Tag: MLA Ramesh Jarakiholi

  • ಪಕ್ಷ ಬಿಡುವ ಮುನ್ನವೇ ‘ಕೈ’ಗೆ ಬಿಗ್ ಶಾಕ್ ನೀಡಲು ಮುಂದಾದ ರಮೇಶ್ ಜಾರಕಿಹೊಳಿ

    ಪಕ್ಷ ಬಿಡುವ ಮುನ್ನವೇ ‘ಕೈ’ಗೆ ಬಿಗ್ ಶಾಕ್ ನೀಡಲು ಮುಂದಾದ ರಮೇಶ್ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಪಕ್ಷದ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಗೂ ಮುನ್ನ ಕಾಂಗ್ರೆಸ್‍ಗೆ ಬಿಗ್ ಶಾಕ್ ಮುಂದಾಗಿದ್ದು, ಜಿಲ್ಲೆಯ ಗೋಕಾಕ್‍ನಲ್ಲಿ ಕಾಂಗ್ರೆಸ್ ಪಕ್ಷವನ್ನು ನೆಲಕಚ್ಚಿಸಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎನ್ನಲಾಗಿದೆ.

    ಹೌದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಮುನ್ನವೇ ಅಖಾಡಕ್ಕಿಳಿದ ರಮೇಶ್ ಜಾರಕಿಹೊಳಿ ಅವರು, ಸಿಂದಿಕುರಬೇಟ ಗ್ರಾಮಪಂಚಾಯಿತಿ ಅಧ್ಯಕ್ಷ ಮೊಹಮ್ಮದ್ ರಫಿಕ್ ಮಕಾಂದರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ ಎನ್ನಲಾಗಿದೆ. ರಮೇಶ್ ಅವರ ಸೂಚನೆ ಮೇರೆಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಮೊಹಮ್ಮದ್ ರಫಿಕ್ ಮಕಾಂದರ ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದಕ್ಕೆ ರಾಜೀನಾಮೆ ಕೊಡಿಸಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಇನ್ನು ಮೂರು ಜನರಿಗೆ ರಾಜೀನಾಮೆ ನೀಡುವಂತೆ ಸೂಚನೆ ಕೊಟ್ಟಿರುವ ಎನ್ನಲಾಗಿದೆ. ಬೆಂಗಳೂರಿನಲ್ಲೇ ಉಳಿದುಕೊಂಡಿರುವ ರಮೇಶ್ ಜಾರಕಿಹೊಳಿ ಅವರು ಗೋಕಾಕ್ ನ ಎಲ್ಲಾ ಬೆಳಣಿಗೆಗಳನ್ನು ಅಳಿಯ ಅಂಬಿರಾವ್ ಪಾಟೀಲ್ ಅವರಿಂದ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.