Tag: minister

  • ತಪ್ಪು ಮಾಡಿದ್ದರೆ ಶಿಕ್ಷಿಸು, ಇಲ್ಲವೇ ರಕ್ಷಿಸು – ಮನೆದೇವರ ಮೊರೆಹೋದ ಈಶ್ವರಪ್ಪ

    ತಪ್ಪು ಮಾಡಿದ್ದರೆ ಶಿಕ್ಷಿಸು, ಇಲ್ಲವೇ ರಕ್ಷಿಸು – ಮನೆದೇವರ ಮೊರೆಹೋದ ಈಶ್ವರಪ್ಪ

    ಶಿವಮೊಗ್ಗ: ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡಲು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ಆರೋಪದಿಂದ ವಿಮುಕ್ತರಾಗಲು ಮನೆದೇವರ ಮೊರೆಹೋಗಿದ್ದಾರೆ.

    ರಾಜೀನಾಮೆ ನೀಡಲು ಶಿವಮೊಗ್ಗದಿಂದ ತೆರಳುವುದಕ್ಕೂ ಮುನ್ನವೇ ಮನೆದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ನಮ್ಮ ಮನೆ ದೇವರು ಮಲ್ಲೇಶ್ವರ ಹಾಗೂ ಚೌಡೇಶ್ವರಿಯಲ್ಲಿ ಪ್ರಾರ್ಥನೆ ಮಾಡ್ತೇನೆ. ನಾನು ತಪ್ಪು ಮಾಡಿದ್ದರೆ ಶಿಕ್ಷಿಸು, ಇಲ್ಲವೇ ನಿರಪರಾಧಿಯಾಗಿ ಹೊರ ಬರುವಂತೆ ಮಾಡೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೂ ಮುನ್ನ 29 PDOಗಳ ಟ್ರಾನ್ಸ್‌ಫರ್

    eshwarappa

    ಜೀವನದಲ್ಲಿ ವ್ಯಕ್ತಿಗಳಿಗೆ ಪರೀಕ್ಷೆಗಳು ಎದುರಾಗುತ್ತವೆ. ಈ ಹಿಂದೆ ಇಂಧನ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೆ. ಇವತ್ತು ನನ್ನ ವಿರುದ್ಧ ಆರೋಪ ಕೇಳಿ ಬಂದಿದೆ. ಹೆಣ್ಣುಮಕ್ಕಳು ಅಳುತ್ತಾ ಕಳುಹಿಸಬಾರದು. ಸಂತೋಷವಾಗಿ ಕಳುಹಿಸಿಕೊಡಬೇಕು ಎಂದು ಮಹಿಳಾ ಕಾರ್ಯಕರ್ತೆಯರಿಗೆ ಸಚಿವ ಕೆ.ಎಸ್.ಈಶ್ವರಪ್ಪ ಬುದ್ದಿಮಾತು ಹೇಳಿದರು.

    ರಾಜ್ಯದಾದ್ಯಂತ ಅನೇಕರು ನನಗೆ ದೂರವಾಣಿ ಕರೆ ಮಾಡಿ, ನಿಮ್ಮ ಮೇಲೆ ಏಕೆ ಆರೋಪ? ಎಂದು ಕೇಳುತ್ತಿದ್ದಾರೆ. ಮನೆಗೆ ಬಂದು ಧೈರ್ಯ ತುಂಬುತ್ತಿದ್ದಾರೆ. ಹೋದ ಕಡೆ, ಬಂದ ಕಡೆ ಪ್ರಸಾದ ಕೊಡ್ತಿದ್ದಾರೆ. ಹಾಗಾಗಿ ಈ ಘಟನೆಯಿಂದಾಗಿ ಸಂಘಟನೆಯಲ್ಲಿ ತೊಡಗಲು ಹೆಚ್ಚಿನ ಶಕ್ತಿ ನೀಡಿದಂತಾಗಿದೆ. ಅಳುತ್ತಾ ಕಳುಹಿಸುವುದಾದರೆ ನಾನು ಹೊಗೋದೇ ಇಲ್ಲ. ಹೆಣ್ಣುಮಕ್ಕಳು ಸಂತೋಷದಿAದ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಈಶ್ವರಪ್ಪನವರನ್ನು ಬಂಧಿಸಿ ಅನ್ನೋರಿಗೆ ನಾಚಿಕೆಯಾಗ್ಬೇಕು: ರೇಣುಕಾಚಾರ್ಯ

    eshwarappa

    ಮೂರು ದಿನಗಳ ಹಿಂದೆಯೇ ರಾಜೀನಾಮೆ ನೀಡಬೇಕೆಂದುಕೊಂಡಿದ್ದೆ. ಆದರೆ ಕೊಡಬೇಡ ಅಂತ ಹಿರಿಯರು ಹೇಳಿದ್ದರು. ಅದಕ್ಕಾಗಿ ಕೊಡದಿರಲು ನಿರ್ಧರಿಸಿದ್ದೆ. ನಿನ್ನೆ ರಾಜೀನಾಮೆ ಕೊಡು ಅಂದ್ರು ಅದಕ್ಕೆ ಕೊಡಲು ಮುಂದಾದೆ. ತನಿಖೆಯ ನಂತರ ನಿರಪರಾಧಿಯಾಗಿ ಹೊರಬರುವ ವಿಶ್ವಾಸವಿದೆ ಎಂದರು.

    ನನ್ನ ಜೀವ ಇರುವವರೆಗೂ ಈ ಸಂಘಟನೆ ಮೂಲಕ ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇನೆ. ನಾವೆಲ್ಲರೂ ಬಡವರು, ದೀನದಲಿತರ ಪರ ಕೆಲಸ ಮಾಡೋಣ. ಹಿಂದೂಗಳ ಮೇಲಿನ ಸಂಘರ್ಷದ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವವರಿಗೆ ಸರಿಯಾದ ಉತ್ತರ ಕೊಡೋಣ ಎಂದು ಕರೆ ನೀಡಿದರು.

    ಇದೇ ವೇಳೆ ಈಶ್ವರಪ್ಪ ಮಹಾರಾಜ್ ಕೀ ಜೈ ಎಂಬ ಘೋಷಣೆಗಳು ಮೊಳಗಿದವು.

  • ಅತಿ ಶೀಘ್ರದಲ್ಲೇ ರಮೇಶ್ ಜಾರಕಿಹೊಳಿ ಮಂತ್ರಿ ಆಗ್ತಾರಾ..?

    ಅತಿ ಶೀಘ್ರದಲ್ಲೇ ರಮೇಶ್ ಜಾರಕಿಹೊಳಿ ಮಂತ್ರಿ ಆಗ್ತಾರಾ..?

    ಬೆಳಗಾವಿ: ಸಿಡಿ ಪ್ರಕರಣದಿಂದಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ರಮೇಶ್ ಜಾರಕಿಹೊಳಿ ಇದೀಗ ಮತ್ತೆ ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರೆಯೇ ಎಂಬ ಚರ್ಚೆಗಳು ನಡೆದಿವೆ.

    ಗೋಕಾಕ್ ಮತಕ್ಷೇತ್ರದ ಶಾಸಕರಾಗಿರುವ ರಮೇಶ್ ಜಾರಕಿಹೊಳಿ ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಲ್ಲದೇ ಬಿಜೆಪಿ ಸರ್ಕಾರ ರಚೆನೆಗೂ ಕಾರಣವಾಗಿದ್ದರು. ಇದಾದ ನಂತರ ಸಿಡಿ ಪ್ರಕರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ ಸಿಡಿ ಪ್ರಕರಣ ಮುಗಿಯುವ ಕೊನೆಯ ಹಂತಕ್ಕೆ ತಲುಪಿದ್ದು, ಕೋರ್ಟ್ ಕೇಸ್ ಕೂಡ ರಮೇಶ್ ಜಾರಕಿಹೊಳಿ ಪರವಾಗಿ ಬರುತ್ತೆ ಎಂಬ ಮಾಹಿತಿ ಕೂಡ ಇದೆ. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್- ಎಲ್ಲರೂ ತಪ್ಪದೇ ಲಸಿಕೆ ಪಡೆಯಿರಿ: ಸುಧಾಕರ್

    ಹೀಗಾಗಿ ಇದೆಲ್ಲವನ್ನೂ ಇಟ್ಟುಕೊಂಡು ರಮೇಶ್ ಜಾರಕಿಹೊಳಿ ಹೈಕಮಾಂಡ್ ಮೇಲೆ ಒತ್ತಡ ತಂದು ಮರಳಿ ಸಚಿವ ಸ್ಥಾನ ಪಡೆಯುತ್ತಾರೆ ಎನ್ನಲಾಗಿದೆ. ಇದರ ಮಧ್ಯೆ ಒಂದೆಡೆ ಮತ್ತೆ ಸಚಿವರಾಗಲು ರಮೇಶ್ ಜಾರಕಿಹೊಳಿ ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದರು. ಮತ್ತೊಂದೆಡೆ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅತಿ ಶೀಘ್ರದಲ್ಲೇ ಮತ್ತೆ ರಮೇಶ್ ಅಣ್ಣಾ ಜಾರಕಿಹೊಳಿ ಮಂತ್ರಿ ಆಗುತ್ತಾರೆ. ನಮ್ಮ ಸಾಹುಕಾರ್ ನಮ್ಮ ಹೆಮ್ಮೆ’ ಅಂತಾ ವಾಟ್ಸಪ್ ಗ್ರೂಪ್‍ಗಳಲ್ಲಿ ಪೋಸ್ಟ್ ಹಾಕುತ್ತಿದ್ದು. ತಮ್ಮ ಸಹೋದರ ಲಖನ್ ಜಾರಕಿಹೊಳಿ ಅಭಿಮಾನಿಗಳ ವಾಟ್ಸಪ್ ಗ್ರೂಪ್‍ನಲ್ಲಿ ಪೋಸ್ಟ್ ಹಾಕಿದ್ದಾರೆ.

    ಆದರೆ ಏಪ್ರಿಲ್ 16 ಹಾಗೂ 17ರಂದು ಹೊಸಪೇಟೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಾಹುಕಾರ್ ಕಣ್ಣೀರಿಟ್ಟಿದ್ದರು. ದೆಹಲಿ ಟೂರ್ ಯಶಸ್ವಿಯಾಗದ ಹಿನ್ನೆಲೆ ಹೊಸಪೇಟೆಯಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯತ್ತ ಸಾಹುಕಾರ್ ಚಿತ್ತ ಹರಿಸಿದ್ದಾರಂತೆ. ಅದಕ್ಕೆ ಕಾರಣ, ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಅಮಿತ್ ಶಾ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಈ ವೇಳೆ ಅಮಿತ್ ಶಾ ಭೇಟಿಯಾಗಿ ಸಚಿವ ಸ್ಥಾನಕ್ಕೆ ಮನವಿ ಮಾಡಲು ನಿರ್ಧಾರವನ್ನು ರಮೇಶ್ ಜಾರಕಿಹೊಳಿ ಅವರ ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ

  • ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ, ನಮ್ಮ ತಾತನ ಆಸ್ತಿಯಲ್ಲ; ಮುರುಗೇಶ್ ನಿರಾಣಿ

    ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ, ನಮ್ಮ ತಾತನ ಆಸ್ತಿಯಲ್ಲ; ಮುರುಗೇಶ್ ನಿರಾಣಿ

    ಬೆಳಗಾವಿ: ಸಂಪುಟದಿಂದ ಮುರುಗೇಶ್ ನಿರಾಣಿ ಅವರನ್ನ ಕೈಬಿಡ್ತಾರೆ ಎಂಬ ಪ್ರಶ್ನೆಗೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ ಸಚಿವ ಮುರುಗೇಶ್ ನಿರಾಣಿ , ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ ನಮ್ಮ ತಾತನ ಆಸ್ತಿಯಲ್ಲ ಎಂದು ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಮುಖ್ಯಮಂತ್ರಿ ಪರಮಾಧಿಕಾರವಾಗಿದ್ದು, ನಮ್ಮ ರಾಜ್ಯದ ನಾಯಕರು, ರಾಷ್ಟ್ರೀಯ ವರಿಷ್ಠರು ಸೇರಿ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತಾರೆ. ಮಂತ್ರಿ ಆಗಲಿ, ಎಂಎಲ್‍ಎ ಆಗಲಿ, ಇದು ನಮ್ಮ ತಾತ ಆಸ್ತಿಯಲ್ಲ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. 30ವರ್ಷದಿಂದ ಬಿಜೆಪಿ ಪಕ್ಷದ ಕಾರ್ಯಕರ್ತ ಆಗಿರುವೆ. ನಾಳೆ ಮಂತ್ರಿ ಕೊಟ್ಟರು ಇದರಲ್ಲಿ ಇರ್ತೇವಿ. ಎಂಎಲ್‍ಎ ಟಿಕೆಟ್ ಕೊಡದಿದ್ದರು ನಾವು ಈ ಪಕ್ಷದಲ್ಲಿ ಇರುತ್ತೇವೆ. ನಾನು ಪಕ್ಷದ ಸಕ್ರಿಯ ಸದಸ್ಯನಾಗಿ ಮುಂದೆ ಬರುವಂತವರಿಗೆ ಮಾರ್ಗದರ್ಶನ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ವಿವಾದಿತ ಸಮಾಧಿಯನ್ನ ಶಾಂತಿಯುತವಾಗಿ ಸ್ಥಳಾಂತರಿಸಿದ ಕ್ರೈಸ್ತ ಸಮುದಾಯ

    ಸಚಿವ ಸಂಪುಟ ವಿಚಾರ ಹೊರಗಡೆ ಚರ್ಚೆ ಆಗ್ತಿಲ್ಲ. ಅದು ಮುಖ್ಯಮಂತ್ರಿ ಪರಮಾಧಿಕಾರವಿದೆ. ಈ ಬಗ್ಗೆ ಸಿಎಂ ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡಿ ಇತ್ಯರ್ಥ ಮಾಡುತ್ತಾರೆ. 2023ರಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡಬೇಕು. 150 ಸೀಟ್ ಗೆಲ್ಲಿಸುವ ನಿಟ್ಟಿನಲ್ಲಿ ಸ್ಟ್ಯಾಟರ್ಜಿ ಮಾಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ತಂತ್ರ ಮಾಡಿದ್ದಾರೆ. ಹೀಗಾಗಿ ಸಂಪುಟದಿಂದ ಯಾರನ್ನ ಬಿಡುಬೇಕು. ಸಂಪುಟಕ್ಕೆ ಯಾರನ್ನ ತೆಗೆದುಕೊಳ್ಳಬೇಕು. ಯಾರನ್ನ ಸಂಪುಟದಲ್ಲಿ ಉಳಿಸಿ ಕೊಳ್ಳಬೇಕೆನ್ನುವುದನ್ನ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಅನಿಲ್ ದೇಶಮುಖ್‍ರನ್ನು ಸಿಬಿಐ ವಶಕ್ಕೆ

    ಮುಸ್ಲಿಂರಿಗೆ ಆರ್ಥಿಕ ಬಹಿಷ್ಕಾರ ವಿಚಾರಕ್ಕೆ, ನಮ್ಮ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಇದರಲ್ಲಿ ಭಾಗವಹಿಸಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಆಗಿ ನಮ್ಮ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರ್ತೇವೆ. ಹಿಂದೂ ಸಂಘಟನೆಗಳು ಆರ್ಥಿಕ ಬಹಿಷ್ಕಾರ ಮಾಡುತ್ತಿರುವ ಬಗ್ಗೆ ಮಾಧ್ಯಮದಲ್ಲಿ ನೋಡಿರುವೆ. ನೂರರಷ್ಟು ಶಾಂತಿ ಕಾಪಾಡುವ ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ನಮ್ಮ ಗೃಹ ಸಚಿವರು ಸಶಕ್ತರು ಇದ್ದಾರೆ ಎಂದರು.

  • ಸಚಿವ ಸೋಮಣ್ಣಗೆ ಸಂಕಷ್ಟ – ಏಪ್ರಿಲ್ 16ಕ್ಕೆ ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

    ಸಚಿವ ಸೋಮಣ್ಣಗೆ ಸಂಕಷ್ಟ – ಏಪ್ರಿಲ್ 16ಕ್ಕೆ ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

    ಬೆಂಗಳೂರು: ಅಕ್ರಮ ಆಸ್ತಿ ಆರೋಪದಲ್ಲಿ ಹಾಲಿ ಸಚಿವ ವಿ.ಸೋಮಣ್ಣಗೆ ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಎಸಿಬಿಯ ಬಿ ರಿಪೋರ್ಟ್ ತಿರಸ್ಕರಿಸಿದ ಲೋಕಾಯುಕ್ತ ಕೋರ್ಟ್, ಕ್ರಿಮಿನಲ್ ಕೇಸ್ ರಿಜಿಸ್ಟರ್ ಮಾಡಿ ಏಪ್ರಿಲ್ 16ಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೋಮಣ್ಣಗೆ ಸಮನ್ಸ್ ನೀಡಿದೆ.

    ಸೋಮಣ್ಣ ಅವರು ಶಾಸಕರಾಗಿದ್ದ ವೇಳೆ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ರಾಮಕೃಷ್ಣ ಎಂಬವರು 2013 ರಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಮಾಡಿದ್ದು, ಅದರಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ಸೋಮಣ್ಣ ಯಾವುದೇ ರೀತಿಯಲ್ಲಿ ಅಕ್ರಮ ಆಸ್ತಿ ಗಳಿಸಿಲ್ಲ ಎಂದು ಲೋಕಾಯುಕ್ತ ಪೊಲೀಸರು ಕೋರ್ಟ್‌ಗೆ ‘ಬಿ’ ವರದಿ ಸಲ್ಲಿಸಿದ್ದರು. ಇದನ್ನೂ ಓದಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ – ಸಂಕಷ್ಟದಲ್ಲಿ ಮುಜರಾಯಿ ಇಲಾಖೆಯ ಶಾಲೆ

    ಲೋಕಾಯುಕ್ತ ಪೊಲೀಸರ ಈ ವರದಿಯನ್ನು ತಿರಸ್ಕರಿಸಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಇದೀಗ ಸಮನ್ಸ್ ಜಾರಿ ಮಾಡಿದೆ. ವಿ. ಸೋಮಣ್ಣ ಶಾಸಕರಾಗುವ ಮೊದಲಿನ ಆದಾಯ, ನಂತರದ ಆದಾಯ, ಗಳಿಸಿದ ಆಸ್ತಿಯ ಸೂಕ್ತ ವಿವರಗಳನ್ನು ಲೋಕಾಯುಕ್ತ ಪೊಲೀಸರು ತನಿಖಾ ವರದಿಯಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ ಲೋಕಾಯುಕ್ತ ಪೊಲೀಸರು ಅಸಮರ್ಥ ತನಿಖೆ ನಡೆಸಿದ್ದಾರೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು – ದೆಹಲಿಯ ಏಮ್ಸ್‌ಗೆ ಶಿಫ್ಟ್‌

    ಶಾಸಕರಾಗಿದ್ದ ವಿ. ಸೋಮಣ್ಣ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದ ದೂರುದಾರ ವಿಚಾರಣೆಗೆ ಹಾಜರಾಗಿರಲಿಲ್ಲ. ದೂರುದಾರನ ನಡೆ ನೋಡಿ ಅನುಮಾನ ವ್ಯಕ್ತಪಡಿಸಿದ್ದ ನ್ಯಾಯಾಲಯ, ದೂರುದಾರನಿಗೆ ಎಚ್ಚರಿಕೆ ನೀಡಿತ್ತು. ಆ ಬಳಿಕ ರಾಮಕೃಷ್ಣ ಖಾಸಗಿ ದೂರನ್ನು ಸಲ್ಲಿಸಿದ್ದರು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಬಿ ವರದಿ ಸಲ್ಲಿಸಿ ಕೈ ತೊಳೆದುಕೊಂಡಿದ್ದರು. ಆದರೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರ ತನಿಖೆಯನ್ನು ತಿರಸ್ಕರಿಸಿ ಸಮನ್ಸ್ ಜಾರಿಗೊಳಿಸಿದೆ.

  • ನಮ್ಮ ಇಲಾಖೆಯಲ್ಲಿ ಅನುದಾನ ಇಲ್ಲ- ಸದನದಲ್ಲಿ ಜಲಸಂಪನ್ಮೂಲ ಸಚಿವರ ಅಳಲು

    ನಮ್ಮ ಇಲಾಖೆಯಲ್ಲಿ ಅನುದಾನ ಇಲ್ಲ- ಸದನದಲ್ಲಿ ಜಲಸಂಪನ್ಮೂಲ ಸಚಿವರ ಅಳಲು

    ಬೆಂಗಳೂರು: ಜಲ ಸಂಪನ್ಮೂಲ ಇಲಾಖೆಯಲ್ಲಿ ಅನುದಾನ ಕೊರತೆ ಇದೆ ಅಂತ ಸ್ವತಃ ಜಲಸಂಪನ್ಮೂಲ ಇಲಾಖೆ ಸಚಿವರೇ ಅಸಹಾಯಕತೆ ತೋಡಿಕೊಂಡ ಘಟನೆ ನಡೆಯಿತು.

    ವಿಧಾನ ಪರಿಷತ್ ಕಲಾಪದಲ್ಲಿ ನಿಯಮ 72ರ ಅಡಿ ಜೆಡಿಎಸ್ ನ ಬಿಎಂ ಫಾರೂಕ್, ಜಲ ಸಂಪನ್ಮೂಲ ಇಲಾಖೆ ಬಿಲ್ ಪಾವತಿ ಆಗದ ಬಗ್ಗೆ ವಿಷಯ ಪ್ರಸ್ತಾಪ ಮಾಡಿದರು. ಜಲ ಸಂಪನ್ಮೂಲ ಇಲಾಖೆ ವಿವಿಧ ನಿಗಮದಲ್ಲಿ ಆದ ಕಾಮಗಾರಿಗಳ ಬಿಲ್ ಇನ್ನು ಪಾವತಿ ಆಗಿಲ್ಲ. ಕೋಟ್ಯಂತರ ರೂಪಾಯಿ ಹಣ ಇಲಾಖೆ ಬಾಕಿ ಉಳಿಸಿಕೊಂಡಿದೆ. ಕೂಡಲೇ ಕಾಮಗಾರಿಗಳ ಬಿಲ್ಲಿನ ಮೊತ್ತ ಪಾವತಿಸಿ. ಇಲ್ಲದೆ ಹೋದ್ರೆ ಹೊಸ ಕಾಮಗಾರಿ ಹೇಗೆ ಮಾಡುತ್ತೀರಾ ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಸ್ಪೀಕರ್ ಕಾಗೇರಿಗೆ ವೆರಿಗುಡ್ ಎಂದ ಸಿದ್ದರಾಮಯ್ಯ

    ಇದಕ್ಕೆ ಉತ್ತರ ನೀಡಿದ ಸಚಿವ ಕಾರಜೋಳ, 2021-22ನೇ ಸಾಲಿನ 4 ನಿಗಮಗಳಾದ ಕೃಷ್ಣ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮ, ಕಾವೇರಿ ನೀರಾವರಿ ನಿಗಮಗಳಿಗೆ 17410.28 ಕೋಟಿ ಬಿಡುಗಡೆ ಮಾಡಲಾಗಿದೆ. ಜನವರಿ ಅಂತ್ಯಕ್ಕೆ 10967.47 ಕೋಟಿ ಬಿಡುಗಡೆಯಾಗಿದೆ. ಈ ಯೋಜನೆಗಳನ್ನ ಪೂರ್ಣಗೊಳಿಸಲು 1 ಲಕ್ಷ ಕೋಟಿ ಅಗತ್ಯವಿದೆ. ಬಾಕಿ ಇರುವ ಬಿಲ್ ಮೊತ್ತ 9998.95 ಕೋಟಿ ಆಗಿದೆ. ಹಂತ ಹಂತವಾಗಿ ಆದ್ಯತೆ ಮೇರೆಗೆ ಹಣವನ್ನು ಬಿಡುಗಡೆ ಮಾಡಲಾಗುತ್ತೇವೆ ಅಂತ ಭರವಸೆ ನೀಡಿದರು. ಇದನ್ನೂ ಓದಿ: ಪರೀಕ್ಷೆ ನಡೆಸಿ ಕರ್ನಾಟಕದ ಮೆಡಿಕಲ್‌ ಕಾಲೇಜುಗಳಲ್ಲಿ ಸೀಟ್‌ ನೀಡಿ: ಎಚ್‌ಡಿಕೆ

     

    ನಮ್ಮ ಬಜೆಟ್ ಅಲೋಕೇಶನ್ ಮತ್ತು ನಮ್ಮ ಯೋಜನೆಗಳಿಗೆ ತುಂಬಾ ವ್ಯತ್ಯಾಸ ಇದೆ. ಈ ಇಲಾಖೆಯಲ್ಲಿ ಅನೇಕ ಸಮಸ್ಯೆಗಳು ಇವೆ. ಮಹದಾಯಿ, ಮೇಕೆದಾಟು ಸೇರಿದಂತೆ ಅನೇಕ ಯೋಜನೆಗಳು ಕೋರ್ಟ್‍ನಲ್ಲಿ ಇವೆ. ಟೋಕನ್ ಹಣ ಇಟ್ಟು ಯೋಜನೆ ಸ್ಯಾಂಕ್ಷನ್ ಮಾಡೋದ್ರೀಂದ ಈ ಸಮಸ್ಯೆ ಆಗ್ತಿದೆ ಅಂತ ತಿಳಿಸಿದರು. ನಮ್ಮ ಇಲಾಖೆಯಲ್ಲಿ ಅನುದಾನ ಕೊರತೆ ಇದೆ. ನಮ್ಮಲ್ಲಿ ಇನ್ನು 22 ಲಕ್ಷ ಹೆಕ್ಟೇರ್ ನೀರಾವರಿ ಮಾಡೋ ಅವಕಾಶ ಇದೆ. ಆದ್ರೆ ನಮಗೆ ಅನುದಾನ ಕೊರತೆಯಿಂದ ಸಮಸ್ಯೆ ಆಗ್ತಿದೆ ಅಂತ ಅಸಹಾಯಕತೆ ತೋಡಿಕೊಂಡರು. ಇದನ್ನೂ ಓದಿ: ಎತ್ತಿನಹೊಳೆ ಪೂರ್ಣ ಆದ್ರೆ ನೇಣು ಹಾಕಿಕೊಳ್ಳುತ್ತೇನೆ: ಭೋಜೇಗೌಡ

  • ಬೆಂಗಳೂರು ಪೊಲೀಸರ ಮೊರೆ ಹೋದ ತಮಿಳುನಾಡು ಮಂತ್ರಿ ಮಗಳು

    ಬೆಂಗಳೂರು ಪೊಲೀಸರ ಮೊರೆ ಹೋದ ತಮಿಳುನಾಡು ಮಂತ್ರಿ ಮಗಳು

    ಬೆಂಗಳೂರು: ತಮಿಳುನಾಡು ಸಚಿವರ ಪುತ್ರಿಯ ಕಿಡ್ನ್ಯಾಪ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪುತ್ರಿ ಮತ್ತು ಪ್ರಿಯಕರ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿದ್ದು, ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ.

    ತಮಿಳುನಾಡು ಸರ್ಕಾರದ ಮುಜರಾಯಿ ಸಚಿವ ಶೇಖರ್ ಬಾಬು ಪುತ್ರಿ ಜಯಕಲ್ಯಾಣಿಯು ಸತೀಶ್ ಕುಮಾರ್ ಅವರನ್ನು ಪ್ರೀತಿಸುತ್ತಿದ್ದರು. ಈ ವಿಚಾರವಾಗಿ ತಮಿಳುನಾಡಿನಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ವಿರೋಧದ ನಡುವೆ ಜಯಕಲ್ಯಾಣಿ ತಮಿಳುನಾಡಿನಿಂದ ಎಸ್ಕೇಪ್ ಆಗಿದ್ದರು. ನಾಪತ್ತೆಯಾದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಜಯಕಲ್ಯಾಣಿ ಕಿಡ್ನ್ಯಾಪ್ ಆಗಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ: ಅರ್ಧಗಂಟೆ ಸಮಯ ಸಿಕ್ಕರೆ ಅಷ್ಟರಲ್ಲೇ ಭಯದಿಂದ ಅಡುಗೆ ಮಾಡಿ ತಿನ್ನುತ್ತಿದ್ದೆವು: ವಿದ್ಯಾರ್ಥಿನಿ ಅಕ್ಷಿತಾ

    ಮನೆಯವರ ವಿರೋಧದ ನಡುವೆ ಈ ಜೋಡಿ ರಾಯಚೂರಿನ ಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿದ್ದಾರೆ. ಮಠದಲ್ಲಿ ವಿವಾಹವಾದ ನವ ಜೋಡಿ ಬೆಂಗಳೂರಿಗೆ ಬಂದು ರಕ್ಷಣೆ ಕೋರುತ್ತಿದ್ದಾರೆ.

    ನನಗೂ ಮತ್ತು ಪ್ರಿಯಕರನಿಗೂ ಜೀವ ಬೆದರಿಕೆ ಇದೆ ರಕ್ಷಣೆ ಕೊಡಿ ಎಂದು ಜಯಕಲ್ಯಾಣಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಬಂದು ಮನವಿ ಮಾಡಿದ್ದಾರೆ.

  • ಡಬಲ್ ಆಯ್ತು ಮುಖ್ಯಮಂತ್ರಿ, ಸಚಿವರು, ಶಾಸಕರ ಸಂಬಳ: ವಿಧಾನಸಭೆಯಲ್ಲಿ ಬಿಲ್ ಪಾಸ್

    ಡಬಲ್ ಆಯ್ತು ಮುಖ್ಯಮಂತ್ರಿ, ಸಚಿವರು, ಶಾಸಕರ ಸಂಬಳ: ವಿಧಾನಸಭೆಯಲ್ಲಿ ಬಿಲ್ ಪಾಸ್

    ಬೆಂಗಳೂರು: ವಿಧಾನಸಭೆ ಸರಿಯಾಗಿ ನಡೆಯಲಿಲ್ಲ. 5ದಿನ ಕಲಾಪ ವ್ಯರ್ಥ ಆಯಿತು. ಆದರೆ ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ ಮಾತ್ರ ಹೆಚ್ಚಾಗಬೇಕು. ಇವತ್ತು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ, ಭತ್ಯೆ ಹೆಚ್ಚಳ ಮಾಡಿಕೊಂಡಿದ್ದಾರೆ.

    ವಿಧಾನಸಭೆಯಲ್ಲಿ ಕಾಂಗ್ರೆಸ್ ಧರಣಿ ಮಧ್ಯೆಯೇ ಎರಡು ವಿಧೇಯಕಗಳು ಮಂಡನೆಯಾಗಿ ಅಂಗೀಕಾರವೂ ಆಯಿತು. ವಿಧೇಯಕ ಅಂಗೀಕಾರವಾಗಿದ್ದರಿಂದ ಮುಖ್ಯಮಂತ್ರಿ, ಮಂತ್ರಿಗಳು, ಸಭಾಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಶಾಸಕರು, ಪರಿಷತ್ ಸದಸ್ಯರ ಸಂಬಳ ಹೆಚ್ಚಳ ಆಗಿದೆ. ಬರೋಬ್ಬರಿ ಶೇಕಡಾ 50%ರಷ್ಟು ಸಂಬಳ, ಭತ್ಯೆ ಹೆಚ್ಚಳ ಆಗಿದೆ.

    ವೇತನ ಹೆಚ್ಚಳದ ಮಸೂದೆ ಮಂಡಿಸಿ ಅಂಗೀಕಾರ ಪಡೆಯಲು ಸಚಿವ ಮಾಧುಸ್ವಾಮಿ ಬಿಲ್ ಬಗ್ಗೆ ಸಮರ್ಥನೆ ಮಾಡಿಕೊಂಡರು. ಕೋವಿಡ್ ಸಂದರ್ಭದಲ್ಲಿ ಬಹಳ ಕಷ್ಟ ಆಗಿದೆ. ಡಿಸೇಲ್, ಪೆಟ್ರೋಲ್ ಕೂಡ ಜಾಸ್ತಿ ಆಗಿದೆ. ಮನೆ ಬಾಡಿಗೆ ಕೂಡ ಜಾಸ್ತಿ ಆಗಿದೆ. ಹಾಗಾಗಿ ಮುಖ್ಯಮಂತ್ರಿ, ಸಚಿವರು, ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಶಾಸಕರ ಸಂಬಳ ಹೆಚ್ಚಳ ಮಾಡಲು ಬಿಲ್ ತಂದಿದ್ದೇವೆ. 50%ರಷ್ಟು ಹೆಚ್ಚಳಕ್ಕೆ ಬಿಲ್ ತಂದಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಶವಯಾತ್ರೆಗೆ ಅವಕಾಶ ಕೊಟ್ಟಿದ್ದು ಸರಿಯಲ್ಲ: ಸಿದ್ದರಾಮಯ್ಯ

    ಕೋವಿಡ್ ಕಾರಣಕ್ಕಾಗಿ ಹಲವು ಇಲಾಖೆಗಳಲ್ಲಿ ಹಣ ಕಡಿತ ಮಾಡಿದ್ದ ಸರ್ಕಾರ, ಕೆಲ ಯೋಜನೆಗಳ ಅನುದಾನವನ್ನೂ ಕೂಡ ಕಡಿತಗೊಳಿಸಿತ್ತು. ದುಂದು ವೆಚ್ಚ ಮಾಡಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದ ದಿನವೇ ಘೋಷಣೆ ಮಾಡಿದ್ದರು. ಆದರೆ ಈಗ ಸಚಿವರು, ಮುಖ್ಯಮಂತ್ರಿಗಳ ಸಂಬಳ ಹೆಚ್ಚಳಕ್ಕೆ ಬಿಲ್ ತಂದು ಅಂಗೀಕಾರ ಪಡೆದುಕೊಂಡ ಸರ್ಕಾರದ ನಡೆ ಬಗ್ಗೆ ಸಾರ್ವಜನಿಕವಾಗಿ ಟೀಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಯಾವುದೇ ದೇಶದ್ರೋಹಿಯನ್ನು ಬಿಡೋದಿಲ್ಲ, ಮಟ್ಟ ಹಾಕ್ತೀವಿ: ಆರ್. ಅಶೋಕ್

    * ಮುಖ್ಯಮಂತ್ರಿ, ಸಚಿವರಿಗೆ ಸಂಬಳ ಹೆಚ್ಚಾಗಿದ್ದೆಷ್ಟು..?

    > ಮುಖ್ಯಮಂತ್ರಿ, ಮಂತ್ರಿಗಳ ಸಂಬಳ ಶೇಕಡಾ 50%ರಷ್ಟು ಹೆಚ್ಚಳ

    > ಸಿಎಂಗೆ ಪ್ರತಿ ತಿಂಗಳು ಇದ್ದ 50ಸಾವಿರ ಸಂಬಳ 75 ಸಾವಿರಕ್ಕೆ ಹೆಚ್ಚಳ

    > ಕ್ಯಾಬಿನೆಟ್ ದರ್ಜೆ ಮಂತ್ರಿಗಳಿಗೆ ಪ್ರತಿ ತಿಂಗಳಿಗೆ 40ಸಾವಿರ ಇದ್ದ ಸಂಬಳ 60 ಸಾವಿರ ರೂ.ಗಳಿಗೆ ಹೆಚ್ಚಳ

    > ಕ್ಯಾಬಿನೆಟ್ ದರ್ಜೆ ಪ್ರತಿ ವರ್ಷಕ್ಕೆ ಅತಿಥ್ಯ ಭತ್ಯೆ 3ಲಕ್ಷದಿಂದ ನಾಲ್ಕೂವರೆ ಲಕ್ಷಕ್ಕೆ ಹೆಚ್ಚಳ

    >ಕ್ಯಾಬಿನೆಟ್ ದರ್ಜೆ ಮಂತ್ರಿಗಳ ಮನೆ ಬಾಡಿಗೆ 80 ಸಾವಿರದಿಂದ 1ಲಕ್ಷದ 20 ಸಾವಿರ ರೂಪಾಯಿಗೆ ಹೆಚ್ಚಳ

    > ಕ್ಯಾಬಿನೆಟ್ ದರ್ಜೆ ಮಂತ್ರಿಗಳ ಮನೆ ನಿರ್ವಹಣೆ ವೆಚ್ಚ 20 ಸಾವಿರದಿಂದ 30ಸಾವಿರಕ್ಕೆ ಹೆಚ್ಚಳ

    > ಕ್ಯಾಬಿನೆಟ್ ದರ್ಜೆ ಮಂತ್ರಿಗಳ ವಾಹನ ಸೌಲಭ್ಯಕ್ಕಾಗಿ ಪ್ರತಿ ತಿಂಗಳಿಗೆ ಒಂದು ಸಾವಿರ ಪೆಟ್ರೋಲ್ ಲೀಟರ್ ನಿಂದ 2ಸಾವಿರ ಲೀಟರ್ ಪೆಟ್ರೋಲ್ ಗೆ ಹೆಚ್ಚಳ

    * ಸಭಾಧ್ಯಕ್ಷರು/ ಸಭಾಪತಿ ವೇತನ, ಭತ್ಯೆ

    > ಸಂಬಳ: 50,000ರೂ. ದಿಂದ 75,000ರೂ.

    > ಆತಿಥ್ಯ ವೇತನ ವಾರ್ಷಿಕ: 3,00,000ರೂ. ದಿಂದ 4,00,000 ರೂ.

    > ಮನೆ ಬಾಡಿಗೆ: 80,000 ರೂ. ದಿಂದ 1,60,000ರೂ.

    > ಇಂಧನ: 1000 ಲೀಟರ್‍ರಿಂದ 2000 ಲೀಟರ್

    > ಪ್ರಯಾಣ ಭತ್ಯೆ: ಪ್ರತಿ ಕಿಲೋಮೀಟರ್ 30ರೂ. ದಿಂದ 40ರೂ.

    > ದಿನ ಭತ್ಯೆ(ಪ್ರಯಾಣ): ದಿನಕ್ಕೆ2000ರೂ. ದಿಂದ 3000ರೂ.

    > ಹೊರ ರಾಜ್ಯ ಪ್ರವಾಸ: ದಿನಕ್ಕೆ 2500ರೂ. +5000ರೂ. ದಿಂದ 3000ರೂ.+7000ರೂ.

    * ವಿಪಕ್ಷ ನಾಯಕರ ವೇತನ, ಭತ್ಯೆ

    > ಸಂಬಳ:40,000ರೂ. ದಿಂದ ? 60,000ರೂ.

    > ವಿಪಕ್ಷ ನಾಯಕರ ಆತಿಥ್ಯ ವೇತನ ವಾರ್ಷಿಕ: 2,00,000ರೂ. ದಿಂದ 2,50,000ರೂ.

    > ಇಂಧನ: 1000 ಲೀಟರ್ ರಿಂದ 2000 ಲೀಟರ್

    > ಪ್ರಯಾಣ ಭತ್ಯೆ: ಪ್ರತಿ ಕಿಲೋಮೀಟರ್ 30ರೂ.

    > ದಿನ ಭತ್ಯೆ(ಪ್ರಯಾಣ): ದಿನಕ್ಕೆ 2000ರೂ. ದಿಂದ 3000ರೂ.

    > ಹೊರ ರಾಜ್ಯ ಪ್ರವಾಸ: 5000ರೂ. ದಿಂದ 7000ರೂ.

    * ಶಾಸಕರ ವೇತನ, ಭತ್ಯೆ

    > ಸಂಬಳ: 20,000ರೂ. ದಿಂದ 40,000ರೂ.

    > ಕ್ಷೇತ್ರ ಭತ್ಯೆ: 40,000ರೂ. ರಿಂದ 60000ರೂ.

    > ಆತಿಥ್ಯ ವೇತನ (ವಾರ್ಷಿಕ): 2,00,000ರೂ. ದಿಂದ 2,50,000ರೂ.

    > ಇಂಧನ: 1000 ಲೀಟರ್ ರಿಂದ 2000 ಲೀಟರ್

    > ಪ್ರಯಾಣ ಭತ್ಯೆ: ಪ್ರತಿ ಕಿಲೋಮೀಟರ್ 25ರೂ. ದಿಂದ 30ರೂ.

    > ದಿನ ಭತ್ಯೆ(ಪ್ರಯಾಣ): ದಿನಕ್ಕೆ 2000ರೂ. ದಿಂದ 2500ರೂ.

    > ಹೊರ ರಾಜ್ಯ ಪ್ರವಾಸ: 5000ರೂ. ದಿಂದ 7000ರೂ.

    > ದೂರವಾಣಿ ವೆಚ್ಚ: ಯಥಾಸ್ಥಿತಿ ತಿಂಗಳಿಗೆ 20,000ರೂ. ಕಾಯ್ದಿರಿಸಲಾಗಿದೆ

    > ಶಾಸಕರ ಆಪ್ತಸಹಾಯಕನಿಗೆ ಮತ್ತು ರೂಮ್ ಬಾಯ್ ಸೇರಿ ತಿಂಗಳಿಗೆ 10,000ರೂ. ರಿಂದ 20,000ರೂ. ಹೆಚ್ಚಳ

  • ಸುಧಾಕರ್ ಏನು ಸಿಎಂಗಿಂತ ದೊಡ್ಡವರಾ? ಬಿಜೆಪಿ ಶಾಸಕ ಕಿಡಿ

    ಸುಧಾಕರ್ ಏನು ಸಿಎಂಗಿಂತ ದೊಡ್ಡವರಾ? ಬಿಜೆಪಿ ಶಾಸಕ ಕಿಡಿ

    ಬಳ್ಳಾರಿ: ಸುಧಾಕರ್ ಏನು ಮುಖ್ಯಮಂತ್ರಿಗಳಿಗಿಂತ ದೊಡ್ಡವರಾ ಎಂದು ಆರೋಗ್ಯ ಸಚಿವರ ವಿರುದ್ಧ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಕೆಂಡಾಮಂಡಲವಾಗಿದ್ದಾರೆ.

    ಸ್ವಪಕ್ಷದ ಸಚಿವರ ವಿರುದ್ಧವೇ ಸೋಮಶೇಖರ್ ರೆಡ್ಡಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕೆಲ ಸಚಿವರು ದೇವಲೋಕದಿಂದ ಬಂದಿದ್ದೇವೆ ಎನ್ನುವಂತೆ ವರ್ತನೆ ಮಾಡುತ್ತಿದ್ದಾರೆ. ಅವರೇನು ಮೇಲಿಂದ ಬಂದವರೇ? ಅವರು ದೇವಮಾನವರಂತೆ ವರ್ತನೆ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಕೆ.ಎಸ್.ಈಶ್ವರಪ್ಪ

    ನಿನ್ನೆ ಕಲ್ಯಾಣ ಕರ್ಣಾಟಕದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿತ್ತು. ಕಲ್ಯಾಣ ಕರ್ಣಾಟಕದ ಮೀಸಲಾತಿಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ಸೀಟ್ ಏಕಾಏಕಿ ಕಡಿತ ಮಾಡಲಾಗಿತ್ತು. ಹೀಗಾಗಿ ಆರೋಗ್ಯ ಸಚಿವ ಸುಧಾಕರ್ ಅವರಿಗೆ ನಾನು ಹಲವು ಸಾರಿ ಕರೆ ಮಾಡಿದ್ದೆ. ಅವರ ಪಿಎಗೂ ಕರೆ ಮಾಡಿದೆ. ಬಳಿಕ ಅವರಿಗೆ ಮೆಸೇಜ್ ಸಹ ಹಾಕಿದ್ದೆ. ಆದರೆ ಅವರು ಯಾವುದಕ್ಕೂ ಪ್ರತಿಕ್ರಿಯೆ ನೀಡಿಲ್ಲ. ಇದೇ ವಿಚಾರವಾಗಿ ನಾವು ಸಿಎಂ ಬೊಮ್ಮಾಯಿ ಬಳಿಯೂ ಹೋಗಿದ್ದೆ, ಅವರು ಕೇವಲ 30 ಸೆಕೆಂಡ್‍ನಲ್ಲಿ ಕೆಲಸ ಮಾಡಿಕೊಟ್ಟರು ಎಂದು ತಿಳಿಸಿದ್ದಾರೆ.

    ಸುಧಾಕರ್ ಅವರು ಸಿಎಂಗಿಂತ ದೊಡ್ಡವರಾ? ಕೆಲ ಸಚಿವರಿಗೆ ದುರಹಂಕಾರ ಹೆಚ್ಚಾಗಿದೆ. ಅದಕ್ಕೆ ಸರಿಯಾಗಿ ಪ್ರತಿಕ್ರಿಯೆ ನೀಡದ ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಸಿಎಂಗೆ ಮನವಿ ಮಾಡಿರುವೆ ಎಂದಿದ್ದಾರೆ. ಇದನ್ನೂ ಓದಿ: ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಮಂತ್ರವಾದಿ – ಹಣ, ಚಿನ್ನಾಭರಣ ಮಾಯ ಮಾಡಿದ್ದೇನೆ ಎಂದ!

    ನಾನು ನನ್ನ ವೈಯಕ್ತಿಕ ವಿಚಾರಕ್ಕೆ ಅವರಿಗೆ ಕರೆ ಮಾಡಿಲ್ಲ. ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕರೆ ಮಾಡಿದ್ದೆ. ನಮ್ಮಂಥವರ ವಿಚಾರವಾಗಿಯೇ ಈ ರೀತಿ ನಿರ್ಲಕ್ಷ್ಯ ವಹಿಸಿದರೆ,ಸಾಮಾನ್ಯ ಜನರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದ್ದಾರೆ.

  • ಕೋವಿಡ್ ನಿಯಮ ಉಲ್ಲಂಘನೆ – ಪ್ರಭು ಚವ್ಹಾಣ್ ವಿರುದ್ಧ ದೂರು

    ಕೋವಿಡ್ ನಿಯಮ ಉಲ್ಲಂಘನೆ – ಪ್ರಭು ಚವ್ಹಾಣ್ ವಿರುದ್ಧ ದೂರು

    ಬೀದರ್: ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ವಿರುದ್ಧ ದೂರು ನೀಡಲಾಗಿದೆ.

    ಸಾಮಾಜಿಕ ಕಾರ್ಯಕರ್ತ ಬಂಟಿ ದರಬಾರೆ ಔರಾದ್ ಠಾಣೆಗೆ ದೂರು ನೀಡಿದ್ದು, ಕೊರೊನಾ ಹೆಚ್ಚಳವಾಗುತ್ತಿರುವ ಸಮಯದಲ್ಲಿ ಎಕ್ಕಂಬಾ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವರು ಭಾಗಿಯಾಗಿದ್ದಾರೆ. ಈ ವೇಳೆ ಕೊವೀಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ 10 ರಂದು ಧಾರ್ಮಿಕ ಕಾರ್ಯಕ್ರಮದಲ್ಲಿ ನಡೆದಿತ್ತು. ಈ ಸಮಯದಲ್ಲಿ ಸಚಿವರು ಸೇರಿದಂತೆ ಸಾವಿರಾರು ಜನ ಒಂದೇ ಕಡೆ ಸೇರಿದ್ದರು. ಹೀಗಾಗಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಸಚಿವ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದ್ದಾರೆ.

    ಧಾರ್ಮಿಕ ಕಾರ್ಯಕ್ರಮ ಆಯೋಜಕ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಾಗಿದ್ದು, ದೂರು ನೀಡಿದರು ಇನ್ನು ಸಚಿವರ ವಿರುದ್ಧ ಎಫ್‍ಐಆರ್ ದಾಖಲಾಗಿಲ್ಲ. ಹೀಗಾಗಿ ಸರ್ಕಾರದ ಭಾಗವಾಗಿರುವ ಸಚಿವರು ಕೋವಿಡ್ ನಿಯಮಗಳ ಉಲ್ಲಂಘನೆ ಮಾಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

  • ವಿವಾಹ ನೋಂದಣಿಯಂತೆ ಮತಾಂತರ ನೋಂದಣಿ ಮಾಡೋ ಚಿಂತನೆ ನಡೆದಿದೆ: ಮಾಧುಸ್ವಾಮಿ

    ವಿವಾಹ ನೋಂದಣಿಯಂತೆ ಮತಾಂತರ ನೋಂದಣಿ ಮಾಡೋ ಚಿಂತನೆ ನಡೆದಿದೆ: ಮಾಧುಸ್ವಾಮಿ

    ತುಮಕೂರು: ವಿವಾಹ ನೋಂದಣಿ ಮಾಡುವಂತೆ ಮತಾಂತರವನ್ನು ಕೂಡ ನೋಂದಣಿ ಮಾಡುವಂತಹ ಪದ್ಧತಿಯನ್ನು ಮತಾಂತರ ನಿಷೇಧ ಕಾಯ್ದೆಯಲ್ಲಿ ತರುವ ಚಿಂತನೆ ನಡೆದಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

    ಚಿಕ್ಕನಾಯಕನಹಳ್ಳಿ ತಾಲೂಕಿನ ಜೆ.ಸಿ.ಪುರದಲ್ಲಿ ಮಾತನಾಡಿದ ಅವರು, ಮದುವೆ ನೋಂದಣಿ ಪ್ರಕ್ರಿಯೆಯಲ್ಲಿ ಹೇಗೆ ನೋಟಿಸ್ ಬೋರ್ಡಿಗೆ ವಿವಾಹಿತರ ವಿವರ ಹಾಕುತ್ತೇವೆಯೋ ಹಾಗೆಯೇ ಮತಾಂತರಗೊಂಡವರ ವಿವರವನ್ನೂ ನೋಟಿಸ್ ಬೋರ್ಡ್‍ಗೆ ಹಾಕಿ ಆಕ್ಷೇಪಣೆಗೆ ಸಮಯವಕಾಶ ಕೊಡಲಾಗುತ್ತದೆ. ಯಾವುದೇ ಆಕ್ಷೇಪಣೆ ಇಲ್ಲದಿದ್ದರೆ ಅಂಥವರ ಅರ್ಜಿಯನ್ನು ಪುರಸ್ಕರಿಸಲಾಗುತ್ತದೆ ಎಂದು ಹೇಳಿದರು.

    ಯಾರಿಗೂ ನೋವು ಆಗದ, ಅಡಚಣೆ ಆಗದ ರೀತಿಯಲ್ಲಿ ಕಾಯ್ದೆ ಇರಬೇಕು ಎಂದು ಯೋಚಿಸಿದ್ದೇನೆ. ಆ ನಿಟ್ಟಿನಲ್ಲಿ ಪರಾಮರ್ಶೆ ನಡೆದಿದೆ. ಬಲವಂತ ಹಾಗೂ ಆಮಿಷ ಒಡ್ಡಿ ಮಾಡುವ ಮತಾಂತರ ಈಗಾಗಲೇ ನಿಷೇಧ ಇದ್ದು, ಮತಾಂತರ ಮಾಡಿದವರಿಗೆ ಯಾವ ರೀತಿಯ ಶಿಕ್ಷೆ ಆಗಬೇಕು ಅನ್ನೋದು ಚರ್ಚೆ ನಡೆಯಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ವೇದಿಕೆ ಮೇಲೆ ಕಣ್ಣೀರಿಟ್ಟ ಮಾಧುಸ್ವಾಮಿ

    ಸ್ವಯಂಪ್ರೇರಿತ ಮತಾಂತರಕ್ಕೂ ರೂಪುರೇಷೆ ಸಿದ್ಧಗೊಳ್ಳುತಿದ್ದು, ಮತಾಂತರ ಆಗುವವನೂ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿಯಾಗಲಿದೆ. ಬಲವಂತದ ಮತಾಂತರ ಅಲ್ಲ ಎಂದು ತಿಳಿದ ಮೇಲೆ ಜಿಲ್ಲಾಧಿಕಾರಿಗಳು ಮತಾಂತರದ ಅರ್ಜಿ ಪುರಸ್ಕರಿಸಬಹುದಾಗಿದೆ. ಜೊತೆಗೆ ಒಮ್ಮೆ ಮತಾಂತರಗೊಂಡ ವ್ಯಕ್ತಿ ಮೂಲ ಜಾತಿ, ಧರ್ಮವನ್ನು ಕಳೆದುಕೊಳ್ಳುತ್ತಾನೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ವಿರುದ್ಧ ಭಾರತ ಯುದ್ಧವನ್ನೂ ಗೆಲ್ಲಲಿದೆ: ರಾಜನಾಥ್ ಸಿಂಗ್

    ಪರಿಶಿಷ್ಠ ಜಾತಿ ವ್ಯಕ್ತಿ ಕ್ರಿಶ್ಚಿಯನ್ ಗೆ ಮತಾಂತರಗೊಂಡರೆ, ಆತ ಅಲ್ಪಸಂಖ್ಯಾತ ಎಂದಾಗುತ್ತದೆ. ಆತನ ಮೂಲ ಜಾತಿ ಪ್ರಮಾಣ ಪತ್ರ ಬದಲಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: 24 ಗಂಟೆಯಲ್ಲಿ ಬರೋಬ್ಬರಿ 10 ಡೋಸ್ ಕೋವಿಡ್ ಲಸಿಕೆ ಪಡೆದ ಭೂಪ!