Tag: Mischief

  • ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಕಾರಣ: ಈಶ್ವರಪ್ಪ

    ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಕಾರಣ: ಈಶ್ವರಪ್ಪ

    ಶಿವಮೊಗ್ಗ: ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕೆ ಕಾರಣವಾಗಿದ್ದು, ಕೆಲ ಕಿಡಿಗೇಡಿಗಳಿಗೆ ಕಾಂಗ್ರೆಸ್‍ನವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದ್ದಾರೆ.

    ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶಕ್ಕೆ ನಾವು ಬೆಲೆ ಕೊಡುತ್ತೇವೆ. ದತ್ತಪೀಠದಲ್ಲಿ ಗೋರಿ ನಿರ್ಮಾಣ ಮಾಡಿ, ಅದಕ್ಕೆ ಬಾಬಾ ಬುಡನ್‍ಗಿರಿ ಎಂದು ಹೆಸರು ಹೇಳಿದರೆ ಆಗುತ್ತೇ? ದತ್ತಪೀಠ ಎಂಬ ಹೆಸರಿದ್ದು, ನ್ಯಾಯಾಲಯದ ಆದೇಶದಂತೆ ಅದು ದತ್ತಪೀಠವೇ ಆಗಿದೆ. ಹೀಗಿರುವಾಗ ಕೆಲವು ಕಿಡಿಗೇಡಿಗಳು ಅಲ್ಲಿ ನಮಾಜ್ ಮಾಡಿ, ಮಾಂಸಾಹಾರ ಸೇವಿಸಿದ್ದಾರೆ ಅಂದರೆ ಅವರಿಗೆ ಇನ್ನೆಷ್ಟು ಸೊಕ್ಕು ಇರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ದತ್ತಪೀಠ ವಿವಾದಿತ ಸ್ಥಳದಲ್ಲಿ ನಮಾಜ್?

    ಏನಿದು ಘಟನೆ?
    ಈ ಹಿಂದೆ ಚಿಕ್ಕಮಗಳೂರಿನಲ್ಲಿ ಕಿಡಿಗೇಡಿಗಳು ದತ್ತಪೀಠದ ವಿವಾದಿತ ಸ್ಥಳದಲ್ಲಿ ಮಾಂಸದೂಟ ಮಾಡಿ, ಗೋರಿ ಪೂಜೆ ಬಳಿಕ ದತ್ತಪೀಠದ ಆವರಣದಲ್ಲಿ ನಮಾಜ್ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವಿವಾದ ಸೃಷ್ಟಿಯಾಗಿತ್ತು. ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ನಿಂತು ನಮಾಜ್- ವ್ಯಕ್ತಿಯ ಬಂಧನ

  • ಅಂಬೇಡ್ಕರ್ ಭಾವಚಿತ್ರವಿರುವ ಫ್ಲೆಕ್ಸ್ ಹರಿದು ಅಪಮಾನ

    ಅಂಬೇಡ್ಕರ್ ಭಾವಚಿತ್ರವಿರುವ ಫ್ಲೆಕ್ಸ್ ಹರಿದು ಅಪಮಾನ

    ಹಾಸನ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ ಫ್ಲೆಕ್ಸ್‌ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಕುಡುಕುಂದಿ ಗುಡ್ಡದಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ವತಿಯಿಂದ ಅಂಬೇಡ್ಕರ್ ಅವರ 131ನೇ ಜಯಂತಿ ಪ್ರಯುಕ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆ ಹಲವೆಡೆ ಅಂಬೇಡ್ಕರ್ ಫ್ಲೆಕ್ಸ್ ಹಾಕಲಾಗಿತ್ತು. ಆದರೆ ಕೆಲವು ಕಿಡಿಗೇಡಿಗಳು ಫ್ಲೆಕ್ಸ್ ಹರಿದು ಹಾಕಿದ್ದಾರೆ. ಇದನ್ನೂ ಓದಿ: 3 ವರ್ಷಗಳ ಬಳಿಕ ಟಿಎಂಸಿ ಪಕ್ಷಕ್ಕೆ ಬಿಜೆಪಿ ಎಂಪಿ ವಾಪಸ್

    ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಕಾರ್ಯಕ್ರಮ ಆಯೋಜಕರು ಆರೋಪಿಸಿದ್ದಾರೆ. ಘಟನೆ ಕುರಿತು ಗಂಡಸಿ ಪೊಲೀಸ್ ಠಾಣೆ ಎದುರು ಜಮಾಯಿಸಿರುವ ಹೋರಾಟಗಾರರು, ಫ್ಲೆಕ್ಸ್ ಹರಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ವಿವಾದ – ಸದ್ಯಕ್ಕಿಲ್ಲ ಉತ್ಖನನ

  • ಜೋಗಿಮಟ್ಟಿ ಗಿರಿಧಾಮಕ್ಕೆ ಕಿಡಿಗೇಡಿಗಳಿಂದ ಬೆಂಕಿ – ಅಪಾರ ಸಸ್ಯಕಾಶಿ ಸುಟ್ಟು ಭಸ್ಮ

    ಜೋಗಿಮಟ್ಟಿ ಗಿರಿಧಾಮಕ್ಕೆ ಕಿಡಿಗೇಡಿಗಳಿಂದ ಬೆಂಕಿ – ಅಪಾರ ಸಸ್ಯಕಾಶಿ ಸುಟ್ಟು ಭಸ್ಮ

    ಚಿತ್ರದುರ್ಗ: ಕಿಡಿಗೇಡಿಗಳು ಬೆಂಕಿ ಹಾಕಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ನಗರದ ಜೋಗಿಮಟ್ಟಿ ಗಿರಿಧಾಮವು ಹೊತ್ತಿ ಉರಿದಿದೆ.

    ಒಣಹುಲ್ಲಿಗೆ ಬೆಂಕಿ ತಗುಲಿದ ಪರಿಣಾಮ ಜೋಗಿಮಟ್ಟಿ ಅರಣ್ಯಧಾಮದಲ್ಲಿದ್ದ ಅಪಾರ ಔಷಧಿ ಸಸಿಗಳು, ಗಿಡಮೂಲಿಕೆಗಳು ಹಾಗೂ ಕೆಲ ಬೆಲೆಬಾಳುವ ಗಿಡಮರಗಳು ಸರ್ವನಾಶವಾಗಿವೆ. ಹೀಗಾಗಿ ಕೋಟೆನಾಡಿನ ಪರಿಸರವಾದಿಗಳು ಕಿಡಿಗೇಡಿಗಳ ದುಷ್ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ವೇಳೆ ಕಾಡಿಗೆ ಬೆಂಕಿ ಬಿದ್ದಿರುವ ವಿಚಾರ ತಿಳಿದ ಅಗ್ನಿಶಾಮಕದಳವು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಕ್ಷಣಾರ್ಧದಲ್ಲೇ ಆಡುಮಲ್ಲೇಶ್ವರ ರಸ್ತೆಯ ಸದ್ಗುರು ಸೇವಾಶ್ರಮದವರೆಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಇದನ್ನೂ ಓದಿ: ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ

    POLICE JEEP

    ಸೂಕ್ತ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿದ ಅಗ್ನಿಶಾಮಕದಳದ ಸಿಬ್ಬಂದಿಯು ಕಾರ್ಯಪ್ರವೃತ್ತರಾಗದಿದ್ದರೆ ಆಶ್ರಮ ಸೇರಿದಂತೆ ಸಮೀಪದಲ್ಲಿದ್ದ ಕ್ಯಾಂಟೀನ್ ಸಹ ಬೆಂಕಿಗೆ ಆಹುತಿಯಾಗುವ ಆತಂಕ ಎದುರಾಗಿತ್ತು. ಇಷ್ಟೆಲ್ಲಾ ಅವಾಂತರ ನಡೆದರೂ ಸಹ ಯಾವೊಬ್ಬ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಸ್ಥಳಕ್ಕೆ ಧಾವಿಸದೇ ಕೇವಲ ಡಿ ದರ್ಜೆಯ ನೌಕರರು ಮಾತ್ರ ಬೆಂಕಿ ನಂದಿಸಲು ಮುಂದಾಗಿದ್ದರು. ಘಟನೆಯು ಅಧಿಕಾರಿಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿತ್ತು.

    ಘಟನೆಯು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಮಗನ ಮೇಲೆ ಅತ್ಯಾಚಾರ ಆರೋಪ- ಸುಳ್ಳು, ಆಧಾರರಹಿತ ಎಂದ ಕೈ ಶಾಸಕ

  • ಕೊಟ್ಟಿಗೆಹಾರದಲ್ಲಿ ಹೊತ್ತಿ ಉರಿದ ಅರಣ್ಯ – ಬೆಂಕಿ ನಂದಿಸಲು ಅರಣ್ಯಾಧಿಕಾರಿಗಳ ಹರಸಾಹಸ

    ಕೊಟ್ಟಿಗೆಹಾರದಲ್ಲಿ ಹೊತ್ತಿ ಉರಿದ ಅರಣ್ಯ – ಬೆಂಕಿ ನಂದಿಸಲು ಅರಣ್ಯಾಧಿಕಾರಿಗಳ ಹರಸಾಹಸ

    ಚಿಕ್ಕಮಗಳೂರು: ಗುಡ್ಡಕ್ಕೆ ಬೆಂಕಿ ತಗುಲಿ ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗೂಲ್ ಎಂಬ ಅರಣ್ಯ ಪ್ರದೇಶದಲ್ಲಿ ನಡೆದಿದೆ.

    ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಮಳೆಗಾಲದಲ್ಲಿ ಕೊಟ್ಟಿಗೆಹಾರ ಸುತ್ತಮುತ್ತ ಭಾರೀ ಮಳೆ ಸುರಿದಿತ್ತು. ಈಗ ಅಷ್ಟೇ ಪ್ರಮಾಣದ ರಣಬಿಸಿಲು ಕೂಡಾ ಇದೆ. ಭಾರೀ ಬಿಸಿಲಿಗೆ ಬೆಟ್ಟಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಕಿಡಿ ಬೆಂಕಿ ಸಿಕ್ಕರೂ ಇಡೀ ಕಾಡೇ ಹೊತ್ತಿ ಉರಿಯುವ ಸ್ಥಿತಿಯಲ್ಲಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಕಾಡನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ವೆಲ್ ಕಮ್ ಬ್ಯಾಕ್! ನಿಮ್ಮ ಕುಟುಂಬಗಳು ನಿಮಗಾಗಿ ಉಸಿರು ಬಿಗಿಹಿಡಿದು ಕಾಯುತ್ತಿವೆ: ಸ್ಮೃತಿ ಇರಾನಿ

    ಫೈರ್ ಲೈನ್, ಸ್ಥಳಿಯರಿಗೆ ಅರಣ್ಯದ ಬಗ್ಗೆ ಮಾಹಿತಿ, ಬೀದಿನಾಟಕ, ಕರಪತ್ರ, ಭಿತ್ತಿಪತ್ರಗಳ ಮೂಲಕ ಕಾಡಿನ ಮಹತ್ವ ಸಾರುತ್ತ ಕಾಡನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ, ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ದೇವನಗೂಲ್ ಸಮೀಪ ಹತ್ತಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ. ದಟ್ಟ ಕಾನನದ ಈ ಭಾಗದಲ್ಲಿ ಅಪಾರ ಪ್ರಮಾಣದ ಅಪರೂಪದ ಸಸ್ಯ ಸಂಪತ್ತು ಕೂಡ ಇದೆ. ಆದರೆ, ಬೆಂಕಿಯ ಕೆನ್ನಾಲಿಗೆ ಹತ್ತಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿರುವುದರಿಂದ ಅಪರೂಪದ ಸಸ್ಯ ಸಂಪತ್ತು ಕೂಡ ನಾಶವಾಗಿದೆ.

    ವಿಷಯ ತಿಳಿದ ಕೂಡಲೇ ಅರಣ್ಯ ಪ್ರದೇಶಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಕೂಡ ಸ್ಥಳಕ್ಕಾಗಮಿಸಿ ಬೆಂಕಿಯನ್ನ ನಂದಿಸಿದ್ದಾರೆ. ಅರಣ್ಯ ಅಧಿಕಾರಿಗಳು ಮರದ ಟೊಂಗೆಗಳ ಮೂಲಕ ಬೆಂಕಿಯನ್ನು ನಂದಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಅರಣ್ಯದ ಜೊತೆ ಸಾವಿರಾರು ಜೀವಸಂಕುಲ ಕೂಡ ಅಪಾಯದಿಂದ ಪಾರಾಗಿವೆ.

    ಮೂಡಿಗೆರೆ ಸಂಪೂರ್ಣ ಮಲೆನಾಡದರೂ ಮಾರ್ಚ್-ಏಪ್ರಿಲ್ ಬಿರುಬಿಸಲು ಕಾಲ. ಈ ವೇಳೆ ಅರಣ್ಯ ಅಧಿಕಾರಿಗಳು ಕಾಡನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಪಾಡುತ್ತಾರೆ. ಸ್ವಲ್ಪ ಎಚ್ಚರ ತಪ್ಪಿದರೂ ದೊಡ್ಡ ಅನಾಹುತ ಕಟ್ಟಿಟ್ಟಬುತ್ತಿ. ಜಿಲ್ಲೆಯ ಅರಣ್ಯ ಇಲಾಖೆ ಕೂಡ ಕಾಡನ್ನ ರಕ್ಷಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ: ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!

    ಆದರೂ ಕೂಡ ಕೆಲ ಕಿಡಿಗೇಡಿಗಳಿಂದ ಪ್ರತಿ ವರ್ಷ ಅಲ್ಲಲ್ಲೇ ಅರಣ್ಯಕ್ಕೆ ಬೆಂಕಿ ಬಿದ್ದು ನೂರಾರು ಎಕರೆ ಅರಣ್ಯ ಸಂಪೂರ್ಣ ನಾಶವಾಗುತ್ತಿದೆ. ಜನಸಾಮಾನ್ಯರಲ್ಲಿ ಅರಣ್ಯದ ಮಹತ್ವದ ಅರಿವಾಗುವವರೆಗೂ ಈ ಅನಾಹುತ ತಪ್ಪಿದ್ದಲ್ಲ. ಅರಣ್ಯಕ್ಕೆ ಬೆಂಕಿ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಕೂಡ ಬೆಂಕಿ ನಂದಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾಥ್ ನೀಡಿದ್ದಾರೆ.

  • ರೇಣುಕಾಚಾರ್ಯ, ಸಹೋದರರ ದುರಾಡಳಿತ ಖಂಡಿಸಿ ಏಕಾಂಗಿ ಹೋರಾಟ – ಗುರುಪಾದಯ್ಯ ಮಠದ್

    ರೇಣುಕಾಚಾರ್ಯ, ಸಹೋದರರ ದುರಾಡಳಿತ ಖಂಡಿಸಿ ಏಕಾಂಗಿ ಹೋರಾಟ – ಗುರುಪಾದಯ್ಯ ಮಠದ್

    ದಾವಣಗೆರೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವ ಎಂ.ಪಿ.ರೇಣುಕಾಚಾರ್ಯ ಹಾಗೂ ಅವರ ಸಹೋದರರು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುವಂತೆ ಮಾಡುತ್ತಿದ್ದಾರೆ. ಇವರ ದುರಾಡಳಿತದಿಂದ ಬೇಸತ್ತು ಫೆಬ್ರವರಿ 13 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಏಕಾಂಗಿಯಾಗಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಭ್ರಷ್ಟಾಚಾರ ವಿರೋಧಿ ವೇದಿಕೆ ಗೌರವಾಧ್ಯಕ್ಷ ಗುರುಪಾದಯ್ಯ ಮಠದ್ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಶಾಸಕರು ಹಾಗೂ ಅವರ ಸಹೋದರ ಸ್ವಜನ ಪಕ್ಷಪಾತ, ಸರ್ವಾಧಿಕಾರ ಧೋರಣೆ, ಅಸಂಬದ್ಧ ಮತ್ತು ಪ್ರಚೋದನಾತ್ಮಕ ಹೇಳಿಕೆಗಳಿಂದ ಅವಳಿ ತಾಲೂಕಿನಲ್ಲಿ ಅಶಾಂತಿ ಉಂಟಾಗಿ ಕೋಮುಸಾಮರಸ್ಯಕ್ಕೆ ಧಕ್ಕೆ ಒದಗುವ ಲಕ್ಷಣಗಳು ಗೋಚರಿಸುತ್ತವೆ. ಶಾಸಕರಿಗೆ ಮತ ಹಾಕದವರ ಹಾಗೂ ಅವರ ದುರಾಡಳಿತದ ಬಗ್ಗೆ ಮಾತನಾಡಿದರೆ ಹೊನ್ನಾಳಿ ವಿಧಾನಸಭೆ ಕ್ಷೇತ್ರವನ್ನು ತೊರೆದು ಹೋಗುವ ಸ್ಥಿತಿ ನಿರ್ಮಿಸಿ ರಿಪಬ್ಲಿಕ್ ಆಫ್ ಹೊನ್ನಾಳಿ ಮಾಡಲು ಹೊರಟಿದ್ದಾರೆ ಎಂದು ದೂರಿದರು.

    ಸರ್ಕಾರ ರೂಪಿಸಿದ ಮರಳು ನೀತಿಯನ್ನು ಉಲ್ಲಂಘಿಸಿ ಹಿಂಬಾಲಕರೊಂದಿಗೆ ಕಾನೂನು ಬಾಹಿರ ಮರಳು ಮಾಫಿಯಕ್ಕೆ ಉತ್ತೇಜನ ನೀಡುತ್ತಿದ್ದಾರೆ. ಉದ್ಯೋಗ ಖಾತ್ರಿ ಮತ್ತು ವಿವಿಧ ಕ್ಷೇತ್ರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಅಣ್ಣ ತಮ್ಮಂದಿರಂತೆ ಬದುಕುತ್ತಿರುವ ಹಿಂದು ಮುಸ್ಲಿಮರ ಮಧ್ಯೆ ಕಿಚ್ಚು ಹಚ್ಚುವ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹುನ್ನಾರ ನಡೆಸುತ್ತಿದ್ದಾರೆ. ಇದೆಲ್ಲವನ್ನು ಖಂಡಿಸಿ ಏಕಾಂಕಿಯಾಗಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದೇನೆ. ಹೊನ್ನಾಳಿಯ ಭ್ರಷ್ಟಾಚಾರದ ಬಗ್ಗೆ ಜಿಲ್ಲಾಧಿಕಾರಿ, ಮುಖ್ಯಮಂತ್ರಿಗಳಿಗೆ, ಪ್ರಧಾನಮಂತ್ರಿ ಹಾಗೂ ಬಿಜೆಪಿಯ ರಾಷ್ಟ್ರ ಹಾಗೂ ರಾಜ್ಯಾಧ್ಯಕ್ಷರಿಗೆ ಪತ್ರ ಬರೆಯಲು ತೀರ್ಮಾನ ಮಾಡಿದ್ದೇನೆ ಎಂದು ತಿಳಿಸಿದರು.