ಕ್ಯಾನ್ಬೆರಾ: ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದಾರೆ.
ಟೆಸ್ಟ್, ಏಕದಿನ ವಿಶ್ವಕಪ್ ಮೇಲೆ ಗಮನ ಹರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. 2027 ರ ಪುರುಷರ ಏಕದಿನ ವಿಶ್ವಕಪ್‌ಗಾಗಿ ತಮ್ಮ ಉತ್ತಮ ಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕಾಗಿದೆ ಎಂದು ಸ್ಟಾರ್ಕ್ ತಿಳಿಸಿದ್ದಾರೆ.
ಯುಎಸ್ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆದ ಕಳೆದ ಟಿ-20 ವಿಶ್ವಕಪ್ ನಂತರ ಈ ಸ್ವರೂಪದಲ್ಲಿ ಸ್ಟಾರ್ಕ್ ಕಾಣಿಸಿಕೊಂಡಿಲ್ಲ. ಭಾರತ ಮತ್ತು ಶ್ರೀಲಂಕಾದಲ್ಲಿ ಮುಂದಿನ ಆವೃತ್ತಿಯ ಪಂದ್ಯಾವಳಿಗೆ ಕೇವಲ ಆರು ತಿಂಗಳ ಮೊದಲು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಆಸ್ಟ್ರೇಲಿಯಾದ ಪರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಆಗಿದ್ದಾರೆ. ಆಡಮ್ ಜಂಪಾ ಮೊದಲ ಸ್ಥಾನದಲ್ಲಿದ್ದಾರೆ. 2012 ರಲ್ಲಿ ಪಾಕಿಸ್ತಾನ ವಿರುದ್ಧ ತಮ್ಮ ಮೊದಲ ಪಂದ್ಯ ಆಡಿದರು. 65 ಪಂದ್ಯಗಳ ವೃತ್ತಿಜೀವನದಲ್ಲಿ ಅವರು 7.74 ರ ಎಕಾನಮಿ ದರದಲ್ಲಿ 79 ವಿಕೆಟ್‌ಗಳನ್ನು ಕಿತ್ತಿದ್ದಾರೆ. ಆರು ಟಿ20 ವಿಶ್ವಕಪ್‌ಗಳ ಪೈಕಿ ಐದರಲ್ಲಿ ಆಡಿದ್ದಾರೆ. ಗಾಯದಿಂದಾಗಿ 2016 ರ ಆವೃತ್ತಿಯನ್ನು ಮಾತ್ರ ಕಳೆದುಕೊಂಡಿದ್ದರು. 2021 ರಲ್ಲಿ ದುಬೈನಲ್ಲಿ ಆಸ್ಟ್ರೇಲಿಯಾ ಪ್ರಶಸ್ತಿ ಗೆಲ್ಲುವಲ್ಲಿ ಸ್ಟಾರ್ಕ್ ಪ್ರಮುಖ ಪಾತ್ರ ವಹಿಸಿದ್ದರು.
ಟೆಸ್ಟ್ ಕ್ರಿಕೆಟ್ ನನ್ನ ಅತ್ಯುನ್ನತ ಆದ್ಯತೆಯಾಗಿದೆ. ನಾನು ಆಸ್ಟ್ರೇಲಿಯಾ ಪರ ಆಡಿದ ಪ್ರತಿಯೊಂದು ಟಿ20 ಪಂದ್ಯದ ಪ್ರತಿ ನಿಮಿಷವನ್ನೂ ಪ್ರೀತಿಸುತ್ತೇನೆ. 2021 ರ ವಿಶ್ವಕಪ್ ಅನ್ನು ಮರೆಯಲು ಸಾಧ್ಯವಿಲ್ಲ. ನಾವು ಗೆದ್ದಿದ್ದಕ್ಕಾಗಿ ಮಾತ್ರವಲ್ಲ, ಅದೊಂದು ಅದ್ಭುತ ತಂಡ. ಟೂರ್ನಿ ಹಾದಿಯುದ್ದಕ್ಕೂ ಮೋಜಿನಿಂದ ಕೂಡಿತ್ತು ಎಂದು ನೆನಪಿಸಿಕೊಂಡಿದ್ದಾರೆ.
ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆರಂಭಿಕ ಆಟ ಇಂದು ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದೆ.
ಹೌದು. ಡೆಲ್ಲಿ ವಿರುದ್ಧ ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿದ ಆರಂಭಿಕ ಆಟಗಾರ ಫಿಲ್ ಸಾಲ್ಟ್ (Phil Salt) 3ನೇ ಓವರ್‌ನಲ್ಲಿ ಮಿಚೆಲ್ ಸ್ಟಾರ್ಕ್ ಬೌಲಿಂಗ್‌ಗೆ (Mitchell Starc) 30 ರನ್ ಚಚ್ಚಿದರು. ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ ಸಾಲ್ಟ್, ಬಳಿಕ 4, 4, ನೋಬಾಲ್+4, 6, 1LB, 4LB ಬಾರಿಸುವ ಮೂಲಕ ಒಂದೇ ಓವರ್‌ನಲ್ಲಿ 30 ರನ್ ಬಾರಿಸಿದ್ರು, ಫಿಲ್ ಸಾಲ್ಟ್ ಅವರ ಈ ಆಟ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು.
ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್ ಟೂರ್ನಿಯಲ್ಲಿ ಆರ್‌ಸಿಬಿ ತಂಡಕ್ಕೆ ಸಾಕಷ್ಟು ಟ್ರೆಂಡ್ ಇದೆ. ಇಲ್ಲಿಯವರೆಗೂ ಒಂದೇ ಒಂದು ಬಾರಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇದ್ದರೂ ಆರ್‌ಸಿಬಿ, ಇತರೆ ಎಲ್ಲಾ ತಂಡಗಳಿಗಿಂತಲೂ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನ ಹೊಂದಿದೆ.
ಫೇಸ್‌ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಕೋಟ್ಯಂತರ ಫಾಲೋವರ್ಸ್ ಇದ್ದಾರೆ. ಪಂದ್ಯ ಗೆದ್ದರೂ, ಸೋತರೂ ಆರ್‌ಸಿಬಿ ತಂಡವನ್ನ ಬೆಂಬಲಿಸುವ ಪ್ರಾಮಾಣಿಕ ಅಭಿಮಾನಿಗಳು (RCB Fans) ಇವರಾಗಿದ್ದಾರೆ. ಆರ್‌ಸಿಬಿ… ಆರ್‌ಸಿಬಿ ಎಂದು ಕೂಗುತ್ತಾ ಆಟಗಾರರನ್ನು ಹುರಿದುಂಬಿಸುತ್ತಾರೆ. ಅದೇ ರೀತಿ ಫ್ಯಾನ್ಸ್ ಫಿಲ್ ಸಾಲ್ಟ್ ಅವರನ್ನು ಹುರಿದುಂಬಿಸುತ್ತಿದ್ದರು. ಆದ್ರೆ 4ನೇ ಓವರ್‌ನ 5ನೇ ಎಸೆತದಲ್ಲಿ ಅನಗತ್ಯ ರನ್ ಕದಿಯಲು ಯತ್ನಿಸಿ ಸಾಲ್ಟ್ ರನೌಟ್‌ಗೆ ತುತ್ತಾದರು.
ಕ್ಯಾನ್ಬೆರಾ: 2025ರ ಚಾಂಪಿಯನ್ಸ್ (Champions Trophy 2025) ಟ್ರೋಫಿ ಟೂರ್ನಿಗೆ ಇನ್ನೂ ಒಂದು ವಾರವಷ್ಟೇ ಬಾಕಿ ಉಳಿದಿದೆ. ಈ ಹೊತ್ತಿನಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ಬಹುದೊಡ್ಡ ಆಘಾತವಾಗಿದೆ.
ಬಲಿಷ್ಠ ತಂಡದಲ್ಲಿ ಸ್ಟಾರ್‌ಗಳ ಕೊರತೆ:
2025ರ ಚಾಂಪಿಯನ್ಸ್ ಟ್ರೋಫಿಟೂರ್ನಿಗೆ 7 ದಿನಗಳು ಬಾಕಿಯಿದೆ. ಈಗಾಗಲೇ ನಾಯಕ ಪ್ಯಾಟ್ ಕಮ್ಮಿನ್ಸ್ (Pat Cummins), ವೇಗಿ ಜೋಶ್ ಹ್ಯಾಜಲ್‌ವುಡ್, ಮಿಚೆಲ್ ಮಾರ್ಷ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಅಲ್ಲದೇ ಏಕದಿನ ಕ್ರಿಕೆಟ್‌ಗೆ ಮಾರ್ಕಸ್ ಸ್ಟೋಯ್ನಿಸ್ ಏಕದಿನ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದಾರೆ. ಈ ಬೆನ್ನಲ್ಲೇ ಮಿಚೆಲ್ ಸ್ಟಾರ್ಕ್ ವೈಯಕ್ತಿಕ ಕಾರಣಗಳಿಂದ ಹೊರಗುಳಿದಿದ್ದಾರೆ. ಇದು ಅಸ್ಟ್ರೇಲಿಯಾ ತಂಡಕ್ಕೆ ನುಂಗಲಾರದ ತುತ್ತಾಗಿದೆ. ಪ್ಯಾಟ್ ಕಮ್ಮಿನ್ಸ್ ಹೊರಬಿದ್ದ ಬೆನ್ನಲ್ಲೇ ಸ್ಟೀವ್ ಸ್ಮಿತ್‌ಗೆ ಚಾಂಪಿಯನ್ಸ್ ಟ್ರೋಫಿ ನಾಯಕತ್ವ ನೀಡಲಾಗಿದೆ. ಆದ್ರೆ ಮೂವರು ಸ್ಟಾರ್ ಬೌಲರ್ (ಸ್ಟಾರ್ಕ್, ಕಮ್ಮಿನ್ಸ್, ಹ್ಯಾಜಲ್‌ವುಡ್), ಆಲ್‌ರೌಂಡರ್ ಸ್ಟೋಯ್ನಿಸ್ ಹೊರಗುಳಿದಿರುವುದು ಆಸೀಸ್‌ಗೆ ಆಘಾತವಾಗಿದೆ. ಈ ಐವರಿ ಬದಲೀ ಆಟಗಾರರಾಗಿ ಯಾರನ್ನ ಆಯ್ಕೆ ಮಾಡಬೇಕೆಂಬುದು ಚಿಂತೆಯಾಗಿದೆ.
ಏಕದಿನ ಕ್ರಿಕೆಟ್‌ನಲ್ಲಿ ಸ್ಟೋಯ್ನಿಸ್ ಸಾಧನೆ:
2015ರಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಸ್ಟೋಯ್ನಿಸ್, ಈವರೆಗೂ 74 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ಅವಧಿಯಲ್ಲಿ 93.96 ಸ್ಟ್ರೈಕ್ ರೇಟ್‌ನಲ್ಲಿ 1,495 ರನ್ ಗಳಿಸಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ನಡೆದಿದ್ದ ಪಂದ್ಯದಲ್ಲಿ ಅಜೇಯ 146 ರನ್ ಗಳಿಸಿದ್ದು ಏಕದಿನ ಸ್ವರೂಪದಲ್ಲಿ ಅತ್ಯಧಿಕ ಸ್ಕೋರ್ ಆಗಿತ್ತು.
ಜೊತೆಗೆ 74 ಪಂದ್ಯಗಳಲ್ಲಿ 43.12 ಸರಾಸರಿಯಲ್ಲಿ 48 ವಿಕೆಟ್‌ಗಳನ್ನು ಪಡೆದಿದ್ದಾರೆ. 2024ರ ನವೆಂಬರ್ 10ರಂದು ಪರ್ತ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ಕೊನೆಯ ಏಕದಿನ ಪಂದ್ಯವನ್ನಾಡಿದ್ದರು. 2019ರಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ನೀಡುವ ವರ್ಷದ ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.
ಅಡಿಲೇಡ್: ಇಲ್ಲಿ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಮೊದಲ ದಿನ ಪರ್ತ್ ಪಂದ್ಯದ ಫಲಿತಾಂಶವೇ ಮರುಕಳಿಸಿದಂತೆ ಕಂಡುಬಂದಿದೆ. ಮೊದಲ ದಿನದಾಟದಲ್ಲಿ ಭಾರತ 180 ರನ್‌ಗಳಿಗೆ ಆಲೌಟ್ ಆಗಿದೆ. ಬಳಿಕ ತನ್ನ ಸರದಿಯ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ (Australia) ತಂಡ 33 ಓವರ್‌ಗಳಲ್ಲಿ 86 ರನ್‌ಗಳಿಗೆ ಒಂದು ವಿಕೆಟ್ ಕಳೆದುಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ಆರಂಭದಲ್ಲೇ ಆಗ್ರ ಕ್ರಮಾಂಕದ ಬ್ಯಾಟರ್‌ಗಳನ್ನ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಆಸೀಸ್ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ (Mitchell Starc) ಭಾರತ ತಂಡಕ್ಕೆ ಮೊದಲ ಎಸೆತದಲ್ಲಿ ಆಘಾತ ನೀಡಿದರು. ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ 161 ರನ್ ಸಿಡಿಸಿ ಅಬ್ಬರಿಸಿದ್ದ ಯಶಸ್ವಿ ಜೈಸ್ವಾಲ್ (Yashasvi Jaiswal) ಅವರನ್ನು ಪಂದ್ಯದ ಮೊದಲನೇ ಎಸೆತದಲ್ಲೇ ಎಲ್‌ಬಿಡಬ್ಲ್ಯೂ ಬಲೆಗೆ ಕೆಡವಿದರು. ಜೈಸ್ವಾಲ್ ಅವರು ಸತತವಾಗಿ 2ನೇ ಪಂದ್ಯದಲ್ಲೂ ಪ್ರಥಮ ಇನ್ನಿಂಗ್ಸ್ ನಲ್ಲೇ ಶೂನ್ಯ ಸುತ್ತಿದ ಕುಖ್ಯಾತಿಗೆ ಒಳಗಾದರು. ಎರಡೂ ಪಂದ್ಯಗಳಲ್ಲೂ ಅವರನ್ನು ಶೂನ್ಯಕ್ಕೆ ಸ್ಟಾರ್ಕ್ ಅವರೇ ಔಟ್ ಮಾಡಿದ್ದು ಎಂಬುದು ಗಮನಾರ್ಹ.
ಅಲ್ಲಿಂದ ಬಳಿಕ ಶುಭಮನ್ ಗಿಲ್ ಮತ್ತು ಕೆಎಲ್ ರಾಹುಲ್ ಅವರು ಭಾರತ ಇನ್ನಿಂಗ್ಸ್‌ಗೆ ಜೀವಕಳೆ ತಂದರು. 2ನೇ ವಿಕೆಟ್‌ಗೆ ಅವರಿಂದ 69 ರನ್ ಗಳ ಜೊತೆಯಾಟ ಬಂದಾಗ ಭಾರತ ಮತ್ತೆ ದೊಡ್ಡ ಮೊತ್ತ ಪೇರಿಸುವ ಸೂಚನೆ ನೀಡಿತ್ತು. ಆದ್ರೆ ಕೆ.ಎಲ್ ರಾಹುಲ್ 37 ರನ್‌ಗಳಿಗೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಈ ಬೆನ್ನಲ್ಲೇ ಬೋಲೆಂಡ್ ವೇಗದ ದಾಳಿಗೆ ಶುಭಮನ್ ಗಿಲ್ (31 ರನ್) ಸಹ ಔಟಾದರು.
ಈ ನಡುವೆ ನಿತೀಶ್ ಕುಮಾರ್ ರೆಡ್ಡಿ (Nitish Kumar Reddy) ಅವರ ದಿಟ್ಟ ಬ್ಯಾಟಿಂಗ್ ಪ್ರದರ್ಶನ ಭಾರತ ತಂಡವನ್ನು 180ರ ಗಡಿ ವರೆಗೆ ಕೊಂಡೊಯ್ದಿತು. ಒಂದೆಡೆ ವಿಕೆಟ್‌ಗಳು ಉರುಳುತ್ತಿದ್ದರೆ ಮತ್ತೊಂದೆಡೆ ನಿತೀಶ್ ಆಸೀಸ್ ವೇಗಿಗಳ ಬೌಲಿಂಗ್ ಲೆಕ್ಕಕ್ಕಿಲ್ಲದಂತೆ ಸಿಕ್ಸರ್, ಬೌಂಡರಿ ಚಚ್ಚುತ್ತಿದ್ದರು. ಈ ನಡುವೆ 54 ಎಸೆತಗಳಲ್ಲಿ 3 ಬೌಂಡರಿ, 3 ಸಿಕ್ಸರ್ ನೊಂದಿಗೆ 42 ರನ್ ಬಾರಿಸಿ, ಉತ್ತಮ ಪ್ರದರ್ಶನ ನೀಡುತ್ತಿದ್ದ ನಿತೀಶ್ ರೆಡ್ಡಿ ಮತ್ತೆ ಸಿಕ್ಸರ್ ಸಿಡಿಸುವ ಬರದಲ್ಲಿ ಕ್ಯಾಚ್ ನೀಡಿ ಔಟಾದರು.
ಕೈಕೊಟ್ಟ ಕೊಹ್ಲಿ, ರೋಹಿತ್:
ಭಾರಿ ನೀರಿಕ್ಷೆ ಹುಟ್ಟಿಸಿದ್ದ ವಿರಾಟ್ ಕೊಹ್ಲಿ (Virat Kohli) 7 ರನ್‌ಗಳಿಗೆ ಔಟಾಗಿ ನಿರಾಸೆ ಮೂಡಿಸಿದರು. ಅಲ್ಲದೇ ಕೆ.ಎಲ್ ರಾಹುಲ್ ಅವರಿಗೆ ಒಮ್ಮೆ ಜೀವದಾನ ಸಿಕ್ಕರೂ ಅದನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ವಿಫಲರಾದರು. ಇನ್ನೂ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ರೋಹಿತ್ ಶರ್ಮಾ 23 ಎಸೆತಗಳಲ್ಲಿ 3 ರನ್ ಗಳಿಸಿ ಔಟಾದರು. ಇದರೊಂದಿಗೆ ರಿಷಬ್ ಪಂತ್ 21 ರನ್, ರವಿಚಂದ್ರನ್ ಅಶ್ವಿನ್ 22 ರನ್‌ಗಳ ಕೊಡುಗೆ ನೀಡಿದರು.
ಮಿಂಚಿದ ಮಿಚೆಲ್ ಸ್ಟಾರ್ಕ್:
ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಭಾರತೀಯ ಬ್ಯಾಟರ್‌ಗಳ ಎದುರು ಬಿಗಿ ಹಿಡಿತ ಸಾಧಿಸಿದ ಮಿಚೆಲ್ ಸ್ಟಾರ್ಕ್ 14.1 ಓವರ್‌ಗಳಲ್ಲಿ 6 ವಿಕೆಟ್ ಕಿತ್ತರೆ, ಸ್ಕಾಟ್ ಬೋಲೆಂಡ್ ಹಾಗೂ ಪ್ಯಾಟ್ ಕಮ್ಮಿನ್ಸ್ ತಲಾ 2 ವಿಕೆಟ್ ಕಿತ್ತರು.
ಬಳಿಕ ತನ್ನ ಸರದಿಯ 2ನೇ ಇನ್ನಿಂಗ್ಸ್ ಆರಂಭಿಸಿದ ಆಸೀಸ್ 33 ಓವರ್‌ಗಳಲ್ಲಿ 86 ರನ್‌ಗಳಿಗೆ ಒಂದು ವಿಕೆಟ್ ಕಳೆದುಕೊಂಡಿತು. ಆರಂಭಿಕ ಆಟಗಾರ ಉಸ್ಮಾನ್ ಖವಾಜ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಜೊತೆಗೂಡಿದ ನಾಥನ್ ಮೆಕ್‌ಸ್ವೀನಿ 97 ಎಸೆತಗಳಲ್ಲಿ 38 ರನ್, ಮಾರ್ನಸ್ ಲಾಬುಶೇನ್ 20 ರನ್ ಗಳಿಸಿ ಕ್ರೀಸ್‌ನಲ್ಲಿ ಉಳಿದರು.
ಮುಂಬೈ: 2025ರ ಮೆಗಾ ಹರಾಜಿಗೂ ಮುನ್ನವೇ ಹಾಲಿ ಚಾಂಪಿಯನ್ಸ್ ಕೆಕೆಆರ್ (KKR) ಸ್ಟಾರ್ ಆಟಗಾರರನ್ನ ಹೊರದಬ್ಬಿದೆ. ಐಪಿಎಲ್ ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಬಿಕರಿಯಾಗಿದ್ದ ಮಿಚೆಲ್ ಸ್ಟಾರ್ಕ್ (Mitchell starc), ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಅವರನ್ನು ತಂಡದಿಂದ ಬಿಡುಗಡೆ ಮಾಡಿದೆ.
ರಿಂಕು, ರಸ್ಸೆಲ್, ರಾಣಾ ಸೇರಿಂದಂತೆ ಆಲ್‌ರೌಂಡರ್, ಬೌಲರ್‌ಗಳಿಗೆ ಮಣೆಹಾಕಿರುವ ಕೋಲ್ಕತ್ತಾ ನೈಟ್‌ರೈಡರ್ಸ್ ಇಬ್ಬರು ವಿದೇಶಿ ಆಟಗಾರರು ಸೇರಿದಂತೆ 6 ಆಟಗಾರರನ್ನು ಉಳಿಸಿಕೊಂಡಿದೆ. ಈ ಪೈಕಿ ಕಳೆದ ಆವೃತ್ತಿಯಲ್ಲಿ 55 ಲಕ್ಷ ರೂ. ಸಂಭಾವನೆ ಪಡೆದಿದ್ದ ರಿಂಕು ಸಿಂಗ್‌ಗೆ 13 ಕೋಟಿ ರೂ. ಕೊಟ್ಟು ಖರೀದಿ ಮಾಡಿರುವುದು ವಿಶೇಷ. ಇದನ್ನೂ ಓದಿ: IPL Retention | ರಿಷಬ್ ಪಂತ್ ಸೇರಿ ಸ್ಟಾರ್ ಆಟಗಾರರೇ ಔಟ್ – ಆಲ್‌ರೌಂಡರ್‌ಗೆ ಮಣೆ ಹಾಕಿದ ಡೆಲ್ಲಿ
ಕೆಕೆಆರ್‌ನಲ್ಲಿ ಯಾರಿಗೆ ಎಷ ಉಳಿಕೆ?
* ರಿಂಕು ಸಿಂಗ್ – 13 ಕೋಟಿ ರೂ.
* ವರುಣ್ ಚಕ್ರವರ್ತಿ – 12 ಕೋಟಿ ರೂ.
* ಸುನೀಲ್ ನರೇನ್ – 12 ಕೋಟಿ ರೂ.
* ಆಂಡ್ರೆ ರಸ್ಸೆಲ್ – 12 ಕೋಟಿ ರೂ.
* ಹರ್ಷಿತ್ ರಾಣಾ – 4 ಕೋಟಿ ರೂ.
* ರಮಣದೀಪ್ ಸಿಂಗ್ – 4 ಕೋಟಿ ರೂ.
2025 ರಿಂದ 2027ರ ಐಪಿಎಲ್ ಆವೃತ್ತಿಗಳಿಗೆ ಹೊಸ ನಿಯಮ ಘೋಷಣೆ ಮಾಡಿರುವ ಬಿಸಿಸಿಐ, ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮೆಗಾ ಹರಾಜು ನಡೆಸಲು ತೀರ್ಮಾನಿಸಿದೆ.
ಚೆನ್ನೈ: 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಚಾಂಪಿಯನ್ (IPL 2024 Champions) ಪಟ್ಟ ಮುಡಿಗೇರಿಸಿಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee )ಅಭಿನಂದನೆ ಸಲ್ಲಿಸಿದ್ದಾರೆ.
Kolkata Knight Riders’ win has brought about an air of celebration all across Bengal.
I would like to personally congratulate the players, the support staff and the franchise for their record breaking performance in this season of the IPL.
ಕೆಕೆಆರ್ ತಂಡ ಗೆಲುವು ಸಾಧಿಸುತ್ತಿದ್ದಂತೆ ಮಮತಾ ಬ್ಯಾನರ್ಜಿ ತಮ್ಮ ಎಕ್ಸ್ ಖಾತೆ ಮೂಲಕ ವಿಜೇತ ತಂಡಕ್ಕೆ ತುಂಬು ಹೃದಯದ ಅಭಿನಂದನೆ ಸಲ್ಲಿಸಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ. ಐಪಿಎಲ್‌ನ ಈ ಋತುವಿನಲ್ಲಿ ದಾಖಲೆಯ ಪ್ರದರ್ಶನ ನೀಡಿದ್ದಕ್ಕಾಗಿ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಫ್ರಾಂಚೈಸಿಗೆ ನಾನು ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಮುಂಬರುವ ವರ್ಷಗಳಲ್ಲಿ ಇನ್ನಷ್ಟು ಇಂತಹ ಮೋಡಿಮಾಡುವ ಗೆಲುವು ಸಿಗಲೆಂದು ಹಾರೈಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಶುಭ ಹಾರೈಸಿದ್ದಾರೆ.
10 ವರ್ಷಗಳ ಬಳಿಕ ಐಪಿಎಲ್ ಕಿರೀಟ:
17ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. 2012 ಮತ್ತು 2014ರಲ್ಲಿ ಗೌತಮ್ ಗಂಭೀರ್ (Gautam Gambhir) ನಾಯಕತ್ವದಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡ 10 ವರ್ಷಗಳ ಬಳಿಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅಲ್ಲದೇ ಹಿಂದೆ ತಂಡದ ನಾಯಕನಾಗಿ ಟ್ರೋಫಿ ಗೆದ್ದುಕೊಟ್ಟಿದ್ದ ಗೌತಮ್ ಗಂಭೀರ್ ಈ ಬಾರಿ ತಂಡದ ಕೋಚ್ ಆಗಿ ಟ್ರೋಫಿ ತಂದುಕೊಟ್ಟಿರುವುದು ವಿಶೇಷ.
ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ 18.3 ಓವರ್‌ಗಳಲ್ಲಿ 113 ರನ್‌ಗಳಿಗೆ ಸರ್ವಪತನ ಕಂಡಿತ್ತು. ಅಲ್ಪ ಮೊತ್ತ ಗುರಿ ಪಡೆದ ಕೆಕೆಆರ್ ಕೇವಲ 10.3 ಓವರ್‌ಗಳಲ್ಲೇ 114 ರನ್ ಗಳಿಸಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲೇ ದಾಖಲೆ ಬರೆದ ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ (Mitchell Starc) 2024ರ ಐಪಿಎಲ್ ಟೂರ್ನಿಯನ್ನೇ ಎದುರು ನೋಡುತ್ತಿದ್ದಾರಂತೆ. ಈ ವಿಷಯವನ್ನು ಸಂದರ್ಶನವೊಂದರಲ್ಲಿ ತಾವೇ ಖುದ್ದಾಗಿ ಹೇಳಿಕೊಂಡಿದ್ದಾರೆ. ಈ ವೇಳೆ ಆರ್‌ಸಿಬಿ ತಂಡದಲ್ಲಿದ್ದಾಗ ವಿರಾಟ್ ಕೊಹ್ಲಿ ಜೊತೆಗಿನ ನೆನಪುಗಳನ್ನ ಹಂಚಿಕೊಂಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಸ್ಟಾರ್ಕ್, ನಾನು RCB ಪ್ರವೇಶಿಸಿದಾಗ ಕೊಹ್ಲಿ (Virat Kohli) ಟೀಂ ಕ್ಯಾಪ್ಟನ್ ಆಗಿದ್ದರು. ಆಗಲೇ ನಾನು ಅವರನ್ನು ಸರಿಯಾಗಿ ತಿಳಿದುಕೊಂಡೆ. ಮೈದಾನದ ಹೊರಗೆ ಮತ್ತು ಮೈದಾನದ ಆಚೆ ವಿಭಿನ್ನ ವ್ಯಕ್ತಿತ್ವ ಅವರದ್ದು. ಈಗಲೂ ಅವರನ್ನು ಹೆಚ್ಚು ನೆನಪಿಸಿಕೊಳ್ತೇನೆ ಎಂದಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿ ನೀರು ಕುಡಿದು ಅಸ್ವಸ್ಥ; ಮಯಾಂಕ್ ಅಗರ್ವಾಲ್ ಆಸ್ಪತ್ರೆಗೆ ದಾಖಲು
2022ರ ಐಪಿಎಲ್ ಟೂರ್ನಿಗೆ ದುಬಾರಿ ಬೆಲೆಗೆ ಬಿಕರಿಯಾಗಿದ್ದ ಕ್ರಿಸ್‌ಮೋರಿಸ್ ತನಗಿಂತಲೂ ಹೆಚ್ಚು ಬೆಲೆಗೆ ಖರೀದಿಯಾಗಿರುವ ಬಗ್ಗೆ ಮಾತನಾಡಿದ್ದಾರೆ. ಸ್ಟಾರ್ಕ್, ತನ್ನ ಸಾಮರ್ಥ್ಯದಿಂದ ಇದನ್ನ ಸಾಧ್ಯವಾಗಿಸಿಕೊಂಡಿದ್ದಾರೆ. ಇತರ ಕ್ರೀಡೆಗಳೊಂದಿಗೆ ಕ್ರಿಕೆಟ್‌ನಲ್ಲೂ ವಿಶ್ವದ ಅತ್ಯುತ್ತಮ ಆಟಗಾರರಿಗೆ ಹೆಚ್ಚಿನ ಸಂಭಾವನೆ ನೀಡುತ್ತಿರುವುದು ಅದ್ಭುತವಾಗಿದೆ. ಇದು ಸಾಧನೆಯಾದರೂ ಹೆಚ್ಚುವರಿ ಒತ್ತಡ ತರುತ್ತದೆ. ಆದ್ರೆ ಮಿಚೆಲ್ ಸ್ಟಾರ್ಕ್ ಮತ್ತು ಕಮ್ಮಿನ್ಸ್ ಆ ಒತ್ತಡ ನಿಭಾಯಿಸಬಲ್ಲರು. ಅದಕ್ಕಾಗಿಯೇ ಅವರನ್ನು ಹೆಚ್ಚಿನ ಹಣ ನೀಡಿ ಖರೀದಿಸಲಾಗಿದೆ ಎಂದು ಮೋರಿಸ್ ತಿಳಿಸಿದ್ದಾರೆ.
2024ರ ಐಪಿಎಲ್ ಟೂರ್ನಿಗೆ ಕಳೆದ ಡಿಸೆಂಬರ್ 19ರಂದು ದುಬೈನಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಮಿಚೆಲ್ ಸ್ಟಾರ್ಕ್ ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
2023ರ ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರ್ರನ್ 18.50 ಕೋಟಿ ರೂ.ಗೆ ಮಾರಾಟವಾಗಿದ್ದು ಇತಿಹಾಸವಾಗಿತ್ತು. ಆಸೀಸ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ 20.50 ಕೋಟಿ ರೂ.ಗೆ ಮಾರಾಟವಾಗಿ ಇತಿಹಾಸ ನಿರ್ಮಿಸಲು ಸಜ್ಜಾಗಿದ್ದರು. ಆದ್ರೆ 2023ರ ಏಕದಿನ ವಿಶ್ವಕಪ್ ವಿಜೇತ ತಂಡದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಿಚೆಲ್ ಸ್ಟಾರ್ಕ್ 24.75 ಕೋಟಿ ರೂ.ಗೆ ಕೋಲ್ಕತ್ತಾ ನೈಟ್‌ರೈಡರ್ಸ್ (ಕೆಕೆಆರ್) ತಂಡದ ಪಾಲಾಗಿ ದಾಖಲೆ ಬರೆದರು. ಇದನ್ನೂ ಓದಿ: Australian Open: 43ನೇ ವಯಸ್ಸಿನಲ್ಲಿ ಆಸ್ಟ್ರೇಲಿಯಾ ಓಪನ್ ಗೆದ್ದ ಕನ್ನಡಿಗ ರೋಹನ್ ಬೋಪಣ್ಣ
ದುಬೈ: ಐಪಿಎಲ್ ಮಿನಿ ಹರಾಜಿನಲ್ಲಿ (IPL 2024 Auctio) ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಮಿಚೆಲ್ ಸ್ಟಾರ್ಕ್ (Mitchell Starc) ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
2023ರ ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರ್ರನ್ 18.50 ಕೋಟಿ ರೂ.ಗೆ ಮಾರಾಟವಾಗಿದ್ದು ಇತಿಹಾಸವಾಗಿತ್ತು. ಆಸೀಸ್ ತಂಡದ ನಾಯಕ 20.50 ಕೋಟಿ ರೂ.ಗೆ ಮಾರಾಟವಾಗಿ ಇತಿಹಾಸ ನಿರ್ಮಿಸಲು ಸಜ್ಜಾಗಿದ್ದರು. ಆದ್ರೆ 2023ರ ಏಕದಿನ ವಿಶ್ವಕಪ್ ವಿಜೇತ ತಂಡದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಿಚೆಲ್ ಸ್ಟಾರ್ಕ್ 24.75 ಕೋಟಿ ರೂ.ಗೆ ಕೋಲ್ಕತ್ತಾ ನೈಟ್‌ರೈಡರ್ಸ್ (KKR) ತಂಡದ ಪಾಲಾಗಿ ದಾಖಲೆ ಬರೆದರು. ಇದನ್ನೂ ಓದಿ: IPL 2024 Auction: ದುಬಾರಿ ಆಟಗಾರ – 20.50 ಕೋಟಿ ರೂ.ಗೆ ಬಿಕರಿಯಾದ ಪ್ಯಾಟ್ ಕಮ್ಮಿನ್ಸ್
ತೀವ್ರ ಪೈಪೋಟಿಯಿಂದ ಕೂಡಿದ್ದ ಬಿಡ್‌ನಲ್ಲಿ ಸ್ಟಾರ್ಕ್ ಅವರನ್ನ ಖರೀದಿಸಲು ಗುಜರಾತ್ ಟೈಟಾನ್ಸ್ (Gujarat Taitans) ಹಾಗೂ ಕೋಲ್ಕತ್ತಾ ನೈಟ್‌ರೈಡರ್ಸ್ (KKR) ನಡುವೆ ಹಣಾಹಣಿ ನಡೆದಿತ್ತು. ಅಲ್ಲದೇ ಪ್ರೇಕ್ಷರಕ ಎದೆ ಬಡಿತವೂ ಹೆಚ್ಚಾಗಿತ್ತು, ಹರಾಜು ನಡೆಸಿಕೊಡುತ್ತಿದ್ದ ಮಹಿಳೆ ಮಲ್ಲಿಕಾ ಸಾಗರ್ ಬಿಡ್ ಕೂಗಿ ಕೂಗಿ ಸುಸ್ತಾಗಿದ್ದರು. ತನ್ನ ಪರ್ಸ್‌ನಲ್ಲಿ 38.15 ಕೋಟಿ ರೂ. ಉಳಿಸಿಕೊಂಡಿದ್ದ ಗುಜರಾತ್ ಟೈಟಾನ್ಸ್ 24.50 ಕೋಟಿ ರೂ.ವರೆಗೂ ಬಿಡ್ ಮಾಡಿತ್ತು. ಆದ್ರೆ ಪಟ್ಟು ಬಿಡದ ಕೆಕೆಆರ್ ಜೋಳಿಗೆಯಲ್ಲಿ 32.70 ಕೋಟಿ ರೂ. ಇದ್ದರೂ 24.75 ಕೋಟಿ ರೂ.ಗೆ ಸ್ಟಾರ್ಕ್ ಅವರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಯಿತು.
ದುಬೈ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಮಿನಿ ಹರಾಜು (IPL 2024 Auction) ಪ್ರಕ್ರಿಯೆ ಮಂಗಳವಾರ (ಇಂದು) ದುಬೈನಲ್ಲಿ ನಡೆಯಲಿದೆ.
ದುಬೈನ ಕೋಕಾ ಕೋಲಾ ಅರೆನಾದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 1:00 ಗಂಟೆಗೆ ಹರಾಜು ಪ್ರಕ್ರಿಯೆ ಆರಂಭವಾಗಲಿದೆ. ಮಿನಿ ಹರಾಜಿಗೆ ಒಟ್ಟು 333 ಆಟಗಾರರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಈ ಪೈಕಿ 214 ಭಾರತೀಯ ಆಟಗಾರರು ಹಾಗೂ 119 ವಿದೇಶಿ ಆಟಗಾರರು ಇದ್ದಾರೆ. ಎಲ್ಲಾ 10 ಫ್ರಾಂಚೈಸಿಗಳು ತಮ್ಮ ತಂಡವನ್ನು ಮತ್ತಷ್ಟು ಬಲಪಡಿಸಲು ಎದುರುನೋಡುತ್ತಿದ್ದು, ಪ್ರಮುಖ ಆಟಗಾರರ ಮೇಲೆ ಕಣ್ಣಿಟ್ಟಿವೆ. ಅದರಲ್ಲೂ ಆಸೀಸ್ ಆಟಗಾರರಾದ ಮಿಚೆಲ್ ಸ್ಟಾರ್ಕ್ (Mitchell Starc), ಪ್ಯಾಟ್ ಕಮ್ಮಿನ್ಸ್, ಟ್ರಾವಿಸ್ ಹೆಡ್, ಕಿವೀಸ್‌ನ ರಚಿನ್ ರವೀಂದ್ರ (Rachin Ravindra), ಡೇರಿಲ್ ಮಿಚೆಲ್ ಹಾಗೂ ದಕ್ಷಿಣ ಆಫ್ರಿಕಾದ ವೇಗಿ ಜೆರಾಲ್ಡ್ ಕೋಟ್ಜಿ ಮೇಲೆ ಫ್ರಾಂಚೈಸಿಗಳು ಕಣ್ಣಿಟ್ಟಿವೆ.
2023ರ ಐಪಿಎಲ್ ಟೂರ್ನಿಗೆ ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರ್ರನ್ 18.50 ಕೋಟಿ ರೂ.ಗೆ ಬಿಕರಿಯಾಗಿ ಇತಿಹಾಸ ನಿರ್ಮಿಸಿದ್ದರು. ಈ ಬಾರಿ ಮಿನಿ ಹರಾಜಿನಲ್ಲಿ ಯಾರು ಹೆಚ್ಚಿನ ಬೆಲೆಗೆ ಹರಾಜಾಗುತ್ತಾರೆ ಅನ್ನೂದು ಕುತೂಹಲ ಮೂಡಿಸಿದೆ.
ಯಾವ ಫ್ರಾಂಚೈಸಿಯಲ್ಲಿ ಎಷ್ಟು ಹಣ ಬಾಕಿಯಿದೆ? – ರೂ.ಗಳಲ್ಲಿ ನೀಡಲಾಗಿದೆ:
ಚೆನ್ನೈ ಸೂಪರ್ ಕಿಂಗ್ಸ್
ಖರ್ಚು ಮಾಡಿದ ಒಟ್ಟು ಹಣ – 68.60 ಕೋಟಿ
ಬಾಕಿ ಉಳಿದಿರುವ ಹಣ – 31.40 ಕೋಟಿ
ಲಭ್ಯವಿರುವ ಸ್ಲಾಟ್‌ಗಳು – 6
ಡೆಲ್ಲಿ ಕ್ಯಾಪಿಟಲ್ಸ್
ಖರ್ಚು ಮಾಡಿದ ಒಟ್ಟು ಹಣ – 71.05 ಕೋಟಿ
ಬಾಕಿ ಉಳಿದಿರುವ ಹಣ – 28.95 ಕೋಟಿ
ಲಭ್ಯವಿರುವ ಸ್ಲಾಟ್‌ಗಳು – 9
ಗುಜರಾತ್ ಟೈಟಾನ್ಸ್
ಖರ್ಚು ಮಾಡಿದ ಒಟ್ಟು ಹಣ – 61.85 ಕೋಟಿ
ಬಾಕಿ ಉಳಿದಿರುವ ಹಣ – 38.15 ಕೋಟಿ
ಲಭ್ಯವಿರುವ ಸ್ಲಾಟ್‌ಗಳು – 8
ಕೋಲ್ಕತ್ತಾ ನೈಟ್‌ರೈಡರ್ಸ್
ಖರ್ಚು ಮಾಡಿದ ಒಟ್ಟು ಹಣ – 67.3 ಕೋಟಿ
ಬಾಕಿ ಉಳಿದಿರುವ ಹಣ – 32.70 ಕೋಟಿ
ಲಭ್ಯವಿರುವ ಸ್ಲಾಟ್‌ಗಳು – 12
ಲಕ್ನೋ ಸೂಪರ್ ಜೈಂಟ್ಸ್
ಖರ್ಚು ಮಾಡಿದ ಒಟ್ಟು ಹಣ – 86.85 ಕೋಟಿ
ಬಾಕಿ ಉಳಿದಿರುವ ಹಣ – 13.15 ಕೋಟಿ
ಲಭ್ಯವಿರುವ ಸ್ಲಾಟ್‌ಗಳು – 6
ಮುಂಬೈ ಇಂಡಿಯನ್ಸ್
ಖರ್ಚು ಮಾಡಿದ ಒಟ್ಟು ಹಣ - 82.25 ಕೋಟಿ
ಬಾಕಿ ಉಳಿದಿರುವ ಹಣ – 17.75 ಕೋಟಿ
ಲಭ್ಯವಿರುವ ಸ್ಲಾಟ್‌ಗಳು – 8
ಪಂಜಾಬ್ ಕಿಂಗ್ಸ್
ಖರ್ಚು ಮಾಡಿದ ಒಟ್ಟು ಹಣ – 70.90 ಕೋಟಿ
ಬಾಕಿ ಉಳಿದಿರುವ ಹಣ – 29.10 ಕೋಟಿ
ಲಭ್ಯವಿರುವ ಸ್ಲಾಟ್‌ಗಳು – 8
ರಾಯಲ್ ಚಾಲೆಂಜರ್ಸ್ ಬೆಂಗಳೂರು
ಖರ್ಚು ಮಾಡಿದ ಒಟ್ಟು ಹಣ – 76.75
ಬಾಕಿ ಉಳಿದಿರುವ ಹಣ – 23.25
ಲಭ್ಯವಿರುವ ಸ್ಲಾಟ್‌ಗಳು – 6
ರಾಜಸ್ಥಾನ್ ರಾಯಲ್ಸ್
ಖರ್ಚು ಮಾಡಿದ ಒಟ್ಟು ಹಣ – 85.50 ಕೋಟಿ
ಬಾಕಿ ಉಳಿದಿರುವ ಹಣ – 14.50 ಕೋಟಿ
ಲಭ್ಯವಿರುವ ಸ್ಲಾಟ್‌ಗಳು – 8
ಸನ್ ರೈಸರ್ಸ್ ಹೈದರಾಬಾದ್
ಖರ್ಚು ಮಾಡಿದ ಒಟ್ಟು ಹಣ – 66 ಕೋಟಿ
ಬಾಕಿ ಉಳಿದಿರುವ ಹಣ – 34 ಕೋಟಿ
ಲಭ್ಯವಿರುವ ಸ್ಲಾಟ್‌ಗಳು – 6
10 ತಂಡಗಳ ಲೆಕ್ಕಾಚಾರ
ತಂಡಗಳಿಗೆ ನಿಗದಿ ಮಾಡಿದ ಹಣ – 100 ಕೋಟಿ (ತಲಾ)
ಒಟ್ಟು ಖರ್ಚು ಮಾಡಿರುವ ಹಣ – 737.05 ಕೋಟಿ
ಬಾಕಿ ಉಳಿಸಿಕೊಂಡಿರುವ ಹಣ – 262.95 ಕೋಟಿ
ಬಾಕಿ ಉಳಿದಿರುವ ಸ್ಲಾಟ್‌ಗಳು – 77
ಮುಂಬೈ: ಬಹುನಿರೀಕ್ಷಿತ 2024ರ ಐಪಿಎಲ್ ಹರಾಜು (IPL 2024 Auction) ಪ್ರಕ್ರಿಯೆ ಮಂಗಳವಾರ (ಡಿ.19) ದುಬೈನಲ್ಲಿ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಹರಾಜು ಪ್ರಕ್ರಿಯೆ ಪ್ರಾರಂಭವಾಗಲಿದೆ.
10 ಫ್ರಾಂಚೈಸಿಗಳು ತಂಡವನ್ನು ಇನ್ನಷ್ಟು ಬಲಪಡಿಸಲು ಪ್ರಮುಖ ಆಟಗಾರರ ಮೇಲೆ ಕಣ್ಣಿಟ್ಟಿವೆ. ಅದರಲ್ಲೂ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಆಸೀಸ್ ಆಟಗಾರರ ಮೇಲೆ ಕಣ್ಣು ನೆಟ್ಟಿದೆ. ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತದ ವಿರುದ್ಧ ಶತಕ ಸಿಡಿಸಿದ ಟ್ರಾವಿಸ್ ಹೆಡ್ (Travis Head), ಮಾರಕ ಬೌಲಿಂಗ್ ದಾಳಿ ನಡೆಸಿದ ಮಿಚೆಲ್ ಸ್ಟಾರ್ಕ್ (Mitchell Starc) ಹಾಗೂ ಪ್ಯಾಟ್ ಕಮ್ಮಿನ್ಸ್ ಅವರ ಮೇಲೆ ಫ್ರಾಂಚೈಸಿಗಳು ಗಮನಹರಿಸಿವೆ.