ಅಬುಧಾಬಿ: ಮುಂಬರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಆಟಗಾರರ ಮಿನಿ ಹರಾಜು ಡಿಸೆಂಬರ್ 19 ರಂದು ನಡೆಯಲಿದೆ. ನವೆಂಬರ್ 30ರ ವರೆಗೂ ಹರಾಜಿನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು (Auction Players Registration) ಆಟಗಾರರಿಗೆ ಅವಕಾಶವಿತ್ತು. ಶುಕ್ರವಾರ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಹಂಚಿಕೊಂಡ ಪಟ್ಟಿಯಲ್ಲಿ ಒಟ್ಟು 1,166 ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.
2023ರ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಅನೇಕ ಆಟಗಾರರು ಐಪಿಎಲ್ ಹರಾಜಿಗೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ಕಿವೀಸ್ ಆಟಗಾರ ರಚಿನ್ ರವೀಂದ್ರ (Rachin Ravindra), ಡೇರಿಲ್ ಮಿಚೆಲ್, ವಿಶ್ವಕಪ್ ವಿಜೇತ ಆಸೀಸ್ ತಂಡದಿಂದ ವೇಗಿ ಮಿಚೆಲ್ ಸ್ಟಾರ್ಕ್ (Mitchell Starc), ಪ್ಯಾಟ್ ಕಮ್ಮಿನ್ಸ್, ಟ್ರಾವಿಸ್ ಹೆಡ್ (Travis Head) ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ರಚಿನ್ ರವಿಂದ್ರ ಅವರ ಮೂಲ ಬೆಲೆ 50 ಲಕ್ಷ ರೂ.ಗೆ ನಿಗದಿಯಾಗಿದೆ. ಇದನ್ನೂ ಓದಿ: ಕ್ರಿಕೆಟ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ – ಭಾನುವಾರ ರಾತ್ರಿ 11:45ರ ವರೆಗೂ ಮೆಟ್ರೋ ವಿಸ್ತರಣೆ
ಆಸೀಸ್ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ 2015ರಲ್ಲಿ ಐಪಿಎಲ್‌ನಲ್ಲಿ ಆಡಿದ್ದರು. ಆರ್‌ಸಿಬಿ ತಂಡದಲ್ಲಿ ಮಿಂಚಿದ್ದರು. ಆ ನಂತರ ಐಪಿಎಲ್‌ನಿಂದ ದೂರ ಉಳಿದಿದ್ದರು. 2023ರಲ್ಲಿ ಆಶಸ್ ಟೂರ್ನಿಯಿಂದಾಗಿ ಐಪಿಎಲ್‌ನಿಂದ ಹೊರಗುಳಿದ್ದರು. ಇನ್ನೂ ಜೋಶ್ ಹೇಝಲ್ವುಡ್, ಲೀಗ್ ಸುತ್ತಿನ ಕೆಲ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದು ಅನುಮಾನವಿದೆ. ಹೀಗಿದ್ದೂ ಅವರು ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಇದನ್ನೂ ಓದಿ: 2009ರಿಂದ ಸ್ಟೇಡಿಯಂ ಕರೆಂಟ್ ಬಿಲ್ ಕಟ್ಟಿಲ್ಲ – ಭಾರತ-ಆಸೀಸ್ 4ನೇ T20 ಪಂದ್ಯಕ್ಕೆ ಹೊಸ ತಲೆನೋವು!
ಈ ಬಾರಿ ಐಪಿಎಲ್ ಮಿನಿ ಹರಾಜಿಗೆ ನೋಂದಣೆ ಮಾಡಿಕೊಂಡಿರುವ ಒಟ್ಟು 1,166 ಆಟಗಾರರ ಪೈಕಿ 830 ಭಾರತೀಯ ಆಟಗಾರರಿದ್ದರೆ, 336 ವಿದೇಶಿ ಆಟಗಾರರು ಇದ್ದಾರೆ. ಈ ಪಟ್ಟಿಯಲ್ಲಿ 212 ಕ್ಯಾಪ್ಡ್, 909 ಅನ್‌ಕ್ಯಾಪ್ಡ್ ಮತ್ತು 45 ಅಸೋಸಿಯೇಟ್ ದೇಶದ ಆಟಗಾರರು ಸೇರಿದ್ದಾರೆ. 830 ಭಾರತೀಯರ ಪೈಕಿ ವರುಣ್ ಆರೋನ್, ಕೆ.ಎಸ್ ಭರತ್, ಕೇದಾರ್ ಜಾಧವ್, ಸಿದ್ಧಾರ್ಥ್ ಕೌಲ್, ಧವಳ್ ಕುಲಕರ್ಣಿ, ಶಿವಂ ಮಾವಿ, ಶಹಬಾಜ್ ನದೀಮ್, ಕರುಣ್ ನಾಯರ್, ಮನೀಶ್ ಪಾಂಡೆ, ಚೇತನ್ ಸಕಾರಿಯ, ಮನ್‌ದೀಪ್ ಸಿಂಗ್, ಬರೀಂದರ್ ಸ್ರಾನ್ ಸೇರಿದಂತೆ 18 ಆಟಗಾರರಿದ್ದಾರೆ. ಇದನ್ನೂ ಓದಿ: ಮಗನ ಆಟ ಕಣ್ತುಂಬಿಕೊಳ್ಳಲು ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ ರಾಹುಲ್ ದ್ರಾವಿಡ್
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡದ ಟೀಂ ಇಂಡಿಯಾ ಎದುರಾಳಿ ಆಸ್ಟ್ರೇಲಿಯಾ ತಂಡಕ್ಕೆ 241 ರನ್‌ಗಳ ಗುರಿ ನೀಡಿದೆ.
ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾದ ಭಾರತ ತಂಡ, ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 50 ಓವರ್‌ಗಳಲ್ಲಿ 240 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಆರಂಭದಲ್ಲೇ ಅಸೀಸ್ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿದ ರೋಹಿತ್ ಶರ್ಮಾ 31 ಎಸೆತಗಳಲ್ಲೇ 47 ರನ್ (3 ಸಿಕ್ಸರ್, 4 ಬೌಂಡರಿ) ಬಾರಿಸಿ ಔಟಾದರು. ಆದ್ರೆ ಸೆಮಿಸ್‌ನಲ್ಲಿ ಕಿವೀಸ್ ವಿರುದ್ಧ ಅಬ್ಬರಿಸಿದ್ದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ 4 ರನ್‌ಗಳಿಗೆ ವಿಕೆಟ್ ಕೈಚೆಲ್ಲಿ ಕೈಕೊಟ್ಟರು. ಈ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಕೂಡ ಕೇವಲ ಒಂದೇ ಒಂದು ಬೌಂಡರಿ ಗಳಿಸಿ ಔಟಾದರು.
ಮೊದಲ 10.2 ಓವರ್‌ಗಳಲ್ಲೇ 81 ರನ್‌ಗಳಿಸಿದ್ದ ಭಾರತ ತಂಡ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು ತೀವ್ರ ಸಂಕಷ್ಟಕ್ಕೀಡಾಗಿತ್ತು. ಇದರಿಂದ 4ನೇ ವಿಕೆಟ್‌ಗೆ ಕೊಹ್ಲಿ ಮತ್ತು ಕೆ.ಎಲ್ ರಾಹುಲ್ ಜೋಡಿ ನಿಧಾನಗತಿಯ ಬ್ಯಾಟಿಂಗೆ ಮುಂದಾಯಿತು. ಈ ಜೋಡಿ 109 ಎಸೆತಗಳಲ್ಲಿ 67 ರನ್‌ಗಳ ಜವಾಬ್ದಾರಿಯುತ ಜೊತೆಯಾಟ ನೀಡಿದರೂ 97 ಎಸೆತಗಳಲ್ಲಿ ಕೇವಲ ಒಂದೇ ಒಂದು ಬೌಂಡರಿ ದಾಖಲಾಗಿತ್ತು.
ಉತ್ತಮ ರನ್ ಕಲೆಹಾಕುವ ಭರವಸೆ ಮೂಡಿಸಿದ್ದ ಈ ಜೋಡಿ ಆಟಕ್ಕೆ ಆಸ್ಟ್ರೇಲಿಯಾ ಕ್ಯಾಪ್ಟನ್ ಪ್ಯಾಟ್ ಕಮ್ಮಿನ್ಸ್ ಕೊಹ್ಲಿ ಆಟಕ್ಕೆ ಬ್ರೇಕ್ ಹಾಕಿದರು. 54 ರನ್ (63 ಎಸೆತ, 4 ಬೌಂಡರಿ) ಗಳಿಸಿ ಕೊಹ್ಲಿ ಔಟಾಗುತ್ತಿದ್ದಂತೆ, ಇಡೀ ಸ್ಟೇಡಿಯಂನಲ್ಲಿ ನೀರವ ಮೌನ ಆವರಿಸಿತ್ತು. ಲಕ್ಷಾಂತರ ಅಭಿಮಾನಿಗಳು ತಲೆಯ ಮೇಲೆ ಕೈಹೊತ್ತು ಕುಳಿತರು. ಆ ನಂತರ 107 ಎಸೆತಗಳನ್ನು ಎದುರಿಸಿದ ಕೆ.ಎಲ್ ರಾಹುಲ್ ಕೇವಲ ಒಂದೇ ಒಂದು ಬೌಂಡರಿ ಸಿಡಿಸಿ 66 ರನ್ ಗಳಿಸಿದರು.ನಂತರ ಕಣಕ್ಕಿಳಿದ ಯಾವೊಬ್ಬ ಆಟಗಾರರೂ ಹೆಚ್ಚು ಹೊತ್ತು ಕ್ರೀಸ್ ಉಳಿಯದ ಕಾರಣ ಟೀಂ ಇಂಡಿಯಾ ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಟೀಂ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ 15 ರನ್, ರವೀಂದ್ರ ಜಡೇಜಾ 9 ರನ್, ಮೊಹಮ್ಮದ್ ಶಮಿ 6 ರನ್, ಜಸ್ಪ್ರೀತ್ ಬುಮ್ರಾ 1 ರನ್, ಕುಲ್ದೀಪ್ ಯಾದವ್ 10 ರನ್ ಹಾಗೂ ಮೊಹಮ್ಮದ್ ಸಿರಾಜ್ 9 ರನ್ ಗಳಿಸಿ ಔಟಾದರು.
ಆಸೀಸ್ ಪರ ಮಾರಕ ದಾಳಿ ನಡೆಸಿದ ಮಿಚೆಲ್ ಸ್ಟಾರ್ಕ್ 3 ವಿಕೆಟ್, ಕಿತ್ತರೆ, ಜೋಶ್ ಹೇಜಲ್‌ವುಡ್ ಮತ್ತು ಪ್ಯಾಟ್ ಕಮ್ಮಿನ್ಸ್ ತಲಾ 2 ವಿಕೆಟ್, ಗ್ಲೇನ್ ಮ್ಯಾಕ್ಸ್‌ವೆಲ್ ಮತ್ತು ಆಡಂ ಝಂಪಾ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
* 6 ಕ್ಯಾಚ್, 1 ರನೌಟ್ ಕೈಚೆಲ್ಲಿದ ದಕ್ಷಿಣ ಆಫ್ರಿಕಾ
* ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯ
* ಡೇವಿಡ್ ಮಿಲ್ಲರ್ ಶತಕದ ಏಕಾಂಗಿ ಹೋರಾಟ ವ್ಯರ್ಥ
* 8ನೇ ಬಾರಿ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್‌ಗೆ ಎಂಟ್ರಿ
ಕೋಲ್ಕತ್ತಾ: ಕೊನೆಯವರೆಗೂ ರೋಚಕತೆಯಿಂದ ಕೂಡಿದ್ದ ಜಿದ್ದಾ-ಜಿದ್ದಿ ಕಣದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ತಂಡ ದಕ್ಷಿಣ ಆಫ್ರಿಕಾ (South Africa) ವಿರುದ್ಧ 3 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಾ 8ನೇ ಬಾರಿಗೆ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದು, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ (Team India) ವಿರುದ್ಧ ಸೆಣಸಲಿದೆ.
Australia will be playing their 8th World Cup Final on Sunday.
ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯವು ಅತ್ಯಂತ ರೋಚಕತೆಯಿಂದ ಕೂಡಿತ್ತು. ಆರಂಭದಲ್ಲೇ ಸ್ಫೋಟಕ ಇನ್ನಿಂಗ್ಸ್ ಕಟ್ಟಲು ಮುಂದಾದ ಟ್ರಾವಿಸ್ ಹೆಡ್ ಹಾಗೂ ಡೇವಿಡ್ ವಾರ್ನರ್ ಜೋಡಿ 6.1 ಓವರ್‌ಗಳಲ್ಲಿ 60 ರನ್‌ಗಳ ಜೊತೆಯಾಟ ನೀಡಿತ್ತು. ಅಲ್ಲದೇ ಟ್ರಾವಿಸ್ ಹೆಡ್ ಸ್ಫೋಟಕ ಬ್ಯಾಟಿಂಗ್ ಹರಿಣರನ್ನು ಕಂಗಾಲಾಗುವಂತೆ ಮಾಡಿತ್ತು. 15 ಓವರ್‌ಗಳಲ್ಲಿ 109 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡಿದ್ದ ಆಸೀಸ್ ಪಡೆ ಬಳಿಕ ಹರಿಣರ ಸ್ಪಿನ್ ದಾಳಿಯಿಂದ ನಿಧಾನಗತಿಯ ಬ್ಯಾಟಿಂಗ್‌ಗೆ ಮುಂದಾಯಿತು. ಪ್ರಮುಖ ಬ್ಯಾಟರ್‌ಗಳು ಅಲ್ಪ ಮೊತ್ತಕ್ಕೆ ವಿಕೆಟ್ ಕಳೆದುಕೊಂಡ ಪರಿಣಾಮ ಪಂದ್ಯದ ಫಲಿತಾಂಶವೇ ಬುಡಮೇಲಾಗಿತ್ತು. ಒಂದೊಂದು ರನ್ ಕದಿಯಲೂ ಆಸೀಸ್ ತಂಡ ಹೆಣಗಾಡಿತ್ತು. ದಕ್ಷಿಣ ಆಫ್ರಿಕಾ ತಂಡವೇ ಗೆಲುವು ಸಾಧಿಸುವ ಸಾಧ್ಯತೆಗಳಿತ್ತು. ಆದ್ರೆ ಪ್ರಮುಖ ಕ್ಯಾಚ್‌ಗಳನ್ನು ಕೈಚೆಲ್ಲಿದ್ದು ತಂಡದ ಸೋಲಿಗೆ ಕಾರಣವಾಯಿತು.
2015ರ ವಿಶ್ವಕಪ್ ಟೂರ್ನಿಯಲ್ಲೂ ದಕ್ಷಿಣ ಆಫ್ರಿಕಾ, ಕಿವೀಸ್ ವಿರುದ್ಧ ಇದೇ ರೀತಿ ವಿರೋಚಿತ ಸೋಲಿಗೆ ತುತ್ತಾಗಿತ್ತು. ಕ್ರಿಕೆಟ್ ದಿಗ್ಗಜ ಎಬಿಡಿ ವಿಲಿಯರ್ಸ್ ಸೇರಿದಂತೆ ಇತರ ಆಟಗಾರರು ಮೈದಾನದಲ್ಲೇ ಕಣ್ಣೀರಿಟ್ಟಿದ್ದರು. ಅಂದು ಮಳೆಯ ಕಾರಣದಿಂದಾಗಿ ಓವರ್ ಕಡಿತಗೊಳಿಸಲಾಗಿತ್ತು. ದಕ್ಷಿಣ ಆಫ್ರಿಕಾ 43 ಓವರ್‌ಗಳಲ್ಲಿ 5 ವಿಕೆಟ್‌ಗೆ 281 ರನ್ ಗಳಿಸಿತ್ತು. ಆ ನಂತರವೂ ಮಳೆಬಂದಿದ್ದರಿಂದ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ನ್ಯೂಜಿಲೆಂಡ್‌ಗೆ 43 ಓವರ್‌ಗಳಲ್ಲೇ 298 ರನ್‌ಗಳ ಗುರಿ ನೀಡಲಾಗಿತ್ತು. ಆದ್ರೆ ಹರಿಣರ ಬಳಗದ ಕಳಪೆ ಫೀಲ್ಡಿಂಗ್‌ನಿಂದಾಗಿ ವಿರೋಚಿತ ಸೋಲಿಗೆ ತುತ್ತಾದರು. ಇಂದು ಸಹ ಆರಂಭದಲ್ಲೇ ಕ್ಯಾಚ್‌ಗಳನ್ನ ಕೈಚೆಲ್ಲಿದರು, ಅಲ್ಲದೇ ಅಗ್ರ ಕ್ರಮಾಂಕದ ಬ್ಯಾಟರ್ಸ್‌ಗಳ ವೈಫಲ್ಯದಿಂದ ಮತ್ತೊಮ್ಮೆ ಚೋಕರ್ಸ್ ಹಣೆಪಟ್ಟಿಯೊಂದಿಗೆ 2023ರ ವಿಶ್ವಕಪ್‌ಗೆ ವಿದಾಯ ಹೇಳಿತು.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ 49.4 ಓವರ್‌ಗಳಲ್ಲಿ 212 ರನ್‌ಗಳಿಗೆ ಆಲೌಟ್ ಆಯಿತು. 213 ರನ್‌ಗಳ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ 47.2 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿ ಗೆಲುವು ಸಾಧಿಸಿತು. ಆಸೀಸ್ ಪರ ಟ್ರಾವಿಸ್ ಹೆಡ್ 62 ರನ್ (48 ಎಸೆತ, 9 ಬೌಂಡರಿ, 2 ಸಿಕ್ಸರ್), ಡೇವಿಡ್ ವಾರ್ನರ್ 29 ರನ್ (18 ಎಸೆತ, 4 ಸಿಕ್ಸರ್, 1 ಬೌಂಡರಿ), ಸ್ವೀವನ್ ಸ್ಮಿತ್ 30 ರನ್ (62 ಎಸೆತ ), ಮಾರ್ನಸ್ ಲಾಬುಶೇನ್ 18 ರನ್, ಮ್ಯಾಕ್ಸ್‌ವೆಲ್ 1 ರನ್ ಗಳಿಸಿದ್ರೆ ಮಿಚೆಲ್ ಮಾರ್ಷ್ ಶೂನ್ಯ ಸುತ್ತಿದರು. ಕೊನೆಯಲ್ಲಿ ಜವಾಬ್ದಾರಿ ಬ್ಯಾಟಿಂಗ್ ಮಾಡಿದ ಜಾಸ್ ಇಂಗ್ಲಿಸ್ 28 ರನ್, ಮಿಚೆಲ್ ಸ್ಟಾರ್ಕ್ 16 ರನ್ ಹಾಗೂ ಪ್ಯಾಟ್ ಕಮ್ಮಿನ್ಸ್ 14 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿತ್ತು. ಆಸ್ಟ್ರೇಲಿಯಾ ಬೌಲರ್‌ಗಳ ಮಾರಕ ದಾಳಿಗೆ ನಲುಗಿದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಹೀನಾಯ ಪ್ರದರ್ಶನ ತೋರಿ ಪೆವಿಲಿಯನ್ ಸೇರಿಕೊಂಡರು. ಪಂದ್ಯದ ಆರಂಭದಿಂದಲೂ ಒಂದು ಅರ್ಧಶತಕವನ್ನೂ ಗಳಿಸದ ನಾಯಕ ತೆಂಬಾ ಬವುಮಾ ಶೂನ್ಯಕ್ಕೆ ಔಟಾಗಿ ನಿರ್ಮಿಸಿದರು. ಈ ಬೆನ್ನಲ್ಲೇ ಲೀಗ್ ಸುತ್ತಿನಲ್ಲಿ 4 ಶತಕ ಸಿಡಿಸಿ ಮಿಂಚಿದ್ದ ಕ್ವಿಂಟನ್ ಡಿಕಾಕ್ ಕೇವಲ 3 ರನ್‌ಗಳಿಗೆ, ರಾಸಿ ವಾನ್ ಡೇರ್ ಡುಸ್ಸೆನ್ 6 ರನ್ ಮತ್ತು ಏಡನ್ ಮಾರ್ಕ್ರಮ್ 10 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಹೊರನಡೆದರು. 11.5 ಓವರ್‌ಗಳಾದರೂ ಕೇವಲ 24 ರನ್ ಗಳಿಸಿದ ದಕ್ಷಿಣ ಆಫ್ರಿಕಾ ತಂಡ ಪ್ರಮುಖ 4 ವಿಕೆಟ್‌ಗಳನ್ನೂ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಇದನ್ನೂ ಓದಿ: ಇನ್ಮುಂದೆ ನಿಮ್ಮ ಅದ್ಭುತ ಪ್ರತಿಭೆ ಪ್ರದರ್ಶಿಸಬಹುದು – ಬಾಬರ್ ಆಜಂ ಹೊಗಳಿದ ಬೆಂಗ್ಳೂರು ಮೂಲದ ರಚಿನ್
ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಜೊತೆಗೂಡಿ ಉತ್ತಮ ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸಿದರು. 113 ಎಸೆತಗಳಲ್ಲಿ ಈ ಜೋಡಿ 95 ರನ್‌ಗಳ ಜೊತೆಯಾಟ ನೀಡಿತು. ಅಷ್ಟರಲ್ಲೇ ಟ್ರಾವಿಸ್ ಹೆಡ್ ಸ್ಪಿನ್ ದಾಳಿಗೆ ಹೆನ್ರಿಚ್ ಕ್ಲಾಸೆನ್ ವಿಕೆಟ್ ಒಪ್ಪಿಸಿದರು. ಆ ಬಳಿಕ ಡೇವಿಡ್ ಮಿಲ್ಲರ್ ಒಬ್ಬರೇ ಏಕಾಂಗಿ ಹೋರಾಟ ನಡೆಸಿದರು. ಕೊನೆಯವರೆಗೂ ಹೋರಾಡಿದ ಮಿಲ್ಲರ್ 101 ರನ್ (5 ಸಿಕ್ಸರ್, 8 ಬೌಂಡರಿ) ಸಿಡಿಸಿದರು. ಇದರಿಂದಾಗಿ ದಕ್ಷಿಣ ಆಫ್ರಿಕಾ ತಂಡ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.
ಇದರ ಹೊರತಾಗಿ ಜೆರಾಲ್ಡ್ ಕೋಟ್ಜಿ 19 ರನ್, ಕೇಶವ್ ಮಹಾರಾಜ್ 4 ರನ್, ಕಾಗಿಸೋ ರಬಾಡ, 10 ರನ್, ತಬ್ರೈಜ್ ಶಮ್ಸಿ 1 ರನ್ ಗಳಿಸಿದರು. ವೈಡ್ ನೋಬಾಲ್‌ನಿಂದ ತಂಡಕ್ಕೆ ಹೆಚ್ಚುವರಿ 11 ರನ್ ಸೇರ್ಪಡೆಯಾಯಿತು. ಹರಿಣರ ವಿರುದ್ಧ ಮಾರಕ ದಾಳಿ ನಡೆಸಿದ ಆಸೀಸ್ ಪರ ಮಿಚೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮ್ಮಿನ್ಸ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಜೋಶ್ ಹ್ಯಾಜಲ್ವುಡ್ ಮತ್ತು ಟ್ರಾವಿಸ್ ಹೆಡ್ ತಲಾ 2 ವಿಕೆಟ್ ಪಡೆದು ಮಿಂಚಿದರು.
ಕೋಲ್ಕತ್ತಾ: ಡೇವಿಡ್ ಮಿಲ್ಲರ್ (David Miller) ಜವಾಬ್ದಾರಿಯುತ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ (South Africa) ತಂಡ 49.4 ಓವರ್‌ಗಳಲ್ಲಿ 212 ರನ್ ಗಳಿಸಿದ್ದು, ಎದುರಾಳಿ ಆಸ್ಟ್ರೇಲಿಯಾ ತಂಡಕ್ಕೆ 213 ರನ್‌ಗಳ ಸುಲಭ ಗುರಿ ನೀಡಿದೆ.
ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವಕಪ್ 2ನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿತ್ತು. ಆಸ್ಟ್ರೇಲಿಯಾ (Australia) ಬೌಲರ್‌ಗಳ ಮಾರಕ ದಾಳಿಗೆ ನಲುಗಿದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಹೀನಾಯ ಪ್ರದರ್ಶನ ತೋರಿ ಪೆವಿಲಿಯನ್ ಸೇರಿಕೊಂಡರು.
ಪಂದ್ಯದ ಆರಂಭದಿಂದಲೂ ಒಂದು ಅರ್ಧಶತಕವನ್ನೂ ಗಳಿಸದ ನಾಯಕ ತೆಂಬಾ ಬವುಮಾ ಶೂನ್ಯಕ್ಕೆ ಔಟಾಗಿ ನಿರ್ಮಿಸಿದರು. ಈ ಬೆನ್ನಲ್ಲೇ ಲೀಗ್ ಸುತ್ತಿನಲ್ಲಿ 4 ಶತಕ ಸಿಡಿಸಿ ಮಿಂಚಿದ್ದ ಕ್ವಿಂಟನ್ ಡಿಕಾಕ್ (Quinton de Kock) ಕೇವಲ 3 ರನ್‌ಗಳಿಗೆ, ರಾಸಿ ವಾನ್ ಡೇರ್ ಡುಸ್ಸೆನ್ 6 ರನ್ ಮತ್ತು ಏಡನ್ ಮಾರ್ಕ್ರಮ್ 10 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಹೊರನಡೆದರು. 11.5 ಓವರ್‌ಗಳಾದರೂ ಕೇವಲ 24 ರನ್ ಗಳಿಸಿದ ದಕ್ಷಿಣ ಆಫ್ರಿಕಾ ತಂಡ ಪ್ರಮುಖ 4 ವಿಕೆಟ್‌ಗಳನ್ನೂ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು.
ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್ ಕ್ಲಾಸೆನ್ (Heinrich Klaasen) ಮತ್ತು ಡೇವಿಡ್ ಮಿಲ್ಲರ್ (David Miller) ಜೊತೆಗೂಡಿ ಉತ್ತಮ ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸಿದರು. 113 ಎಸೆತಗಳಲ್ಲಿ ಈ ಜೋಡಿ 95 ರನ್‌ಗಳ ಜೊತೆಯಾಟ ನೀಡಿತು. ಅಷ್ಟರಲ್ಲೇ ಟ್ರಾವಿಸ್ ಹೆಡ್ ಸ್ಪಿನ್ ದಾಳಿಗೆ ಹೆನ್ರಿಚ್ ಕ್ಲಾಸೆನ್ ವಿಕೆಟ್ ಒಪ್ಪಿಸಿದರು. ಆ ಬಳಿಕ ಡೇವಿಡ್ ಮಿಲ್ಲರ್ ಒಬ್ಬರೇ ಏಕಾಂಗಿ ಹೋರಾಟ ನಡೆಸಿದರು. ಕೊನೆಯವರೆಗೂ ಹೋರಾಡಿದ ಮಿಲ್ಲರ್ 101 ರನ್ (5 ಸಿಕ್ಸರ್, 8 ಬೌಂಡರಿ) ಸಿಡಿಸಿದರು. ಇದರಿಂದಾಗಿ ದಕ್ಷಣ ಆಫ್ರಿಕಾ ತಂಡ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.
ಇದರ ಹೊರತಾಗಿ ಜೆರಾಲ್ಡ್ ಕೋಟ್ಜಿ 19 ರನ್, ಕೇಶವ್ ಮಹಾರಾಜ್ 4 ರನ್, ಕಾಗಿಸೋ ರಬಾಡ, 10 ರನ್, ತಬ್ರೈಜ್ ಶಮ್ಸಿ 1 ರನ್ ಗಳಿಸಿದರು. ವೈಡ್ ನೋಬಾಲ್‌ನಿಂದ ತಂಡಕ್ಕೆ ಹೆಚ್ಚುವರಿ 11 ರನ್ ಸೇರ್ಪಡೆಯಾಯಿತು.
ಹರಿಣರ ವಿರುದ್ಧ ಮಾರಕ ದಾಳಿ ನಡೆಸಿದ ಆಸೀಸ್ ಪರ ಮಿಚೆಲ್ ಸ್ಟಾರ್ಕ್ (Mitchell Starc) ಮತ್ತು ಪ್ಯಾಟ್ ಕಮ್ಮಿನ್ಸ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಜೋಶ್ ಹ್ಯಾಜಲ್ವುಡ್ ಮತ್ತು ಟ್ರಾವಿಸ್ ಹೆಡ್ ತಲಾ 2 ವಿಕೆಟ್ ಪಡೆದು ಮಿಂಚಿದರು.
ಲಂಡನ್: ಇತ್ತೀಚಿನ ಕ್ರಿಕೆಟ್ ಟೂರ್ನಿಗಳಲ್ಲಿ ಅಂಪೈರ್ ತೆಗೆದುಕೊಳ್ಳುವ ನಿರ್ಧಾರಗಳು ಕ್ರಿಕೆಟ್ ಲೋಕದಲ್ಲಿ ಭಾರೀ ವಿವಾದಗಳನ್ನ ಸೃಷ್ಟಿಸುತ್ತಿವೆ. ಆದ್ರೆ ಇಂಗ್ಲೆಂಡ್-ಆಸೀಸ್ ನಡುವಿನ ಆಶಸ್ (Ashes 2023) ಟೂರ್ನಿಯ 2ನೇ ಟೆಸ್ಟ್ ಪಂದ್ಯದಲ್ಲಿ ವಿವಾದಕ್ಕೀಡಾಗುತ್ತಿದ್ದ ಇಂಗ್ಲೆಂಡ್ ಬ್ಯಾಟ್ಸ್‌ಮ್ಯಾನ್ ಬೆನ್ ಡಕೆಟ್ (Ben Duckett) ಅವರ ಕ್ಯಾಚ್ 3ನೇ ಅಂಪೈರ್‌ನ ಸಮಯ ಪ್ರಜ್ಞೆಯಿಂದ ತಪ್ಪಿದೆ.
ಹೌದು. ಆಶಸ್ ಟೂರ್ನಿಯಲ್ಲಿ 2ನೇ ಟೆಸ್ಟ್‌ನ 4ನೇ ದಿನದಾಟದಲ್ಲಿ ಆಸ್ಟ್ರೇಲಿಯಾ (Australia) ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಬೌಲಿಂಗ್‌ನಲ್ಲಿ ಬೆನ್ ಡಕೆಟ್ ಅವರು ಬಾರಿಸಿದ ಹೊಡೆತ ಬೌಂಡರಿ ಲೈನ್‌ನಲ್ಲಿ ಕ್ಯಾಚ್ ಆಗಿತ್ತು. ವೇಗಿ ಮಿಚೆಲ್ ಸ್ಟಾರ್ಕ್ ಕ್ಯಾಚ್ ಹಿಡಿಯುತ್ತಿದ್ದಂತೆ ಇಡೀ ತಂಡ ಕುಣಿದು ಕುಪ್ಪಳಿಸಿತ್ತು. ಇದರಿಂದ ಬಾಡಿದ ಮುಖಹೊತ್ತು ಪೆವಿಲಿಯನ್‌ನತ್ತ ಹೊರಟಿದ್ದರು. ಆಗ ಕ್ರೀಸ್‌ನಲ್ಲಿದ್ದ ನಾಯಕ ಬೆನ್‌ಸ್ಟೋಕ್ಸ್ (Ben Stokes) 3ನೇ ಅಂಪೈರ್ ಪರಿಶೀಲನೆಗೆ ತೆಗೆದುಕೊಂಡರು. ನಂತರ ಸ್ಟಾರ್ಕ್ ಕ್ಯಾಚ್ ಹಿಡಿದು ನಿಯಂತ್ರಿಸಲಾಗದೇ ಚೆಂಡನ್ನು ನೆಲಕ್ಕೆ ತಾಕಿಸಿದ್ದದ್ದು ಕಂಡುಬಂದಿತು. ಇದರಿಂದ 3ನೇ ಅಂಪೈರ್ ನಾಟೌಟ್ ತೀರ್ಪು ನೀಡಿದರು.
In relation to the below incident, Law 33.3 clearly states that a catch is only completed when the fielder has “complete control over the ball and his/her own movement.”
— Marylebone Cricket Club (@MCCOfficial) July 1, 2023
ಈ ಬಗ್ಗೆ ಮೈದಾನದಲ್ಲಿ ಭಾರೀ ಚರ್ಚೆ ಸಹ ನಡೆಯಿತು. ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಆನ್-ಫೀಲ್ಡ್ ಅಂಪೈರ್‌ನೊಂದಿಗೆ ಏಕೆ ಔಟ್ ಇಲ್ಲ ಎಂದು ವಾಗ್ವಾದಕ್ಕಿಳಿದರು. ಆದ್ರೆ ಕ್ಯಾಚ್ ಹಿಡಿದ ನಂತರ ಸ್ಟಾರ್ಕ್ ಚೆಂಡನ್ನು ನೆಲಕ್ಕೆ ತಾಕಿಸಿದ್ದಾರೆ. ಕ್ಯಾಚ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸದ ಕಾರಣ, ಬ್ಯಾಟರ್ ಪರವಾಗಿ ನಿರ್ಧಾರ ನೀಡಬೇಕಾಯಿತು ಎಂದು ಅಂಪೈರ್ ಸಮಾಧಾನಪಡಿಸಿದರು. ಹಾಗಾಗಿ ಆಸ್ಟ್ರೇಲಿಯಾ ತಂಡ ನಿರಾಶೆಗೊಂಡಿತು. ಇದನ್ನೂ ಓದಿ: 48 ವರ್ಷಗಳ ಇತಿಹಾಸದಲ್ಲೇ ಫಸ್ಟ್ ಟೈಂ ವಿಶ್ವಕಪ್ ಟೂರ್ನಿಯಿಂದಲೇ ವೆಸ್ಟ್ ಇಂಡೀಸ್ ಔಟ್
ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ನಲ್ಲಿ ಟೀಂ ಇಂಡಿಯಾ (Team India) ಆಟಗಾರ ಶುಭಮನ್ ಗಿಲ್ ಅವರ ಕ್ಯಾಚ್ ವಿಚಾರ ಭಾರೀ ವಿವಾದ ಹುಟ್ಟುಹಾಕಿತ್ತು. ದೇಶ-ವಿದೇಶ ಕ್ರಿಕೆಟ್ ದಿಗ್ಗಜರಿಂದಲೂ ಟೀಕೆಗಳು ಕೇಳಿಬಂದಿತ್ತು. ಅಲ್ಲದೇ ಸ್ಟೀವ್ ಸ್ಮಿತ್ ತೆಗೆದುಕೊಂಡಿದ್ದ ಜೋ ರೂಟ್ ಅವರ ಕ್ಯಾಚ್ ಸಹ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೂ ಓದಿ:ಕೊಹ್ಲಿ ಮತ್ತು ಬಾಬರ್ ಇಬ್ಬರಲ್ಲಿ ಯಾರು ಶ್ರೇಷ್ಠ? – ಭಜ್ಜಿ ಪ್ರಶ್ನೆಗೆ ಶಾಕಿಂಗ್ ಉತ್ತರ ಕೊಟ್ಟ ಅಖ್ತರ್
ಆಶಸ್ ಟೂರ್ನಿಯ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಮೊದಲ ಇನಿಂಗ್ಸ್‌ನ 47ನೇ ಓವರ್‌ನಲ್ಲಿ ವೇಗಿ ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಇಂಗ್ಲೆಂಡ್ ಸ್ಟಾರ್ ಬ್ಯಾಟರ್ ಜೋ ರೂಟ್ ಪುಲ್ ಮಾಡಲು ಪ್ರಯತ್ನಿಸಿದರು. ಚೆಂಡು ಬ್ಯಾಟ್ ಸರಿಯಾಗಿ ಸಿಗದ ಬ್ಯಾಕ್‌ವಾರ್ಡ್ ಪಾಯಿಂಟ್ ಕಡೆ ಹಾರಿತು. ಈ ವೇಳೆ ಸ್ಟೀವ್ ಸ್ಮಿತ್ ಕ್ಯಾಚ್ ಪಡೆದರು. ಕ್ಯಾಚ್ ಪಡೆದ ತಕ್ಷಣ ಸ್ಮಿತ್ ಕುಣಿದು ಕುಪ್ಪಳಿಸಿದರು. ಈ ವೇಳೆ ಗೊಂದಲಕ್ಕೆ ಒಳಗಾದ ಫೀಲ್ಡ್ ಅಂಪೈರ್‌ಗಳು 3ನೇ ಅಂಪೈರ್ ಸಹಾಯಕ್ಕೆ ಮೊರೆ ಹೋದರು. ಇದನ್ನೂ ಓದಿ: ಇಷ್ಟಕ್ಕೆ ಮುಗಿದಿಲ್ಲ – ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ಗಿಲ್ ಖಡಕ್ ರಿಯಾಕ್ಷನ್
3ನೇ ಅಂಪೈರ್‌ಗಳು ಹಲವು ಬಾರಿ ವಿಡಿಯೋ ರೀಪ್ಲೇ ವೀಕ್ಷಿಸಿದ ಬಳಿಕ ಅಂತಿಮವಾಗಿ ಜೋ ರೂಟ್ ಔಟ್ ಎಂದು ತೀರ್ಪು ನೀಡಲಾಯಿತು. ಈ ಬೆನ್ನಲ್ಲೇ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಗಳು ಆಸೀಸ್ ತಂಡ ಹಾಗೂ 3ನೇ ಅಂಪೈರ್ ವಿರುದ್ಧ ಕಿಡಿ ಕಾರಿದರು. ಸ್ಟೀವ್ ಸ್ಮಿತ್ ಚೆಂಡನ್ನು ಪಡೆಯುವಾಗ ನೆಲಕ್ಕೆ ತಾಗಿಸಿದ್ದಾರೆಂದು ಫೋಟೋ ಸಹಿತ ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಅಲ್ಲದೇ 2ನೇ ಟೆಸ್ಟ್ನ ನಾಲ್ಕನೇ ದಿನದಾಟದಲ್ಲಿ ಮಿಚೆಲ್ ಸ್ಟಾರ್ಕ್ ಹಿಡಿದ ಬೆನ್ ಡಕೆಟ್ ಅವರ ಕ್ಯಾಚರ್ ಡಿಆರ್‌ಎಸ್‌ಗೆ ಮನವಿ ಮಾಡಲಾಗಿತ್ತು. ಆದ್ರೆ, ಅಂಪೈರ್ ನಿಗಾ ವಹಿಸಿ ನಾಟೌಟ್ ತೀರ್ಪು ಪ್ರಕಟಿಸಿದರು.
ಅಮರಾವತಿ: ಮಿಚೆಲ್ ಸ್ಟಾರ್ಕ್ (Mitchell Starc) ಮಾರಕ ಬೌಲಿಂಗ್ ದಾಳಿ, ಮಿಚೆಲ್ ಮಾರ್ಷ್ (Mitchell Marsh) ಹಾಗೂ ಟ್ರಾವಿಸ್ ಹೆಡ್ ಸ್ಫೋಟಕ ಅರ್ಧಶತಕಗಳ ಬ್ಯಾಟಿಂಗ್ ನೆರವಿನಿಂದ ಭಾರತದ (Team India) ವಿರುದ್ಧ ಆಸ್ಟ್ರೇಲಿಯಾ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 1-1 ರಲ್ಲಿ ಗೆದ್ದು ಸಮಬಲ ಸಾಧಿಸಿದೆ.
ವಿಶಾಖಪಟ್ಟಣದ ವೈ.ಎಸ್ ರಾಜಶೇಖರ್ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಫೀಲ್ಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ (Australia), ರೋಹಿತ್ (Rohit Sharma) ಪಡೆಯನ್ನ 26 ಓವರ್‌ಗಳಲ್ಲಿ 117 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. 118 ರನ್‌ಗಳ ಗುರಿ ಪಡೆದ ಆಸ್ಟ್ರೇಲಿಯಾ ಟಿ20 ಶೈಲಿಯಲ್ಲಿ ಬ್ಯಾಟಿಂಗ್ ನಡೆಸಿ 11 ಓವರ್‌ಗಳಲ್ಲಿ 121 ರನ್ ಗಳಿಸಿ ಜಯ ಸಾಧಿಸಿತು. ಇದನ್ನೂ ಓದಿ: 750,000 ಡಾಲರ್ ಅಂದ್ರೆ ಎಷ್ಟು ಅಂತ ಗೊತ್ತಿರಲಿಲ್ಲ- ಕಾರು ಖರೀದಿಯ ಬಗ್ಗೆ ಯೋಚಿಸಿದ್ದ ರೋಹಿತ್
ಆರಂಭಿಕರಾಗಿ ಕಣಕ್ಕಿಳಿದ ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ ವಿಕೆಟ್ ಬಿಟ್ಟುಕೊಡದಂತೆ ಟೀಂ ಇಂಡಿಯಾ ಬೌಲರ್‌ಗಳನ್ನ ಬೆಂಡೆತ್ತಿದರು. ಮಾರ್ಷ್ 36 ಎಸೆತಗಳಲ್ಲಿ ಸ್ಫೋಟಕ 66 ರನ್ (6 ಸಿಕ್ಸರ್, 6 ಬೌಂಡರಿ) ಗಳಿಸಿದ್ರೆ, ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 10 ಬೌಂಡರಿಯೊಂದಿಗೆ 51 ರನ್ ಚಚ್ಚಿ ಜಯದ ಹಾದಿ ತಲುಪಿಸಿದರು.
ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಆಸ್ಟ್ರೇಲಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿತು. ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಮಾರಕ ಬೌಲಿಂಗ್ ದಾಳಿ ನಡೆಸಿ, ಭಾರತದ ಅಗ್ರಕ್ರಮಾಂಕದ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸುವಲ್ಲಿ ಯಶಸ್ವಿಯಾದರು. ಇದರಿಂದ ಮೊದಲ ಪಂದ್ಯದಲ್ಲಿ 188 ರನ್‌ಗಳಿಗೆ ಆಸ್ಟ್ರೇಲಿಯಾ ತಂಡವನ್ನು ಕಟ್ಟಿಹಾಕಿದ್ದ ಭಾರತ, 2ನೇ ಪಂದ್ಯದಲ್ಲಿ ಹೀನಾಯ ಸೋಲನುಭವಿಸಬೇಕಾಯಿತು. ಇದನ್ನೂ ಓದಿ: IPL 2023: ಈ ಬಾರಿ ಸಿಎಸ್‌ಕೆ ಕಪ್ ಗೆಲ್ಲಲ್ಲ, ಆರ್‌ಸಿಬಿ ಗೆದ್ದರೆ ಖುಷಿ – ಭಾರತದ ಮಾಜಿ ಕ್ರಿಕೆಟಿಗ ಭವಿಷ್ಯ
ಮೊದಲ ಓವರ್‌ನ 3ನೇ ಎಸೆತದಲ್ಲಿಯೇ ಶುಭಮನ್ ಗಿಲ್ ಔಟಾದರು. ಈ ಬೆನ್ನಲ್ಲೇ ನಾಯಕ ರೋಹಿತ್ ಶರ್ಮಾ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮೊದಲ ಪಂದ್ಯದಲ್ಲಿ ಶೂನ್ಯ ಸುತ್ತಿದ್ದ ಸೂರ್ಯಕುಮಾರ್ ಯಾದವ್ (Suryakumar Yadav) 2ನೇ ಪಂದ್ಯದಲ್ಲೂ ಶೂನ್ಯಕ್ಕೆ ಔಟಾದರು. ಕಳೆದ ಪಂದ್ಯದಲ್ಲಿ ಮ್ಯಾಚ್ ವಿನ್ನರ್ ಆಗಿದ್ದ ಕೆ.ಎಲ್ ರಾಹುಲ್ ಈ ಪಂದ್ಯದಲ್ಲಿ ಕೇವಲ 9 ರನ್ ಗಳಿಸಿದರೆ, ಉತ್ತಮವಾಗಿ ಆಡುತ್ತಿದ್ದ ವಿರಾಟ್ ಕೊಹ್ಲಿ (31 ರನ್ ಗಳಿಸಿ) ಸಹ ನಥನ್ ಎಲ್ಲಿಸ್‌ಗೆ ವಿಕೆಟ್ ಒಪ್ಪಿಸಿದರು.
ಈ ಬೆನ್ನಲ್ಲೇ ಉಪನಾಯಕ ಹಾರ್ದಿಕ್ ಪಾಂಡ್ಯ 1 ರನ್, ರವೀಂದ್ರ ಜಡೇಜಾ 16 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಆಲ್‌ರೌಂಡರ್ ಅಕ್ಷರ್ ಪಟೇಲ್ 29 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 29 ರನ್ ಬಾರಿಸಿ ತಂಡದ ಮೊತ್ತ 100ರ ಗಡಿ ತಲುಪಿಸುವಲ್ಲಿ ಯಶಸ್ವಿಯಾದರು.
ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 8 ಓವರ್‌ಗಳಲ್ಲಿ 53 ರನ್ ನೀಡಿ 5 ವಿಕೆಟ್ ಕಿತ್ತರೆ, ಸೀನ್ ಅಬೋಟ್ 6 ಓವರ್‌ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರು. ನಥನ್ ಎಲ್ಲಿಸ್ 5 ಓವರ್‌ಗಳಲ್ಲಿ 13 ರನ್ ನೀಡಿ ಉಳಿದ 2 ವಿಕೆಟ್ ಕಬಳಿಸಿದರು.
ಕ್ಯಾನ್ಬೆರಾ: ಟಿ20 ವಿಶ್ವಕಪ್‌ಗೂ (T20 WorldCup) ಮುನ್ನ ಸೋಮವಾರ ಭಾರತ (Team India) ಮತ್ತು ಆಸ್ಟ್ರೇಲಿಯಾ (Australia) ಅಭ್ಯಾಸ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 6 ರನ್‌ಗಳ ರೋಚಕ ಜಯ ಸಾಧಿಸಿತು.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಮ್ಯಾಜಿಕ್ ಫೀಲ್ಡಿಂಗ್, ಮೊಹಮ್ಮದ್ ಶಮಿಯ ಮಾರಕ ಬೌಲಿಂಗ್ ದಾಳಿ ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ಕೆ.ಎಲ್ ರಾಹುಲ್‌ರ (KL Rahul) ಭರ್ಜರಿ ಬ್ಯಾಂಟಿಂಗ್ ಪ್ರದರ್ಶನ ಟೀಂ ಇಂಡಿಯಾ (Team India) ಗೆಲುವಿಗೆ ಕಾರಣವಾಯಿತು. ಆದರೆ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ (Mitchell Starc) ಅವರು ಎಸೆದ ಬಾಲ್ ಸೂರ್ಯಕುಮಾರ್ ಯಾದವ್ ಅವರ ಹೆಲ್ಮೆಟ್‌ಗೆ ತಗುಲಿ ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳಿಗೆ ಶಾಕ್ ನೀಡಿತ್ತು. ಇದನ್ನೂ ಓದಿ: ಡೇಟಿಂಗ್ ಬಗ್ಗೆ ಯುವತಿಗೆ ಅಡ್ವೈಸ್ ಕೊಟ್ಟ ಜೋ ಬೈಡೆನ್ – ವೀಡಿಯೋ ವೈರಲ್
ಸೂರ್ಯಕುಮಾರ್ ಯಾದವ್ ಯಾವಾಗಲೂ ವಿಕೆಟ್ ಹಿಂದಿನಿಂದ ರನ್ ಗಳಿಸುವುದರಲ್ಲಿ ಫೇಮಸ್. ಹಾಗೆಯೇ ಇನ್ನಿಂಗ್ಸ್‌ನ 19ನೇ ಓವರ್‌ನಲ್ಲಿ, ಅವರು ಮಿಚೆಲ್ ಸ್ಟಾರ್ಕ್ ಅವರ 5ನೇ ಎಸೆತವನ್ನು ಬೌಂಡರಿಗೆ ಅಟ್ಟುವ ಪ್ರಯತ್ನ ಮಾಡಿದರು. ಈ ವೇಳೆ ಚೆಂಡು ನೇರವಾಗಿ ಅವರ ಹೆಲ್ಮೆಟ್‌ಗೆ ಬಿದ್ದಿತು. ಹೀಗಾಗಿ ಸ್ವಲ್ಪ ಸಮಯದವರೆಗೆ ಪಂದ್ಯವನ್ನು ನಿಲ್ಲಿಸಲಾಯಿತು. ಆದರೆ ಸೂರ್ಯಕುಮಾರ್ ಯಾದವ್ ಗಾಯದಿಂದ ಪಾರಾಗಿದ್ದಾರೆ. ಇದಾದ ಬಳಿಕ ವೈದ್ಯಕೀಯ ಸಿಬ್ಬಂದಿ ಮೈದಾನಕ್ಕೆ ಬಂದು ತಪಾಸಣೆ ನಡೆಸಿದ ಬಳಿಕ ಮತ್ತೆ ಇನ್ನಿಂಗ್ಸ್ ಮುಂದುವರಿಯಿತು.
Live Tv
[brid partner=56869869 player=32851 video=960834 autoplay=true]
ಸಿಡ್ನಿ: ಆಸ್ಟ್ರೇಲಿಯಾ ಪುರುಷರ ಕ್ರಿಕೆಟ್ ತಂಡದಲ್ಲಿ ಮಿಚೆಲ್ ಸ್ಟಾರ್ಕ್ ಮಿಂಚುಹರಿಸಿದರೆ, ಮಹಿಳಾ ವಿಭಾಗದಲ್ಲಿ ಅಲಿಸ್ಸಾ ಹೀಲಿ ಸಾಧನೆಯ ಶಿಖರವನ್ನೇರಿ ಈ ದಂಪತಿಗಳಿಬ್ಬರು ನೂತನ ದಾಖಲೆಯೊಂದನ್ನು ಬರೆದಿದ್ದಾರೆ.
ಹೌದು ದಂಪತಿಗಳಿಬ್ಬರೂ ಕೂಡ ಆಸ್ಟ್ರೇಲಿಯಾ ಕ್ರಿಕೆಟ್ ಕಂಡ ಶ್ರೇಷ್ಠ ಕ್ರೀಡಾಪಟುಗಳಾಗಿ ತಂಡಕ್ಕೆ ಕೊಡುಗೆ ನೀಡಿದ್ದಾರೆ. ಈ ಹಿಂದೆ 2019ರ ಪುರುಷರ ವಿಶ್ವಕಪ್‍ನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಮಿಚೆಲ್ ಸ್ಟಾರ್ಕ್ ಬೌಲಿಂಗ್ ಮೂಲಕ ಟೂರ್ನಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿ ಪ್ರಶಸ್ತಿ ಗೆಲ್ಲಲು ಸಹಕಾರಿಯಾಗಿದ್ದರು. ಇದೀಗ ಮಹಿಳಾ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ ಮಹಿಳಾ ತಂಡದಲ್ಲಿ ಅಲಿಸ್ಸಾ ಹೀಲಿ ಭರ್ಜರಿ ಬ್ಯಾಟಿಂಗ್ ಮೂಲಕ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿ ಗಮನಸೆಳೆದಿದ್ದಾರೆ. ಇದನ್ನೂ ಓದಿ: ದಾಖಲೆಯ 7ನೇ ಬಾರಿ ವಿಶ್ವಕಪ್ ಮುಡಿಗೇರಿಸಿಕೊಂಡ ಆಸೀಸ್ ಮಹಿಳೆಯರು
2019ರ ಪುರುಷರ ವಿಶ್ವಕಪ್ ಟೂರ್ನಿಯ 10 ಪಂದ್ಯಗಳಲ್ಲಿ ಒಟ್ಟು 27 ವಿಕೆಟ್ ಕಿತ್ತು ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇದೀಗ 2022ರ ಮಹಿಳಾ ವಿಶ್ವಕಪ್‍ನಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಅಲಿಸ್ಸಾ ಹೀಲಿ 2 ಶತಕ ಮತ್ತು 2 ಅರ್ಧಶತಕ ಸಹಿತ 509 ರನ್ ಸಿಡಿಸಿ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ಆಟಗಾರ್ತಿಯಾಗಿ ಮೂಡಿಬಂದಿದ್ದಾರೆ. ಈ ಮೂಲಕ ದಂಪತಿ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಇತಿಹಾಸ ಸೃಷ್ಟಿಸಿದ ಧೋನಿ ಸಿಕ್ಸರ್ ಬಾರಿಸಿದ ಬ್ಯಾಟ್
ಆಸ್ಟ್ರೇಲಿಯಾ ತಂಡಕ್ಕೆ ದಂಪತಿಗಳಿಬ್ಬರೂ ಕೂಡ ಹಲವು ವರ್ಷಗಳಿಂದ ಶ್ರೇಷ್ಟಮಟ್ಟದ ಕೊಡುಗೆಯನ್ನು ಸಲ್ಲಿಸುತ್ತಿದ್ದಾರೆ. ಇವರಿಬ್ಬರ ಆಟ ಹೀಗೆ ಮುಂದುವರಿಯಲಿ ಇನ್ನಷ್ಟು ಉತ್ತಮ ಪ್ರದರ್ಶನದ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ನೆರವಾಗಲಿ ಎನ್ನುವುದು ಅಭಿಮಾನಿಗಳ ಆಶಯವಾಗಿದೆ.