Tag: ministers

  • ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ CM ಸೇರಿ ಬಿಜೆಪಿಯ ಹಿರಿಯ ಸಚಿವರೆಲ್ಲರೂ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ

    ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ CM ಸೇರಿ ಬಿಜೆಪಿಯ ಹಿರಿಯ ಸಚಿವರೆಲ್ಲರೂ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ

    ಬೆಂಗಳೂರು: ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    “ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು. ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ ಬಿಜೆಪಿ (BJP) ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡಾ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆಯ ಹಗರಣ ನಡೆಸಿದ ಸಂಸ್ಥೆಯ ಹೆಸರು ಬಿಜೆಪಿಯ ಸಚಿವರೊಬ್ಬರ ಒಡೆತನದ ಸಂಸ್ಥೆಯ ಹೆಸರಿನ ಜೊತೆ ತಾಳೆಯಾಗುವುದು ಕಾಕತಾಳೀಯವಾಗಿರಲಾರದು. ಅದೇ ರೀತಿ ಸಂಸ್ಥೆಯ ಕಚೇರಿ ಇರುವ ಸ್ಥಳದ ಸಮೀಪದಲ್ಲಿಯೇ ಈ ಸಂಶಯಿತ ಸಚಿವರ ಸಂಸ್ಥೆಗಳೂ ಇರುವುದು ಸಂಶಯವನ್ನು ಇನ್ನಷ್ಟು ಬಲಪಡಿಸುತ್ತದೆ. ಇದನ್ನೂ ಓದಿ: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಮತ ಮಾಹಿತಿಗೆ ಕನ್ನ: ಕಾಂಗ್ರೆಸ್ ಹೊಸ ಬಾಂಬ್

    ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗದೆ ಇಂತಹದ್ದೊಂದು ಹಗರಣ ನಡೆಸಲು ಸಾಧ್ಯವಿಲ್ಲ, ಅಧಿಕಾರಿಗಳು ಸ್ವಇಚ್ಚೆಯಿಂದ ಇಷ್ಟೊಂದು ಬೇಜವಾಬ್ದಾರಿಯಿಂದ ನಡೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯಮಂತ್ರಿಯವರಿಂದ ಹಿಡಿದು ಬಿಜೆಪಿ ಪಕ್ಷದ ಹಿರಿಯ ಸಚಿವರೆಲ್ಲರೂ (Ministers) ಭಾಗಿಯಾಗಿಯೇ ಈ ಕೆಲಸ ಮಾಡಿದ್ದಾರೆ. ‘ಮೇಲಿನವರ’ ರಕ್ಷಣೆ ಇಲ್ಲದೆ, ಯಾವುದೇ ಪೂರ್ವಪರ ಪರಿಶೀಲನೆ ನಡೆಸದೆ ಮಹಾನಗರ ಪಾಲಿಕೆ “ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಮತದಾರರ ಪಟ್ಟಿಯನ್ನು ಉಚಿತವಾಗಿ ಪರಿಷ್ಕರಣೆ ಮಾಡುವಂತೆ ಅನುಮತಿ ನೀಡಲು ಹೇಗೆ ಸಾಧ್ಯ? ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮತದಾರರ ಮಾಹಿತಿ ಸಂಗ್ರಹದ ಕೆಲಸವನ್ನು ಚುನಾವಣಾ ಆಯೋಗ ಮಾಡಬೇಕಾಗಿದ್ದು, ಇದನ್ನು ಖಾಸಗಿ ಸಂಸ್ಥೆಗೆ ಒಪ್ಪಿಸುವುದು ಅಪರಾಧವಾಗಿದೆ. ಬಿಬಿಎಂಪಿಯ ಅಧಿಕಾರಿಗಳೇ ಎಂದು ತಪ್ಪಾಗಿ ತಿಳಿದು ಮತದಾರರು ವೈಯಕ್ತಿಕ ಮಾಹಿತಿಯನ್ನು ನೀಡಿದ್ದಾರೆ. ಇದು ವಿಶ್ವಾಸ ದ್ರೋಹವಾಗಿದೆ.

    ಚಿಲುಮೆ ಸಂಸ್ಥೆಯ ಮಾಲೀಕ ಕೃಷ್ಣಪ್ಪ ರವಿಕುಮಾರ್ ಎಂಬವರು ಈ ಹಗರಣದ ರೂವಾರಿಯಾಗಿ ಮೇಲ್ನೋಟಕ್ಕೆ ಕಾಣಿಸಿದರೂ ಇದರ ಹಿಂದೆ ಬಿಜೆಪಿ ಸರ್ಕಾರದ ಉನ್ನತ ಸ್ಥಾನದಲ್ಲಿರುವವರ ಕೈವಾಡ ಖಂಡಿತ ಇದೆ. ಈ ಬಗ್ಗೆ ತನಿಖೆ ಮಾಡಿದರೆ ಮಾತ್ರ ಸತ್ಯ ಬಯಲಾಗಲು ಸಾಧ್ಯ. ಯಾವುದೋ ಒಂದು ಸಂಸ್ಥೆ ಅರ್ಜಿ ನೀಡಿ ತಾವು ಮತದಾರರನ್ನು ಜಾಗೃತಗೊಳಿಸುವ ಮತ್ತು ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯವನ್ನು ಉಚಿತವಾಗಿ ಮಾಡುವುದಾಗಿ ತಿಳಿಸಿದಾಗಲೇ ಸಂಸ್ಥೆಯ ಉದ್ದೇಶದ ಬಗ್ಗೆ ಸಂಶಯ ಮೂಡಬೇಕಿತ್ತು. ಹೀಗಿದ್ದರೂ 20 ಆಗಸ್ಟ್ 2022 ರಂದು ಬಿಬಿಎಂಪಿ ಆಯುಕ್ತರು ಅನುಮತಿ ನೀಡಿದ್ದಾರೆ. ಜಾಹೀರಾತು ನೀಡದೆ, ಟೆಂಡರ್ ಕರೆಯದೆ ಬಿಬಿಎಂಪಿ (BBMP) ಒಂದು ಖಾಸಗಿ ಕಂಪನಿಗೆ ಈ ಕಾರ್ಯವನ್ನು ನೀಡಲು ಹೇಗೆ ಸಾಧ್ಯ? ಅನುಮತಿ ನೀಡುವಾಗ ಸಂಸ್ಥೆಯ ಹಿನ್ನೆಲೆಯನ್ನು ಯಾಕೆ ಪರಿಶೀಲಿಸಿಲ್ಲ? ಉಚಿತ ಸೇವೆ ನೀಡುವ ಉದ್ದೇಶದ ಹಿನ್ನೆಲೆಯನ್ನು ಯಾಕೆ ತಿಳಿದುಕೊಂಡಿಲ್ಲ? ಚಿಲುಮೆ ಕಂಪನಿಯವರು ಬಿಬಿಎಂಪಿ ಮೂಲಕ ತಮ್ಮ ನೌಕರರಿಗೆ ಬೂತ್ ಮಟ್ಟದ ಅಧಿಕಾರಿ ಎಂಬ ಗುರುತಿನ ಚೀಟಿ ನೀಡಿದ್ದೇ ಅಕ್ರಮವಾಗಿದೆ. ಕಾನೂನಿನ ಪ್ರಕಾರ ಸರ್ಕಾರಿ, ಅರೆ-ಸರ್ಕಾರಿ ಹಾಗೂ ನಿವೃತ್ತ ಸರ್ಕಾರಿ ನೌಕರರಲ್ಲದವರು ಬೂತ್ ಲೆವೆಲ್ ಆಫೀಸರ್ ಆಗಲು ಅವಕಾಶ ಇಲ್ಲ. ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣ ಬಯಲಾಗಿರುವುದು ಗೊತ್ತಾದ ಕೂಡಲೇ ಬಿಬಿಎಂಪಿಯು ನಿಬಂಧನೆಗಳ ಉಲ್ಲಂಘನೆಯ ಕಾರಣ ನೀಡಿ 2022ರ ನ.16ರಂದು ಖಾಸಗಿ ಸಂಸ್ಥೆಗೆ ನೀಡಿರುವ ಗುತ್ತಿಗೆ ಆದೇಶವನ್ನು ರದ್ದು ಮಾಡಿದ್ದರೂ, ರದ್ದತಿಗೆ ನಿರ್ದಿಷ್ಟ ಕಾರಣ ನೀಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಹೊಂಬಾಳೆ ಸಂಸ್ಥೆಗೂ ಚಿಲುಮೆಗೂ ಸಂಬಂಧ ಇಲ್ಲ: ಕೈ ಆರೋಪಕ್ಕೆ ಅಶ್ವಥ್ ನಾರಾಯಣ್ ತಿರುಗೇಟು

    ಚಿಲುಮೆ ಸಂಸ್ಥೆಯ ಜೊತೆಗಿನ ಒಪ್ಪಂದವನ್ನು ರದ್ದುಮಾಡಿಕೊಂಡಿರುವ ಸಂದರ್ಭದಲ್ಲಿ ಈ ವರೆಗೆ ಅವರು ಸಂಗ್ರಹಿಸಿರುವ ಮಾಹಿತಿಯನ್ನು ಯಾಕೆ ಪಡೆದುಕೊಂಡಿಲ್ಲ? ಸಂಗ್ರಹಿಸಿದ ಮಾಹಿತಿಯನ್ನು ಬಿಬಿಎಂಪಿಗೆ ನೀಡಿದ್ದಾರೆಯೇ? ಬಿಬಿಎಂಪಿ ಅದನ್ನು ಹೇಗೆ ಬಳಸಿಕೊಂಡಿದೆ? ಸದ್ಯಕ್ಕೆ ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆ ಬೆಂಗಳೂರು ಮಹಾನಗರಕ್ಕಷ್ಟೇ ಸೀಮಿತವಾಗಿದ್ದರೂ ಶೀಘ್ರದಲ್ಲಿಯೇ ಇದನ್ನು ಬೇರೆ ಜಿಲ್ಲೆಗಳಿಗೂ ವಿಸ್ತರಿಸುವ ಯೋಚನೆ ಇತ್ತಂತೆ. ಈ ಬಗ್ಗೆಯೂ ತನಿಖೆ ನಡೆಯಬೇಕು. 40% ಭ್ರಷ್ಟಾಚಾರ ಮತ್ತು ಆಂತರಿಕ ಬಿಕ್ಕಟ್ಟಿನಲ್ಲಿ ಮುಳುಗಿಹೋಗಿರುವ ಬಿಜೆಪಿ ಸರ್ಕಾರದ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ವಿಶ್ವಾಸವನ್ನು ಕಳೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ವಾಮಮಾರ್ಗದಿಂದ ಗೆಲ್ಲಲು ಸಂಚು ಹೂಡಿದ್ದಾರೆ. ಇದರಲ್ಲಿ ಮುಖ್ಯಮಂತ್ರಿಗಳು ಮಾತ್ರವಲ್ಲ ಬಿಜೆಪಿ ಪಕ್ಷವೇ ಶಾಮೀಲಾಗಿದೆ. ಇಂತಹ ಹಗರಣಗಳಿಂದ ಜನತೆ ಚುನಾವಣಾ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳಲಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಕೇಂದ್ರ ಚುನಾವಣಾ ಆಯೋಗ ತಕ್ಷಣ ಮಧ್ಯಪ್ರವೇಶಿಸಿ ತನಿಖೆಯಲ್ಲಿ ಸರ್ಕಾರದ ನೀಡಬೇಕು. ಬೆಂಗಳೂರು ಮಹಾನಗರಪಾಲಿಕೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಈ ಹಗರಣವನ್ನು ನಡೆಸಿರುವಂತೆ ಮೇಲ್ನೊಟಕ್ಕೆ ಕಾಣುತ್ತಿದ್ದರೂ ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಇಡೀ ರಾಜ್ಯಕ್ಕೆ ಈ ಆಪರೇಷನ್ ವಿಸ್ತರಿಸುವ ದುರುದ್ದೇಶ ಇದ್ದಂತಿದೆ. ಇದನ್ನೂ ಓದಿ: ಮತ ಕನ್ನ ಆರೋಪ- ಚಿಲುಮೆ ಸಂಸ್ಥೆ ವಿರುದ್ಧ ತನಿಖೆಗೆ ಮುಂದಾದ ಬಿಬಿಎಂಪಿ

    ಮುಖ್ಯಮಂತ್ರಿ ಬೊಮ್ಮಾಯಿ ಬಿಬಿಎಂಪಿ ಆಯುಕ್ತರು ಹಾಗೂ ಇತರರ ವಿರುದ್ಧ ಇಂದೇ ದೂರು ದಾಖಲಿಸುತ್ತೇವೆ. ಈ ಕೂಡಲೇ ಬಸವರಾಜ ಬೊಮ್ಮಾಯಿ ಅವರನ್ನು ಬಂಧಿಸಬೇಕು. ಒಂದು ವೇಳೆ ಅವರ ವಿರುದ್ಧ ಎಫ್‍ಐಆರ್ (FIR) ದಾಖಲಿಸದಿದ್ದರೆ ಮುಂದಿನ ಕ್ರಮವನ್ನು ನಾವು ಕೈಗೊಳ್ಳುತ್ತೇವೆ. ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಿಸುವ ಈ ರಾಜಕೀಯ ಸಂಚನ್ನು ಬಯಲಿಗೆಳೆಯುವ ಮೂಲಕ ಮಾಧ್ಯಮ ಧರ್ಮವನ್ನು ಎತ್ತಿಹಿಡಿದರುವ ಮಾಧ್ಯಮ ಸಂಸ್ಥೆಗಳಿಗೆ ಅಭಿನಂದನೆಗಳು. ಈ ಸಂಸ್ಥೆಗಳ ಕಾರ್ಯ ಎಲ್ಲ ಮಾಧ್ಯಮ ಸಂಸ್ಥೆಗಳಿಗೆ ಮಾದರಿಯಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆರ್ಥಿಕ ಇಲಾಖೆಯೇ ಎಲ್ಲಾ ಮಾಡಬೇಕಾದ್ರೆ ಸಚಿವರು ಯಾಕೆ ಬೇಕು? ಆಯನೂರು ಮಂಜುನಾಥ್ ಆಕ್ರೋಶ

    ಆರ್ಥಿಕ ಇಲಾಖೆಯೇ ಎಲ್ಲಾ ಮಾಡಬೇಕಾದ್ರೆ ಸಚಿವರು ಯಾಕೆ ಬೇಕು? ಆಯನೂರು ಮಂಜುನಾಥ್ ಆಕ್ರೋಶ

    ಬೆಂಗಳೂರು: ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರೇ ಆಕ್ರೋಶಗೊಂಡು, ತರಾಟಗೆ ತೆಗೆದುಕೊಂಡ ಘಟನೆ ಇಂದು ವಿಧಾನ ಪರಿಷತ್‌ನಲ್ಲಿ (Karnataka Legislative Assembly Session) ನಡೆಯಿತು.

    ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸದಸ್ಯ ಸಂಕನೂರು‌, ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B.C.Nagesh) ಅವರು ಆರ್ಥಿಕ ಇಲಾಖೆ ಕಡೆ ಬೊಟ್ಟು ಮಾಡಿ ತೋರಿಸಿದರು. ಇದನ್ನೂ ಓದಿ: ಅಕ್ಟೋಬರ್ ಅಂತ್ಯಕ್ಕೆ ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಸಂಪೂರ್ಣ ಪ್ರಾರಂಭ: ಸುಧಾಕರ್

    ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ (Ayanur Manjunath), ಸಚಿವರ ವಿರುದ್ದ ಕಿಡಿಕಾರಿದರು. ಎಲ್ಲಾ ಪ್ರಶ್ನೆಗೂ ಆರ್ಥಿಕ ಇಲಾಖೆ ಅನುಮತಿ ಬೇಕು ಅನ್ನೋದು ಯಾಕೆ? ಹಾಗಾದ್ರೆ ಸಚಿವರು ಯಾಕೆ ಕೆಲಸ ಮಾಡಬೇಕು. ಮತ್ತೆ ಸಚಿವರು ಹೀಗೆ ಬೇಜವಾಬ್ದಾರಿ ಉತ್ತರ ಕೊಡಬಾರದು ಅಂತ ಕಿಡಿಕಾರಿದರು.

    ಯಾವುದೇ ಇಲಾಖೆಗೆ ಅರ್ಥಿಕ ಇಲಾಖೆ ಬಳಿ ಹಣ ಪಡೆಯೋದು ನಿಮ್ಮ ಕರ್ತವ್ಯ. ಅದು ಬಿಟ್ಟು ಇಲಾಖೆ ಮೇಲೆ ಬೊಟ್ಟು ತೋರಿಸಿದ್ರೆ ಹೇಗೆ? ಇದು ಸರಿಯಾದ ಉತ್ತರ ಅಲ್ಲ. ಇನ್ಯಾವತ್ತೂ ಆರ್ಥಿಕ ಇಲಾಖೆ ಅನುಮತಿ ಅಂತ ಹೇಳಬಾರದು. ಈ‌ ಬಗ್ಗೆ ಸಚಿವರು ಸರಿಯಾಗಿ ಅರ್ಥ ಮಾಡಿಕೊಂಡು ಉತ್ತರ ಕೊಡಬೇಕು ಎಂದು ಸಚಿವರ ಮೇಲೆ ಗರಂ ಆದರು. ಇದನ್ನೂ ಓದಿ: ಡಿಸೆಂಬರ್ ವೇಳೆಗೆ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ: ಬಿ.ಸಿ.ನಾಗೇಶ್

    ಸಂಕನೂರು ಪ್ರಶ್ನೆಗೂ ಮುನ್ನ ಆರೋಗ್ಯ ಸಚಿವರಿಗೆ ಆಯನೂರು ಕೇಳಿದಾಗಲೂ, ಆರ್ಥಿಕ ಇಲಾಖೆ ಜೊತೆ ಚರ್ಚೆ ಆಗಬೇಕು ಎಂದು ಸುಧಾಕರ್ (Dr. K.Shudhakar) ಹೇಳಿದ್ದರು. ಈ ಹಿನ್ನಲೆಯಲ್ಲಿ ಸಿಟ್ಟಾಗಿ‌ ಸಚಿವರ ಮೇಲೆ ಅಸಮಾಧಾನ ಹೊರ ಹಾಕಿದರು.

    Live Tv
    [brid partner=56869869 player=32851 video=960834 autoplay=true]

  • ಬ್ರಿಟನ್ ಪ್ರಧಾನಿ ಬೋರಿಸ್ ರಾಜೀನಾಮೆ ಘೋಷಣೆ

    ಬ್ರಿಟನ್ ಪ್ರಧಾನಿ ಬೋರಿಸ್ ರಾಜೀನಾಮೆ ಘೋಷಣೆ

    ಲಂಡನ್: ಬ್ರಿಟನ್‌ನಲ್ಲಿ ಕಳೆದ 48 ಗಂಟೆಗಳಲ್ಲಿ 5 ಕ್ಯಾಬಿನೆಟ್ ಸಚಿವರು ಅಧಿಕಾರಿಗಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸಹ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

    ಮಂಗಳವಾರ ರಾತ್ರಿಯಿಂದಲೇ ಪ್ರಮುಖ ಸಚಿವರು ಸರ್ಕಾರವನ್ನು ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬೋರಿಸ್ ಜಾನ್ಸನ್ ರಾಜೀನಾಮೆ ಪತ್ರವನ್ನು ಸಿದ್ಧಪಡಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನೇರವಾಗಿ ಒಪಿಡಿಗೆ ಓಡಿಬಂದ ಕತ್ತೆ- ಗಾಬರಿಗೊಂಡ ರೋಗಿಗಳು

    ಕಳೆದ ತಿಂಗಳು, ಸರ್ಕಾರವನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಚಿವರಾದ ರಿಷಿ ಸುನಕ್ ಮತ್ತು ಸಾಜಿದ್ ಜಾವಿದ್ ಕೂಡ ಜಾನ್ಸನ್ ತಂಡವನ್ನು ತೊರೆದಿದ್ದಾರೆ.

    ಆರೋಗ್ಯ ಸಚಿವ ಸಾಜಿದ್ ಜಾವಿದ್ ಮತ್ತು ಭಾರತೀಯ ಮೂಲದ ಹಣಕಾಸು ಸಚಿವ ರಿಷಿ ಸುನಕ್ ಅವರ ರಾಜೀನಾಮೆಯೊಂದಿಗೆ ಪ್ರಾರಂಭವಾದ ಸಂಚಲನ ನಿನ್ನೆಯೂ ಮುಂದುವರಿದಿತ್ತು. ಜಾನ್ ಗ್ಲೇನ್, ಭದ್ರತಾ ಕಾರ್ಯದರ್ಶಿ ರಾಚೆಲ್ ಮೆಕ್ಲೀನ್, ರಫ್ತು ಸಚಿವ ಮೈಕ್ ಫ್ರೀರ್, ವಸತಿ ಮತ್ತು ಸಮುದಾಯಗಳ ಜೂನಿಯರ್ ಸಚಿವ ನೀಲ್ ಒಬ್ರೇನ್, ಶಿಕ್ಷಣ ಇಲಾಖೆಯ ಕಿರಿಯ ಕಾರ್ಯದರ್ಶಿ ಅಲೆಕ್ಸ್ ಬರ್ಗರ್ಟ್ ಸೇರಿದಂತೆ 40ಕ್ಕೂ ಹೆಚ್ಚು ಸಚಿವರು ಜಾನ್ಸನ್ ಅವರ ಮೇಲೆ ಅವಿಶ್ವಾಸ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯುಪಿ ಸಂಸದರು, ಐಎಎಸ್ ಅಧಿಕಾರಿಗಳಿಗೆ ಆಸ್ತಿ ವಿವರ ಬಹಿರಂಗಪಡಿಸುವಂತೆ ಯೋಗಿ ಆದೇಶ

    ಯುಪಿ ಸಂಸದರು, ಐಎಎಸ್ ಅಧಿಕಾರಿಗಳಿಗೆ ಆಸ್ತಿ ವಿವರ ಬಹಿರಂಗಪಡಿಸುವಂತೆ ಯೋಗಿ ಆದೇಶ

    ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಂಪುಟದ ಸಚಿವರು ಹಾಗೂ ಅವರ ಕುಟುಂಬದವರ ಎಲ್ಲಾ ಆಸ್ತಿಯ ವಿವರಗಳನ್ನು 3 ತಿಂಗಳುಗಳ ಒಳಗಾಗಿ ಬಹಿರಂಗ ಪಡಿಸುವಂತೆ ಆದೇಶ ನೀಡಿದ್ದಾರೆ.

    ಯುಪಿ ಸಿಎಂ ತಮ್ಮ ಸಂಪುಟದ ಸದಸ್ಯರೊಂದಿಗೆ, ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೂ ತಮ್ಮ ಆಸ್ತಿಯ ವಿವರಗಳನ್ನು ಆನ್‌ಲೈನ್‌ನಲ್ಲಿ ಬಹಿರಂಗ ಪಡಿಸುವಂತೆ ತಿಳಿಸಿದ್ದಾರೆ. ಇದರೊಂದಿಗೆ ಸರ್ಕಾರಿ ಕೆಲಸಗಳಲ್ಲಿ ಸಂಸದರ ಸಂಬಧಿಕರು ಮಧ್ಯ ಪ್ರವೇಶಿಸಬಾರದು ಎಂದು ಆದಿತ್ಯನಾಥ್ ಸೂಚಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನುಂಟು ಮಾಡುತ್ತವೆ: ಮೋದಿ ಎಚ್ಚರಿಕೆ

    yogi adithyanath

    ಸಂಪುಟ ಸಭೆಯ ಬಳಿಕ ವಿಶೇಷ ಸಭೆಯನ್ನುದ್ದೇಶಿಸಿ ಮಾತನಾಡಿದ ಯೋಗಿ, ಐಎಎಸ್, ಐಪಿಎಸ್ ಹಾಗೂ ಪ್ರಾಂತೀಯ ನಾಗರಿಕ ಸೇವಾ ಅಧಿಕಾರಿಗಳು ತಮ್ಮ ಹಾಗೂ ಕುಟುಂಬ ಸದಸ್ಯರ ಆಸ್ತಿಯನ್ನು ಘೋಷಿಸಬೇಕು. ಅದನ್ನು ಜನರು ನೋಡುವಂತೆ, ಆನ್‌ಲೈನ್ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: YSRP ಪೋಸ್ಟರ್‌ಗಳಿಗೆ ಹಾನಿ – 3, 4ನೇ ತರಗತಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸ್ರು

    ಪ್ರಜಾಪ್ರಭುತ್ವದ ಒಳಿತಿಗಾಗಿ, ಸಾರ್ವಜನಿಕ ಪ್ರತಿನಿಧಿಗಳ ನಡವಳಿಕೆ ಬಹಳ ಮುಖ್ಯವಾದುದು. ಹೀಗಾಗಿ ಎಲ್ಲಾ ಮಂತ್ರಿಗಳು ತಮ್ಮ ಹಾಗೂ ಕುಟುಂಬದ ಸದಸ್ಯರ ಎಲ್ಲಾ ಚರ ಮತ್ತು ಸ್ಥಿರ ಆಸ್ತಿಯನ್ನು ಮುಂದಿನ 3 ತಿಂಗಳ ಒಳಗಾಗಿ ಸಾರ್ವಜನಿಕವಾಗಿ ಘೋಷಣೆ ಮಾಡಬೇಕು ಎಂದರು.

  • ಪಂಜಾಬ್ ಕ್ಯಾಬಿನೆಟ್ – 7 ಮಂದಿ ಕ್ರಿಮಿನಲ್ ಹಿನ್ನೆಲೆ, 8 ಮಂದಿ ಕೋಟ್ಯಧಿಪತಿ

    ಪಂಜಾಬ್ ಕ್ಯಾಬಿನೆಟ್ – 7 ಮಂದಿ ಕ್ರಿಮಿನಲ್ ಹಿನ್ನೆಲೆ, 8 ಮಂದಿ ಕೋಟ್ಯಧಿಪತಿ

    ನವದೆಹಲಿ: ಪಂಜಾಬ್ ನೂತನ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ ಅವರ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿ 11 ಸಚಿವರಿದ್ದಾರೆ. ಅವರಲ್ಲಿ 7 ಮಂದಿ ಕ್ರಿಮಿನಲ್ ಪ್ರಕರಣ ಉಳ್ಳವರಾಗಿದ್ದು, 7ರಲ್ಲಿ 4 ಮಂದಿ ಗಂಭೀರ ಆರೋಪ ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹೇಳಿದೆ.

    ಪಂಜಾಬ್ ಎಲೆಕ್ಷನ್ ವಾಚ್ ಮತ್ತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಿಎಂ ಸೇರಿದಂತೆ ಎಲ್ಲ ಸಚಿವರ ಅಫಿಡಿವೇಟ್‌ಗಳನ್ನು ವಿಶ್ಲೇಷಿಸಿದೆ. 7 ಮಂದಿ ಸಚಿವರು (ಶೇ.64) ತಮ್ಮ ವಿರುದ್ಧ ಕ್ರಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ. ಅವರಲ್ಲಿ ನಾಲ್ಕು ಮಂದಿ ಗಂಭೀರ ಎದುರಿಸುವುದಾಗಿ ಹೇಳಿದ್ದಾರೆ. ಅಲ್ಲದೆ, 11 ಸಚಿವರಲ್ಲಿ 9 ಮಂದಿ ಕೋಟ್ಯಧಿಪತಿಗಳಾಗಿದ್ದಾರೆ. ಬ್ರಾಮ್ ಶಂಕರ್ (ಜಿಂಪಾ) ಅವರು 8.56 ಕೋಟಿ, ಭೋವಾ (ಎಸ್‌ಸಿ) ಕ್ಷೇತ್ರದ ಲಾಲ್‌ಚಂದ್ ಅವರು 6.19 ಲಕ್ಷ, ಬ್ರಾಮ್ ಶಂಕರ್ 1.08 ಕೋಟಿ ಕನಿಷ್ಠ ಘೋಷಿತ ಆಸ್ತಿಯನ್ನು ಹೊಂದ್ದಾರೆ. ಇದನ್ನೂ ಓದಿ: ಯೋಗಿ ಪ್ರಮಾಣವಚನಕ್ಕೂ ಮುನ್ನವೇ ಹೊರಬಿತ್ತು ಸಚಿವ ಆಕಾಂಕ್ಷಿಗಳ ಪಟ್ಟಿ- ರೇಸ್‍ನಲ್ಲಿ ಯಾರಿದ್ದಾರೆ ನೋಡಿ

    ಶೈಕ್ಷಣಿಕ ಅರ್ಹತೆ
    ಭಗವಂತ್‌ನ ಸಂಪುಟದಲ್ಲಿರುವ ಐವರು ಸಚಿವರು ತಮ್ಮ ಶೈಕ್ಷಣಿಕ ಅರ್ಹತೆಯನ್ನು 10 ಮತ್ತು 12ನೇ ತರಗತಿಯ ನಡುವೆ ಎಂದು ಘೋಷಿಸಿದ್ದಾರೆ. ಉಳಿದವರು ಪದವೀಧರರು ಅಥವಾ ಅದಕ್ಕಿಂತ ಹೆಚ್ಚಿನವರು. 6 ಸಚಿವರು ತಮ್ಮ ವಯಸ್ಸು 31 ರಿಂದ 50 ವರ್ಷ ಎಂದು ಘೋಷಿಸಿದ್ದಾರೆ, ಐವರು 51 ಮತ್ತು 60 ವರ್ಷ ವಯಸ್ಸಿನವರೆಂದು ಘೋಷಿಸಿಕೊಂಡಿದ್ದಾರೆ.

    ಪಂಜಾಬ್ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹರ್ಪಾಲ್ ಸಿಂಗ್ ಚೀಮಾ, ಗುರ್ಮೀತ್ ಸಿಂಗ್ ಮೀತ್ ಹಯರ್, ಡಾ.ಬಲ್ಜಿತ್ ಕೌರ್, ಶಾಸಕ ಹರ್ಭಜನ್ ಸಿಂಗ್ ಇಟಿಒ, ಡಾ.ವಿಜಯ್ ಸಿಂಗ್ಲಾ, ಲಾಲ್ ಚಂದ್ ಕಟಾರು ಚಾಕ್, ಶಾಸಕ ಕುಲದೀಪ್ ಸಿಂಗ್ ಧಲಿವಾಲ್, ಲಾಲ್ಜಿತ್ ಸಿಂಗ್ ಭುಲ್ಲಾರ್, ಬ್ರಾಮ್ ಶಂಕರ್ (ಜಿಂಪಾ), ಹೊಶಿಯಾರ್‌ಪುರ್ ಮತ್ತು ಹರ್ಜೋತ್ ಸಿಂಗ್ ಬೈನ್ಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಮಹಿಳೆ ಸೇರಿದಂತೆ ನಾಲ್ವರು ಜಾಟ್, ನಾಲ್ವರು ಎಸ್ಸಿಗಳು ಮತ್ತು ಇಬ್ಬರು ಹಿಂದೂಗಳು ಕ್ಯಾಬಿನೆಟ್ ನಲ್ಲಿ ಒಳಗೊಂಡಿದ್ದಾರೆ. ಎಲ್ಲ ಶಾಸಕರಿಗೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದ್ದರು. ಇದನ್ನೂ ಓದಿ: 13 ಗಂಟೆಯಲ್ಲಿ ಶ್ರೀಲಂಕಾದಿಂದ ತಮಿಳುನಾಡಿಗೆ ಸ್ವಿಮ್ಮಿಂಗ್ ಮಾಡಿದ 13ರ ಬಾಲಕಿ

  • ಉಕ್ರೇನ್ ಕುರಿತಂತೆ ಮೋದಿ ಸಭೆ – ಭಾರತೀಯರನ್ನು ಸ್ಥಳಾಂತರಿಸಲು ಉಕ್ರೇನ್ ನೆರೆಯ ರಾಷ್ಟ್ರಕ್ಕೆ ನಾಲ್ವರು ಸಚಿವರ ಪ್ರಯಾಣ

    ಉಕ್ರೇನ್ ಕುರಿತಂತೆ ಮೋದಿ ಸಭೆ – ಭಾರತೀಯರನ್ನು ಸ್ಥಳಾಂತರಿಸಲು ಉಕ್ರೇನ್ ನೆರೆಯ ರಾಷ್ಟ್ರಕ್ಕೆ ನಾಲ್ವರು ಸಚಿವರ ಪ್ರಯಾಣ

    ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಿಸಲು ನಾಲ್ವರು ಕೇಂದ್ರ ಸಚಿವರು ಉಕ್ರೇನ್‍ನ ನೆರೆಯ ದೇಶಗಳಿಗೆ ಹಾರಲಿದ್ದಾರೆ.

    ಉಕ್ರೇನ್ ಬಿಕ್ಕಟ್ಟಿನಿಂದ ದೇಶವನ್ನು ತೊರೆಯಲು ಪ್ರಯತ್ನಿಸುತ್ತಿರುವ ಭಾರತೀಯರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಉನ್ನತ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಚಿವರಾದ ಹರ್ದೀಪ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ವಿ.ಕೆ. ಸಿಂಗ್ ಅವರು ಭಾರತದ ವಿಶೇಷ ರಾಯಭಾರಿಗಳಾಗಿ ಉಕ್ರೇನ್ ಸುತ್ತಮುತ್ತಲಿನ ದೇಶಗಳಿಗೆ ತೆರಳಿ ಭಾರತೀಯರು ಸ್ಥಳಾಂತರಗೊಳ್ಳಲು ಸಹಾಯ ಮಾಡಲಿದ್ದಾರೆ. ಇದನ್ನೂ ಓದಿ: ನಮ್ಮ ಸ್ವಂತ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

    ಮೋದಿ ಅವರು ನಡೆಸುತ್ತಿರುವ ಎರಡನೇ ಸಭೆ ಇದಾಗಿದ್ದು, ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಅಲ್ಲದೇ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.

    ಉಕ್ರೇನ್ ಗಡಿಯಲ್ಲಿ ಸಿಲುಕಿರುವ ನೂರಾರು ಭಾರತೀಯರ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸುಮಾರು 16,000 ವಿದ್ಯಾರ್ಥಿಗಳು ಉಕ್ರೇನ್‍ನ ಗಡಿಗಳಲ್ಲಿ ಸಿಲುಕಿಕೊಂಡಿದ್ದಾರೆ. ಬಾಂಬ್, ಶೆಲ್ಟರ್‌ಗಳಿಂದ ತಪ್ಪಿಸಿಕೊಳ್ಳಲು ಇನ್ನೂ ಕೆಲವರು ಹಾಸ್ಟೆಲ್‍ನ ನೆಲಮಾಳಿಗೆಗಳಲ್ಲಿ ಅಡಗಿಕೊಂಡಿದ್ದಾರೆ ಎಂದು ಎನ್ನಲಾಗುತ್ತಿದೆ.  ಇದನ್ನೂ ಓದಿ: ಒಂದು ಯುದ್ಧದಿಂದ ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದ್ರೆ ಇನ್ನೊಂದು ಯುದ್ಧ ಪ್ರಾರಂಭವಾಗಿದೆ: ಅಫ್ಘಾನ್ ನಿವಾಸಿ

    ಮತ್ತೊಂದೆಡೆ ವಿರೋಧ ಪಕ್ಷಗಳು, ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೂ ಭಾರತೀಯರನ್ನು ಸುಲಭವಾಗಿ ಮತ್ತು ಸುರಕ್ಷಿತ ಮಾರ್ಗಗಳಿಂದ ಭಾರತಕ್ಕೆ ಕರೆತರಲು ಸರ್ಕಾರ ಯಾವುದೇ ವ್ಯವಸ್ಥೆಗೊಳಿಸಿಲ್ಲ ಎಂದು ಆರೋಪಿಸಿದೆ. ಇದನ್ನೂ ಓದಿ: ಟೂತ್‌ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಪ್ರಾಣ ಬಿಟ್ಟಳು

  • ಮತ್ತೆ ಸಚಿವರ ವಿರುದ್ಧ ತಿರುಗಿ ಬಿದ್ದ ರೇಣುಕಾಚಾರ್ಯ – ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು

    ಮತ್ತೆ ಸಚಿವರ ವಿರುದ್ಧ ತಿರುಗಿ ಬಿದ್ದ ರೇಣುಕಾಚಾರ್ಯ – ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು

    ಬೆಂಗಳೂರು: ಕೆಲವರು ಸಚಿವರು, ಶಾಸಕರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ಗೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮೌಖಿಕ ದೂರು ನೀಡಿದ್ದಾರೆ.

    ಹಲವು ಸಚಿವರು, ಶಾಸಕರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ. ಶಾಸಕರ ದೂರವಾಣಿ ಕರೆಗಳನ್ನೂ ಸ್ವೀಕರಿಸುವುದಿಲ್ಲ. ಕೆಲವು ಸಚಿವರು ತಮ್ಮಿಂದಲೇ ಈ ಸರ್ಕಾರ ಬಂದಿದೆ ಎಂದುಕೊಂಡಿದ್ದಾರೆ. ದುರಹಂಕಾರದ ವರ್ತನೆ ಪ್ರದರ್ಶಿಸುತ್ತಿದ್ದಾರೆ. ಮನವಿ ಪತ್ರಗಳನ್ನು ನೀಡಿದರೆ, ಆಪ್ತ ಸಹಾಯಕರಿಂದ ಸಹಿ ಮಾಡಿಸಿ ಅಧಿಕಾರಿಗಳಿಗೆ ನೀಡುತ್ತಾರೆ. ಸಚಿವರ ಆಪ್ತ ಕಾರ್ಯದರ್ಶಿಗಳೂ ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯತ್ನಾಳ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಶಾಸಕ ರೇಣುಕಾಚಾರ್ಯ

    ಸಚಿವರಿಗೆ ಬುದ್ಧಿವಾದ ಹೇಳಬೇಕು. ಪಕ್ಷದ ಶಾಸಕರಿಗೆ ಸ್ಪಂದಿಸುವಂತೆ ತಾಕೀತು ಮಾಡಬೇಕು. ಪಕ್ಷದ ಶಾಸಕರಾದ ನಮಗೇ ಸುಳ್ಳು ಹೇಳುತ್ತಾರೆ. ಈ ವರ್ತನೆಯನ್ನು ತಿದ್ದಿಕೊಳ್ಳುವಂತೆ ಸಚಿವರಿಗೆ ನಿರ್ದೇಶನ ನೀಡಬೇಕು ಎಂದು ಸಿಎಂ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಿಗೆ ದೂರಿನಲ್ಲಿ ತಿಳಿಸಿದ್ದಾರೆ.

    ಮುಖ್ಯಮಂತ್ರಿಗಳನ್ನು ಹೊರತುಪಡಿಸಿ ಉಳಿದವರೆಲ್ಲರ ಬದಲಾವಣೆ ಆಗಲಿದೆ. ನೋಡಿದ ಮುಖಗಳನ್ನೇ ಜನ ಎಷ್ಟು ಬಾರಿ ನೋಡುತ್ತಾರೆ ಎಂದು ಕೆಲ ದಿನಗಳ ಹಿಂದಷ್ಟೇ ಸಚಿವರ ವಿರುದ್ಧ ರೇಣುಕಾಚಾರ್ಯ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಸಿ.ಎಂ.ಇಬ್ರಾಹಿಂ ಬೆನ್ನಿಗೆ ಚೂರಿ ಹಾಕಿದ್ರು ಸಿದ್ದರಾಮಯ್ಯ: ಶ್ರೀರಾಮುಲು ಟೀಕೆ

  • ಮಹಾರಾಷ್ಟ್ರದ 10ಕ್ಕೂ ಹೆಚ್ಚು ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ದೃಢ

    ಮಹಾರಾಷ್ಟ್ರದ 10ಕ್ಕೂ ಹೆಚ್ಚು ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ದೃಢ

    ಮುಂಬೈ: ಕೊರೊನಾ ವೈರಸ್‌ ಮೂರನೇ ಅಲೆಯು ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದೆ. ಮಹಾರಾಷ್ಟ್ರದ 10ಕ್ಕೂ ಹೆಚ್ಚು ಸಚಿವರು ಹಾಗೂ 20ಕ್ಕೂ ಹೆಚ್ಚು ಮಂದಿ ಶಾಸಕರಿಗೂ ಕೊರೊನಾ ವೈರಸ್‌ ತಗುಲಿರುವುದು ದೃಢಪಟ್ಟಿರುವುದು ಸಾಮಾನ್ಯರಲ್ಲಿ ಆತಂಕ ಮೂಡಿಸಿದೆ.

    ಸಚಿವರು, ಶಾಸಕರಿಗೆ ಕೋವಿಡ್‌ ತಗುಲಿರುವ ಬಗ್ಗೆ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕೋವಿಡ್‌-19 ನಿಯಮಗಳನ್ನು ಕಟ್ಟುನಿಟ್ಟಾಗಿ ರಾಜ್ಯದಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜ್ವರ, ಕೆಮ್ಮು, ತಲೆನೋವು ಇದ್ದರೂ ಕೋವಿಡ್ ಟೆಸ್ಟ್ ಮಾಡಿಸಿ: ಕೇಂದ್ರ ಸೂಚನೆ

    10ಕ್ಕೂ ಹೆಚ್ಚು ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೋವಿಡ್‌ ದೃಢಪಟ್ಟಿರುವುದರಿಂದ ವಿಧಾನಸಭಾ ಅಧಿವೇಶನವನ್ನು ಮೊಟಕುಗೊಳಿಸಿದ್ದೇವೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಎಲ್ಲರೂ ಹೊಸ ವರ್ಷ, ಬರ್ತ್‌ಡೇ ಸೇರಿದಂತೆ ಇತರೆ ಸಂತೋಷ ಕೂಟಗಳಲ್ಲಿ ಭಾಗಿಯಾಗಲು ಬಯಸುತ್ತಾರೆ. ವ್ಯಾಪಕವಾಗಿ ಹರಡುತ್ತಿರುವ ಹೊಸ ತಳಿ ಓಮಿಕ್ರಾನ್‌ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಜನತೆಯಲ್ಲಿ ಮನವಿ ಮಾಡಿದ್ದಾರೆ. ಪ್ರಕರಣಗಳ ಹೆಚ್ಚಳದಿಂದಾಗಿ ಕೆಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮಹಾರಾಷ್ಟ್ರದ ಮುಂಬೈ, ಪುಣೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಸ ವರ್ಷದಂದೇ ದುರಂತ – ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಿಂದ 12 ಮಂದಿ ದುರ್ಮರಣ

    ಕಳೆದ 12 ದಿನಗಳಿಂದ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ವರದಿಯಾಗುತ್ತಿವೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರವು ಗುರುವಾರ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿತ್ತು. ಸಮಾರಂಭಗಳಲ್ಲಿ ಭಾಗವಹಿಸುವವರ ಸಂಖ್ಯೆ ಶೇ. 50 ಇರಬೇಕು ಎಂದು ಕಟ್ಟುನಿಟ್ಟಾಗಿ ಆದೇಶದಲ್ಲಿ ತಿಳಿಸಿತ್ತು.

    ಮುಂಬೈನಲ್ಲಿ ಶುಕ್ರವಾರ ಒಂದೇ ದಿನ 5,631 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಪುಣೆಯಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೇ. 5.9ಕ್ಕೆ ಏರಿದೆ.

  • ನಮ್ಮಿಂದ ಸಚಿವರಾಗಿರೋದು, ನೀವು ಮೇಲಿಂದ ಇಳಿದು ಬಂದಿಲ್ಲ- ಮಿನಿಸ್ಟರ್ಸ್ ವಿರುದ್ಧ ಶಾಸಕರ ಆಕ್ರೋಶ

    ನಮ್ಮಿಂದ ಸಚಿವರಾಗಿರೋದು, ನೀವು ಮೇಲಿಂದ ಇಳಿದು ಬಂದಿಲ್ಲ- ಮಿನಿಸ್ಟರ್ಸ್ ವಿರುದ್ಧ ಶಾಸಕರ ಆಕ್ರೋಶ

    ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ವಿರುದ್ಧವೇ ಕೆಲವು ಶಾಸಕರು ತಿರುಗಿಬಿದ್ದ ಪ್ರಸಂಗ ನಡೆದಿದೆ.

    ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಶಾಸಕರು ಹಲವು ವಿಚಾರಗಳ ಪ್ರಸ್ತಾಪಿಸಿದ್ದಾರೆ. ಈ ವೇಳೆ ಸಚಿವರ ನಡವಳಿಕೆ ಸರಿಪಡಿಸಿಕೊಳ್ಳುವಂತೆ ಆಕ್ರೋಶ ಕೂಡ ಹೊರಹಾಕಿದ್ದಾರೆ.

    ನಮ್ಮಿಂದ ಸಚಿವರಾಗಿರೋದು, ನೀವು ಮೇಲಿಂದ ಇಳಿದು ಬಂದಿಲ್ಲ. ಆಡಳಿತ ಪಕ್ಷದ ಶಾಸಕರ ಜೊತೆ ಸರಿಯಾಗಿ ನಡೆದುಕೊಳ್ಳಿ. ಕಾರ್ಯಕರ್ತರಿಂದ ನಾವು ಶಾಸಕರಾಗಿರೋದು, ನಮ್ಮಿಂದ ನೀವು ಸಚಿವರಾಗಿರೋದು. ನಡವಳಿಕೆ ಸರಿಪಡಿಸಿಕೊಳ್ಳದಿದ್ದರೇ ಬಹಿರಂಗವಾಗಿಯೇ ತಿರುಗಿಬೀಳಬೇಕಾಗುತ್ತೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಯತ್ನಾಳ್, ರೇಣುಕಾಚಾರ್ಯ ಮಾತನಾಡುವಾಗ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಮೌನವಾಗಿಯೇ ಕುಳಿತಿದ್ದರು. ಇದನ್ನೂ ಓದಿ: ನಮ್ಮಂತವರನ್ನು ನೆಗ್‍ಲೆಕ್ಟ್ ಮಾಡ್ತಾರೆ, ಬೇಕಾದಾಗ ಕರೀತಾರೆ ಬೇಡವಾದ್ರೆ ಕರಿಯಲ್ಲ: ಯತ್ನಾಳ್

    ಇದೇ ವೇಳೆ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ 50 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸಿಎಂ ಬೊಮ್ಮಾಯಿ ಭರವಸೆ ನೀಡಿದರು. 50 ಕೋಟಿ ಸಾಕಾಗಲ್ಲ. 100 ಕೋಟಿ ನೀಡಿ ಎಂದು ಶಾಸಕರ ಪಟ್ಟು ಹಿಡಿದರು. ಎಸ್‍ಸಿ, ಎಸ್‍ಟಿ ಅನುದಾನ ಕಡಿತ ಮಾಡಬೇಡಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಗುಡ್ಡಕ್ಕೆ ಶಕ್ತಿ ಹೊರುವ ತಾಕತ್ತು ಇದೆ ಬಿಡಿ – ಸೋಲಿನ ಆರೋಪಕ್ಕೆ ರಮೇಶ್ ಖಡಕ್ ಉತ್ತರ

    ಜೆಡಿಎಸ್-ಕಾಂಗ್ರೆಸ್ ಸರ್ಕಾರದಲ್ಲಿದ್ದ ಅಧಿಕಾರಿಗಳನ್ನು ಬದಲಿಸಿ ಅಂತಲೂ ಆಗ್ರಹಿಸಿದರು. ಸಭೆಯಲ್ಲಿ ಕೆಲ ಶಾಸಕರಿಂದ ಅಧಿಕಾರಿಗಳ ಬದಲಾವಣೆಗೆ ಆಗ್ರಹ ಕೇಳಿಬಂತು. ಅಲ್ಲದೆ ಬಿಜೆಪಿ ಸರ್ಕಾರ ಅಂತ ತೋರಿಸಿ ಎಂದು ಕೆಲ ಶಾಸಕರು ವ್ಯಂಗ್ಯವಾಡಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ‌ಮೂರು ವಿಧೇಯಕಗಳ ಮಂಡನೆ – ಇನಾಮು‌ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್

  • ಕಲಾಪಕ್ಕೆ ಸಚಿವರ ಹಾಜರಿ ಕಡ್ಡಾಯ- ಸಿಎಂಗೆ ಪತ್ರ ಬರೆದ ಸಭಾಪತಿ ಹೊರಟ್ಟಿ

    ಕಲಾಪಕ್ಕೆ ಸಚಿವರ ಹಾಜರಿ ಕಡ್ಡಾಯ- ಸಿಎಂಗೆ ಪತ್ರ ಬರೆದ ಸಭಾಪತಿ ಹೊರಟ್ಟಿ

    ಹುಬ್ಬಳ್ಳಿ: ಸಪ್ಟೆಂಬರ್ 13 ರಿಂದ ಹತ್ತು ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನದ ಕಲಾಪಗಳಿಗೆ ಸಚಿವರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರದಿದ್ದಾರೆ.

    ಈ ಕುರಿತು ಪತ್ರ ಬರೆದಿರುವ ಬಸವರಾಜ ಹೊರಟ್ಟಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನ ಮಂಡಲ ಅಧಿವೇಶನ ಬಹು ಮುಖ್ಯವಾಗಿದೆ. ನಾಡಿನ ಜ್ವಲಂತ ಸಮಸ್ಯೆ, ಸಾರ್ವಜನಿಕ ಸಂಕಷ್ಟಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅಧಿವೇಶನ ಸೂಕ್ತ ವೇದಿಕೆಯಾಗಿದೆ. ಹೀಗಾಗಿ ಶಾಸನ ಸಭೆಯ ಕಲಾಪಗಳು ನಡೆಯುವಾಗ ಸಚಿವರು ಸದನದಲ್ಲಿ ಹಾಜರಿರಬೇಕು ಎಂದು ಸೂಚನೆ ನೀಡುವಂತೆ ಮುಖ್ಯಮಂತ್ರಿಗೆ, ಸಭಾಪತಿ ಕೋರಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಬೂಟಿನ ರುಚಿಗಾಗಿ ಹಪಹಪಿಸುವ ಪ್ರಶಾಂತ್ ಸಂಬರ್ಗಿ ಕನ್ನಡ ವಿರೋಧಿ: ಚಂದ್ರಚೂಡ್

    ಈ ಹಿಂದೆ ನಡೆದ ಅಧಿವೇಶನಗಳಲ್ಲಿ ಸಚಿವರು ಗೈರು ಆಗಿದ್ದರು. ಮುಂದೆ ನಡೆಯುವ ಸದನದಲ್ಲಿ ಎಲ್ಲರೂ ಭಾಗಿಯಾಗಬೇಕು. ಸಚಿವರ ಅನುಪಸ್ಥಿತಿಯು ಆಡಳಿತಾರೂಢ ಸರ್ಕಾರದಿಂದ ಉತ್ತರ ಪಡೆಯುವ ಸದಸ್ಯರ ಹಕ್ಕು ಮತ್ತು ಅವಕಾಶ ವಂಚಿಸಿದಂತಾಗುತ್ತದೆ. ಕಾರಣ ಸಚಿವರು ಸದನದಲ್ಲಿ ಹಾಜರಿರುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಅಧಿವೇಶನ ವೇಳೆ ತಮ್ಮ ಕ್ಷೇತ್ರದ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಕಲಾಪದಿಂದ ವಿನಾಯಿತಿ ಕೋರಿ ಮನವಿ ಸಲ್ಲಿಸಬೇಡಿ. ಅಧಿವೇಶನದಲ್ಲಿ ಇಲಾಖೆ ಅಧಿಕಾರಿಗಳ ಪಾಲ್ಗೊಳ್ಳುವಿಕೆಯೂ ಅಷ್ಟೇ ಪ್ರಮುಖವಾಗಿದೆ. ಹೀಗಾಗಿ ಚರ್ಚೆ ವೇಳೆ ಸದನದಲ್ಲಿ ಅಧಿಕಾರಿಗಳ ಉಪಸ್ಥಿತಿ ಕುರಿತು ಮುಖ್ಯ ಕಾರ್ಯದರ್ಶಿಗಳು ಗಮನಹರಿಸಬೇಕೆಂದು ಹೊರಟ್ಟಿ ಸೂಚಿಸಿದ್ದಾರೆ.

    ಕಲಾಪದಲ್ಲಿ ಆಯಾ ದಿನದಲ್ಲಿ ಹಾಜರಾಗುವ ಸಚಿವರ ಹಾಗೂ ಅಧಿಕಾರಿಗಳ ಹೆಸರನ್ನು ಆಯಾ ಸದನ ಆರಂಭಗೊಳ್ಳುವಾಗಲೇ ಪ್ರಕಟಿಸಲಾಗುವುದು ಹಾಗೂ ಗೈರು ಹಾಜರಾದವರ ಮಾಹಿತಿಯನ್ನು ಸಂಬಂಧಿಸಿದವರಿಗೆ ಕಳುಹಿಸಿ ಕ್ರಮಕ್ಕೆ ಸೂಚಿಸಲಾಗುವುದು ಎಂದು ಹೊರಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ಗುಹೆಯೊಳಗೆ ನೆಲೆಸಿರೋ ಕಲ್ಲು ಗಣಪತಿಗಿದೆ ನಾಲ್ಕು ಕೈ!