Tag: MLA Zameer Ahmed

  • ಸಂಜನಾ ಜೊತೆ ಕೊಲಂಬೋಗೆ ಹೋಗಿದ್ದು ಸಾಬೀತಾದ್ರೆ ನನ್ನ ಆಸ್ತಿಯೆಲ್ಲ ಸರ್ಕಾರಕ್ಕೆ ಬರೆದುಕೊಡ್ತೀನಿ: ಜಮೀರ್

    ಸಂಜನಾ ಜೊತೆ ಕೊಲಂಬೋಗೆ ಹೋಗಿದ್ದು ಸಾಬೀತಾದ್ರೆ ನನ್ನ ಆಸ್ತಿಯೆಲ್ಲ ಸರ್ಕಾರಕ್ಕೆ ಬರೆದುಕೊಡ್ತೀನಿ: ಜಮೀರ್

    ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ನಟಿ ಸಂಜನಾ ಅವರೊಂದಿಗೆ ನಾನು ಕೊಲಂಬೋಗೆ ಹೋಗಿದ್ದು ಸಾಬೀತಾದರೆ ನನ್ನ ಆಸ್ತಿಯೆಲ್ಲ ಸರ್ಕಾರಕ್ಕೆ ಬರೆದುಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಸವಾಲು ಎಸೆದಿದ್ದಾರೆ.

    ನಟಿ ಸಂಜನಾ ಅವರ ವಿಚಾರದಲ್ಲಿ ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳ ಕುರಿತು ಕೊನೆಗೂ ಮೌನ ಮುರಿದ ಜಮೀರ್ ಅವರು, ಸಂಜನಾ ಹಾಗೂ ನಾನು ಕೊಲಂಬೋಗೆ ಹೋಗಿರುವ ಬಗ್ಗೆ ಖುದ್ದು ಸಿಎಂ ತನಿಖೆ ಮಾಡಲಿ ಎಂದು ಮನವಿ ಮಾಡುತ್ತೇನೆ. ನಾನು ತನಿಖೆ ಎದುರಿಸಲು ತಯಾರಿದ್ದೇನೆ. ಈಗ ಸಂಜನಾ ಪೊಲೀಸ್ ಕಸ್ಟಡಿಯಲ್ಲೇ ಇದು, ಅಲ್ಲಿಯೇ ತನಿಖೆ ಮಾಡಲು ಎಂದರು. ಇದನ್ನೂ ಓದಿ: ಸಂಜನಾ, ಜಮೀರ್ ಸಹಾಯ ಕೇಳಿದ್ದೇಕೆ?- ಡ್ರಗ್ಸ್ ಪ್ರಕರಣದಲ್ಲಿ ರಾಹುಲ್‍ಗೆ ಬಿಜೆಪಿ ಟಾಂಗ್

    ನಾನು ಆಕೆ ಒಂದೇ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರೆ ಅಲ್ಲಿ ಪಾಸ್‍ಪೋರ್ಟ್ ಕೊಡಬೇಕಾಗುತ್ತೆ. ಅದನ್ನು ಪರಿಶೀಲಿಸಲಿ. ನಾನು ಸಂಜನಾ ಕೊಲಂಬೋಗೆ ಹೋದರೆ ಒಂದೇ ವಿಮಾನದಲ್ಲಿ ತಾನೇ ಹೋಗಬೇಕು. ಆ ಕುರಿತಾದ ಫ್ಲೈಟ್ ಮಾಹಿತಿಗಳನ್ನು ಪರಿಶೀಲನೆ ನಡೆಸಲಿ. ವಿದೇಶಗಳ ಹೋಟೆಲ್‍ಗಳಲ್ಲಿ ಹೋಟೆಲ್ ಸಿಸಿ ಕ್ಯಾಮರಾ ದೃಶ್ಯಗಳನ್ನು 10 ವರ್ಷ ಇಡಬೇಕು. ಅದನ್ನೂ ಚೆಕ್ ಮಾಡಲಿ ಎಂದು ತಿಳಿಸಿದರು. ಇದನ್ನೂ ಓದಿ: ಜಮೀರ್‌ನನ್ನು ಯಾಕೆ ಬಂಧಿಸಿಲ್ಲ- ಸರ್ಕಾರಕ್ಕೆ ಪ್ರತಾಪ್ ಸಿಂಹ ಪ್ರಶ್ನೆ

    ಅಲ್ಲಿರುವ ಸಿಸಿಟಿವಿ ಪರಿಶೀಲನೆ ಮಾಡಿದರೆ ನಾನು ಸಂಜನಾ ಅವರೊಂದಿಗೆ ಉಳಿದುಕೊಂಡಿದ್ದರೇ ಖಂಡಿತ ಗೊತ್ತಾಗುತ್ತೆ. ಈ ನಮ್ಮ ಸರ್ಕಾರ ಇಲ್ಲ. ಬಿಜೆಪಿ ಸರ್ಕಾರನೇ ಇರುವುದರಿಂದ ಅವರೇ ಎಲ್ಲವನ್ನೂ ಪರಿಶೀಲನೆ ಮಾಡಲಿ. ಒಂದೊಮ್ಮೆ ನನ್ನ ಮೇಲಿನ ಆರೋಪ ಸಾಬೀತು ಆದರೆ ನನ್ನ ಆಸ್ತಿಯನ್ನು ಸರ್ಕಾರಕ್ಕೆ ಬರೆದುಕೊಡುತ್ತೇನೆ. ಆದರೆ ಆರೋಪ ಸುಳ್ಳಾದರೇ ಪ್ರಶಾಂತ್ ಸಂಬರಗಿ ಏನು ಮಾಡುತ್ತೀರಾ ನೀವೇ ಹೇಳಿ ಎಂದು ಸರ್ಕಾರಕ್ಕೆ ಸವಾಲು ಹೆಸರು. ಇದನ್ನೂ ಓದಿ: ನನ್ನ ಬಗ್ಗೆ ಮಾತಾಡಿದ್ರೆ ಸುಮ್ನೆ ಇರಲ್ಲ: ಪ್ರಶಾಂತ್ ಸಂಬರಗಿಗೆ ಸಂಜನಾ ಎಚ್ಚರಿಕೆ

    ಸಂಬರಗಿ ಆರೋಪಕ್ಕೆ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ನಿನ್ನೆಯೇ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲು ವಕೀಲರೊಂದಿಗೆ ಮಾತನಾಡಿದ್ದೇನೆ. ನನಗೆ ಆತನ ಪರಿಚಯವೂ ಇಲ್ಲ.

    2019ರ ಜುಲೈ 8 ರಂದು ಶ್ರೀಲಂಕಾದ ಕೊಲಂಬೋದಲ್ಲಿ ಸಂಜನಾ ಮತ್ತು ಜಮೀರ್ ಇದ್ದರು. ನಾನು ಸುಳ್ಳು ಹೇಳುತ್ತಿಲ್ಲ. ನೀವು ಜೂಜು ಮತ್ತು ಡ್ರಗ್ಸ್ ನಲ್ಲಿ ಭಾಗಿಯಾಗದೇ ಇದ್ದರೆ ನಿಮಗೆ ಹೆದರಿಕೆ ಯಾಕೆ ಎಂದು ಪ್ರಶಾಂತ್ ಸಂಬರಗಿ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಸಂಬರಗಿ ಆರೋಪಕ್ಕೆ ತಿರುಗೇಟು ನೀಡಿದ್ದ ನಟಿ ಸಂಜನಾ, ಶಾಸಕ ಜಮೀರ್ ಅವರೇ ಪ್ರಶಾಂತ್ ಸಂಬರಗಿ ಅವರನ್ನು ಸುಮ್ಮನೇ ಬಿಡಬೇಡಿ ಎಂದು ಕಣ್ಣೀರು ಹಾಕಿಕೊಂಡು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಜಮೀರ್ ತಾನು ಏನೆಂದು ಅವರೇ ಯೋಚಿಸಬೇಕು: ಸಿ.ಟಿ.ರವಿ

  • ಇನ್ನೆರಡು ದಿನಗಳಲ್ಲಿ ಜಮೀರ್ ಅರೆಸ್ಟ್ ಆಗ್ತಾರೆ: ರವಿ ಕುಮಾರ್

    ಇನ್ನೆರಡು ದಿನಗಳಲ್ಲಿ ಜಮೀರ್ ಅರೆಸ್ಟ್ ಆಗ್ತಾರೆ: ರವಿ ಕುಮಾರ್

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಇಬ್ಬರು ನಟಿಯರು ಅರೆಸ್ಟ್ ಆದ ಬಳಿಕ ಕೇಸ್‍ನಲ್ಲಿ ರಾಜಕೀಯ ನಂಟಿನ ಕುರಿತ ಚರ್ಚೆ ಜೋರಾಗಿದೆ. ಶಾಸಕ ಜಮೀರ್ ಅಹ್ಮದ್ ಅವರ ಹೆಸರನ್ನು ಪ್ರಕರಣದಲ್ಲಿ ಬಿಜೆಪಿ ಎಳೆದು ತಂದಿದೆ. ಇದರ ಬೆನ್ನಲ್ಲೇ ಇನ್ನೆರಡು ದಿನಗಳಲ್ಲಿ ಜಮೀರ್ ಬಂಧನವಾಗುತ್ತದೆ ಎಂದು ಬಿಜೆಪಿ ವಕ್ತಾರ ರವಿ ಕುಮಾರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರವಿ ಕುಮಾರ್ ಅವರು, ಇನ್ನು ಕೆಲ ದಿನಗಳಲ್ಲಿ ಶಾಸಕ ಜಮೀರ್ ಅವರನ್ನು ಪ್ರಕರಣದಲ್ಲಿ ಬಂಧನ ಮಾಡುವ ಸಮಯ ಬರುತ್ತದೆ. ಜವಾಬ್ದಾರಿಯುತ ಸರ್ಕಾರ ಆಗಿರುವುದರಿಂದ ಅರೆಸ್ಟ್ ಮಾಡಲು ಬೇಕಾದ ಸೂಕ್ತ ಆಧಾರಗಳನ್ನು ಇಟ್ಟುಕೊಂಡು ಬಂಧನ ಮಾಡಬೇಕಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸಂಜನಾ, ಜಮೀರ್ ಸಹಾಯ ಕೇಳಿದ್ದೇಕೆ?- ಡ್ರಗ್ಸ್ ಪ್ರಕರಣದಲ್ಲಿ ರಾಹುಲ್‍ಗೆ ಬಿಜೆಪಿ ಟಾಂಗ್

    ಪ್ರಶಾಂತ್ ಸಂಬರಗಿ ಅವರು ನೀಡಿದ ಹೇಳಿಕೆಯಂತೆ ಸಚಿವ ಸಿಟಿ ರವಿ ಅವರು ಕೂಡ ಹವಾಲಾ ಹಣದ ಕುರಿತು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ಜಮೀರ್ ಅವರ ಹೆಸರನ್ನು ಇಂದು ಎಳೆದು ತಂದಿದ್ದರು. ಡ್ರಗ್ಸ್ ವಿರುದ್ಧ ಈ ಬಾರಿ ಮಾತ್ರವಲ್ಲ, ಹಿಂದಿನ ಸರ್ಕಾರ ಇದ್ದಾಗಲೂ ಕೂಗು ಕೇಳಿ ಬರುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಮಾತ್ರ ಈ ಬಗ್ಗೆ ಕಠಿಣವಾದ ನಿರ್ಧಾರ ತೆಗೆದುಕೊಂಡು ಮಾಫಿಯಾ ಮಟ್ಟಹಾಕಲು ಮುಂದಾಗಿದೆ ಎಂದು ಕಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಜಮೀರ್‌ನನ್ನು ಯಾಕೆ ಬಂಧಿಸಿಲ್ಲ- ಸರ್ಕಾರಕ್ಕೆ ಪ್ರತಾಪ್ ಸಿಂಹ ಪ್ರಶ್ನೆ

    ಇತ್ತ ಜಮೀರ್ ಅವರ ಪಾತ್ರದ ಕುರಿತು ಟ್ವೀಟ್ ಮಾಡಿರುವ ಸಚಿವ ಸಿಟಿ ರವಿ ಅವರು, ಶ್ರೀಲಂಕಾದಲ್ಲಿ ನಡೆದ ಪಾರ್ಟಿಯಲ್ಲಿ ಜಮೀರ್ ಉಪಸ್ಥಿತರಿದ್ದರು, ಇದರಲ್ಲಿ ಬಂಧನಕ್ಕೊಳಗಾಗಿರುವ ನಟಿ ಇದ್ದರು ಎಂಬುದು ನಿಜವಲ್ಲವೇ? ಬಂಧಿತ ಇನ್ನೊಬ್ಬ ನಟಿ ಸಹಾಯಕ್ಕಾಗಿ ಯಾಕೆ ಮನವಿ ಮಾಡಿದರು? ಅವನ ಮತ್ತು ಡ್ರಗ್ ಮಾಫಿಯಾ ನಡುವಿನ ಸಂಬಂಧ ಏನು ಎಂದು ಪ್ರಶ್ನಿಸಿದ್ದಾರೆ. ನಟಿ ಸಂಜನಾ ಬಂಧನ ಮುನ್ನ ಜಮೀರ್ ಅವರ ಸಹಾಯ ಕೋರಿದನ್ನೇ ಆಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ, ಪ್ರಕರಣದಲ್ಲಿ ಜಮೀರ್ ಅವರಿಗೆ ನೋಟಿಸ್ ನೋಡಿ ವಿಚಾರಣೆಗೆ ಕರೆತರಲು ಆಗ್ರಹಿಸಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಪಕ್ಷದ ರಾಜ್ಯ ಘಟಕವೂ ಬೆಂಬಲ ನೀಡಿ ಸರಣಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ‘ಗಂಡ-ಹೆಂಡತಿ’ ನಟಿ ಮದುವೆ ಸೀಕ್ರೆಟ್- ಮ್ಯಾರೇಜ್ ಆಗಿಲ್ಲ ಅಂತ ಸುಳ್ಳು ಹೇಳಿದ್ರಾ ಸಂಜನಾ?   

  • ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್ ದೂರು

    ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್ ದೂರು

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು ದಾಖಲಿಸಿದ್ದಾರೆ.

    ಚಾಮರಾಜ ಪೇಟೆ ಪೊಲೀಸ್ ಠಾಣೆಯಲ್ಲಿ ಜಮೀರ್ ದೂರು ದಾಖಲಿಸಿದ್ದು, ಪೊಲೀಸರು ದೂರಿನ ಆಧಾರದ ಅನ್ವಯ ಎನ್‍ಸಿಆರ್ ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಮಾಧ್ಯಮಗಳಲ್ಲಿ ಬಂದ ಸಂಬರಗಿ ಅವರ ಮಾತಿನ ವಿಡಿಯೋಗಳನ್ನು ತಮ್ಮ ದೂರಿನೊಂದಿಗೆ ಜಮೀರ್ ಸಾಕ್ಷಿಯಾಗಿ ನೀಡಿದ್ದಾರೆ. ಇದನ್ನೂ ಓದಿ: ನನಗೆ ಇನ್ನೂ ಮದುವೆಯಾಗಿಲ್ಲ, ನನ್ನ ಕಾರೆಕ್ಟರ್ ಬಗ್ಗೆ ಮಾತನಾಡಲು ಯಾರು – ಸಂಬರಗಿ ವಿರುದ್ಧ ಸಂಜನಾ ಕಿಡಿ

    ಸಂಬರಗಿ ವಿರುದ್ಧ 100 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಲು ದಾಖಲಾತಿಗಳನ್ನು ಸಿದ್ಧಪಡಿಸಿಕೊಳ್ಳುವಂತೆ ತಮ್ಮ ವಕೀಲರೊಂದಿಗೆ ಜಮೀರ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಸಂಬರಗಿ ಆಧಾರ ರಹಿತ ಆರೋಪ ಮಾಡಿದ್ದು, ನಾನು ಡ್ರಗ್ಸ್ ಪ್ರಕರಣದ ಆರೋಪಿ ನಟಿ ಸಂಜನಾ ಜತೆ ಶ್ರೀಲಂಕಾದ ಕ್ಯಾಸಿನೋದಲ್ಲಿ ಕಾಣಿಸಿಕೊಂಡಿದ್ದೆ ಎಂದಿದ್ದಾರೆ. ಈ ಮೂಲಕ ನನ್ನ ತೇಜೋವಧೆ ಮಾಡಿದ್ದು, ಸಂಬರಗಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಜಮೀರ್ ದೂರಿನಲ್ಲಿ ಮನವಿ ಮಾಡಿದ್ದಾರೆ.ಇದನ್ನೂ ಓದಿ: ನನ್ನ ಬಗ್ಗೆ ಮಾತಾಡಿದ್ರೆ ಸುಮ್ನೆ ಇರಲ್ಲ: ಪ್ರಶಾಂತ್ ಸಂಬರಗಿಗೆ ಸಂಜನಾ ಎಚ್ಚರಿಕೆ

    ಸೆ.7 ರಂದು ಸಂಬರಗಿ ಮಾಡಿದ್ದ ಆರೋಪದ ಬಗ್ಗೆ ಪ್ರಕ್ರಿಯೆ ಕೇಳಿದ್ದ ಪಬ್ಲಿಕ್ ಟಿವಿಗೆ ಉತ್ತರಿಸಲು ನಿರಾಕರಿಸಿದ ಜಮೀರ್, ಥ್ಯಾಂಕ್ಯೂ, ಥ್ಯಾಂಕ್ಯೂ ಸ್ಥಳದಿಂದ ಕಾರು ಹತ್ತಿ ಹೋಗಿದ್ದರು. ಆದರೆ ಅಂದೇ ನಟಿ ಸಂಜನಾ, ಶಾಸಕ ಜಮೀರ್ ಬಳಿ ಪ್ರಶಾಂತ್ ಸಂಬರಗಿ ಅವರನ್ನು ಸುಮ್ಮನೇ ಬಿಡಬೇಡಿ ಕಣ್ಣೀರು ಹಾಕಿಕೊಂಡು ಮನವಿ ಮಾಡಿಕೊಂಡಿದ್ದರು. ಆದರೆ ಪಬ್ಲಿಕ್ ಟಿವಿ ಪ್ರಶ್ನೆ ಮಾಡಿದ್ದಕ್ಕೆ ಜಮೀರ್, ನಾನು ಯಾವುದಕ್ಕೂ ಪ್ರತಿಕ್ರಿಯಿಸಲ್ಲ, ಉತ್ತರನೂ ಕೊಡಲ್ಲ ಎಂದು ಹೇಳಿದ್ದರು.

    ಜಮೀರ್ ಅಹಮದ್ ಸರ್ ದಯವಿಟ್ಟು ಪ್ರಶಾಂತ್ ಸಂಬರಗಿ ಅವರನ್ನು ಸುಮ್ಮನೇ ಬಿಡಬೇಡಿ. ಆ ಬೀದಿ ನಾಯಿ ನನ್ನ ಹಿಂದೆ ಯಾಕೆ ಬಿದ್ದಿದ್ದಾನೆ ಗೊತ್ತಿಲ್ಲ. ನಾನು ತುಂಬಾ ಕಷ್ಟಪಟ್ಟು ಮೇಲೆ ಬಂದ ಕಲಾವಿದೆ. ಆದರೆ ಇದರಲ್ಲಿ ನನ್ನ ತಪ್ಪು ಏನಿದೆ. ನಾನು ಸೆಲೆಬ್ರಿಟಿ ಆಗಿರೋದೆ ತಪ್ಪಾ. ನನಗೆ ತುಂಬಾ ಕಷ್ಟ ಆಗುತ್ತಿದೆ. ದಯವಿಟ್ಟು ಪ್ರಶಾಂತ್ ಸಂಬರಗಿಯನ್ನು ಬಿಡಬೇಡಿ ಎಂದು ಕೈ ಮುಗಿದು ಸಂಜನಾ ಕಣ್ಣೀರು ಹಾಕಿದ್ದರು. ಇದನ್ನೂ ಓದಿ: ಜಮೀರ್ ತಾನು ಏನೆಂದು ಅವರೇ ಯೋಚಿಸಬೇಕು: ಸಿ.ಟಿ.ರವಿ

    2019ರ ಜುಲೈ 8 ರಂದು ಶ್ರೀಲಂಕಾದ ಕೊಲಂಬೋದಲ್ಲಿ ಸಂಜನಾ ಮತ್ತು ಜಮೀರ್ ಇದ್ದರು. ನಾನು ಸುಳ್ಳು ಹೇಳುತ್ತಿಲ್ಲ. ನೀವು ಜೂಜು ಮತ್ತು ಡ್ರಗ್ಸ್ ನಲ್ಲಿ ಭಾಗಿಯಾಗದೇ ಇದ್ದರೆ ನಿಮಗೆ ಹೆದರಿಕೆ ಯಾಕೆ ಎಂದು ಪ್ರಶಾಂತ್ ಸಂಬರಗಿ ಪ್ರಶ್ನಿಸಿದ್ದರು.