Tag: MLA Siddu Savadi

  • ನಾಲಾಯಕ್ ಇಡು ಫೋನ್ ದೊಡ್ಡ ಕಿಸಾಮತಿ ಮಾಡ್ತಿ : ಸಿದ್ದು ಸವದಿ

    ನಾಲಾಯಕ್ ಇಡು ಫೋನ್ ದೊಡ್ಡ ಕಿಸಾಮತಿ ಮಾಡ್ತಿ : ಸಿದ್ದು ಸವದಿ

    ಬಾಗಲಕೋಟೆ: ಕೊರೊನಾದಿಂದ ಸಹೋದರನನ್ನು ಕಳೆದುಕೊಂಡ ವ್ಯಕ್ತಿ ಶಾಸಕರಿಗೆ ಕರೆ ಮಾಡಿ ಆಕ್ಸಿಜನ್ ವ್ಯವಸ್ಥೆ ಮಾಡಬೇಕು, ಸರ್ಕಾರಿ ಆಸ್ಪತ್ರೆಯ ಮುಂದೆ ಕೂರಬೇಕು ಹೇಳಿದ್ದಕ್ಕೆ ನಾಲಾಯಕ್ ಇಡು ಫೋನ್ ಎಂದು ತೆರದಾಳ ಶಾಸಕ ಸಿದ್ದು ಸವದಿ ಉದ್ದಟತನದ ಮಾತುಗಳನ್ನಾಡಿದ್ದಾರೆ.

    ಸಂಜಯ್ ದೊಂಡಿಬಾಗ ಗಾಯಕವಾಡ(41) ಕೊರೊನಾ ದಿಂದ ಶನಿವಾರ ಸಾವನ್ನಪ್ಪಿದ್ದಾರೆ. ಇವರು ರಬಕವಿಬನಹಟ್ಟಿ ತಾಲ್ಲೂಕಿನ ಆಸಂಗಿ ಗ್ರಾಮದ ನಿವಾಸಿಯಾಗಿದ್ದಾರೆ. ಆಕ್ಸಿಜನ್ ಸಿಗದೇ ಸಂಜಯ್ ಸಾವನ್ನಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಂಜಯ್ ಅವರನ್ನು ಉಳಿಸಿಕೊಳ್ಳಲು ಕುಟುಂಬದವರು ಬಾಗಲಕೋಟೆ ಜಮಖಂಡಿ ವಿಜಯಪುರಕ್ಕೆ ಅಲೆದಾಡಿದ್ದಾರೆ. ಕೊನೆಗೂ ಆಕ್ಸಿಜನ್ ಸಿಗದೆ ವಿಜಯಪುರದಲ್ಲಿ ಸಂಜಯ್ ಮೃತಪಟ್ಟಿದ್ದಾರೆ.

    ಈ ಹಿನ್ನೆಲೆಯಲ್ಲಿ ಸವದಿಯವರಿಗೆ ಕರೆ ಮಾಡಿದ ಮೃತನ ಸಹೋದರ ಅಶೋಕ್ ಮನೆಯಲ್ಲಿ ಕೂರಲು ನಿಮ್ಮನ್ನು ಆರಿಸಿ ಕಳುಹಿಸಿಲ್ಲ. ಆಕ್ಸಿಜನ್ ವ್ಯವಸ್ಥೆ ಮಾಡಬೇಕು. ಸರ್ಕಾರಿ ದವಾಖಾನೆ ಮುಂದೆ ಕುಳಿತುಕೊಳ್ಳಬೇಕು ಎಂದು ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸವದಿ ನಾಲಾಯಕ್ ಇಡು ಫೋನ್ ದೊಡ್ಡ ಕಿಸಾಮತಿ ಮಾಡ್ತಿ… ಶಾಣ್ಯಾ ಅದಿ ಇಡು ಫೋನ್ ಎಂದು ಗರಂ ಆಗಿದ್ದಾರೆ.

    ಸಹೋದರನನ್ನು ಕಳೆದುಕೊಂಡ ವ್ಯಕ್ತಿಗೆ ಸಮಾಧಾನದ ಮಾತುಗಳನ್ನಡುವುದು ಬಿಟ್ಟು ಉದ್ಧಟತನದ ಮಾತುಗಳನ್ನಾಡಿದ್ದಾರೆ ಎದಮು ಸವದಿ ವಿರುದ್ಧ ಆಕ್ರೋಶ ಹೋರಹಾಕಿದ್ದಾರೆ.

  • ಪುರಸಭೆಯ ಮಹಿಳಾ ಸದಸ್ಯೆಯನ್ನು ಎಳೆದಾಡಿ ಬಿಜೆಪಿ ಶಾಸಕ, ಬೆಂಬಲಿಗರ ಅಸಭ್ಯ ವರ್ತನೆ

    ಪುರಸಭೆಯ ಮಹಿಳಾ ಸದಸ್ಯೆಯನ್ನು ಎಳೆದಾಡಿ ಬಿಜೆಪಿ ಶಾಸಕ, ಬೆಂಬಲಿಗರ ಅಸಭ್ಯ ವರ್ತನೆ

    – ಸದಸ್ಯೆಯನ್ನು ಹೊತ್ತೊಯ್ದ ಬೆಂಬಲಿಗರು

    ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂಬಂಧ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಸದಸ್ಯೆಯನ್ನು ಕೈ ಹಿಡಿದು ಎಳೆದಾಡಿ, ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ್ದಾರೆ. ಮಹಾಲಿಂಗಪುರ ಪುರಸಭೆ ಸಂಬಂಧ ಸೋಮವಾರ ನಡೆದ ಚುನಾವಣೆ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

    ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಮಹಿಳೆಯೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳಲಾಗಿದೆ. ಚುನಾವಣೆಯಲ್ಲಿ ಮತ ಚಲಾಯಿಸಲು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರು ಮತ ಚಲಾವಣೆ ಮಾಡಲು ತೆರಳುತ್ತಿದ್ದರು. ಈ ವೇಳೆ ಸವಿತಾ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಪಡೆದ ಶಾಸಕರು, ಸದಸ್ಯೆಯನ್ನು ಎಳೆದಾಡಿ ಗೂಂಡಾ ವರ್ತನೆ ತೋರಿದ್ದಾರೆ.

    ಈ ಕುರಿತಂತೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಸವಿತಾ, ನಾನು ಈಗ ತಾನೇ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದೇನೆ. ನಮ್ಮ ಮನೆಯ ಮಕ್ಕಳು ಭಯಗೊಂಡಿದ್ದಾರೆ. ಪಾಲಿಕೆ ಸದಸ್ಯೆಯಾದ ನನಗೆ ಮತ ಚಲಾವಣೆ ಮಾಡಲು ಅವಕಾಶವೇ ನೀಡಲಿಲ್ಲ. ಅಲ್ಲದೇ ನನ್ನನ್ನು ಹಿಡಿದು ಎಳೆದಾಡಿದರು. ನನಗೆ ಅನ್ಯಾಯವಾಗಿದೆ. ಶಾಸಕರು, ಬೆಂಬಲಿಗರು ನಮ್ಮ ಮೇಲೆ ದೌರ್ಜನ್ಯ ಮಾಡಿದ್ದಾರೆ.

    ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ನನ್ನ ಪತಿ, ನಾನು ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತಿದ್ದು, ಶಾಸಕರನ್ನೇ ನಾವು ತಂದೆಯಂತೆ ತಿಳಿದು ಕಾರ್ಯ ಮಾಡುತ್ತಿದ್ದೆವು. ಆದರೆ ಶಾಸಕರು ಯಾವುದೇ ರೀತಿಯ ಕೆಲಸವನ್ನು ಜನರಿಗೆ ಮಾಡಲಿಲ್ಲ. ನಮಗೂ ಅನ್ಯಾಯ ಮಾಡಿದ್ದಾರೆ. ಪಕ್ಷದಲ್ಲಿ ನಮಗೆ ಬೆಲೆಯೇ ಇಲ್ಲವಾಗಿತ್ತು ಎಂದು ಆರೋಪಿಸಿದ್ದಾರೆ.

    ಮಹಾಲಿಂಗಪುರ ಪುರಸಭೆ ಸಂಬಂಧ ನಡೆದ ಚುನಾವಣೆ ಸಂದರ್ಭದಲ್ಲಿ ಸೋಮವಾರ ನಡೆದಿದ್ದು, ಈಗ ಶಾಸಕರು ದೌರ್ಜನ್ಯ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು ಎಳೆದಾಡಿ ಮೈ, ಕೈ ಮುಟ್ಟಿ ಅಮಾನವೀವಾಗಿ ವರ್ತನೆ ಮಾಡಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಪೊಲೀಸರ ಸಮ್ಮುಖದಲ್ಲಿಯೇ ಇಂತಹ ಅಮಾನವೀಯ ಘಟನೆ ನಡೆದಿದ್ದು, ಬಿಜೆಪಿ ಸದಸ್ಯರ ಸಂಖ್ಯಾಬಲ ಹೆಚ್ಚಿಸಲು ಮಹಿಳಾ ಪುರಸಭೆ ಸದಸ್ಯೆಯೊಂದಿಗೆ ಅಮಾನವೀಯತೆ ಮಾಡಲಾಗಿದೆ. ಶಾಸಕರ ಅಮಾನವೀಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    ಮಹಾಲಿಂಗಪುರ ಪುರಸಭೆಯಲ್ಲಿ ಬಿಜೆಪಿ 13 ಸದಸ್ಯರು, ಕಾಂಗ್ರೆಸ್ 10 ಸದಸ್ಯರ ಸಂಖ್ಯಾಬಲ ಹೊಂದಿದ್ದು, ಚುನಾವಣೆಯ ಸಂದರ್ಭದಲ್ಲಿ ಮೂವರು ಬಿಜೆಪಿ ಸದಸ್ಯರು ಕಾಂಗ್ರೆಸ್‍ಗೆ ಬೆಂಬಲ ನೀಡಿದ್ದಾರೆ ಎಂಬ ವಿಷಯ ತಿಳಿದು ಅಮಾನವೀಯ ವರ್ತಿಸಲಾಗಿದೆ. ಘಟನೆ ಕುರಿತಂತೆ ಇದುವರೆಗೂ ಪೊಲೀಸರು ಯಾವುದೇ ಪ್ರಕರಣವನ್ನು ದಾಖಲಿಸಿಕೊಂಡಿಲ್ಲ.