Tag: Minor Boys

  • ಅಪ್ರಾಪ್ತ ಬಾಲಕರಿಂದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನ

    ಅಪ್ರಾಪ್ತ ಬಾಲಕರಿಂದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನ

    ಶಿವಮೊಗ್ಗ: ಅಪ್ರಾಪ್ತ ಬಾಲಕರು ಕಣ್ಣು ಕಾಣದ, ಕಿವಿ ಕೇಳದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶಿವಮೊಗ್ಗ ನಗರದ ಶರಾವತಿ ನಗರ ಬಡಾವಣೆಯಲ್ಲಿ ನಡೆದಿದೆ.

    ಮೇ 25 ರಿಂದ 27 ರವರೆಗೆ ಪ್ರತಿದಿನ ರಾತ್ರಿ ನಾಲ್ವರು ಬಾಲಕರು 70 ವರ್ಷದ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಒಂಟಿಯಾಗಿ ಮನೆಯಲ್ಲಿ ವಾಸಿಸುತ್ತಿರುವ ಅವರು ಮನೆ ಮನೆಗೆ ತೆರಳಿ, ಭಿಕ್ಷೆ ಬೇಡಿಕೊಂಡು, ಜೀವನ ನಿರ್ವಹಣೆ ಮಾಡುತ್ತಿದ್ದರು.

    ವೃದ್ಧೆ ಎರಡು ಕಣ್ಣು ಮಂಜಾಗಿದ್ದು, ಕಿವಿ ಕೂಡ ಕೇಳಲಾಗದ ಪರಿಸ್ಥಿತಿಯಲ್ಲಿದ್ದಾರೆ. ರಾತ್ರಿ ವೇಳೆ ಕುಡಿದು ಬಂದ ಅಪ್ರಾಪ್ತ ಬಾಲಕರು ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ವೃದ್ಧೆ ಕೂಗಿಕೊಂಡ ಪರಿಣಾಮ ನೆರೆಹೊರೆಯವರು ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಓರ್ವ ಅಪ್ರಾಪ್ತನ್ನು ವಶಕ್ಕೆ ಪಡೆಯಲಾಗಿದೆ.

    ಶಿವಮೊಗ್ಗದ ವಿನೋಭನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಇನ್ನುಳಿದ ಆರೋಪಿಗಳ ಶೋಧ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.

  • 9ರ ಬಾಲಕನ ಮೇಲೆ ಇಬ್ಬರು ಅಪ್ರಾಪ್ತರಿಂದ ಲೈಂಗಿಕ ದೌರ್ಜನ್ಯ

    9ರ ಬಾಲಕನ ಮೇಲೆ ಇಬ್ಬರು ಅಪ್ರಾಪ್ತರಿಂದ ಲೈಂಗಿಕ ದೌರ್ಜನ್ಯ

    ಬೆಳಗಾವಿ: 9 ವರ್ಷದ ಬಾಲಕನ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ.

    ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ನಡೆದು ಮೂರು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

    3 ದಿನಗಳ ಹಿಂದೆ ಬಾಲಕ ಶಾಲೆಯಿಂದ ಮನೆಗೆ ಹೋಗುವಾಗ ಅಪ್ರಾಪ್ತ ಬಾಲಕರು ಮೀನು ಹಿಡಿಯಲು ಕರೆದುಕೊಂಡು ಹೋಗಿದ್ದಾರೆ. ಹೀಗೆ ಪುಸಲಾಯಿಸಿ ಕರೆದುಕೊಂಡು ಹೋಗಿ ಅಪ್ರಾಪ್ತರಿಬ್ಬರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದಾಗಿ ಬಾಲಕನಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ನೋವು ಸಹಿಸಿಕೊಳ್ಳಲು ಸಾಧ್ಯವಾಗದೇ ಇದ್ದಾಗ ಅಪ್ರಾಪ್ತ ಬಾಲಕರು ತನ್ನ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯದ ಬಗ್ಗೆ ಮನೆಯವರಿಗೆ ತಿಳಿಸಿದ್ದಾನೆ.

    ಕೂಡಲೇ ಪೋಷಕರು ಅಸ್ವಸ್ಥ ಬಾಲಕನನ್ನು ಬೆಳಗಾವಿಯ ಜಿಲ್ಲಾಸ್ಪತ್ರೆ ದಾಖಲಿಸಿದ್ದು, ಸದ್ಯ ಬಾಲಕ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದೀಗ ಅಪ್ರಾಪ್ತ ಬಾಲಕರ ವಿರುದ್ಧ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv