Tag: minor girl

  • 6ರ ಬಾಲೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧ

    6ರ ಬಾಲೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧ

    – ಎತ್ತಿ ಆಟವಾಡಿಸುತ್ತಿದ್ದ ತಾತನಿಂದಲೇ ಅಮಾನವೀಯ ಕೃತ್ಯ

    ಕೋಲಾರ: ಎತ್ತಿಕೊಂಡು ಪಾಪು… ಪಾಪು… ಎಂದು ಆಟವಾಡಿಸುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ವೃದ್ಧನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಮುಳಬಾಗಿಲು ತಾಲೂಕಿನಲ್ಲಿ ಘಟನೆ ನಡೆದಿದ್ದು, ಆರೋಪಿ 60 ವರ್ಷದ ವೃದ್ಧ ತಲೆಮರೆಸಿಕೊಂಡಿದ್ದಾನೆ. ಘಟನೆಯಿಂದ ಬಾಲಕಿ ಅಸ್ವಸ್ಥಗೊಂಡಿದ್ದು, ಮುಳುಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಆಗಿದ್ದೇನು?:
    ಆರೋಪಿ ವೃದ್ಧ ಬಾಲಕಿಯ ನೆರೆಹೊರೆಯವನಾಗಿದ್ದಾನೆ. ಹೀಗಾಗಿ ಪ್ರತಿನಿತ್ಯ ಮನೆಯ ಬಳಿ ಬರುತ್ತಿದ್ದ ಬಾಲಕಿಯನ್ನು ಎತ್ತಿಕೊಂಡು ಆಟವಾಡಿಸುತ್ತಿದ್ದ. ಆದರೆ ಬುಧವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದೇ ಇರುವಾಗ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಬಾಲಕಿ ವೃದ್ಧನ ಕೈಯಿಂದ ತಪ್ಪಿಸಿಕೊಂಡು ಬಂದಿದ್ದಾಳೆ.

    ಮಗಳು ಮನೆಗೆ ಬಂದಾಗ ತುಂಬಾ ಗಾಬರಿಗೊಂಡಿದ್ದಳು. ಅಷ್ಟೇ ಅಲ್ಲದೆ ಅಸ್ವಸ್ಥಗೊಂಡು ಮಲಗಿದ್ದಳು. ಮಗಳು ಯಾಕೆ ಹೀಗೆ ಮಾಡುತ್ತಿದ್ದಾಳೆ ಎನ್ನುವ ಅನುಮಾನ ನಮಗೆ ಶುರುವಾಗಿತ್ತು. ತಕ್ಷಣವೇ ಆಕೆಯನ್ನು ವಿಚಾರಿಸಿದಾಗ ಘಟನೆ ನಮಗೆ ಹೇಳಿದಳು ಎಂದು ಬಾಲಕಿಯ ತಾಯಿ ತಿಳಿಸಿದ್ದಾರೆ.

    ಬಾಲಕಿಯ ತಂದೆಯು ಅತ್ಯಾಚಾರಕ್ಕೆ ಯತ್ನಿಸಿದ್ದ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಆದರೆ ವೃದ್ಧ ಹಲ್ಲೆಯಿಂದ ತಪ್ಪಿಸಿಕೊಂಡಿದ್ದು, ತಲೆಮರಿಸಿಕೊಂಡಿದ್ದಾನೆ. ಈ ಕುರಿತು ಬಾಲಕಿಯ ಪೋಷಕರು ನಂಗಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಈ ಸಂಬಂಧ ನಂಗಲಿ ಪೊಲೀಸ್ ಠಾಣೆಯಲ್ಲಿ ಪೊಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧಕಾರ್ಯ ಆರಂಭವಾಗಿದೆ.

  • ಅಪ್ರಾಪ್ತೆ ಮೇಲೆ ಅತ್ಯಾಚಾರ – ತಾಳಿ ಕಟ್ಟಿದ ಪತಿ ಜೊತೆ ಪತ್ನಿ ಅರೆಸ್ಟ್

    ಅಪ್ರಾಪ್ತೆ ಮೇಲೆ ಅತ್ಯಾಚಾರ – ತಾಳಿ ಕಟ್ಟಿದ ಪತಿ ಜೊತೆ ಪತ್ನಿ ಅರೆಸ್ಟ್

    ಕೋಲಾರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಗಂಡನ ಕೈಯಿಂದಲೇ ಅಪ್ರಾಪ್ತಗೆ ತಾಳಿ ಕಟ್ಟಿಸಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ದಂಪತಿಯನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.

    ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಹುಣಸಿಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಂಧ್ರಪ್ರದೇಶದ ಪಲಮನೇರು ಮೂಲದ ಗಂಗರಾಜು ಮತ್ತು ಪಲ್ಲವಿ ದಂಪತಿಯನ್ನು ಮಾಸ್ತಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನ ಅನ್ವಯ ಪೋಕ್ಸೋ ಮತ್ತು ಬಾಲ್ಯವಿವಾಹ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

    ಘಟನೆಯ ವಿವರ:
    ಸಂತ್ರಸ್ತೆ ತನ್ನ ದೊಡ್ಡಮ್ಮನ ಮಗಳು ಪಲ್ಲವಿ ಜೊತೆ ವಾಸಿಸುತ್ತಿದ್ದಳು. ಪಲ್ಲವಿಗೆ ಈಗಾಗಲೇ ಒಂದು ಮದುವೆಯಾಗಿದ್ದು, ಪತಿ ಆಕೆಯಿಂದ ದೂರವಾಗಿದ್ದಾನೆ. ಬಳಿಕ ಆಕೆ ಗಂಗಾಧರ್ ಜೊತೆ ಮದುವೆಯಾಗಿದ್ದಾಳೆ.

    ಆರೋಪಿ ಗಂಗರಾಜು ಆಂಧ್ರದ ಪಲಮನೇರು ಗ್ರಾಮದ ಜೇಡಕಾಮನಪಲ್ಲಿಯ ವಾಸಿಯಾಗಿದ್ದು, ಟೇಕಲ್‍ನ ಹುಣಸಿಕೋಟೆಯಲ್ಲಿ ಟ್ರ್ಯಾಕ್ಟರ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದನು. ಗಂಗರಾಜು ಮಾರ್ಚ್ 9ರ ಮಧ್ಯಾಹ್ನ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದು, ವಿಚಾರ ತಿಳಿದ ಪತ್ನಿ ಪಲ್ಲವಿ ಮನೆಯಲ್ಲೇ ತಾಳಿ ಕಟ್ಟಿಸಿದ್ದಾಳೆ. ಬಳಿಕ ಈ ವಿಚಾರ ಯಾರಿಗೂ ತಿಳಿಸದಂತೆ, ತಿಳಿಸಿದರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ.

    ಸಂತ್ರಸ್ತೆ ಅತ್ಯಾಚಾರಗೊಳಗಾದ ವಿಷಯ ಮಾಲೂರಿನ ಮಕ್ಕಳ ಸಹಾಯವಾಣಿಗೆ ತಿಳಿಯಿತು. ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸಂತ್ರಸ್ತೆಯನ್ನು ಪ್ರಶ್ನಿಸಿದ್ದಾಗ ಆಕೆ ಅತ್ಯಾಚಾರ ಆಗಿಲ್ಲ ಎಂದು ಹೇಳಿದ್ದಾಳೆ. ಇದಾದ ಬಳಿಕ ಮಕ್ಕಳ ಸಹಾಯವಾಣಿ ಸಿಬ್ಬಂದಿ, ಎನ್‍ಜಿಒ ಕೌನ್ಸೆಲರ್ ಮತ್ತೊಮ್ಮೆ ಬಾಲಕಿಯ ಹೇಳಿಕೆಯನ್ನು ಪಡೆದಿದ್ದಾರೆ. ಆಗ ಅಪ್ರಾಪ್ತೆ ತನ್ನ ಮೇಲೆ ಅತ್ಯಾಚಾರ ಆಗಿರುವ ವಿಷಯದ ಬಗ್ಗೆ ಹೇಳಿಕೊಂಡಿದ್ದಾಳೆ.

    ಇದಾದ ಬಳಿಕ ಸಂತ್ರಸ್ತೆ ತಂದೆ ಮಂಜುನಾಥ್ ಈ ವಿಚಾರ ತಿಳಿದ ಕೂಡಲೆ ಮಾಸ್ತಿ ಪೊಲೀಸರಿಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ. ಮಾಸ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯ ಬಂಧನಕ್ಕೆ ಒಪ್ಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸ್ವೀಟ್ ಆಸೆ ತೋರಿಸಿ 9ರ ಬಾಲಕಿ ಮೇಲೆ ಅತ್ಯಾಚಾರ!

    ಸ್ವೀಟ್ ಆಸೆ ತೋರಿಸಿ 9ರ ಬಾಲಕಿ ಮೇಲೆ ಅತ್ಯಾಚಾರ!

    ಹೈದರಾಬಾದ್: ಸ್ವೀಟ್ ನೀಡುವುದಾಗಿ ಆಸೆ ತೋರಿಸಿ ಯುವಕನೋರ್ವ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಅಮಾನವೀಯ ಘಟನೆ ಆಂಧ್ರ ಪ್ರದೇಶದ ಸಿಂಗರೆನಿ ಕಾಲೋನಿಯಲ್ಲಿ ನಡೆದಿದೆ.

    ಸಿಂಗರೆನಿ ಕಾಲೋನಿಯ ನಿವಾಸಿ ಶ್ರೀನಿವಾಸ್(28) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಮನೆಯ ಪಕ್ಕದ ಮನೆಯಲ್ಲಿಯೇ ಶ್ರೀನಿವಾಸ್ ವಾಸಿಸುತ್ತಿದ್ದನು. ಶುಕ್ರವಾರ ರಾತ್ರಿ ಸುಮಾರು 7.30ರ ಹೊತ್ತಿಗೆ ಬಾಲಕಿ ತನ್ನ ಸಹೋದರನ ಜೊತೆ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದ ಶ್ರೀನಿವಾಸ್ ಬಾಲಕಿಗೆ ಸ್ವೀಟ್ ಕೊಡುತ್ತೇನೆ ಬಾ ಎಂದು ತನ್ನೊಡನೆ ಕರೆದೋಯ್ದು ಅತ್ಯಾಚಾರ ಮಾಡಿದ್ದಾನೆ.

    ಈ ವಿಷಯವನ್ನು ಬಾಲಕಿ ಯಾರ ಬಳಿಯೂ ಹೇಳಿರಲಿಲ್ಲ. ಬಳಿಕ ಶನಿವಾರ ಬೆಳಗ್ಗೆ ಹೊಟ್ಟೆ ನೋವೆಂದು ಬಾಲಕಿ ನರಳಾಡುತ್ತಿದ್ದ ವೇಳೆ ಆಕೆಯ ತಾಯಿ ಪ್ರಶ್ನಿಸಿದಾಗ, ನಡೆದ ಘಟನೆಯನ್ನು ಬಾಲಕಿ ವಿವರಿಸಿದ್ದಾಳೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಬಾಲಕಿಯ ತಾಯಿ ನಗರದ ಸಾಯಿದಾಬಾದ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ನೀಡಿದ್ದಾರೆ.

    ಸದ್ಯ ದೂರಿನ ಆಧಾರದ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376(2) ಹಾಗೂ ಪೋಸ್ಕೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಅಪ್ರಾಪ್ತೆಯನ್ನು ನಗ್ನಗೊಳಿಸಿ, ಬ್ಲೇಡ್‍ನಿಂದ ಕೊಯ್ದು ವಿಡಿಯೋ ಮಾಡ್ದ!

    ಅಪ್ರಾಪ್ತೆಯನ್ನು ನಗ್ನಗೊಳಿಸಿ, ಬ್ಲೇಡ್‍ನಿಂದ ಕೊಯ್ದು ವಿಡಿಯೋ ಮಾಡ್ದ!

    – ಡ್ರಗ್ ಅಡಿಕ್ಟ್ ಆರೋಪಿಗೆ ಸ್ಥಳಿಯರಿಂದ ಗೂಸಾ

    ಹೈದರಾಬಾದ್: ಡ್ರಗ್ ವ್ಯಸನಿಯೊಬ್ಬ ಅಪ್ರಾಪ್ತೆಯನ್ನು ನಗ್ನಗೊಳಿಸಿ ಬಳಿಕ ಆಕೆಯ ಮೈಯನ್ನು ಬ್ಲೇಡ್ ನಿಂದ ಕೊಯ್ದು ವಿಡಿಯೋ ಮಾಡಿದ ಘಟನೆ ಗುರುವಾರ ಹೈದರಾಬಾದಿನ ಗಾಂಧಿನಗರದಲ್ಲಿ ನಡೆದಿದೆ.

    ಬಾಲಕಿಯ ಮೈಯನ್ನು ಬ್ಲೇಡ್‍ನಿಂದ ಗಾಯಗೊಳಿಸಿದ ಪರಿಣಾಮ ಆಕೆ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದಳು. ನಾನು ಇಲ್ಲಿಂದ ಹೋಗಬೇಕು. ನನಗೆ ಅನುಮತಿ ಕೊಡಿ ಎಂದು ಬಾಲಕಿ ಮನವಿ ಮಾಡುತ್ತಿದ್ದಳು. ಆದರೆ ಆರೋಪಿ ಬಾಲಕಿಯ ಬಗ್ಗೆ ಯೋಚಿಸದೇ ಆಕೆಯ ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದ.

    ಬಾಲಕಿಯ ಕಿರುಚಾಟವನ್ನು ಕೇಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕಿಯ ವಿಡಿಯೋ ಮಾಡುತ್ತಿದ್ದ ಆರೋಪಿಯನ್ನು ಥಳಿಸಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

    ಗಾಂಧಿನಗರದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದು, ಅಲ್ಲಿ ಡ್ರಗ್ಸ್‍ಗೆ ಸಂಬಂಧಿಸಿದಂತೆ ಇಂತಹ ಘಟನೆಗಳು ನಡೆಯುತ್ತಿರುತ್ತದೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಪೋಕ್ಸೋ ಹಾಗೂ ಕಿಡ್ನಾಪ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಹಣದಾಸೆಗೆ ಅಪ್ರಾಪ್ತ ಮಗಳಿಗೆ ಧಾರೆಯೆರೆಯಲು ಮುಂದಾದ ಪಾಪಿ ತಾಯಿ..!

    ಹಣದಾಸೆಗೆ ಅಪ್ರಾಪ್ತ ಮಗಳಿಗೆ ಧಾರೆಯೆರೆಯಲು ಮುಂದಾದ ಪಾಪಿ ತಾಯಿ..!

    ಬೆಂಗಳೂರು: ಹಣದಾಸೆಗಾಗಿ ನೀಚ ತಾಯಿಯೊಬ್ಬಳು ತನ್ನ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗಳ ಮದುವೆಗೆ ಮುಂದಾಗಿದ್ದ ಘಟನೆ ನಗರದ ನ್ಯೂ ಬಾಗಲೂರು ಲೇಔಟ್‍ನಲ್ಲಿರುವ ದುರ್ಗದೇವಿ ದೇವಸ್ಥಾನ ಮುಂದೆ ನಡೆದಿದೆ.

    ತಾಯಿ ನಾಗಲಕ್ಷ್ಮಿ ತನ್ನ ಅಪ್ರಾಪ್ತ ಮಗಳಿಗೆ ಎರಡನೇ ಸಂಬಂಧದ ಮದುವೆ ಮಾಡಲು ಹೊರಟ್ಟಿದ್ದಳು. ಭಾನುವಾರ ತಾಯಿ ನಾಗಲಕ್ಷ್ಮಿ ಈಗಾಗಲೇ ಮದುವೆ ಆಗಿದ್ದವನ ಜೊತೆ ತನ್ನ ಮಗಳ ಮದುವೆ ಮಾಡಲು ಮುಂದಾಗಿದ್ದಳು. ಮಗಳು ಒಂಬತ್ತನೇ ತರಗತಿ ಓದುತ್ತಿದ್ದು, ಇದಕ್ಕೆ ನಾವು, ಬಾಲಕಿಯ ಅಣ್ಣ ಮತ್ತು ಸಂಬಂಧಿಕರು ಸೇರಿ ವಿರೋಧ ವ್ಯಕ್ತಪಡಿಸಿದ್ದೇವೆ. ಕೊನೆಗೆ ನಾವು ಕೆಲ ಮಹಿಳಾ ಸಂಘಟನೆಯ ಸಹಾಯದಿಂದ ಮದುವೆ ನಿಲ್ಲಿಸಿದ್ದೇವೆ ಎಂದು ಬಾಲಕಿಯ ಅತ್ತೆ ಹೇಳಿದ್ದಾರೆ.

    ಮದುವೆ ಗಂಡಿನ ಬಳಿ ಹಣ ಪಡೆದುಕೊಂಡು ಅಪ್ರಾಪ್ತಳಿಗೆ ತಾಯಿ ನಾಗಲಕ್ಷ್ಮಿ ಮದುವೆ ಮಾಡಲು ಹೊರಟಿದ್ದಳೆಂದು ಆರೋಪಿಸಲಾಗಿದೆ. ಮದುವೆಗೆ ವಿರೋಧವಾಗುತ್ತಿದ್ದಂತೆ ತಾಯಿ ತನ್ನ ಮಗಳೊಂದಿಗೆ ಪರಾರಿಯಾಗಿದ್ದಾಳೆ ಎಂದು ಮಹಿಳಾ ಸಂಘಟನೆಯ ಸದಸ್ಯೆ ಜಯಮ್ಮ ತಿಳಿಸಿದ್ದಾರೆ.

    ಈ ಘಟನೆ ಸಂಬಂಧ ಬಾಣಸವಾಡಿಯಲ್ಲಿ ಸಂಬಂಧಿಕರು ಕೇಸ್ ದಾಖಲಿಸಲು ಮುಂದಾಗಿದ್ದು, ಹಣದಾಸೆಗೆ ಮಗಳ ಬಾಳನ್ನು ಬಲಿ ಕೊಡಲು ಹೊರಟ ತಾಯಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಸಂಬಂಧಿಕರು ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರೀತಿಸಲಿಲ್ಲ ಎಂದು 12ರ ಬಾಲಕಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!

    ಪ್ರೀತಿಸಲಿಲ್ಲ ಎಂದು 12ರ ಬಾಲಕಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!

    ಹೈದರಾಬಾದ್: ಪ್ರೀತಿಯನ್ನು ನಿರಾಕರಿಸಿದಕ್ಕೆ ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ನಡುರಸ್ತೆಯಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

    ಮೌಲಾನಾ ಸಾಹೇಬ್ ಎಂಬ ಯುವಕ ಅಪ್ರಾಪ್ತೆಗೆ ಬೆಂಕಿ ಹಚ್ಚಿದ್ದಾನೆ. ಕರ್ನೂಲ್ ಜಿಲ್ಲೆಯ ಕೌತಾಲಂ ಮಂಡಲದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ಕೌತಾಲಂ ಪ್ರದೇಶದ 12 ವರ್ಷದ ಬಾಲಕಿಯೊಬ್ಬಳನ್ನು ಮೌಲಾನಾ ಪ್ರೀತಿಸುತ್ತಿದ್ದನು. ಆದರಿಂದ ಕಳೆದ ಕೆಲವು ತಿಂಗಳಿಂದ ಬಾಲಕಿಗೆ ಪ್ರೀತಿ ಪ್ರೇಮವೆಂದು ಯುವಕ ಪೀಡಿಸುತ್ತಿದ್ದನು.

    ಬಾಲಕಿಗೆ ಯುವಕನನ್ನು ಪ್ರೀತಿಸಲು ಇಷ್ಟವಿರಲಿಲ್ಲ. ಎಷ್ಟೇ ಬಾರಿ ಯುವಕ ಪ್ರೀತಿ ಮಾಡು ಎಂದು ಕಾಟಕೊಡುತ್ತಿದ್ದರೂ ಬಾಲಕಿ ನಾನು ಪ್ರೀತಿ ಮಾಡಲ್ಲ ಎಂದು ಹೇಳಿದ್ದಾಳೆ. ಹೀಗಾಗಿ ತನ್ನ ಪ್ರೀತಿಯನ್ನು ಬಾಲಕಿ ಒಪ್ಪಲಿಲ್ಲ ಎಂದು ಯುವಕ ಮನನೊಂದಿದ್ದನು. ಹಾಗೆಯೇ ಬಾಲಕಿ ಮೇಲೆ ಹುಚ್ಚು ಪ್ರೀತಿ ಇಟ್ಟಿದ್ದ ಯುವಕ ಆಕೆಯನ್ನು ಪಡೆಯಲೆಬೇಕು ಎಂದು ಹಟಕ್ಕೆ ಬಿದ್ದಿದ್ದನು.

    ಶುಕ್ರವಾರ ರಾತ್ರಿ ವೇಳೆ ಬಾಲಕಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಯುವಕ ಆಕೆಯನ್ನು ತಡೆದು ತನ್ನನ್ನು ಪ್ರೀತಿ ಮಾಡಲೇ ಬೇಕು ಎಂದು ಬೆದರಿಸಿದ್ದಾನೆ. ಅದ್ಯಾವುದಕ್ಕೂ ಬಾಲಕಿ ಒಪ್ಪದೇ ಇದ್ದಾಗ ನಡುರಸ್ತೆಯಲ್ಲೇ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆಗ ಬಾಲಕಿಯ ಕಿರುಚಾಟವನ್ನು ಕೇಳಿ ಸ್ಥಳಕ್ಕೆ ಬಂದ ಜನರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಸದ್ಯ ಅಪ್ರಾಪ್ತ ಬಾಲಕಿ ಮೇಲೆ ಕೊಲೆ ಯತ್ನ ಮಾಡಿದಕ್ಕೆ ಆರೋಪಿ ಮೇಲೆ ಪೊಲೀಸರು ನಿರ್ಭಯ ಕಾಯ್ದೆ ಪ್ರಕಾರ ಕೊಲೆ ಪ್ರಕರಣ ದಾಖಲಿಸಿದ್ದು, ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾಸ್ಟೆಲ್‍ನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

    ಹಾಸ್ಟೆಲ್‍ನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

    -ಮಗು ಸಹಿತ ಬಾಲಕಿಯನ್ನು ಕಾಡಿಗೆ ಅಟ್ಟಿದ ಹಾಸ್ಟೆಲ್ ಸಿಬ್ಬಂದಿ

    ಭುವನೇಶ್ವರ: ಅಪ್ರಾಪ್ತ ಬಾಲಕಿಯೊಬ್ಬಳು ಆದಿವಾಸಿ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ ಹಿನ್ನೆಲೆಯಲ್ಲಿ ಆರು ಮಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

    ಈ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯ ದರಿಂಗಿಬಾದಿಯಲ್ಲಿರುವ ‘ಸೇವಾ ಆಶ್ರಯ ಹೈಸ್ಕೂಲ್’ ಹಾಸ್ಟೆಲ್‍ನಲ್ಲಿ ನಡೆದಿದ್ದು, ವಿದ್ಯಾರ್ಥಿನಿ ಶನಿವಾರ ರಾತ್ರಿ ಮಗುವಿಗೆ ಜನ್ಮ ನೀಡಿದ್ದಾಳೆ. ವಿದ್ಯಾರ್ಥಿನಿಗೆ 14 ವಯಸ್ಸಾಗಿದ್ದು, 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಮಗು ಹುಟ್ಟಿದ ಬಳಿಕ ಆಕೆ ಮತ್ತು ಮಗುವನ್ನು ಹಾಸ್ಟೆಲ್ ನಿಂದ ಹೊರಗೆ ಹತ್ತಿರದ ಅರಣ್ಯಕ್ಕೆ ತಳ್ಳಿದ್ದಾರೆ ಎಂದು ಕಂಧಮಲ್ ಜಿಲ್ಲಾ ಕಲ್ಯಾಣ ಅಧಿಕಾರಿ ಚಾರುಲತಾ ಮಲ್ಲಿಕ್ ತಿಳಿಸಿದ್ದಾರೆ.

    ಈ ಪ್ರಕರಣ ಈಗ ಅಧಿಕಾರಿಗಳಿಗೆ ತಲೆಬಿಸಿಯಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ಎಸ್‍ಸಿ/ಎಸ್‍ಟಿ ಕಲ್ಯಾಣ ಸಚಿವ ರಮೇಶ್ ಮಝಿ ಅವರು ಆದೇಶಿಸಿದ್ದಾರೆ. ಅಷ್ಟೇ ಅಲ್ಲದೇ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಪೊಲೀಸರು ಕೂಡ ಈ ಕುರಿತಾಗಿ ತನಿಖೆ ನಡೆಸುತ್ತಿದ್ದಾರೆ.

    ಭಾನುವಾರ ಮುಂಜಾನೆ ಇಬ್ಬರು ಅರಣ್ಯ ಅಧಿಕಾರಿಗಳು ಬಾಲಕಿಯನ್ನು ನೋಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಾಲಕಿ ಹಾಗೂ ಆಕೆಯ ಮಗು ಇಬ್ಬರು ಫುಲಬಾನಿ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗು ಮತ್ತು ತಾಯಿ ಇಬ್ಬರ ಸ್ಥಿತಿ ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಎಂಟು ತಿಂಗಳ ಹಿಂದೆ ಬಾಲಕಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿದೆ. ಆದರೆ ಬಾಲಕಿ ಭಯದಿಂದ ಈ ಬಗ್ಗೆ ಎಲ್ಲೂ ಹೇಳಿಕೊಂಡಿಲ್ಲ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರಿಂಗ್‍ಬಾದಿ ಕಾಲೇಜಿನ ವಿದ್ಯಾರ್ಥಿಯೋರ್ವನನ್ನು ಪೊಲೀಸರು ಬಂಧಿಸಿ, ವಿಚಾರಣೆ ಮುಂದುವರಿಸಿದ್ದಾರೆ.

    ಜಿಲ್ಲಾಧಿಕಾರಿ ಬೃಂದ ಅವರು, ಹಾಸ್ಟೆಲ್‍ನ ಇಬ್ಬರು ಅಡುಗೆ ಭಟ್ಟರು, ಮಹಿಳಾ ಮೇಲ್ವಿಚಾರಕಿ ಹಾಗೂ ಓರ್ವ ದಾದಿಯನ್ನು ಅಮಾನತು ಮಾಡಿದ್ದಾರೆ. ಜೊತೆಗೆ ಈ ಶಾಲೆಯ ಮುಖ್ಯಶಿಕ್ಷಕಿ ರಾಧಾ ರಾಣಿ ಅವರನ್ನೂ ಅಮಾನತು ಮಾಡುವಂತೆ ಸರ್ಕಾರ ಆದೇಶಿಸಿರುವುದಾಗಿ ತಿಳಿಸಿದ್ದಾರೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಅರೆಸ್ಟ್

    ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಅರೆಸ್ಟ್

    ಮೈಸೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಮೈಸೂರಿನ ಎಚ್.ಡಿ.ಕೋಟೆ ಮತ್ತು ಸರಗೂರು ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

    ದಿನೇಶ್(24) ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ. ನಾಲ್ಕು ದಿನಗಳ ಹಿಂದೆ ದಿನೇಶ್ 14 ವರ್ಷದ ಆದಿವಾಸಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದನು.

    ದಿನೇಶ್ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೊಳವಿಗೆ ಗ್ರಾಮದ ನಿವಾಸಿಯಾಗಿದ್ದು, ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ತಪ್ಪಿಸಿಕೊಂಡಿದ್ದನು. ಬಳಿಕ ಮೈಸೂರಿನ ಎಚ್.ಡಿ.ಕೋಟೆ ಮತ್ತು ಸರಗೂರು ಪೊಲೀಸರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

    ಈ ಬಗ್ಗೆ ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಗೆ ಬೆಂಕಿ ಹಚ್ಚಿದ ಇಬ್ಬರು ಅಂಕಲ್

    ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಗೆ ಬೆಂಕಿ ಹಚ್ಚಿದ ಇಬ್ಬರು ಅಂಕಲ್

    ವಿಜಯಪುರ: ಪ್ರೀತಿ ನಿರಾಕರಿಸಿದ್ದಕ್ಕೆ ಹಾಗೂ ಆ ವಿಷಯವನ್ನು ಪೋಷಕರಿಗೆ ತಿಳಿಸಿದ ಕಾರಣ ಅಪ್ರಾಪ್ತ ಬಾಲಕಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆಯೊಂದು ಜಿಲ್ಲೆಯ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ನಡೆದಿದೆ.

    ಪ್ರಾಜಕ್ತಾ ಬಲಭೀಮ ನರಳೆ(14) ಬೆಂಕಿಗೆ ಬಲಿಯಾದ ಅಪ್ರಾಪ್ತ ಬಾಲಕಿ. ಶಂಕರ್ ಹಿಪ್ಪರಕರ ಹಾಗೂ ಮೋಹನ್ ಎಡವೆ ಎಂಬ ಇಬ್ಬರು ಅಪ್ರಾಪ್ತೆಗೆ ಪ್ರೀತಿಸು ಎಂದು ಬೆನ್ನು ಬಿದ್ದಿದ್ದರು. ಆದರೆ ಅಪ್ರಾಪ್ತೆ ಇವರ ಪ್ರೀತಿಯನ್ನು ನಿರಾಕರಿಸಿ ತನ್ನ ಪೋಷಕರಿಗೆ ಈ ವಿಷಯವನ್ನು ತಿಳಿಸಿದ್ದಳು.

    ಕೆಲ ದಿನಗಳಿಂದಲೂ ಪ್ರೀತಿಸು ಎಂದು ಅಪ್ರಾಪ್ತೆಗೆ ಶಂಕರ್ ಹಾಗೂ ಮೋಹನ್ ಕಿರುಕುಳ ನೀಡುತ್ತಿದ್ದರು. ಆಗ ಬಾಲಕಿ ಇಬ್ಬರ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಆದರೆ ಇಬ್ಬರ ಕಿರುಕುಳ ಅತಿಯಾದಾಗ ಬಾಲಕಿ ಕಳೆದ ಶುಕ್ರವಾರ ಮನೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾಳೆ.

    ಬಾಲಕಿ ಪೋಷಕರು ಪ್ರಾಜಕ್ತಳನ್ನು ಮರುದಿನ ಅಂದರೆ ಶನಿವಾರ ಶಾಲೆ ಬಿಡಿಸಿ ಮನೆಯಲ್ಲಿ ಇರಿಸಿಕೊಂಡಿದ್ದರು. ಇಬ್ಬರಿಗೂ ಮದುವೆಯಾಗಿದ್ರೂ, ಪ್ರಾಜಕ್ತ ಹಿಂದೆ ಬಿದ್ದಿದ್ದರು. ಪ್ರಾಜಕ್ತಾ ಶನಿವಾರ ಶಾಲೆಗೆ ಹೋಗದಿದ್ದಾಗ ಮನೆಯಲ್ಲಿ ವಿಷಯ ತಿಳಿಸಿದ್ದಾಳೆ ಎಂದು ತಿಳಿದ ಇಬ್ಬರು ಆರೋಪಿಗಳು ನಮ್ಮ ಮಗಳಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಬಾಲಕಿಯ ಪೋಷಕರು ಆರೋಪಿಸುತ್ತಿದ್ದಾರೆ.

    ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿಗಳು ಸೀಮೆ ಎಣ್ಣೆ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಬಾಲಕಿಯ ಪೋಷಕರು ಆರೋಪಿಸುತ್ತಿದ್ದಾರೆ. ಸದ್ಯ ಈ ಬಗ್ಗೆ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅನ್ಯ ಸಮುದಾಯದ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಮನೆಗೆ ಬೆಂಕಿ!

    ಅನ್ಯ ಸಮುದಾಯದ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಮನೆಗೆ ಬೆಂಕಿ!

    ದಾವಣಗೆರೆ: ಅನ್ಯ ಸಮುದಾಯದಯ ಬಾಲಕಿಯನ್ನು ಪ್ರೀತಿಸಿದ ತಪ್ಪಿಗೆ ಯುವಕನ ಮನೆಗೆ ಬೆಂಕಿ ಇಟ್ಟು ಮತ್ತೊಂದು ಮನೆಯ ವಸ್ತುಗಳನ್ನು ಧ್ವಂಸ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ.

    ಯಲ್ಲಪುರ ಗ್ರಾಮದ ಸುನೀಲ್ ಅದೇ ಗ್ರಾಮದ ಬೇರೆ ಸಮುದಾಯದ ಅಪ್ರಾಪ್ತ ಬಾಲಕಿಯನ್ನ ಪ್ರೀತಿಸುತ್ತಿದ್ದನು. ಮನೆಯವರ ವಿರೋಧದ ನಡುವೆಯೂ ಶನಿವಾರ ಅಪ್ರಾಪ್ತ ಬಾಲಕಿಯೊಂದಿಗೆ ಸುನೀಲ್ ಓಡಿ ಹೋಗಿದ್ದನು.

    ಬಾಲಕಿ ಪೋಷಕರು ಸುನೀಲ್ ವಿರುದ್ಧ ಹರಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಹಾಗೂ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದರು. ಪೊಸ್ಕೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸುನೀಲ್ ನನ್ನು ಬಂಧಿಸಿದ್ದರು.

    ಕಳೆದ ರಾತ್ರಿ ಸುನೀಲ್ ಮನೆ ಮೇಲೆ ಬಾಲಕಿಯ ಪೋಷಕರು ದಾಳಿ ಮಾಡಿ ಮನೆಗೆ ಬೆಂಕಿ ಇಟ್ಟಿದ್ದಲ್ಲದೆ, ಮತ್ತೊಂದು ಮನೆಯ ಬಾಗಿಲು ಸಾಮಾಗ್ರಿಗಳನ್ನು ಧ್ವಂಸ ಮಾಡಿದ್ದಾರೆ. ಈ ಸಂಬಂಧ ಸುನೀಲ್ ಪೋಷಕರಿಂದ ಯುವತಿಯ ಮನೆಯವರ 10 ಜನರ ಮೇಲೆ ಹರಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv