Tag: minor girl

  • 8ರ ಬಾಲಕಿ ಮೇಲೆ 6ನೇ ತರಗತಿ ವಿದ್ಯಾರ್ಥಿ ಸೇರಿ ಮೂವರಿಂದ ಗ್ಯಾಂಗ್ ರೇಪ್

    8ರ ಬಾಲಕಿ ಮೇಲೆ 6ನೇ ತರಗತಿ ವಿದ್ಯಾರ್ಥಿ ಸೇರಿ ಮೂವರಿಂದ ಗ್ಯಾಂಗ್ ರೇಪ್

    ಲಕ್ನೋ: 8 ವರ್ಷದ ಬಾಲಕಿ ಮೇಲೆ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಹಾಗೂ ಆತನ ಇಬ್ಬರು ಸಹೋದರರು ಸೇರಿ ಅತ್ಯಾಚಾರ ಮಾಡಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ.

    ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಿನೇ ದಿನೇ ಹೆಚ್ಚುತ್ತಲೇ ಇದೆ. ಬಾಗ್ಪಾಟ್ ಪ್ರದೇಶದ ರಾಮಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ 6ನೇ ತರಗತಿ ವಿದ್ಯಾರ್ಥಿ ಹಾಗೂ ಆತನ ಸಹೋದರರು ಸೇರಿ, 3ನೇ ತರಗತಿ ಬಾಲಕಿ ಮೇಲೆ ಶಾಲೆಯ ಶೌಚಾಲಯದಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

    ಈ ಸಂಬಂಧ ಬಾಲಕಿಯ ತಂದೆ ಆರೋಪಿಗಳ ವಿರುದ್ಧ ದೂರು ನೀಡಲು ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿದ್ದರು. ಆದರೆ ಅಲ್ಲಿ ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲು ಪೊಲೀಸರು 15 ದಿನಗಳ ಕಾಲ ನಿರಾಕರಿಸಿದ್ದರು. ಹಾಗೆಯೇ ಸ್ಟೇಷನ್ ಹೌಸ್ ಅಧಿಕಾರಿಯನ್ನು ಕೂಡ ಈ ಪ್ರಕರಣವನ್ನು ಕೈಬಿಡುವಂತೆ ಬಾಲಕಿಯ ತಂದೆಗೆ ಒತ್ತಾಯಿಸಿದ್ದರು ಎನ್ನಲಾಗಿದೆ.

    ಸೋಮವಾರದಂದು ಬಾಲಕಿ ಆರೋಗ್ಯದಲ್ಲಿ ಏರುಪೇರಾದಾಗ ಈ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಬೇಜವಾಬ್ಧಾರಿ ಮೆರೆದ ಸ್ಟೇಷನ್ ಹೌಸ್ ಅಧಿಕಾರಿಯನ್ನು ಕರ್ತವ್ಯದಿಂದ ವಜಾಗೊಳಿಸಿದ್ದಾರೆ. ಸದ್ಯ ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

    ಈ ಬಗ್ಗೆ ಬಾಗ್ಪತ್ ಎಸ್‍ಪಿ ಪ್ರತಾಪ್ ಗೋಪೇಂದ್ರ ಯಾದವ್ ಮಾತನಾಡಿ, ಘಟನೆ 6ನೇ ತರಗತಿಯ ಓದುತ್ತಿರುವ ವಿದ್ಯಾರ್ಥಿಯ ಅಣ್ಣ ಈ ಕೃತ್ಯವೆಸೆಗಿದ್ದಾನೆ ಎನ್ನಲಾಗಿದೆ. ಆದರೆ ಬಾಲಕಿಯ ತಂದೆ ವಿದ್ಯಾರ್ಥಿ ಜೊತೆಗೆ ಅವನ ಇನ್ನಿಬ್ಬರು ಸಹೋದರರ ಹೆಸರನ್ನೂ ಕೂಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ತನಿಖೆ ನಂತರವೇ ನಿಜಾಂಶ ತಿಳಿಯಲಿದೆ ಎಂದು ಹೇಳಿದರು.

    ಸದ್ಯ ಈ ಸಂಬಂಧ ಮೂವರು ಆರೋಪಿಗಳ ವಿರುದ್ಧವೂ ಐಪಿಸಿ ಸೆಕ್ಷನ್ 376ರ(ಅತ್ಯಾಚಾರ) ಅಡಿಯಲ್ಲಿ ಹಾಗೂ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಮಂಗಳವಾರದಂದು ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ. ಒಮ್ಮೆ ಬಾಲಕಿ ಚೇತರಿಸಿಕೊಂಡ ಬಳಿಕ ಆಕೆಯ ಹೇಳಿಕೆ ಪಡೆದು, ಮುಂದಿನ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಎಸ್‍ಪಿ ತಿಳಿಸಿದರು.

  • 6 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಸಹೋದರರಿಂದ ಗ್ಯಾಂಗ್ ರೇಪ್

    6 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಸಹೋದರರಿಂದ ಗ್ಯಾಂಗ್ ರೇಪ್

    ಲಕ್ನೋ: 6 ವರ್ಷದ ಬಾಲಕಿಯನ್ನು ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರರು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ.

    ಬಾಲಕಿಯು 1ನೇ ತರಗತಿಯವಳಾಗಿದ್ದು, ಮಂಗಳವಾರ ಮಧ್ಯಾಹ್ನ ಆರೋಪಿ ಮನೆಯ ಬಳಿ ಆಡುತ್ತಿರುವಾಗ ಕಾಣಿಯಾಗಿದ್ದಳು. ಮಗಳು ಕಾಣದಿದ್ದಾಗ ಕುಟುಂಬಸ್ಥರು ಹುಡುಕಲು ಪ್ರಾರಂಭಿಸಿದ್ದಾರೆ. ಆದರೆ, ಎಷ್ಟು ಹುಡುಕಿದರೂ ಸಹ ಬಾಲಕಿ ಪತ್ತೆಯಾಗಿಲ್ಲ. ಆಗ ಪೊಲೀಸರಿಗೆ ದೂರು ನೀಡಿದ್ದಾರೆ.

    ಪೊಲೀಸರಿಗೆ ದೂರು ನೀಡುತ್ತಿದ್ದಂತೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಸಂಜೆಯಿಂದ ಬಾಲಕಿಯನ್ನು ಹುಡುಕಲು ಪ್ರಾರಂಭಿಸಿದ್ದಾರೆ. ರಾತ್ರಿಯಾದರೂ ಬಾಲಕಿ ಪತ್ತೆಯಾಗಿಲ್ಲ. ಬುಧವಾರ ಬೆಳಗ್ಗೆ ಆರೋಪಿಗಳ ತಾಯಿ ಪೊಲೀಸರ ಬಳಿ ಶರಣಾಗಿದ್ದು, ಮಕ್ಕಳು ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿದನ್ನು ಕಂಡು ಶವವನ್ನು ಎಸೆಯಲು ನಾನೇ ಸಹಾಯ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾಳೆ.

    ಆರೋಪಿಗಳ ಮನೆಯಿಂದ ಸುಮಾರು 200 ಮೀ. ದೂರದಲ್ಲಿದ್ದ ಬಾಲಕಿಯ ದೇಹವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಆರೋಪಿ ಬಾಲಕರನ್ನು ವಿಚಾರಣೆ ನಡೆಸಿದ್ದು, ಕ್ಯಾಂಡಿ ಆಮೀಷ ಒಡ್ಡಿ ಬಾಲಕಿಯನ್ನು ಕರೆದುಕೊಂಡು ಹೋಗಲಾಗಿತ್ತು ಎಂದು ಒಪ್ಪಿಕೊಂಡಿರುವುದಾಗಿ ಫೋಲ್‍ಬೆಹದ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಶ್ಯಾಮ್ ನರಿಯನ್ ಸಿಂಗ್ ತಿಳಿಸಿದ್ದಾರೆ.

    ಆರೋಪಿಗಳು 15 ಹಾಗೂ 12 ವರ್ಷದವರು, ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಶಾಲೆಯನ್ನು ಬಿಟ್ಟಿದ್ದಾರೆ. ಇವರ ತಂದೆ-ತಾಯಿ ಕಾರ್ಮಿಕರಾಗಿದ್ದು, ಬಾಲಕರು ಚಿಂದಿ ಆಯುವ ಕೆಲಸ ಮಾಡುತ್ತಿದ್ದರು. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸರು ಇಬ್ಬರು ಸಹೋದರರು ಹಾಗೂ ತಾಯಿಯನ್ನು ಬಂಧಿಸಲಾಗಿದೆ. ಮೂವರ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 302(ಕೊಲೆ) ಹಾಗೂ 201(ಸಾಕ್ಷ್ಯ ನಾಶ) ಅಡಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • 15ರ ಬಾಲಕಿ ಗರ್ಭಿಣಿ – ಅತ್ಯಾಚಾರಗೈದ ಹಳಿಯಾಳ ಪುರಸಭೆ ಸಿಬ್ಬಂದಿ ಅರೆಸ್ಟ್

    15ರ ಬಾಲಕಿ ಗರ್ಭಿಣಿ – ಅತ್ಯಾಚಾರಗೈದ ಹಳಿಯಾಳ ಪುರಸಭೆ ಸಿಬ್ಬಂದಿ ಅರೆಸ್ಟ್

    ಕಾರವಾರ: 15 ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ ಪುರಸಭೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡದ ಹಳಿಯಾಳ ತಾಲೂಕಿನಲ್ಲಿ ನಡೆದಿದೆ.

    ಹಳಿಯಾಳದ ಮುರ್ಕವಾಡ ಗ್ರಾಮದ ನಿವಾಸಿ ಸಚಿನ್ ಹೊಳೆಪ್ಪನವರ್(24) ಬಂಧಿತ ಆರೋಪಿಯಾಗಿದ್ದಾನೆ. ಸಚಿನ್ ಹಳಿಯಾಳ ಪುರಸಭೆಯಲ್ಲಿ ಜೆಸಿಬಿ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದನು.

    ಸಚಿನ್ ತನ್ನ ಊರಿನ ಬಾಲಕಿಯೊಬ್ಬಳ ಮೇಲೆ ಅತ್ಯಚಾರ ನಡೆಸಿದ್ದನು. ಆದರೆ ಈ ಬಗ್ಗೆ ಬಾಲಕಿ ಯಾರಿಗೂ ತಿಳಿಸಿರಲಿಲ್ಲ. ಕೆಲವು ದಿನಗಳ ಬಳಿಕ ಆರೋಗ್ಯ ಸಮಸ್ಯೆ ಕಂಡುಬಂದ ಕಾರಣಕ್ಕೆ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ತಪಾಸಣೆ ವೇಳೆ ಆಕೆ ಗರ್ಭಿಣಿಯಾಗಿರುವುದು ಬಹಿರಂಗವಾಗಿದೆ.

    ವಿಷಯ ತಿಳಿದ ತಕ್ಷಣ ಬಾಲಕಿಯನ್ನು ವಿಚಾರಿಸಿದಾಗ ಆರೋಪಿಯ ಕೃತ್ಯ ಬೆಳಕಿಗೆ ಬಂದಿದೆ. ನಂತರ ಪಾಲಕರು ಹಳಿಯಾಳದ ಜೀಜಾಮಾತಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ದೂರು ನೀಡಿದ್ದಾರೆ. ಸದ್ಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

  • ಆಟವಾಡುತ್ತಿದ್ದ ಅಪ್ರಾಪ್ತೆಯನ್ನ ಎಳೆದೊಯ್ದು ರೇಪ್ ಮಾಡಿದ 50ರ ಕಾಮುಕ

    ಆಟವಾಡುತ್ತಿದ್ದ ಅಪ್ರಾಪ್ತೆಯನ್ನ ಎಳೆದೊಯ್ದು ರೇಪ್ ಮಾಡಿದ 50ರ ಕಾಮುಕ

    ರಾಮನಗರ: ಕಾಮುಕನೊಬ್ಬ ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನ ಎಳೆದೊಯ್ದು ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಕನಕಪುರ ತಾಲೂಕಿನಲ್ಲಿ ನಡೆದಿದೆ.

    ಕನಕಪುರ ತಾಲೂಕಿನ ಶಿಹಿರಾ(50) ಅತ್ಯಾಚಾರ ಎಸಗಿದ ಕಾಮುಕ. ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಸಂತ್ರಸ್ತೆ ತಮ್ಮ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಅದೇ ಗ್ರಾಮದ ಶಿಹಿರಾ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕಣ್ಣೀರು ಹಾಕುತ್ತಾ ಮನೆಗೆ ಬಂದ ಬಾಲಕಿ ಪೋಷಕರಿಗೆ ಘಟನೆಯ ಬಗ್ಗೆ ಹೇಳಿಕೊಂಡಿದ್ದಾಳೆ. ತಕ್ಷಣವೇ ಪೋಷಕರು ಸಾತನೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

    ಆರೋಪಿ ಶಿಹಿರಾನನ್ನು ಬಂಧಿಸಿದ ಸಾತನೂರು ಪೊಲೀಸ್ ಪೊಲೀಸರು, ಆತನ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ಸಂತ್ರಸ್ತೆಯ ಪೋಷಕರು, ಗ್ರಾಮಸ್ಥರು ಶಿಹಿರಾ ವಿರುದ್ಧ ಸೂಕ್ತ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

  • ಕತ್ತಿಯಿಂದ ಬೆದರಿಸಿ 7ರ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ ತಂದೆ

    ಕತ್ತಿಯಿಂದ ಬೆದರಿಸಿ 7ರ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ ತಂದೆ

    ಜೈಪುರ: ತಂದೆಯೇ ತನ್ನ 7 ವರ್ಷದ ಮಗಳನ್ನು ಕತ್ತಿಯಿಂದ ಬೆದರಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ರಾಜಸ್ಥಾನದ ಬಿಲ್ವಾರ ಜಿಲ್ಲೆಯಲ್ಲಿ ನಡೆದಿದೆ.

    ತಂದೆ ಮಗಳ ಮೇಲೆ ಅತ್ಯಾಚಾರ ಎಸುತ್ತಿದ್ದ ವಿಚಾರ ಸೋಮವಾರ ಮಕ್ಕಳ ಕಲ್ಯಾಣ ಆಯೋಗದ ಗಮನಕ್ಕೆ ಬಂದಿತ್ತು. ತಕ್ಷಣವೇ ಪೊಲೀಸರ ಸಹಾಯದಿಂದ ಬಾಲಕಿಯನ್ನು ರಕ್ಷಿಸಲಾಗಿದೆ. ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಆರಂಭವಾಗಿದೆ.

    ಮದ್ಯ ವ್ಯಸನಿಯಾಗಿರುವ ಆರೋಪಿ ಜೊತೆಗೆ ಜೀವನ ಮಾಡಲು ಪತ್ನಿ ನಿರಾಕರಿಸಿದ್ದಳು. ಹೀಗಾಗಿ 9 ತಿಂಗಳ ಹಿಂದೆಯೇ ಮಗಳನ್ನು ಕರೆದುಕೊಂಡು ಮನೆ ಬಿಟ್ಟು ಹೋಗಿದ್ದಳು. ಆದರೆ ಆರೋಪಿ ಮಗಳನ್ನು ಕರೆದುಕೊಂಡು ಬಂದಿದ್ದ.

    ಆರೋಪಿಯು ವೃದ್ಧೆ ತಾಯಿ ಹಾಗೂ ಮಗಳ ಜೊತೆಗೆ ವಾಸಿಸುತ್ತಿದ್ದ. ಮದ್ಯದ ಅಮಲಿನಲ್ಲಿದ್ದ ಆರೋಪಿ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಕತ್ತಿಯಿಂದ ಹೆದರಿಸಿ ನಿರಂತರ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ಈ ವಿಚಾರವನ್ನು ಅಜ್ಜಿಯ ಬಳಿ ಹೇಳಿಕೊಂಡು ಕಣ್ಣೀರು ಹಾಕಿದ್ದಾಳೆ. ಮಗನ ಅಮಾನವೀಯ ಕೃತ್ಯದಿಂದ ಮನನೊಂದ ಅಜ್ಜಿ ಮಕ್ಕಳ ಕಲ್ಯಾಣ ಆಯೋಗದ ಅಧಿಕಾರಿಗಳನ್ನು ಭೇಟಿಯಾಗಿ ಘಟನೆಯನ್ನು ವಿವರಿಸಿದ್ದಾಳೆ.

    ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆ ಸೇರಿದಂತೆ, ಐಪಿಸಿ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯನ್ನು ಮಕ್ಕಳ ಕಲ್ಯಾಣ ಆಯೋಗಕ್ಕೆ ಒಪ್ಪಿಸಲಾಗಿದೆ. ಅಷ್ಟೇ ಅಲ್ಲದೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ.

  • ಸಾಲದ ಹಣಕ್ಕಾಗಿ ಅಪ್ರಾಪ್ತೆಯನ್ನು ಒತ್ತೆ ಇಟ್ಕೊಂಡು ವೇಶ್ಯಾವಾಟಿಕೆಗೆ ತಳ್ಳಿದ್ರು

    ಸಾಲದ ಹಣಕ್ಕಾಗಿ ಅಪ್ರಾಪ್ತೆಯನ್ನು ಒತ್ತೆ ಇಟ್ಕೊಂಡು ವೇಶ್ಯಾವಾಟಿಕೆಗೆ ತಳ್ಳಿದ್ರು

    – ಕೃತ್ಯಕ್ಕೆ ಪೇದೆಯಿಂದ ಬೆಂಬಲ

    ಮೈಸೂರು: ಸಾಲ ವಾಪಸ್ ಕೊಡದಿದ್ದಕ್ಕೆ ಅಪ್ರಾಪ್ತೆಯನ್ನು ಕೀಚಕರು ಒತ್ತೆ ಇಟ್ಟುಕೊಂಡು ವೇಶ್ಯಾವಾಟಿಕೆಗೆ ತಳ್ಳಿದ ಅಮಾನವೀಯ ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ನಗರದ ಪದ್ಮಾ ಹಾಗೂ ಪ್ರಸನ್ನ ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ಆರೋಪಿಗಳು. ಇವರಿಗೆ ಮೈಸೂರಿನ ಕೆ.ಆರ್.ಸಂಚಾರಿ ಠಾಣೆಯ ಪೇದೆ ಮಹೇಶ್ ಬೆಂಬಲವಾಗಿ ನಿಂತಿದ್ದ ಎಂಬ ವಿಚಾರ ತನಿಖೆಯ ವೇಳೆ ಹೊರ ಬಿದ್ದಿದೆ.

    ಆಗಿದ್ದೇನು?:
    ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿ ಹಾಗೂ ಮಾವನ ಚಿಕಿತ್ಸೆಗಾಗಿ ಸಂತ್ರಸ್ತ ಬಾಲಕಿಯ ತಂದೆ ಪದ್ಮಾ ಬಳಿ ಸಾಲ ಪಡೆದಿದ್ದ. ಆದರೆ ಬಾಲಕಿಯ ತಂದೆ ಸಾಲವನ್ನು ಹಿಂದಿರುಗಿಸುವಲ್ಲಿ ವಿಳಂಬ ಮಾಡಿದ್ದರು. ಇದರಿಂದಾಗಿ ಪದ್ಮಾ ಬಾಲಕಿಯನ್ನು ಒತ್ತೆ ಇಟ್ಟುಕೊಂಡಿದ್ದರು. ಬಳಿಕ ಪದ್ಮಾ ತಮ್ಮ ಪ್ರಸನ್ನ ಸೇರಿ ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ್ದರು. ಈ ಮೂಲಕ ಆರೋಪಿಗಳು ಬರೋಬ್ಬರಿ 6 ತಿಂಗಳಿಂದ ಅಪ್ರಾಪ್ತೆಯನ್ನ ಒತ್ತೆಯಾಗಿಟ್ಟುಕೊಂಡು ನೀಚ ಕೃತ್ಯ ಎಸಗಿದ್ದಾರೆ. ಇದಕ್ಕೆ ಪೇದೆ ಮಹೇಶ್ ಕೂಡ ಬೆಂಬಲ ನೀಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    6 ತಿಂಗಳ ಕಾಲ ನರಕದಲ್ಲಿದ್ದ ಅಪ್ರಾಪ್ತೆಯನ್ನು ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ರಕ್ಷಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಪದ್ಮಾ, ಪ್ರಸನ್ನ ಹಾಗೂ ಪೇದೆ ಮಹೇಶ್‍ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಅಪ್ರಾಪ್ತೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಈ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

  • ಅಪ್ರಾಪ್ತೆಗೆ ಯುವಕರಿಂದ ಕಿರುಕುಳ – ಮನನೊಂದು ಬಾಲಕಿ ಆತ್ಮಹತ್ಯೆ

    ಅಪ್ರಾಪ್ತೆಗೆ ಯುವಕರಿಂದ ಕಿರುಕುಳ – ಮನನೊಂದು ಬಾಲಕಿ ಆತ್ಮಹತ್ಯೆ

    ಬೆಂಗಳೂರು: ಪದೇ ಪದೇ ಪ್ರೀತಿಸು ಎಂದು ಇಬ್ಬರು ಯುವಕರ ಹಿಂಸೆ ತಾಳಲಾರದೇ ಅಪ್ರಾಪ್ತ ಬಾಲಕಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಧನಲಕ್ಷ್ಮೀ (14) ಮೃತ ದುರ್ದೈವಿ. ಈಕೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಆರೋಪಿಗಳಾದ ಜಗದೀಶ್ ಹಾಗೂ ರವಿಕುಮಾರ್ ಪ್ರೀತಿಸುವಂತೆ ಬಾಲಕಿಗೆ ಕಿರುಕುಳ ನೀಡುತ್ತಿದ್ದರು.

    ಯುವಕರ ಕಿರುಕುಳ ತಾಳಲಾರದೆ ಧನಲಕ್ಷ್ಮೀ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೀಮೆಎಣ್ಣೆ ಸುರಿದುಕೊಂಡ ನಂತರ ಬಾಲಕಿಯನ್ನು ಚಿಕಿತ್ಸೆಗೆಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು.

    ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಧನಲಕ್ಷ್ಮೀ ಮೃತಪಟ್ಟಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜಗದೀಶ್ ಹಾಗೂ ರವಿಕುಮಾರ್ ಎಂಬ ಇಬ್ಬರನ್ನೂ ಬಂಧಿಸಿದ್ದಾರೆ. ಈ ಬಗ್ಗೆ ಡಾಬಸ್‍ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಪ್ರಾಪ್ತರ ಪ್ರೇಮ್ ಕಹಾನಿ ಬಾಲಕಿಯ ಆತ್ಮಹತ್ಯೆಯಲ್ಲಿ ಅಂತ್ಯ

    ಅಪ್ರಾಪ್ತರ ಪ್ರೇಮ್ ಕಹಾನಿ ಬಾಲಕಿಯ ಆತ್ಮಹತ್ಯೆಯಲ್ಲಿ ಅಂತ್ಯ

    ಕೋಲಾರ: ಎರಡು ಕುಟುಂಬಗಳ ನಡುವೆ ಗಲಾಟೆಗೆ ಕಾರಣವಾಗಿದ್ದ ಅಪ್ರಾಪ್ತ ಪ್ರೇಮಿಗಳಿಬ್ಬ ಪ್ರೇಮ್ ಕಹಾನಿಯೊಂದು ಬಾಲಕಿಯ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ.

    ಶ್ರೀನಿವಾಸಪುರ ತಾಲೂಕಿನ ಶಿವಪುರ ಗ್ರಾಮದ ಶ್ರೀವಾಣಿ (15) ಆತ್ಮಹತ್ಯೆಗೆ ಶರಣಾದ ಬಾಲಕಿ. ಶ್ರೀವಾಣಿ ಇಂದು ಮನೆಯಲ್ಲಿ ಯಾರು ಇಲ್ಲದಿದ್ದಾಗ ನೇಣು ಹಾಕಿಕೊಂಡು ಪ್ರಾಣ ಬಿಟ್ಟದ್ದಾಳೆ. ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಶಿವಪುರ ಗ್ರಾಮದ 17 ವರ್ಷದ ಬಾಲಕ ತನ್ನನ್ನು ಪ್ರೀತಿಸುವಂತೆ ಶ್ರೀವಾಣಿಗೆ ಒತ್ತಾಯಿಸುತ್ತಿದ್ದ. ಪ್ರೀತಿಯ ವಿಚಾರವಾಗಿ ಬಾಲಕ 5 ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಪ್ರೀತಿ ವಿಚಾರವಾಗಿ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿಸಿದ ಪೋಷಕರು, ಶ್ರೀವಾಣಿ ಕುಟುಂಬದವರ ಜೊತೆಗೆ ಗಲಾಟೆ ಮಾಡಿದ್ದರು. ಇದರಿಂದ ಮನನೊಂದ ಬಾಲಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶ್ರೀವಾಣಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    ಶ್ರೀವಾಣಿ ಆತ್ಮಹತ್ಯೆಯಿಂದ ಆಕ್ರೋಶಗೊಂಡ ಪೋಷಕರು ಬಾಲಕನ ಮನೆಯವರ ಮೇಲೆ ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಅಪ್ರಾಪ್ತೆಯ ಮೇಲೆ 8 ದಿನ ನಾಲ್ವರು ಪೊಲೀಸರಿಂದ ಗ್ಯಾಂಗ್ ರೇಪ್

    ಅಪ್ರಾಪ್ತೆಯ ಮೇಲೆ 8 ದಿನ ನಾಲ್ವರು ಪೊಲೀಸರಿಂದ ಗ್ಯಾಂಗ್ ರೇಪ್

    ಭುವನೇಶ್ವರ್: ಅಪ್ರಾಪ್ತೆಯ ಮೇಲೆ ನಾಲ್ವರು ಪೊಲೀಸ್ ಅಧಿಕಾರಿಗಳು ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ.

    ಜಾರ್ಸಗುಡಾದ ಪೊಲೀಸರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಸಂತ್ರಸ್ತೆ ದೂರಿದ್ದಾಳೆ. ಪ್ರವಾಸಕ್ಕೆಂದು ಕರೆದುಕೊಂಡು ಬಂದಿದ್ದ ಗೆಳೆಯ ಪರಾರಿಯಾಗಿದ್ದಾನೆ.

    ಆಗಿದ್ದೇನು?:
    ಸಂತ್ರಸ್ತೆ ಗೆಳೆಯ ರವಿ ಜೊತೆಗೆ ಪ್ರವಾಸಕ್ಕೆಂದು ಹೋಗಿದ್ದರು. ಹೀಗಾಗಿ ಜಾರ್ಸಗುಡಾದ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಕರ್ತವ್ಯನಿರತ ಹಾಗೂ ಸಮವಸ್ತ್ರದ ಧರಿಸಿದ್ದ ನಾಲ್ವರು ಪೊಲೀಸರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯಿಂದಾಗಿ ರವಿ ಕೂಡ ಗಾಬರಿಗೊಂಡಿದ್ದ.

    ಪೊಲೀಸರು ಬಾಲಕಿಯ ಮೇಲೆ ನಿರಂತರವಾಗಿ 8 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. 8ನೇ ದಿನ ರವಿ ಬಾಲಕಿಯನ್ನು ಹೋಟೆಲ್ ಹೊರಗಡೆ ಕರೆದುಕೊಂಡು ಬಂದಿದ್ದಾನೆ. ಅಲ್ಲಿಂದ ಜಾರ್ಖಂಡಿನ ಜುಗ್ಸಾಲೈ ನಗರದ ಹೋಟೆಲ್‍ಗೆ ಬಂದಿದ್ದಾನೆ. ಆದರೆ ರೂಮ್‍ನಲ್ಲಿ ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾನೆ.

    ಬಾಲಕಿ ಕಣ್ಣು ತೆರೆದು ನೋಡಿದಾಗ ರವಿ ಸ್ಥಳದಲ್ಲಿ ಇರಲಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿ ಹೋಟೆಲ್ ಮಾಲೀಕರ ಬಳಿ ಅಳಲು ತೋಡಿಕೊಂಡಿದ್ದಾಳೆ. ಇದಕ್ಕೆ ಸ್ಪಂದಿಸಿದ ಮಾಲೀಕ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾರೆ.

    ಸಂತ್ರಸ್ತೆಯನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಕೇಂದ್ರದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಜುಗ್ಸಾಲೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

  • ಅಪಹರಿಸಿ, ಕೊಲೆಗೈದು ಅಪ್ರಾಪ್ತೆಯ ಶವದ ಮೇಲೆಯೇ ಅತ್ಯಾಚಾರ ಮಾಡ್ದ!

    ಅಪಹರಿಸಿ, ಕೊಲೆಗೈದು ಅಪ್ರಾಪ್ತೆಯ ಶವದ ಮೇಲೆಯೇ ಅತ್ಯಾಚಾರ ಮಾಡ್ದ!

    ಡೆಹ್ರಾಡೂನ್: ಆರು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಕೊಲೆಗೈದು, ಆಕೆಯ ಶವದ ಮೇಲೆಯೇ ಕಾಮುಕನೊಬ್ಬ ಅತ್ಯಾಚಾರವೆಸಗುವ ಮೂಲಕ ಮೃಗೀಯ ವರ್ತನೆ ತೋರಿದ ಘಟನೆ ಉತ್ತರಾಖಂಡ್ ನಲ್ಲಿ ನಡೆದಿದೆ.

    ಬಾಲಕಿ ಪೋಷಕರು ಕೂಲಿ ಕಾರ್ಮಿಕರಾಗಿದ್ದು, ಶುಕ್ರವಾರದಂದು ಅವರು ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ತನ್ನ ಗೆಳೆಯರ ಜೊತೆ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಕಾಣೆಯಾಗಿದ್ದಳು. ಸಂಜೆ ಮನೆಗೆ ಬಂದ ಪೋಷಕರು ಮಗಳು ಕಾಣೆಯಾಗಿರುವ ವಿಷಯ ತಿಳಿದು ಹುಡುಕಾಟ ನಡೆಸಿದ್ದಾರೆ. ಆದ್ರೆ ಶನಿವಾರದಂದು ಕಾಡಿನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.

    ಬಾಲಕಿಯ ಮನೆ ಬಳಿ ಇದ್ದ ಪೌಲ್ಟ್ರಿ ಫಾರಂ ಸೆಕ್ಯುರಿಟಿ ಗಾರ್ಡ್ ಈ ಕೃತ್ಯವೆಸಗಿದ್ದಾನೆ. ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿದ ಆರೋಪಿ, ಆಕೆಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರ ನಡೆಸಲು ಮುಂದಾಗಿದ್ದಾನೆ. ಈ ವೇಳೆ ಬಾಲಕಿ ಕಿರುಚಾಡಿದ್ದಕ್ಕೆ ಕೋಪಗೊಂಡು ಆಕೆಯನ್ನ ಕೊಲೆ ಮಾಡಿದ್ದಾನೆ. ಬಳಿಕ ಬಾಲಕಿಯ ಶವದ ಮೇಲೆಯೇ ಅತ್ಯಾಚಾರವೆಸಗಿ ತನ್ನ ಕಾಮತೃಷೆ ತೀರಿಸಿಕೊಳ್ಳುವ ಮೂಲಕ ವಿಕೃತಿ ಮೆರೆದಿದ್ದಾನೆ.

    ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಅಲ್ಲದೆ ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.