Tag: MLA Basangouda Patil Yatnal

  • ಅತೃಪ್ತ ಸಭೆಗೆ ನನಗೂ ಆಹ್ವಾನ ಬಂದಿತ್ತು: ಶಾಸಕ ವೆಂಕಟರೆಡ್ಡಿ ಮುದ್ನಾಳ

    ಅತೃಪ್ತ ಸಭೆಗೆ ನನಗೂ ಆಹ್ವಾನ ಬಂದಿತ್ತು: ಶಾಸಕ ವೆಂಕಟರೆಡ್ಡಿ ಮುದ್ನಾಳ

    ಯಾದಗಿರಿ: ಶಾಸಕ ಬಸನಗೌಡ ಪಾಟೀಲ್ ಯತಾಳ್ ನೇತೃತ್ವದಲ್ಲಿ ನಡೆದ ಸಭೆಗೆ ನನಗೂ ಆಹ್ವಾನ ಬಂದಿತ್ತು. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ ಎಂದು ನನ್ನನ್ನು ಸಭೆಗೆ ಕರೆದಿದ್ದರು. ಆದರೆ ನಾನು ಸಭೆಗೆ ಹೋಗಲಿಲ್ಲ ಎಂದು ಬಿಜೆಪಿ ಅತೃಪ್ತ ಶಾಸಕರ ಸಭೆ ವಿಚಾರವಾಗಿ ಯಾದಗಿರಿ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿಕೆ ನೀಡಿದ್ದಾರೆ.

    ಯಾದಗಿರಿಯ ತಮ್ಮ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಕ್ಷೇತ್ರದ ಜನ ತತ್ತರಿಸಿದ್ದಾರೆ. ನಾವು ಈ ಸಮಯದಲ್ಲಿ ರಾಜಕೀಯ ಮಾತನಾಡದೆ ರೋಗಿಗಳನ್ನು ಗುಣಮುಖರನ್ನಾಗಿ ಮಾಡುವ ಬಗ್ಗೆ ಚಿಂತಿಸಬೇಕು. ಕೊರೊನಾ ಸಂಕಷ್ಟದಲ್ಲಿ ರಾಜಕೀಯ ಮಾತು ಸರಿಯಲ್ಲ ಎಂದು ಬಿಜೆಪಿ ಅತೃಪ್ತ ಶಾಸಕರಿಗೆ ವೆಂಕಟರೆಡ್ಡಿ ಮುದ್ನಾಳ ಸಲಹೆ ನೀಡಿದರು.

    ಕೊರೊನಾ ಸಮಸ್ಯೆ ಮುಗಿದ ಮೇಲೆ ಮುಖ್ಯಮಂತ್ರಿಗಳ ಬದಲಾವಣೆ, ಸಚಿವ ಸ್ಥಾನ ನೀಡುವುದು ಹಾಗೂ ರಾಜ್ಯಸಭೆ ಸದಸ್ಯರ ಆಯ್ಕೆ ವಿಚಾರದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡೋಣ. ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಕೊರೊನಾ ಜೊತೆ ಅಭಿವೃದ್ಧಿ ಕಾರ್ಯ ಚಿಂತೆ ಮಾಡಬೇಕೆಂದು ಸಿಎಂ ಬಿಎಸ್‍ವೈ ಹಾಗೂ ಅತೃಪ್ತ ಶಾಸಕರಿಗೆ ಮನವಿ ಮಾಡಿದರು.

    ಕ್ಷೇತ್ರದಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ಜನರ ಸಮಸ್ಯೆ ಕೊರೊನಾ ಕಾರಣದಿಂದ ಹೆಚ್ಚಾಗಿದೆ. ಆದ್ದರಿಂದ ನಾನು ಕ್ಷೇತ್ರದಲ್ಲೇ ಇದ್ದೇನೆ. ನನಗೆ ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ. ಆದರೆ ಕ್ಷೇತ್ರದ ಅಭಿವೃದ್ಧಿಗೆ ಇರೋ ಸಮಸ್ಯೆ ಬಗ್ಗೆ ಗಮನ ಹರಿಸುತ್ತಿದ್ದೇನೆ. ಕೊರೊನಾ ಕಾರಣದಿಂದ ಅಭಿವೃದ್ಧಿ ಕಾರ್ಯಗಳ ವೇಗಕ್ಕೆ ಬ್ರೇಕ್ ಬಿದ್ದಿದೆ. ಆದ್ದರಿಂದ ಈ ಬಗ್ಗೆ ಸೂಕ್ತ ಗಮನ ನೀಡಿ ಯೋಜನೆಗಳ ವೇಗ ಹೆಚ್ಚಿಸಬೇಕಿದೆ. ನಮ್ಮ ಗಮನ ಸಂರ್ಪೂಣವಾಗಿ ಕೊರೊನಾ ಕಡೆ ಇದೆ. ಈ ಸಂದರ್ಭದಲ್ಲಿ ಸರಿ ವಿಚಾರಗಳನ್ನು ಸರಿಯಲ್ಲ ಎಂದರು.

  • ಬಿಜೆಪಿಯಲ್ಲಿ ಕೆಲವರು ಅಯೋಗ್ಯರಿದ್ದಾರೆ, ಮೋದಿ ಮುಖ ನೋಡಿ ಅವರಿಗೆ ವೋಟ್ ಹಾಕಬೇಕು: ಯತ್ನಾಳ್

    ಬಿಜೆಪಿಯಲ್ಲಿ ಕೆಲವರು ಅಯೋಗ್ಯರಿದ್ದಾರೆ, ಮೋದಿ ಮುಖ ನೋಡಿ ಅವರಿಗೆ ವೋಟ್ ಹಾಕಬೇಕು: ಯತ್ನಾಳ್

    ಬೆಂಗಳೂರು: ಬಿಜೆಪಿಯಲ್ಲಿ ಕೆಲವರು ಅಯೋಗ್ಯರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮುಖ ನೋಡಿ ಅವರಿಗೆ ವೋಟ್ ಹಾಕಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

    ನಗರದ ತೇಜಸ್ವಿನಿ ಅನಂತ್‍ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಶಾಸಕರು, ಅನೇಕ ಕ್ಷೇತ್ರಗಳಲ್ಲಿ ಬಿಜೆಪಿಯ ಅಯೋಗ್ಯ ಅಭ್ಯರ್ಥಿಗಳಿದ್ದಾರೆ. ಮತದಾರರು ಅವರನ್ನು ನೋಡಿ ಮತ ಹಾಕುವುದಿಲ್ಲ. ಪ್ರಧಾನಿ ಮೋದಿ ಮುಖ ನೋಡಿ ಮತ ಹಾಕುತ್ತಾರೆ ಎನ್ನುವ ಸತ್ಯವನ್ನು ನಾನು ಒಪ್ಪಿಕೊಳ್ಳಲೇಬೇಕು ಎಂದು ತಿಳಿಸಿದರು.

    ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಅನಂತಕುಮಾರ್ ಅವರು ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದರು. ಈ ಇಬ್ಬರು ನಾಯಕರ ನೇತೃತ್ವದಲ್ಲಿಯೇ ಅನೇಕರು ಶಾಸಕರಾಗಿ, ಸಂಸದರಾಗಿ, ಕೇಂದ್ರ ಸಚಿವರಾಗಿ ಆಯ್ಕೆಯಾದರು. ಬಿಜೆಪಿಗೆ ಅನಂತ್‍ಕುಮಾರ್ ಅವರ ಕೊಡುಗೆ ಅಪಾರ. ಹೀಗಾಗಿ ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಒಂದು ಅವಕಾಶ ನೀಡಬೇಕಿತ್ತು ಎಂದರು.

    ತೇಜಸ್ವಿನಿ ಅನಂತ್‍ಕುಮಾರ್ ಅವರು ಪಕ್ಷದ ಟಿಕೆಟ್ ಆಕಾಂಕ್ಷಿಯಾಗರಲಿಲ್ಲ. ಪಕ್ಷದ ಮುಖಂಡರು ಅವರ ಮನೆಗೆ ಹೋಗಿ ಟಿಕೆಟ್ ನೀಡುವ ಭರವಸೆ ನೀಡಿದರು. ಆದರೆ ಕೊನೆಯ ಗಳಿಗೆಯಲ್ಲಿ ಟಿಕೆಟ್ ಕೈತಪ್ಪಿಸಿದ್ದು ಬಿಜೆಪಿಯ ಅನೇಕ ಕಾರ್ಯಕರ್ತರಿಗೆ ನೋವು ತಂದಿದೆ. ಕೆಲವರು ಟಿಕೆಟ್ ತಪ್ಪಿಸಿ ರಾಜ್ಯವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಆದರೆ ಅದು ಅವರಿಂದ ಸಾಧ್ಯವಿಲ್ಲ. ಈಗ ಅವರು ಸಂತೋಷವಾಗಿದ್ದರೂ, ಅಸಂತೋಷವಾಗುವ ದಿನಗಳು ದೂರ ಉಳಿದಿಲ್ಲ ಎಂದು ಹೇಳಿದರು.

  • ಸಿಎಂ ಕುಮಾರಸ್ವಾಮಿ ಒಬ್ಬ ನಗರ ನಕ್ಸಲೈಟ್: ಶಾಸಕ ಯತ್ನಾಳ್ ಕಿಡಿ

    ಸಿಎಂ ಕುಮಾರಸ್ವಾಮಿ ಒಬ್ಬ ನಗರ ನಕ್ಸಲೈಟ್: ಶಾಸಕ ಯತ್ನಾಳ್ ಕಿಡಿ

    ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಂಗೆಗೆ ಪ್ರಚೋದನೆ ನೀಡುತ್ತಾರೆ. ಹೀಗಾಗಿ ಅವರೊಬ್ಬ ನಗರ ನಕ್ಸಲೈಟ್ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

    ಯಡಿಯೂರಪ್ಪ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬುದ್ಧಿಜೀವಿ ಎಂದು ಹೇಳಿಕೊಂಡಿದ್ದ ಕೆಲವು ನಗರ ನಕ್ಸಲೈಟ್‍ರನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದರು. ಅವರಂತೆ ಎಚ್.ಡಿ.ಕುಮಾರಸ್ವಾಮಿ ಕೂಡಾ ನಗರ ನಕ್ಸಲೈಟ್ ಎಂದು ವ್ಯಂಗ್ಯವಾಡಿದರು.

    ಕುಮಾರಸ್ವಾಮಿ ಅವರನ್ನು ಸಮೀಪದಿಂದ ನೋಡಿದ್ದೇನೆ. ಅವರು ಸುಳ್ಳು ಕಾಗದ ಪತ್ರಗಳನ್ನು ಸೃಷ್ಟಿಸಿ, ಇತರರನ್ನು ಹೆದರಿಸುತ್ತಾರೆ. ಈಗಾಗಲೇ ಅವರ ಸುತ್ತ ಅನೇಕ ಹಗರಣಗಳಿದ್ದು, ಜಂತಕಲ್ ಮೈನಿಂಗ್ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಸದ್ಯದಲ್ಲಿಯೇ ಕುಮಾರಸ್ವಾಮಿ ಜೈಲು ಸೇರಲಿದ್ದಾರೆ ಎಂದು ಯತ್ನಾಳ್ ಭವಿಷ್ಯ ನುಡಿದರು. ಇದನ್ನು ಓದಿ: ರಾಹುಲ್ ಗಾಂಧಿ ಒಬ್ಬ ಅರೆ ಹುಚ್ಚ, ಅಯೋಗ್ಯ ಯತ್ನಾಳ್ ವ್ಯಂಗ್ಯ

    ಇದೇ ವೇಳೆ ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಶಾಸಕರು, ಜೆಡಿಎಸ್ ಶಾಸಕರು ಹಾಗೂ ನಾಯಕರು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದಿಂದ ಹೊರಗೆ ಬರುವ ಪರಿಸ್ಥಿತಿಯಲ್ಲಿ ಇಲ್ಲ. ಒಂದು ವೇಳೆ ಹೊರಗೆ ಬಂದರೆ ಅವರನ್ನು ಮುಗಿಸಿ ಬಿಡುತ್ತಾರೆ. ದೇವೇಗೌಡ ಅವರು ಯಾರ ತಲೆಯ ಮೇಲೆ ಕೈ ಇಡುತ್ತಾರೋ ಅವರ ಕಥೆ ಮುಗಿದಂತೆ ಎಂದು ಲೇವಡಿ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಹುಲ್ ಗಾಂಧಿ ಒಬ್ಬ ಅರೆ ಹುಚ್ಚ, ಅಯೋಗ್ಯ ಯತ್ನಾಳ್ ವ್ಯಂಗ್ಯ

    ರಾಹುಲ್ ಗಾಂಧಿ ಒಬ್ಬ ಅರೆ ಹುಚ್ಚ, ಅಯೋಗ್ಯ ಯತ್ನಾಳ್ ವ್ಯಂಗ್ಯ

    – ಕುಮಾರಸ್ವಾಮಿಗೆ ಬೇಜಾರಾಗಿದ್ದರೆ ರಾಜೀನಾಮೆ ನೀಡಲಿ
    – ಎಚ್‍ಡಿಡಿ ಯಾರ ತಲೆಯ ಮೇಲೆ ಕೈ ಇಡ್ತಾರೋ ಅವರ ಕಥೆ ಮುಗಿದಂತೆ

    ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಅರೆ ಹುಚ್ಚ, ಅವರಿಗೆ ಮೆದುಳು ಇದೆಯೋ, ಇಲ್ಲವೋ ಗೊತ್ತಾಗುತ್ತಿಲ್ಲ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸುವುದು ಉತ್ತಮ ಎಂದು ಶಾಸಕ ಬಸನಗೌಡ್ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

    ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಲೋಕಸಭೆಯಲ್ಲಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅರ್ಥವೇ ಇಲ್ಲದ ಹೇಳಿಕೆ ನೀಡುತ್ತಿದ್ದಾರೆ. ಬಂಗಾರವನ್ನು ಲೀಟರ್ ನಲ್ಲಿ ಮಾಪನ ಮಾಡುವುದು, ಬಟಾಟೆಯಿಂದ ಬಂಗಾರ ಮಾಡುವುದು ಸೇರಿದಂತೆ ಅನೇಕ ವಿಚಿತ್ರ ಹೇಳಿಕೆ ನೀಡುತ್ತಿದ್ದಾರೆ. ಹೀಗೆ ಯಾವುದೇ ಅರೆ ಹುಚ್ಚರೂ ಹೇಳಿಕೆ ನೀಡುವುದಿಲ್ಲ ಎಂದು ಕಿಡಿಕಾರಿದರು.

     

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಹೊರೆಸುತ್ತಿರುವ ಅಯೋಗ್ಯ ವ್ಯಕ್ತಿ ನೇತೃತ್ವದ ಕಾಂಗ್ರೆಸ್ ಪಕ್ಷವು ದೇಶದ ಜನತೆಯನ್ನು ಕ್ಷಮೆ ಕೇಳಬೇಕು. ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ಸಿಗೆ ರಾಹುಲ್ ಗಾಂಧಿ ಅಧ್ಯಕ್ಷರಾಗಿರುವುದು ದುರಂತ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಪ್ರಕರಣಗಳು ನಡೆದಿಲ್ಲ. ಆದರೆ ಕಾಂಗ್ರೆಸ್ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಇದೇ ರೀತಿ ಹೇಳಿಕೆ ಮುಂದುವರಿಸಿದರೆ ನಾವು ರಾಜ್ಯದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಈ ಹಿಂದಿನ ಕಾಂಗ್ರೆಸ್ ಸರ್ಕಾರ ಅನೇಕ ಹಗರಣಗಳಲ್ಲಿ ಭಾಗಿಯಾಗಿತ್ತು. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಹೆರಾಲ್ಡ್ ಪತ್ರಿಕೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಹೀಗಿದ್ದರೂ ಪ್ರತಿ ಭಾಷಣದಲ್ಲಿಯೂ ರಫೆಲ್ ವಿಮಾನದ ಬಗ್ಗೆ ಮಾತನಾಡುತ್ತಾರೆ. ಅವರು ನೀಡುತ್ತಿರುವ ಅಂಕಿ ಸಂಖ್ಯೆಗೆ ತಾಳ-ಮೇಳವೇ ಇಲ್ಲ ಎಂದು ಟೀಕಿಸಿದರು.

    ಜೆಡಿಎಸ್ ವಿರುದ್ಧ ವಾಗ್ದಾಳಿ:
    ಕಾಂಗ್ರೆಸ್ ಬಳಿಕ ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಶಾಸಕರು, ಜೆಡಿಎಸ್ ಶಾಸಕರು ಹಾಗೂ ನಾಯಕರು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದಿಂದ ಹೊರಗೆ ಬರುವ ಪರಿಸ್ಥಿತಿಯಲ್ಲಿ ಇಲ್ಲ. ಒಂದು ವೇಳೆ ಹೊರಗೆ ಬಂದರೆ ಅವರನ್ನು ಮುಗಿಸಿ ಬಿಡುತ್ತಾರೆ. ದೇವೇಗೌಡ ಅವರು ಯಾರ ತಲೆಯ ಮೇಲೆ ಕೈ ಇಡುತ್ತಾರೋ ಅವರ ಕಥೆ ಮುಗಿದಂತೆ. ಇಂತಹ ದುರಂತಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್, ಬೈರೇಗೌಡ, ನಾಗೇಗೌಡ, ಎಸ್.ಆರ್. ಬೊಮ್ಮಾಯಿ ಅವರನ್ನು ಸೇರಿದಂತೆ ಅನೇಕ ನಾಯಕರು ಬಲಿಯಾಗಿದ್ದಾರೆ. ಈಗಲೂ ದೇವೇಗೌಡ ಅವರ ಕುಟುಂಬಕ್ಕೆ ಜೆಡಿಎಸ್ ಪಕ್ಷದ ನಾಯಕರು ನಿಷ್ಟೇ ತೋರಬೇಕು. ಹೀಗಾಗಿ ಅವರು ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದರು.

    ಮುಖ್ಯಮಂತ್ರಿ ಸ್ಥಾನದಲ್ಲಿರುವ ಎಚ್.ಡಿ.ಕುಮಾರಸ್ವಾಮಿ ಅವರು ದಂಗೆಗೆ ಪ್ರಚೋದನೆ ನೀಡುವುದು ಸರಿಯಲ್ಲ. ಕುಮಾರಸ್ವಾಮಿ ಅವರನ್ನು ಸಮೀಪದಿಂದ ನೋಡಿದ್ದೇನೆ. ಅವರು ಸುಳ್ಳು ಕಾಗದ ಪತ್ರಗಳನ್ನು ಸೃಷ್ಟಿಸಿ, ಇತರರನ್ನು ಹೆದರಿಸುತ್ತಾರೆ. ಈಗಾಗಲೇ ಅವರ ಸುತ್ತ ಅನೇಕ ಹಗರಣಗಳಿದ್ದು, ಜಂತಕಲ್ ಮೈನಿಂಗ್ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಸದ್ಯದಲ್ಲಿಯೇ ಕುಮಾರಸ್ವಾಮಿ ಜೈಲು ಸೇರಲಿದ್ದಾರೆ ಎಂದು ಯತ್ನಾಳ್ ಭವಿಷ್ಯ ನುಡಿದರು.

    ನೀವು ಹೇಗೆ ಮಾತನಾಡಿದಂತೆ ನಾವು ಹಾಗೇ ಮಾತನಾಡುತ್ತೇವೆ. ನಿಮ್ಮ ಹೇಳಿಕೆಗಳಿಗೆ ಯಾವ ಶೈಲಿಯಲ್ಲಿ ಟಾಂಗ್ ಕೊಡಬಹುದು ಅಂತ ನಮಗೂ ಗೊತ್ತಿದೆ. ನಿಮಗೆ ನೋವಾಗಿದ್ದರೆ, ಬೇಜಾರಾಗಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv