Tag: Ministerial

  • ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ: ಶ್ರೀಮಂತ ಪಾಟೀಲ್

    ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ: ಶ್ರೀಮಂತ ಪಾಟೀಲ್

    ಚಿಕ್ಕೋಡಿ (ಬೆಳಗಾವಿ): ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ಹೈಕಮಾಂಡ್ ಭರವಸೆ ನೀಡಿದ್ದಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಹೇಳಿದರು.

    ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನನ್ನನ್ನು ಕೈಬಿಡಲಾಗಿದೆ. ಮುಂದೆ ಸಚಿವ ಸಂಪುಟದಲ್ಲಿ ನನಗೆ ಮಂತ್ರಿಗಿರಿ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ ಎಂದರು. ಇದನ್ನೂ ಓದಿ: ಮೊಬೈಲ್ ನುಂಗಿ 4 ದಿನ ಹೊಟ್ಟೆಯಲ್ಲಿಟ್ಟುಕೊಂಡ

    ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನ ಸಿಕ್ಕಿದ್ದು ಸಂತೋಷ ಉಂಟುಮಾಡಿದೆ. ಈ ಭಾಗದಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬೇಸಿಗೆ ಸಂದರ್ಭದಲ್ಲಿ ಕೃಷ್ಣಾ ನದಿ ಬತ್ತಿ ಹೋಗುತ್ತದೆ. ಆ ಸಮಯದಲ್ಲಿ ಮಹಾರಾಷ್ಟ್ರ ರಾಜ್ಯದಿಂದ ನಮಗೆ ನೀರು ಹರಿಸುವ ಯೋಜನೆ ಒಪ್ಪಂದ ಸದ್ಯದಲ್ಲೇ ಆಗುವುದರಿಂದ ನಮ್ಮ ಭಾಗಕ್ಕೆ ಹೆಚ್ಚಿನ ಅನುಕೂಲ ಆಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ:  ಮಳೆಗಾಗಿ ಹುಡುಗಿಯರ ಬೆತ್ತಲ ಮೆರವಣಿಗೆ

    ಮರಾಠಾ ಮಹಾಸಭಾ ಸಿಎಂ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಮರಾಠಾ ಸಮುದಾಯದ ಹಲವಾರು ಬೇಡಿಕೆಗಳ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದಾರೆ. ಕರ್ನಾಟಕ ಭಾಗದಲ್ಲಿ ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ಕಾರಣಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಕೇಳಿಕೊಂಡಿದ್ದಾರೆ. ಜೊತೆ ನನಗೆ ಸಚಿವ ಸ್ಥಾನ ನೀಡುವಂತೆಯೂ ಸಿಎಂಗೆ ಮನವಿ ಸಲ್ಲಿಸಿದ್ದಾರೆಂದು ಹೇಳಿದರು.

  • ಸಿಟಿ ರವಿ ರಾಜೀನಾಮೆಗೆ ನಿರ್ಧಾರ?

    ಸಿಟಿ ರವಿ ರಾಜೀನಾಮೆಗೆ ನಿರ್ಧಾರ?

    ಬೆಂಗಳೂರು: ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದ ಖಾತೆ ಹಂಚಿಕೆ ಹಾಗೂ ಡಿಸಿಎಂ ಸ್ಥಾನಗಳು ಘೋಷಣೆಯಾಗುತ್ತಿದಂತೆ ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸಿಟಿ ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಸರ್ಕಾರಿ ಕಾರನ್ನು ಈಗಾಗಲೇ ವಾಪಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ತಮಗೆ ನೀಡಿದ್ದ ಪ್ರವಾಸೋದ್ಯಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಅಲ್ಲದೇ ರಾಜ್ಯಾಧ್ಯಕ್ಷ ಸ್ಥಾನ ಪಡೆಯುವಲ್ಲಿಯೂ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಪಕ್ಷದಲ್ಲಿನ ಸದ್ಯದ ಕೆಲ ಬೆಳವಣಿಗೆ ಹಾಗೂ ಅಸಮಾಧಾನಿತರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

    ಮೂಲಗಳ ಮಾಹಿತಿ ಅನ್ವಯ ನಾಳೆ ಬೆಳಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿರುವ ಸಿಟಿ ರವಿ ಅವರು ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ. ಈ ಕುರಿತು ಸ್ಪಷ್ಟನೆ ಪಡೆಯಲು ಸಿಟಿ ರವಿ ಅವರಿಗೆ ದೂರವಾಣಿ ಸಂಪರ್ಕ  ಮಾಡಿದಾಗ ನನಗೆ ಯಾವುದೇ ಅಸಮಾಧಾನ ಇಲ್ಲ. ಎಲ್ಲವನ್ನು ನೀವೇ ನಿರ್ಧಾರ ಮಾಡುತ್ತಿದ್ದೀರಾ. ನನ್ನ ಫೋನ್ ಬ್ಯಾಟರಿ ಡೆಡ್ ಆಗಿದ್ದರಿಂದ ಸ್ವಿಚ್ ಆಫ್ ಆಗಿತ್ತು. ಪಕ್ಷ ನಿಷ್ಠೆ ಬಗ್ಗೆ ನನಗೆ ಯಾರು ಸರ್ಟಿಫಿಕೇಟ್ ನೀಡುವ ಅಗತ್ಯವಿಲ್ಲ. ನೀವು ಮಂಗಳವಾರ ರಾಜೀನಾಮೆ ಕೊಡುವುದು ನಿಜವೇ ಎಂಬ ಪ್ರಶ್ನೆಗೆ ಯಾವುದೇ ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದರು.