Tag: Minister Sunil Kumar

  • ಮರಣೋತ್ತರ ರಾಜ್ಯೋತ್ಸವ ನೀಡಲು ಅವಕಾಶವಿಲ್ಲ: ಸುನೀಲ್ ಕುಮಾರ್

    ಮರಣೋತ್ತರ ರಾಜ್ಯೋತ್ಸವ ನೀಡಲು ಅವಕಾಶವಿಲ್ಲ: ಸುನೀಲ್ ಕುಮಾರ್

    ಉಡುಪಿ: ನಿಯಮಾವಳಿ ಮತ್ತು ಕೋರ್ಟ್ ಆದೇಶದ ಪ್ರಕಾರ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿಗೆ ಅವಕಾಶವಿಲ್ಲ. ಅವಕಾಶ ಇಲ್ಲದ ಕಾರಣ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಸಾಧ್ಯವಾಗಿಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

    ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ನಿಧನ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ಸರ್ಕಾರ ಎಲ್ಲ ಎಚ್ಚರಿಕೆಗಳನ್ನು ತೆಗೆದುಕೊಂಡು ಶ್ರದ್ಧಾಂಜಲಿ ಅರ್ಪಿಸಿದೆ. ಪುನೀತ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ಕೊಡಬೇಕು ಎಂಬ ಮಾತು ಎಲ್ಲಾ ಕಡೆಗಳಿಂದ ಕೇಳಿಬಂತು. ಆದರೆ ಅದಕ್ಕೆ ಅವಕಾಶ ಇಲ್ಲದ ಕಾರಣ ಈ ಬೇಡಿಕೆ ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ಮುಂದಿನ ದಿನಗಳಲ್ಲಿ ಪುನೀತ್ ರಾಜಕುಮಾರ್ ಸೇವೆಯನ್ನು ಪರಿಗಣಿಸುತ್ತೇವೆ. ಯಾವ ರೀತಿಯ ಗೌರವ ಕೊಡಬೇಕು ಎಂದು ಸರ್ಕಾರ ತೀರ್ಮಾನ ಮಾಡುತ್ತದೆ. ಈಗಲೇ ಯಾವುದೇ ತರಾತುರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ದೀಪಾವಳಿ ನಂತರ ಸಭೆ ನಡೆಸಿ ಗೌರವ ಸಲ್ಲಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇವರು ಎಂದು ನಾವು ತಿಳಿದುಕೊಂಡಿದ್ದೆವು, ನಮ್ಮ ನೋವನ್ನು ಯಾರ ಬಳಿ ಹೇಳೋದು: ಸೆಕ್ಯೂರಿಟಿ ಕಣ್ಣೀರು

    ಪುನೀತ್‍ಗೆ ವಿಶೇಷ ಗೌರವ ಕೊಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ರಾಜ್ಯ ಸರ್ಕಾರದ ಜಾಹಿರಾತುಗಳಿಗೆ ಪುನೀತ್ ಸಂಭಾವನೆ ಪಡೆಯುತ್ತಿರಲಿಲ್ಲ. ಎಲ್ಲವೂ ಸರ್ಕಾರದ ಗಮನದಲ್ಲಿದೆ. ಸೂಕ್ತ ಗೌರವ, ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸುತ್ತೇವೆ. ಕಾರ್ಯಕ್ರಮದ ಚೌಕಟ್ಟಿನ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

  • ಉಡುಪಿಯ ಕೋವಿಡ್ ಸೋಂಕಿತರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ- ಹೋಮ್ ಐಸೋಲೇಶನ್ ರದ್ದು

    ಉಡುಪಿಯ ಕೋವಿಡ್ ಸೋಂಕಿತರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ- ಹೋಮ್ ಐಸೋಲೇಶನ್ ರದ್ದು

    ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ನಿಧಾನವಾಗಿ ಜಾಸ್ತಿಯಾಗುತ್ತಿದೆ. ಜಿಲ್ಲೆಯಲ್ಲಿ 1368 ಸಕ್ರಿಯ ಪ್ರಕರಣ ಇವೆ. ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಸೆಂಟರ್ ಶಿಫ್ಟ್ ಮಾಡುವ ನಿರ್ಣಯ ಮಾಡಿದ್ದೇವೆ ಎಂದು ಉಡುಪಿ ಜಿಲ್ಲಾ ಕೋವಿಡ್ ಉಸ್ತುವಾರಿ ಸುನಿಲ್ ಕುಮಾರ್ ಹೇಳಿದ್ದಾರೆ.

    ಉಡುಪಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ವೈದ್ಯರ ಸಭೆ ನಡೆಯುತು. ಕೊರೊನಾ ನಿಯಂತ್ರಣ ಬಗ್ಗೆ ಚರ್ಚೆ ನಡೆಸಲಾಯ್ತು. ಮನೆಯವರು, ರೋಗಿಗಳು ಜಿಲ್ಲಾಡಳಿತದ ಜೊತೆ ಸಹಕಾರ ಮಾಡಬೇಕು. ಕೋವಿಡ್ ಕೇರ್ ಸೆಂಟರ್ ದಾಖಲಾತಿ ಸಂದರ್ಭ ಸ್ಥಳೀಯಾಡಳಿತ ಜೊತೆ ಜನರು ಸಹಕಾರ ಮಾಡಬೇಕು ಎಂದು ವಿನಂತಿ ಮಾಡಿದರು.

    ಕೋವಿಡ್ ನಿಯಂತ್ರಣ ಕ್ಕೆ ಇದು ಸೂಕ್ತ ಎಂದು ಅಧಿಕಾರಿಗಳು, ಪ್ರತಿನಿಧಿಗಳ ತೀರ್ಮಾನಿಸಿದ್ದೇವೆ. ಜಿಲ್ಲೆಯಲ್ಲಿ 2000 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಸಿದ್ಧವಿದೆ. ಹೆಬ್ರಿ, ಕಾರ್ಕಳ, ಉಡುಪಿ, ಕುಂದಾಪುರ ಆಕ್ಸಿಜನ್ ಉತ್ಪಾಧಕಾ ಘಟಕ ಸ್ಥಾಪನೆಯಾಗಿದೆ. ಒಂದು ವಾರದೊಳಗೆ ಕಾಮಗಾರಿ ಪೂರ್ಣ ಆಗಲಿದೆ. ಎಲ್ಲಾ ಯಂತ್ರೋಪಕರಣ ಬಂದಿದ್ದು ವಾರದೊಳಗೆ ಘಟಕ ಪೂರ್ಣಗೊಳಿಸುತ್ತೇವೆ ಎಂದರು.

    ಉಡುಪಿ ಶಾಸಕ ರಘುಪತಿ ಭಟ್, ಬೈಂದೂರು ಶಾಸಕ ಸುನೀಲ್ ಕುಮಾರ್ , ಡಿಸಿ ಜಿ. ಜಗದೀಶ್, ಸಿಇಒ ನವೀನ್ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಎಸ್ ಪಿ ವಿಷ್ಣುವರ್ಧನ್ ಇದ್ದರು.