Tag: Mischiefs

  • ನೂಪುರ್ ಶರ್ಮಾ ಪ್ರತಿಕೃತಿ ಮಾಡಿ ನೇಣು ಹಾಕಿದ ಕಿಡಿಗೇಡಿಗಳು

    ನೂಪುರ್ ಶರ್ಮಾ ಪ್ರತಿಕೃತಿ ಮಾಡಿ ನೇಣು ಹಾಕಿದ ಕಿಡಿಗೇಡಿಗಳು

    ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಪ್ರತಿಕೃತಿಯನ್ನು ಮಾಡಿ ಕಿಡಿಗೇಡಿಗಳು ಅದನ್ನು ನೇಣು ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

    ನಗರದ ಫೋರ್ಟ್ ರಸ್ತೆಯ ಮಸೀದಿಯ ಬಳಿಯ ನಡುರಸ್ತೆಯಲ್ಲೇ ಎರಡು ಬದಿಯ ಕಟ್ಟಡಗಳಿಗೆ ಹಗ್ಗ ಕಟ್ಟಿ ನೂಪುರ್ ಶರ್ಮಾ ಪ್ರತಿಕೃತಿ ನೇಣು ಹಾಕಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ನಡು ರಸ್ತೆಯಲ್ಲೇ ಪ್ರತಿಕೃತಿಗೆ ನೇಣು ಹಾಕಿದ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ನಿನ್ನೆ ತಡರಾತ್ರಿ ಅಪರಿಚಿತ ಕಿಡಿಗೇಡಿಗಳು ಈ ಕೃತ್ಯವನ್ನ ಎಸಗಿದ್ದಾರೆ. ಇದನ್ನೂ ಓದಿ: ಬೇರೆಯವರು ತಾಳಿಕಟ್ಟಿದವರ ಬಳಿ ಹೋಗಿ ಲವ್ ಲೆಟರ್ ಬರೆದರೆ ಆಗುತ್ತಾ : ಸಿಎಂ ಇಬ್ರಾಹಿಂ

    ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಾರ್ಕೇಟ್ ಠಾಣೆ ಪೊಲಿಸರು ಭೇಟಿ ನೀಡಿ ಹಗ್ಗ ಕಟ್ಟಿ ನೇತು ಹಾಕಿದ್ದ ಪ್ರತಿಕೃತಿ ತೆರವುಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಮಾರ್ಕೆಟ್ ಪೊಲೀಸರು ಸುತ್ತಲಿನ ಪ್ರದೇಶದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

    ಬೆಳಗಾವಿಯ ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು: ಯಶ್‌ಪಾಲ್ ಸುವರ್ಣ

    ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು: ಯಶ್‌ಪಾಲ್ ಸುವರ್ಣ

    ಉಡುಪಿ: ನನಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು ಎಂದು ನಗರದ ಸರ್ಕಾರಿ ಮಹಿಳಾ ಪಿಯು ಕಾಲೇಜು ಉಪಾಧ್ಯಕ್ಷ ‌ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಬೆದರಿಕೆ ಹಾಕಿರುವ ವಿಚಾರವಾಗಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂಯೇಷನ್ ಎಷ್ಟು ಅಂತ ಗೊತ್ತಿಲ್ಲ. ಒಬ್ಬ ಮನುಷ್ಯನ ಬೆಲೆ ಎಷ್ಟು ಅಂತ ಗೊತ್ತಿದ್ದರೆ ಆತ ಬೆಲೆ ಕಟ್ಟುತ್ತಿರಲಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ ರಾಷ್ಟ್ರೀಯತೆ ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಾಲಕಿಯರಿಗೆ ರೈಫಲ್ ತರಬೇತಿ, ಸೂಸೈಡ್ ಬಾಂಬ್ ತರಬೇತಿ ನೀಡಿದ್ದೆ – ಐಸಿಸ್ ಸೇರಿದ್ದ ಶಿಕ್ಷಕಿಯಿಂದ ತಪ್ಪೊಪ್ಪಿಗೆ

    ಕಿಡಿಗೇಡಿಗಳು ಅವರ ತಲೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದಲ್ಲದೇ, ತಲೆಗೆ 10 ಲಕ್ಷ ರೂಪಾಯಿ ಘೋಷಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು. ತಾಕತ್ ಇದ್ದರೆ ಅವರು ಎದುರು ಬಂದು ಮಾತಾಡಲಿ. ನನ್ನ ಜೀವನದಲ್ಲಿ ಇಂತದ್ದು ತುಂಬಾ ನೋಡಿದ್ದೇನೆ. ನಾನು ದೇಶದ್ರೋಹಿ ಚಟುವಟಿಕೆ ಮಾಡಿಲ್ಲ, ಅನ್ಯಾಯ ಮಾಡಿಲ್ಲ. ನನಗೆ ದೋ ನಂಬರ್ ಬ್ಯುಸಿನೆಸ್ ಇಲ್ಲ ನಾನು ಯಾರದೋ ಅನ್ನದ ಬಟ್ಟಲಿಗೆ ಕೈಹಾಕಿ ತಿಂದಿಲ್ಲ ಎಂದು ಸಿಡಿದರು. ಇದನ್ನೂ ಓದಿ: ಮೈಕ್‌ ದಂಗಲ್‌ – ಇಂದು ಬಿಜೆಪಿ ಮುಖಂಡರ ಮನೆ ಮುಂದೆ ಶ್ರೀರಾಮ ಸೇನೆಯಿಂದ ಪ್ರತಿಭಟನೆ

    court order law

    ಶಾಲೆಯ ಶಿಸ್ತು ಮತ್ತು ಕೋರ್ಟ್ ಆದೇಶ ಪಾಲಿಸಲು ನಾವು ಹಿಜಬ್‍ನ ವಿರುದ್ಧವೇ ನಿಲ್ಲುತ್ತೇವೆ. ಈ ವರ್ಷ ಕೂಡ 40ಕ್ಕೂ ಹೆಚ್ಚು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ನಾವು ಅಡ್ಮಿಶನ್ ಮಾಡಿಸಿಕೊಂಡಿದ್ದೇವೆ. ನಾವು ಹಿಜಬ್ ತೆಗೆದು ಕ್ಲಾಸಿಗೆ ಬರುತ್ತೇವೆ ಎಂದು ಬರೆದುಕೊಟ್ಟಿದ್ದಾರೆ ಎಂದು ತಿಳಿಸಿದರು.

    ಕಿಡಿಗೇಡಿಗಳು ಪ್ರಮೋದ್ ಮುತಾಲಿಕ್ ಅವರಿಗೂ ಬೆದರಿಕೆ ಹಾಕಿದ್ದಾರೆ. ನಾನು ಅವರ ಜೊತೆ ಮಾತನಾಡಿಲ್ಲ, ಮಾತನಾಡುತ್ತೇನೆ. ನನ್ನ ಸಿದ್ಧಾಂತ ದೇಶದ ವಿಚಾರದ ಹೋರಾಟ ಮಾಡುತ್ತೇನೆ. ನಾನು ಭಯಪಡುವ ಪ್ರಶ್ನೆಯೇ ಇಲ್ಲ. ಟೀಕೆ ಬೆದರಿಕೆ ಸಾಮಾಜಿಕ ಚಟುವಟಿಕೆಯ ಒಂದು ಅವಿಭಾಜ್ಯ ಅಂಗ ಎಂದರು.

  • ವಿದ್ಯುತ್ ಕಂಬಕ್ಕೆ ದನದ ಬುರುಡೆ ಕಟ್ಟಿ ಕಿಡಿಗೇಡಿಗಳಿಂದ ವಿಕೃತಿ

    ವಿದ್ಯುತ್ ಕಂಬಕ್ಕೆ ದನದ ಬುರುಡೆ ಕಟ್ಟಿ ಕಿಡಿಗೇಡಿಗಳಿಂದ ವಿಕೃತಿ

    ಬೆಳಗಾವಿ: ವಿದ್ಯುತ್ ದೀಪಗಳನ್ನು ಕಳ್ಳತನ ಮಾಡುವುದಲ್ಲದೇ ಕಂಬಕ್ಕೆ ದನದ ಬುರುಡೆ ಕಟ್ಟಿ ಕಳ್ಳರು ವಿಕೃತಿ ಮೆರೆದಿರುವ ಘಟನೆ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ.

    ಗೋಕಾಕ್ ನಗರ – ಗೋಕಾಕ್ ಫಾಲ್ಸ್ ರಸ್ತೆ ಮಧ್ಯೆ ಸೋಲಾರ್ ದೀಪ ಅಳವಡಿಕೆ ಮಾಡಲಾಗಿತ್ತು. ಈ ವೇಳೆ ಸೋಲಾರ್ ದೀಪ ಕಳ್ಳತನ ಮಾಡಿದ ಬಳಿಕ ದೀಪದ ಕಂಬಕ್ಕೆ ಜಾನುವಾರುಗಳ ಬುರುಡೆ ಕಟ್ಟಿದ್ದಾರೆ. ಇದನ್ನು ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

    ಎರಡ್ಮೂರು ಕಂಬಗಳಿಗೆ ಜಾನುವಾರುಗಳ ಬುರುಡೆ ಅಳವಡಿಕೆ ಮಾಡಲಾಗಿದೆ. ನಗರಸಭೆ ಅಧಿಕಾರಿಗಳ ಗಮನಕ್ಕಿದ್ದರೂ ಬುರುಡೆಗಳನ್ನು ತೆರವು ಮಾಡಿಲ್ಲ. ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅತೀ ಎತ್ತರದಲ್ಲಿ ಯೋಗ ಮಾಡಿ ದಾಖಲೆ ಬರೆದ ಐಟಿಬಿಪಿ ತಂಡ

  • ಮಸೀದಿ ಮೇಲೆ ಕೇಸರಿಧ್ವಜ ಕಟ್ಟಿ ಕಿಡಿಗೇಡಿಗಳ ವಿಕೃತಿ – ಸ್ಥಳದಲ್ಲೇ ಬೀಡುಬಿಟ್ಟ ಪೊಲೀಸರು

    ಮಸೀದಿ ಮೇಲೆ ಕೇಸರಿಧ್ವಜ ಕಟ್ಟಿ ಕಿಡಿಗೇಡಿಗಳ ವಿಕೃತಿ – ಸ್ಥಳದಲ್ಲೇ ಬೀಡುಬಿಟ್ಟ ಪೊಲೀಸರು

    ಬೆಳಗಾವಿ: ಮೂಡಲಗಿ ತಾಲೂಕಿನ ಅರಬಾವಿ ಗ್ರಾಮದ ಸತ್ತಿಗೇರಿ ಮಡ್ಡಿ ತೋಟದ ಮಸೀದಿಯ ಮೇಲೆ ಯಾರೋ ಕಿಡಗೇಡಿಗಳು ಕೇಸರಿ ಬಣ್ಣದ ಧ್ವಜ ಕಟ್ಟಿದ್ದು, ಮುಂಜಾನೆ ಮುಸ್ಲಿಮರು ಪ್ರಾರ್ಥನೆಗೆ ತೆರಳಿದಾಗ ಇದು ಬೆಳಕಿಗೆ ಬಂದಿದೆ.

    ಜಿಲ್ಲೆಯ ಗೋಕಾಕ್ ತಾಲೂಕಿನ ಸತ್ತಿಗೇರಿ ಮಡ್ಡಿಯಲ್ಲಿ ಇರುವಂತಹ ಮಸೀದಿ ಮೇಲೆ ಬೆಳಗ್ಗೆ 3.30 ರಿಂದ 5.30ರ ಸುಮಾರಿಗೆ ಯಾರೋ ಕಿಡಿಗೇಡಿಗಳು ಮಸೀದಿ ಮೇಲೆ ಕೇಸರಿ ಧ್ವಜ ಕಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದ ಹಿಂದೂ ಮತ್ತು ಮುಸ್ಲಿಂ ಹಿರಿಯರು ಧ್ವಜವನ್ನು ತೆರವುಗೊಳಿಸಿದ್ದಾರೆ. ಯಾರು ಕಟ್ಟಿದ್ದಾರೆ ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ಇದನ್ನೂ ಓದಿ: ಉಗುರಿನಲ್ಲಿದ್ದ ರಕ್ತದ ಕಲೆಯಿಂದಾಗಿ ಕೊಲೆ ಮಾಡಿದ್ದ ವ್ಯಕ್ತಿ ಸಿಕ್ಕಿಬಿದ್ದ!

    ಸದ್ಯ ಸ್ಥಳದಲ್ಲಿ ವಾತಾವರಣ ಶಾಂತವಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಸ್ಥಳದಲ್ಲಿ ಪೊಲೀಸರು ಬಿಗಿ  ಬಂದೋಬಸ್ತ್ ನಿಯೋಜಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್‌ಗೆ ವಿಷ್ಣು ಸ್ತಂಭ ಎಂದು ಮರುನಾಮಕರಣ ಮಾಡಲು ಆಗ್ರಹಿಸಿ ಪ್ರತಿಭಟನೆ

  • ಪುರದಮ್ಮ ಕಾಯ್ತಿದ್ದಾಳೆ, ಕಾಡಿಗೆ ಬೆಂಕಿ ಹಾಕಿದರೆ ಜೀವನ ಸರ್ವನಾಶ – ಅರಣ್ಯದಲ್ಲಿ ಬ್ಯಾನರ್

    ಪುರದಮ್ಮ ಕಾಯ್ತಿದ್ದಾಳೆ, ಕಾಡಿಗೆ ಬೆಂಕಿ ಹಾಕಿದರೆ ಜೀವನ ಸರ್ವನಾಶ – ಅರಣ್ಯದಲ್ಲಿ ಬ್ಯಾನರ್

    ಚಿಕ್ಕಮಗಳೂರು: ಈ ಅರಣ್ಯವನ್ನ ಪುರದಮ್ಮ ಹಾಗೂ ರೇವಣಸಿದ್ದೇಶ್ವರ ದೇವರು ಕಾಯುತ್ತಿದ್ದಾರೆ. ಈ ಅರಣ್ಯಕ್ಕೆ ಯಾರಾದರೂ ಬೆಂಕಿ ಹಾಕಿದರೆ ಅವರ ಜೀವನ ಸರ್ವನಾಶವಾಗಲಿದೆ ಎಂದು ಸ್ಥಳಿಯರೇ ಅರಣ್ಯ ರಕ್ಷಣೆಗೆ ಮುಂದಾಗಿ, ಅರಣ್ಯದಲ್ಲಿ ಬ್ಯಾನರ್ ಹಾಕಿರುವ ಅಪರೂಪದ ಘಟನೆಗೆ ತಾಲೂಕಿನ ಸಿಂದಿಗೆರೆ ಮೀಸಲು ಅರಣ್ಯ ವಿಭಾಗ ಸಾಕ್ಷಿಯಾಗಿದೆ.

    ಈಗಾಗಲೇ ಕಾಡನ್ನ ಬೆಂಕಿಯಿಂದ ರಕ್ಷಿಸಲು ಅರಣ್ಯ ಇಲಾಖೆ ಸಾಕಷ್ಟು ಕ್ರಮಗಳನ್ನ ಕೈಗೊಂಡಿದೆ. ಆದರೂ, ನಾನಾ ರೀತಿಯ ಮೂಢನಂಬಿಕೆಗಳಿಂದ ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಾಕುತ್ತಿದ್ದಾರೆ. ಹಾಗಾಗಿ ಸಿಂದಿಗೆರೆ ಮೀಸಲು ಅರಣ್ಯ ವ್ಯಾಪ್ತಿಯ ದೇವಗೊಂಡನಹಳ್ಳಿ, ಕರಡಿಗವಿಮಠ, ಸಿಂದಿಗೆರೆ, ಎಸ್.ಬಿದರೆ, ಭೂಚೇನಹಳ್ಳಿ ಕಾವಲ್‍ನ ಹಲವು ಕಡೆಗಳಲ್ಲಿ ಈ ರೀತಿಯ ಬ್ಯಾನರ್ ಹಾಕಿ, ಕಿಡಿಗೇಡಿಗಳಿಗೆ ಭಯ ಹುಟ್ಟಿಸಿದ್ದಾರೆ.

    ಅರಣ್ಯ ಅಧಿಕಾರಿಗಳು, ಕೇಸ್‍ಗೆಲ್ಲಾ ಹೆದರದವರು ದೇವರಿಗದರೂ ಹೆದರಿ ಬೆಂಕಿ ಹಾಕುವುದನ್ನ ನಿಲ್ಲಿಸಲಿ ಎಂದು ಈ ರೀತಿಯ ಬ್ಯಾನರ್ ಹಾಕಿದ್ದಾರೆ. ಈಗಾಗಲೇ ಅರಣ್ಯಕ್ಕೆ ಬೆಂಕಿ ಬೀಳುವುದನ್ನ ನಿಯಂತ್ರಿಸಲು ಅರಣ್ಯ ಇಲಾಖೆ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಇಲಾಖಾ ವ್ಯಾಪ್ತಿಯ ಜೊತೆ ಸಾರ್ವಜನಿಕರಿಗೆ ಜಾಗೃತಿಯನ್ನೂ ಮೂಡಿಸಿದ್ದಾರೆ. ಆದರೂ, ಕಿಡಿಗೇಡಿಗಳ ಕೃತ್ಯಕ್ಕೆ ಹಾಗೂ ಮೂಡನಂಬಿಕೆಗೆ ಅರಣ್ಯ ಬಲಿಯಾಗುತ್ತಿದೆ. ಹಾಗಾಗಿ, ಸಿಂದಿಗೆರೆ ಗ್ರಾಮದ ಜನ ಅರಣ್ಯ ರಕ್ಷಣೆ ದೇವರ ಮೊರೆ ಹೋಗಿದ್ದಾರೆ.

    ಇತ್ತೀಚೆಗೆ ಅರಣ್ಯ ಇಲಾಖೆ ಬೆಂಕಿ ಅವಘಡಗಳನ್ನ ನಿಯಂತ್ರಿಸಲು ಡ್ರೋಣ್ ಮೊರೆ ಹೋಗಿತ್ತು. ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್ ಹಾರಿಸಿ ಕಾಡಿಗೆ ಬೆಂಕಿ ಹಾಕುವವರ ಮೇಲೆ ನಿಗಾ ವಹಿಸಿತ್ತು. ಆದರೂ ಸಿಂದಿಗೆರೆ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಪ್ರತಿ ಬಾರಿ ಕಿಡಿಗೇಡಿಗಳ ಕೃತ್ಯಕ್ಕೆ ಕಾಡಿಗೆ ಬೆಂಕಿ ಹಾಕುವ ಪ್ರಕರಣಗಳು ಅಲ್ಲಲ್ಲಿ ಕಂಡು ಬರುತ್ತಿದ್ದವು. ಹಾಗಾಗಿ ಸ್ಥಳಿಯರು ಈ ಹೊಸ ದಾರಿಯ ಮೂಲಕ ಅರಣ್ಯ ರಕ್ಷಣೆಗೆ ಮುಂದಾಗಿದ್ದಾರೆ.