Tag: MLC candidate

  • ಆಕಸ್ಮಿಕವಾಗಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿ, ಅಚ್ಚರಿಯಾಗಿ ಎಂಎಲ್‍ಸಿ ಅಭ್ಯರ್ಥಿಯಾಗಿದ್ದೇನೆ: ಸೂರಜ್ ರೇವಣ್ಣ

    ಆಕಸ್ಮಿಕವಾಗಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿ, ಅಚ್ಚರಿಯಾಗಿ ಎಂಎಲ್‍ಸಿ ಅಭ್ಯರ್ಥಿಯಾಗಿದ್ದೇನೆ: ಸೂರಜ್ ರೇವಣ್ಣ

    ಹಾಸನ: ಆಕಸ್ಮಿಕವಾಗಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು ಅಚ್ಚರಿಯಾಗಿ ಎಂಎಲ್‍ಸಿ ಅಭ್ಯರ್ಥಿ ಆಗಿದ್ದೇನೆ. ನಾನು ಸ್ಪರ್ಧಿಸುವ ಭಾವನೆ ಇರಲಿಲ್ಲ ಎಂದು ಜೆಡಿಎಸ್ ಎಂಎಲ್‍ಸಿ ಅಭ್ಯರ್ಥಿ ಸೂರಜ್ ರೇವಣ್ಣ ತಿಳಿಸಿದರು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಶೇಕಡ 70ರಷ್ಟು ಜೆಡಿಎಸ್ ಕಾರ್ಯಕರ್ತರು ನನ್ನ ತಾಯಿ ಭವಾನಿ ರೇವಣ್ಣ ಅವರನ್ನು ಅಭ್ಯರ್ಥಿ ಮಾಡುವ ನಿಟ್ಟಿನಲ್ಲಿ ಇದ್ದರು. ಆದರೆ ನನ್ನ ತಂದೆ ಸಮಾನರಾದ ಶಾಸಕರು ಮತ್ತು ನಮ್ಮ ತಂದೆ-ತಾತ ಎಲ್ಲ ದೃಢ ನಿರ್ಧಾರ ತೆಗೆದುಕೊಂಡು ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಹೋರಾಟದಿಂದ ಮೃತಪಟ್ಟ ರೈತರಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡಿ: ಸಿದ್ದರಾಮಯ್ಯ

    ಪಕ್ಷ ಸಂಘಟನೆ ಮಾಡಲು ದೃಢವಾದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿಯನ್ನು ದೇವರು ನೀಡಲಿ. ಐದಾರು ವರ್ಷದಿಂದ ಸಕ್ರಿಯವಾಗಿ ಚುನಾವಣೆ ಮಾಡಿಕೊಂಡು ಬಂದ ಅನುಭವ ನನಗಿದೆ ಎಂದು ಹೇಳಿದರು. ಇದನ್ನೂ ಓದಿ: ಮೊದಲ ಬಾರಿಗೆ ಮಗುವಿನ ಮುದ್ದಾದ ಫೋಟೋ ಶೇರ್ ಮಾಡಿದ ನಟಿ

    ಬಿಜೆಪಿ, ಕಾಂಗ್ರೆಸ್‍ನಿಂದ ಯಾರು ಅಭ್ಯರ್ಥಿಯಾಗಿದ್ದಾರೆ ಎಂದು ನನಗೆ ಇನ್ನು ತಿಳಿದಿಲ್ಲ. ವಿಶೇಷವಾಗಿ ನಮ್ಮ ತಾತ ಜವಾಬ್ದಾರಿ ಕೊಟ್ಟಿದ್ದಾರೆ. ಈಗ ಇಡೀ ಜಿಲ್ಲೆಯ ಜವಾಬ್ದಾರಿ ಬರಲಿದೆ. ಎಲ್ಲರ ವಿಶ್ವಾಸದಲ್ಲಿ ತೆಗೆದುಕೊಂಡು ಹೋಗುತ್ತೇನೆ ಎಂದು ತಿಳಿಸಿದರು.

  • MLC ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಸ್ಪರ್ಧೆ ಬಹುತೇಕ ಖಚಿತ

    MLC ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಸ್ಪರ್ಧೆ ಬಹುತೇಕ ಖಚಿತ

    ಹಾಸನ: ಎಂಎಲ್‍ಸಿ ಚುನಾವಣೆಗೆ ಹಾಸನ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಸ್ಪರ್ಧಿಸುತ್ತಿರುವುದು ಬಹುತೇಕ ಖಚಿತವಾಗಿದ್ದು, ಅಂತಿಮ ಘೋಷಣೆಯೊಂದೇ ಬಾಕಿ ಇದೆ ಮತ್ತು ನಾಳೆ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

    ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಹಾಸನದಲ್ಲಿ ನಡೆದಿದ್ದ ಸಭೆ ವೇಳೆ ಭವಾನಿ ರೇವಣ್ಣ ಅವರಿಗೆ ಎಂಎಲ್‍ಸಿ ಟಿಕೆಟ್ ನೀಡುವಂತೆ ಶಾಸಕರಾದ ಲಿಂಗೇಶ್, ಬಾಲಕೃಷ್ಣ ಸೇರಿದಂತೆ ಹಲವರು ಒತ್ತಾಯಿಸಿದ್ದರು. ಆ ನಂತರ ಹೆಚ್.ಡಿ.ರೇವಣ್ಣ ಹಾಸನ ಜಿಲ್ಲೆಯ ತಾಲೂಕುಗಳಿಗೆ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದರು. ಇದೀಗ ಎಂಎಲ್‍ಸಿ ಟಿಕೆಟ್ ಸೂರಜ್ ರೇವಣ್ಣ ಅವರಿಗೆ ಬಹುತೇಕ ಖಚಿತ ಎಂಬ ಮಾಹಿತಿ ಕೇಳಿ ಬರುತ್ತಿದೆ. ಇದನ್ನೂ ಓದಿ: ಅಧಿಕಾರಿಗಳಷ್ಟೇ ಹೋಗಿ ಬೆಳೆ ಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಿ: ಆರ್. ಅಶೋಕ್

    ಒಂದು ವೇಳೆ ಸೂರಜ್ ರೇವಣ್ಣ ಹೆಸರು ಅಂತಿಮವಾಗಿ ಘೋಷಣೆಯಾದರೆ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ಅಧಿಕೃತವಾಗಿ ರಾಜ್ಯರಾಜಕಾರಣಕ್ಕೆ ಎಂಟ್ರಿ ಪಡೆದಂತಾಗುತ್ತದೆ ಎನ್ನಬಹುದು. ಇದನ್ನೂ ಓದಿ: ಆರೋಗ್ಯಕ್ಕಾಗಿ ಹಸುವಿನ ಸಗಣಿ ತಿನ್ನುವ ವೈದ್ಯ – ವೀಡಿಯೋ ವೈರಲ್