Tag: ministerial position

  • ಪಕ್ಷ ತಾಯಿ ಇದ್ದಂತೆ, ತುತ್ತು ತಡವಾಗಿ ಕೊಟ್ಟಿರಬಹುದು, ಯಾರೂ ಪ್ರತಿಭಟಿಸಬೇಡಿ: ರಾಜೂಗೌಡ

    ಪಕ್ಷ ತಾಯಿ ಇದ್ದಂತೆ, ತುತ್ತು ತಡವಾಗಿ ಕೊಟ್ಟಿರಬಹುದು, ಯಾರೂ ಪ್ರತಿಭಟಿಸಬೇಡಿ: ರಾಜೂಗೌಡ

    – ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಸಮಾಧಾನ ಹೇಳಿದ ಶಾಸಕ

    ಬೆಂಗಳೂರು: ಪಕ್ಷ ನಮ್ಮ ತಾಯಿ ಇದ್ದಂತೆ, ತಾಯಿ ಮಕ್ಕಳಿಗೆ ತುತ್ತು ನೀಡುವಾಗ ಸ್ವಲ್ಪ ತಡವಾಗಿರಬಹುದು ಅದಕ್ಕೆ ತಲೆ ಕೆಡಿಸಿಕೊಳ್ಳಬೇಡಿ. ಶಾಸಕನಾಗಿರುವುದು ಜನರ ಸೇವೆ ಮಾಡಲು, ಸಚಿವರಾದರೆ ಮಾತ್ರ ಮಾಡುತ್ತಾರೆಯೇ? ನನ್ನ ಕೆಲಸವನ್ನು ನಾನು ಮಾಡುತ್ತೇನೆ. ನನ್ನ ಜನರ ಮನವೊಲಿಸುವುದು ನನ್ನ ಧರ್ಮ. ಅಲ್ಲದೆ ನಮ್ಮ ಮುಖ್ಯಮಂತ್ರಿಗಳ ವಿರುದ್ಧ, ನಮ್ಮ ಪಕ್ಷದ ವಿರುದ್ಧ ಪ್ರತಿಭಟಿಸಲು ಸಾಧ್ಯವೇ? ಯಾರೂ ಈ ರೀತಿ ವರ್ತಿಸಬೇಡಿ ಎಂದು ಶಾಸಕ ರಾಜೂಗೌಡ ಅವರು ತಮ್ಮ ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ.

    ಪ್ರತಿಭಟನೆ ನಡೆಸುತ್ತಿದ್ದ ತಮ್ಮ ಬೆಂಬಲಿಗರನ್ನು ಸಮಾಧಾನಪಡಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಜನರ ಆಶೀರ್ವಾದದಿಂದ 3 ಬಾರಿ ಶಾಸಕನಾಗಿದ್ದೇನೆ. ಅವರು ಪ್ರತಿಭಟನೆ ನಡೆಸಿ ಕರ್ತವ್ಯವನ್ನು ಮಾಡಿದ್ದಾರೆ. ಇವರ ಸೇವೆ ಮಾಡುವುದು ನನ್ನ ಕರ್ತವ್ಯ, ಜನತೆಯ ಕಾಲಿಗೆ ಬಿದ್ದು ಕೇಳಿಕೊಳ್ಳುತ್ತೇನೆ, ಧರಣಿ ಮಾಡುವುದು, ಪಕ್ಷದ ವಿರುದ್ಧ ಕೂಗುವುದು ಬೇಡ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಕೈ ತಪ್ಪಿದ ಸಚಿವ ಸ್ಥಾನ – ರೇಣುಕಾಚಾರ್ಯ ಕಣ್ಣೀರು

    ಪಕ್ಷ ನಮ್ಮ ತಾಯಿ ಇದ್ದಂತೆ, ತಾಯಿ ಮಕ್ಕಳಿಗೆ ತುತ್ತು ನೀಡುವಾಗ ಸ್ವಲ್ಪ ತಡವಾಗಿರಬಹುದು ಅದಕ್ಕೆ ತಲೆ ಕೆಡಿಸಿಕೊಳ್ಳಬೇಡಿ. ಶಾಸಕನಾಗಿರುವುದು ಜನರ ಸೇವೆ ಮಾಡಲು, ಸಚಿವರಾದರೆ ಮಾತ್ರ ಮಾಡುತ್ತಾರೆಯೇ? ನನ್ನ ಕೆಲಸವನ್ನು ನಾನು ಮಾಡುತ್ತೇನೆ ಅವರ ಮನವೊಲಿಸುವುದು ನನ್ನ ಧರ್ಮ ಎಂದು ತಿಳಿಸಿದರು.

    ಮುಂದಿನ ಬಾರಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಆಗ ನಾನು ಸಚಿವನಾಗುತ್ತೇನೆ. ನನ್ನ ಮೇಲೆ ಯಾವುದೇ ಭ್ರಷ್ಟಾಚಾರ ಆರೋಪಗಳಿಲ್ಲ, ಪಕ್ಷ ವಿರುದ್ಧ ಯಾವುದೇ ಚಟುವಟಿಕೆ ಮಾಡಿಲ್ಲ, ಜನರೊಂದಿಗೆ ಬೆರೆತು ಸೇವೆ ಮಾಡುತ್ತಿದ್ದೇನೆ. ಹೀಗಾಗಿ ನನಗೆ ಬೇಸರವಿಲ್ಲ, ಪ್ರತಿಭಟಿಸಬೇಡಿ ಎಂದು ಬೆಂಬಲಿಗರಿಗೆ ನಾನು ಹೇಳಿದ್ದೇನೆ. ಆದರೂ ಅವರಿಗೆ ನನ್ನ ಮೇಲೆ ಹುಚ್ಚು ಪ್ರೀತಿ, ಇದಕ್ಕಾಗಿ ಬರುತ್ತಿದ್ದಾರೆ. ಯಾರೂ ಯಾರ ವಿರುದ್ಧವೂ ಪ್ರತಿಭಟಿಸುವುದು ಬೇಡ, ಇದೇ ಮೊದಲಲ್ಲ ನನಗೆ ಈ ರೀತಿ 6ನೇ ಬಾರಿ ಆಗುತ್ತಿದೆ. ಹೀಗಾಗಿ ನಾನಿದನ್ನು ನಿಭಾಯಿಸುತ್ತೇನೆ. ಒಳ್ಳೆಯ ಕೆಲಸ ಮಾಡಿ ಮುಂದೆ ಬರುತ್ತೇನೆ. ಇದರಿಂದ ನನಗೆ ಬೇಸರ ಇಲ್ಲ, ಆಗಲೇ ರೂಢಿ ಆಗಿಬಿಟ್ಟಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  • ಎರಡು ಷರತ್ತು ವಿಧಿಸಿ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ

    ಎರಡು ಷರತ್ತು ವಿಧಿಸಿ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ

    ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಾಗ ರಮೇಶ್ ಜಾರಕಿಹೊಳಿ ಎರಡು ಷರತ್ತುಗಳನ್ನು ವಿಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವಾಗ ರಮೇಶ್ ಜಾರಕಿಹೊಳಿ ಎರಡು ಷರತ್ತುಗಳನ್ನು ವಿಧಿಸಿದ್ದಾರೆ. ಆದರೆ ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸದ್ಯಕ್ಕೆ ಯಾವುದೇ ಒಪ್ಪಿಗೆ ಸೂಚಿಸಿಲ್ಲ ಎಂಬ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ನಾನು ರಾಜೀನಾಮೆ ನೀಡಿದ ಬಳಿಕ ನಮ್ಮ ಕುಟುಂಬಕ್ಕೆ ಸಚಿವ ಸ್ಥಾನ ನೀಡಬೇಕು. ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸ್ಥಾನ ಕೊಡಬೇಕು. ರಾಜೀನಾಮೆ ಕೊಟ್ಟ ಬಳಿಕ ಕೇವಲ ಒಂದು ತಿಂಗಳ ಒಳಗೆ ನಮ್ಮ ಕುಟುಂಬಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಷರತ್ತು ವಿಧಿಸಿದ್ದಾರೆ. ಹೀಗಾಗಿ ಬಜೆಟ್ ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ ವೇಳೆ ಬಾಲಚಂದ್ರ ಜಾರಕಿಹೊಳಿಗೆ ಅದೃಷ್ಟ ಖುಲಾಯಿಸುತ್ತಾ ಎಂಬ ಪ್ರಶ್ನೆ ಇದೀಗ ಎದ್ದಿದೆ.

    ಸಚಿವ ಸ್ಥಾನದ ಜೊತೆಗೆ ಮತ್ತೊಂದು ಬೇಡಿಕೆಯನ್ನೂ ಇಟ್ಟಿರುವ ರಮೇಶ್ ಜಾರಕಿಹೊಳಿ, ಜಲಸಂಪನ್ಮೂಲ ಖಾತೆಯನ್ನು ನಮ್ಮ ಕುಟುಂಬಕ್ಕೇ ನೀಡಬೇಕು ಎಂದು ಎರಡನೇ ಷರತ್ತು ವಿಧಿಸಿದ್ದಾರೆ. ನಮ್ಮ ಕುಟುಂಬದವರಿಗೆ ಖಾತೆ ನೀಡುವವರೆಗೆ ಜಲಸಂಪನ್ಮೂಲ ಖಾತೆ ಸಿಎಂ ಬಳಿಯೇ ಇರಬೇಕು ಎಂದು ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ರಮೇಶ್ ಜಾರಕಿಹೊಳಿಯವರ ಯಾವುದೇ ಷರತ್ತಿಗೆ ಸಿಎಂ ಯಡಿಯೂರಪ್ಪ ಯಾವುದೇ ಒಪ್ಪಿಗೆ ಸೂಚಿಸಿಲ್ಲ. ಬಸವರಾಜ ಬೊಮ್ಮಾಯಿ, ಬಾಲಚಂದ್ರ ಜಾರಕಿಹೊಳಿ ಮೂಲಕ ರಾಜೀನಾಮೆ ಕೊಡಿಸುವ ಕಸರತ್ತನ್ನು ಸಿಎಂ ಯಡಿಯೂರಪ್ಪ ಮಾಡಿದ್ದರು. ಹೀಗಾಗಿ ಜಾರಕಿಹೊಳಿ ಷರತ್ತಿಗೆ ಸಿಎಂ ಡೋಂಟ್ ಕೇರ್ ಎಂದಿದ್ದಾರೆ. ಹೈಕಮಾಂಡ್ ಏನು ಮಾಡುತ್ತೋ ನೋಡೋಣ ಎಂದು ಹೇಳಿ ಕಳುಹಿಸಿದ್ದಾರೆ.

  • ವಲಸಿಗ ಸಚಿವರಿಂದ ಸಚಿವ ಸ್ಥಾನ ಕಿತ್ತುಕೊಳ್ತಾರೆ: ಎಂ. ಲಕ್ಷ್ಮಣ್

    ವಲಸಿಗ ಸಚಿವರಿಂದ ಸಚಿವ ಸ್ಥಾನ ಕಿತ್ತುಕೊಳ್ತಾರೆ: ಎಂ. ಲಕ್ಷ್ಮಣ್

    ಮೈಸೂರು: ಬಿಜೆಪಿಯವರು ವಲಸಿಗ ಸಚಿವರಿಂದ ಸಚಿವ ಸ್ಥಾನ ಕಿತ್ತುಕೊಳ್ಳುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮೈಸೂರಿನಲ್ಲಿ ಹೇಳಿದ್ದಾರೆ.

    ಇನ್ನು 6 ತಿಂಗಳಲ್ಲಿ ಸಚಿವ ಸುಧಾಕರ್, ನಾರಾಯಣ್ ಗೌಡ, ಬಿ ಗೋಪಾಲಯ್ಯ, ಆರ್ ಶಂಕರ್ ಬಿ.ಸಿ ಪಾಟೀಲ್ ಸೇರಿ ಹಲವರಿಂದ ಸಚಿವ ಸ್ಥಾನ ಕಿತ್ತುಕೊಳ್ಳುತ್ತಾರೆ. ಅವರಿಗೆ ಈಗ ವಲಸಿಗರ ಅವಶ್ಯಕತೆ ಇಲ್ಲ ಸರ್ಕಾರ ಗಟ್ಟಿಯಾಗಿದೆ. ಇದು ವಲಸೆ ಹೋದವರ ಗತಿ ಎಂದರು.

    ಸಿದ್ದರಾಮಯ್ಯ ಅವರನ್ನು ಸಮಾಜದಿಂದ ಬಹಿಷ್ಕರಿಸುತ್ತೇವೆ ಎಂಬ ಎಂಎಲ್‍ಸಿ ಎಚ್ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಹಿಷ್ಕಾರ ಎಂಬುದು ಅಸಂವಿಧಾನಿಕ ಪದ. ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಕುಂದು ತರಲು ಆರ್ ಎಸ್ ಎಸ್ ಹಾಗೂ ಎಚ್ ವಿಶ್ವನಾಥ್ ಅವರಿಂದ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಒಂದು ಜಾತಿ ವರ್ಗಕ್ಕೆ ಸೇರಿದವರಲ್ಲ. ವಿಶ್ವನಾಥ್ ಬಹಿಷ್ಕಾರ ಪದ ಹೇಗೆ ಬಳಸಿದರು. ಅವರಿಗೆ ಈ ಬಗ್ಗೆ ನಾಚಿಕೆಯಾಗಬೇಕು ಎಂದು ಹೇಳಿದರು.

    ಇದು ಅಕ್ಷಮ್ಯ ಅಪರಾಧ ಇದಕ್ಕೆ ನಮ್ಮ ವಿರೋಧವಿದೆ. ನೀವು ಒಬ್ಬ ಲಾಯರ್ ಆಗಿದ್ದೀರಾ ನಿಮಗೂ ಅದು ಗೊತ್ತಿದೆ ಆ ಹೇಳಿಕೆಯನ್ನು ವಿಶ್ವನಾಥ್ ವಾಪಸ್ಸು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

  • ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆಯಾದ್ರೆ ನಮ್ಮ ಸ್ನೇಹಿತರಿಗೂ ಸ್ಥಾನ ಸಿಗಲಿದೆ: ಬಿ.ಸಿ.ಪಾಟೀಲ್

    ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆಯಾದ್ರೆ ನಮ್ಮ ಸ್ನೇಹಿತರಿಗೂ ಸ್ಥಾನ ಸಿಗಲಿದೆ: ಬಿ.ಸಿ.ಪಾಟೀಲ್

    – ಸಂಕ್ರಾಂತಿಗೆ ವಿಸ್ತರಣೆ ಆದ್ರೆ ಇಂಧನ ಖಾತೆ ಕೊಟ್ರೆ ಒಳಿತು- ಸಚಿವ ನಾಗೇಶ್

    ಕೋಲಾರ: ಸಿಎಂ ತೆಗದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ನನ್ನ ಖಾತೆ ಬದಲಾವಣೆ ಮಾಡಿದರೂ ಅಡ್ಡಿ ಇಲ್ಲ ಎಂದು ಸಚಿವ ಸಂಪುಟ ವಿಸ್ತರಣೆ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

    ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಆದಷ್ಟು ಬೇಗ ಆಗಬೇಕು. ನಮ್ಮ ಸ್ನೇಹಿತರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ. ಇನ್ನೂ ಮುನಿರತ್ನ, ಆರ್.ಶಂಕರ್ ಹಾಗೂ ಎಂಟಿಬಿಗೆ ಸಚಿವ ಸ್ಥಾನ ಸಿಗಬೇಕಿದೆ, ಸಿಗುತ್ತೆ. ವಿಶ್ವನಾಥ್ ಅವರಿಗೂ ಸಿಗುತ್ತೆ ಎಂದರು.

    ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ, ತಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕೇಳೋದು ಶಾಸಕರ ಹಕ್ಕು. ಸಿಎಂ ಎಲ್ಲ ಶಾಸಕರ ಸಮಸ್ಯೆ ಆಲಿಸಿ ಆರ್ಥಿಕ ಸಂಕಷ್ಟದ ನಡುವೆ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಬಿಜೆಪಿ ಮೇಲೆ ಪ್ರೀತಿ ಹೆಚ್ಚಾಗಿದೆ. ಹೀಗಾಗಿ ನಮ್ಮ ಮೇಲೆ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಜೆಡಿಎಸ್ ಸಾಫ್ಟ್ ಕಾರ್ನರ್‍ನ್ನು ನಾವು ಸ್ವಾಗತ ಮಾಡುತ್ತೇವೆ. ಬಿಜೆಪಿಗೆ ಸಾಕಷ್ಟು ಸಂಖ್ಯಾಬಲವಿದೆ. ಹೊಂದಾಣಿಕೆ ಅವಶ್ಯಕತೆ ಇಲ್ಲ ಎಂದರು.

    ಬಜೆಟ್ ಮೇಲೆ ನಮ್ಮ ನಿರೀಕ್ಷೆ ಹೆಚ್ಚಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಂಡರೆ 5 ಲಕ್ಷ ಕೊಡಬೇಕು. ಹಾವು ಕಚ್ಚಿ ಸಾವಿಗಿಡಾದರೆ ನೀಡುವ ಪರಿಹಾರವನ್ನು 2 ಲಕ್ಷದಿಂದ 5 ಲಕ್ಷಕ್ಕೆ ಏರಿಸಬೇಕು. ಕೃಷಿ ವಿಶ್ವವಿದ್ಯಾಲಯದಲ್ಲಿ ರೈತರ ಮಕ್ಕಳಿಗಿರುವ ಮೀಸಲಾತಿಯನ್ನು ಶೇ.40ರಿಂದ 50ಕ್ಕೆ ಹೆಚ್ಚಿಸಲು ಮನವಿ ಮಾಡಿದ್ದೇನೆ ಎಂದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಅಬಕಾರಿ ಸಚಿವ ನಾಗೇಶ್, ಸಚಿವ ಸಂಪುಟ ವಿಸ್ತರಣೆ ವೇಳೆ ಸಿಎಂ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ, ನಾಳೆ ನಾಳೆ ಎಂದು ಮುಂದೂಡಲಾಗುತ್ತಿದೆ. ಸಂಕ್ರಾಂತಿ ಮುಗಿದ ಬಳಿಕ ಸಂಪುಟ ವಿಸ್ತರಣೆ ಆಗುವುದರಲ್ಲಿ ಅನುಮಾನವಿಲ್ಲ. ಖಾತೆ ಬದಲಾವಣೆಯಾದರೆ ಇಂಧನ ಖಾತೆ ಕೊಡಲಿ. ಎಲ್ಲರಿಗಿಂತ ಚನ್ನಾಗಿ ನಾನು ನಿಭಾಯಿಸಬಲ್ಲೆ. ಇಂಧನ ಇಲಾಖೆಯಲ್ಲಿ ನನಗೆ 34 ವರ್ಷ ಅನುಭವವಿದೆ. ನನ್ನ ಹಿನ್ನೆಲೆ, ಟ್ರ್ಯಾಕ್ ರೆಕಾರ್ಡ್ ಅಧ್ಯಯನ ಮಾಡಿ ಸಿಎಂ ಇಂಧನ ಖಾತೆ ಕೊಡಲಿ. ಈ ಹಿಂದೆ ಕಾರಣಾಂತರಗಳಿಂದ ನನಗೆ ಇಂಧನ ಖಾತೆ ತಪ್ಪಿತು. ಸಿಎಂಗೂ ನನ್ನ ಬಗ್ಗೆ ಗೊತ್ತಿದೆ ಕೊಟ್ಟರೆ ನಿಭಾಯಿಸುವೆ ಎಂದರು.

  • ಸಚಿವ ಸ್ಥಾನಕ್ಕಾಗಿ ಕೇಂದ್ರ ನಾಯಕರನ್ನು ಭೇಟಿಯಾಗಿದ್ದು ನಿಜ: ಅಪ್ಪಚ್ಚು ರಂಜನ್

    ಸಚಿವ ಸ್ಥಾನಕ್ಕಾಗಿ ಕೇಂದ್ರ ನಾಯಕರನ್ನು ಭೇಟಿಯಾಗಿದ್ದು ನಿಜ: ಅಪ್ಪಚ್ಚು ರಂಜನ್

    ಮಡಿಕೇರಿ: ನಮಗೂ ಸಚಿವಸ್ಥಾನ ಬೇಕೆಂದು ಕೇಂದ್ರ ನಾಯಕರನ್ನು ಭೇಟಿಯಾಗಿದ್ದು ನಿಜ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಒಪ್ಪಿಕೊಂಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಕಚೇರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಇದೇ ವೇಳೆ ಸಚಿವಸ್ಥಾನಕ್ಕಾಗಿ ಕೇಂದ್ರ ನಾಯಕರನ್ನು ಭೇಟಿಯಾಗಿದ್ದೇನೆ. ಸ್ವಾಮಿಕಾರ್ಯ, ಸ್ವಕಾರ್ಯ ಎರಡನ್ನೂ ಮಾಡಿಕೊಂಡು ಬಂದಿದ್ದೇನೆ ಎಂದರು.

    ಮೂಲ ಬಿಜೆಪಿಗರು ಐದಾರು ಬಾರಿ ಗೆದ್ದವರಿದ್ದೇವೆ. ನಾವು ಯಾವಾಗಲೂ ಸಚಿವಸ್ಥಾನಕ್ಕಾಗಿ ಹಾದಿ ರಂಪ ಬೀದಿರಂಪ ಮಾಡದೇ, ಪಕ್ಷಕ್ಕಾಗಿ ನಿಷ್ಠೆಯಿಂದ ಇದ್ದೇವೆ. ಆದರೆ ಹಾದಿರಂಪ ಬೀದಿರಂಪ ಮಾಡಿ ಮತ್ತೆ ಮತ್ತೆ ಸಚಿವರಾದವರೇ ಈ ಬಾರಿಯೂ ಸಚಿವರಾಗಿದ್ದಾರೆ. ಅಂತಹವರನ್ನು ಕೈಬಿಟ್ಟು ನಮಗೆ ಸಚಿವಸ್ಥಾನ ಕೊಡಲಿ ಎಂಬುದು ನಮ್ಮ ಒತ್ತಾಯ ಎಂದಿದ್ದಾರೆ.

    ಯಾರನ್ನು ಭೇಟಿಯಾಗಿದ್ದೇನೆ ಎಂಬುದನ್ನೆಲ್ಲ ಹೇಳಲು ಆಗುವುದಿಲ್ಲ. ಲಿಖಿತವಾಗಿ ಮನವಿ ಮಾಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಅದನ್ನೆಲ್ಲಾ ಹೇಳೋಕಾಗುತ್ತಾ ಎಂದು ಹೇಳುವ ಮೂಲಕ ಲಿಖಿತವಾಗಿ ಕೇಂದ್ರ ನಾಯಕರಿಗೆ ಮನವಿ ಮಾಡಿದ್ದಾರೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದಂತಾಗಿದೆ.

  • ಸಿ.ಪಿ ಯೋಗೀಶ್ವರನನ್ನು ಮಂತ್ರಿ ಮಾಡಬೇಕು: ಅಶ್ವಥ್ ನಾರಾಯಣ್

    ಸಿ.ಪಿ ಯೋಗೀಶ್ವರನನ್ನು ಮಂತ್ರಿ ಮಾಡಬೇಕು: ಅಶ್ವಥ್ ನಾರಾಯಣ್

    ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಸಿ.ಪಿ. ಯೋಗೀಶ್ವರ್ ಬಹಳಷ್ಟು ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಅಭಿಪ್ರಾಯವೂ ಆಗಿದೆ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದ್ದಾರೆ.

    ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಶುಕ್ರವಾರ ಉಡುಪಿಗೆ ಆಗಮಿಸಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿ, ಶಾಸಕ ಯೋಗೀಶ್ವರ್ ಪರ ಬ್ಯಾಟ್ ಮಾಡಿದರು. ಯೋಗೀಶ್ವರ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವ ಒತ್ತಾಯವಿದೆ. ಅವರಿಗೂ ಸಚಿವ ಸ್ಥಾನದ ಅಪೇಕ್ಷೆ ಇದೆ. ಅಲ್ಲದೇ ನಮ್ಮ ಅಭಿಪ್ರಾಯವೂ ಅದೇ ಆಗಿದೆ ಎಂದರು.

    ಈ ಬಗ್ಗೆ ಕೇಂದ್ರದ ವರಿಷ್ಠರು ಮತ್ತು ಮುಖ್ಯಮಂತ್ರಿ ಅವರು ಸಮಾಲೋಚನೆ ಮಾಡುತ್ತಾರೆ. ರಾಜ್ಯದಲ್ಲಿ ಸಂಪುಟ ವಿಸ್ತರಣೆ ಸಾಕಷ್ಟು ಗಮನಸೆಳೆದಿದೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಒಂದು ಜಟಿಲ ವಿಚಾರವಾಗಿದೆ. ಅಲ್ಪಾವಧಿಯಲ್ಲಿ ಎಲ್ಲವೂ ಗೊತ್ತಾಗಲಿದೆ. ಬೇರೆ ಪಕ್ಷದಿಂದ ಬಿಜೆಪಿಗೆ ಬಂದವರಿಗೆ ಸ್ಥಾನ ನೀಡುವುದು ಮೂಲ ಬಿಜೆಪಿಗರಿಗೆ ಬೇಸರ ವಿಚಾರವಾದರೂ ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗಬೇಕಾಗುತ್ತದೆ. ವಲಸೆ ಬಂದವರೂ ಸರ್ಕಾರ ರಚನೆಗೆ ಕಾರಣೀಕರ್ತರಾಗಿದ್ದಾರೆ ಎಂದು ತಿಳಿಸಿದರು.

    ಬಿಜೆಪಿಯಲ್ಲಿದ್ದಾಗ ಎಲ್ಲರೂ ಒಂದೇ. ಒಳಗೆ ಹೊರಗೆ ಅನ್ನೋ ಭಾವನೆ ಸರಿಯಲ್ಲ, ತಾರತಮ್ಯಕ್ಕೆ ಅವಕಾಶ ಇಲ್ಲ. ಎಲ್ಲರನ್ನೂ ಕುಟುಂಬದ ರೀತಿ ಜೋಡಿಸಿಕೊಂಡು ಹೋಗಬೇಕಾಗುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.

  • ಆಂಜನೇಯ ಅನುಗ್ರಹ ಮಾಡಿದಾಗ ಮಂತ್ರಿ ಆಗುವೆ- ಸೋಮಶೇಖರ್ ರೆಡ್ಡಿ

    ಆಂಜನೇಯ ಅನುಗ್ರಹ ಮಾಡಿದಾಗ ಮಂತ್ರಿ ಆಗುವೆ- ಸೋಮಶೇಖರ್ ರೆಡ್ಡಿ

    ಬಳ್ಳಾರಿ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಆಂಜನೇಯ ಸ್ವಾಮಿ ಅನುಗ್ರಹ ಮಾಡಿದಾಗ ಮಂತ್ರಿಯಾಗುತ್ತೇನೆ ಎಂದು ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರು ಹುಟ್ಟುಹಬ್ಬದ ಹಿನ್ನೆಲೆ ನಗರದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಆಂಜನೇಯ ಸ್ವಾಮಿ ಅನುಗ್ರಹ ನೀಡಿದಾಗ ಆಗುತ್ತೇನೆ. ನಾನು ಮಂತ್ರಿ ಸ್ಥಾನ ಕೊಡಿ ಎಂದು ಕೇಳಲ್ಲ. ದೇವರ ಅನುಗ್ರಹ ಇದ್ದರೆ ಮಂತ್ರಿ ಆಗುವೆ. ಪಕ್ಷವೇ ನನಗೆ ಮಂತ್ರಿ ಸ್ಥಾನ ಕೊಟ್ಟರೆ ಆಗುತ್ತೇನೆ. ಆನಂದ್ ಸಿಂಗ್ ಅವರು ಸಹೋದರನ ರೀತಿ ಇದ್ದಾರೆ. ಹೀಗಾಗಿ ನನಗೆ ಸಚಿವ ಸ್ಥಾನದ ಅಗತ್ಯವಿಲ್ಲ ಎಂದರು.

    ದೇಶಾದ್ಯಂತ ಪ್ರಧಾನಿ ಮೋದಿ ಅವರ 70ನೇ ಹುಟ್ಟು ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬಳ್ಳಾರಿ ನಗರ ಬಿಜೆಪಿ ಯುವ ಮಾರ್ಚಾ ವತಿಯಿಂದ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಸೇರಿದಂತೆ ನೂರಾರು ಜನ ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

    ಯುವಕರು ರಕ್ತದಾನ ಮಾಡಿ ರೋಗಿಗಳ ಜೀವನ ಉಳಿಸಲು ಮುಂದಾಗಿದ್ದಾರೆ. ಯುವಕರು ದೇಶಕ್ಕೆ ಆಪತ್ತು ಬಂದಾಗ ದೇಶದ ರಕ್ಷಣೆಗೆ ಮುಂದಾಗಬೇಕು. ರಕ್ತದಾನ ಸೇರಿದಂತೆ ವಿವಿಧ ರೀತಿಯ ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದರು.

  • ನನ್ನನ್ನ ಮಂತ್ರಿ ಸ್ಥಾನದಿಂದ ತೆಗೆಯುವುದಿಲ್ಲ – ಶಶಿಕಲಾ ಜೊಲ್ಲೆ

    ನನ್ನನ್ನ ಮಂತ್ರಿ ಸ್ಥಾನದಿಂದ ತೆಗೆಯುವುದಿಲ್ಲ – ಶಶಿಕಲಾ ಜೊಲ್ಲೆ

    ಚಿಕ್ಕೋಡಿ: ನನಗೆ ರಾಜೀನಾಮೆ ನೀಡುವಂತೆ ಯಾವುದೇ ಆದೇಶ ಬಂದಿಲ್ಲ. ನನ್ನನ್ನ ಮಂತ್ರಿ ಸ್ಥಾನದಿಂದ ತೆಗೆಯುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

    ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಬಾಟ ನಾಗನೂರು ಗ್ರಾಮದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿರುವ ಅವರು, ಮಹಿಳಾ ಕೋಟದಿಂದ ಎರಡು ಬಾರಿ ಆಯ್ಕೆಯಾಗಿದ್ದೇನೆ ಜೊತೆಗೆ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ ಎಂದಿದ್ದಾರೆ.

    ಫೆಬ್ರವರಿ 6 ರಂದು ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ಎಲ್ಲರಿಗೂ ನ್ಯಾಯ ಕೊಡುತ್ತಾರೆ. 17 ಜನ ಶಾಸಕರ ತ್ಯಾಗದಿಂದಲೇ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ಸಾಧ್ಯ ಅದಷ್ಟು ಎಲ್ಲರಿಗೂ ಸಮಾಧಾನ ಮಾಡುವ ಕೆಲಸ ಸಿಎಂ ಮಾಡುತ್ತಾರೆ. ಸಿಎಂ ಯಡಿಯೂರಪ್ಪ ಎಂದು ಮಾತಿಗೆ ತಪ್ಪುವುದಿಲ್ಲ. ಮಂತ್ರಿ ಸ್ಥಾನ ನೀಡದೆ ಇದ್ದರೂ ಬೇರೆ ನಿಗಮ ಮಂಡಳಿ ಸ್ಥಾನ ನೀಡಿ ಸಮಾಧಾನ ಮಾಡುತ್ತಾರೆ ಎಂದು ಜೊಲ್ಲೆ ಹೇಳಿದ್ದಾರೆ.

    ಲಕ್ಷ್ಮಣ ಸವದಿ ಸೋತಿದ್ದರೂ ಡಿಸಿಎಂ ಆಗಿ ಮುಂದುವರಿಯುತ್ತಾರೆ ಎನ್ನುವ ವಿಶ್ವಾಸ ಇದೆ. ಅಲ್ಲದೆ ಸಂಪುಟ ವಿಸ್ತರಣೆ ಬಗ್ಗೆ ಯಡಿಯೂರಪ್ಪ ಸೇರಿದಂತೆ ಎಲ್ಲರಿಗೂ ಟೆನ್ಶನ್ ಇದೆ. ಅದನ್ನು ಯಡಿಯೂರಪ್ಪ ಅವರು ನಿಭಾಯಿಸಿಕೊಂಡು ಹೋಗುತ್ತಾರೆ ಎಂದು ಸಚಿವೆ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದರು.

  • ನಾನು ಕಲ್ಲುಬಂಡೆ ಇದ್ದಂತೆ ಯಾವತ್ತು ಕರಗಲ್ಲ: ರೇಣುಕಾಚಾರ್ಯ

    ನಾನು ಕಲ್ಲುಬಂಡೆ ಇದ್ದಂತೆ ಯಾವತ್ತು ಕರಗಲ್ಲ: ರೇಣುಕಾಚಾರ್ಯ

    ದಾವಣಗೆರೆ: ನಾನು ಕಲ್ಲುಬಂಡೆ ಇದ್ದಂತೆ ನಾನ್ಯಾವತ್ತು ಕರಗಲ್ಲ. ಮಂತ್ರಿ ಸ್ಥಾನ ನೀರಿನ ಮೇಲೆ ಗುಳ್ಳೆ, ಈಗ ಎತ್ತಿನ ಬಂಡಿಯಲ್ಲಿ ಬಂದೆ. ಆ ಬಂಡಿ ಮುಂದೆ ಗೂಟದ ಕಾರು ಲೆಕ್ಕವೇ ಇಲ್ಲ ಎಂದು ದಾವಣಗೆರೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

    ಗೂಟದ ಕಾರು ಬೇಕು ಎನ್ನುವವರಿಗೆ ಮಂತ್ರಿ ಮಾಡಬೇಡಿ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮದಲ್ಲಿ ತಿರುಗೇಟು ನೀಡಿದ ರೇಣುಕಾಚಾರ್ಯ, ನಾನು ಸಚಿವ ಸ್ಥಾನ ಆಕಾಂಕ್ಷಿ ಎಂದು ಹೇಳಿದ್ದು ನಿಜ. ಆದರೆ ನನಗೆ ಗೂಟದ ಕಾರು ಲೆಕ್ಕಕ್ಕೇ ಇಲ್ಲ ಎಂದಿದ್ದಾರೆ.

    ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ. ಅಧಿಕಾರ ಶಾಶ್ವತ ಅಲ್ಲ ಯಾರೇ ಟೀಕೆ ಮಾಡಿದರು ಪರವಾಗಿಲ್ಲ. ನಾನು ಬಂಡೆಯಿದ್ದಂತೆ ಕರಗಲ್ಲ. ಸಚಿವ ಸಂಪುಟ ವಿಚಾರದಲ್ಲಿ ಸಿಎಂಗೆ ಪರಾಮಾಧಿಕಾರವಿದೆ. ಅವರು ಹಾಗೂ ಕೇಂದ್ರದ ವರಿಷ್ಠರು ಸೇರಿ ಸಚಿವ ಸ್ಥಾನ ತೀರ್ಮಾನ ಮಾಡುತ್ತಾರೆ. ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದರು.

    ಬಸ್ ನಿಲ್ದಾಣದಲ್ಲಿನ ಮಹಿಳೆ ಇದ್ದಾಗೆ ಎಂದು ಸಿಎಂ ಇಬ್ರಾಹಿಂ ಹೇಳಿಕೆಗೆ ತಿರುಗೇಟು ನೀಡಿದ ರೇಣುಕಾಚಾರ್ಯ, ಸಿಎಂ ಇಬ್ರಾಹಿಂ ಅವರದ್ದು ಎಲುಬಿಲ್ಲದ ನಾಲಿಗೆ. ಆತ ಜೋಕರ್ ವಚನ ಹೇಳೋಕೆ ಅವರನ್ನು ಬಳಸಿಕೊಳ್ಳುತ್ತಾರೆ. ಸಿಎಂ ಇಬ್ರಾಹಿಂ ನೀಚ ಭದ್ರಾವತಿಯಲ್ಲಿ ಏನೇನೂ ಪ್ರಕರಣ ಮಾಡಿದ್ದಾರೆ ಎಲ್ಲ ಗೊತ್ತಿದೆ. ಇಡೀ ಭದ್ರಾವತಿಯನ್ನು ಕೋಮು ಗಲಭೆಗೆ ತಳ್ಳಿದವರು ಎಂದು ಆರೋಪಿಸಿದರು.

  • ಬಿಎಸ್‍ವೈ ಮಂಡ್ಯದ ಗಂಡು 17 ಜನಕ್ಕೂ ಸಚಿವ ಸ್ಥಾನ ನೀಡ್ತಾರೆ – ಸಿ.ಎಸ್.ಪುಟ್ಟರಾಜು

    ಬಿಎಸ್‍ವೈ ಮಂಡ್ಯದ ಗಂಡು 17 ಜನಕ್ಕೂ ಸಚಿವ ಸ್ಥಾನ ನೀಡ್ತಾರೆ – ಸಿ.ಎಸ್.ಪುಟ್ಟರಾಜು

    ಮಂಡ್ಯ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಂಡ್ಯದ ಗಂಡು. ಅವರು ಕೊಟ್ಟ ಮಾತಿಗೆ ತಪ್ಪಲ್ಲ. ಎಲ್ಲಾ 17 ಜನರನ್ನು ಮಂತ್ರಿ ಮಾಡೇ ಮಾಡುತ್ತಾರೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ವ್ಯಂಗ್ಯವಾಡಿದ್ದಾರೆ.

    ಮಂಡ್ಯದಲ್ಲಿ ಮಾತನಾಡಿದ ಪುಟ್ಟರಾಜು, ಬಿಜೆಪಿಯಲ್ಲಿ ಗೆದ್ದ ಶಾಸಕರಿಗೆ ಮಾತ್ರ ಮಂತ್ರಿಸ್ಥಾನ ಸೋತವರಿಗೆ ಸಿಗಲ್ಲ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪ ಅವರಿಗೆ ನಾವು ಹಿಂದೆ ಅಧಿಕಾರ ಕೊಡದೇ ಮಾತಿಗೆ ತಪ್ಪಿದ್ದಾರೆಂದು ಜೆಡಿಎಸ್‍ನ ಟೀಕೆ ಮಾಡುತ್ತಿದ್ದರು. ಈಗ ಯಡಿಯೂರಪ್ಪ ಅವರು ಈ ರೀತಿಯ ಟೀಕೆ ಮಾಡಿಸಿಕೊಳ್ಳಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.

    ಅವರು ನಮ್ಮ ಮಂಡ್ಯದ ಗಂಡು ಎಂದಿಗೂ ಮಾತಿಗೆ ತಪ್ಪಲ್ಲ. ಎಲ್ಲಾ 17 ಜನರಿಗೂ ಸಚಿವ ಸ್ಥಾನ ನೀಡುತ್ತಾರೆ. ಅವರು ಎಂದೂ ಸಹ ಮಾತಿಗೆ ತಪ್ಪಿಲ್ಲ. ಕೊಟ್ಟ ಮಾತಿನ ಹಾಗೆ ಯಡಿಯೂರಪ್ಪ ಅವರು ನಡೆದುಕೊಳ್ಳುತ್ತಾರೆ ಎಂದರು.