ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ (Bengaluru) ಪಬ್, ಹುಕ್ಕಾಬಾರ್‌ಗಳಲ್ಲಿ ಅಪ್ರಾಪ್ತರ ಮೋಜು-ಮಸ್ತಿ ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ದುಶ್ಚಟಗಳಿಗೆ ಕಡಿವಾಣ ಹಾಕಿ ಎಂದು ಖಾಸಗಿ ಶಾಲೆಗಳ ಒಕ್ಕೂಟ (Union of Private Schools) ಗೃಹಸಚಿವರಿಗೆ (Home Minister) ಪತ್ರ ಬರೆದಿದೆ.
ನಗರದಲ್ಲಿ ವಿದ್ಯಾರ್ಥಿಗಳು (Students) ಶಾಲಾ-ಕಾಲೇಜಿಗೆ ಚಕ್ಕರ್ ಹಾಕಿ ಪಬ್ (Pub) , ಬಾರ್ ಹಾಗೂ ಹುಕ್ಕಾಬಾರ್‌ಗಳಿಗೆ ಹಾಜರಾಗುತ್ತಿರುವ ಸಂಖ್ಯೆ ಹೆಚ್ಚಳವಾಗಿದೆ. ಅಪ್ರಾಪ್ತರಿಗೆ (Minors) ಪ್ರವೇಶ ಕೊಡುವ ಪಬ್, ಹುಕ್ಕಾಬಾರ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಯಾಮ್ಸ್ ಸಂಘಟನೆಯಿಂದ ಗೃಹಸಚಿವರಿಗೆ ಪತ್ರ (Letter) ಬರೆಯಲಾಗಿದೆ. ಇದನ್ನೂ ಓದಿ: ಸಂಸದ ಸ್ಥಾನದಿಂದ ಪುತ್ರ ಅನರ್ಹತೆ ಬೆನ್ನಲ್ಲೇ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್
ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಪಬ್, ರೆಸ್ಟ್ರೋ ಬಾರ್, ಹುಕ್ಕಾ ಬಾರ್‌ಗಳು ಮದ್ಯಪಾನ, ಧೂಮಪಾನ ಸೇವಿಸುವ ತಾಣಗಳಾಗಿವೆ ಎಂದು ಕೆಲ ಶಿಕ್ಷಣ ಸಂಸ್ಥೆಗಳಿಂದ ಹಾಗೂ ಪೋಷಕರಿಂದ ಕ್ಯಾಮ್ಸ್‌ಗೆ ನಿರಂತರ ದೂರು ಬರುತ್ತಿತ್ತು. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ಇನ್ನೂ ಬಚ್ಚ – ಮುತಾಲಿಕ್ ಕಿಡಿ
ಈ ಹಿನ್ನೆಲೆ ಖಾಸಗಿ ಶಾಲೆಗಳ ಒಕ್ಕೂಟ ಗೃಹಸಚಿವರಿಗೆ ಪತ್ರ ಬರೆದಿದ್ದು, ಅಪ್ರಾಪ್ತ ವಯಸ್ಸಿನವರಿಗೆ ಮದ್ಯಪಾನ, ಧೂಮಪಾನ ಮಾರಾಟ ಮಾಡುವುದು ನಿಷೇಧ. ಹೀಗಿದ್ದರೂ ನಗರದ ಪಬ್, ಬಾರ್‌ಗಳಿಗೆ ಮಕ್ಕಳಿಗೆ ಎಂಟ್ರಿ ಸಿಗುತ್ತಿದೆ. ಈ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಆಕ್ರೋಶ; ಆನ್‌ಲೈನ್ ಮೂಲಕ ದೂರು ದಾಖಲಿಸಲು ಮುಂದಾದ ಹಿಂದೂ ಸಂಘಟನೆಗಳು
ಹೈದರಾಬಾದ್: 16 ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ (Gang Rape) ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ ಘಟನೆ ಹೈದರಾಬಾದ್‌ನಲ್ಲಿ (Hyderabad) ನಡೆದಿದೆ.
ಹೈದರಾಬಾದ್‌ನ ನಂದನವನಂ ಕಾಲೋನಿಯಲ್ಲಿ ಘಟನೆ ನಡೆದಿದ್ದು, ರಾಚಕೊಂಡ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಅಬೇದ್ ಬಿನ್ ಖಲೀದ್, ತಹಸೀನ್, ಮಂಕಾಳ ಮಹೇಶ್, ಎಂ ನರಸಿಂಗ್, ಅಶ್ರಫ್, ಫೈಝಲ್ ಮತ್ತು ಇಮ್ರಾನ್ ಎಂದು ಗುರುತಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ (POCSO) ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ದುರ್ಮರಣ
ಭಾನುವಾರ ಬೆಳಗ್ಗೆ ಬಾಲಕಿಯ ಮನೆಗೆ ನುಗ್ಗಿದ ಅಬೇದ್ ಮತ್ತು ಆತನ ಸ್ನೇಹಿತರು ಬಾಲಕಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಬಲವಂತವಾಗಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಘಟನೆಯ ಬಳಿಕ ಸಂತ್ರಸ್ತೆ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳು ಮದ್ಯದ ಅಮಲಿನಲ್ಲಿ ಬೆಳಗ್ಗೆ 9:30ರ ಸುಮಾರಿಗೆ ಆಕೆಯ ಮನೆಗೆ ಬಲವಂತವಾಗಿ ನುಗ್ಗಿ ಆಕೆಗೆ ಮತ್ತು ಆಕೆಯ ಸಹೋದರನಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದಾನೆ ಎಂದು ಉಲ್ಲೇಖಿಸಿ ದೂರನ್ನು ನೀಡಿದ್ದಾಳೆ. ಇದನ್ನೂ ಓದಿ: ಮತ್ತೊಂದು ಪ್ರೇಮ ಕಥನ- ಪತಿ ಭೇಟಿಯಾಗಲು ಭಾರತಕ್ಕೆ ಬಂದ ಬಾಂಗ್ಲಾ ಮಹಿಳೆಗೆ ಶಾಕ್!
ಈ ಕುರಿತು ಕ್ರಮ ಕೈಗೊಂಡಿರುವ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು 11 ವಿಶೇಷ ತಂಡಗಳನ್ನು ರಚಿಸಿ ಪ್ರಮುಖ ಆರೋಪಿ ಅಬೇದ್‌ನನ್ನು ಮಂಗಳವಾರ ಸಂಜೆ 4 ಗಂಟೆಯ ಸುಮಾರಿಗೆ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಬೇದ್ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಪೊಲೀಸರು ಅವನ ಬಳಿಯಿದ್ದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಆಸ್ತಿ ವಿಚಾರಕ್ಕೆ ಹಾರಿತು ಗುಂಡು
ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಮೂವರು ನೇರ ಅಪರಾಧಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಅಶ್ರಫ್ ಮತ್ತು ನರಸಿಂಗ್ ಘಟನಾ ಸ್ಥಳದಲ್ಲಿ ಹಾಜರಿದ್ದು, ದುಷ್ಕರ್ಮಿಗಳಿಗೆ ಸಹಾಯ ಮಾಡಿದ್ದಾರೆ. ಅಲ್ಲದೇ ಫೈಝಲ್ ಮತ್ತು ಇಮ್ರಾನ್ ಆರೋಪಿಗಳ ಹೇಯ ಕೃತ್ಯದ ಬಗ್ಗೆ ತಿಳಿದಿದ್ದರೂ ಅವರಿಗೆ ಸಹಾಯ ಮಾಡಿದ್ದಾರೆ ಎಂದು ರಾಚಕೊಂಡ ಆಯುಕ್ತ ಡಿಎಸ್ ಚೌಹಾಣ್ ತಿಳಿಸಿದ್ದಾರೆ. ಇದನ್ನೂ ಓದಿ: ಚೇಸ್ ಮಾಡಿ 1 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಪೊಲೀಸರು!
ಬೀದರ್: ಅಪ್ರಾಪ್ತ ವಿದ್ಯಾರ್ಥಿನಿಯನ್ನು (Minor Student) ಪುಸಲಾಯಿಸಿ ಗೌಪ್ಯವಾಗಿ ವಿವಾಹ (Marriage) ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಶಾಲಾ ಶಿಕ್ಷಕನನ್ನು (Teacher) ಅಮಾನತು (Suspend) ಮಾಡಲಾಗಿದೆ.
ಶಿಕ್ಷಕ ಸಂದೀಪ್ ಕುಮಾರ್ ಅಜೂರೆ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಡಿಡಿಪಿಐ ಸಲೀಂ ಪಾಷಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ (Bhalki) ತಾಲೂಕಿನ ಹಲಸಿ ತೂಗಾಂವ್ ಗ್ರಾಮದಲ್ಲಿ 15 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಯಾರಿಗೂ ತಿಳಿಯದಂತೆ ಶಿಕ್ಷಕ ಗೌಪ್ಯವಾಗಿ ಮದುವೆಯಾಗಿದ್ದ. ಇದನ್ನೂ ಓದಿ: Shivamogga: ಈದ್ ಮಿಲಾದ್ ಹಬ್ಬದ ಸಭೆಯಲ್ಲಿ ಗಲಾಟೆ – ಓರ್ವನ ಕೊಲೆಯಲ್ಲಿ ಅಂತ್ಯ
ಈಗಾಗಲೇ ಆತನಿಗೆ ಮದುವೆಯಾಗಿ ಮಗುವಿದ್ದರೂ ಸಹಿತ ಹಲಸಿ ತೂಗಾಂವ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮದುವೆಯಾಗಿದ್ದ. ಈ ಕುರಿತು ಶಿಶು ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಬಾಳುವಾಲೆ ಶಿಕ್ಷಕನ ವಿರುದ್ಧ ಸೂಕ್ತ ಕ್ರಮಕ್ಕಾಗಿ ಮೇಹಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯಿಂದ್ಲೇ 14ರ ಬಾಲಕಿ ಮೇಲೆ ರೇಪ್ – ಪತಿ, ಪತ್ನಿ ಅರೆಸ್ಟ್
ತಿರುವನಂತಪುರಂ: 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ (Sexual Assault) ಬಳಿಕ ಆಕೆಯ ಕತ್ತು ಹಿಸುಕಿ ಕೊಂದು ಗೋಣಿಚೀಲದಲ್ಲಿ ಮೃತದೇಹವನ್ನು ತುಂಬಿಸಿ ಹೂತುಹಾಕಿದ ಘಟನೆ ಕೇರಳದ (Kerala) ಎರ್ನಾಕುಲಂ (Ernakulam) ಜಿಲ್ಲೆಯಲ್ಲಿ ನಡೆದಿದೆ.
ಬಿಹಾರ (Bihar) ಮೂಲದ ದಂಪತಿಯ 5 ವರ್ಷದ ಮಗಳು ಶುಕ್ರವಾರ ಸಂಜೆ ನಾಪತ್ತೆಯಾಗಿದ್ದು, ಆರೋಪಿ ಆಕೆಯನ್ನು ಕರೆದುಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಯನ್ನು ಅಸ್ಫಾಕ್ ಅಸ್ಲಾಮ್ ಎಂದು ಗುರುತಿಸಲಾಗಿದ್ದು, ಸಿಸಿಟಿವಿಯಲ್ಲಿ ಆತ ಬಾಲಕಿಯನ್ನು ಕರೆದುಕೊಂಡು ಹೋಗುವ ದೃಶ್ಯ ಕಂಡುಬಂದಿದೆ. ಆದ್ದರಿಂದ ಆತನನ್ನು ಅದೇ ದಿನ ರಾತ್ರಿ 9:30ಕ್ಕೆ ವಶಕ್ಕೆ ಪಡೆದೆವು. ಮದ್ಯಪಾನ ಮಾಡಿದ್ದರಿಂದ ನಮ್ಮ ಪ್ರಶ್ನೆಗಳಿಗೆ ಉತ್ತರಿಸುವ ಸ್ಥಿತಿಯಲ್ಲಿ ಆತ ಇರಲಿಲ್ಲ ಎಂದು ಎರ್ನಾಕುಲಂ ಎಸ್ಪಿ ವಿವೇಕ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ – 125 ರೋಗಿಗಳ ಸ್ಥಳಾಂತರ
ಶನಿವಾರ ಬೆಳಗ್ಗೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಬಾಲಕಿಯನ್ನು ಕೊಂದು ಹೂತುಹಾಕಿದ ಜಾಗವನ್ನು ತೋರಿಸಿದ್ದಾನೆ. ಆರೋಪಿ ಇತ್ತೀಚಿಗೆ ಬಾಲಕಿ ಮತ್ತು ಆಕೆಯ ಕುಟುಂಬ ವಾಸಿಸುತ್ತಿದ್ದ ಕಟ್ಟಡಕ್ಕೆ ತೆರಳಿದ್ದ. ಬಳಿಕ ಆಕೆಯನ್ನು ಅಲ್ಲಿಂದ ಬೇರೆಡೆಗೆ ಕರೆದೊಯ್ದು ಲೈಂಗಿಕ ತೃಷೆ ತೀರಿಸಿಕೊಂಡ ಬಳಿಕ ಆಕೆಯ ಕತ್ತು ಹಿಸುಕಿ ಕೊಂದು ಆಕೆಯ ಮೃತದೇಹ ಯಾರಿಗೂ ಕಾಣದ ರೀತಿಯಲ್ಲಿ ಮುಚ್ಚಲು ಕಸಗಳು ಮತ್ತು ಗೋಣಿ ಚೀಲಗಳನ್ನು ಬಳಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Instagram ಪ್ರಿಯಕರನನ್ನ ಭೇಟಿಯಾಗಲು ಪಾಕಿಸ್ತಾನಕ್ಕೆ ಹೊರಟಿದ್ದ ರಾಜಸ್ಥಾನದ 16ರ ಹುಡುಗಿ ಅರೆಸ್ಟ್
ಬಾಲಕಿ ನಾಪತ್ತೆಯಾದ ಬಳಿಕ ಆಕೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಇದನ್ನು ನೋಡಿದ್ದ ವ್ಯಕ್ತಿಯೋರ್ವರು ಮಾರುಕಟ್ಟೆ ಪ್ರದೇಶದಲ್ಲಿ ಆರೋಪಿ ಜೊತೆ ಬಾಲಕಿ ಇರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಲ್ಲದೇ, ಮಗುವಿನ ಬಗ್ಗೆ ಆರೋಪಿ ಬಳಿ ವಿಚಾರಿಸಿದ್ದಾರೆ. ಈ ವೇಳೆ ಆರೋಪಿ ಈಕೆ ತನ್ನ ಮಗಳು ಎಂದು ತಿಳಿಸಿದ್ದಲ್ಲದೇ, ಮದ್ಯಪಾನ ಮಾಡುವ ಸಲುವಾಗಿ ಮಾರುಕಟ್ಟೆಯ ಹಿಂಬದಿಗೆ ಹೋಗಿದ್ದಾನೆ. ಅಲ್ಲದೇ ಬಾಲಕಿಯ ಕೈಯಲ್ಲಿ ಮಿಠಾಯಿ ಇತ್ತು ಎಂದು ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇಷ್ಟು ದಿನ ಎಲ್ಲಿಗೆ ಹೋಗಿದ್ದೆ? ಪತಿ ಎಂದು ಬೇರೊಬ್ಬನನ್ನು ಕರೆದೊಯ್ದ ಪತ್ನಿ!
ಮಾಹಿತಿಯ ಆಧಾರದ ಮೇರೆಗೆ ಪೊಲೀಸರು ಮಾರುಕಟ್ಟೆಯ ಹಿಂಭಾಗದಲ್ಲಿ ಶೋಧಕಾರ್ಯವನ್ನು ನಡೆಸಿದ್ದಾರೆ. ಘಟನೆಯ ಬಳಿಕ ಬಾಲಕಿಯನ್ನು ಪೋಷಕರಿಗೆ ಜೀವಂತವಾಗಿ ಮರಳಿಸಲಾಗದ್ದರಿಂದ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪೋಷಕರಲ್ಲಿ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ಮನೆಗೆ ತೆರಳಿದ್ದ ಯೋಧನ ಕಿಡ್ನ್ಯಾಪ್ – ಸೇನೆಯಿಂದ ತೀವ್ರ ಹುಡುಕಾಟ
ಶುಕ್ರವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಬಾಲಕಿ ನಾಪತ್ತೆಯಾಗಿದ್ದು, ಸಂಜೆ 5:30ರ ವೇಳೆಗೆ ಆಕೆಯ ನೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಲಾಗಿದೆ. ಮಗಳು ನಾಪತ್ತೆಯಾದ ಹಿನ್ನೆಲೆ ಪೋಷಕರು ರಾತ್ರಿ 7:30ರ ಸುಮಾರಿಗೆ ದೂರು ದಾಖಲಿಸಿದ್ದು, ಮಾಹಿತಿಯ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರ ರಕ್ಷಣೆ
ಘಟನೆಯ ಬಳಿಕ ಬಾಲಕಿಯ ಮೃತದೇಹವನ್ನು ಆಕೆ ಓದುತ್ತಿದ್ದ ಶಾಲೆಯಲ್ಲಿ ಇರಿಸಲಾಗಿದ್ದು, ನೂರಾರು ಮಂದಿ ಅಂತಿಮ ನಮನ ಸಲ್ಲಿಸಿ ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿದರು. ಈ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು, ಇದು ಅತ್ಯಂತ ದುಃಖಕರ ಮತ್ತು ದುರಾದೃಷ್ಟಕರವಾದ ಸಂಗತಿಯಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಪಟಾಕಿ ಗೋದಾಮಿನಲ್ಲಿ ಸ್ಫೋಟ – ಒಂದೇ ಕುಟುಂಬದ ನಾಲ್ವರು ಸೇರಿ 9 ಮಂದಿ ಸಾವು
ರಾಯಚೂರು: ಚಾಕೊಲೇಟ್ (Chocolate) ಆಮಿಷವೊಡ್ಡಿ 11 ವರ್ಷದ ಅಪ್ರಾಪ್ತ (Minor) ಬಾಲಕಿಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ (Rape) ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಆರ್‌ಹೆಚ್ ಕ್ಯಾಂಪ್‌ನಲ್ಲಿ ನಡೆದಿದೆ.
ಸಪನ್ ಮಂಡಲ್ (52) ಅತ್ಯಾಚಾರ ಎಸಗಿರುವ ಆರೋಪಿ. ಈತ ಬಾಲಕಿಯ ಮನೆಯ ಪಕ್ಕದಲ್ಲೇ ವಾಸಿಸುತ್ತಿದ್ದು, ಚಾಕೊಲೇಟ್ ಕೊಡಿಸುವುದಾಗಿ ಬಾಲಕಿಯನ್ನು ಕರೆದೊಯ್ದಿದ್ದಾನೆ. ಬಳಿಕ ಆಕೆಗೆ ಸ್ಕೂಟರ್ ಕಲಿಸುವುದಾಗಿ ಗ್ರಾಮದ ಹೊರವಲಯಕ್ಕೆ ಕರೆದೊಯ್ದು ಜಮೀನಿನಲ್ಲಿ ಅತ್ಯಾಚಾರ ಮಾಡಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿ ಕಣ್ಣೀರು ಹಾಕುತ್ತಾ ಮನೆಗೆ ಬಂದ ವೇಳೆ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಒಂಟಿ ಮಹಿಳೆ ಕೊಲೆ ಪ್ರಕರಣ – ಆರೋಪಿಯ ತಾಯಿಯಿಂದ ಆತ್ಮಹತ್ಯೆ ಯತ್ನ
ಸಂತ್ರಸ್ತ ಬಾಲಕಿ 4ನೇ ತರಗತಿ ಓದುತ್ತಿದ್ದು, ಆಕೆಯ ಪೋಷಕರು ಆರೋಪಿ ಸಪನ್ ಮಂಡಲ್ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಮಕ್ಕಳ ಕತ್ತು ಸೀಳಿ ಕೊಲೆಗೈದ ಪಾಪಿ ತಂದೆ
ನವದೆಹಲಿ: ಅಪ್ರಾಪ್ತ (Minor) ಬಾಲಕಿಯನ್ನು ಮದುವೆಯಾಗಿ ಗರ್ಭಿಣಿ (Pregnant) ಮಾಡಿದ ಆರೋಪದ ಮೇಲೆ 17 ವರ್ಷದ ಹುಡುಗನನ್ನು ಬಂಧಿಸಿದ ಘಟನೆ ಪೂರ್ವ ದೆಹಲಿಯ (Delhi) ಲಕ್ಷ್ಮೀನಗರ ಪ್ರದೇಶದಲ್ಲಿ ನಡೆದಿದೆ.
ಲಾಲ್ ಬಹದ್ದೂರ್ ಶಾಸ್ತ್ರಿ (LBS) ಆಸ್ಪತ್ರೆಯಿಂದ ಪಿಸಿಆರ್ ಪೊಲೀಸರಿಗೆ ಕರೆ ಮಾಡಿದ್ದು, ಏಳು ತಿಂಗಳ ಅಪ್ರಾಪ್ತ ಗರ್ಭಿಣಿ ತಪಾಸಣೆಗಾಗಿ ಬಂದಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಣೆ ನಡೆಸಿದಾಗ ಬಾಲಕಿ ತಾನು ಮತ್ತು ಸೋದರ ಸಂಬಂಧಿ ಪರಸ್ಪರ ಪ್ರೀತಿಸಿದ್ದು, 2022ರ ಆಗಸ್ಟ್ 25 ರಂದು ಪಶ್ಚಿಮ ಬಂಗಾಳದಲ್ಲಿ (West Bengal) ‘ನಿಕಾಹ್’ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾಳೆ. ಇದನ್ನೂ ಓದಿ: ಸಾಕ್ಷಿ ಕೊಲ್ಲಲು 15 ದಿನಗಳ ಹಿಂದೆಯೇ ಹರಿದ್ವಾರದಿಂದ ಚಾಕು ಖರೀದಿಸಿದ್ದ ಸಾಹಿಲ್!
ಜನವರಿಯಲ್ಲಿ ದೆಹಲಿಗೆ ಬಂದ ಅವರು, ಪಶ್ಚಿಮ ಜವಾಹರ್ ಪಾರ್ಕ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ತಪಾಸಣೆಗಾಗಿ ಎಲ್‌ಬಿಎಸ್ ಆಸ್ಪತ್ರೆಗೆ ಬಂದಿದ್ದು, ಅಪ್ರಾಪ್ತ ವಯಸ್ಸಿನವಳಾಗಿದ್ದರಿಂದ ವೈದ್ಯರು ಸಖಿ ಕೇಂದ್ರಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮರಕ್ಕೆ ಕಾರು ಡಿಕ್ಕಿ – ಕುಟುಂಬದ ನಾಲ್ವರು ಸಜೀವ ದಹನ
ಅಪ್ರಾಪ್ತೆಯ ಜೊತೆ ಸಮಾಲೋಚನೆ ನಡೆಸಿ ವೈದ್ಯಕೀಯ ಪರೀಕ್ಷೆಯ ನಂತರ ಆಕೆಯನ್ನು ಆಸ್ಪತ್ರೆಯ ನಿಗಾದಲ್ಲಿ ಇರಿಸಲಾಗಿದೆ. ಅಲ್ಲದೇ ಹುಡುಗನನ್ನು ಬಂಧಿಸಿ ಜುವೆನೈಲ್ ಜಸ್ಟೀಸ್ ಬೋರ್ಡ್ (JJB) ಮುಂದೆ ಹಾಜರುಪಡಿಸಲಾಗಿದೆ. ಜೆಜೆಬಿ ಬಾಲಾಪರಾಧಿಯನ್ನು ಒಪ್ಪಂದದ ಮೇರೆಗೆ ಬಿಡುಗಡೆ ಮಾಡಿದ್ದು, ವಯಸ್ಸಿನ ಪರಿಶೀಲನೆಗಾಗಿ ಮುಂದಿನ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕರ್ನಾಟಕ ಸೇರಿದಂತೆ 3 ರಾಜ್ಯಗಳ 25 ಕಡೆ ಎನ್‌ಐ ದಾಳಿ – 17.50 ಲಕ್ಷ ಜಪ್ತಿ
ಮುಂಬೈ: 9 ವರ್ಷದ ಬಾಲಕಿಯ (Girl) ಮೇಲೆ 15 ವರ್ಷದ ಬಾಲಕನೊಬ್ಬ (Boy) ಅತ್ಯಾಚಾರ (Rape) ನಡೆಸಿ, ಕೊಲೆಗೈದಿರುವ (Murder) ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharashtra) ಕಲ್ಯಾಣ್‌ನಲ್ಲಿ (Kalyan) ನಡೆದಿದೆ. ಮೃತ ಬಾಲಕಿಯ ತಂದೆಯ ಮೇಲಿನ ಸೇಡಿಗೆ ಅಪ್ರಾಪ್ತ ಆರೋಪಿ ಈ ಕೃತ್ಯ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗುರುವಾರ ಮುಂಜಾನೆ ಕಲ್ಯಾಣ್ ರೈಲ್ವೇ ನಿಲ್ದಾಣದ ಬಳಿಯ ಕಲ್ಯಾಣಿ ಪಶ್ಚಿಮ ಪ್ರದೇಶದ ವಸತಿ ಪ್ರದೇಶದ ಆವರಣದಲ್ಲಿ 9 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ.
ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಅಪ್ರಾಪ್ತ ಆರೋಪಿಯನ್ನು ಪೊಲೀಸರು ಗುರುತಿಸಿದ್ದಾರೆ. ಬಾಲಕನ ಬಗ್ಗೆ ಸ್ಥಳೀಯರಲ್ಲಿ ವಿಚಾರಣೆ ಮಾಡಲಾಗಿದ್ದು, ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆದು ಮಹಾತ್ಮ ಫುಲೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಇದನ್ನೂ ಓದಿ: ನನಗೆ ಸರ್ವಿಸ್ ಕೊಡ್ತೀರಾ, ದಿನಕ್ಕೆ 50 ಸಾವಿರ ರೂ. ಕೊಡ್ತೀನಿ – ಲೆಟರ್ ಬರೆದು ಮಹಿಳೆಗೆ ಲೈಂಗಿಕ ಕಿರುಕುಳ
ವಿಚಾರಣೆ ವೇಳೆ ಅಪ್ರಾಪ್ತ ಆರೋಪಿ ನಡೆದ ಘಟನೆಯನ್ನು ತಿಳಿಸಿದ್ದಾನೆ. 2 ದಿನಗಳ ಹಿಂದೆ ಆತ ಬಾಲಕಿಯ ತಂದೆಯೊಂದಿಗೆ ಜಗಳವಾಡಿದ್ದು, ಹಲ್ಲೆಗೆ ಒಳಗಾಗಿದ್ದ. ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಬಾಲಕ ಆತನ ಅಪ್ರಾಪ್ತ ಮಗಳನ್ನು ಅಪಹರಿಸಿ, ಅತ್ಯಾಚಾರ ನಡೆಸಿ ಬ್ಲೇಡ್‌ನಿಂದ ಕತ್ತು ಸೀಳಿರುವುದಾಗಿ ತಿಳಿಸಿದ್ದಾನೆ.
ಚೆನ್ನೈ: ಪಾಲಿಟೆಕ್ನಿಕ್‌ನಲ್ಲಿ ಓದುತ್ತಿದ್ದ 17 ವರ್ಷದ ಹುಡುಗನೊಬ್ಬ (Minor Boy) ಪಿಯುಸಿ ಓದುತ್ತಿದ್ದ 16 ವರ್ಷದ ಅಪ್ರಾಪ್ತ ಬಾಲಕಿಗೆ (Minor Girl) ಬಸ್ ನಿಲ್ದಾಣದಲ್ಲಿಯೇ (Bus Stand) ತಾಳಿ ಕಟ್ಟಿರುವ ಘಟನೆ ತಮಿಳುನಾಡಿನ (Tamil Nadu) ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕಡಲೂರು ಪೊಲೀಸರು ಹುಡುಗನನ್ನು ಬಂಧಿಸಿದ್ದಾರೆ.
ವರದಿಗಳ ಪ್ರಕಾರ ಹುಡುಗ, ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ಬಾಲಕಿಗೆ ನೋಡುಗರ ಸಮ್ಮುಖದಲ್ಲಿಯೇ ತಾಳಿ ಕಟ್ಟಿದ್ದಾನೆ. ಬಳಿಕ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಸರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತನಿಖೆ ಆರಂಭಿಸಿದೆ. ಕೊನೆಗೂ ಪೊಲೀಸರು ಮಂಗಳವಾರ ಅಪ್ರಾಪ್ತನನ್ನು ಬಂಧಿಸಿದ್ದಾರೆ.
ಬಾಲಕಿಗೆ ಮಕ್ಕಳ ಕಲ್ಯಾಣ ಸಮಿತಿಯ ಕಚೇರಿಯಲ್ಲಿ ಕೌನ್ಸೆಲಿಂಗ್ ನೀಡಲಾಗಿದ್ದು, ಹುಡುಗನನ್ನು ಕಡಲೂರಿನಲ್ಲಿರುವ ಬಾಲಾಪರಾಧಿ ವೀಕ್ಷಣಾಲಯಕ್ಕೆ ಕಳುಹಿಸಲಾಗಿದೆ. ಇದರ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ಮತ್ತೊಬ್ಬ ವ್ಯಕ್ತಿ ಬಾಲಾಜಿ ಗಣೇಶ್‌ನನ್ನು ಬಂಧಿಸಿರುವುದಾಗಿ ಕಡಲೂರು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್. ಎಸ್ ರಾಜೀನಾಮೆ
ಅಪ್ರಾಪ್ತರು ಪರಿಶಿಷ್ಟ ಜಾತಿಗೆ ಸೇರಿದ ಕಾರಣ ಬಾಲಾಜಿ ವಿರುದ್ಧ ಬಾಲನ್ಯಾಯ ಕಾಯ್ದೆ, ಮಹಿಳಾ ಕಿರುಕುಳ ತಡೆ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾಳೆಯಿಂದ ಓಲಾ, ಊಬರ್ ಆಟೋ ಬಂದ್- ಸರ್ಕಾರದಿಂದಲೇ ಆಟೋ ದರ ನಿಗದಿ
Live Tv
[brid partner=56869869 player=32851 video=960834 autoplay=true]
ಲಕ್ನೋ: ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ನಂತರ ಗರ್ಭಿಣಿಯಾಗಿದ್ದ 15 ವರ್ಷದ ಬಾಲಕಿಗೆ ಆರೋಪಿಯ ತಾಯಿ ಮತ್ತು ಸಹೋದರಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ (Uttar Pradesh) ಮಣಿಪುರಿಯಲ್ಲಿ ನಡೆದಿದೆ.
ಸಂತ್ರಸ್ತೆ ಗರ್ಣಿಯಾಗಿರುವ ವಿಷಯ ತಿಳಿದ ತಾಯಿ ಮತ್ತು ಮಗಳು ಅಪ್ರಾಪ್ತೆಯನ್ನು ಆರೋಪಿಗೆ ಮದುವೆ ಮಾಡಿಕೊಡುವುದಾಗಿ ಹೇಳಿ ಮನೆಗೆ ಕರೆದೊಯ್ದಿದ್ದಾರೆ. ಆದರೆ ರಾತ್ರಿ ವೇಳೆ ಬಾಲಕಿ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ- ಮತ್ತೋರ್ವ ಟಿಎಂಸಿ ಶಾಸಕ ಬಂಧನ
ನೆರೆಹೊರೆಯವರು ಅಪ್ರಾಪ್ತಿಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ತೀವ್ರ ಸುಟ್ಟ ಗಾಯಗಳಾಗಿದ್ದ ಆಕೆಯನ್ನು ಸೈಫಾಯಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ದು ದಾಖಲಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ.
ರಾಯ್‌ಪುರ: 10 ರೂ. ಆಮಿಷವೊಡ್ಡಿ 13 ವರ್ಷದ ಬಾಲಕಿಯ ಮೇಲೆ 76 ವರ್ಷ ವೃದ್ಧ ಮತ್ತು ಇನ್ನೊಬ್ಬ ಸೇರಿ ಅನೇಕ ಬಾರಿ ಅತ್ಯಾಚಾರವೆಸಗಿರುವ ಘಟನೆ ಛತ್ತೀಸ್‍ಗಢದಲ್ಲಿ ನಡೆದಿದೆ.
ಛತ್ತೀಸ್‍ಗಢದ ಬಲೋದಬಜಾರ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಾಲಕಿಯ ಮೇಲೆ ಅತ್ಯಾಚಾರ ಶನಿವಾರ ನಡೆದಿದ್ದು, ನೆರೆ ಮನೆಯ ಮಹಿಳೆ ಈ ಕುರಿತು ಬಾಲಕಿ ಪೋಷಕರನ್ನು ಎಚ್ಚರಿಸಿದ ನಂತರ ಬೆಳಕಿಗೆ ಬಂದಿದೆ. ಪೋಷಕರಿಬ್ಬರು ರ್ಯಾಗ್‍ಪಿಕರ್ಸ್ ಕೆಲಸ ಮಾಡುತ್ತಿರುವುದು ತಿಳಿದುಬಂದಿದೆ. ವಿಷಯ ತಿಳಿದ ನಂತರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ: ಸಿಜೆಐ
ಬಲೋದಬಜಾರ್ ಕೊತ್ವಾಲಿ ಪೊಲೀಸ್ ಠಾಣಾಧಿಕಾರಿ(ಎಸ್‍ಎಚ್‍ಒ) ಯದುಮಣಿ ಸಿದರ್ ಈ ಕುರಿತು ಮಾಹಿತಿ ನೀಡಿದ್ದು, ಪೋಷಕರು ನೀಡಿದ ದೂರಿನ ಆಧಾರದ ಮೇಲೆ ನಾವು ಆರೋಪಿಗಳಾದ ಕುಂಜ್ರಾಮ್ ವರ್ಮಾ(76) ಮತ್ತು ರಮೇಶ್ ವರ್ಮಾ(47)ನನ್ನು ನಾವು ಬಂಧಿಸಿದ್ದೇವೆ ಎಂದಿದ್ದಾರೆ.
ದೂರಿನ ಪ್ರಕಾರ, ಬಾಲಕಿ ವಾಸಿಸುವ ಅದೇ ಸ್ಥಳದಲ್ಲಿಯೇ ಕುಂಜ್ರಾಮ್ ಇದ್ದ. ಈ ವೇಳೆ ಬಾಲಕಿಯನ್ನು ನೋಡಿದ ಆತ ಪ್ರತಿ ಬಾರಿ 10 ರೂ. ನೀಡುವುದಾಗಿ ಆಮಿಷವೊಡ್ಡಿ ತನ್ನ ಮನೆಗೆ ಕರೆದು ಅತ್ಯಾಚಾರ ಮಾಡುತ್ತಿದ್ದ. ಕುಂಜ್ರಾಮ್‍ಗೆ ಪರಿಚಿತರಾಗಿರುವ ರಮೇಶ್ ಕೂಡ 10 ರೂ. ಆಮಿಷವೊಡ್ಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಾರಂಭಿಸಿದ್ದ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಸಾವಿನ ದವಡೆಯಿಂದ ಹದ್ದುವನ್ನು ಕಾಪಾಡಿದ ಮೀನುಗಾರ
ಇಬ್ಬರ ಮನೆಯಿಂದ ಬಾಲಕಿ ಹೊರಗೆ ಬರುತ್ತಿರುವುದನ್ನು ನೆರೆಮನೆಯ ಮಹಿಳೆಯೊಬ್ಬರು ಗಮನಿಸಿದಾಗ, ಆಕೆ ಬಾಲಕಿಯ ತಾಯಿಗೆ ಮಾಹಿತಿ ನೀಡಿದ್ದಾಳೆ. ಬಾಲಕಿ ತನಗಾದ ಕಷ್ಟವನ್ನು ವಿವರಿಸಿದ ನಂತರ, ಆಕೆಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಸುಧಾರಿದೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]