Tag: Mississauga

  • ಕೆನಡಾದ ರಾಮಮಂದಿರದಲ್ಲಿ ಭಾರತ ವಿರೋಧಿ ಬರಹ- ಕ್ರಮ ತೆಗೆದುಕೊಳ್ಳಲು ಆಗ್ರಹ

    ಕೆನಡಾದ ರಾಮಮಂದಿರದಲ್ಲಿ ಭಾರತ ವಿರೋಧಿ ಬರಹ- ಕ್ರಮ ತೆಗೆದುಕೊಳ್ಳಲು ಆಗ್ರಹ

    ಒಟ್ಟಾವಾ: ಕೆನಡಾದ (Canada) ಮಿಸಿಸೌಗಾದಲ್ಲಿರುವ (Mississauga) ರಾಮಮಂದಿರವನ್ನು (Ram Mandir) ಭಾರತ (India) ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರೋಧಿ ಗೀಚುಬರಹಗಳಿಂದ ವಿರೂಪಗೊಳಿಸಲಾಗಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಟೊರೊಂಟೊದಲ್ಲಿರುವ (Toronto) ಭಾರತದ ರಾಯಭಾರ ಕಚೇರಿ ಇದನ್ನು ಖಂಡಿಸಿ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದೆ.

    ಮಿಸಿಸೌಗಾದಲ್ಲಿರುವ ರಾಮಮಂದಿರವನ್ನು ಭಾರತ ವಿರೋಧಿ ಗೀಚುಬರಹಗಳ ಮೂಲಕ ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಮತ್ತು ದುಷ್ಕರ್ಮಿಗಳ ಮೇಲೆ ತ್ವರಿತ ಕ್ರಮ ಕೈಗೊಳ್ಳುವಂತೆ ನಾವು ಕೆನಡಾದ ಅಧಿಕಾರಿಗಳನ್ನು ವಿನಂತಿಸಿದ್ದೇವೆ ಎಂದು ಭಾರತದ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಕಾರು ಬಾಂಬ್‌ ಸ್ಫೋಟ ಪ್ರಕರಣ – ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ NIA ದಾಳಿ

    ದುಷ್ಕರ್ಮಿಗಳು ಮಂದಿರದಲ್ಲಿ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಬರೆದು, ಭಿಂದ್ರವಾಲಾ ಪರ ಘೋಷಣೆಯ ಬರಹಗಳನ್ನು ಬರೆದಿದ್ದಾರೆ. ಬ್ರಾಂಪ್ಟನ್‌ನ ಮೇಯರ್ ಪ್ಯಾಟ್ರಿಕ್ ಬ್ರೌನ್ ಇದನ್ನು ಅಪರಾಧ ಎಂದು ಕರೆದಿದ್ದು, ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಕೆನಡಾದಲ್ಲಿನ ಹಿಂದೂ ದೇವಾಲಯಗಳಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಬರೆದು ವಿರೂಪಗೊಳಿಸಿರುವುದು ಇದು ಮೊದಲೇನಲ್ಲ. ಇದಕ್ಕೂ ಮೊದಲು ಜನವರಿಯಲ್ಲಿ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು. ಇದು ಭಾರತೀಯ ಸಮುದಾಯದಿಂದ ಆಕ್ರೋಶಕ್ಕೆ ಕಾರಣವಾಯಿತು. ಇದನ್ನೂ ಓದಿ: ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ಕೊಡಿ: ಜೆಡಿಯು ನಾಯಕ ಒತ್ತಾಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k