Tag: MLA Prasad Abbayya

  • ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕರಿಗೂ ಅಂಟಿದ ಕೊರೊನಾ ಸೋಂಕು!

    ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕರಿಗೂ ಅಂಟಿದ ಕೊರೊನಾ ಸೋಂಕು!

    ಹುಬ್ಬಳ್ಳಿ: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

    ನಿನ್ನೆ ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದರಿಂದ ಗುರುವಾರ ಕಿಮ್ಸ್ ಗೆ ದಾಖಲಾಗಿದ್ದರು. ನಿನ್ನೆಯೇ ಶಾಸಕರ ಗಂಟಲ ದ್ರವ ಪರೀಕ್ಷೆ ಮಾಡಲಾಗಿತ್ತು. ಇಂದು ವರದಿ ಕೈ ಸೇರಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತ ಶಾಸಕರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

    ಶಾಸಕರಿಗೆ ಸೋಂಕು ದೃಢಪಟ್ಟಿದ್ದರಿಂದ ಅವರ ತಾಯಿ. ಪತ್ನಿ ಹಾಗೂ ಇಬ್ಬರು ಮಕ್ಕಳು ಹಾಗೂ ಸಹೋದರ ಸೇರಿದಂತೆ. ಕಾರು ಚಾಲಕ, ಗನ್ ಮ್ಯಾನ್ ಅವರ ಗಂಟಲು ದ್ರವ ಸಂಗ್ರಹ ಮಾಡಲಾಗಿದೆ. ಇನ್ನು ಅವರ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್ ಗೆ ಕಳುಹಿಸಲಾಗಿದೆ.

    ಶಾಸಕರಿಗೆ ಸೊಂಕು ದೃಢಪಡುತ್ತಿದ್ದಂತೆ ಶಾಸಕರು ಅಂಬುಲೈನ್ಸ್ ಗೆ ಕಾಯದೇ ಸ್ವಪ್ರೇರಣೆಯಾಗಿ ಕಾರು ಚಲಾಯಿಸಿಕೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲು ಆಗಿದ್ದಾರೆ. ಸೋಂಕು ದೃಢ ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಅಲ್ಲದೇ ತಮನ್ನು ಭೇಟಿ ಮಾಡಿರುವ ರೋಗದ ಲಕ್ಷಣ ಹೊಂದಿರುವವರು ಕೂಡ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.