Tag: Minority Community

  • ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ – ಕೇಂದ್ರದ ಮಾದರಿ ಅನುಸರಿಸಿದ್ದೇವೆ: ಜಮೀರ್

    ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ – ಕೇಂದ್ರದ ಮಾದರಿ ಅನುಸರಿಸಿದ್ದೇವೆ: ಜಮೀರ್

    ಬೆಂಗಳೂರು: ವಸತಿ ಯೋಜನೆಗಳಲ್ಲಿ (Housing Project) ಅಲ್ಪಸಂಖ್ಯಾತ ಸಮುದಾಯಕ್ಕೆ (Minority Community) ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ (Zameer Ahmed) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ.15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ತಪ್ಪೇ ಮಾಡಿಲ್ಲ, ಅಭಿಮಾನಿಗಳಿಗೆ ಮಾತ್ರ ಕ್ಷಮೆ ಕೇಳ್ತೀನಿ – ನಾಗಶೇಖರ್‌ ವಿರುದ್ಧ ರಚಿತಾ ಕಿಡಿ

     

    2019 ರಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು.ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ.10 ರಷ್ಟು ಮೀಸಲಾತಿ ಪ್ರಮಾಣ ಶೇ. 15 ಕ್ಕೆ ಹೆಚ್ಚಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮಗನಿಗೆ ನಿಶ್ಚಯವಾಗಿದ್ದ ಹೆಣ್ಣಿನ ಜೊತೆ 6 ಮಕ್ಕಳ ತಂದೆ ಚಕ್ಕಂದ – ಮದುವೆ ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ

    ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿದ್ದು ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು. 2021 ರಾಷ್ಟ್ರೀಯ ಅಲ್ಪಸಂಖ್ಯಾತ ರ ಆಯೋಗವು ಸಹ ಶೇ.15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ತಿಳಿಸಿತ್ತು. ಇದೆಲ್ಲ ವಾಸ್ತವ ಅಂಶ ತಿಳಿಯದೇ ಪ್ರತಿಪಕ್ಷಗಳು ಅನಗತ್ಯ ಟೀಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

     

  • ಹಿಂದೂ ಯುವತಿಯ ಅಪಹರಣ, ಬಲವಂತದಿಂದ ಮತಾಂತರ ಮಾಡಿ ಮುಸ್ಲಿಂ ಯುವಕನೊಂದಿಗೆ ಮದುವೆ

    ಹಿಂದೂ ಯುವತಿಯ ಅಪಹರಣ, ಬಲವಂತದಿಂದ ಮತಾಂತರ ಮಾಡಿ ಮುಸ್ಲಿಂ ಯುವಕನೊಂದಿಗೆ ಮದುವೆ

    ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ಯುವತಿಯನ್ನು ಅಪಹರಣ ಮಾಡಿ ಬಲವಂತದಿಂದ ಇಸ್ಲಾಂಗೆ ಮತಾಂತರ ಮಾಡಿ ಬಳಿಕ ಆಕೆಯನ್ನು ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಿಸಲಾಗಿದೆ ಎಂದು ವರದಿಯಾಗಿದೆ.

    ಸಂತ್ರಸ್ತ ಹಿಂದೂ ಯುವತಿ ಕರೀನಾಳನ್ನು ಮತಾಂತರಗೊಳಿಸಿ ಖಲಿಲ್ ರೆಹಮಾನ್ ಜೊನೊ ಎಂಬ ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಲಾಗಿದೆ. ಖಲಿಲ್ ಪಾಕಿಸ್ತಾನದ ಮೀರ್ ಮೊಹಮ್ಮದ್ ಜೊನೊ ಹಳ್ಳಿಯ ನಿವಾಸಿ. ಈತ ಖಾಜಿ ಅಹ್ಮದ್ ನಗರದ ಉನ್ನರ್ ಮುಹಲ್ಲಾದಿಂದ ಯುವತಿಯನ್ನು ಅಪಹರಿಸಿ ಮತಾಂತರಗೊಳಿಸಿ, ಬಳಿಕ ಮದುವೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

    ಯುವತಿ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಸೆಕ್ಷನ್ 365-ಬಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ ಖಲೀಲ್ ಹಾಗೂ ಅವನ ತಂದೆ ಅಸ್ಗರ್ ಜೋನೋ ಇಬ್ಬರನ್ನೂ ಬಂಧಿಸಲಾಗಿದೆ. ಈ ಘಟನೆಗೆ ದೇಶದ ವಿವಿಧ ಮಾನವ ಹಕ್ಕು ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೆಲವೆಡೆ ಹಿಂದೂಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

    ಈ ಕುರಿತು ಮಾತನಾಡಿರುವ ಹಿಂದೂ ಪಂಚಾಯತ್ ನಾಯಕ ಮನೋಮಾಲ್, ಹಿಂದೂ ಯುವತಿಗೆ ಪ್ರಾಣ ಬೆದರಿಕೆಯೊಡ್ಡಿ ಬಲವಂತದಿಂದ ಮತಾಂತರ ಮಾಡಲಾಗಿದೆ. ಪಾಕಿಸ್ತಾನದಲ್ಲಿ ಹಿಂದೂ ಸಮುದಾಯ ಆತಂಕದಲ್ಲಿದ್ದು, ಇತ್ತೀಚಿನ ದಿನಗಳಲ್ಲಿ ಬಲವಂತದ ಮತಾಂತರ ಪ್ರಕರಣಗಳು ಹೆಚ್ಚುತ್ತಿವೆ. ಪೊಲೀಸ್ ಇಲಾಖೆ ಹಿಂದೂಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಕೋರಿದ್ದಾರೆ. ಇದನ್ನೂ ಓದಿ: ಉತ್ತರ ಕೊರಿಯಾದೊಂದಿಗಿನ ಸಂಬಂಧವನ್ನು ಕಡಿತಗೊಳಿಸಿದ ಉಕ್ರೇನ್

    ಈ ವರ್ಷದ ಆರಂಭದಲ್ಲಿಯೂ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ತನ್ನ ಮನೆಯಲ್ಲೇ ಹಿಂದೂ ಯುವತಿ ಪೂಜಾ ಕುಮಾರಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಗುಂಡುಹಾರಿಸಿ ಹತ್ಯೆಮಾಡಿದ್ದನು ಎಂದು ಹೇಳಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಾನು ಅಲ್ಪಸಂಖ್ಯಾತನಾಗಿದ್ದೇನೆ, ನನ್ನನ್ನು ತುಳಿಯಲು ನೋಡಲಾಗುತ್ತಿದೆ – ಜಮೀರ್‌

    ನಾನು ಅಲ್ಪಸಂಖ್ಯಾತನಾಗಿದ್ದೇನೆ, ನನ್ನನ್ನು ತುಳಿಯಲು ನೋಡಲಾಗುತ್ತಿದೆ – ಜಮೀರ್‌

    ಬೆಂಗಳೂರು: ನಾನು ಅಲ್ಪಸಂಖ್ಯಾತನಾಗಿದ್ದೇನೆ. ನಾನು ಬೆಳೆಯುತ್ತಿರುವುದನ್ನು ನೋಡಿ ನನ್ನನ್ನು ತುಳಿಯಲು ನೋಡಲಾಗುತ್ತಿದೆ ಎಂದು ಚಾಮರಾಜಪೇಟೆಯ ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ಹೇಳಿದ್ದಾರೆ.

    ಡ್ರಗ್ಸ್‌ ಪ್ರಕರಣದಲ್ಲಿ ತನ್ನ ವಿರುದ್ಧ ಬಂದಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ ಅವರು ನನ್ನ ಮೇಲೆ ಬರುತ್ತಿರುವ ಆರೋಪ ರಾಜಕೀಯ ಪ್ರೇರಿತ. ಫಾಜಿಲ್ ನಾಲ್ಕು ವರ್ಷದ ಹಿಂದೆ ಪರಿಚಯವಾಗಿದ್ದ. ಆದರೆ ಈಗ ನಾನು ಆತನ ಸಂಪರ್ಕದಲ್ಲಿ ಇಲ್ಲ. ಯಾರೋ ಬರುತ್ತಿರುತ್ತಾರೋ ಅವರೆಲ್ಲಾ ಆಪ್ತರು ಅಂತಾ ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

    ಈಗ ಇಲ್ಲಿ ಸರ್ಕಾರ ಯಾವುದಿದೆ ? ಕಾಂಗ್ರೆಸ್ ಸರ್ಕಾರ ಇದೆಯಾ ? ಬಿಜೆಪಿ ಸರ್ಕಾರ ಇದ್ಯಾ? ಸಂಜನಾ ಎಲ್ಲಿದ್ದಾರೆ? ಪೊಲೀಸ್ ಕಸ್ಟಡಿಯಲ್ಲಿದ್ದಾರೆ ತಾನೇ. ತನಿಖೆ ಮಾಡಲಿ. ನಾನು ಪ್ರಕರಣದಲ್ಲಿ ಇದ್ದದ್ದು ಸಾಬೀತಾದರೆ ರಾಜ್ಯದಲ್ಲಿರುವ ನನ್ನ ಆಸ್ತಿ ಸರ್ಕಾರ ಕ್ಕೆ ಕೊಟ್ಟು ಬಿಡುತ್ತೇನೆ. ಸಂಜನಾರನ್ನ ನಾನು ಶ್ರೀಲಂಕಾ ಯಾಕೆ ಇಲ್ಲೇ ನೋಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಾನು ರಾಗಿಣಿ ಒಟ್ಟಿಗೆ ಡ್ರಗ್ಸ್ ಸೇವನೆ ಮಾಡಿದ್ವಿ- ಸ್ಫೋಟಕ ಮಾಹಿತಿ ಬಿಚ್ಚಿಟ್ಟ ರವಿಶಂಕರ್

    ಸಿದ್ದರಾಮಯ್ಯಗೆ ಸ್ಪಷ್ಟನೆ:
    ಡ್ರಗ್ಸ್‌ ಪ್ರಕರಣದಲ್ಲಿ ತನ್ನ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಬೆಳಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಜಮೀರ್‌ ಕ್ಯಾಸಿನೋ ವ್ಯವಹಾರದ ಬಗ್ಗೆ ಪೂರ್ತಿ ವಿವರಣೆ ನೀಡಿದ್ದಾರೆ ಎಂಬ ವಿಚಾರ ಮೂಲಗಳಿಂದ ಪಬ್ಲಿಕ್‌ ಟಿವಿಗೆ ತಿಳಿದು ಬಂದಿದೆ. ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಜಮೀರ್‌ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.

    ಸಿದ್ದರಾಮಯ್ಯ ಬಳಿ ಹೇಳಿದ್ದೇನು?
    ನನ್ನದೇನು ತಪ್ಪಿಲ್ಲ, ಯಾವ ವ್ಯವಹಾರವೂ ಇಲ್ಲ. ಯಾವ ತನಿಖೆ ಬೇಕಾದರೂ ಮಾಡಲಿ. ಯಾವುದೇ ಅಕ್ರಮ ಕ್ಯಾಸಿನೋ ವ್ಯವಹಾರವೂ ಅಲ್ಲ. ಆದರೆ ಪಾಟರ್ನರ್ ಶಿಪ್ ನಲ್ಲಿ ಸಕ್ರಮ ಕ್ಯಾಸಿನೋ ಇದೆ. ಈ ಬಗ್ಗೆ ಆಡಳಿತ ಪಕ್ಷದ ಶಾಸಕರು, ಸಚಿವರಿಗೆ ಸತ್ಯ ಗೊತ್ತಿದೆ. ಗೊತ್ತಿರುವ ಸಚಿವರು ಸುಮ್ಮನಿದ್ದಾರೆ. ಆದರೆ ಈ ಪ್ರಕರಣಕ್ಕೂ ನನ್ನ ಪಾರ್ಟನರ್ ಶಿಪ್ ಕ್ಯಾಸಿನೋಗೆ ಸಂಬಂಧ ಇಲ್ಲ.

    ನಮ್ಮ ಪಕ್ಷದಿಂದ ಹೋಗಿ ಸಚಿವರಾದವರಿಗೂ ಕ್ಯಾಸಿನೋ ವ್ಯವಹಾರ ಗೊತ್ತಿದೆ. ಶ್ರೀಲಂಕಾಕ್ಕೆ ಬಹಳ ಬಿಜೆಪಿ ಸೇರಿದಂತೆ ಎಲ್ಲ ಪಕ್ಷದ ನಾಯಕರು ಹೋಗಿದ್ದಾರೆ. ಅವರ ಪಾಸ್ ಪೋರ್ಟ್ ಪರಿಶೀಲಿಸಿದರೆ ಗೊತ್ತಾಗುತ್ತದೆ. ಕ್ಯಾಸಿನೋಗೆ ಶ್ರೀಲಂಕಾಕ್ಕೆ ಹೋದಾಗ ಹಲವರು ನನ್ನ ಬಳಿ ಮಾಹಿತಿ ಕೇಳಿದ್ದಾರೆ. ಅಲ್ಲಿನ ವಹಿವಾಟು ಕುರಿತು ಆತ್ಮೀಯತೆಯಲ್ಲಿ ಮಾಹಿತಿ ಪಡ್ಕೊಂಡಿದ್ದಾರೆ.

    ಕೋರ್ಟ್ ಅನುಮತಿ ನೀಡಿದ್ದು ನಾನು ಸಂಬರಗಿ ಮೇಲೆ ಕೇಸ್ ಹಾಕುತ್ತಿದ್ದೇನೆ. ನನ್ನ ಸಹಿಸದವರು ಇದರ ಹಿಂದಿದ್ದಾರೆ. ನಾನು ಇಂತಹ ಯಾವ ಕೆಲಸ ಮಾಡಿಲ್ಲ. ಚಿನ್ನ, ಗಾಂಜಾದಂತಹ ವ್ಯವಹಾರ ನಾನು ಮಾಡಿಲ್ಲ.

     

     

  • ನಾನು ಮುಸ್ಲಿಂ ದ್ವೇಷಿಯಲ್ಲ, ಕಾಂಗ್ರೆಸ್ಸನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ: ಸಚಿವ ಅನಂತ್ ಕುಮಾರ್ ಹೆಗ್ಡೆ

    ನಾನು ಮುಸ್ಲಿಂ ದ್ವೇಷಿಯಲ್ಲ, ಕಾಂಗ್ರೆಸ್ಸನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ: ಸಚಿವ ಅನಂತ್ ಕುಮಾರ್ ಹೆಗ್ಡೆ

    ಕಾರವಾರ: ಕಾಂಗ್ರೆಸ್ ಅನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ. ಕಾಂಗ್ರೆಸ್ ಇದ್ದರೆ ರೋಗವಿದ್ದಂತೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

    ಇಂದು ಕಾರವಾರದ ಶೇಜಾವಾಡದ ಸದಾನಂದ ಸಭಾ ಭವನದಲ್ಲಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಲ್ಲಿ ನೀವು ಹಿಂದುಳಿದವರು, ದಲಿತರು ಎಂದು ಬೇರ್ಪಡಿಸಿ ಹಿಂದುಳಿದ ರೋಗವನ್ನು ಕೊಟ್ಟವರು ಕಾಂಗ್ರೆಸ್ಸಿನವರು ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ಅನ್ನು ಶಾಶ್ವತವಾಗಿ ಮನೆಗೆ ಕಳುಹಿಸಬೇಕು, 70 ವರ್ಷಗಳಿಂದ ಕಾಂಗ್ರೆಸ್ ನಮ್ಮ ಧರ್ಮವನ್ನು ಅವಹೇಳನ ಮಾಡಿದೆ. ನಮ್ಮ ದೇಶಕ್ಕೆ ಸ್ವಾತಂತ್ರ ಬಂದಾಗ ದೇಶದಲ್ಲಿ ನಾಲ್ಕೂ ಐದೋ ಶೇಕಡಾ ಮುಸ್ಲಿಮರಿದ್ದರು. ಆದರೆ ಅನಧಿಕೃತವಾಗಿ 30% ಮುಸ್ಲೀಮರಾಗಿದ್ದಾರೆ. ಎಲ್ಲಿ 30% ಮುಸಲ್ಮಾನರಾಗುತ್ತಾರೋ ಆ ದೇಶ ಮುಸ್ಲಿಂ ರಾಷ್ಟ್ರವಾಗುತ್ತೆ ಇದಕ್ಕೆ ಇತಿಹಾಸ ಸಾಕ್ಷಿ ಎಂದರು.

    ನಾನು ಮುಸ್ಲಿಂ ದ್ವೇಷಿಯಲ್ಲ. ಇನ್ನೂಂದು ಧರ್ಮವನ್ನು ತುಳಿದು ನಾಶಮಾಡಿ ಬದುಕುವ ಸಂಸ್ಕøತಿ ನಮ್ಮದಲ್ಲ. ಆದರೆ ಈ ಕಾಂಗ್ರೇಸ್ ಅಲ್ಪಸಂಖ್ಯಾತರ ತುಷ್ಟೀಕರಣದ ಹೆಸರಿನಲ್ಲಿ ಭಯೋತ್ಪಾದಕರ ಜೊತೆ ರಾಜಿ ಮಾಡಿಕೊಳ್ಳುತ್ತಿದೆ. ದೇಶಭಕ್ತರನ್ನು ಧಮನಿಸುತ್ತಿದೆ. ಯಾರು ಭಯೋತ್ಪಾದಕರು ಕೊಲೆಗಡುಕರು ಇದ್ದಾರೋ ಅವರು ಮುಖ್ಯಮಂತ್ರಿ ಜೊತೆ ಕುಳಿತು ಮೀಟಿಂಗ್ ಮಾಡುತಿದ್ದಾರೆ ಎಂದು ಕಿಡಿಕಾರಿದರು.

  • ಯುಪಿ ಉಪ ಚುನಾವಣೆಯ ಸೋಲಿನ ಬಳಿಕ ಬದಲಾಯ್ತು ಅಮಿತಾ ಶಾ ರಾಜಕೀಯ ತಂತ್ರ

    ಯುಪಿ ಉಪ ಚುನಾವಣೆಯ ಸೋಲಿನ ಬಳಿಕ ಬದಲಾಯ್ತು ಅಮಿತಾ ಶಾ ರಾಜಕೀಯ ತಂತ್ರ

    ಬೆಂಗಳೂರು: ಉತ್ತರಪ್ರದೇಶದ ಉಪ ಚುನಾವಣೆಗಳ ಸೋಲಿನ ಹಿನ್ನೆಲೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಸಮುದಾಯದ ಮತಗಳನ್ನು ಸೆಳೆಯಲು ಪ್ಲಾನ್ ಮಾಡುತ್ತಿದ್ದು, ಈ ನಿಟ್ಟಿನಲ್ಲಿಯೇ ಮುಂದಿನ ಚುನಾವಣೆಯ ಯೋಜನೆಗಳನ್ನು ರೂಪಿಸಲು ಅಮಿತ್ ಶಾ ಮುಂದಾಗಿದ್ದಾರೆ ಎಂದು ಹೇಳಲಾಗ್ತಿದೆ.

    ರಾಜ್ಯದಲ್ಲಿ ಮುಸ್ಲಿಂ ಮತದಾರರು ಹೆಚ್ಚಿರುವ ಕಡೆಗಳಲ್ಲಿ ಅಲ್ಪಸಂಖ್ಯಾತ ಸಮಾವೇಶ ಆಯೋಜನೆಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಮುಸ್ಲಿಂ ಮತಗಳನ್ನು ಸೆಳೆಯಲು ಮುಸ್ಲಿಮರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳ ಬಗ್ಗೆ ವ್ಯಾಪಾಕ ಪ್ರಚಾರ ಮಾಡಲಿದೆ. ಮುಸ್ಲಿಮರನ್ನು ಸೆಳೆಯುವುದಕ್ಕೆ ಬಿಜೆಪಿ ರಾಷ್ಟ್ರೀಯ ಮುಸ್ಲಿಂ ನಾಯಕರಾದ ಸಿಕಂದರ್ ಬಕ್ಷ್, ಮುಕ್ತಾರ್ ಅಬ್ಬಾಸ್ ನಖ್ವಿ, ಶಹನವಾಜ್ ಹುಸೇನ್, ಎಂ.ಜೆ.ಅಕ್ಬರ್ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಅಂತಾ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯುಪಿಯಲ್ಲಿ ಸೈಕಲ್ ಕೇಕೆ, ಪ್ರಧಾನಿ ಮೋದಿಗೆ ಎಚ್ಚರಿಕೆ – ಮಹಾ ಮೈತ್ರಿಗೆ ಇದು ವೇದಿಕೆ!

    ಏಪ್ರಿಲ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ಗಮನದಲ್ಲಿ ಇಟ್ಟುಕೊಂಡು ಬೃಹತ್ ಸಮಾವೇಶಗಳನ್ನು ಹಮ್ಮಿಕೊಳ್ಳುವ ಸಾಧ್ಯತೆಗಳಿವೆ. ಮುಸ್ಲಿಮರಿಗಾಗಿ ಕೇಂದ್ರ ಸರ್ಕಾರ ಜಾರಿ ಮಾಡಿದ ತ್ರಿವಳಿ ತಲಾಖ್ ರದ್ದು, ಹಜ್ ಸಬ್ಸಿಡಿ, ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ, ಮುಸ್ಲಿಂ ಮಹಿಳೆಯರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ‘ನಯೀ ರೋಶಿನಿ’ ಕಾರ್ಯಕ್ರಮಗಳ ಬಗ್ಗೆ ಬಿಜೆಪಿ ರಾಜ್ಯದಲ್ಲಿ ಪ್ರಚಾರ ನಡೆಸಲಿದೆ. ಶೀಘ್ರದಲ್ಲಿಯೇ ಅಮಿತ್ ಶಾ ಸಮಾವೇಶದ ದಿನಾಂಕ, ಸ್ಥಳ ಮತ್ತು ರೂಪರೇಷಗಳನ್ನು ತಯಾರಿಸಲಿದ್ದಾರೆ ಅಂತಾ ತಿಳಿದು ಬಂದಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುಖಭಂಗ- ಬಿಹಾರದಲ್ಲಿ ಆರ್ ಜೆಡಿಗೆ ಗೆಲುವು

    ಬಿಜೆಪಿ ಸುಮಾರು 30 ಸಾವಿರ ಮುಸ್ಲಿಂ ಕಾರ್ಯಕರ್ತರ ನೊಂದಣಿ ಮಾಡಿಸುವ ಗುರಿಯನ್ನು ಹೊಂದಿದ್ದು, ರಾಜ್ಯದ ಸುಮಾರು 30 ಕ್ಷೇತ್ರಗಳಲ್ಲಿ ಸಮಾವೇಶ ನಡೆಯುವ ಸಾಧ್ಯತೆಗಳಿವೆ.

    https://www.youtube.com/watch?v=8S_c6n7KvqE

    https://www.youtube.com/watch?v=kcmY9YR5AqY