಚಿಸಬಹುದಿತ್ತು. ಆದರೆ ನೀವು ಹಾಗೇ ಮಾಡಲಿಲ್ಲ. ನಿಮ್ಮ ತಪ್ಪಿಗೆ ಏಳು ದಿನಗಳಲ್ಲಿ ಉತ್ತರ ನೀಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನೋಟಿಸ್ ನಲ್ಲಿ ತಿಳಿಸಲಾಗಿದೆ.