Tag: minister

  • ಸಚಿವ ಎಚ್.ಡಿ.ರೇವಣ್ಣ ಪುತ್ರರಿಗೆ ಹಾಸನ ನಗರಸಭೆಯಿಂದ ನೋಟಿಸ್

    ಸಚಿವ ಎಚ್.ಡಿ.ರೇವಣ್ಣ ಪುತ್ರರಿಗೆ ಹಾಸನ ನಗರಸಭೆಯಿಂದ ನೋಟಿಸ್

    ಹಾಸನ: ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರರಿಗೆ ಹಾಸನ ನಗರಸಭೆ ನೋಟಿಸ್ ಜಾರಿ ಮಾಡಿದೆ.

    ಸಚಿವರ ಪುತ್ರರಾದ ಪ್ರಜ್ವಲ್ ಮತ್ತು ಸೂರಜ್ ವಿರುದ್ಧ ನಗರಸಭೆ ನೋಟಿಸ್ ನೀಡಿದೆ. 1ನೇ ವಾರ್ಡ್ ವ್ಯಾಪ್ತಿಯ ಬಿಎಂ ರಸ್ತೆಗೆ ಹೊಂದಿಕೊಂಡಂತೆ ಇರುವ ಆಸ್ತಿಯಲ್ಲಿ, 6 ಮೀಟರ್ ಕಟ್ಟಡ ರೇಖೆಯನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನೋಟಿಸ್ ತಲುಪಿದ 7 ದಿನಗಳ ಒಳಗಾಗಿ ಅತಿಕ್ರಮಿಸಿದ ಜಾಗವನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವೇ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಅಧಿಕೃತ ದಾಖಲೆಗಳನ್ನು ನಗರಸಭೆಗೆ ಹಾಜರು ಪಡಿಸಬೇಕು ಎಂದು ನೋಟಿಸ್‍ನಲ್ಲಿ ಉಲ್ಲೇಖಿಸಲಾಗಿದೆ.

    ಒಂದು ವೇಳೆ ನೋಟಿಸ್‍ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇದ್ದರೆ ಅತಿಕ್ರಮ ಜಾಗವನ್ನು ತೆರುವುಗೊಳಿಸಲಾಗುತ್ತದೆ. ಅದಕ್ಕೆ ತಗುಲುವ ವೆಚ್ಚವನ್ನು ಕಟ್ಟಡ ಮಾಲೀಕರಾದ ನಿಮ್ಮಿಂದಲೇ ವಸೂಲಿ ಮಾಡಲಾಗುವುದು ಎಂದು ನಗರಸಭೆ ಆಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಸವರಾಜ ಹೊರಟ್ಟಿಗೆ ಸಿಗುತ್ತಾ ಮಂತ್ರಿ ಭಾಗ್ಯ..?

    ಬಸವರಾಜ ಹೊರಟ್ಟಿಗೆ ಸಿಗುತ್ತಾ ಮಂತ್ರಿ ಭಾಗ್ಯ..?

    ಬೆಂಗಳೂರು: ವಿಧಾನ ಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂದು ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ಮೂಲಗಳು ತಿಳಿಸಿವೆ.

    ಬಿಎಸ್‍ಪಿಯ ಎನ್.ಮಹೇಶ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಗೆ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಆಯ್ಕೆ ಸಾಧ್ಯತೆ ಇದೆ. ತೆರವಾದ ಖಾತೆ ಈಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಳಿಯೇ ಇದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಪರೀಕ್ಷೆಗಳು ಹತ್ತಿರವಾಗುತ್ತಿದ್ದು, ಬಹಳ ದಿನಗಳ ಕಾಲ ಖಾತೆ ಮುಖ್ಯಮಂತ್ರಿಗಳ ಬಳಿ ಇರಿಸಲು ಅಸಾಧ್ಯ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಮೈತ್ರಿ ಸರ್ಕಾರದಲ್ಲಿ ಭಾರೀ ಲಾಬಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

    ಈ ಹಿಂದೆ ಬಸವರಾಜ ಹೊಟ್ಟಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅಷ್ಟೇ ಅಲ್ಲದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಮನವಿಗೆ ಬಸವರಾಜ ಹೊರಟ್ಟಿ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎನ್ನುವ ನಂಬಿಕೆಯಿಂದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

    ಸಚಿವ ಸಂಪುಟ ವಿಸ್ತರಣೆಗೂ ಮುನ್ನವೇ ಬಸವರಾಜ ಹೊರಟ್ಟಿ ಅವರಿಗೆ ಮಂತ್ರಿಗಿರಿ ಸಿಗಲಿದೆ. ಈ ಹಿಂದೆಯೇ ಅವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದರು. ಈಗ ಆ ಭಾಗ್ಯ ಕೂಡಿಬಂದಿದೆ ಎನ್ನಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾರ್ಯಕರ್ತರು ಟೋಪಿ ಹಾಕ್ತಾರೆ ಅಂತ ನಾನು ಹೇಳಿಲ್ಲ: ಎಚ್.ಡಿ.ರೇವಣ್ಣ

    ಕಾರ್ಯಕರ್ತರು ಟೋಪಿ ಹಾಕ್ತಾರೆ ಅಂತ ನಾನು ಹೇಳಿಲ್ಲ: ಎಚ್.ಡಿ.ರೇವಣ್ಣ

    ಬಳ್ಳಾರಿ: ಕಾರ್ಯಕರ್ತರು ಟೋಪಿ ಹಾಕುತ್ತಾರೆ ಎನ್ನುವ ಅರ್ಥದಲ್ಲಿ ನಾನು ಹೇಳಿಲ್ಲವೆಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

    ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ಅವರು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ ಪಕ್ಷದ ಕಾರ್ಯಕರ್ತರನ್ನು ನಿಲ್ಲಿಸಿ, ಅವರು ಯಾವ ರೀತಿ ಮಾಡಿದ್ದಾರೆಂಬುದು ಅಲ್ಲಿನ ಜನರಿಗೆ ಗೊತ್ತು. ನಾನು ಕಾರ್ಯಕರ್ತರು ಟೋಪಿ ಹಾಕುತ್ತಾರೆ ಎಂದು ಹೇಳಿಲ್ಲ. ರಾಮನಗರ ಜನ ಕುಮಾರಸ್ವಾಮಿಯವರ ಕುಟುಂಬದವರೇ ಇಲ್ಲಿನ ಮುಂದಿನ ಅಭ್ಯರ್ಥಿಯನ್ನಾಗಿ ಮಾಡಿ ಎಂದು ಮಾತು ತೆಗೆದುಕೊಂಡಿದ್ದರು. ಹೀಗಾಗಿ ಅನಿವಾರ್ಯವಾಗಿ ಅನಿತಾ ಕುಮಾರಸ್ವಾಮಿಯವರನ್ನು ಅಲ್ಲಿಂದ ಅಭ್ಯರ್ಥಿಯನ್ನಾಗಿ ಆಯ್ಕೆಮಾಡಲಾಯಿತು. ನನ್ನ ಹೇಳಿಕೆಯಿಂದ ಅನಿತಾರವರ ಗೆಲುವಿಗೆ ಯಾವುದೇ ತೊಂದರೆ ಆಗಲ್ಲ. ಅವರು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಕ್ಕೆ ಜೆಡಿಎಸ್ ಬರುತ್ತಿಲ್ಲವೆಂದು ಪ್ರಶ್ನಿಸಿದಾಗ, ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದಲ್ಲಿಯೇ ಚುನಾವಣೆಯನ್ನು ನಾವು ಎದುರಿಸುತ್ತಿದ್ದೇನೆ. ನಾನು ಸಹ ಖುದ್ದು ಎಲ್ಲಾ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾನೆ. ಇಂದೂ ಸಹ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಪ್ರಚಾರ ಮಾಡುತ್ತಿದ್ದೇನೆ. ಭಾನುವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಹ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಅಲ್ಲದೇ ಎಲ್ಲಾ ಸ್ಥಳೀಯ ಮಟ್ಟದ ಮುಖಂಡರು ಸಹ ಚುನಾವಣೆಗೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರುತ್ತಿಲ್ಲವೆಂಬುದು ಸುಳ್ಳು ಎಂದು ತಿಳಿಸಿದರು. ಇದನ್ನೂ ಓದಿ: ಕಾರ್ಯಕರ್ತರಿಗೆ ಟಿಕೆಟ್ ನೀಡಿ ಗೆಲ್ಲಿಸಿದ್ರೆ, ಟೋಪಿ ಹಾಕಿ ಹೋಗ್ತಾರೆ: ಎಚ್.ಡಿ.ರೇವಣ್ಣ

    ಪ್ರಜ್ವಲ್ ರಾಜಕೀಯದ ಕುರಿತು ಮಾತನಾಡಿದ ಅವರು, ಪ್ರಜ್ವಲ್ ರಾಜಕೀಯಕ್ಕೆ ಬರಬೇಕು ಅಂದುಕೊಂಡರೇ, ಅದನ್ನು ಯಾರು ತಡಿಯೋಕೆ ಆಗಲ್ಲ. ನಾವು ಯಾವತ್ತೂ ಸಹ ಹಿಂಬಾಗಿಲಿನಿಂದ ರಾಜಕೀಯಕ್ಕೆ ಬಂದವರಲ್ಲ. ಈ ಹಿಂದೆ ಹಾಸನದ ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಹೆಂಡತಿ ಹಾಗೂ ಮಗ ಕ್ಷೇತ್ರಕ್ಕೆ ತ್ಯಾಗ ಮಾಡಿ, ಅಲ್ಲಿ ವೀರಶೈವ ಸಮುದಾಯದವರನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ಪ್ರಜ್ವಲ್ ರಾಜಕೀಯಕ್ಕೆ ಬರುವುದನ್ನು ದೇವೇಗೌಡರು ಹಾಗೂ ಕುಮಾರಸ್ವಾಮಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಒಂದು ವೇಳೆ ನಿಖಿಲ್ ಹಾಗೂ ಪ್ರಜ್ವಲ್‍ಗೆ ಯಾವುದೇ ಟಿಕೆಟ್ ಸಿಗದಿದ್ದರೇ, ಅವರು ಪಕ್ಷದ ಕಾರ್ಯಕರ್ತರಾಗಿಯೇ ಕೆಲಸ ಮಾಡುತ್ತಾರೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಾಸನಾಂಬೆ ವಿಶೇಷ ದರ್ಶನಕ್ಕೆ ಸಾವಿರ ರೂ.- ಅಂದು ಗರಂ ಆಗಿದ್ದ ರೇವಣ್ಣ ಇಂದು ಫುಲ್ ಸೈಲೆಂಟ್!

    ಹಾಸನಾಂಬೆ ವಿಶೇಷ ದರ್ಶನಕ್ಕೆ ಸಾವಿರ ರೂ.- ಅಂದು ಗರಂ ಆಗಿದ್ದ ರೇವಣ್ಣ ಇಂದು ಫುಲ್ ಸೈಲೆಂಟ್!

    ಹಾಸನ: ಹಾಲಿ ಸಚಿವ ರೇವಣ್ಣ ಅಧಿಕಾರದಲ್ಲಿ ಇದ್ದಾಗ ಒಂದು ರೀತಿ, ಅಧಿಕಾರದಲ್ಲಿ ಇಲ್ಲದಿದ್ದಾಗ ಎಂದು ರೀತಿ ಎಂಬಂತೆ ವರ್ತಿಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಹಾಸನಾಂಬ ದೇವಿ ದರ್ಶನ ಪಡೆಯುವ ಟಿಕೆಟ್ ದರದ ವಿಚಾರದಲ್ಲಿ ಎ.ಮಂಜು ಸಚಿವರಾಗಿದ್ದಾಗ ವಿರೋಧಿಸಿದ್ದ ರೇವಣ್ಣ, ಈಗ ಯಾವುದೇ ಚಕಾರ ಎತ್ತದೆ ಸುಮ್ಮನಿದ್ದಾರೆ. ರೇವಣ್ಣವರ ಈ ವರ್ತನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.


    ಹೌದು. ಹಾಸನಾಂಬೆ ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕೊಡುವ ಅಧಿದೇವತೆಯ ದೇವಸ್ಥಾನದ ಬಾಗಿಲು ತೆರೆಯಲು ದಿನಗಣನೆ ಆರಂಭವಾಗಿದೆ. ತಾಯಿಯ ದರ್ಶನ ಪಡೆಯಲು ಪ್ರತಿವರ್ಷವೂ ರಾಜ್ಯದಿಂದ ಮಾತ್ರವಲ್ಲೇ ಹೊರರಾಜ್ಯಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಬರ್ತಾರೆ. ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಇಷ್ಟಾರ್ಥ ಸಿದ್ಧಿಗಾಗಿ ಅಮ್ಮನ ದರ್ಶನ ಪಡೆಯುತ್ತಾರೆ. ಕಳೆದ ವರ್ಷ ಹಾಸನಾಂಬೆಯ ನೇರ ದರ್ಶನಕ್ಕೆ 1,000 ರೂಪಾಯಿ ಟಿಕೆಟ್ ದರ ನಿಗದಿಪಡಿಸಲಾಗಿತ್ತು. ಆಗ ಶಾಸಕರಾಗಿದ್ದ ಹೆಚ್.ಡಿ. ರೇವಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

    ಈ ಬಾರಿಯೂ ಹಾಸನಾಂಬೆ ವಿಶೇಷ ದರ್ಶನಕ್ಕೆ ಸಾವಿರ ರೂಪಾಯಿ ಫಿಕ್ಸ್ ಆಗಿದ್ದು, ರೇವಣ್ಣ ಫುಲ್ ಸೈಲೆಂಟ್ ಆಗಿದ್ದಾರೆ. ಈ ಬಾರಿ ಜನಸಾಮಾನ್ಯರಿಗೆ ಹೊರೆ ಆಗಲ್ವಾ? ಅಧಿಕಾರದಲ್ಲಿ ಇದ್ದಾಗ ಒಂದು ರೀತಿ, ಅಧಿಕಾರದಲ್ಲಿ ಇಲ್ಲದಿದ್ದಾಗ ಒಂದು ವರ್ತಿಸೋದು ಎಷ್ಟು ಸರಿ ಅಂತ ಜನ ಪ್ರಶ್ನಿಸುತ್ತಿದ್ದಾರೆ. ಜೊತೆಗೆ ಸುಗಮವಾಗಿ ದೇವಿ ದರ್ಶನ ಪಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

    ಇನ್ನೈದು ದಿನದಲ್ಲಿ ದೇಗುಲದ ಬಾಗಿಲು ತೆರೆಯಲಿದ್ದು, ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭಾ ಸದಸ್ಯರಿಗೂ ಆಹ್ವಾನ ನೀಡಲಾಗಿದೆ. ಹೀಗಾಗಿ ಕುಟುಂಬಸ್ಥರೆಲ್ಲಾ ದೇವಿ ದರ್ಶನಕ್ಕೆ ಆಗಮಿಸಿದ್ರೆ ಸಾಮಾನ್ಯ ಭಕ್ತರಿಗೆ ತೊಂದರೆಯಾಗುತ್ತೆ. ಹೀಗಾಗಿ ನಿಗದಿ ಮಾಡಿದ ಸಮಯದಲ್ಲಿ ಮಾತ್ರವೇ ವಿಐಪಿಗಳಿಗೆ ಅವಕಾಶ ನೀಡಬೇಕು ಅನ್ನೋದು ಭಕ್ತ ಸಮೂಹದ ಒತ್ತಾಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಉಪ ಚುನಾವಣೆ ಎಫೆಕ್ಟ್, ಖಾಲಿ ಹೊಡೆಯುತ್ತಿರುವ ಶಕ್ತಿ ಸೌಧ

    ಉಪ ಚುನಾವಣೆ ಎಫೆಕ್ಟ್, ಖಾಲಿ ಹೊಡೆಯುತ್ತಿರುವ ಶಕ್ತಿ ಸೌಧ

    ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾದ ನಂತರ ಶಕ್ತಿಸೌಧವಾದ ವಿಧಾನಸೌಧದಲ್ಲಿ ಸಚಿವರು ನಾಪತ್ತೆಯಾಗಿದ್ದು, ಅಹವಾಲುಗಳನ್ನು ಸಲ್ಲಿಸಲು ಬರುತ್ತಿರುವ ಸಾರ್ವಜನಿಕರು ಸಚಿವರ ಖಾಲಿ ಕೊಠಡಿಗಳನ್ನು ನೋಡಿ ಪರದಾಟ ನಡೆಸುತ್ತಿದ್ದಾರೆ.

    ಹೌದು, ರಾಜ್ಯದಲ್ಲಿ ವಿಧಾನಸಭಾ ಹಾಗೂ ಲೋಕಸಭಾ ಉಪ ಚುನಾವಣೆಗಳು ಘೋಷಣೆಯಾಗಿದ್ದು, ಪರಿಣಾಮವಾಗಿ ರಾಜ್ಯದ ಶಕ್ತಿಸೌಧದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಯಾವೊಬ್ಬ ಸಚಿವರು ಸಹ ಸಾರ್ವಜನಿಕರ ಕೈಗೆ ಸಿಗುತ್ತಿಲ್ಲ.

     

    ಸಮ್ಮಿಶ್ರ ಸರ್ಕಾರ ಸಚಿವರ ಉಪ ಚುನಾವಣೆಯ ನೆಪದಲ್ಲಿ ರಾಜ್ಯದ ಜನರನ್ನೇ ಮರೆತಿದ್ದಾರೆ. ರಾಜ್ಯದ ಶಕ್ತಿಸೌಧ ಸಂಪೂರ್ಣ ಖಾಲಿಯಾಗಿದ್ದು, ಸಚಿವರಿಲ್ಲದೇ ಕೊಠಡಿಗಳು ಬಣಗುಟ್ಟುತ್ತಿವೆ. ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲೂ ಸಹ ಯಾವೊಬ್ಬ ಸಚಿವರ ಜನರ ಸಮಸ್ಯೆಗಳನ್ನು ಆಲಿಸಲು ಸಿಗುತ್ತಿಲ್ಲ. ಚುನಾವಣಾ ನೆಪದಲ್ಲಿ ಶಕ್ತಿಸೌಧದಲ್ಲಿ ಯಾವುದೇ ಕೆಲಸಗಳು ಸಹ ಆಗುತ್ತಿಲ್ಲ. ಆದರೆ ಚುನಾವಣಾ ನೆಪ ಹೇಳುತ್ತಿರುವ ಸಚಿವರು ಯಾವುದೇ ಪ್ರಚಾರಕ್ಕೂ ಹೋಗುತ್ತಿಲ್ಲ.

    ಸಚಿವರು ಈಗ ಬರ್ತಾರೆ, ಆಗ ಬರ್ತಾರೆ ಅಂತ ಸಾರ್ವಜನಿಕರು ಕಾದು ಕಾದು, ಸಪ್ಪೆ ಮೋರೆಹಾಕಿಕೊಂಡು ಮರಳುತ್ತಿದ್ದಾರೆ. ಗುರುವಾರ ವಿಧಾನಸೌಧಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಅವರನ್ನು ಬಿಟ್ಟರೇ, ಯಾವೊಬ್ಬ ಸಚಿವರು ವಿಧಾನಸೌಧದಲ್ಲಿ ಜನರಿಗೆ ಸಿಗುತ್ತಿಲ್ಲ. ಉಪ ಚುನಾವಣೆಯ ನೆಪದಿಂದಾಗಿ ಶಕ್ತಿ ಸೌಧದ ಆಡಳಿತ ಯಂತ್ರ ಕುಸಿಯುತ್ತಿದೆ. ಸಚಿವರ ಕೊಠಡಿಗಳು ಕ್ಲೋಸ್ ಆಗಿದ್ದು, ಅವರ ಸಿಬ್ಬಂದಿ ಸಹ ಯಾವೊಬ್ಬ ಸಾರ್ವಜನಿಕರ ಕಣ್ಣಿಗೂ ಸಿಗುತ್ತಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಳ್ಳಾರಿಯಲ್ಲಿ ಒಂಟಿಯಾದ ಸಚಿವ ಡಿಕೆಶಿ – ಇತ್ತ ರಾಮುಲುಗೆ ಬಿಜೆಪಿ ಬೆಟಾಲಿಯನ್ ಸಪೋರ್ಟ್

    ಬಳ್ಳಾರಿಯಲ್ಲಿ ಒಂಟಿಯಾದ ಸಚಿವ ಡಿಕೆಶಿ – ಇತ್ತ ರಾಮುಲುಗೆ ಬಿಜೆಪಿ ಬೆಟಾಲಿಯನ್ ಸಪೋರ್ಟ್

    ಬಳ್ಳಾರಿ: ತುಮಕೂರಿನ ನೊಣವಿನ ಕೆರೆ ಕಾಡಸಿದ್ದೇಶ್ವರನ ಪ್ರಸಾದ ಹಿಡ್ಕೊಂಡು ಬಳ್ಳಾರಿ ರಣರಂಗಕ್ಕೆ ಎಂಟ್ರಿ ಕೊಟ್ಟಿದ್ದ ಸಚಿವ ಡಿಕೆ ಶಿವಕುಮಾರ್ ಏಕಾಂಗಿಯಾಗಿದ್ದಾರೆ. ಗಣಿನಾಡು ಗೆಲುವಿಗೆ ಬಿಜೆಪಿ, ಕಾಂಗ್ರೆಸ್ ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿದ್ದರೂ ಸ್ಥಳೀಯ ಕಾಂಗ್ರೆಸ್ ನಾಯಕರು ಪ್ರಚಾರಕ್ಕೆ ಬರ್ತಿಲ್ಲ. ಕಳೆದ ವಿಧಾನಸಭೆ ಚುನಾವಣೆಯ ವೇಳೆ ಇಬ್ಬರು ಬಿಜೆಪಿ ಹಾಗೂ ಓರ್ವ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‍ಗೆ ಕರೆತಂದ ಸಂತೋಷ ಲಾಡ್ ರನ್ನ ಸಚಿವ ಡಿಕೆ ಶಿವಕುಮಾರ್ ಮರೆತಿದ್ದೇ ಈ ಬೆಳವಣಿಗೆಗೆ ಕಾರಣವಾಗಿದೆ.

    ಮಾಜಿ ಸಚಿವ ಸಂತೋಷ್ ಲಾಡ್ ಬಳ್ಳಾರಿ ಕಣದಿಂದಲೇ ದೂರ ಉಳಿದಿರೋದು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಸಂಡೂರು, ಹಗರಿಬೊಮ್ಮನಹಳ್ಳಿ, ಹೊಸಪೇಟೆ, ಕೂಡ್ಲಿಗಿ, ಬಳ್ಳಾರಿ ನಗರ ಪ್ರದೇಶದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿರುವ ಸಂತೋಷ್ ಲಾಡ್‍ರನ್ನ ಚುನಾವಣೆಯ ವೇಳೆ ಕಡೆಗಣಿಸಿರುವುದು ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದನ್ನ ತೋರಿಸ್ತಿದೆ.


    ರಾಮುಲು ಹಿಂದಿದೆ ಬೆಟಾಲಿಯನ್:
    ಇತ್ತ ಸಹೋದರಿ ಜೆ ಶಾಂತಾ ಪರವಾಗಿ ಉಗ್ರಪ್ಪ ವಿರುದ್ಧ ಸಮರ ಸಾರಿರುವ ಶ್ರೀರಾಮುಲುಗೆ ಬಿಜೆಪಿ ನಾಯಕರ ದಂಡೇ ಸಾಥ್ ಕೊಡ್ತಿದೆ. ಹತ್ತಾರು ಬಿಜೆಪಿ ಶಾಸಕರು, ಹಲವು ಮಾಜಿ ಸಚಿವರಿಗೆ ಬಳ್ಳಾರಿ ಲೋಕಸಭಾ ಚುನಾವಣೆಯ ಜವಾಬ್ದಾರಿ ವಹಿಸಲಾಗಿದೆ. ಅಲ್ಲದೇ ಬಳ್ಳಾರಿಯಲ್ಲಿ ಬಿಜೆಪಿ ರಾಜಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರಚಾರ ಕೈಗೊಳ್ಳಲು ವೇದಿಕೆ ಸಿದ್ಧವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದಿನೇಶ್ ಗುಂಡೂರಾವ್‍ರನ್ನು ಕರೆಸಿ ರಮೇಶ್ ಜಾರಕಿಹೊಳಿಗೆ ಟಕ್ಕರ್ ಕೊಟ್ಟರಾ ಡಿಕೆಶಿ!

    ದಿನೇಶ್ ಗುಂಡೂರಾವ್‍ರನ್ನು ಕರೆಸಿ ರಮೇಶ್ ಜಾರಕಿಹೊಳಿಗೆ ಟಕ್ಕರ್ ಕೊಟ್ಟರಾ ಡಿಕೆಶಿ!

    ಬಳ್ಳಾರಿ: ಕೂಡ್ಲಿಗಿ ಬಹಿರಂಗ ಸಭೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಕರೆಸುವ ಮೂಲಕ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಟಕ್ಕರ್ ಕೊಟ್ಟರಾ ಎಂಬ ಪ್ರಶ್ನೆಯೊಂದು ಉಪ ಕದನದಲ್ಲಿ ಸುಳಿದಾಡುತ್ತಿದೆ.

    ಉಪಚುನಾವಣೆ ಪ್ರಚಾರಕ್ಕಾಗಿ ಬಳ್ಳಾರಿಗೆ ಡಿ.ಕೆ.ಶಿವಕುಮಾರ್ ಮಂಗಳವಾರ ಆಗಮಿಸುತ್ತಿದ್ದಂತೆ ಸಚಿವ ರಮೇಶ್ ಜಾರಕಿಹೊಳಿ ಕೂಡ್ಲಿಗೆ ಬಹಿರಂಗ ಸಭೆಗೆ ಗೈರು ಆಗಲು ಮುಂದಾಗಿದ್ದರು. ಈ ಬೆಳವಣಿಗೆ ಅರಿತು ಡಿ.ಕೆ.ಶಿವಕುಮಾರ್ ಅವರು ದಿನೇಶ್ ಗುಂಡೂರಾವ್ ಅವರನ್ನೇ ಕ್ಷೇತ್ರಕ್ಕೆ ಕರೆಸಿಕೊಂಡಿದ್ದಾರೆ.

    ಇದಕ್ಕೂ ಮುನ್ನ ರಮೇಶ್ ಜಾರಕಿಹೊಳಿ ಅವರ ದಿಢೀರ್ ಗೈರಿನ ಕುರಿತು ಮಾಧ್ಯಮಗಳು ಪ್ರಶ್ನಿದ್ದಕ್ಕೆ, ಉಸ್ತುವಾರಿಯನ್ನು ಹಂಚಿಕೆ ಮಾಡಿದ್ದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್. ನೀವು ಅವರನ್ನೇ ಪ್ರಶ್ನೇ ಮಾಡಿ ಎಂದು ಗರಂ ಆಗಿ ಪ್ರತಿಕ್ರಿಯೆ ನೀಡಿದ್ದರು. ಸಚಿವರ ಕಿತ್ತಾಟವನ್ನು ಹತ್ತಿಕ್ಕಲು ದಿನೇಶ್ ಗುಂಡೂರಾವ್ ಕ್ಷೇತ್ರಕ್ಕೆ ಆಗಮಿಸಿದ್ದಾರಾ ಎನ್ನುವ ಚರ್ಚೆ ಪಕ್ಷದ ವಲಯದಲ್ಲಿ ಹರಿದಾಡುತ್ತಿದೆ.

    ಕೂಡ್ಲಗಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದ ಉಸ್ತುವಾರಿಯನ್ನು ರಮೇಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಮುಖಂಡರು ವಹಿಸಿದ್ದಾರೆ. ಇದರಿಂದಾಗಿ ಕ್ಷೇತ್ರದಲ್ಲಿ ಪ್ರಚಾರದ ಸಿದ್ಧತೆ ಮಾಡಿಕೊಂಡಿದ್ದ ಸಚಿವರು ಕಳೆದ ಎರಡು ದಿನಗಳಿಂದ ಕಾಂಗ್ರೆಸ್ ನಾಯಕರ ಸಭೆ ನಡೆಸಿದ್ದರು. ಕೂಡ್ಲಗಿ ಸಂತೆ ಮೈದಾನದಲ್ಲಿ ಇಂದು ಬಹಿರಂಗೆ ಸಭೆ ಆಯೋಜಿಸಲಾಗಿತ್ತು. ಆದರೆ ಕ್ಷೇತ್ರಕ್ಕೆ ಡಿ.ಕೆ.ಶಿವಕುಮಾರ್ ಆಗಮಿಸಿದರು ಅಂತಾ ರಮೇಶ್ ಜಾರಕಿಹೊಳಿ ಅವರು ಸಭೆಗೆ ಗೈರು ಆಗಿದ್ದಾರಂತೆ ಎನ್ನಲಾಗುತ್ತಿದೆ.

    ಬಹಿರಂಗ ಸಭೆಗೆ ಹಿನ್ನಡೆಯಾಗದಂತೆ ನೋಡಿಕೊಳ್ಳಲು ಮುಂದಾದ ಡಿ.ಕೆ.ಶಿವಕುಮಾರ್ ಅವರು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನೇ ಕಾರ್ಯಕ್ರಮಕ್ಕೆ ಆಹ್ವಾನಿಸಿ ರಮೇಶ್ ಜಾರಕಿಹೊಳಿ ಅವರಿಗೆ ಟಕ್ಕರ್ ನೀಡಿದ್ದಾರಂತೆ. ಇತ್ತ ಕೂಡ್ಲಗಿ ಮುಖಂಡರಿಗೆ ಇಂದು ಬೆಳಗ್ಗೆ ಕರೆ ಮಾಡಿದ ಸಚಿವರು, ಎರಡು ದಿನ ಬಿಟ್ಟು ಕ್ಷೇತ್ರಕ್ಕೆ ಬರುವುದಾಗಿ ತಿಳಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರು ಇಂದಿನಿಂದ ಕೂಡ್ಲಗಿ ಕ್ಷೇತ್ರದಲ್ಲಿ ಏಕಾಂಗಿಯಾಗಿ ಪ್ರಚಾರ ಆರಂಭಿಸಿದ್ದಾರೆ. ಈ ಮೂಲಕ ರಮೇಶ್ ಜಾರಕಿಹೊಳಿ ಉಸ್ತುವಾರಿ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಇಂದು ಬಹಿರಂಗ ಸಭೆ ನಡೆಯುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ಯಾಂಡಲ್‍ವುಡ್ #MeToo ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಮಾಧ್ಯಮಗಳ ವಿರುದ್ಧ ಜಯಮಾಲಾ ಗರಂ

    ಸ್ಯಾಂಡಲ್‍ವುಡ್ #MeToo ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಮಾಧ್ಯಮಗಳ ವಿರುದ್ಧ ಜಯಮಾಲಾ ಗರಂ

    ಶಿವಮೊಗ್ಗ: ಸ್ಯಾಂಡಲ್‍ವುಡ್‍ನಲ್ಲಿ ಮೀಟೂ ಅಭಿಯಾನ ಭಾರೀ ಸದ್ದು ಮಾಡುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡುವ ಬದಲು ಹಿರಿಯ ನಟಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲ ಅವರು ಮಾಧ್ಯಮಗಳ ವಿರುದ್ಧವೇ ಸಿಡಿಮಿಡಿಗೊಂಡಿದ್ದಾರೆ.

    ಶಿವಮೊಗ್ಗ ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗಳು ಪ್ರಶ್ನಿಸಿದಾಗ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು. ಇದಕ್ಕೆ ಮಾಧ್ಯಮಗಳು ನೀವು ಸ್ಯಾಂಡಲ್‍ವುಡ್ ನಟಿ ಅಷ್ಟೇ ಅಲ್ಲದೇ ಸಚಿವರು ಆಗಿದ್ದೀರಿ. ಹೀಗಾಗಿ ಉತ್ತರ ನೀಡಬೇಕು ಎಂದು ಮರು ಪ್ರಶ್ನೆ ಕೇಳಿದ್ದಕ್ಕೆ, ಏನ್ರೀ ಅದು ಅಂತಾ ಗದರಿದರು. ನಂತರ ನನಗೆ ಗೊತ್ತಿಲ್ಲದ ವಿಷಯದ ಬಗ್ಗೆ ನಾನು ಮಾತನಾಡುವುದಿಲ್ಲ. ಗೊತ್ತಿಲ್ಲದ ವಿಷಯದ ಬಗ್ಗೆ ಮಾತನಾಡಬಾರದು ಎಂದು ಹೇಳಿದರು.

    ನಾನು ಉಪಚುನಾವಣೆ, ಇಲಾಖೆ, ಅಂಗನವಾಡಿ ಮಕ್ಕಳ ಕಾರ್ಯಗಳ ಬಗ್ಗೆಯೇ ಯೋಚಿಸುತ್ತಿದ್ದೇನೆ. ಸಿನಿಮಾ ರಂಗದಲ್ಲಿ ಏನು ಆಗುತ್ತಿದೆ ಅಂತಾ ಗೊತ್ತಿಲ್ಲ. ನಾನು ಪ್ರತಿಕ್ರಿಯೆ ನೀಡಲೇಬೇಕು ಅಂದರೆ ಅರ್ಜುನ್ ಸರ್ಜಾ ಹಾಗೂ ಶೃತಿ ಹರಿಹರನ್ ಅವರನ್ನು ಕೇಳಿ ತಿಳಿದುಕೊಂಡು, ಬಳಿಕ ನಿಮಗೆ ಹೇಳುತ್ತೇನೆ ಎಂದು ಕೊನೆಗೆ ಹಾರಿಕೆಯ ಉತ್ತರ ನೀಡಿದರು.

    ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರವಾಗಿ ಕೋರ್ಟ್ ನಲ್ಲಿ ಆರೂವರೆ ವರ್ಷ ಚರ್ಚೆಯಾಗಿದೆ. ನನಗೆ ಸಂವಿಧಾನದಲ್ಲಿ ನಂಬಿಕೆ ಇದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಎಲ್ಲರೂ ಎಲ್ಲಾ ದೇವಾಲಯಗಳಿಗೂ ಹೋಗಲು ಸಾಧ್ಯವಾಗುವುದಿಲ್ಲ. ಪರಮಾತ್ಮ ಕರೆಸಿಕೊಂಡರೆ ಮಾತ್ರ ಹೋಗಲು ಸಾಧ್ಯ. ಆದರೆ ಈ ವಿಷಯ ಇಷ್ಟು ದೊಡ್ಡದಾಗಿ ಚರ್ಚೆ ಆಗುತ್ತಿರುವುದು ನೋವು ತಂದಿದೆ. ಶಬರಿಮಲೆಗೆ ಹೋಗುವುದು ಪರಮಾತ್ಮನನ್ನು ನೋಡಲು ಹಾಗೂ ಆತನಿಗೆ ನಮ್ಮ ಬೇಡಿಕೆಗಳನ್ನು ಸಲ್ಲಿಸಲೇ ಹೊರತು, ಶಿಖರ ಹತ್ತಿ ಬಾವುಟ ನೆಟ್ಟು, ಬರುವ ಕೆಲಸಕ್ಕಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/d9hmrB88wyE

  • ಡಿಕೆಶಿ ಶೋ ಮಾಡೋದು ಬಿಟ್ಟು, ಕೆಲಸ ಮಾಡಿದ್ರೆ ಒಳ್ಳೇದು: ರಮೇಶ್ ಜಾರಕಿಹೊಳಿ

    ಡಿಕೆಶಿ ಶೋ ಮಾಡೋದು ಬಿಟ್ಟು, ಕೆಲಸ ಮಾಡಿದ್ರೆ ಒಳ್ಳೇದು: ರಮೇಶ್ ಜಾರಕಿಹೊಳಿ

    ಬಳ್ಳಾರಿ: ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಶೋ ಮಾಡುವುದನ್ನು ಬಿಟ್ಟು, ಕೆಲಸ ಮಾಡಿದರೇ ಒಳ್ಳೆಯದಾಗುತ್ತದೆ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಮತ್ತೊಮ್ಮೆ ಟಾಂಗ್ ನೀಡಿದ್ದಾರೆ.

    ಬೆಳಗಾವಿಯಲ್ಲಿ ಆರಂಭವಾದ ಸಚಿವ ಡಿಕೆ ಶಿವಕುಮಾರ ಹಾಗೂ ರಮೇಶ ಜಾರಕಿಹೊಳಿ ಜಟಾಪಟಿ ಬಳ್ಳಾರಿಯಲ್ಲೂ ಮುಂದುವರಿದಿದೆ. ಉಗ್ರಪ್ಪನವರ ಪರ ಕೂಡ್ಲಿಗೆಯಲ್ಲಿ ಪ್ರಚಾರದ ವೇಳೆ ಡಿಕೆ ಶಿವಕುಮಾರ ವಿರುದ್ಧ ಮತ್ತೆ ಜಾರಕಿಹೊಳಿ ಹರಿಹಾಯ್ದರು.

    ಡಿಕೆಶಿ ಶೋ ಆಫ್ ಮಾಡೋದು ಬಿಟ್ಟು, ಕೆಲಸ ಮಾಡಿದರೆ ಒಳ್ಳೆಯದು. ನಾನು ಶಾಸಕ ನಾಗೇಂದ್ರ ಸಹೋದರನಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದು ನಿಜ. ಆದರೆ ಕೆಲವರ ಕುತಂತ್ರದಿಂದ ಟಿಕೆಟ್ ಕೈ ತಪ್ಪಿತು. ಉಗ್ರಪ್ಪನವರು ಸಹ ಪ್ರಾಮಾಣಿಕರಾಗಿದ್ದಾರೆಂದು ಹೇಳುವ ಮೂಲಕ ಡಿಕೆಶಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

    ಸಚಿವ ಡಿಕೆ ಶಿವಕುಮಾರ್ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಅಷ್ಟೇ. ಅವರಿಗೆ ಬಳ್ಳಾರಿ ಜಿಲ್ಲಾ ಚುನಾವಣಾ ಉಸ್ತುವಾರಿ ನೀಡಿಲ್ಲ. ಡಿಕೆಶಿಯ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಅವರಿಗೆ ಈ ಬಗ್ಗೆ ಆಕ್ಷೇಪ ಇದ್ದಿದ್ದರೆ ಕ್ಯಾಬಿನೆಟ್ ಚರ್ಚೆ ವೇಳೆ ಹೇಳಬೇಕಿತ್ತು. ಈಗ ಈ ರೀತಿ ಬಹಿರಂಗ ಹೇಳಿಕೆ ನೀಡುವ ಅಗತ್ಯವೆನಿತ್ತು ಎಂದು ಪ್ರಶ್ನಿಸಿದರು.

    ಡಿಕೆಶಿಯವರ ಹಿಂಬಾಲಕರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡುವಾಗ ಅವರು ಎಲ್ಲಿಗೆ ಹೋಗಿದ್ದರು. ಪ್ರತಿ ಸಭೆಯಲ್ಲಿ ಮಾತನಾಡಿದಾಗ ಏಕೆ ತಡೆಯಲಿಲ್ಲ. ಕ್ಯಾಬಿನೆಟ್ ನಲ್ಲಿ ಈಶ್ವರ ಖಂಡ್ರೆ ಮತ್ತು ಎಸ್.ಎಸ್.ಮಲ್ಲಿಕಾರ್ಜುನ ಮಾತ್ರ ಪರ-ವಿರೋಧ ಚರ್ಚೆ ಮಾಡಿದ್ದರು. ಪ್ರತ್ಯೇಕ ಧರ್ಮ ಬೇಕು ಎಂದು ಹೇಳಿದ್ದಕ್ಕೆ ನಾವು ಪರಿಗಣಿಸಿದ್ದೇವೆ ಅಷ್ಟೇ ಎಂದು ಎಂಬಿ ಪಾಟೀಲ್ ಪರ ಬ್ಯಾಟ್ ಬೀಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾವು ತಪ್ಪು ಮಾಡಿದ್ದೇವೆ, ನನ್ನ ಹೇಳಿಕೆಗೆ ಈಗಲೂ ಬದ್ಧ: ಡಿಕೆ ಶಿವಕುಮಾರ್

    ನಾವು ತಪ್ಪು ಮಾಡಿದ್ದೇವೆ, ನನ್ನ ಹೇಳಿಕೆಗೆ ಈಗಲೂ ಬದ್ಧ: ಡಿಕೆ ಶಿವಕುಮಾರ್

    ಬೆಂಗಳೂರು: ಪ್ರತ್ಯೇಕ ಲಿಂಗಾಯಿತ ಧರ್ಮ ವಿಚಾರಕ್ಕೆ ಕೈ ಹಾಕಿ ತಪ್ಪು ಮಾಡಿದ್ದೇವೆ ಎನ್ನುವ ಹೇಳಿಕೆಗೆ ನಾನು ಬದ್ಧನಾಗಿದ್ದು, ಪ್ರಜ್ಞಾ ಪೂರ್ವಕವಾಗಿಯೇ ಆತ್ಮಲೋಕನ ಮಾಡಿಕೊಂಡು ನಾನು ಹೇಳಿಕೆ ನೀಡಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಮರ್ಥನೆ ನೀಡಿದ್ದಾರೆ.

    ಪತ್ಯೇಕ ಲಿಂಗಾಯತ ಧರ್ಮಕ್ಕೆ ವಿಚಾರಕ್ಕೆ ಕೈ ಹಾಕಿ ತಪ್ಪು ಮಾಡಿದ್ವಿ ಎನ್ನುವ ಹೇಳಿಕೆಗೆ ತಮ್ಮ ನಿವಾಸದಲ್ಲಿ ಪ್ರತಿಕ್ರಿಯಿಸಿದ ಅವರು, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಪ್ರಜ್ಞಾ ಪೂರ್ವಕವಾಯೇ ಆತ್ಮಾವಲೋಕನ ಮಾಡಿಕೊಂಡು ನಾನು ಹೇಳಿಕೆ ನೀಡಿದ್ದೇನೆ. ಯಾವತ್ತು ಧರ್ಮ, ಜಾತಿ ವಿಚಾರದಲ್ಲಿ ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಹಸ್ತಕ್ಷೇಪ ಮಾಡಬಾರದು. ರಾಜಕೀಯದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕೀಯ ಇರಬಾರದು ಎಂದು ತಮ್ಮ ಹೇಳಿಕೆಗೆ ಸಮರ್ಥಿಸಿಕೊಂಡರು.

    ಈ ಬಗ್ಗೆ ಬೇರೆಯವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಿಲ್ಲ. ನನ್ನ ಮನಸ್ಸಿಗೆ ಅನ್ನಿಸಿದ್ದನ್ನು ನಾನು ಹೇಳಿದ್ದೇನೆ. ಹಿಂದಿನ ಸರ್ಕಾರ ಪ್ರತ್ಯೇಕ ಧರ್ಮ ಮಾಡುವಾಗ ನಾನು ಬೇಡವೆಂದು ಹೇಳಬೇಕಿತ್ತು. ಆದರೆ ಹಲವು ಸಚಿವರ ಅಭಿಪ್ರಾಯ ಪ್ರತ್ಯೇಕ ಧರ್ಮ ಬೇಕು ಎಂದು ಹೇಳಿದ್ದರು. ಹೀಗಾಗಿ ನಾನು ಅದಕ್ಕೆ ಬೆಂಬಲ ಸೂಚಿಸಿದ್ದೆ. ಯಾವುದೇ ಕಾರಣಕ್ಕೂ ಧರ್ಮದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು. ಅಂತಹ ಕೆಲಸ ಮಾಡಿ, ನಾವು ದೊಡ್ಡ ತಪ್ಪು ಮಾಡಿದ್ದೇವು ಪಶ್ಚಾತ್ತಾಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಶಿವಕುಮಾರ್ Vs ಎಂಬಿ ಪಾಟೀಲ್ – ಕಾಂಗ್ರೆಸ್‍ನಲ್ಲಿ ಮತ್ತೆ ಧರ್ಮ ಯುದ್ಧ ಶುರು

    ನನ್ನ ಹೇಳಿಕೆಯನ್ನು ತೆಗಳುವವರು ತೆಗಳಲಿ, ಮಾನನಷ್ಟ ಮೊಕದ್ದಮೆ ಹಾಕುವವರು ಹಾಕಲಿ, ಬೈಯುವವರು ಬೈಯಲಿ. ಯಾರು ಏನೇ ಅಂದರೂ, ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ ಎಂದು ಖಡಕ್ ಆಗಿಯೇ ತಿಳಿಸಿದರು.

    ಬಳ್ಳಾರಿ ಚುನಾವಣೆ ಬಗ್ಗೆ ಮಾತನಾಡಿ, ನವೆಂಬರ್ 6ನೇ ತಾರೀಖಿನವರೆಗೂ ಕಾಯೋಣ, ಶ್ರೀರಾಮುಲು ಅಣ್ಣನವರು ಕನಕಪುರದ ಗೌಡರಿಗೇನು ಕೆಲಸ ಎಂದು ಹೇಳುತ್ತಿದ್ದಾರೆ. ಅವರನ್ನು ನಾನೇಕೆ ತುಳಿಯೋಕೆ ಹೋಗೋಣ. ಅವರನ್ನು ಬೇಕಾದರೆ ಹೆಗಲ ಮೇಲೆ ಕೂಡಿಸಿಕೊಂಡು ಹೋಗುತ್ತೇನೆ ಎಂದು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv