Tag: ministers

  • 60% ಕಮಿಷನ್ ಆರೋಪ ಹೊತ್ತಲ್ಲೇ ಸರ್ಕಾರದ ಆರು ಸಚಿವರಿಗೆ ಪತ್ರ

    60% ಕಮಿಷನ್ ಆರೋಪ ಹೊತ್ತಲ್ಲೇ ಸರ್ಕಾರದ ಆರು ಸಚಿವರಿಗೆ ಪತ್ರ

    – 30 ಸಾವಿರ ಕೋಟಿ ಹಣ ಪಾವತಿಯಾಗ್ಬೇಕು: ಗುತ್ತಿಗೆದಾರರ ಸಂಘದಿಂದ ಪತ್ರ

    ಬೆಂಗಳೂರು: 60% ಕಮಿಷನ್ ಆರೋಪ ಹೊತ್ತಲ್ಲೇ ಸರ್ಕಾರದ ಆರು ಸಚಿವರಿಗೆ ರಾಜ್ಯ ಗುತ್ತಿಗೆದಾರರ ಸಂಘ (Karnataka State Contractors Association) ಪತ್ರ ಬರೆದಿದೆ.

    ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ದಿನೇಶ್ ಗುಂಡೂರಾವ್, ಹೆಚ್‌ಸಿ ಮಹಾದೇವಪ್ಪ, ಜಮೀರ್ ಅಹ್ಮದ್, ಪ್ರಿಯಾಂಕ್ ಖರ್ಗೆ, ಬೋಸರಾಜ್‌ಗೆ ಪತ್ರ ಬರೆಯಲಾಗಿದೆ.

    ಬಾಕಿ ಹಣ ಬಿಡುಗಡೆ ಆಗದಿದ್ದರೆ ದೊಡ್ಡ ಹೋರಾಟ ಮಾಡುವುದಾಗಿ ಗುತ್ತಿಗೆದಾರರು ಸರ್ಕಾರದ ಸಚಿವರುಗೆ ಪತ್ರ ಮೂಲಕ ಎಚ್ಚರಿಸಿದ್ದಾರೆ. ಹಣ ಪಾವತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಉಲ್ಲೇಖಿಸಲಾಗಿದೆ.

    ಹಣ ಪಾವತಿ ವಿಚಾರದಲ್ಲಿ ಇಲಾಖೆಯ ಅಧಿಕಾರಿಗಳು ಕೊಡುತ್ತಿರುವ ಉತ್ತರಕ್ಕೆ ಗುತ್ತಿಗೆದಾರರ ಸಂಘ ಗರಂ ಆಗಿದೆ. ಹಣ ಪಾವತಿ ವಿಚಾರ ಆದ್ರೆ ಮಂತ್ರಿಗಳನ್ನೇ ಭೇಟಿ ಮಾಡಿ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆಂದು ಪತ್ರದಲ್ಲಿ ತಿಳಿಸಲಾಗಿದೆ.

    ಸಚಿವರು ಕೊಟ್ಟ ಪಟ್ಟಿಯ ಪ್ರಕಾರ ಹಣ ಬಿಡುಗಡೆ ಆಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಜೇಷ್ಠತೆ ಕಡೆಗಣಿಸಿ ಹಣ ಬಿಡುಗಡೆ ಮಾಡಲು ಸಚಿವರು ಸೂಚಿಸಿದ್ದಾರೆ. ಜೇಷ್ಠತೆ ಆಧರಿಸಿ ಹಣ ಪಾವತಿ ಆದರೆ ಎಲ್ಲರಿಗೂ ಅನ್ಯಾಯ ಆಗುತ್ತೆ ಅಂತಾ ಪತ್ರದಲ್ಲಿ ಹೇಳಿದ್ದಾರೆ.

    ಸುಮಾರು 30 ಸಾವಿರ ಕೋಟಿಯಷ್ಟು ಹಣ ಪಾವತಿಯಾಗಬೇಕಿದೆ. ಬಾಕಿ ಹಣ ಬಿಡುಗಡೆ ಆಗದಿದ್ದರೆ ದೊಡ್ಡ ಹೋರಾಟ ಮಾಡುತ್ತೇವೆ. 7 ದಿನಗಳ ಒಳಗೆ ಗುತ್ತಿಗೆದಾರರ ಸಂಘದ ಸಭೆ ಕರೆದು ಸಮಸ್ಯೆ ಬಗೆಹರಿಸದಿದ್ದರೆ ಮುಖ್ಯಮಂತ್ರಿಗಳ ಗಮನಕ್ಕೆ ತರಲು ತಯಾರಿ ಮಾಡಿದ್ದೇವೆಂದು ಗುತ್ತಿಗೆದಾರರ ಸಂಘ ಎಚ್ಚರಿಸಿದೆ.

  • ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಕೆಶಿ ಮನವಿ

    ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಕೆಶಿ ಮನವಿ

    ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ (Neighboring Affected Areas) ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಮನವಿ ಮಾಡಿದ್ದಾರೆ.

    ರಾಜ್ಯದಲ್ಲಿ ಈ ವರ್ಷ ಭಾರೀ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ. ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ ಎಂದು ನೆನಪಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ ಸಿಬಿಐ ತನಿಖೆ ಮಾಡಿದ್ರೆ ಬಿಎಸ್‌ವೈ ಇದ್ದಾನೋ, ಬಿವೈವಿ ಇದ್ದಾನೋ ಎಂದು ಗೊತ್ತಾಗುತ್ತೆ: ಯತ್ನಾಳ್

    ಸಚಿವರು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೇ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ. ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ ಎಂದು ಕರೆಕೊಟ್ಟಿದ್ದಾರೆ. ಇದನ್ನೂ ಓದಿ: ಕೃಷ್ಣಾ ನದಿ ಪ್ರವಾಹದಿಂದ ದ್ವೀಪದಂತಾದ ಗ್ರಾಮ – ಮೂವರು ಗರ್ಭಿಣಿಯರ ಸ್ಥಳಾಂತರ

  • ಸಿದ್ದು ಸಂಪುಟದ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ

    ಸಿದ್ದು ಸಂಪುಟದ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ

    ಬೆಳಗಾವಿ: ಓರ್ವ ಸ್ವಾಮೀಜಿ ಸೇರಿ ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟದ ಮೂವರು ಸಚಿವರಿಗೆ (Ministers) ಅನಾಮಿಕನೋರ್ವ ಜೀವ ಬೆದರಿಕೆ ಪತ್ರ (Life Threat Letter) ಬರೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

    ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀ ಸೇರಿ ಮೂವರು ಸಚಿವರಿಗೆ ಅನಾಮಧೇಯ ವ್ಯಕ್ತಿಯೋರ್ವ ಜೀವ ಬೆದರಿಕೆ ಪತ್ರ ಬರೆದಿದ್ದು, ಸಚಿವ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಹೆಸರನ್ನು ಉಲ್ಲೇಖಿಸಿ ಜೀವ ಬೆದರಿಕೆ ಹಾಕಿದ್ದಾನೆ. ಇಷ್ಟು ಮಾತ್ರವಲ್ಲದೇ ಹಲವು ಪ್ರಗತಿಪರ ವಿಚಾರವಾದಿಗಳಿಗೂ ಈ ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. ಇದನ್ನೂ ಓದಿ: ಡಿಸಿಎಂ ತಗೊಂಡು ಏನ್ ಮಾಡ್ಬೇಕು, ಆದ್ರೆ ಲಿಂಗಾಯತರು ಸಿಎಂ ಆಗ್ಬೇಕು: ಶಾಮನೂರು ಕಿಡಿ

    ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲೂರು ನಿಷ್ಕಲಮಂಟಪ ಆಶ್ರಮಕ್ಕೆ ಸೆಪ್ಟೆಂಬರ್ 20ರಂದು ಈ ಜೀವ ಬೆದರಿಕೆ ಪತ್ರ ಬಂದಿದೆ. ಕಳೆದ ತಿಂಗಳಷ್ಟೇ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಈಗ ಮತ್ತೆ ನಿಷ್ಕಲಮಂಟಪಕ್ಕೆ ಇನ್ನೊಂದು ಜೀವ ಬೆದರಿಕೆ ಪತ್ರವನ್ನು ಕಳುಹಿಸಲಾಗಿದೆ. ಇದನ್ನೂ ಓದಿ: ಹಿಂದುತ್ವದ ಮೇಲೆ ಆತನಿಗೆ ಒಲವಿತ್ತು, ಪತ್ರದಲ್ಲಿ ಮನವಿ ಮಾಡಿರಬಹುದು – ಆರೋಪಿ ಶಿವಾಜಿರಾವ್ ಜಾಧವ್ ಸಹೋದರ

    ಪತ್ರದಲ್ಲಿ ಏನಿದೆ?
    ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ ಅಥವಾ ಸಾವಿನ ಪತ್ರವಂತಾದರೂ ತಿಳಿ. ನಾನು ನಿನ್ನ ಜೊತೆ ತಮಾಷೆ ಮಾಡುತ್ತಿಲ್ಲ. ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತದೆ. ನೀನು ಮನುಷ್ಯ ರೂಪದಲ್ಲಿರುವ ರಾಕ್ಷಸ. ಹಿಂದೂ ಧರ್ಮ ದೇವತೆಗಳನ್ನು ನಿಂದಿಸುವ ನೀನು ರಾಕ್ಷಸನೇ ಸರಿ. ನಿನ್ನ ಜೀವನದ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದಿಯಾ. ನಿನ್ನ ಹತ್ಯೆ ಬಿಟ್ಟರೆ ಬೇರೆ ದಾರಿಯೇ ಇಲ್ಲ. ನಿನ್ನಂಥ ದುಷ್ಟ ರಾಕ್ಷಸ ಸಂತತಿಯ ಸಂಹಾರವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಇದನ್ನೂ ಓದಿ: ವ್ಯಕ್ತಿಗಳ ಬ್ರೈನ್ ವಾಷ್ ಮಾಡಿ ಆಯುಧ ಮಾಡುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ: ಕುಂ.ವೀರಭದ್ರಪ್ಪ

    ಹಲವು ವಿಚಾರವಾದಿಗಳು ಹಾಗೂ ಪ್ರಗತಿಪರರ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿದ್ದು, ರಾಜ್ಯದ ಮೂವರು ಸಚಿವರು, ಸಾಹಿತಿಗಳ ಹೆಸರುಗಳನ್ನು ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಎಸ್‌ಜಿ ಸಿದ್ದರಾಮಯ್ಯ, ಕೆ ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಭಾಸ್ಕರ್ ಪ್ರಸಾದ್, ಪ್ರೊ.ಭಗವಾನ್, ಪ್ರೊ.ಮಹೇಶ್‌ಚಂದ್ರ, ಬಿಟಿ ಲಲಿತಾ ನಾಯಕ್, ನಟ ಚೇತನ್, ನಟ ಪ್ರಕಾಶರಾಜ್, ಪ್ರಿಯಾಂಕ್ ಖರ್ಗೆ, ಜಾರಕಿಹೊಳಿ, ದಿನೇಶ್ ಗುಂಡೂರಾವ್, ದ್ವಾರಕಾನಾಥ, ದೇವನೂರು ಮಹದೇಪ್ಪ, ಬಿಎಲ್ ವೇಣು, ನೀವು ನಿಮ್ಮ ತಂದೆ ತಾಯಿಗಳಿಗೆ ಹುಟ್ಟಿದ್ದರೆ ಕೇಳುವ ಪ್ರಶ್ನೆಗೆ ಉತ್ತರ ಕೊಡಿ ಎಂದು ಅನಾಮಧೇಯ ಸವಾಲೆಸೆದಿದ್ದಾನೆ. ಇದನ್ನೂ ಓದಿ: ರಾಯಚೂರಿನಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು

    ಮತಾಂಧ ಮುಸ್ಲಿಮರು, ಪಾಕಿಸ್ತಾನಿಗಳು, ಭಯೋತ್ಪಾದಕರು ಮಾಡುತ್ತಿರುವುದು ತಪ್ಪು ಎಂದು ಹೇಳುವ ತಾಕತ್ತು ನಿಮ್ಮಲ್ಲಿದೆಯೇ? ದೇಶದ ಒಳಗೆ ಇದ್ದುಕೊಂಡು ಪಾಕ್ ನಾಯಿಗಳು ಮಾಡುತ್ತಿರುವುದು ತಪ್ಪು ಎಂದು ಹೇಳುವ ಧೈರ್ಯ ನಿಮ್ಮಲ್ಲಿದೆಯೇ? ಧೈರ್ಯವಿದ್ದರೆ ಹೇಳಿ. ಇಲ್ಲವಾದರೆ ನಿಮ್ಮ ಕೊನೆಯ ದಿನಗಳನ್ನು ಎಣಿಸಿ. ನಿಜಗುಣಾನಂದ ನಿನ್ನ ಕೊನೆಯ ದಿನಗಳನ್ನು ಎಣಿಸು ಎಂದು ಪತ್ರದ ಮೂಲಕ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಜಟಾಪಟಿ ಪ್ರಕರಣ – ಎಫ್‌ಐಆರ್ ದಾಖಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಂಗಾಳದ ಶಾಸಕ, ಮಂತ್ರಿಗಳಿಗೆ ಸಂಬಳ ಬಂಪರ್ ಹೈಕ್ – ತನಗೆ ವೇತನ ಬೇಡ ಎಂದ ಮಮತಾ

    ಬಂಗಾಳದ ಶಾಸಕ, ಮಂತ್ರಿಗಳಿಗೆ ಸಂಬಳ ಬಂಪರ್ ಹೈಕ್ – ತನಗೆ ವೇತನ ಬೇಡ ಎಂದ ಮಮತಾ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಗುರುವಾರ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಸಚಿವರು, ಕ್ಯಾಬಿಬೆಟ್ ಮಂತ್ರಿಗಳ ಮಾಸಿಕ ವೇತನವನ್ನು (Salary) ಬಂಪರ್ ಹೆಚ್ಚಳ ಮಾಡಿದ್ದಾರೆ. ಆದರೂ ಬ್ಯಾನರ್ಜಿ ತನಗೆ ಯಾವುದೇ ವೇತನ ಬೇಡ ಎಂದು ಹೇಳಿದ್ದಾರೆ.

    ಬಂಗಾಳದ ಸಚಿವರು ಹಾಗೂ ಮಂತ್ರಿಗಳ ಮಾಸಿಕ ವೇತನವನ್ನು ಪ್ರತಿ ವರ್ಗಕ್ಕೆ 40,000 ರೂ.ನಷ್ಟು ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳದಿಂದ ಶಾಸಕರಿಗೆ ಮಾಸಿಕವಾಗಿ 10,000 ರೂ. ಬದಲು 50,000 ರೂ. ಆಗಿದೆ. ಅದೇ ರೀತಿ ಮಂತ್ರಿಗಳಿಗೆ 10,900 ರೂ. ಬದಲು 50,900 ರೂ. ನೀಡಲಾಗುತ್ತದೆ.

    ಸಂಪುಟದ ಸಚಿವರಾದರೆ ವೇತನ 11,000 ರೂ. ನಿಂದ 51,000 ರೂ. ಹೆಚ್ಚಳವಾಗಿದೆ. ಕ್ಯಾಬಿನೆಟ್ ಮಂತ್ರಿಗಳು, ರಾಜ್ಯ ಸಚಿವರು ಮತ್ತು ಶಾಸಕರು ಮಾಸಿಕ ವೇತನದ ಜೊತೆಗೆ ಅರ್ಹರಾಗಿರುವ ಇತರ ಹೆಚ್ಚುವರಿ ಸವಲತ್ತುಗಳು ಮತ್ತು ಭತ್ಯೆಗಳು ಹಿಂದೆ ಇದ್ದಂತೆಯೇ ಮುಂದುವರಿಯಲಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಇನ್ನೂ ತಮ್ಮ ಪೂರ್ವಾಶ್ರಮ RSS ಗುಂಗಿನಲ್ಲಿದ್ದಂತಿದೆ – ಸಿದ್ದರಾಮಯ್ಯ ಕಿಡಿ

    ಇದರರ್ಥ ಶಾಸಕರು ಪಡೆಯುವ ನಿಜವಾದ ಮಾಸಿಕ ಪಾವತಿಯೊಂದಿಗೆ ಸಂಬಳ, ಭತ್ಯೆಗಳು ಮತ್ತು ಸವಲತ್ತುಗಳು ಈಗ ಮಾಸಿಕವಾಗಿ 81,000 ರೂ.ಗಳಿಂದ 1.21 ಲಕ್ಷ ರೂ.ಗೆ ಹೆಚ್ಚಾಗುತ್ತದೆ ಎಂದು ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅದೇ ರೀತಿ ಇನ್ನು ಮುಂದೆ ಸಚಿವರು ಪಡೆಯುವ ನಿಜವಾದ ಮಾಸಿಕ ವೇತನವನ್ನು ತಿಂಗಳಿಗೆ 1.10 ಲಕ್ಷ ರೂ.ಗಳಿಂದ ತಿಂಗಳಿಗೆ ಸುಮಾರು 1.50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುತ್ತಿದೆ.

    ಗುರುವಾರ ರಾಜ್ಯ ವಿಧಾನಸಭೆಯಲ್ಲಿ ವರ್ಧಿತ ವೇತನವನ್ನು ಘೋಷಿಸಿದ ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಶಾಸಕರ ವೇತನ ಭಾರತದ ಇತರ ರಾಜ್ಯಗಳ ಶಾಸಕರಿಗೆ ಹೋಲಿಸಿದರೆ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ವೇತನವನ್ನು ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಮಮತಾ ಬ್ಯಾನರ್ಜಿ ಈ ಹಿಂದಿನಿಂದಲೂ ಸಿಎಂ ಸ್ಥಾನಕ್ಕೆ ವೇತನವನ್ನು ಪಡೆಯದ ಹಿನ್ನೆಲೆ ತನಗೆ ಯಾವುದೇ ವೇತನ ಬೇಡ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ, ತಪ್ಪು ಮಾಹಿತಿ ಕೊಟ್ಟವರ ವಿರುದ್ಧ ಕ್ರಮ: ಹೆಬ್ಬಾಳ್ಕರ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸುವ ಷಡ್ಯಂತ್ರದ ಬಗ್ಗೆ ತಿಳಿದಿಲ್ಲ: ಸಿಎಂ

    ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸುವ ಷಡ್ಯಂತ್ರದ ಬಗ್ಗೆ ತಿಳಿದಿಲ್ಲ: ಸಿಎಂ

    ಹಾವೇರಿ: ಸಿಂಗಾಪುರದಲ್ಲಿ (Singapore) ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿಕೆ ಶಿವಕುಮಾರ್ (DK Shivakumar) ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

    ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ, ಈಗ ಮಳೆಯಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಮೂಢ ನಂಬಿಕೆಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ ಮನೆಗಳು ಬಿದ್ದುಹೋಗಿದ್ದವು. ಪ್ರವಾಹ ಉಂಟಾಗುವುದು ಹಾಗೂ ಮಳೆ ಕೊರತೆಯಾಗುವುದು ಸ್ವಾಭಾವಿಕ. ಈಗ ಹವಾಮಾನ ಬದಲಾವಣೆ ಇದೆ. ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗುವುದು ಜುಲೈನಲ್ಲಿ ಆಗುತ್ತಿದೆ. ಜಗತ್ತಿನ ಎಲ್ಲೆಡೆ ಹವಾಮಾನ ಬದಲಾವಣೆಯಾಗುತ್ತಿದೆ ಎಂದರು. ಇದನ್ನೂ ಓದಿ: ಯಾರು ಯಾರಿಗೂ ಪತ್ರ ಬರೆದಿಲ್ಲ – ಇದೆಲ್ಲಾ ಊಹಾಪೋಹದ ಸುದ್ದಿ: ಡಿಕೆಶಿ

    ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ, ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15-20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಅವರು ಒಂದಾದರೂ, ಒಂದಾಗದೇ ಇದ್ದರು ಗೆಲ್ಲುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಸಚಿವರ ವಿರುದ್ಧ ಶಾಸಕರ ಅಸಮಾಧಾನ – ಸಿಎಂಗೆ 25 ಶಾಸಕರ ದೂರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಂತಿಮಗೊಂಡ ಸಚಿವರ ಪಟ್ಟಿ – ಯಾವ ಜಿಲ್ಲೆಗೆ ಎಷ್ಟು ಮಂತ್ರಿಗಿರಿ?

    ಅಂತಿಮಗೊಂಡ ಸಚಿವರ ಪಟ್ಟಿ – ಯಾವ ಜಿಲ್ಲೆಗೆ ಎಷ್ಟು ಮಂತ್ರಿಗಿರಿ?

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ಸರ್ಕಾರದ ಸಚಿವರ (Ministers) ಪಟ್ಟಿ ಅಂತಿಮಗೊಂಡಿದ್ದು, ಸಂಪುಟದ ಎಲ್ಲ 34 ಸ್ಥಾನಗಳು ಭರ್ತಿಯಾಗಿವೆ. ಶನಿವಾರ ಬೆಳಗ್ಗೆ 11:45ಕ್ಕೆ ನೂತನ ಮಂತ್ರಿಗಳು ರಾಜಭವನದ (Raj Bhavan) ಗಾಜಿನ ಮನೆಯಲ್ಲಿ ಪ್ರಮಾಣವಚನ (Oath) ಸ್ವೀಕರಿಸಲಿದ್ದಾರೆ. ಸಂಪುಟದಲ್ಲಿ 22 ಜಿಲ್ಲೆಗಳಿಗೆ ಮಂತ್ರಿ ಭಾಗ್ಯ ದೊರೆತಿದೆ.

    ಅಲ್ಲದೆ 9 ಜಿಲ್ಲೆಗಳಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿಲ್ಲ. ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೋಲಾರ, ವಿಜಯನಗರ, ಹಾವೇರಿ ಜಿಲ್ಲೆಗಳಿಗೆ ಮಂತ್ರಿ ಸ್ಥಾನ ಕೈತಪ್ಪಿದೆ. ಈ ಮೂಲಕ 22 ಜಿಲ್ಲೆಗಳಿಗೆ ಮಂತ್ರಿಭಾಗ್ಯ ದೊರೆತಂತಾಗಿದೆ. ಯಾವೆಲ್ಲ ಜಿಲ್ಲೆಗೆ ಎಷ್ಟು ಮಂತ್ರಿ ಸ್ಥಾನ ನೀಡಲಾಗಿದೆ ಎಂಬ ಪಟ್ಟಿಯನ್ನು ಕೆಳಗೆ ನೀಡಲಾಗಿದೆ. ಇದನ್ನೂ ಓದಿ: ಸಿದ್ದು ಸಂಪುಟದಲ್ಲಿ ಹಲವರಿಗೆ ಸಚಿವ ಸ್ಥಾನ ಮಿಸ್

    ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ:
    ಹೈದ್ರಾಬಾದ್ ಕರ್ನಾಟಕ – 8
    ಬೀದರ್ – 02
    ಕಲಬುರಗಿ – 02
    ರಾಯಚೂರು – 01
    ಕೊಪ್ಪಳ 01
    ಯಾದಗಿರಿ 01
    ಬಳ್ಳಾರಿ 01

    ಕಿತ್ತೂರು ಕರ್ನಾಟಕ – 7
    ಗದಗ – 01
    ಧಾರವಾಡ – 01
    ವಿಜಯಪುರ -02
    ಬಾಗಲಕೋಟೆ -01
    ಬೆಳಗಾವಿ 02

    ಹಳೆ ಮೈಸೂರು – 9
    ಮೈಸೂರು (ಸಿಎಂ ಸೇರಿ) -03
    ಮಂಡ್ಯ – 01
    ರಾಮನಗರ – 01
    ತುಮಕೂರು – 02
    ಚಿಕ್ಕಬಳ್ಳಾಪುರ – 01
    ಬೆಂಗಳೂರು ಗ್ರಾಮಾಂತರ – 01

    ಮಧ್ಯ ಮತ್ತು ಮಲೆನಾಡು ಕರ್ನಾಟಕ – 3
    ದಾವಣಗೆರೆ – 01
    ಚಿತ್ರದುರ್ಗ – 01
    ಶಿವಮೊಗ್ಗ – 01

    ಕರಾವಳಿ ಕರ್ನಾಟಕ – 1
    ಉತ್ತರ ಕನ್ನಡ – 01

    ಬೆಂಗಳೂರು – 6
    ಬ್ಯಾಟರಾಯನಪುರ – 1
    ಚಾಮರಾಜಪೇಟೆ -1
    ಸರ್ವಜ್ಞ ನಗರ – 1
    ಬಿಟಿಎಂ ಲೇಔಟ್ – 1
    ಹೆಬ್ಬಾಳ – 1
    ಗಾಂಧಿನಗರ – 1

  • ಸಮುದಾಯದ ಐವರಿಗೆ ಸಚಿವ ಸ್ಥಾನ, 1 ಡಿಸಿಎಂ ಕೊಡಿ – ಮುಸ್ಲಿಂ ಮುಖಂಡರ ಆಗ್ರಹ

    ಸಮುದಾಯದ ಐವರಿಗೆ ಸಚಿವ ಸ್ಥಾನ, 1 ಡಿಸಿಎಂ ಕೊಡಿ – ಮುಸ್ಲಿಂ ಮುಖಂಡರ ಆಗ್ರಹ

    ಬೆಂಗಳೂರು: ಕಾಂಗ್ರೆಸ್‍ನಿಂದ (Congress) ಆಯ್ಕೆಯಾದ 9 ಮಂದಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಲ್ಲಿ 5 ಶಾಸಕರಿಗೆ ಸಚಿವ ಸ್ಥಾನ (Ministers) ಮತ್ತು ಒಬ್ಬರಿಗೆ ಉಪಮುಖ್ಯಮಂತ್ರಿ (DCM) ಸ್ಥಾನ ನೀಡಬೇಕು ಎಂದು ರಾಜ್ಯ ಸುನ್ನಿ ಉಲ್ಮಾ ಬೋರ್ಡ್ (Sunni Ulma Board) ಹಾಗೂ ಜಾಮೀಯ ಹಜರತ್ ಬಿಲಾಲ್ ಮುಖಂಡರು ಆಗ್ರಹಿಸಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖಂಡರು ಕಾಂಗ್ರೆಸ್ 15 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ಅದರಲ್ಲಿ 9 ಮಂದಿ ಗೆದ್ದಿದ್ದಾರೆ. ಕರ್ನಾಟಕದಲ್ಲಿ 73 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಥಾನ ಗಿಟ್ಟಿಸಲು ಮುಸ್ಲಿಂ ಮತದಾರರು ಕಾರಣರಾಗಿದ್ದಾರೆ. ರಾಜ್ಯದ 88% ಮುಸ್ಲಿಂ ಮತದಾರರು ಕಾಂಗ್ರೆಸ್‍ಗೆ ಮತದಾನ ಮಾಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಗದ್ದುಗೆ ಏರಿದ ಕೈಗೆ ಅಣ್ಣಾಮಲೈ ಅಭಿನಂದನೆ

    ಕರ್ನಾಟಕದ ಇತಿಹಾಸದಲ್ಲಿ ಯಾರು ಕೂಡ ಮುಸ್ಲಿಂ ಸಮುದಾಯದಿಂದ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿಲ್ಲ. ಇದರಿಂದಾಗಿ ಡಿಸಿಎಂ ಸ್ಥಾನವನ್ನಾದರೂ ಕಾಂಗ್ರೆಸ್ ನೀಡಬೇಕು. 9 ಶಾಸಕರಲ್ಲಿ ಯಾರು ಹಿರಿಯರಿದ್ದಾರೆ ಅವರನ್ನು ಗುರುತಿಸಿ ಡಿಸಿಎಂ ಸ್ಥಾನ ನೀಡಲಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನನಗೆ ಅಧಿಕಾರದ ಆಸೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

  • ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ – ಬೆಳಗಾವಿ ಡಿಸಿ ಆದೇಶ

    ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ – ಬೆಳಗಾವಿ ಡಿಸಿ ಆದೇಶ

    ಬೆಳಗಾವಿ: ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದನ ಗಡಿ ಪ್ರವೇಶಕ್ಕೆ ನಿಷೇಧ ಹೇರಿ ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಡಿಸಿ ನಿತೇಶ್ ಪಾಟೀಲ್, ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದನ ಗಡಿ ಪ್ರವೇಶಕ್ಕೆ ಸಿಆರ್‌ಪಿಸಿ 1973 ಕಲಂ 144(3)ರ ಅನ್ವಯ ಪ್ರದತ್ತ ಅಧಿಕಾರ ಬಳಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿತ ಆದೇಶ ಮಾಡಿದ್ದಾರೆ. ಇದನ್ನೂ ಓದಿ: 47 ವರ್ಷದ ಹೋರಾಟದ ಬಳಿಕ ದತ್ತಪೀಠದಲ್ಲಿ ನೆರವೇರಿತು ಹಿಂದೂ ಅರ್ಚಕರಿಂದ ಪೂಜೆ

    ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ ಹಾಗೂ ಮಹಾರಾಷ್ಟ್ರದ ಗಡಿತಜ್ಞ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ್ ಮಾನೆಗೆ ನಿಷೇಧ ಹೊರಡಿಸಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗುವ ಸುಳಿವು – ಸಿಎಂ ನಿರ್ಧರಿಸುತ್ತಾರೆ ಎಂದ ದೇವೇಂದ್ರ ಫಡ್ನವಿಸ್

    ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿ ಕ್ರಮ ಕೈಗೊಂಡಿದ್ದಾರೆ. ಮಹಾರಾಷ್ಟ್ರದ ಸಚಿವರ ಆಗಮನದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ. ಭಾಷಾ ವೈಷಮ್ಯ ಬೆಳೆದು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರ ನೆಮ್ಮದಿ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಂಡು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗುವ ಸುಳಿವು – ಸಿಎಂ ನಿರ್ಧರಿಸುತ್ತಾರೆ ಎಂದ ದೇವೇಂದ್ರ ಫಡ್ನವಿಸ್

    ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗುವ ಸುಳಿವು – ಸಿಎಂ ನಿರ್ಧರಿಸುತ್ತಾರೆ ಎಂದ ದೇವೇಂದ್ರ ಫಡ್ನವಿಸ್

    ಬೆಳಗಾವಿ: ಮಹಾರಾಷ್ಟ್ರ (Maharashtra) ಗಡಿ ಸಮನ್ವಯಕ್ಕೆ ಸಚಿವರ (Ministers) ಬೆಳಗಾವಿ (Belagavi) ಭೇಟಿ ರದ್ದಾಗುವ ಬಗ್ಗೆ ಅನುಮಾನ ಮೂಡಿದೆ. ಈ ಬಗ್ಗೆ ಮಹಾರಾಷ್ಟ್ರ ಡಿಸಿಎಂ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ಬಗ್ಗೆ ಸಿಎಂ ನಿರ್ಧರಿಸುತ್ತಾರೆ ಎಂದು ಮುಂಬೈನಲ್ಲಿ ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಹೇಳಿದ್ದಾರೆ.

    ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ಆಗಲಿ, ಮಹಾರಾಷ್ಟ್ರ ಆಗಲಿ ನಿರ್ಣಯ ಕೈಗೊಳ್ಳಲಾಗುವುದಿಲ್ಲ. ಏನೇ ನಿರ್ಣಯ ಕೈಗೊಳ್ಳಬೇಕಿದ್ದರೂ ಸುಪ್ರೀಂ ಕೋರ್ಟ್ ತಗೆದುಕೊಳ್ಳುತ್ತದೆ. ಈ ಸಂದರ್ಭದಲ್ಲಿ ಯಾವುದೇ ಹೊಸ ವಿವಾದ ಸೃಷ್ಟಿಸುವುದು ಯೋಗ್ಯವಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

    ನಾಳೆ ಮಹಾಪರಿನಿರ್ವಾಹಣ ದಿನದ ನಿಮಿತ್ತ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಲಿದ್ದರು. ಸಚಿವರು ಕೈಗೊಂಡ ನಿರ್ಣಯ ಯಾರೂ ತಡೆಯಲು ಸಾಧ್ಯವಿಲ್ಲ. ಆದರೆ ಮಹಾಪರಿನಿರ್ವಾಹಣ ದಿನ ನಾವು ಈ ರೀತಿ ವಾದ ಸೃಷ್ಟಿಸುವುದು ಸರಿಯೇ? ನಾವು ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಈ ಬಗ್ಗೆ ಸಿಎಂ ಏಕನಾಥ್ ಶಿಂಧೆ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೋಡೋ ಯಾತ್ರೆ ವೇಳೆ ಮೋದಿ ಪರ ಘೋಷ – ತಲೆಕೆಡಿಸಿಕೊಳ್ಳದೇ ಗಾಳಿಯಲ್ಲಿ ಮುತ್ತು ತೇಲಿಸಿದ ರಾಗಾ

    ಮಹಾಪರಿನಿರ್ವಾಹಣ ದಿನ ಅತ್ಯಂತ ಮಹತ್ವದ ದಿನ. ಅಂದು ಯಾವುದೇ ಅಹಿತಕರ ಘಟನೆ ಆಗಬಾರದು. ಈ ದಿನ ಯಾವುದೇ ಪ್ರತಿಭಟನೆ ಆಗುವುದು ಯೋಗ್ಯವಲ್ಲ. ಭವಿಷ್ಯದಲ್ಲಿ ನಾವು ಬೆಳಗಾವಿಗೆ ಹೋಗೋದನ್ನು ಯಾರಿಂದಲೂ ತಡೆಯಲು ಆಗುವುದಿಲ್ಲ. ಸ್ವತಂತ್ರ್ಯ ಭಾರತದ ಯಾವುದೇ ಪ್ರದೇಶಕ್ಕೆ ಹೋಗಲು ಯಾರೂ ಯಾರನ್ನೂ ತಡೆಯಲಾಗಲ್ಲ. ಮಹಾಪರಿನಿರ್ವಾಹಣ ದಿನ ಇರುವುದರಿಂದ ಬೆಳಗಾವಿ ಭೇಟಿ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಂತಿಮ ನಿರ್ಧಾರ ಸಿಎಂ ಕೈಗೊಳ್ಳುತ್ತಾರೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಇದನ್ನೂ ಓದಿ: Gujarat Exit Poll Result: ಗುಜರಾತ್‌ನಲ್ಲಿ ಸತತ 7ನೇ ಬಾರಿ ಬಿಜೆಪಿಗೆ ಅಧಿಕಾರ

    Live Tv
    [brid partner=56869869 player=32851 video=960834 autoplay=true]

  • ಡಿ.6 ರಂದು ಬೆಳಗಾವಿಗೆ ಹೋಗಿಯೇ ತೀರುತ್ತೇವೆ – ಬೊಮ್ಮಾಯಿಗೆ ʼಮಹಾʼ ಸಚಿವರ ಸವಾಲು

    ಡಿ.6 ರಂದು ಬೆಳಗಾವಿಗೆ ಹೋಗಿಯೇ ತೀರುತ್ತೇವೆ – ಬೊಮ್ಮಾಯಿಗೆ ʼಮಹಾʼ ಸಚಿವರ ಸವಾಲು

    ಬೆಳಗಾವಿ: ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್ (Chandrakant Patil) ಮತ್ತೆ ಉದ್ಧಟತನ ಪ್ರದರ್ಶನ ಮಾಡಿದ್ದು, ಡಿಸೆಂಬರ್ 6 ರಂದು ನಾವು ಬೆಳಗಾವಿಗೆ (Belagavi) ಹೋಗಿಯೇ ತೀರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ (Basvaraj Bommai) ಸವಾಲು ಹಾಕಿದ್ದಾರೆ.

    ಕರ್ನಾಟಕಕ್ಕೆ (Karnataka) ಭೇಟಿ ನೀಡದಂತೆ ಸಂದೇಶ ರವಾನಿಸಿದ್ದೇವೆ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಚಂದ್ರಕಾಂತ್‌ ಪಾಟೀಲ್, ಡಿಸೆಂಬರ್ 6 ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ. ನನಗೆ ಯಾವುದೇ ಫ್ಯಾಕ್ಸ್ ಆಗಲಿ, ಬೊಮ್ಮಾಯಿಯ ಪತ್ರವಾಗಲಿ ತಲುಪಿಲ್ಲ. ನಾನು ಡಿಸೆಂಬರ್ 3 ರಂದು ಹೋಗಬೇಕಿತ್ತು. ಆದ್ರೆ ಡಿಸೆಂಬರ್ 6 ರಂದು ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಹಣ ದಿನ ಇದೆ. ಅಂದು ಬೆಳಗಾವಿಯಲ್ಲಿ ಹಲವು ಕಾರ್ಯಕ್ರಮಗಳು ಇರುತ್ತವೆ. ಎಲ್ಲರೂ ಸಹ ನನಗೆ ಡಿ.6ರಂದು ಆಗಮಿಸುವಂತೆ ವಿನಂತಿಸಿದ್ದಾರೆ. ಹೀಗಾಗಿ ನಾನು ಡಿ.6ರಂದು ಬೆಳಗಾವಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಚಿರತೆ ಭೀತಿ; ಒಂಟಿಯಾಗಿ ಹೊರಗಡೆ ಓಡಾಡಬೇಡಿ – ವನ್ಯಜೀವಿ ತಜ್ಞರ ಎಚ್ಚರಿಕೆ

    ಇದಲ್ಲದೇ ಡಿ.6ರಂದು ಹಲವು ಕಾರ್ಯಕ್ರಮಗಳು ಸಹ ಇವೆ. ಗಡಿ ಭಾಗದ ಜನ, ಗಡಿ ಹೋರಾಟದಲ್ಲಿ ಮೃತಪಟ್ಟ ಹುತಾತ್ಮರ ನಿವಾಸಕ್ಕೆ ಭೇಟಿ ನೀಡುವುದಿದೆ. ಈ ಪೈಕಿ ಅಂಬೇಡ್ಕರ್ ಉದ್ಯಾನವನದಲ್ಲಿರುವ ಬೃಹತ್ ಅಂಬೇಡ್ಕರ್ ಪ್ರತಿಮೆಗೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದೇನೆ. ಕರ್ನಾಟಕ ಸರ್ಕಾರಕ್ಕೆ ನಾನು ಹೇಳಬಯಸುತ್ತೇನೆ, ನಾವು ಯಾವುದೇ ಸಂಘರ್ಷ ಮಾಡಲು ಬರುತ್ತಿಲ್ಲ. 865 ಮರಾಠಿ ಭಾಷಿಕ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಏನು ಸೌಲಭ್ಯ ನೀಡಬಹುದು ಎಂಬ ಬಗ್ಗೆ ಚರ್ಚಿಸಲು ತೆರಳುತ್ತಿದ್ದೇನೆ. 865 ಹಳ್ಳಿಗಳು ಸಮಾಧಾನದಿಂದ ಇದ್ದಾರೆ ಎಂದರೆ ಅದರ ಲಾಭ ನಿಮಗೆ ಇದೆ. ಕರ್ನಾಟಕ ಸರ್ಕಾರದ ನಾಗರಿಕರಿಗೆ ನೀವು ಸೌಲಭ್ಯ ನೀಡಲೇಬೇಕಾಗುತ್ತದೆ. ಆದ್ರೆ 865 ಮರಾಠಿ ಭಾಷಿಕ ಜನರನ್ನು ಮಹಾರಾಷ್ಟ್ರದ ನಾಗರಿಕರೆಂದು ನಾವು ಸೌಲಭ್ಯ ನೀಡುತ್ತೇವೆ. ಯಾವುದೇ ನಿಷೇಧ ಹೇರಿದರೂ ನಾನು ನಿಲ್ಲುವ ಮನುಷ್ಯನಲ್ಲ. ನನಗೆ ನೀವು ಧಮ್ಕಿ ಹಾಕಬೇಡಿ. ನಾವು ಎಚ್ಚರಿಕೆ ನೀಡಲು ಹೋಗುತ್ತಿದ್ದೇವೆ ಎಂದು ಅವರಿಗೆ ಅನಿಸುತ್ತಿದೆ. ಆದ್ರೆ, ನಾವು ಸಮನ್ವಯದಿಂದ ಜನರ ಮನಸ್ಥಿತಿ ತಿಳಿದು ಅವರಿಗೆ ಮಹಾರಾಷ್ಟ್ರ ಸರ್ಕಾರದ ನಿಲುವು ತಿಳಿಸಲು ತೆರಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಎಲ್ಲ ಹಿಂದೂಗಳನ್ನ ಕೊಲ್ಲಬಹುದಿತ್ತು – ನಿವೃತ್ತ ಜಡ್ಜ್ ವಸಂತ ಮುಳಸಾವಳಗಿ

    Live Tv
    [brid partner=56869869 player=32851 video=960834 autoplay=true]