ಕೋಲಾರ: ದೇಶ ವಿರೋಧಿ ಚಟುವಟಿಕೆಯಲ್ಲಿ (Anti-National Activity) ತೊಡಗಿದ ಹಾಗೂ ಕೆಲವೊಂದು ಉಗ್ರವಾದಿ ಸಂಘಟನೆಗಳ ಕುರಿತ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದಡಿಯಲ್ಲಿ ಓರ್ವ ಅಪ್ರಾಪ್ತ ಬಾಲಕನನ್ನು (Minor Boy) ಆಂತರಿಕ ಭದ್ರತಾ ಅಧಿಕಾರಿಗಳು (Internal Security Officers) ಮತ್ತು ಕೇಂದ್ರ ಗುಪ್ತಚರ ಇಲಾಖೆ (Central Intelligence Agency) ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೋಲಾರ (Kolar) ಜಿಲ್ಲೆ ಕೆಜಿಎಫ್ (KGF) ತಾಲೂಕು ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 15 ವರ್ಷದ ಬಾಲಕನೊಬ್ಬ ಕೆಲವೊಂದು ಉಗ್ರಗಾಮಿ ಸಂಘಟನೆಗೆ ಸಂಬಂಧಿಸಿದಂತೆ ಕೆಲವೊಂದು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದ. ಅಲ್ಲದೆ ಪದೇ ಪದೇ ಉಗ್ರಗಾಮಿ ಸಂಘಟನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹುಡುಕಾಡುತ್ತಿದ್ದ ಹಿನ್ನೆಲೆ ಅಧಿಕಾರಿಗಳು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಒಂದು ಇಡೀ ದಿನ ಆತನನ್ನು ವಿಚಾರಣೆ ನಡೆಸಿ ನಂತರ ಆತನನ್ನು ಬೇತಮಂಗಲ ಪೊಲೀಸರ ವಶಕ್ಕೆ ನೀಡಲಾಗಿದೆ. ಇದನ್ನೂ ಓದಿ: ಭಾರೀ ಗಾಳಿ ಸಹಿತ ಮಳೆ – ಮನೆ ಕುಸಿದು ಕಾರ್ಮಿಕ ಮಹಿಳೆ ಸಾವು
ಇನ್ನು ಈ ಬಾಲಕ ಮೂಲತಃ ಆಂದ್ರದ ಮುಸ್ಲಿಂ ಕುಟುಂಬಕ್ಕೆ ಸೇರಿದ್ದ. ಕಳೆದ ಹಲವು ವರ್ಷಗಳ ಹಿಂದೆಯೇ ಆಂದ್ರದ ರಾಮಕುಪ್ಪಂ ತೊರೆದು ಬೆಂಗಳೂರಿನ ಮೇಡಹಳ್ಳಿ ಕೆಲಸ ಮಾಡಿಕೊಂಡಿದ್ದ ಕುಟುಂಬ ಇತ್ತೀಚೆಗೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕು ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ದ್ಯಾವರಹಳ್ಳಿ ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ. ಮೇಡಹಳ್ಳಿ ಬಳಿ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬಾಲಕ ಕಳೆದ 20 ದಿನಗಳ ಹಿಂದಷ್ಟೇ ಬೇತಮಂಗಲ ಬಳಿ ಚಿಕನ್ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಸದ್ಯ ಈತನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಆಂತರಿಕ ಭದ್ರತಾ ಅಧಿಕಾರಿಗಳು ಹಾಗೂ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಸೋನ್‌ಪ್ರಯಾಗ್ ಬಳಿ ಭೂಕುಸಿತ – ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
ಸದ್ಯ ಈತನ ವಿರುದ್ಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ದೇಶದ್ರೋಹ ಹಾಗೂ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಾಲಕನ್ನು ವಶಕ್ಕೆ ಪಡೆದು ಕೆಜಿಎಫ್ ಬಾಲ ಮಂದಿರದಲ್ಲಿ ಇರಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ | ಬೈಕ್ ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ – ಇಬ್ಬರು ದುರ್ಮರಣ
ಬೆಳಗಾವಿ: ಇಡೀ ಮಾನವ ಕುಲವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯಕ್ಕೆ ಬೆಳಗಾವಿ (Belagavi) ಜಿಲ್ಲೆ ಸಾಕ್ಷಿಯಾಗಿದೆ. ಎರಡು ಮಕ್ಕಳಿರುವ ತಂದೆಯಿಂದಲೇ ಅಪ್ರಾಪ್ತೆ ಗರ್ಭಿಣಿಯಾದ ಘಟನೆ ಬೆಳಗಾವಿಯ ಕುಲಗೋಡ (Kulagod) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಸಪ್ಪ ಅಡಿವೆಪ್ಪ ಹಳ್ಳೂರ ಎಂಬಾತನನ್ನು ಬಾಲಕಿಯ ಪೋಷಕರು ನೀಡಿದ ದೂರಿನ ಅಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ನಿಂತರ ದೈಹಿಕ ಸಂಪರ್ಕವನ್ನು ಬಸಪ್ಪ ಬೆಳೆಸಿದ್ದ ಎನ್ನಲಾಗಿದೆ. ನಿರಂತರ ದೈಹಿಕ ಸಂಪರ್ಕದ ಹಿನ್ನೆಲೆ ಬಾಲಕಿ 8 ತಿಂಗಳ ಗರ್ಭಿಣಿಯಾಗಿದ್ದಾಳೆ. ಇದನ್ನೂ ಓದಿ: ಡಿಜಿಪಿ ಅಪ್ಪನಿಗೆ ಮಗಳು ತಂದ ಸಂಕಷ್ಟ – ಸರ್ಕಾರದಿಂದ ಎರಡೆರಡು ತನಿಖೆಗೆ ಆದೇಶ
ಚಿಕ್ಕೋಡಿ: ಅಪ್ರಾಪ್ತ (Minor) ವಯಸ್ಸಿನ ಮಕ್ಕಳು ಅರ್ಚಕನ ಬೈಕ್ ಸುಟ್ಟು ವಿಕೃತಿ ಮೆರೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ (Kudachi) ಪಟ್ಟಣದಲ್ಲಿ ನಡೆದಿದೆ.
ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಮಕ್ಕಳ ಗುಂಪು ಬೆಂಕಿ ಹಚ್ಚಿದೆ. ಕುಡಚಿ ಪಟ್ಟಣದ ವಾರ್ಡ್ ನಂಬರ ಎರಡರ ಮರಾಠಾ ಗಲ್ಲಿಯಲ್ಲಿ ಶನಿವಾರ ರಾತ್ರಿ ಪಟ್ಟಣದ ಅರ್ಚಕ ಪ್ರವೀಣ್ ಕುಲಕರ್ಣಿ ಎಂಬುವವರಿಗೆ ಸೇರಿದ ಬೈಕಗೆ ಬೆಂಕಿ ಹಚ್ಚಲಾಗಿದೆ.
ಮಕ್ಕಳ ವಿಕೃತಿ ಮೆರೆದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕುಡಚಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಮುಂಬೈ: ಅಪ್ರಾಪ್ತ ಪತ್ನಿಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರ ಸಮ ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ತೀರ್ಪು ನೀಡಿದೆ.
ನ್ಯಾಯಮೂರ್ತಿ ಗೋವಿಂದ ಸನಾಪ್ ಅವರ ಏಕಸದಸ್ಯ ಪೀಠವು, ಅಪ್ರಾಪ್ತ ಪತ್ನಿಯೊಂದಿಗೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧ ಎಂದು ಪರಿಗಣಿಸಲಾಗುವುದು. ಹಾಗಾಗಿ ಇದಕ್ಕೆ ಒಪ್ಪಿಗೆ ಸೂಚಿಸಿದಲ್ಲಿ ಆ ಅಪರಾಧಕ್ಕೆ ಕಾನೂನು ರಕ್ಷಣೆಯನ್ನು ನೀಡಿದಂತಾಗುತ್ತದೆ. ಪತ್ನಿಯ ವಯಸ್ಸು 18 ಮೀರಿರಬೇಕು, ಅದಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯ ಜೊತೆ ಲೈಂಗಿಕ ಸಂಪರ್ಕ ಹೊಂದಿದರೆ ಅದನ್ನು ಅತ್ಯಾಚಾರ ಎಂದು ಪರಿಗಣಿಸಿ, ಪ್ರಕರಣ ದಾಖಲಿಸಬಹುದು ಎಂದು ಅಭಿಪ್ರಾಯಪಟ್ಟಿದೆ.ಇದನ್ನೂ ಓದಿ: Ranji Trophy: ಇನ್ನಿಂಗ್ಸ್‌ನ ಎಲ್ಲಾ 10 ವಿಕೆಟ್ ಕಿತ್ತು ದಾಖಲೆ ಬರೆದ ಅಂಶುಲ್ ಕಾಂಬೋಜ್
ವಾರ್ಧಾ ಜಿಲ್ಲಾ ನ್ಯಾಯಾಲಯವು ಅಪ್ರಾಪ್ತೆಯ ದೂರಿನ ಆಧಾರದ ಮೇಲೆ ಓರ್ವ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಿತ್ತು. ಆರೋಪಿ ಈ ಆದೇಶವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಈ ವಿಚಾರಣೆಯ ಸಂದರ್ಭದಲ್ಲಿ ಬಾಂಬೆ ಹೈಕೋರ್ಟ್ ತೀರ್ಪನ್ನು ನೀಡಿದೆ.
ಏನಿದು ಪ್ರಕರಣ?
ಆರೋಪಿಯು ದೂರುದಾರೆಯನ್ನು ಪ್ರೀತಿಸುತ್ತಿದ್ದ. ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ್ದ. ಬಳಿಕ ಆಕೆ ತಾನು ಗರ್ಭಿಣಿಯಾಗಿರುವುದಾಗಿ ತಿಳಿದು ಆರೋಪಿಯನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಳು. ಒತ್ತಾಯದ ಮೇರೆಗೆ ಹಾರ ಬದಲಾಯಿಸುವ ಮೂಲಕ ಮದುವೆಯಾದಂತೆ ನಂಬಿಸಿದ್ದ. ನಂತರ ಆಕೆಗೆ ಗರ್ಭಪಾತ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದ. ಇದಕ್ಕೆ ಒಪ್ಪದಿದ್ದಾಗ ಆಕೆಯ ಮೇಲೆ ಹಲ್ಲೆ ನಡೆಸಿದ್ದು, ಆತನ ಹಿಂಸೆ ಸಹಿಸಲಾಗದೇ ಆಕೆ ತವರು ಮನೆಗೆ ತೆರಳಿದ್ದಳು. ಬಳಿಕ ಅಲ್ಲಿಗೆ ತೆರಳಿ ಅಲ್ಲಿಯೂ ಕೂಡ ಹಲ್ಲೆ ನಡೆಸಿದ್ದ. ಈ ವೇಳೆ ಆರೋಪಿ ಮದುವೆಯ ನಾಟಕವಾಡಿ, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗೆ ಆಕೆಯ ಹೊಟ್ಟೆಯಲ್ಲಿರುವ ಮಗು ತನ್ನದಲ್ಲ ಎಂದು ಕೂಡ ವಾದಿಸಿದ್ದಾನೆ. ಇದರಿಂದ ತನ್ನ ಗಂಡನ ನಿಂದನೆಯನ್ನು ಸಹಿಸಲಾಗದೇ ಆಕೆ 2019ರ ಮೇನಲ್ಲಿ ವಾರ್ಧಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ವಿಚಾರಣೆಯ ವೇಳೆ ಹಾರ ಬದಲಾಯಿಸಿರುವ ಫೋಟೋಗಳು, ಜೊತೆಗೆ ಆಕೆ ನನ್ನ ಪತ್ನಿಯಾಗಿದ್ದು, ನಾನು ಆಕೆಯ ಒಪ್ಪಿಗೆಯಿಂದ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದೆ ಎಂದು ಹೇಳಿಕೊಂಡಿದ್ದನು. ಆದರೆ ಅಪರಾಧ ನಡೆದ ದಿನಾಂಕದಂದು ಸಂತ್ರಸ್ತೆಯ ವಯಸ್ಸು 18ಕ್ಕಿಂತ ಕಡಿಮೆ ಇತ್ತು ಎನ್ನುವುದು ತನಿಖೆಯ ವೇಳೆ ದೃಢಪಟ್ಟಿತ್ತು. ಸಂತ್ರಸ್ತೆಗೆ ಜನಿಸಿದ ಗಂಡು ಮಗುವಿನ ತಂದೆ ಆರೋಪಿ ಎನ್ನುವುದು ಡಿಎನ್‌ಎ ಪರೀಕ್ಷೆಯಲ್ಲಿ ಸಾಬೀತಾಗಿತ್ತು.ಇದನ್ನೂ ಓದಿ: ನಾನು ಯಾವತ್ತೂ ಜಮೀರ್ ಅವ್ರನ್ನ ಕುಳ್ಳ ಅಂತ ಕರೆದಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
ಕಲಬುರಗಿ: 13 ವರ್ಷದ ಗರ್ಭಿಣಿ ಬಾಲಕಿ (Pregnant Girl) ಹೊಟ್ಟೆನೋವಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಕಲಬುರಗಿ (Kalaburagi) ನಗರದ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸರ್ಫರಾಜ್ ಎಂಬಾತ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಜೀವ ಬೆದರಿಕೆ ಹಾಕಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿದ್ದು, ಗರ್ಭಿಣಿಯಾದ ಬಳಿಕ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ; ನಕಲಿ ಅಕೌಂಟ್‌ನ ಅಸಲಿ ಮಾಲೀಕರ ಪತ್ತೆ ಮಾಡಿದ ಸಿಐಡಿ
ಶುಕ್ರವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಗರ್ಭಿಣಿಯಾಗಿರುವುದಾಗಿ ತಿಳಿಸಿದ್ದರು. ಹೊಟ್ಟೆನೋವಿನಿಂದ ಬಾಲಕಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ. ಅತ್ಯಾಚಾರ ಎಸಗಿದ ಆರೋಪಿ ಸರ್ಫರಾಜ್ ಮಿರ್ಜಾನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇನಲ್ಲಿ ರಾಂಗ್ ರೂಟ್‌ನಲ್ಲಿ ಬಂದ ಕಾರಿನಿಂದ ಭೀಕರ ಅಪಘಾತ – 6 ಮಂದಿ ಸ್ಥಳದಲ್ಲೇ ಸಾವು
ಬೆಂಗಳೂರು: ಪ್ರಬುದ್ಧಾಳ ಹತ್ಯೆ (Prabuddha Murder Case) ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಇದೀಗ ಅಪ್ರಾಪ್ತ (Minor) ಬಾಲಕ ಪ್ರಬುದ್ಧಾ ಹತ್ಯೆಯನ್ನು ಆತ್ಮಹತ್ಯೆ (Suicide) ಎಂದು ಬಿಂಬಿಸಲು ಮಾಡಿದ್ದ ಪ್ಲಾನ್ ಬಗ್ಗೆ ಪೊಲೀಸರ ಬಳಿ ಎಳೆಎಳೆಯಾಗಿ ಮಾಹಿತಿ ಬಿಚ್ಚಿಟ್ಟಿದ್ದಾನೆ.
ಕೊಲೆಯಾದ ಪ್ರಬುದ್ಧಾ ಮೈಮೇಲೆ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಂತ ಕಲೆ ಮತ್ತು ಗುರುತನ್ನು ಬಂಡವಾಳ ಮಾಡಿಕೊಂಡು ಕೊಲೆಗೈದಿರುವುದಾಗಿ ಅಪ್ರಾಪ್ತ ಪೊಲೀಸರಿಗೆ ತಿಳಿಸಿದ್ದಾನೆ. ಪ್ರಬುದ್ಧಾಳ ಕುತ್ತಿಗೆ ಹಾಗೂ ಕೈಯಲ್ಲಿದ್ದ ಕಲೆಗಳನ್ನೇ ಬಂಡವಾಳ ಮಾಡಿಕೊಂಡಿದ್ದ ಆರೋಪಿ, ಯುವತಿ ಮೈಮೇಲೆ ಇದ್ದ ಗುರುತುಗಳ ಮಾದರಿಯಲ್ಲಿ ಚಾಕುವಿನಿಂದ ಕೈ ಭಾಗಕ್ಕೆ ಕೊಯ್ದಿದ್ದಾನೆ. ಕೈ ಕೊಯ್ದ ಪರಿಣಾಮ ಅತಿಯಾಗಿ ರಕ್ತಸ್ರಾವವಾಗಿ ಪ್ರಬುದ್ಧಾ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಮತಗಟ್ಟೆಯೊಳಗೆ ಬಿಜೆಪಿಯವರು ಕರಪತ್ರ ತರುತ್ತಿದ್ದಾರೆ: ಆಪ್ ಆರೋಪ
ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ಧಾ ಅನುಮಾನಾಸ್ಪದ ಸಾವಿನ ರಹಸ್ಯವನ್ನು ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ಪ್ರಬುದ್ಧಾ ಸಾವಿನ ಬಗ್ಗೆ ಕ್ಲಾರಿಟಿ ಸಿಗದೇ ಪೊಲೀಸರು ಮೇಲ್ನೋಟಕ್ಕೆ ಇದೊಂದು ಕ್ಲಿಯರ್ ಕಟ್ ಸೂಸೈಡ್ ಎಂದು ಯುಡಿಆರ್ ಕೇಸ್ ದಾಖಲಿಸಿಕೊಂಡಿದ್ದರು. ಪ್ರಬುದ್ಧಾ ತಾಯಿ ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮರಣೋತ್ತರ ಪರೀಕ್ಷೆ ಮಾಡಿಸಿರುತ್ತಾರೆ. ಮರಣೋತ್ತರ ಪರೀಕ್ಷೆಯ ರಿಪೋರ್ಟ್‌ನಲ್ಲಿ ಕೂಡ ಆತ್ಮಹತ್ಯೆಯೋ ಅಥವಾ ಕೊಲೆಯಾ ಎಂಬ ಬಗ್ಗೆ ಕ್ಲಿಯರ್ ಕಟ್ ಆಗಿ ಪೊಲೀಸರಿಗೆ ಮಾಹಿತಿ ಸಿಗೋದಿಲ್ಲ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಾಟ!
ಪೊಲೀಸರು ವಿದ್ಯಾರ್ಥಿನಿ ಪ್ರಬುದ್ಧಾ ಸಾವಿನ ಬಗ್ಗೆ ತಲೆಕೆಡಿಸಿಕೊಂಡು ತನಿಖೆ ಮಾಡಿದಾಗ ಕೊಲೆಯ ಬಗ್ಗೆ ಸಣ್ಣ ಸುಳಿವು ಸಿಗೋದಿಲ್ಲ. ತನಿಖಾಧಿಕಾರಿಗಳ ನಿರಂತರ ಪ್ರಯತ್ನದಿಂದ ಕೊಲೆಯಾಗಿದ್ದ ಮನೆಯಿಂದ ಮೂರ್ನಾಲ್ಕು ರಸ್ತೆಯ ಪಕ್ಕದ ಸಿಸಿಟಿವಿಯಲ್ಲಿ ಸಂಜೆ ಐದು ಗಂಟೆ ಆಸುಪಾಸಿನಲ್ಲಿ ಅಪ್ರಾಪ್ತನೊಬ್ಬ ಹೋಗಿರುವುದರ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಗುತ್ತದೆ. ಮೊದಮೊದಲು ಅಪ್ರಾಪ್ತನ ಬಗ್ಗೆ ಪೊಲೀಸರಿಗೆ ಅಷ್ಟೇನು ಅನುಮಾನ ಬರೋದಿಲ್ಲ. ಮನೆಗೆ ಬಂದವನು ಮರಳಿ ಹೋಗಿದ್ದರ ಮಾಹಿತಿ ಪೊಲೀಸರಿಗೆ ಸಿಗೋದಿಲ್ಲ. ಇದನ್ನೂ ಓದಿ: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಉರುಳಿದ ಆಟೋ – ಚಾಲಕ ದುರ್ಮರಣ
ಪೊಲೀಸರು ಅನುಮಾನ ವ್ಯಕ್ತಪಡಿಸಿ ಅಪ್ರಾಪ್ತನನ್ನು ಕರೆದುಕೊಂಡು ಬಂದು ಪುಸಲಾಯಿಸಿ ಕೇಳಿದಾಗ ಪ್ರಬುದ್ಧಾ ಅನುಮಾನಸ್ಪದ ಸಾವಿನ ರಹಸ್ಯ ಎಳೆ ಎಳೆಯಾಗಿ ಬಿಚ್ಚಿಡುತ್ತಾನೆ. ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮಾಡಿದ್ದ ಪ್ಲಾನ್ ಬಗ್ಗೆ ಪೊಲೀಸರ ಮುಂದೆ ಹೇಳಿದ್ದಾನೆ. ಇದನ್ನೂ ಓದಿ: ಚನ್ನಗಿರಿಯಲ್ಲಿ ಲಾಕಪ್ ಡೆತ್ ಆರೋಪ- ಕುಟುಂಬಸ್ಥರಿಂದ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ
ಬೆಂಗಳೂರು: ಹುಬ್ಬಳ್ಳಿಯಲ್ಲಿ (Hubballi) ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣುಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ ಎಂದು ವಾಗ್ದಾಳಿ ನಡೆಸಿದೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ. ಈ ಹಿಂದೂ ವಿರೋಧಿ ಸರ್ಕಾರ ತೊಲಗಬೇಕು ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.
ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆರೋಪ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿ: ನೇಹಾ ಪ್ರಕರಣ (Neha Hiremath Murder Case) ಮಾಸುವ ಮುನ್ನವೇ ಅಪ್ರಾಪ್ತೆಯನ್ನು ಅನ್ಯಕೋಮಿನ ಯುವಕನೊಬ್ಬ ಗರ್ಭಿಣಿ (Minor Pregnant) ಮಾಡಿ ಅರೆಸ್ಟ್ ಆಗಿದ್ದಾನೆ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಗಳನ್ನು ಕಿಮ್ಸ್ ಆಸ್ಪತ್ರೆಗೆ (KIMS Hospital) ಕರೆದುಕೊಂಡು ಬಂದಾಗ ಪೋಷಕರು ಗರ್ಭಿಣಿಯಾದ ವಿಚಾರ ತಿಳಿದು ಶಾಕ್ ಆಗಿದ್ದಾರೆ. ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿ ಸದ್ದಾಂ ಹುಸೇನ್‌ನನ್ನು ಪೊಲೀಸರು ಈಗ ಬಂಧಿಸಿದ್ದಾರೆ. ಸಂತ್ರಸ್ತೆ ಸ್ನೇಹ ಬಳಸಿ ಸದ್ದಾಂ ಬಲವಂತವಾಗಿ ದೈಹಿಕ ಸಂಭೋಗ ಮಾಡಿದ್ದಾನೆ. ಜೊತೆಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಆರೋಪಿಯನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅಧಿಕೃತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ನಕಲಿ ವೀಡಿಯೋ ಪ್ರಕರಣ – ಕಾಂಗ್ರೆಸ್ ಕಾರ್ಯಕರ್ತ ಅರೆಸ್ಟ್
ಹುಬ್ಬಳ್ಳಿಯ ನವನಗರ ಎಪಿಎಂಸಿ ಠಾಣೆಗೆ ಪೋಷಕರು ಮೊದಲು ದೂರು ನೀಡಿದ್ದರು. ಪ್ರಕರಣ ಬೆಳಕಿಗೆ ಬಂದು 24 ಗಂಟೆಯಾದರೂ ಎಫ್‌ಐಆರ್ (FIR) ದಾಖಲಾಗದ್ದಕ್ಕೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಲುಕ್‌ಔಟ್ ನೋಟಿಸ್
ಅಪ್ರಾಪ್ತೆ ಆಸ್ಪತ್ರೆಗೆ ಬಂದಿದ್ದುನ್ನು ಅರಿತು ಆಕೆಯ ಕುಟುಂಬಸ್ಥರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಿದರೆ ತಂದೆ-ತಾಯಿ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಮಂಡ್ಯ: 17 ವರ್ಷದ ಅಪ್ರಾಪ್ತೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ (Gang Rape) ಎಸಗಿರುವ ಆಘಾತಕಾರಿ ಘಟನೆ ಮಂಡ್ಯದ (Mandya) ಮದ್ದೂರು (Maddur) ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಪ್ರಾಪ್ತೆಯನ್ನು ಸಹಪಾಠಿಗಳೇ ಪುಸಲಾಯಿಸಿ ಕರೆತಂದು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕಿರಾತಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕೃತ್ಯದ ವೀಡಿಯೋ ಮಾಡಿದ್ದಾರೆ. ವೀಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪುನೀತ್, ಮಂಜುನಾಥ್ ಹಾಗೂ ಸಿದ್ದರಾಜು ಬಂಧಿತ ಆರೋಪಿಗಳು. ಮೂವರು ಕೂಡಾ ಮದ್ದೂರು ತಾಲೂಕಿನವರಾಗಿದ್ದು, ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.
ಪ್ರಕರಣದ ಎ1 ಆರೋಪಿ ಪುನೀತ್ ಮೈಸೂರಿನ ಯುವ ದಸರಾದಲ್ಲಿ ಸಂತ್ರಸ್ತೆಯನ್ನು ಪರಿಚಯ ಮಾಡಿಕೊಂಡಿದ್ದ. ಆಕೆಯನ್ನು ಪ್ರೀತಿಸುತ್ತಿರುವುದಾಗಿ ನಂಬಿಸಿ ಸಲುಗೆ ಬೆಳೆಸಿದ್ದ. ಬಳಿಕ ನವೆಂಬರ್ 4 ರಂದು ಮದ್ದೂರಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪುಂಡರ ಹುಚ್ಚಾಟ – ಬೆಂಗಳೂರಿನಲ್ಲಿ 30ಕ್ಕೂ ಹೆಚ್ಚು ವಾಹನಗಳು ಜಖಂ
ಈ ವೇಳೆ ಕಿರಾತಕರು ಕೃತ್ಯದ ವೀಡಿಯೋವನ್ನು ಕೂಡಾ ಮಾಡಿದ್ದಾರೆ. ಬಳಿಕ ಸಂತ್ರಸ್ತೆಯ ಮೊಬೈಲ್‌ಗೆ ವೀಡಿಯೋವನ್ನು ಕಳುಹಿಸಿ ಬೆದರಿಕೆ ಹಾಕಿದ್ದಾರೆ. ಮಾತ್ರವಲ್ಲದೇ ಕರೆದಾಗಲೆಲ್ಲಾ ಬರುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ.
ಇದಾದ ಬಳಿಕ ಅಪ್ರಾಪ್ತೆ ನಡೆದ ಘಟನೆ ಬಗ್ಗೆ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ನಂತರ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಇದರ ಅನ್ವಯ ಮೂವರನ್ನು ಬಂಧಿಸಿದ್ದಾರೆ. ಅತ್ಯಾಚಾರ, ಪೋಕ್ಸೊ, ಆಟ್ರಾಸಿಟಿ ಸೆಕ್ಷನ್ ಅಡಿ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: ದೇವರಿಗೆ ಕೈ ಮುಗಿದು ದೇವಸ್ಥಾನದ ಹುಂಡಿಯನ್ನೇ ದೋಚಿದ ಖದೀಮರು