Tag: MLA Ramdas

  • ಮೋದಿ ಅವರಿಂದ್ಲೆ ಬೆನ್ನು ತಟ್ಟಿಸಿಕೊಂಡಿರುವ ರಾಮದಾಸ್‌ಗೆ ಕಿರುಕುಳ ಕೊಡುವಷ್ಟು ಶಕ್ತಿ ನನಗಿಲ್ಲ – ಪ್ರತಾಪ್‌ ಸಿಂಹ

    ಮೋದಿ ಅವರಿಂದ್ಲೆ ಬೆನ್ನು ತಟ್ಟಿಸಿಕೊಂಡಿರುವ ರಾಮದಾಸ್‌ಗೆ ಕಿರುಕುಳ ಕೊಡುವಷ್ಟು ಶಕ್ತಿ ನನಗಿಲ್ಲ – ಪ್ರತಾಪ್‌ ಸಿಂಹ

    ಮೈಸೂರು: ಪ್ರಧಾನಿ ಮೋದಿ (Narendra Modi) ಅವರಿಂದಲೇ ಬೆನ್ನಿಗೆ ಗುದ್ದು ಕೊಡಿಸಿಕೊಂಡ ರಾಮದಾಸ್‌ (S.A.Ramdas) ಅವರಿಗೆ ಕಿರುಕುಳ ಕೊಡುವ ಶಕ್ತಿ ನನಗೆ ಎಲ್ಲಿದೆ ಹೇಳಿ ಎಂದು ಶಾಸಕ ಎಸ್‌.ಎ.ರಾಮದಾಸ್‌ ಆರೋಪಕ್ಕೆ ಸಂಸದ ಪ್ರತಾಪ್‌ ಸಿಂಹ (Pratap Simha) ತಿರುಗೇಟು ನೀಡಿದ್ದಾರೆ.

    ಗುಂಬಜ್‌ (Gumbaz) ಮಾದರಿಯಲ್ಲಿ ಮೈಸೂರು ಬಸ್‌ ನಿಲ್ದಾಣ (Mysuru Bus Stand) ನಿರ್ಮಾಣ ವಿವಾದದ ವಿಚಾರ ಮುಂದಿಟ್ಟುಕೊಂಡು ನನ್ನನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡಲಾಗುತ್ತಿದೆ ಎಂಬ ಶಾಸಕ ರಾಮದಾಸ್‌ ಆರೋಪಕ್ಕೆ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ಪಕ್ಷದಿಂದ ಬಿಡಿಸಲು ಕಿರುಕುಳ- ರಾಮ್‍ದಾಸ್ ಪರೋಕ್ಷ ಆರೋಪ

    ರಾಮದಾಸ್ ನಮ್ಮ ಹಿರಿಯ ನೇತಾರರು. ಗುಂಬಜ್ ಹೊಡೆದರೆ ಟಿಪ್ಲು ಅನುಯಾಯಿಗಳಿಗೆ ಕಿರುಕುಳ ಆಗುತ್ತದೆ. ಶಿವಾಜಿ ಅನುಯಾಯಿಗಳಿಗೆ ಕಿರುಕುಳ ಅನಿಸುವುದಿಲ್ಲ. ರಾಮದಾಸ್ ಅವರು ಯಾವ ಅರ್ಥದಲ್ಲಿ ತಮಗೆ ಕಿರುಕುಳ ಆಗಿದೆ ಎಂದು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.

    ಮೈಸೂರಿನ ರಾಜಕಾರಣಿಗಳ ಬಳಿ ನನ್ನನ್ನೆ ಸುಟ್ಟು ಹಾಕುವಷ್ಟು ಹಣವಿದೆ. ಅವರಿಗೆ ಕಿರುಕುಳ ಕೊಡುವಷ್ಟು ಶಕ್ತಿವಂಥ ನಾನಲ್ಲ. ನಾನು ರಿಯಲ್ ಎಸ್ಟೇಟ್ ಮಾಡಲು ರಾಜಕಾರಣಕ್ಕೆ ಬಂದಿಲ್ಲ. ಮೈಸೂರಿನ ರಾಜಕಾರಣಿಗಳ ಜೊತೆ ಸೇರಿಕೊಂಡು ವ್ಯವಹಾರ ಮಾಡುವ ಅವಶ್ಯಕತೆ ಇಲ್ಲ. ನಾನು ಅಭಿವೃದ್ಧಿಗಾಗಿ ರಾಜಕಾರಣ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿವಾದಿತ ಗುಂಬಜ್ ತೆರವಿಗೆ ಪ್ರತಾಪ್ ಸಿಂಹ ಕೊಟ್ಟಿದ್ದ ಡೆಡ್‍ಲೈನ್ ಅಂತ್ಯ- ಇಂದು ತೆರವಿಗೆ ಮುಂದಾಗ್ತರಾ ಸಂಸದರು?

    ರಾತ್ರಿ ಕೆಲಸ ಮಾಡುವುದು ಕಳ್ಳರು. ರಾತ್ರಿ ಯಾಕೆ ಬಸ್ ನಿಲ್ದಾಣದ ಕೆಲಸ ಮಾಡಬೇಕು? ಬಸ್ ನಿಲ್ದಾಣಕ್ಕೆ ಹೆಸರಿಡಲು ಕಾನೂನಿದೆ. ರಾತ್ರೋರಾತ್ರಿ ಹೇಗೆ ಹೆಸರಿಟ್ಟರು. ಈ ವಿಚಾರದಲ್ಲಿ ಎಲ್ಲಾ ಕಾನೂನು ಉಲ್ಲಂಘನೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಧ್ಯ ಪ್ರವೇಶಿಸಿದೆ. ಅವರೇ ಅನಧಿಕೃತ ಕಟ್ಟಡ ಎಂದು ಹೇಳಿದ್ದಾರೆ. ಅವರು ತೆರವು ಮಾಡಬಹುದು. ಮೂಲ ವಿನ್ಯಾಸದಲ್ಲಿ ಗುಂಬಜ್ ಇಲ್ಲ. ಹೊಸ ವಿನ್ಯಾಸದಲ್ಲಿ ಗುಂಬಜ್ ಇದೆ. ಆ ನಕ್ಷೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಹಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೊಟ್ಟ ಗಡುವು ಮುಗಿದ ಮೇಲೆ ಏನಾಗುತ್ತೋ ನೋಡೋಣ ಎಂದು ಹೇಳಿದ್ದಾರೆ.

    ನಾನು ಅಂದುಕೊಂಡಿದ್ದನ್ನು ಸಾಧಿಸಿ ತೋರಿಸಿದ್ದೇನೆ. ಟಿಪ್ಪು ಏಕ್ಸ್‌ಪ್ರೆಸ್‌ ಬದಲಾಯಿಸುತ್ತೇನೆ ಎಂದು ಹೇಳಿದ್ದೆ, ಬದಲಾಯಿಸಿದ್ದೇನೆ. ಮಹಿಷಾ ದಸರಾ ನಿಲ್ಲಿಸಿದ್ದೇನೆ. ಗುಂಬಜ್ ವಿಚಾರದಲ್ಲೂ ನನ್ನ ಮಾತಿಗೆ ಬದ್ಧ. ಬಸ್ ನಿಲ್ದಾಣದ ಮೇಲಿನ ಅನಧಿಕೃತ ಗುಂಬಜ್ ತೆರವು ಮಾಡಲೇಬೇಕು. ಮೈಸೂರಿನ ಅಭಿವೃದ್ಧಿ ಕಾರ್ಯಗಳು ಮಹಾರಾಜರ ಹೆಸರು ಹೇಳಬೇಕೆ ವಿನಃ ಅವರ ಶತೃಗಳ ಹೆಸರಲ್ಲ. ಗುಂಬಜ್ ಬಗ್ಗೆ ಪರಿಶೀಲನೆಗೆ ಹೊಸ ತಜ್ಞರ ಸಮಿತಿ ಅವಶ್ಯಕತೆ ಇಲ್ಲ. ಕೆಆರ್‌ಐಡಿಎಲ್‌ನ ತಜ್ಞರೇ ಮೂಲ ನಕ್ಷೆಗೆ ಅನುಮತಿ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗುಂಬಜ್ ಗುದ್ದಾಟಕ್ಕೆ ಟ್ವಿಸ್ಟ್ – ಬಸ್‌ನಿಲ್ದಾಣದ ಜಾಗ ನಮ್ಮದು, ತೆರವು ಮಾಡಿ ಎಂದ NHAI

    Live Tv
    [brid partner=56869869 player=32851 video=960834 autoplay=true]

  • BJPvsBJP; ಶಾಸಕರು ಕಟ್ಟಿಸಿದ ಬಸ್‌ ನಿಲ್ದಾಣವನ್ನು ಸಂಸದ ಒಡೆಯಲು ಹೊರಟಿದ್ದಾರೆ – ಕಾಂಗ್ರೆಸ್‌ ಲೇವಡಿ

    BJPvsBJP; ಶಾಸಕರು ಕಟ್ಟಿಸಿದ ಬಸ್‌ ನಿಲ್ದಾಣವನ್ನು ಸಂಸದ ಒಡೆಯಲು ಹೊರಟಿದ್ದಾರೆ – ಕಾಂಗ್ರೆಸ್‌ ಲೇವಡಿ

    ಬೆಂಗಳೂರು: ಗುಂಬಜ್‌ ಮಾದರಿಯ ಬಸ್‌ ನಿಲ್ದಾಣ ವಿಚಾರವಾಗಿ ಬಿಜೆಪಿಯ ಕೆ.ಆರ್‌.ಕ್ಷೇತ್ರ ಶಾಸಕ ಎಸ್‌.ಎ.ರಾಮದಾಸ್‌ (S.A.Ramdas) ಹಾಗೂ ಸಂಸದ ಪ್ರತಾಪ್‌ ಸಿಂಹ (Pratap Simha) ನಡುವೆ ಮುಸುಕಿನ ಗುದ್ದಾಟ ಮತ್ತೆ ಶುರುವಾಗಿದೆ. ಇದನ್ನು ‘BJPvsBJPʼ ಎಂದು ಟ್ವೀಟ್‌ ಮಾಡಿ ಕಾಂಗ್ರೆಸ್‌ (Congress) ಕಾಲೆಳೆದಿದೆ.

    ಕಾಂಗ್ರೆಸ್‌ ಟ್ವೀಟ್‌ನಲ್ಲೇನಿದೆ?
    BJPvsBJP ಕಿಚ್ಚು ಎಷ್ಟಿದೆ ಎನ್ನಲು ಮೈಸೂರಿನಲ್ಲಿ ನಡೆಯುತ್ತಿರುವ ಪ್ರತಾಪ್ ಸಿಂಹ vs ರಾಮದಾಸ್ ಕಾಳಗವೇ ಸಾಕ್ಷಿ. ಶಾಸಕರು ಕಟ್ಟಿಸಿದ ಬಸ್ ನಿಲ್ದಾಣವನ್ನು ಸಂಸದ ಒಡೆಯಲು ಹೊರಟಿದ್ದಾರೆ! ಬೇರೆಯವರ ಮನೆಯ ದೋಸೆಯ ತೂತನ್ನು ಹುಡುಕುವ ಬದಲು ಬಿಜೆಪಿಯವರು ತಮ್ಮ ಮನೆಯ ಕಾವಲಿಯ ತೂತನ್ನು ನೋಡಿಕೊಂಡರೆ ಒಳಿತು! ಇದನ್ನೂ ಓದಿ: ಪಾರಂಪರಿಕವಾಗಿ ಗುಂಬಜ್ ನಿರ್ಮಾಣ – ತಜ್ಞರನ್ನು ಕಳಿಸಲು ಸರ್ಕಾರಕ್ಕೆ ರಾಮದಾಸ್ ಪತ್ರ

    ಮೈಸೂರಿನಲ್ಲಿ ಗುಂಬಜ್‌ ಮಾದರಿಯಲ್ಲಿ ಬಸ್‌ ನಿಲ್ದಾಣವೊಂದನ್ನು ನಿರ್ಮಿಸಲಾಗಿದೆ. ನಾನು ನೀಡಿರುವ ಗಡುವಿನಲ್ಲಿ ಅದನ್ನು ತೆರವುಗೊಳಿಸದಿದ್ದರೆ, ನಾನೇ ತೆರವುಗೊಳಿಸುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ ಎಚ್ಚರಿಕೆ ನೀಡಿದ್ದರು.

    ಇದಕ್ಕೆ ಪ್ರತಿಕ್ರಿಯಿಸಿರುವ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್‌, ಅದು ಅರಮನೆಯ ಮಾದರಿಯದ್ದು. ಧರ್ಮದ ಆಧಾರದ್ದಲ್ಲ. ಪಾರಂಪರಿಕ ನಗರಿಯ ಮಹತ್ವ ಸಾರಲು ಅರಮನೆ ವಿನ್ಯಾಸದ ಮಾದರಿಯಲ್ಲಿ ಬಸ್‌ ಪ್ರಯಾಣಿಕರ ತಂಗುದಾಣ ನಿರ್ಮಿಸಲಾಗುತ್ತಿದೆ. ಗುಂಬಜ್‌ ಮಾದರಿಯಲ್ಲಿದೆ ಎಂದು ತಪ್ಪಾಗಿ ಅರ್ಥೈಸಲಾಗುತ್ತಿದೆ. ಗುತ್ತಿಗೆದಾರ ಮುಸ್ಲಿಂ ಎಂದು ವದಂತಿ ಹಬ್ಬಿಸುತ್ತಿರುವ ಕುರಿತು ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದು ದೂರು ನೀಡಿದ್ದೇನೆ. ಇದನ್ನು ಧರ್ಮಕ್ಕೆ ಥಳಕು ಹಾಕುವುದು ಸರಿಯಲ್ಲ ಎಂದು ಪ್ರತಾಪ್‌ ಸಿಂಹ ಹೇಳಿಕೆಗೆ ಟಾಂಗ್‌ ನೀಡಿದ್ದಾರೆ. ಇದನ್ನೂ ಓದಿ: ಬಸ್ ನಿಲ್ದಾಣ ತೆರವು ಮಾಡಲ್ಲ, ಗುಂಬಜ್ ಮಾತ್ರ ತೆರವು ಮಾಡ್ತೇನೆ: ಪ್ರತಾಪ್ ಸಿಂಹ

    Live Tv
    [brid partner=56869869 player=32851 video=960834 autoplay=true]

  • ಶಾಸಕ ರಾಮದಾಸ್ ಕಾರು ಅಪಘಾತ

    ಶಾಸಕ ರಾಮದಾಸ್ ಕಾರು ಅಪಘಾತ

    ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿನ ಗೋಡೆಗೆ ಕಾರು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ರಾಮದಾಸ್ ಅಪಾಯದಿಂದ ಪಾರಾಗಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಾಲ್ಸೂರಿನಲ್ಲಿ ಈ ಅವಘಡ ಸಂಭವಿಸಿದ್ದು, ಶಾಸಕ ರಾಮದಾಸ್ ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರು ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಳ್ಯ ಜಾಲ್ಸೂರಿನಲ್ಲಿ ಕಾರು ರಸ್ತೆಯಲ್ಲಿನ ಗೋಡೆಗೆ ಡಿಕ್ಕಿ ಹೊಡೆದಿದೆ.

    ಅವಘಡದಿಂದ ಶಾಸಕ ರಾಮದಾಸ್ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ತಕ್ಷಣ ಸ್ಥಳದಲ್ಲಿದ್ದವರು ರಾಮದಾಸ್ ಮತ್ತು ಚಾಲಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸ್ವಲ್ಪ ಡ್ಯಾಮೇಜ್ ಆಗಿದೆ.

  • ಬಹಿರಂಗ ಚರ್ಚೆಗೆ ನಾವು ಸಿದ್ಧ – ಸಿದ್ದರಾಮಯ್ಯ ಸವಾಲು ಸ್ವೀಕರಿಸಿದ ಬಿಜೆಪಿ

    ಬಹಿರಂಗ ಚರ್ಚೆಗೆ ನಾವು ಸಿದ್ಧ – ಸಿದ್ದರಾಮಯ್ಯ ಸವಾಲು ಸ್ವೀಕರಿಸಿದ ಬಿಜೆಪಿ

    ಮೈಸೂರು: ಬಿಜೆಪಿಯ ರಾಜ್ಯ ಸಂಸದರು ಯಾವುದೇ ಕೆಲಸವನ್ನು ಮಾಡಿಲ್ಲ ಎಂದು ಆರೋಪಿಸಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಬಿಜೆಪಿಯವರು ಬರುತ್ತಾರಾ ಎಂದು ಪ್ರಶ್ನಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸವಾಲನ್ನು ಬಿಜೆಪಿ ಸ್ವೀಕರಿಸಿದೆ.

    ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ರಾಮದಾಸ್ ಅವರು ಸೂಕ್ತ ದಾಖಲೆಗಳನ್ನು ಜನರ ಮುಂದಿಟ್ಟು ಚರ್ಚೆ ಮಾಡೋಣ ಎಂದು ಬಿಜೆಪಿ ಶಾಸಕ ರಾಮದಾಸ್ ಪ್ರತಿ ಸವಾಲು ಎಸೆದಿದ್ದಾರೆ. ಇದನ್ನು ಓದಿ: ನಾವು ಮಾಡಿದ ಕೆಲಸವನ್ನು ತಾನು ಮಾಡಿದ್ದೆಂದು ಹೇಳಿ ತಿರುಗುತ್ತಿದ್ದಾನೆ – ಸಿದ್ದರಾಮಯ್ಯ 

    ಬಿಜೆಪಿ ಸಂಸದರ ಕೆಲಸದ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧರಾಗಿದ್ದೇವೆ. ಮೈಸೂರಿಗೆ ರಾಜ್ಯದ ಎಲ್ಲಾ ಬಿಜೆಪಿ ಸಂಸದರರನ್ನು ಕರೆಸುತ್ತೇವೆ. ನಿಮ್ಮ ಯುಪಿಎ ಹಾಗೂ ನಮ್ಮ ಸರ್ಕಾರದ ಸಾಧನೆ ಬಗ್ಗೆಯೂ ಚರ್ಚೆ ಮಾಡೋಣ. ದಾಖಲಾತಿಗಳ ಜೊತೆಗೆ ಚರ್ಚೆ ಮಾಡೋಣ ಬನ್ನಿ ಎಂದು ಪ್ರತಿ ಸವಾಲು ಹಾಕಿದ್ದಾರೆ.

    ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸಮಯ ಹಾಗೂ ಸ್ಥಳ ನಿಗದಿ ಮಾಡುವಂತೆ ನಾನೇ ಕೋರುತ್ತೇನೆ. ದೇಶದ ಮೇಲೆ ಆಗಿರುವ ಭಯೋತ್ಪಾದಕ ದಾಳಿಯ ಬಗ್ಗೆಯೂ ಕೂಡ ಇದೇ ವೇಳೆ ಚರ್ಚೆ ನಡೆಸಲು ನಾವು ಸಿದ್ಧ ಎಂದಿದ್ದಾರೆ.

    ಇಂದು ಮೈಸೂರಿನಲ್ಲಿ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ನಾನು, ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿಪಡಿಸುವಾಗ ಸಂಸದ ಪ್ರತಾಪ್ ಸಿಂಹ ಎಲ್ಲಿದ್ದ? ಮೈಸೂರಿಗೆ ಅವನ ಕೊಡುಗೆ ಏನು? ನಾವು ಮಾಡಿದ ಕೆಲಸವನ್ನು ನಾನು ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾನೆ ಎಂದು ನಾನು ಪ್ರತಾಪ್ ಸಿಂಹ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಪ್ರತಾಪ್ ಸಿಂಹ ಅಷ್ಟೇ ಅಲ್ಲ ಬಿಜೆಪಿಯ ರಾಜ್ಯ ಸಂಸದರು ಯಾವುದೇ ಕೆಲಸವನ್ನು ಮಾಡಿಲ್ಲ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದರು.

    ಚಾಮರಾಜನಗರ ಕ್ಷೇತ್ರದ ಹಾಲಿ ಸಂಸದ ಧ್ರುವನಾರಾಯಣ ಅವರ ಜೊತೆಗೆ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಬಿಜೆಪಿಯವರು ಬರುತ್ತಾರಾ? ಸಂಸದೆ ಶೋಭಾ ಕರಂದ್ಲಾಜೆ ಬರುತ್ತಾರಾ? ಇಲ್ಲವೇ ಸಂಸದರಾದ ನಳಿನ್ ಕುಮಾರ್ ಹಾಗೂ ಅನಂತಕುಮಾರ್ ಹೆಗ್ಡೆ ಚರ್ಚೆಗೆ ಬರುತ್ತಾರಾ? ಬಿಜೆಪಿ ಸಂಸದರು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾಡದೇ ಸುಮ್ಮನೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಾದಯಾತ್ರೆಯ ವೇಳೆ ಶಾಸಕ ರಾಮದಾಸ್‍ಗೆ ಮಹಿಳೆಯಿಂದ ತರಾಟೆ

    ಪಾದಯಾತ್ರೆಯ ವೇಳೆ ಶಾಸಕ ರಾಮದಾಸ್‍ಗೆ ಮಹಿಳೆಯಿಂದ ತರಾಟೆ

    ಮೈಸೂರು: ಕ್ಷೇತ್ರದ ಸಮಸ್ಯೆಗಳನ್ನು ತಿಳಿಯಲು ಕೃಷ್ಣರಾಜ ಕ್ಷೇತ್ರದ ಶಾಸಕ ರಾಮದಾಸ್ ಕೈಗೊಂಡಿದ್ದ ಪಾದಯಾತ್ರೆ ವೇಳೆ ಮಹಿಳೆಯೊಬ್ಬರು ಶಾಸಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಇಂದು ಮೈಸೂರಿನ ಕೆಆರ್ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಎಸ್‍ಎ ರಾಮದಾಸ್ ಕೆಲ ಪ್ರದೇಶದಲ್ಲಿ ಪಾದಯಾತ್ರೆ ನಡೆಸಿ ಸಮಸ್ಯೆ ಆಲಿಸಿದರು. ಆದರೆ ಈ ವೇಳೆ ಕೆಆರ್ ಕ್ಷೇತ್ರದ ವಾರ್ಡ್ ನಂ.1 ರ ಮಹಿಳೆ ನಿವಾಸಿಯೊಬ್ಬರು ಶಾಸಕರಿಗೆ ತಮ್ಮ ಸಮಸ್ಯೆಗಳನ್ನು ಹೇಳಿ ತರಾಟೆ ತೆಗೆದುಕೊಂಡಿದ್ದಾರೆ.

    ಮಹಿಳೆ ಸಮಸ್ಯೆ ಏನು?
    ಕೃಷ್ಣರಾಜ ಕ್ಷೇತ್ರದ ವಾರ್ಡ್ ನಂ.1 ರಲ್ಲಿ ಈ ಘಟನೆ ನಡೆದಿದ್ದು, ವಾರ್ಡ್ ನಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಮಾಡಿಲ್ಲ. ಇದರಿಂದ ಮಳೆ ಬಂದ ವೇಳೆ ಮಳೆ ನೀರಿ ಸೇರಿದಂತೆ ಚರಂಡಿ ಕೊಳಚೆ ನೀರು ಮನೆಗೆ ನುಗ್ಗುತ್ತದೆ ಎಂದು ಹೇಳಿದರು. ಅಲ್ಲದೇ ಈ ಕುರಿತು ಹಲವು ಬಾರಿ ವಾರ್ಡ್ ಸದಸ್ಯರಿಗೆ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಏರು ಧ್ವನಿಯಲ್ಲಿ ಆರೋಪಿಸಿದ್ದರು.

    ಅನಿರೀಕ್ಷಿತ ಘಟನೆಯಿಂದ ವಿಚಲಿತರಾದ ಶಾಸಕರು ಬಳಿಕ ಮಹಿಳೆಗೆ ಸಮಾಧಾನ ಪಡಿಸಲು ಯತ್ನಿಸಿದರು. ಈ ವೇಳೆಯೂ ಮಹಿಳೆ ಸಮಾಧಾನಗೊಳ್ಳದ ಕಾರಣ ವಾಗ್ವಾದ ನಡೆಯಿತು. ಬಳಿಕ ಶಾಸಕರು ಸ್ವತಃ ವಾರ್ಡ್ ಗೆ ತೆರಳಿ ಪರಿಶೀಲನೆ ನಡೆಸಿ ಬಳಿಕ ಸಮಸ್ಯೆ ಪರಿಹರಿಸುವ ಕುರಿತು ಆಶ್ವಾಸನೆ ನೀಡಿದ್ದಾರೆ.

  • ಶಾಸಕ ರಾಮ್‍ದಾಸ್ ಕಚೇರಿ ಎದುರು ಪ್ರೇಮಕುಮಾರಿ ಆತ್ಮಹತ್ಯೆಗೆ ಯತ್ನ

    ಶಾಸಕ ರಾಮ್‍ದಾಸ್ ಕಚೇರಿ ಎದುರು ಪ್ರೇಮಕುಮಾರಿ ಆತ್ಮಹತ್ಯೆಗೆ ಯತ್ನ

    ಮೈಸೂರು: ಶಾಸಕ ರಾಮದಾಸ್ ಮನೆ ಹಾಗೂ ಕಚೇರಿ ಮುಂದೆ ಪ್ರೇಮಕುಮಾರಿ ಹೈಡ್ರಾಮಾ ನಡೆಸಿದ್ದು, ತಮ್ಮ ವೇಲ್‍ನ್ನು ಕತ್ತಿಗೆ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಚುನಾವಣೆ ಸಂದರ್ಭದಲ್ಲಿ ರಾಮದಾಸ್ ಅವರು ನೀಡಿದ್ದ ಮಾತು ತಪ್ಪಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿರುವ ಪ್ರೇಮಕುಮಾರಿ, ಮದುವೆ ಮಾಡಿಕೊಳ್ಳುತ್ತೇನೆ ಎಂದು ನಂಬಿಸಿ ಚುನಾವಣೆಯ ನಾಮಪತ್ರ ಪಡೆದಿದ್ದರು. ಆದರೆ ಈಗ ಮೋಸ ಮಾಡಿದ್ದಾರೆ ಎಂದು ಗೋಳಾಟ ನಡೆಸಿದರು.

    ಈ ವೇಳೆ ಸ್ಥಳಕ್ಕೆ ಬಂದ ವಿದ್ಯಾರಣ್ಯಪುರಂ ಠಾಣೆಯ ಪೊಲೀಸರು ಪ್ರೇಮಾ ಅವರ ಮನವೊಲಿಸಲು ಯತ್ನಿಸಿದ್ದರು. ಆದರೆ ಪೊಲೀಸರ ಮನವೊಲಿಕೆಗೂ ಬಗ್ಗದ ಪ್ರೇಮಕುಮಾರಿ ತನಗೆ ಆಗಿರುವ ಅನ್ಯಾಯಕ್ಕೆ ಪ್ರತಿಭಟನೆ ನಡೆಸುತ್ತಿದ್ದಾಗಿ ಆಕ್ರೋಶ ವ್ಯಕ್ತಪಡಿಸಿದರು. ಸದ್ಯ ಪ್ರೇಮಕುಮಾರಿ ವಿರುದ್ಧ ಶಾಸಕ ರಾಮದಾಸ್ ಬೆಂಬಲಿಗರು ದೂರು ನೀಡಿದ್ದು, ದೂರಿನ ಅನ್ವಯ ಪ್ರೇಮಕುಮಾರಿ ಅವರನ್ನು ವಿದ್ಯಾರಣ್ಯಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆಯೂ ಶಾಸಕರ ಕಚೇರಿ ಮುಂದೇ ಆಗಮಿಸಿದ್ದ ಪ್ರೇಮಕುಮಾರಿ ರಾಮದಾಸ್ ಅವರನ್ನು ಈ ಕ್ಷಣವೇ ನೋಡಬೇಕು ಎಂದು ಪಟ್ಟು ಹಿಡಿದಿದ್ದರು. ಈ ವೇಳೆಯೂ ಪೊಲೀಸರು ಮಧ್ಯ ಪ್ರವೇಶಿಸಿ ಶಾಸಕರ ಕಚೇರಿಗೆ ಮುಂದೇ ನಿಂತು ಗಲಾಟೆ ಮಾಡುವುದು ಸರಿಯಲ್ಲ. ನಿಮ್ಮ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಿ ಎಂದು ಹೇಳಿ ಕಳುಹಿಸಿದ್ದರು.

  • ಬಿಜೆಪಿ ಶಾಸಕ ರಾಮ್‍ದಾಸ್ ಕಚೇರಿ ಎದುರು ಪ್ರೇಮಾಕುಮಾರಿ ಪ್ರತ್ಯಕ್ಷ

    ಬಿಜೆಪಿ ಶಾಸಕ ರಾಮ್‍ದಾಸ್ ಕಚೇರಿ ಎದುರು ಪ್ರೇಮಾಕುಮಾರಿ ಪ್ರತ್ಯಕ್ಷ

    – ಪೊಲೀಸರ ಮಧ್ಯಪ್ರವೇಶ ಬಳಿಕ ಜಾಗ ಖಾಲಿ

    ಮೈಸೂರು: ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಕಚೇರಿ ಮುಂದೆ ಇಂದು ಪ್ರೇಮ ಕುಮಾರಿ ಪ್ರತ್ಯಕ್ಷವಾಗಿದ್ದಾರೆ.

    ಏಕಾಏಕಿ ಮೈಸೂರು ನಗರದ ವಿದ್ಯಾರಣ್ಯಪುರದಲ್ಲಿರೋ ಶಾಸಕ ರಾಮದಾಸ್‍ರ ಕಚೇರಿ ಮುಂಭಾಗ ಆಗಮಿಸಿದ ಪ್ರೇಮಾಕುಮಾರಿ, ಕಚೇರಿಯ ಮುಂಭಾಗ ಕೆಲ ಹೊತ್ತು ಕುಳಿತು ನನಗೆ ನ್ಯಾಯ ಬೇಕು ಅಂತ ಧರಣಿ ನಡೆಸಿದರು. ಆದರೆ ಈ ವೇಳೆ ಶಾಸಕರ ಕಚೇರಿಯಲ್ಲಿ ಯಾರೂ ಇಲ್ಲದ ಕಾರಣ ಕಚೇರಿಗೆ ಬೀಗ ಹಾಕಲಾಗಿತ್ತು.

    ಪೇಮಾಕುಮಾರಿ ಅವರು ಏಕಾಏಕಿ ಆಗಮಿಸಿ ಧರಣಿ ನಡೆಸುತ್ತಿರುವ ಮಾಹಿತಿ ಪಡೆದ ಪೊಲೀಸರು ತಕ್ಷಣ ರಾಮದಾಸ್ ಅವರ ಕಚೇರಿ ಬಳಿ ಆಗಮಿಸಿದರು. ಬಳಿಕ ಪ್ರೇಮಾ ಕುಮಾರಿ ಅವರ ಜೊತೆ ಮಾತುಕತೆ ನಡೆಸಿದ ಪೊಲೀಸರು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ವೇಳೆ ಈ ರೀತಿ ಪ್ರತಿಭಟನೆ ನಡೆಸುವುದು ಮುಖ್ಯವಲ್ಲ ಎಂದು ತಿಳಿಹೇಳಿದ್ದಾರೆ. ಬಳಿಕ ಪೊಲೀಸರ ಮಧ್ಯ ಪ್ರವೇಶದಿಂದ ಪ್ರೇಮಾ ಕುಮಾರಿ ಅವರು ಸ್ಥಳದಿಂದ ತೆರಳಿದ್ದಾರೆ.

    https://www.youtube.com/watch?v=CTih6IweDE0