Tag: MLA Gowrishankar

  • ಸುರೇಶ್‌ ಗೌಡ ಕೊಲೆಗೆ ಸುಪಾರಿ ಆರೋಪ – ಶಾಸಕ ಗೌರಿಶಂಕರ ಸೇರಿ ಮೂವರ ವಿರುದ್ಧ FIR

    ಸುರೇಶ್‌ ಗೌಡ ಕೊಲೆಗೆ ಸುಪಾರಿ ಆರೋಪ – ಶಾಸಕ ಗೌರಿಶಂಕರ ಸೇರಿ ಮೂವರ ವಿರುದ್ಧ FIR

    ತುಮಕೂರು: ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ (Suresh Gowda) ಅವರನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ತುಮಕೂರು ಗ್ರಾಮಾಂತರದ ಹಾಲಿ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ (Gowrishankar) ಸೇರಿದಂತೆ ಒಟ್ಟು ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಸುರೇಶ್ ಗೌಡರು ಕೊಟ್ಟ ದೂರಿನ ಅನ್ವಯ ತುಮಕೂರಿನ (Tumakuru) ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಗ್ರಾಮಾಂತರ ಶಾಸಕ ಗೌರಿಶಂಕರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ, ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇದನ್ನೂ ಓದಿ: ಸುರೇಶ್ ಗೌಡ ಕೊಲೆಗೆ ಸುಪಾರಿ ಆರೋಪ- 5 ಕೋಟಿ ಡೀಲ್ ನಡೆದಿದೆ ಎಂದ ಮಾಜಿ ಶಾಸಕ

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಗೌರಿಶಂಕರ ಅಕ್ರಮ ಎಸಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಆಯೋಗಕ್ಕೆ ದೂರು‌ ನೀಡಿದ್ದರು. ಅಲ್ಲದೇ ನಕಲಿ ಬಾಂಡ್ ಹಂಚಿ ಮತದಾರರಿಗೆ ಮೋಸ ಮಾಡಿದ್ದಾರೆ ಎಂದು ದೂರಿದ್ದರು. ಈ ದೂರಿ‌ನಿಂದ ಶಾಸಕ ಗೌರಿಶಂಕರ ಕೆರಳಿ ನನ್ನ ಕೊಲೆ ಮಾಡಲು ಸುಪಾರಿ ನೀಡಿದ್ದಾರೆ ಎಂದು ಸುರೇಶ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ತುಮಕೂರಿನ ಮಾಜಿ ಮೇಯರ್ ಗಡ್ಡ ರವಿಯನ್ನು ಕೊಲೆ ಮಾಡಿ ಜೈಲಿನಲ್ಲಿದ್ದ ರೌಡಿಶೀಟರ್ ಸುಜಯ್ ಭಾರ್ಗವ್‌ಗೆ ಸುಮಾರು 5 ಕೋಟಿ ರೂ.ಗೆ ಸುಪಾರಿ ನೀಡಲಾಗಿದೆ. ಅದರ ವೆಚ್ಚವನ್ನು ತುಮಕೂರು ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಗೋಲ್ಡ್‌ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಭರಿಸುವ ಪ್ಲಾನ್ ಮಾಡಿದ್ದಾರೆ ಎಂದು ದೂರಲಾಗಿದೆ. ಅಲ್ಲದೇ ಭಾರಿ ವಾಹನ ಹತ್ತಿಸಿ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸುವ ಸಂಚು ರೂಪಿಸಿದ್ದಾರೆ ಎಂದು ಸುರೇಶ್ ಗೌಡ ದೂರಿದ್ದಾರೆ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಶಾಸಕ ಗೌರಿಶಂಕರ್‌ಗೆ ಥೈಲ್ಯಾಂಡ್ ಅಂದರೆ ಬಲು ಪ್ರೀತಿ, ಗೋವಾ ಅಂದರೆ ಮೋಜು, ಅಸೆಂಬ್ಲಿ ಅಂದರೆ ಅಲರ್ಜಿ: ಸುರೇಶ್ ಗೌಡ

    Live Tv
    [brid partner=56869869 player=32851 video=960834 autoplay=true]

  • ರಾಜಣ್ಣ ನೀನೊಬ್ಬನೇ ಗಂಡಸಲ್ಲ, ತಾಕತ್ತಿದ್ರೆ ಯುದ್ಧಕ್ಕೆ ಬಾ : ಶಾಸಕ ಗೌರಿಶಂಕರ್ ಕಿಡಿ

    ರಾಜಣ್ಣ ನೀನೊಬ್ಬನೇ ಗಂಡಸಲ್ಲ, ತಾಕತ್ತಿದ್ರೆ ಯುದ್ಧಕ್ಕೆ ಬಾ : ಶಾಸಕ ಗೌರಿಶಂಕರ್ ಕಿಡಿ

    – ಕಾಂಗ್ರೆಸ್ ಜೊತೆಗೆ ಮೈತ್ರಿಯೇ ಬೇಡ

    ತುಮಕೂರು: ರಾಜಣ್ಣ ನೀನೊಬ್ಬನೇ ಗಂಡಸಲ್ಲ, ತಾಕತ್ತಿದ್ದರೆ ಬಹಿರಂಗವಾಗಿ ಯುದ್ಧ ಮಾಡೋಣ ಬಾ ಎಂದು ಜೆಡಿಎಸ್ ಶಾಸಕ ಗೌರಿಶಂಕರ್, ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರಿಗೆ ಪಂಥಾಹ್ವಾನ ನೀಡಿದ್ದಾರೆ.

    ನಗರದಲ್ಲಿ ಇಂದು ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿ ಶಾಸಕರು, ರಾಜಕಾರಣದಲ್ಲಿ ಕೆ.ಎನ್.ರಾಜಣ್ಣ ಅವರು ಜಾತಿಯನ್ನು ಪ್ರಸ್ತಾಪಿಸುತ್ತಾರೆ. 2008ರ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ನನ್ನನ್ನು ಗೋಲಿ ಆಡುವ ಹುಡುಗ ಎಂದು ಗೇಲಿ ಮಾಡಿದ್ದರು. ಆದರೆ ನಾನು ನಿಮ್ಮನ್ನು ಸೋಲಿಸಿ ಮನೆಗೆ ಕಳುಹಿಸಿದೆ. ಮಾತನಾಡುವಾಗ ಯೋಚನೆ ಮಾಡಿ ರಾಜಣ್ಣ ಅವರೇ ಎಂದು ಗುಡುಗಿದರು.

    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇಲ್ಲದೇ ಇದ್ದರೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತಿದ್ದರು. ಸಿಎಂ ಕುಮಾರಸ್ವಾಮಿ, ದೇವೇಗೌಡರು ನನ್ನ ಪಕ್ಷದಿಂದ ಹೊರಹಾಕಿದರೂ ಪರವಾಗಿಲ್ಲ. ಈ ಮೈತ್ರಿ ಸಹವಾಸ ನಮಗೆ ಬೇಡ ಎಂದು ನೇರವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

    ಅಲ್ಲಿ ಆಪರೇಷನ್, ಅವರು ಗೋವಾಗೆ ಹೋದರು, ದೆಹಲಿಗೆ ಹೋದರು, ಸರ್ಕಾರ ಬಿದ್ದೊಯ್ತು ಎಂದು ಕೇಳುವುದೇ ಆಗಿದೆ. ಇದರಿಂದ ಜನರು ಬೇಸತ್ತು ಹೋಗಿದ್ದಾರೆ. ಇದರಿಂದಾಗಿ ಎಚ್.ಡಿ.ದೇವೇಗೌಡ ಅವರು ತುಮಕೂರಿನಲ್ಲಿ ಸೋತರು ಎಂದು ಮೈತ್ರಿ ಪಕ್ಷ ಕಾಂಗ್ರೆಸ್ ವಿರುದ್ಧ ಗುಡುಗಿದರು.