Tag: Misuse

  • ಕಾಂಗ್ರೆಸ್ ಪಕ್ಷದ ರಾಜಕೀಯ ಸಭೆಯಲ್ಲಿ ಶಾಲಾ ಮಕ್ಕಳ ದುರ್ಬಳಕೆ

    ಕಾಂಗ್ರೆಸ್ ಪಕ್ಷದ ರಾಜಕೀಯ ಸಭೆಯಲ್ಲಿ ಶಾಲಾ ಮಕ್ಕಳ ದುರ್ಬಳಕೆ

    ಚಿಕ್ಕೋಡಿ: ಕಾಂಗ್ರೆಸ್ (Congress) ಪಕ್ಷದ ರಾಜಕೀಯ ಸಭೆಯಲ್ಲಿ ಮಕ್ಕಳ ದುರ್ಬಳಕೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದಲ್ಲಿ ನಡೆದಿದೆ.

    ಕಾಂಗ್ರೆಸ್ ಕಾರ್ಯಕರ್ತರಿಂದ ಸಭೆಯಲ್ಲಿ ಮಕ್ಕಳ (Children) ಬಳಕೆ ಮಾಡಿಕೊಳ್ಳಲಾಗಿದೆ. ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಬಳಸಿಕೊಂಡು ಮಕ್ಕಳಿಗೆ ಕಾಂಗ್ರೆಸ್ ಶಾಲು (Shawl) ಹೊದಿಸಲಾಗಿದೆ. ಏನೂ ಅರಿಯದ ಮಕ್ಕಳ ಕೊರಳಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿದ ಪೋಟೋ ಎಲ್ಲೆಡೆ ವೈರಲ್ (Viral) ಆಗಿದೆ. ಇದನ್ನೂ ಓದಿ: ಹೆರಿಟೇಜ್, ಡೂಡ್ಲ, ಆರೋಕ್ಯ ಹಾಲಿನ ಬ್ರಾಂಡ್‍ಗಳು ನಂದಿನಿಯ ಅಕ್ಕತಂಗಿಯರಾ?: ಪ್ರತಾಪ್ ಸಿಂಹ 

    ಉಗಾರ ಖುರ್ದ ಪಟ್ಟಣದಲ್ಲಿ ಹಾಲು ಮತದ ಸಮಾಜದ ವತಿಯಿಂದ ರಾಜು ಕಾಗೆಯವರಿಗೆ (Raju Kage) ಬೆಂಬಲ ಸೂಚಿಸುವ ಕಾರ್ಯಕ್ರಮದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಪೋಟೋ ವೈರಲ್ ಆದರೂ ಸಹ ಕಂಡು ಕಾಣದಂತೆ ಚುಣಾವಣಾ ಆಯೋಗ ಹಾಗೂ ತಾಲೂಕು ಆಡಳಿತ ಕುಳಿತಿದೆ. ಚುನಾವಣೆ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಳ್ಳದಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಆದೇಶವಿದ್ದರೂ ಮಕ್ಕಳ ಬಳಕೆ ಮಾಡಲಾಗಿದೆ. ಇದನ್ನೂ ಓದಿ: ಮೂಲಭೂತ ಸೌಕರ್ಯ ಕೊಡದೇ ಪ್ರಚಾರಕ್ಕೆ ಬಂದ್ರೆ ವೋಟ್ ಕೊಡಲ್ಲ: ನಿಖಿಲ್‌ಗೆ ಮಹಿಳೆಯರಿಂದ ತರಾಟೆ

  • ನಗರಸಭೆ ಕರ ವಸೂಲಾತಿಯ ಲಕ್ಷಾಂತರ ರೂ. ದುರುಪಯೋಗ- ಸಿಬ್ಬಂದಿ ಆಸ್ತಿ ಮುಟ್ಟುಗೋಲು ಹಾಕಲು ಮುಂದಾದ ಅಧಿಕಾರಿಗಳು

    ನಗರಸಭೆ ಕರ ವಸೂಲಾತಿಯ ಲಕ್ಷಾಂತರ ರೂ. ದುರುಪಯೋಗ- ಸಿಬ್ಬಂದಿ ಆಸ್ತಿ ಮುಟ್ಟುಗೋಲು ಹಾಕಲು ಮುಂದಾದ ಅಧಿಕಾರಿಗಳು

    ಮಡಿಕೇರಿ: ನಗರಸಭೆಯ ವಿವಿಧ ಕರ ವಸೂಲಾತಿಯಲ್ಲಿ 60 ಲಕ್ಷ ರೂಪಾಯಿಗೂ ಹೆಚ್ಚು ಹಣ ದುರುಪಯೋಗವಾಗಿರುವುದು ಸಾಬೀತಾಗಿ, ಅದನ್ನು ವಸೂಲಿ ಮಾಡುವಂತೆ ಪೌರಾಡಳಿತ ಇಲಾಖೆಯಿಂದ ನಿರ್ದೇಶನ ಬಂದು ಮೂರು ತಿಂಗಳೇ ಕಳೆದಿದೆ. ಆದರೆ ಇಂದಿಗೂ ನಯಾಪೈಸೆ ವಸೂಲಾಗಿಲ್ಲ. ಹೀಗಾಗಿ ಸಿಬ್ಬಂದಿ ಅಷ್ಟೂ ಹಣ ವಾಪಸ್ ಮಾಡದಿದ್ದರೆ ಅದೇ ಮೌಲ್ಯದ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಡಿಕೇರಿ ನಗರಸಭೆಗೆ ನಿರ್ದೇಶಿಸಲಾಗಿದೆ.

    ಮಡಿಕೇರಿ ನಗರಸಭೆಯಲ್ಲಿ 2015 ರಿಂದ 2017 ರವರೆಗೆ ಕರ ವಸೂಲಾತಿಯಲ್ಲಿ ಬರೋಬ್ಬರಿ ಒಂದು ಕೋಟಿಗೂ ಹೆಚ್ಚು ಹಣ ಅಂದಿನ ಕರವಸೂಲಾತಿ ಸಿಬ್ಬಂದಿಯಾದ ಸಜೀತ್ ಮತ್ತು ಸ್ವಾಮಿ ಇಬ್ಬರಿಂದ ದುರ್ಬಳಕೆಯಾಗಿತ್ತು. ಬಳಿಕ ಸ್ಥಳೀಯ ಲೆಕ್ಕ ಪರಿಶೋಧನೆಯಲ್ಲಿ 60,56,860 ರೂಪಾಯಿ ಅವ್ಯವಹಾರ ನಡೆದಿರುವುದು ಸಾಬೀತಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ಪೌರಾಡಳಿತ ಇಲಾಖೆ, ಇಬ್ಬರಿಂದ ಅಷ್ಟೂ ಹಣದ ಜೊತೆಗೆ ಇದುವರೆಗೆ ಶೇ.8ರ ಬಡ್ಡಿಯಂತೆ ಎಷ್ಟು ಹಣವಾಗುತ್ತದೆಯೋ ಅಷ್ಟನ್ನು ವಾಪಸ್ ಪಡೆದುಕೊಳ್ಳಬೇಕು. ಅಷ್ಟು ಹಣ ವಾಪಸ್ ಮಾಡದಿದ್ದರೆ ಅದೇ ಮೌಲ್ಯದ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಡಿಕೇರಿ ನಗರಸಭೆಗೆ ನಿರ್ದೇಶನ ನೀಡಿ ಮೂರು ತಿಂಗಳು ಕಳೆದಿದೆ. ಇಂದಿಗೂ ಒಂದೇ ಒಂದು ರೂಪಾಯಿ ವಾಪಸ್ ಸಂಗ್ರಹವಾಗಿಲ್ಲ. ಅಥವಾ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ. ಇದನ್ನೂ ಓದಿ: ಹುಟ್ಟಿದಾಗಿನಿಂದಲೂ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಯುವತಿ ಪಿಯುಸಿ ಪಾಸ್

    ಈ ಕುರಿತು ಮಡಿಕೇರಿ ನಗರಸಭೆ ಆಯುಕ್ತ ರಾಮದಾಸ್ ಅವರನ್ನು ಕೇಳಿದರೆ ಅವ್ಯವಹಾರ ನಡೆಸಿದ್ದ ಇಬ್ಬರಿಗೂ ಎರಡು ನೋಟಿಸ್ ನೀಡಿ ಒಂದು ವಾರವಾಗಿದೆ. ಆದರೆ ಇಂದಿಗೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮತ್ತೊಂದು ನೋಟಿಸ್ ನೀಡಿ, ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.

    ನಗರಸಭೆ ಸದಸ್ಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ಕೋಟಿಗೂ ಹೆಚ್ಚು ಹಣ ದುರ್ಬಳಕೆ ಆಗಿತ್ತು. ಅದನ್ನು ಸ್ಥಳೀಯ ಲೆಕ್ಕ ಪರಿಶೋಧನೆ ಮಾಡಿಸಿ ಕೇವಲ 60,56,860 ರೂಪಾಯಿ ಅವ್ಯವಹಾರ ಆಗಿದೆ ಎಂಬುದಾಗಿ ವರದಿ ನೀಡಲಾಗಿದೆ. ಅಲ್ಲದೆ ನಗರಸಭೆಯ ಇತರೆ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದು, ಅವರನ್ನೂ ತನಿಖೆಗೆ ಒಳಪಡಿಸಬೇಕು. ಆ ಕೆಲಸ ಮಾಡದೆ ಅವ್ಯವಹಾರದಲ್ಲಿ ಭಾಗಿಯಾದವರನ್ನೇ ತನಿಖಾ ಸಮಿತಿಯಲ್ಲಿ ಸದಸ್ಯರನ್ನಾಗಿ ಮಾಡಿ ಅವರನ್ನೆಲ್ಲಾ ರಕ್ಷಿಸಲಾಗಿದೆ. ಕೇವಲ ಕರ ವಸೂಲುಗಾರರನ್ನು ತಪ್ಪಿಸ್ಥರೆಂದು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರಗಳು ಜಿಎಸ್‍ಟಿಗೆ ಸೇರಿಸಲು ಒಪ್ಪದ ಹೊರತು ಪೆಟ್ರೋಲ್ ಬೆಲೆ ಇಳಿಯಲ್ಲ: ಹರ್ದೀಪ್ ಸಿಂಗ್ ಪುರಿ

    ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿರುವ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ಅಲ್ಲಿಯಾದರೂ ಎಲ್ಲಾ ಹಗರಣಗಳು ಬೆಳಕಿಗೆ ಬರಲಿ ಎನ್ನೋದು ನಗರಸಭೆ ಸದಸ್ಯರ ಆಗ್ರಹ. ನಗರಸಭೆಯಲ್ಲಿ ನಡೆದ ಅವ್ಯವಾರದ ಹಣ ವಸೂಲಿ ಮಾಡಲು ಅಧಿಕಾರಿಗಳು ಇಂದಿಗೂ ಮನಸ್ಸು ಮಾಡಿಲ್ಲ. ಇತ್ತ ತಪ್ಪು ಮಾಡಿದ ನಗರಸಭೆಯ ಸಿಬ್ಬಂದಿಗೂ ಯಾವುದೇ ಶಿಕ್ಷೆ ಅಗದೇ ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬ ಪರಿಸ್ಥಿತಿ ನಗರಸಭೆಯದು ಎಂದು ಸಾರ್ವನಿಕರು ಪ್ರಶ್ನೆ ಮಾಡುತ್ತಿದ್ದಾರೆ.

  • ಪರಿಹಾರ ಕೇಂದ್ರದಲ್ಲಿ ಆಹಾರ ದುರುಪಯೋಗವಾಗಿರುವುದು ನಿಜ: ಸಾ.ರಾ ಮಹೇಶ್

    ಪರಿಹಾರ ಕೇಂದ್ರದಲ್ಲಿ ಆಹಾರ ದುರುಪಯೋಗವಾಗಿರುವುದು ನಿಜ: ಸಾ.ರಾ ಮಹೇಶ್

    ಮಡಿಕೇರಿ: ಪರಿಹಾರ ಕೇಂದ್ರಗಳಲ್ಲಿ ಆಹಾರ ಹಾಗೂ ಇತರೆ ಪದಾರ್ಥಗಳು ದುರಪಯೋಗವಾಗುತ್ತಿರುವುದು ಸತ್ಯವೆಂದು ಜಿಲ್ಲಾ ಉಸ್ತುವಾರಿ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿಕೆ ನೀಡಿದ್ದಾರೆ.

    ರಾಜ್ಯದ ಜನತೆ ಸಂತ್ರಸ್ತರಿಗಾಗಿ ಕಳುಹಿಸಿದ್ದ ಅಪಾರ ಪ್ರಮಾಣದ ವಸ್ತುಗಳನ್ನು ದುರುಪಯೋಗವಾಗುತ್ತಿರುವ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಬೇಕಾದವರಿಗೆ ಪದಾರ್ಥಗಳನ್ನು ಹಂಚುತ್ತಿದ್ದಾರೆ. ಪರಿಹಾರ ಕೇಂದ್ರಗಳಲ್ಲಿ ಆಹಾರ ಪದಾರ್ಥ ಹಾಗೂ ಇತರೆ ವಸ್ತುಗಳು ದುರಪಯೋಗವಾಗುತ್ತಿರುವುದು ಸತ್ಯವೆಂದು ಮಾಹಿತಿ ನೀಡಿದ್ದಾರೆ.

    ಈ ಕುರಿತು ಜಿಲ್ಲಾಧಿಕಾರಿಗಳಿಗೆ ಜೊತೆ ಈಗಾಗಲೇ ಚರ್ಚಿಸಿದ್ದು, ಸಂತ್ರಸ್ತರಿಗೆ ತಲುಪಬೇಕಾದ ಯಾವುದೇ ವಸ್ತುಗಳು ದುರಪಯೋಗವಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದ್ದೇನೆ. ಅಲ್ಲದೇ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹೇಳಿದ್ದೇನೆ. ರಾಜ್ಯದ ಜನತೆ ತಮ್ಮ ಸಹಾಯಹಸ್ತ ಚಾಚಿ ಸಂತ್ರಸ್ತರಿಗೆ ಕಳುಹಿಸಿರುವ ಪರಿಹಾರ ಸಾಮಗ್ರಿಗಳು ಉಳ್ಳವರ ಪಾಲಾಗದಂತೆ ಎಚ್ಚರವಹಿಸುತ್ತೇನೆಂದು ಭರವಸೆ ನೀಡಿದ್ದಾರೆ.

    ಪ್ರವಾಹದಿಂದಾಗಿ ಜಿಲ್ಲೆ ಸಂಪೂರ್ಣವಾಗಿ ನಾಶಹೊಂದಿದ್ದು, ಕೊಡಗನ್ನು ಪುನಃ ಸಹಜ ಸ್ಥಿತಿಗೆ ಮರಳಿಸಲು ಯತ್ನಿಸುತ್ತೇವೆ. ಇದಕ್ಕಾಗಿ ಸುಮಾರು 2 ಸಾವಿರ ಕೋಟಿ ರೂಪಾಯಿ ಖರ್ಚಾದರೂ ತೊಂದರೆಯಿಲ್ಲ. ನಾನು ಸಹ ನನ್ನ ಒಂದು ತಿಂಗಳ ಸಂಬಳವನ್ನು ಮಡಿಕೇರಿ ನಿರಾಶ್ರಿರಿಗಾಗಿ ನೀಡಿದ್ದೇನೆಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇಸ್ ಕ್ಲೋಸ್ ಆಗಿಲ್ಲ, ಕಳ್ಳರೂ ಸಿಕ್ಕಿಲ್ಲ, ಆದ್ರೂ ಡ್ರಾ ಆಗಿದ್ದ 20,89,558 ರೂ. ಅಕೌಂಟ್‍ಗೆ ವಾಪಸ್

    ಕೇಸ್ ಕ್ಲೋಸ್ ಆಗಿಲ್ಲ, ಕಳ್ಳರೂ ಸಿಕ್ಕಿಲ್ಲ, ಆದ್ರೂ ಡ್ರಾ ಆಗಿದ್ದ 20,89,558 ರೂ. ಅಕೌಂಟ್‍ಗೆ ವಾಪಸ್

    ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮಕರ್ತರಾದ ಶ್ರೀ ಭೀಮೇಶ್ವರ ಜೋಷಿ ಅವರು ಯೂರೋಪ್ ಪ್ರವಾಸದಲ್ಲಿದ್ದ ವೇಳೆ ಅವರ ಎಟಿಎಂ ಕಾರ್ಡ್ ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಆದರೆ ಈಗ ಕೇಸ್ ಕ್ಲೋಸ್ ಆಗದಿದ್ದರೂ, ಕಳ್ಳರೂ ಇನ್ನೂ ಸಿಗದಿದ್ದರೂ 20 ಲಕ್ಷದ 89 ಸಾವಿರದ 558 ರೂ. ಅಕೌಂಟ್‍ಗೆ ವಾಪಸ್ ಬಂದಿದ್ದು, ಹಲವು ಅನುಮಾನಗಳು ಹುಟ್ಟಿಕೊಂಡಿದೆ.

    ಕಳಸಾದ ಕರ್ನಾಟಕ ಬ್ಯಾಂಕಿನ ಜೋಷಿ ಅವರ ಅಕೌಂಟಿನಿಂದ ದುಷ್ಕರ್ಮಿಗಳು 20 ಲಕ್ಷಕ್ಕೂ ಅಧಿಕ ಹಣವನ್ನ ಡ್ರಾ ಮಾಡಿಕೊಂಡಿದ್ದರು. ವಿದೇಶದಿಂದ ಹಿಂದಿರುಗಿದ ಭೀಮೇಶ್ವರ ಜೋಷಿ ಕಳಸಾದ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದರು. ಕಳೆದ 29 ದಿನದಿಂದ ತನಿಖೆ ನಡೆಯುತ್ತಿದೆ. ಕಳ್ಳರಿನ್ನೂ ಅರೆಸ್ಟ್ ಆಗಿಲ್ಲ. ಈ ನಡುವೆ ಅಷ್ಟು ದೊಡ್ಡ ಮೊತ್ತದ ಹಣ ಜೋಷಿಯವರ ಅಕೌಂಟ್‍ಗೆ ಹಿಂದಿರುಗಿರೋದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಖಾತೆಗೆ ಹಣವನ್ನು ಹಿಂದಿರುಗಿರೋದ್ರಿಂದ ನಿಜಕ್ಕೂ ಹಣ ಡ್ರಾ ಆಗಿತ್ತಾ? ಅಥವಾ ಬ್ಯಾಂಕ್‍ನವರೇ ಲೆಕ್ಕದಲ್ಲಿ ಹೆಚ್ಚು ಕಡಿಮೆ ಮಾಡಿದ್ದಾರಾ? ಕಳ್ಳರು ಸಿಗದೆ ಆ ಹಣ ಹೇಗೆ ಸಿಕ್ತು? ಅನ್ನೋ ಅನುಮಾನ ಮೂಡಿದೆ. ಜನಸಾಮಾನ್ಯರು ಒಂದು ಸಾವಿರ ಕಳೆದುಕೊಂಡರೆ ಅರ್ಜಿ, ಐಡಿ ಪ್ರೂಫ್ ಅಂತೆಲ್ಲಾ 45 ದಿನಕ್ಕೂ ಹೆಚ್ಚು ಕಾಲ ಅಲೆಯಬೇಕು. ಆದರೆ ಕಳ್ಳರೇ ಸಿಗದೆ ಇಷ್ಟು ದೊಡ್ಡ ಮೊತ್ತದ ಹಣ ವಾಪಸ್ ಬರೋಕೆ ಹೇಗೆ ಸಾಧ್ಯ ಎಂದು ಬ್ಯಾಂಕ್ ಸಿಬ್ಬಂದಿಗಳೇ ಸ್ಪಷ್ಟಪಡಿಸಬೇಕಿದೆ.